Tag: BL Santhosh

  • ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್

    ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ ವ್ಯಂಗ್ಯವಾಡಿದ ಕಾಂಗ್ರೆಸ್ ನವರಿಗೆ ತಿರುಗೇಟು ನೀಡುವ ಮೂಲಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಸವಾಲೆಸೆದಿದ್ದಾರೆ.

    ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ. ಇದನ್ನೂ ಓದಿ: ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

    ಫೇಸ್‌ಬುಕ್‌ ನಲ್ಲೇನಿದೆ..?: ಕಲಿಯುತ್ತೇವೆ, ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಉತ್ತರಿಸುತ್ತೇವೆ. ಟೀಕೆಗಳಿಗೆ, ಕುಹಕಗಳಿಗೆ, ಒಡಕು ಮಾತುಗಳಿಗೆ ನಮ್ಮ ಗತಿಶೀಲತೆಯಿಂದ ನಾವು ಇರಲಿಕ್ಕೇ ಬಂದವರು, ಗೆಲ್ಲಲಿಕ್ಕೇ ಬಂದವರು. ನಮಗೆ ಸೋಲು ಕ್ಷಣಿಕ, ಮುನ್ನಡೆ ಸತತ. ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ.

  • ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ- ಯುವಕ ಅರೆಸ್ಟ್

    ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ- ಯುವಕ ಅರೆಸ್ಟ್

    ಮೈಸೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (B L Santhosh) ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ ವೈರಲ್ ಮಾಡಿದ ಯುಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

    ದಿಲೀಪ್ ಗೌಡ (Dilip Gowda) ಬಂಧಿತ ಮೈಸೂರಿನ ಯುವಕ. ಈತ ಲಿಂಗಾಯತ ಸಮುದಾಯದ ವಿರುದ್ಧ ಸಂತೋಷ್ ಹೇಳಿಕೆ ನೀಡಿದ ರೀತಿ ಪತ್ರಿಕಾ ವರದಿ ಸೃಷ್ಟಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂದ್ರೆ ಸಪೋರ್ಟ್ ಮಾಡ್ತೀನಿ: ಜನಾರ್ದನ ರೆಡ್ಡಿ

    ಬಿಜೆಪಿ (BJP) ನೀಡಿದ ದೂರಿನ ಆಧರಿಸಿ ಮೈಸೂರು ನಗರ ಪೊಲೀಸರು ದಿಲೀಪ್ ಗೌಡನನ್ನು ಬಂಧಿಸಿದ್ದಾರೆ.

  • ಖರ್ಗೆ ಹತ್ಯೆಗೆ ಸಂಚು ಆಡಿಯೋ ಬಾಂಬ್‌ – ಸಿಎಂ ಬೊಮ್ಮಾಯಿ ಹೇಳಿದ್ದೇನು?

    ಖರ್ಗೆ ಹತ್ಯೆಗೆ ಸಂಚು ಆಡಿಯೋ ಬಾಂಬ್‌ – ಸಿಎಂ ಬೊಮ್ಮಾಯಿ ಹೇಳಿದ್ದೇನು?

    ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಸಂಚು ರೂಪಿಸಿದ್ದಾರೆ ಎನ್ನಲಾದ ಆಡಿಯೋ ಬಾಂಬ್‌ ಸಿಡಿಸಿದ್ದು, ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಪ್ರತಿಕ್ರಿಯೆ ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆಡಿಯೋ ತಿರುಚಲಾಗಿದೆಯೇ ಏನು ಎಂಬುದನ್ನ ನೋಡಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೆವೆ, ನಂತರ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

    ಏನಿದು ಆಡಿಯೋ ಬಾಂಬ್‌ ಕೇಸ್‌?
    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್‌ ಆಡಿಯೋ ಬಾಂಬ್‌ ಸಿಡಿಸಿದೆ. ಇದನ್ನೂ ಓದಿ: ಖರ್ಗೆ ಹತ್ಯೆಗೆ ಬಿಜೆಪಿ ಅಭ್ಯರ್ಥಿಯಿಂದ ಸಂಚು: ಕಾಂಗ್ರೆಸ್‌ ಆಡಿಯೋ ಬಾಂಬ್‌

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ (Manikanth Rathod) ಮತ್ತು ಬಿಜೆಪಿ ಕಾರ್ಯಕರ್ತ ರವಿ ಮಧ್ಯೆ ನಡೆದ ಸಂಭಾಷಣೆಯ ಆಡಿಯೋವನ್ನು ಸುರ್ಜೇವಾಲಾ (Randeep Surjewala) ಬಿಡುಗಡೆ ಮಾಡಿದ್ದಾರೆ. ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಖರ್ಗೆ ಹೆಂಡತಿ, ಮಕ್ಕಳನ್ನು ಸಾಫ್ ಮಾಡುತ್ತೇನೆ ಎಂಬ ಸಂಭಾಷಣೆಯಿದೆ. ಬಿಜೆಪಿಯವರು ಖರ್ಗೆಯವರ ಕುಟುಂಬಕ್ಕೆ ಹಿಂಸೆ ನೀಡುತ್ತಿದ್ದಾರೆ ಎಂದು ಸುರ್ಜೇವಾಲಾ ಕಿಡಿಕಾರಿದ್ದಾರೆ.

    ಇದೇ ವೇಳೆ ಬಿ.ಎಲ್ ಸಂತೋಷ್ ಲಿಂಗಾಯತ ಸಮುದಾಯಗಳ ಮತಗಳು ಬೇಡ ಎಂದು ಹೇಳುತ್ತಿರುವ ಸುದ್ದಿ ಫೇಕ್. ಈಗಾಗಲೇ ಈ ಬಗ್ಗೆ ದೂರು ದಾಖಲಿಸಲಾಗಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಗೆದ್ದರೆ ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ: ಸಿ.ಟಿ.ರವಿ ವಾಗ್ದಾಳಿ

    ಶಿವರಾಜ್ ಕುಮಾರ್ ಮೇಲೆ ಬಿಜೆಪಿ ಟ್ರೋಲ್ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾವ ನಟರು ಯಾವ ಪಕ್ಷ ಪರವಾಗಿ ಬೇಕಾದರೂ ಪ್ರಚಾರ ಮಾಡಬಹುದು. ಪ್ರತಾಪ್ ಸಿಂಹ ಮತ್ತು ಶಿವರಾಜ್ ಕುಮಾರ್ ಟೀಕೆ ಅವರಿಗೆ ಬಿಟ್ಟ ವಿಚಾರ. ಶಿವರಾಜ್ ಕುಮಾರ್ ಪ್ರಚಾರದ ಬಗ್ಗೆ ನನಗೇನು ಅಭ್ಯಂತರವಿಲ್ಲ ಎಂದು ಹೇಳಿದರು.

  • ಬಿ.ಎಲ್ ಸಂತೋಷ್ ಬಗ್ಗೆ ಕಾಂಗ್ರೆಸ್‍ಗೆ ನಡುಕ ಶುರುವಾಗಿದೆ: ಪ್ರತಾಪ್ ಸಿಂಹ

    ಬಿ.ಎಲ್ ಸಂತೋಷ್ ಬಗ್ಗೆ ಕಾಂಗ್ರೆಸ್‍ಗೆ ನಡುಕ ಶುರುವಾಗಿದೆ: ಪ್ರತಾಪ್ ಸಿಂಹ

    ರಾಯಚೂರು: ವರುಣಾ (Varuna Constituency) ದಲ್ಲಿ ಸಿದ್ದರಾಮಯ್ಯ (Siddaramaiah) ನವರ ಕತೆ ಏನಾಗಿದೆ ಅಂದ್ರೆ ನಾಮಿನೇಷನ್ ಆದ ಮೇಲೆ ಮತದಾನದ ದಿನ ಮತ್ತೆ ಕ್ಷೇತ್ರಕ್ಕೆ ಬರ್ತೀನಿ ಅಂದೋರು, ಐದು ದಿನ ಮುಂಚಿತವಾಗಿಯೇ ಬಂದಿದ್ದಾರೆ. 10 ಕೆ.ಜಿ ಅಕ್ಕಿ ಕೊಡ್ತೀನಿ ಅಂತ ಹಾರಾಟ ಮಾಡುತ್ತಿದ್ದರು. ಆದರೆ ಈಗ ಅವರಿಗೆ ಕಷ್ಟವಾಗಿದೆ ಅಂತ ಸಂಸದ ಪ್ರತಾಪ್ ಸಿಂಹ (Pratap Simha) ಅವರು ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯವಾಡಿದ್ದಾರೆ.

    ರಾಯಚೂರು ಗ್ರಾಮೀಣ ಬಿಜೆಪಿ ಅಭ್ಯರ್ಥಿ ತಿಪ್ಪರಾಜು ಹವಾಲ್ದಾರ್ ಪರ ಯಾಪಲದಿನ್ನಿಯಲ್ಲಿ ಮತಬೇಟೆ ನಡೆಸಿದ ಪ್ರತಾಪ್ ಸಿಂಹ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು. ಸೋಮಣ್ಣ ವರುಣಾದಲ್ಲಿ ಸ್ಪರ್ಧಿಸಿದ್ದಕ್ಕೆ ನಾಮಪತ್ರ ಸಲ್ಲಿಸಿದ ಮರುದಿನವೇ ಸಿದ್ದರಾಮಯ್ಯ ವರುಣಕ್ಕೆ ಬಂದ್ರು. ಸಿಎಂ ಆಕಾಂಕ್ಷಿ ಅಭ್ಯರ್ಥಿ ಕನಿಷ್ಠ 45 ಕ್ಷೇತ್ರ ಗೆಲ್ಲಿಸಬೇಕು. ಅವರೇ ತಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ. ಡಬನ್ ಇಂಜಿನ್ ಸರ್ಕಾರ ಬರುವುದು ಖಚಿತವಾಗಿದೆ. ನಾವು ಯಾವುದೇ ಭಾಗಕ್ಕೆ ಹೋದರೂ ಅಭಿವೃದ್ಧಿ ಬಗ್ಗೆ ಮಾತಾಡುತ್ತಿದ್ದೇವೆ ಎಂದರು.

    ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕಾರಿಗೆ ಕಾಗೆ ಬಿದ್ದಿತ್ತು. ಬಜರಂಗದಳ (Bajaranagdal) ನಿಷೇಧ ಮಾಡುತ್ತೇನೆ ಅಂದ ಕೂಡಲೇ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಹದ್ದು ಬಂದು ಬಡಿಯಿತು. ಕಾಂಗ್ರೆಸ್ ಅಂದ್ರೆ ಪ್ರಾಣಿ ಪಕ್ಷಿಗಳಿಗೂ ಇಷ್ಟವಿಲ್ಲ. ಪ್ರಜ್ಞಾವಂತ ಮತದಾರರೇ ನಿಮ್ಮ ಮನಸ್ಸಿನಲ್ಲೂ ಕಾಂಗ್ರೆಸ್ ಇರುವುದಿಲ್ಲ. ಮತ್ತೆ ಕಾಂಗ್ರೆಸ್ ಅವರನ್ನ ಅಧಿಕಾರಕ್ಕೆ ತಂದರೆ ಕೋಟಿ ಕೋಟಿ ಲೂಟಿ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ತಂದ್ರೆ ಗ್ಯಾರೆಂಟಿ ಕೊಡ್ತೀವಿ ಅಂತಿದ್ದಾರೆ. ಸಿದ್ದರಾಮಯ್ಯರನ್ನ ಮೈಸೂರು ಜನರೇ ನಂಬಲ್ಲ. ಚಾಮುಂಡೇಶ್ವರಿ ಜನ ಸೋಲಿಸಿದರು. ಮೈಸೂರು ದಸರಾಗೆ ಫೇಮಸ್ ಆದರೆ ಸಿದ್ದರಾಮಯ್ಯ ಮಹಿಷಾ ದಸರಾ ಅಂತ ನಾನ್ಸೆನ್ಸ್ ಶುರು ಮಾಡಿದ್ದಕ್ಕೆ ತಾಯಿ ಚಾಮುಂಡೇಶ್ವರಿನೇ 35 ಸಾವಿರ ವೋಟುಗಳಿಂದ ಸೋಲಿಸಿದಳು ಎಂದು ಕಿಡಕಾರಿದರು. ಇದನ್ನೂ ಓದಿ: ಬಜರಂಗಬಲಿಯ ಆಕ್ರೋಶದಿಂದ ಕಾಂಗ್ರೆಸ್ ಭವಿಷ್ಯ ಸುಟ್ಟು ಬೂದಿಯಾಗಲಿದೆ: ಪ್ರಹ್ಲಾದ್ ಜೋಶಿ ಕಿಡಿ

    ಬಿಜೆಪಿ (BJP) ಬಂದ್ರೆ ಮಳೆ ಬರುತ್ತೆ, ಭೂಮಿ ಹಸನಾಗುತ್ತೆ ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗ ಬರಗಾಲ ಹೋಗಿ ಮಳೆ ಬಂತು. ಕಾಂಗ್ರೆಸ್‍ನವರು ಅಕ್ಕಿನೂ ಕೊಡಲ್ಲ, 2000 ರೂ. ನೂ ಕೊಡಲ್ಲ. ಆಮ್ ಆದ್ಮಿ ದೆಹಲಿಯಲ್ಲಿ ಹೀಗೆ ಹೇಳಿತ್ತು ಈಗ ಏನೂ ಕೊಡ್ತಿಲ್ಲ. ಕಾಂಗ್ರೆಸ್ ಗೆ ವೋಟು ಹಾಕಿದರೆ ಒಸಾಮಾ ಬಿನ್ ಲಾಡೆನ್, ಮುಲ್ಲಾ ಉಮರ್ ಆಡಳಿತದ ತಾಲಿಬಾನ್ ಸರ್ಕಾರ ಬರುತ್ತೆ. ಶಿವನ ಬೆಟ್ಟವನ್ನ ಡಿಕೆಶಿ (DK Shivakumar) ಏಸು ಬೆಟ್ಟ ಮಾಡಲು ಹೋಗಿದ್ದರು. ಟಿಪ್ಪು ಹುಟ್ಟಿನ ಬಗ್ಗೆ ಸಿದ್ದರಾಮಯ್ಯ ಕುಂಡಲಿ ಬರೆಯುತ್ತಾರೆ, ಆಂಜನೇಯನ ಬಗ್ಗೆ ಪ್ರಶ್ನೆ ಮಾಡುತ್ತಾರೆ ಎಂದರು. ಮುಸ್ಲಿಮರಿಗೆ ಅಕ್ರಮವಾಗಿ ಕೊಟ್ಟ 4% ಮೀಸಲಾತಿ ವಾಪಸ್ ತರುತ್ತೇವೆ ಅಂತಿದ್ದಾರೆ. ಹಿಂದುಳಿದ ಸಮುದಾಯದ ಮೀಸಲಾತಿ ಕಿತ್ತು ಅವರಿಗೆ ಕೊಡ್ತಾರೆ. ಗೊಹತ್ಯೆ ಮಾಡುವವರಿಗೆ ಮೀಸಲಾತಿ ಕೊಡ್ತಾರಂತೆ ಅಂತ ಹರಿಹಾಯ್ದರು.

    ಇನ್ನೂ ಸಂತೋಷ್ (B.L Santhosh) ಜೀ ಬಗ್ಗೆ ಸುಳ್ಳು ಸುದ್ದಿ ಮಾಡಿ ಕಾಂಗ್ರೆಸ್‍ನವರು ಪ್ರಚಾರ ಮಾಡುತ್ತಿದ್ದಾರೆ. ವೀರಶೈವರ ಬಗ್ಗೆ ಹಗರವಾಗಿ ಮಾತನಾಡಿದ್ದಾರೆ ಅಂತ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ವಾಟ್ಸಪ್ ನಲ್ಲಿ ಹರಿಬಿಡುತ್ತಿದ್ದಾರೆ. ಸಂತೋಷ್ ಅವರ ಬಗ್ಗೆ ಕಾಂಗ್ರೆಸ್‍ಗೆ ನಡುಕ ಶುರುವಾಗಿದೆ. ವೀರಶೈವ ಸೇರಿ ಎಲ್ಲಾ ಸಮುದಾಯ ಉಳಿಯಲು ಬಿಜೆಪಿ ಸರ್ಕಾರ ಬರಬೇಕು ಅಂತ ಪ್ರತಾಪ್ ಸಿಂಹ ಹೇಳಿದ್ದಾರೆ.

  • ಚುನಾವಣೆಗೆ ಅಣಿಗೊಳಿಸಲು ಮೋದಿ ರಣತಂತ್ರ – 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ

    ಚುನಾವಣೆಗೆ ಅಣಿಗೊಳಿಸಲು ಮೋದಿ ರಣತಂತ್ರ – 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ದಿನಗಣನೆ ಆರಂಭವಾಗಿದ್ದು, ರಾಜ್ಯದ ಮೂರು ಪಕ್ಷಗಳೂ ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿವೆ. ಈ ನಡುವೆಯೇ ತಮ್ಮ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲು ಬಿಜೆಪಿ (BJP) ಪ್ಲ್ಯಾನ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಸಂವಾದ ಕಾರ್ಯಕ್ರಮ ಆಯೋಜಿಸಿದೆ.

    ಪಕ್ಷದ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಅವರಿಂದು ವರ್ಚುವಲ್ ಮೂಲಕ ಸಭೆ ನಡೆಸಲಿದ್ದು, ಮತ್ತಷ್ಟು ರಣತಂತ್ರಗಳನ್ನ ಹೂಡಲಿದ್ದಾರೆ. ಅದಕ್ಕಾಗಿ ಬಿಜೆಪಿ ರಾಜ್ಯಾದ್ಯಂತ ವಿವಿಧೆಡೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ನಮ್ಮ ಬ್ಲಡ್‌ ಗ್ರೂಪ್‌ RCB ಪಾಸಿಟಿವ್‌ – ಫ್ಯಾನ್ಸ್‌ ಪೋಸ್ಟರ್‌ ವೈರಲ್‌

    ರಾಜ್ಯ ಬಿಜೆಪಿ ಕಚೇರಿ ಹಾಗೂ ಜೆ.ಪಿ ನಗರದ ಖಾಸಗಿ ಕಾಲೇಜು ಸೇರಿದಂತೆ ವಿವಿಧೆಡೆ ಸಂವಾದಕ್ಕಾಗಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಹಾಗೂ ಆಸನಗಳನ್ನ ಸಿದ್ಧಪಡಿಸಲಾಗಿದೆ. ಬಿಜೆಪಿ ಕಚೇರಿಯ 3ನೇ ಮಹಡಿಯಲ್ಲಿ ಎಲ್‌ಇಡಿ ಪರದೆ ಅಳವಡಿಕೆ ಮಾಡಲಾಗಿದೆ. ಸಂವಾದ ಕಾರ್ಯಕ್ರಮ ವೀಕ್ಷಣೆ ಮಾಡಲು ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹಾಗೂ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಸಹ ಆಗಮಿಸಿದ್ದಾರೆ.

    15 ಕ್ಷೇತ್ರಗಳಲ್ಲಿ ನೇರ ಸಂವಾದ: ಗಾಂಧಿನಗರ(ಬಿಜೆಪಿ ಕೇಂದ್ರ ಕಚೇರಿ), ಜಯನಗರ, ಮಹಾದೇವಪುರ, ಹುಬ್ಬಳ್ಳಿ-ಧಾರವಾಡ ಕೇಂದ್ರ, ಮೈಸೂರು, ಕೊಪ್ಪಳ, ಷಹಾಪುರ, ದೊಡ್ಡಬಳ್ಳಾಪುರ, ಮೊಳಕಾಲ್ಮೂರು, ಹೊಸಪೇಟೆ, ಬಾಗೇಪಲ್ಲಿ, ಮಂಗಳೂರು ದಕ್ಷಿಣ, ಬಾಗೇಪಲ್ಲಿ, ಯಮಕನಮರಡಿ, ಶಿವಮೊಗ್ಗ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇರ ಸಂವಾದ ನಡೆಸಲಿದ್ದಾರೆ. ಇದನ್ನೂ ಓದಿ: ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

    ನಮೋ ವರ್ಚುವಲ್ ಸಂವಾದ ಎಲ್ಲಿ..? ಹೇಗೆ..?
    * ಪ್ರಧಾನಿ ಮೋದಿ ಪಕ್ಷದ 50 ಲಕ್ಷ ಕಾರ್ಯಕರ್ತರ ಜತೆ ವರ್ಚುವಲ್ ಸಂವಾದ.
    * ರಾಜ್ಯದ 58,112 ಬೂತ್‌ಗಳ ಪಕ್ಷದ ಕಾರ್ಯಕರ್ತರ ಜತೆ ಮೋದಿ ಮನ್ ಕಿ ಬಾತ್.
    * 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ವರ್ಚುವಲ್ ಸಂವಾದಕ್ಕೆ ವ್ಯವಸ್ಥೆ
    * ಮೋದಿ ಸಂವಾದ ವೀಕ್ಷಣೆಗೆ 650 ಕಡೆಗಳಲ್ಲಿ ಎಲ್‌ಇಡಿ ಪರದೆಗಳ ವ್ಯವಸ್ಥೆ.
    * ಬೆಂಗಳೂರಿನ ಜಯನಗರ, ಮಹಾದೇವಪುರ ಸೇರಿ 15 ಕಡೆ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿರೋ ಮೋದಿ.
    * ಮೋದಿ ಸಂವಾದಕ್ಕಾಗಿ 24 ಲಕ್ಷ ಮಂದಿ ನಮೋ ಆಪ್ ಡೌನ್‌ಲೋಡ್
    * ಪ್ರತಿ ವಿಧಾನಸಭಾ ಕ್ಷೆತ್ರದಲ್ಲಿ ನಮೋ ಆಪ್ 5,000 ಮಂದಿ ಡೌನ್‌ಲೋಡ್

  • ಕುಟುಂಬ, ಸಂಸಾರ ತ್ಯಾಗ ಮಾಡಿ ಬಿ.ಎಲ್ ಸಂತೋಷ್‌ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ: ಪ್ರಹ್ಲಾದ್ ಜೋಶಿ

    ಕುಟುಂಬ, ಸಂಸಾರ ತ್ಯಾಗ ಮಾಡಿ ಬಿ.ಎಲ್ ಸಂತೋಷ್‌ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಬಿ.ಎಲ್ ಸಂತೋಷ್‌ (BL Santhosh) ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ತಮ್ಮ ಕುಟುಂಬ, ಸಂಸಾರ ತ್ಯಾಗ ಮಾಡಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

    ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಈಗಾಗಲೇ ಕಿತ್ತೂರು ಭಾಗದಲ್ಲಿ ಒಂದು ಮೋದಿ ಕಾರ್ಯಕ್ರಮ ನಿಗದಿಯಾಗಿದೆ. ಮೋದಿ ಕಾರ್ಯಕ್ರಮ ಇನ್ನೂ ಎರಡು, ಮೂರು ಜಾಸ್ತಿ ಮಾಡುವಂತೆ ಮನವಿ ಮಾಡಿದ್ದೇವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಹ ಬರಲಿದ್ದಾರೆ ಎಂದರು. ಇದನ್ನೂ ಓದಿ: ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ

    ಅಮಿತ್ ಶಾ ಇಂದು ಸಂಜೆ 6 ಗಂಟೆಗೆ ಹುಬ್ಬಳ್ಳಿಗೆ ಬರಲಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಮತ್ತು ಇತರೆ ಪ್ರಮುಖ ನಾಯಕರ ಜೊತೆಗೆ ಸಭೆಯಿದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಪ್ರಮುಖರ ಸಭೆ ನಡೆಯಲಿದೆ. ಸದ್ಯದ ಚುನಾವಣಾ ಮಾಹಿತಿಯನ್ನು ಶಾ ಪಡೆಯಲಿದ್ದಾರೆ. ಬಳಿಕ ಸುದ್ದಿಗೊಷ್ಠಿ ನಡೆಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜೆಡಿಎಸ್‌ಗೆ ಶಾಕ್‌ – ʼಕೈʼ ಅಭ್ಯರ್ಥಿಗೆ ವೋಟ್‌ ಹಾಕಿ ಎಂದ MLC ಭೋಜೇಗೌಡ

  • ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ : BL ಸಂತೋಷ್

    ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ : BL ಸಂತೋಷ್

    ಮೈಸೂರು: ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ (BL Santosh) ಮಾರ್ಮಿಕವಾಗಿ ಹೇಳಿದರು.

    ಮೈಸೂರಿನಲ್ಲಿ (Mysuru) ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.

    ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: 2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು

    ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಕಲಾ ವಿಭಾಗದಲ್ಲಿ ಬೆಂಗಳೂರಿನ ತಬ್ಸುಮ್ ಶೇಖ್ ಫಸ್ಟ್‌ – ಟಾಪ್‌ ವಿದ್ಯಾರ್ಥಿಗಳ ಲಿಸ್ಟ್‌ ಇಲ್ಲಿದೆ

  • ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

    ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

    ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (B.L Santhosh) ಹಾಡಿಹೊಗಳಿದ್ದಾರೆ.

    ಮಂಡ್ಯದಲ್ಲಿ ದಶಪಥ ಸಮಾವೇಶ ಹಾಗೂ ಮೋದಿ ರೋಡ್ ಶೋ ಸಕ್ಸಸ್ ಹಿನ್ನೆಲೆಯಲ್ಲಿ ಮಂಡ್ಯ ಬಿಜೆಪಿ ಪದಾಧಿಕಾರಿಗಳಿಗೆ ಹಾಗೂ ಮಂಡ್ಯ ಬಿಜೆಪಿ ಕಾರ್ಯಕರ್ತರಿಗೆ ಬಿ.ಎಲ್ ಸಂತೋಷ್ ಪತ್ರ ಬರೆದಿದ್ದಾರೆ. ಈ ಮೂಲಕ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

    ಮಂಡ್ಯದಲ್ಲಿ ನಡೆದ ಬೃಹತ್ ರೋಡ್ ಶೋ ಕಾರ್ಯಕ್ರಮದ ಸಂಪೂರ್ಣ ಯಶಸ್ಸು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಸಲ್ಲುತ್ತದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ಇತರ ಅಧಿಕಾರಿಗಳು ಹಗಲು ಇರುಳೆನ್ನದೆ ಶ್ರಮವಹಿಸಿ ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ. ಇಂತಹ ಬೃಹತ್ ಕಾರ್ಯಕ್ರಮವನ್ನು ಆಯೋಜಿಸುವುದು ಸುಲಭದ ಮಾತೇನಲ್ಲ. 41 ವರ್ಷಗಳ ಬಳಿಕ ದೇಶದ ಪ್ರಧಾನಿಯೊಬ್ಬರು ಮಂಡ್ಯಕ್ಕೆ ಭೇಟಿ ನೀಡುವ ಅಪರೂಪದ ಸಂದರ್ಭ ಇದಾಗಿತ್ತು. ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಪರೂಪದ ವಿಷಯ. ಮಂಡ್ಯ ಬಿಜೆಪಿ ಘಟಕದ ಶಕ್ತಿ ಮತ್ತು ಅಲ್ಲಿಯ ಅವಕಾಶಗಳ ಬಗ್ಗೆ ಅನೇಕ ನಾಯಕರು ಸಂಶಯ ವ್ಯಕ್ತಪಡಿಸುತ್ತಾರೆ. ಬಹಳ ಅಪರೂಪವೇ ಎನ್ನುವಂತೆ ಬಿಜೆಪಿ ಕಛೇರಿಯ ಬಳಿ ನಾಯಕರ ಕಾರುಗಳು ನಿಲ್ಲುತ್ತವೆ ಎಂದಿದ್ದಾರೆ.

    ಹೆಚ್ಚಾಗಿ ಎಲ್ಲರ ಗಮನ ಮೈಸೂರು – ಕೊಡಗು ಅಥವಾ ಬೆಂಗಳೂರಿನ ಇನ್ನೊಂದು ಭಾಗದ ಕಡೆಗೆ ಇರುತ್ತದೆ. ಈ ಬಾರಿಯೂ ನಾಯಕರ ಒತ್ತಾಸೆ ಮೈಸೂರು ಅಥವಾ ಕೆಂಗೇರಿ ಕಡೆಗಿತ್ತು. ಅದಲ್ಲದೆ ಎರಡು ತಿಂಗಳು ಹಿಂದೆಯಷ್ಟೇ ಮಂಡ್ಯದಲ್ಲಿ ಗೃಹಸಚಿವ ಅಮಿತ್ ಶಾ ಅವರ ಅದ್ಧೂರಿ ಕಾರ್ಯಕ್ರಮ ನಡೆದಿತ್ತು. ಕೆಲವು ದಿನಗಳ ಹಿಂದೆ ವಿಜಯ ಸಂಕಲ್ಪ ಯಾತ್ರೆಯು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಹಾದುಹೋಗಿತ್ತು. ಆದರೆ ರಾಜ್ಯಪಕ್ಷದ ದೃಢನಿಲುವು, ಜಿಲ್ಲಾ ಘಟಕದ ದೃಢಸಂಕಲ್ಪವು ಈ ಕಾರ್ಯಕ್ರಮ ಮಂಡ್ಯದಲ್ಲಿಯೇ ನಡೆಯುವಂತೆ ಮಾಡಿತು. ಕಾರ್ಯಕ್ರಮಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಬಿಜೆಪಿಗೆ ದೊರೆತ ಬೂಸ್ಟರ್ ಎಂದರೆ ಸಂಸದರಾದ ಸುಮಲತಾ ಅವರಿಂದ ದೊರೆತ ಬೆಂಬಲ. ಅವರು ಹೆಚ್ಚಿನ ಜನಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆನೀಡಿದ್ದರು ಎಂದಿದ್ದಾರೆ. ಇದನ್ನೂ ಓದಿ: Bengaluru Mysuru Expressway- ಟೋಲ್ ಸಂಗ್ರಹ ಪ್ರಾರಂಭವಾದ ಮೊದಲ ದಿನವೇ ತಾಂತ್ರಿಕ ದೋಷ

    ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯದ ಜನಸಾಮಾನ್ಯರ ಮನ ಗೆದ್ದಿದ್ದಾರೆ. ಯೋಜನೆಗಳು ಜನರನ್ನು ತಲಪುವುದು ಎಂದಿಗೂ ಅರಿವಿಗೆ ಬಾರದೇ ಇರದು. ಕಾರ್ಯಕ್ರಮ ಮಾಡಲು ತೆಗೆದುಕೊಂಡ ಧೈರ್ಯವೂ ಸಾರ್ಥಕವೆನಿಸಿತು. ಇಂದು ಮಂಡ್ಯದ ಬಿಜೆಪಿಯಲ್ಲಿ ನಗುಮುಖಗಳು ಮಾತ್ರ ಇವೆ. ಈ ರೋಡ್ ಶೋ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಹೊಸ ತಿರುವನ್ನು ನೀಡಿದೆ. ಮುಂಬರುವ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಾರ್ಗದರ್ಶನ ಉಲ್ಲೇಖನಾರ್ಹವಾದದ್ದು. ಬಿ.ಎಸ್. ಯಡಿಯೂರಪ್ಪನವರು ತಮ್ಮ ತವರು ಜಿಲ್ಲೆಯಾದ ಮಂಡ್ಯಕ್ಕೆ ಸದಾ ಮಾರ್ಗದರ್ಶಕರಾಗಿದ್ದಾರೆ. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ದೊಡ್ಡಪಾತ್ರವನ್ನು ವಹಿಸಿದ ಪ್ರತಾಪ್ ಸಿಂಹ ಅವರು ಯಶಸ್ಸಿಗೆ ಸಾಥ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಮೆಗಾ ಶೋಗಾಗಿ ಮಂಡ್ಯ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರನ್ನು ನನ್ನ ಹೃದಯದಾಳದಿಂದ ಅಭಿನಂದಿಸುತ್ತೇನೆ. ಮುಂದಿನ ದಿನಗಳು ಇನ್ನಷ್ಟು ತಾಕತ್ತಿನದ್ದಾಗಿರಲಿದೆ. ಇನ್ನು ಮುಂದೆ ಹೆಚ್ಚಿನ ನಿರೀಕ್ಷೆಯ ಜೊತೆಜೊತೆಗೆ ವಿರೋಧವೂ ಇರಲಿದೆ. ಈ ಹಿಂದೆ ಇದ್ದ ಸಂದೇಹಗಳೆಲ್ಲವೂ ತಪ್ಪು ಎಂದು ಸಾಬೀತಾಗಿರುವುದರಿಂದ ಆರಂಭಿಸಿರುವ ಓಟವನ್ನು ಯಶಸ್ವಿಯಾಗಿ ಮುಗಿಸುವುದು ನಮ್ಮ ಕರ್ತವ್ಯವಾಗಿದೆ. ಸಂಘಟನೆಗೆ ಹೊಸ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರಗಳ ಗೆಲುವು ಸದಾ ವಿಶೇಷ ವಿಷಯವೇ. ಮಂಡ್ಯವನ್ನು ಗೆಲ್ಲುವುದು ಕರ್ನಾಟಕ ಬಿಜೆಪಿ ಬಹಳ ವಿಶೇಷವಾದದ್ದು. ನಮ್ಮ ಸಮಯವು ಈಗ ಬಂದಿದೆ. ಒಂದೇ ಮನಸ್ಸಿನಿಂದ ಗುರಿಯನ್ನು ಸಾಧಿಸೋಣ. ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್ ಎಂದು ಬಿ.ಎಲ್ ಸಂತೋಷ್ ಗುಣಗಾನ ಮಾಡಿದ್ದಾರೆ.

  • ಕಾರ್ಯಕಾರಿಣಿಯಲ್ಲಿ ಅಚ್ಚರಿ- ಬಿಎಸ್‍ವೈ, ಬಿಎಲ್‍ಎಸ್ ಕೈಕೈ ಹಿಡಿದು ಆತ್ಮೀಯ ಚರ್ಚೆ

    ಕಾರ್ಯಕಾರಿಣಿಯಲ್ಲಿ ಅಚ್ಚರಿ- ಬಿಎಸ್‍ವೈ, ಬಿಎಲ್‍ಎಸ್ ಕೈಕೈ ಹಿಡಿದು ಆತ್ಮೀಯ ಚರ್ಚೆ

    ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ (BJP Karyakarini) ಅಪರೂಪದ ಪ್ರಸಂಗಕ್ಕೆ ಸಾಕ್ಷಿಯಾಗಿತ್ತು. ಯಾಕಂದ್ರೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B S Yediyurappa), ಬಿ.ಎಲ್ ಸಂತೋಷ್ (B L Santhosh) ಜುಗಲ್ ಬಂದಿ ಕಂಡುಬಂತು.

    ಖುದ್ದು ಸಂತೋಷ್ ಕೈ ಹಿಡಿದು ಆತ್ಮೀಯವಾಗಿ ಬಿಎಸ್‍ವೈ ಮಾತಾಡಿಸಿದರು. ಬಿಎಸ್‍ವೈ-ಸಂತೋಷ್ ದೋಸ್ತಿ ಕಂಡು ಬಿಜೆಪಿ ಪಾಳಯದಲ್ಲಿ ಅಚ್ಚರಿ, ಕುತೂಹಲ, ದಿಗ್ಭ್ರಮೆ ಕೂಡ ಆಗಿದೆ. ಕಾರ್ಯಕರಿಣಿಗೆ ಯಡಿಯೂರಪ್ಪ ಬಂದಾಗ ಅವರನ್ನು ಕಂಡು ಬಿಎಲ್ ಸಂತೋಷ್ ಹಿಂದಿನ ಸಾಲಿಗೆ ಎದ್ದು ಹೊದ್ರು. ಇದನ್ನು ಗಮನಿಸಿದ ಬಿಎಸ್‍ವೈ ಸ್ವಲ್ಪ ಹೊತ್ತಿನ ಬಳಿಕ ಸಂತೋಷ್ ಕೈಹಿಡಿದು ನಗುತ್ತಾ ತಮ್ಮನ್ನು ಕಂಡು ಬೇರೆ ಕಡೆ ಹೋಗಿದ್ದೇಕೆಂದು ಕೇಳಿದ್ರು. ಈ ವೇಳೆ ಬಿಎಸ್‍ವೈಗೆ ಕೈಮುಗಿದು ಬಿಎಲ್ ಸಂತೋಷ್ ಉತ್ತರಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

    ಇದರ ಮಧ್ಯೆ ಬಿಜೆಪಿಯಲ್ಲಿ ಚರ್ಚೆ ಶುರುವಾಗಿರೋದು ಏನಂದ್ರೆ ಯಡಿಯೂರಪ್ಪ ಅವರು ಪುತ್ರನಿಗೆ, ಆಪ್ತರಿಗೆ ಟಿಕೆಟ್ ಕೊಡಿಸುವ ಅನಿವಾರ್ಯತೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‍ಗೆ ಹತ್ತಿರ ಇರುವ ಸಂತೋಷ್ ಜೊತೆ ವಿರಸ ಮರೆತು ಆತ್ಮೀಯತೆ ಬೆಳೆಸುವ ಕಸರತ್ತಾ..? ತಮ್ಮವರಿಗಾಗಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸಾ..? ಅಥವಾ ಒಗ್ಗಟ್ಟಿನ ಸಂದೇಶವಾ..? ಬಿಎಸ್‍ವೈ ಹಿಂದಿನ ಲೆಕ್ಕಾಚಾರ ಏನು..? ಅನ್ನೋದು ಸದ್ಯ ಬಿಜೆಪಿಯಲ್ಲಿ ಚರ್ಚೆ ಆಗ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕೆ ಇಳಿದ ಬಿ.ಎಲ್‌ ಸಂತೋಷ್‌

    ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕೆ ಇಳಿದ ಬಿ.ಎಲ್‌ ಸಂತೋಷ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k