Tag: BL Santosh

  • ಲೋಕಸಭೆ ಚುನಾವಣೆಗೆ ಮೋದಿ ತಯಾರಿ – ಹಿರಿಯ ನಾಯಕರಿಗೆ 3 ಟಾರ್ಗೆಟ್

    ಲೋಕಸಭೆ ಚುನಾವಣೆಗೆ ಮೋದಿ ತಯಾರಿ – ಹಿರಿಯ ನಾಯಕರಿಗೆ 3 ಟಾರ್ಗೆಟ್

    ನವದೆಹಲಿ: ಮಧ್ಯಮ ವರ್ಗ, ಬಡವರು, ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮುದಾಯಗಳ ಮಹತ್ವವನ್ನು ಗುರುತಿಸಿ, ಅವರ ಕಾಳಜಿ ಮತ್ತು ಆಕಾಂಕ್ಷೆಗಳನ್ನು ನೇರವಾಗಿ ಪರಿಹರಿಸುವ ಕೆಲಸಗಳನ್ನು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಪಕ್ಷದ ಹಿರಿಯ ನಾಯಕರಿಗೆ ಸೂಚಿಸಿದ್ದಾರೆ.

    2024ರ ಲೋಕಸಭೆ ಚುನಾವಣೆ (Lok Sabha Election 2024) ತಯಾರಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಹಿರಿಯ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

    ಸದ್ಯದ ಪರಿಸ್ಥಿತಿಗಳ ಬಗ್ಗೆ ಅವಲೋಕನ ಮಾಡಿದ ನರೇಂದ್ರ ಮೋದಿ ಪ್ರಮುಖ 3 ಅಂಶಗಳ ಬಗ್ಗೆ ಕೇಂದ್ರಿಕರಿಸಿ ತಯಾರಿ ಆರಂಭಿಸಲು ಸೂಚಿಸಿದ್ದಾರೆ. ಮುಖ್ಯವಾಗಿ ಮಧ್ಯಮ ವರ್ಗ, ಬಡವರು, ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮುದಾಯಗಳ ಮಹತ್ವವನ್ನು ಗುರುತಿಸಿದ ಪ್ರಧಾನಿ ಮೋದಿ ಅವರ ಕಾಳಜಿ ಮತ್ತು ಆಕಾಂಕ್ಷೆಗಳನ್ನು ನೇರವಾಗಿ ಪರಿಹರಿಸುವ ಯೋಜನೆಗಳನ್ನು ರೂಪಿಸುವ ಅಗತ್ಯವನ್ನು ಒತ್ತಿ ಹೇಳಿದರು.

    ಸಂಸದರು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಸಂಸದೀಯ ಕ್ಷೇತ್ರಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು, ಆಯಾ ಕ್ಷೇತ್ರಗಳಲ್ಲಿ ಸಮಾಜದ ಹಿಂದುಳಿದ ಮತ್ತು ದುರ್ಬಲ ವರ್ಗಗಳ ಪ್ರತಿನಿಧಿಗಳ ನಡುವೆ ಸಣ್ಣ ಪ್ರಮಾಣದ ಸಭೆಗಳು ಮತ್ತು ಸೆಮಿನಾರ್‌ಗಳ ಮೂಲಕ ನೇರ ಸಂವಾದವನ್ನು ನಡೆಸಲು ಮೋದಿ ಶಿಫಾರಸು ಮಾಡಿದರು.

    ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಮುಂಚಿತವಾಗಿ ಕ್ಷೇತ್ರಗಳ ಮತ್ತು ಸ್ಥಾನಗಳ ಸೂಕ್ಷ್ಮ ನಿರ್ವಹಣೆಗೆ ನೀಲನಕ್ಷೆಯನ್ನು ತಯಾರಿಸಲು, ಚುನಾವಣಾ ಪ್ರಯತ್ನಗಳನ್ನು ಸರಳಗೊಳಿಸಲು 543 ಲೋಕಸಭಾ ಸ್ಥಾನಗಳನ್ನು ಉತ್ತರ, ದಕ್ಷಿಣ ಮತ್ತು ಪೂರ್ವ ಎಂದು 3 ಭಾಗವಾಗಿ ವಿಂಗಡಿಸಲು ಮೋದಿ ಸೂಚಿಸಿದ್ದಾರೆ. ಇದನ್ನೂ ಓದಿ: ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

    ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಜುಲೈ 6 ರಿಂದ 8 ರವರೆಗೆ ಪ್ರತಿ ಪ್ರದೇಶದ ಉನ್ನತ ನಾಯಕರೊಂದಿಗೆ ಸಭೆ ನಡೆಸಲು ಸೂಚಿಸಿದ್ದು, ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು, ರಾಜ್ಯ ಘಟಕದ ಅಧ್ಯಕ್ಷರು, ರಾಜ್ಯ ಸಂಘಟನಾ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಶಾಸಕರು, ಸಂಸದರು ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಭಾಗವಹಿಸಲು ನಿರ್ದೇಶಿಸಲಾಗಿದೆ.

    ಕೇಂದ್ರ ಸಚಿವರು ತಮ್ಮ ಸಚಿವಾಲಯದಲ್ಲಿ ವಿಭಿನ್ನ ಯೋಜನೆಗಳ ಜಾರಿಗೆ ಪ್ರಯತ್ನಿಸಬೇಕು, ಹೊಸತನಕ್ಕೆ ಆದ್ಯತೆ ನೀಡಬೇಕು. ಸಮಾಜದ ಎಲ್ಲಾ ವರ್ಗಗಳಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಆಡಳಿತವನ್ನು ಉತ್ತೇಜಿಸುವ ಗುರಿ ಹೊಂದಬೇಕು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾ, ಪಾಕಿಸ್ತಾನದೊಂದಿಗೆ ಸಂಬಂಧ ಕಷ್ಟ: ಜೈಶಂಕರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಇಟಿ ಪರೀಕ್ಷೆ ದಿನವೇ ಪ್ರಮಾಣವಚನ – ಮೋದಿ ರ‍್ಯಾಲಿ ಇರೋವಾಗ ಮಾತ್ರ ನಿಮ್ಗೆ ವಿದ್ಯಾರ್ಥಿಗಳು ಕಾಣೋದ?: ಬಿಎಲ್ ಸಂತೋಷ್

    ಸಿಇಟಿ ಪರೀಕ್ಷೆ ದಿನವೇ ಪ್ರಮಾಣವಚನ – ಮೋದಿ ರ‍್ಯಾಲಿ ಇರೋವಾಗ ಮಾತ್ರ ನಿಮ್ಗೆ ವಿದ್ಯಾರ್ಥಿಗಳು ಕಾಣೋದ?: ಬಿಎಲ್ ಸಂತೋಷ್

    ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (CET Exam) ನಡೆಯಲಿದೆ. ಇದೇ ಸಂದರ್ಭದಲ್ಲಿ ಶನಿವಾರ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೀಗ ಸಿಇಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಬೆಂಗಳೂರಿನ (Bengaluru) ವಿದ್ಯಾರ್ಥಿಗಳಿಗೆ ಟ್ರಾಫಿಕ್ ಜಾಮ್ ಆತಂಕ ಎದುರಾಗಿದೆ.

    ವಿಧಾನಸಭಾ ಚುನಾಣೆಗೂ ಮುನ್ನ ಬಿಜೆಪಿ (BJP) ಪಕ್ಷದ ಪರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ಶೋ (Road Show) ಮಾಡಿದ್ದರು. ಬೆಂಗಳೂರಿನಲ್ಲಿ ಮೋದಿ ರೋಡ್‌ಶೋ ಮಾಡಿದ್ದ ಒಂದು ದಿನ ನೀಟ್ ಪರೀಕ್ಷೆಯೂ (NEET Exam) ಇತ್ತು. ಇದಕ್ಕೆ ಕಾಂಗ್ರೆಸ್ಸಿಗರು ಮೋದಿ ರೋಡ್‌ಶೋಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೀದ ಸಿದ್ದರಾಮಯ್ಯ ಪ್ರಮಾಣವಚನ ತೆಗೆದುಕೊಳ್ಳುವ ದಿನವೇ ಸಿಇಟಿ ಪರೀಕ್ಷೆ ಇರುವುದರಿಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ಈ ಹಿಂದೆ ಸಿದ್ದರಾಮಯ್ಯ ಅವರು, ಬೇಜವಾಬ್ದಾರಿ ಹಾಗೂ ಬೆಂಗಳೂರಿನ ಜನರ ವಿರೋಧವನ್ನು ಲೆಕ್ಕಿಸದೇ ರೋಡ್ ಶೋ ನಡೆಸಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ರೀಟ್ವೀಟ್ ಮಾಡುವ ಮೂಲಕ ಕೌಂಟರ್ ಕೊಟ್ಟಿರುವ ಸಂತೋಷ್, ಮೋದಿ ರ‍್ಯಾಲಿ ಮಾಡೋವಾಗ ಮಾತ್ರ ನಿಮಗೆ ವಿದ್ಯಾರ್ಥಿಗಳು ಕಾಣೋದಾ? ಸಿಇಟಿ ಪರೀಕ್ಷೆ ದಿನವೇ ವಿದ್ಯಾರ್ಥಿಗಳಿಗೆ ತೊಂದರೆ ಕೊಟ್ಟು ಪ್ರಮಾಣವಚನ ಕಾರ್ಯಕ್ರಮ ಮಾಡುತ್ತಿದ್ದೀರಿ. ಈಗ ನೀವು ಮಾಡುತ್ತಿರುವುದು ಸರೀನಾ ಎಂದು ಸಿದ್ದು ಹಾಗೂ ಡಿಕೆಶಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರಮಾಣವಚನ ಹಿನ್ನೆಲೆ ಟ್ರಾಫಿಕ್ ಆತಂಕ

    ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದೀಗ ಪರೀಕ್ಷೆ ನಡೆಯಲಿರುವ ಮೊದಲ ದಿನ ಶನಿವಾರದಂದೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪರೀಕ್ಷೆಗೆ ತೆರಳಲು ವಿದ್ಯಾರ್ಥಿಗಳಿಗೆ ಟ್ರಾಫಿಕ್ ಜಾಮ್‌ನ ಭೀತಿ ಎದುರಾಗಿದೆ. ಇದನ್ನೂ ಓದಿ: ಪುತ್ತೂರಿನ ಘಟನೆಗೆ ಪ್ರಭಾಕರ್ ಭಟ್, ನಳಿನ್ ಕುಮಾರ್ ಕಟೀಲ್ ಕಾರಣ: ಅಭಯ್ ಚಂದ್ರ ಜೈನ್

  • ಬಿಎಸ್‌ವೈ ಭೇಟಿ ಮಾಡಿದ ಬಿಎಲ್ ಸಂತೋಷ್ – ಕುತೂಹಲ ಮೂಡಿಸಿದ ನಾಯಕರ ಭೇಟಿ

    ಬಿಎಸ್‌ವೈ ಭೇಟಿ ಮಾಡಿದ ಬಿಎಲ್ ಸಂತೋಷ್ – ಕುತೂಹಲ ಮೂಡಿಸಿದ ನಾಯಕರ ಭೇಟಿ

    ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರಾಗುತ್ತಲೇ ರಾಜ್ಯ ರಾಜಕೀಯದಲ್ಲಿ ಕುತೂಹಲಕರ ಬದಲಾವಣೆಗಳು ಆಗುತ್ತಲೇ ಇವೆ. ಪಕ್ಷದ ನಾಯಕರುಗಳ ಪ್ರತಿಯೊಂದು ಹೆಜ್ಜೆಯೂ ಮಹತ್ವದ್ದೆನಿಸುತ್ತಿದೆ.

    ಮಂಗಳವಾರ ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಭೇಟಿಯಾಗಿದ್ದಾರೆ. ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ತೆರಳಿ ಸಂತೋಷ್ ಮಾತುಕತೆ ನಡೆಸಿದ್ದಾರೆ.

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಸಂತೋಷ್ ಹಾಗೂ ಯಡಿಯೂರಪ್ಪ ಮಹತ್ವದ ಚರ್ಚೆ ನಡೆಸಿದ್ದಾರೆ. ಈಗಾಗಲೇ ಪಕ್ಷ ತೊರೆದಿರುವ ಲಿಂಗಾಯತ ನಾಯಕರ ಕ್ಷೇತ್ರದಲ್ಲಿ ತಂತ್ರಗಾರಿಕೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಅಮಿತ್ ಶಾ ರೋಡ್ ಶೋ – ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ್ ಪರ ಮತಯಾಚನೆ

    ಮಾಜಿ ಸಿಎಂ ಜಗದಿಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಲೇ ತಮಗೆ ಟಿಕೆಟ್ ಕೈತಪ್ಪಲು ಬಿಎಲ್ ಸಂತೋಷ್ ಕಾರಣ ಎಂದು ಆರೋಪ ಹೊರಿಸಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕರುಗಳು ಒಬ್ಬೊಬ್ಬರಂತೆ ಸಂತೋಷ್ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಲಿಂಗಾಯತ ನಾಯಕರುಗಳನ್ನು ಬಿಜೆಪಿ ಕಡೆಗಣಿಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದೀಗ ಬಿಎಲ್ ಸಂತೋಷ್, ಲಿಂಗಾಯತ ನಾಯಕ ಯಡಿಯೂರಪ್ಪರನ್ನು ಭೇಟಿ ಮಾಡಿರುವುದು ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ

  • ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

    ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

    ಬೆಂಗಳೂರು: ಬಿಎಲ್ ಸಂತೋಷ್ (BL Santosh) ಹೆಸರನ್ನು ನಡುವೆ ತಂದಿರುವುದು ಜಗದೀಶ್ ಶೆಟ್ಟರ್‌ಗೆ (Jagadish Shettar) ಶೋಭೆ ತರಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.

    ಜಗದೀಶ್ ಶೆಟ್ಟರ್‌ಗೆ ಎಲ್ಲಾ ರೀತಿಯಿಂದಲೂ ಮನವೊಲಿಸುವ ಪ್ರಯತ್ನ ಆಗಿದೆ. ಆದರೆ ಅವರು ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ (BJP) ಏನೂ ನಷ್ಟ ಆಗಲ್ಲ. ಏಕೆಂದರೆ ಜಗದೀಶ್ ಶೆಟ್ಟರ್ ನಂಬಿ ಅವರ ಜೊತೆಗೆ ಯಾವ ಕಾರ್ಯಕರ್ತರೂ ಹೋಗಿಲ್ಲ. ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಯಾರೂ ಕಾರಣರಲ್ಲ. ಸುಮ್ಮನೆ ಸಂತೋಷ್ ಹೆಸರು ತಂದಿದ್ದು ಕೂಡಾ ಶೆಟ್ಟರ್‌ಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.

    ಶೆಟ್ಟರ್ ಈ ರೀತಿಯ ತೀರ್ಮಾನ ತೆಗೆದುಕೊಳ್ಳಬಾರದಾಗಿತ್ತು. ನಾವು ಎಷ್ಟೇ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡುತ್ತೇವೆ ಎಂದು ಹೇಳಿದ್ದೆವು. ಈಗ ಅವರು ಹೋಗಿರುವುದರಿಂದ ನಮಗೇನೂ ನಷ್ಟವಿಲ್ಲ. ಇನ್ಮೇಲೆ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ. ಬಿಜೆಪಿ ಬಹುಮತ ಪಡೆದುಕೊಂಡು ಅಧಿಕಾರಕ್ಕೆ ಬರುತ್ತದೆ ಎಂದರು. ಇದನ್ನೂ ಓದಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ: ರಮೇಶ್ ಜಾರಕಿಹೊಳಿ

    ಶಿವಮೊಗ್ಗ ಟಿಕೆಟ್ ಘೋಷಣೆ ಬಾಕಿ ಇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗದ ಟಿಕೆಟ್ ಅನ್ನು ಇಂದು ಘೋಷಣೆ ಮಾಡುತ್ತೇವೆ. ಬುಧವಾರ ಶಿಕಾರಿಪುರದಿಂದ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಇಂದು ಶಿವಮೊಗ್ಗ ಹೋಗುತ್ತಿದ್ದೇನೆ. ನಾಮಪತ್ರ ಸಲ್ಲಿಕೆ ಬಳಿಕ ಒಂದೆರಡು ದಿನಗಳಲ್ಲಿ ಪ್ರಚಾರ ಆರಂಭಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಇದನ್ನೂ ಓದಿ: ನಾಳೆಯಿಂದ ಸಿಎಂ ಬೊಮ್ಮಾಯಿ ಪರ ಅಖಾಡಕ್ಕೆ ಇಳಿವ ಸುದೀಪ್

  • ಕೋಲಾರದಲ್ಲಿ ಸಿದ್ದು ಸೋಲಿಸಲು ಬೂತ್ ಮಟ್ಟದಿಂದಲೇ ಖೆಡ್ಡಾ ತೋಡಲು ಬಿಜೆಪಿ ಸ್ಕೆಚ್‌

    ಕೋಲಾರದಲ್ಲಿ ಸಿದ್ದು ಸೋಲಿಸಲು ಬೂತ್ ಮಟ್ಟದಿಂದಲೇ ಖೆಡ್ಡಾ ತೋಡಲು ಬಿಜೆಪಿ ಸ್ಕೆಚ್‌

    ಬೆಂಗಳೂರು: ಕೋಲಾರ ಕಣದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿಯು ಸದ್ದಿಲ್ಲದೇ ಭಾರೀ ರಣತಂತ್ರ ಹೆಣೆಯುತ್ತಿದೆ. ಬೂತ್ ಮಟ್ಟದಿಂದಲೇ ಸಿದ್ದರಾಮಯ್ಯಗೆ ಖೆಡ್ಡಾ ತೋಡಲು ಸ್ಕೆಚ್ ರೂಪಿಸಲಾಗಿದೆ.

    ರಾಷ್ಟ್ರೀಯ ಬಿಜೆಪಿ (BJP)‌ ಸಂಘಟನಾ ಪ್ರಧಾನ‌ ಕಾರ್ಯದರ್ಶಿ ಬಿಎಲ್‌ ಸಂತೋಷ್ (BL Santosh) ನೇತೃತ್ವದಲ್ಲಿ ಚುನಾವಣಾ ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಕೋಲಾರದಲ್ಲಿ (Kolara) ಸ್ಥಳೀಯ ಮಟ್ಟದಲ್ಲಿ ಬಲವನ್ನು ವೃದ್ಧಿಸಿಕೊಳ್ಳುವತ್ತಾ ಬಿಜೆಪಿ ಗಮನ ಹರಿಸಿದೆ. ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಸ್ಥಳೀಯ ಮುಖಂಡರ‌ ಸೇರ್ಪಡೆಗೆ ಬಿಜೆಪಿ ತನ್ನ ಬಾಗಿಲನ್ನು ತೆರೆದಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಕಾವು ಪಡೆದ ರಾಜಕೀಯ – ಕನಕಪುರದ ಬಂಡೆ ಮದ್ದೂರಿನಲ್ಲಿ ಸ್ಪರ್ಧೆ?

     

    ಕೋಲಾರದಲ್ಲಿ ಸ್ಥಳೀಯ ನಾಯಕರಿಗೆ ಆಪರೇಷನ್ ಕಮಲ (Operation Kamala) ಮೂಲಕ ಗಾಳ ಹಾಕಲು ತಂತ್ರಗಾರಿಕೆ ಮಾಡಲಾಗಿದೆ. ಜೆಡಿಎಸ್ (JDS) ಮುಖಂಡರೇ ಆಪರೇಷನ್‌ಗೆ ಮುಖ್ಯ ಟಾರ್ಗೆಟ್ ಆಗಿದ್ದಾರೆ ಎನ್ನಲಾಗಿದೆ. ಜೆಡಿಎಸ್ ನಾಯಕರನ್ನು ಆಪರೇಷನ್ ಮಾಡಿದರೆ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಪ್ಲಸ್ ಆಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಕೋಲಾರದಲ್ಲಿ ರೂಪಿಸಿರುವ ಒಕ್ಕಲಿಗ ಜಾತಿವ್ಯೂಹ ಲೆಕ್ಕಾಚಾರಕ್ಕೆ ಆಪರೇಷನ್ ಕಮಲವೇ ಅಸ್ತ್ರವಾಗಿದೆ.

    ಮೊದಲ ಆದ್ಯತೆ ತೆನೆ ಮುಖಂಡರಾದರೆ, ನಂತರದ ಆದ್ಯತೆ ಕಾಂಗ್ರೆಸ್ (Congress) ಮುಖಂಡರು. ಕೈ-ತೆನೆಯಿಂದ ಯಾರೇ ಬಂದರೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ದೆಹಲಿಯಿಂದಲೇ ರಾಜ್ಯ ಘಟಕಕ್ಕೆ ಸೂಚನೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಹಾಲಿ-ಮಾಜಿ‌ ಸದಸ್ಯರನ್ನು ಪಕ್ಷಕ್ಕೆ ಕರೆತರಲು ಆಪರೇಷನ್‌ ಪ್ಲಾನ್ ರೂಪಿಸಲಾಗಿದೆ. ಬಿಜೆಪಿಯ ಸಂಭಾವ್ಯ ಅಭ್ಯರ್ಥಿ ವರ್ತೂರು ಪ್ರಕಾಶ್ (Varthur Prakash) ಅವರಿಗೆ ಇರುವ ಪ್ರಭಾವವನ್ನು ಬಳಸಿಕೊಂಡು ಹಾಲಿ-ಮಾಜಿ ಲೋಕಲ್ ಜನಪ್ರತಿನಿಧಿಗಳಿಗೆ ಗಾಳ ಹಾಕಲಾಗುತ್ತಿದೆ.

    ಕಾಂಗ್ರೆಸ್, ಜೆಡಿಎಸ್‌ನಲ್ಲಿ ಅಸಮಧಾನಗೊಂಡವರನ್ನು ಪಕ್ಷಕ್ಕೆ ಸೆಳೆಯುವ ತಂತ್ರ ಹೆಣೆಯಲಾಗಿದೆ. ‌ಆ ಮೂಲಕ ಕೋಲಾರ ಕ್ಷೇತ್ರದಲ್ಲಿ ಸ್ಥಳೀಯವಾಗಿ ಪಕ್ಷ ಸಂಘಟನೆ, ಮುಖಂಡರು, ಕಾರ್ಯಕರ್ತರ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಗುರಿಯಾಗಿದೆ. ಆಪರೇಷನ್ ಕಮಲ ಮೂಲಕ ಜೆಡಿಎಸ್ ಮತ್ತು ಕಾಂಗ್ರೆಸ್ ಶಕ್ತಿ ಕುಂದಿಸುವ ಹಿಡನ್ ತಂತ್ರವೂ ಇದರ ಹಿಂದೆ ಇದೆ. ಅಸಮಧಾನಿತರನ್ನು ಸೆಳೆದು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಆಂತರಿಕ ಕಚ್ಚಾಟದ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ.

    ಕಾಂಗ್ರೆಸ್ ವಿರುದ್ಧ ಸಣ್ಣ ವಿರೋಧವೂ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಟೀಮ್ ಸಜ್ಜಾಗಿದೆ. ಕಾಂಗ್ರೆಸ್, ಜೆಡಿಎಸ್ ನಾಯಕರ ಬಗ್ಗೆ ಅಸಮಾಧಾನಗೊಂಡ ಸಂಘ ಸಂಸ್ಥೆಗಳು, ಸಂಘಟನೆಗಳು, ಸಮಿತಿ, ಒಕ್ಕೂಟಗಳು, ಹಳ್ಳಿಗಳ ಮೇಲೂ ಬಿಜೆಪಿ ನಾಯಕರು ಗಮನ ಹರಿಸಿದ್ದಾರೆ. ಒಟ್ಟಾರೆ ಈ ಎಲ್ಲ ತಂತ್ರಗಳ ಜಾರಿಗೆ ಪಕ್ಷದ ಮುಖಂಡರಿಗೆ ಜವಾಬ್ದಾರಿಗಳ‌ ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿಯ ಈ ಮೈಕ್ರೋ ಲೆವೆಲ್ ಸ್ಟ್ರಾಟೆಜಿ ಯಶಸ್ವಿಯಾಗುತ್ತಾ ಎಂಬ ಕುತೂಹಲ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದು ಸೋಲಿಸಲು ಅಖಾಡಕ್ಕಿಳಿದ ಬಿಎಲ್‌ ಸಂತೋಷ್‌

    ಸಿದ್ದು ಸೋಲಿಸಲು ಅಖಾಡಕ್ಕಿಳಿದ ಬಿಎಲ್‌ ಸಂತೋಷ್‌

    ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಮೇಲಾಟಗಳು ಜೋರಾಗಿದೆ. ಈ ನಡುವೆ ಸಿದ್ದರಾಮಯ್ಯ (Siddaramaiah) ಕೋಲಾರದಿಂದಲೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬಳಿಕ ಕೋಲಾರ (Kolara) ಈಗ ಕರ್ನಾಟಕದಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಹೀಗಾಗಿ ಕೋಲಾರ ಆರ್‌ಎಸ್‍ಎಸ್ (RSS) ಟಾರ್ಗೆಟ್ ಲಿಸ್ಟ್‌ನಲ್ಲಿ ಮೊದಲ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್ (BL Santosh) ಅಖಾಡಕ್ಕಿಳಿದ್ದಿದ್ದಾರೆ.

    ಕೋಲಾರದಲ್ಲಿ ಸಿದ್ದರಾಮಯ್ಯ ಅವರನ್ನು ಹಣಿಯಲು ಜಾತಿ ತಂತ್ರಗಾರಿಕೆ ಮಾಡಿದ್ದಾರೆ. ಸಿದ್ದರಾಮಯ್ಯರ ಒಂದು ಕಾಲದ ಶಿಷ್ಯಂದಿರ ಜತೆ ಸಂತೋಷ್ ರಣತಂತ್ರ ಮಾಡಿದ್ದು, ಕೋಲಾರದಲ್ಲಿ ಜಾತಿ ಸಮೀಕರಣದ ತಂತ್ರ ಹೆಣೆಯಲು ಸಂತೋಷ್ ಟೀಮ್ ಮುಂದಾಗಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ

    ಪರಿಶಿಷ್ಟ ಸಮುದಾಯಗಳು ಹಾಗೂ ಒಕ್ಕಲಿಗರ ಜಾತಿ ವ್ಯೂಹ ರಚನೆಗೆ ತಂತ್ರ ಹೆಣೆದಿದ್ದು, ಈ ಎರಡೂ ಸಮುದಾಯಗಳನ್ನು ಒಲಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದಾರೆ. ಮೀಸಲಾತಿ ಕೊಡುವ ಮೂಲಕ ಈಗಾಗಲೇ ಪರಿಶಿಷ್ಟ ಸಮುದಾಯಗಳ ಒಲವು ಹಾಗೂ ಕೆಂಪೇಗೌಡ ಪ್ರತಿಮೆ, 2ಸಿ ಪ್ರವರ್ಗದಲ್ಲಿ ಮೀಸಲು ಹೆಚ್ಚಿಸಿ ಒಕ್ಕಲಿಗರ ಸಖ್ಯ ಬೆಳೆಸಲು ಮುಂದಾಗಿದ್ದಾರೆ.

    ಪಕ್ಷದ ದಲಿತ ಮತ್ತು ಒಕ್ಕಲಿಗ ನಾಯಕರ ಮೂಲಕ ಎರಡೂ ಸಮುದಾಯಗಳ ಮನವೊಲಿಕೆ ಕಸರತ್ತು ಮಾಡಿದ್ದಾರೆ. ಈ ಎರಡು ಸಮುದಾಯಗಳು ಬೆಂಬಲ ನೀಡುವುದರ ಜೊತೆ ಬಲಿಜರು, ಬ್ರಾಹ್ಮಣ ಮತದಾರರು ಬಿಜೆಪಿ ಪರವಾಗಿದ್ದಾರೆ. ಈ ತಂತ್ರಗಾರಿಕೆ ಯಶಸ್ವಿಯಾದರೆ ಕೋಲಾರದಲ್ಲಿ ಬಿಜೆಪಿಗೆ ಜಯ ಸಿಗಬಹುದು ಎಂಬ ಲೆಕ್ಕಾಚಾರವನ್ನು ಕಮಲ ನಾಯಕರು ಹಾಕಿಕೊಂಡಿದ್ದಾರೆ. ಬೈರತಿ ಬಸವರಾಜು, ಈಶ್ವರಪ್ಪ, ಎಂಟಿಬಿ, ಅಭ್ಯರ್ಥಿ ವರ್ತೂರು ಪ್ರಕಾಶ್ ಮೂಲಕ ಕುರುಬ ಮತ ಸೆಳೆಯಲು ಪ್ಲಾನ್ ಮಾಡಲಾಗಿದೆ.

    ಕೋಲಾರ ಲೆಕ್ಕಾಚಾರ
    ಕ್ಷೇತ್ರದ ಒಟ್ಟು ಮತಗಳು – 2.32 ಲಕ್ಷ
    ಪರಿಶಿಷ್ಟ ಜಾತಿ – 49 ಸಾವಿರ
    ಮುಸ್ಲಿಮರು – 51 ಸಾವಿರ
    ಒಕ್ಕಲಿಗರು – 40 ಸಾವಿರ
    ಕುರುಬರು – 28 ಸಾವಿರ
    ಕ್ರೈಸ್ತರು – 12 ಸಾವಿರ
    ಪರಿಶಿಷ್ಟ ಪಂಗಡ- 11 ಸಾವಿರ
    ಬ್ರಾಹ್ಮಣ, ಬಲಿಜ ಸೇರಿ ಇತರರು – 40 ಸಾವಿರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಜೆಪಿ ಕಾರ್ಯಕರ್ತರೂ ಈ ಸರ್ಕಾರವನ್ನು ಮೆಚ್ಚುವುದಿಲ್ಲ: ಎಚ್.ವಿಶ್ವನಾಥ್

    ಬಿಜೆಪಿ ಕಾರ್ಯಕರ್ತರೂ ಈ ಸರ್ಕಾರವನ್ನು ಮೆಚ್ಚುವುದಿಲ್ಲ: ಎಚ್.ವಿಶ್ವನಾಥ್

    ಮೈಸೂರು: ಪ್ರತಿದಿನ ಒಂದಲ್ಲ ಒಂದು ಹಗರಣಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ. ಈ ಸರ್ಕಾರವನ್ನು ಯಾರು ತಾನೇ ಮೆಚ್ಚೆಕೊಳ್ತಾರೆ. ಬಿಜೆಪಿ ಕಾರ್ಯಕರ್ತರೂ ಮೆಚ್ಚುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಡಳಿತ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದರು.

    ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನಕ್ಕೊಂದು ಹಗರಣ ಬಯಲಾಗುತ್ತಿರುವಾಗ ಈ ಸರ್ಕಾರಕ್ಕೆ ಜನರಿಂದ ಒಳ್ಳೆಯ ಹೆಸರು ಬರುತ್ತದೆಯೇ? ಈ ಸರ್ಕಾರವನ್ನು ಬಿಜೆಪಿ ಕಾರ್ಯಕರ್ತರೂ ಮೆಚ್ಚುವುದಿಲ್ಲ ಎಂದು ಕೆಂಡಾಮಂಡಲವಾದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

    H VISHWANATH

    ಸಾಫ್ಟ್ ಆಗಿ ಆಡಳಿತ ಮಾಡುತ್ತಿದ್ದೇನೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಗರಂ ಆದ ಅವರು, ಇದು ಒಬ್ಬ ಮುಖ್ಯಮಂತ್ರಿ ನೀಡುವ ಹೇಳಿಕೆಯಲ್ಲ. ಆಡಳಿತದಲ್ಲಿ ಸಾಫ್ಟ್ ಅಥವಾ ಹಾರ್ಡ್ ಅಂತಾ ಇಲ್ಲ. ಇರುವ ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಬೇಕು ಅಷ್ಟೇ. ನಿಮ್ಮ ಹಾರ್ಡ್ ವೆಪನ್ ಅನ್ನು ಹಗರಣ ಮಾಡಿದವರ ಮೇಲೆ ಬಳಸಿ ಎಂದು ಹೇಳಿದರು.

    ಪಿಎಸ್‌ಐ ಹಗರಣದಲ್ಲಿ ಕಿಂಗ್‌ಪಿನ್ ಜೊತೆಗೆ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದಾರೆ ಎಂದು ಹೇಳುತ್ತಿದ್ದಾರೆ. ಇಲ್ಲಿ ಶಾಸಕಾಂಗ, ಕಾರ್ಯಾಂಗ ಎರಡೂ ಹಗರಣದಲ್ಲಿ ಸೇರಿವೆ. ಸರ್ಕಾರಿ ತನಿಖಾ ಸಂಸ್ಥೆಗಳು ಪ್ರಾಮಾಣಿಕವಾಗಿ ವಿಚಾರಣೆ ನಡೆಸಿದಾಗ ಸಾರ್ವಜನಿಕರಿಗೆ ನಂಬಿಕೆ ಬರುತ್ತದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

    BASAVARAJ BOMMAI 2

    ಸಂತೋಷ್ ಹೇಳಿಕೆ ಸಮರ್ಥನೆ: ಇದೇ ವೇಳೆ ಸಚಿವ ಬಿ.ಎಲ್.ಸಂತೋಷ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಎಚ್.ವಿಶ್ವನಾಥ್, ಈ ಹಿಂದೆ ಪ್ರಧಾನಿ ನರೇಂದ್ರಮೋದಿ ಅವರು ನಾಗ್ಪುರದಲ್ಲಿ ಸಿಬಿಐ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕುಟುಂಬ ರಾಜಕಾರಣ ಜನತಂತ್ರ ವ್ಯವಸ್ಥೆಯಲ್ಲಿ ಗೆದ್ದಿಲು ರೀತಿ ತಿನ್ನುತ್ತಿದೆ. ಇದಕ್ಕೊಂದು ವಿರಾಮ ಕೊಡಬೇಕು ಎಂದು ಹೇಳಿದ್ದರು. ಅದೇ ಅರ್ಥದಲ್ಲಿ ಬಿ.ಎಲ್.ಸಂತೋಷ್ ಹೊಸ ಮುಖಗಳಿಗೆ ಆದ್ಯತೆ ಕೊಡಬೇಕು ಎಂದು ಹೇಳಿದ್ದಾರೆ. ಇದರಲ್ಲಿ ತಪ್ಪೇನಿಲ್ಲ. ಆದರೆ, ಇದಕ್ಕೆ ಬೇರೆ ಅರ್ಥ ಕೊಡುವುದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‍ವೈ

    CT Ravi

    ಸಿಟಿ ರವಿ ವಿರುದ್ಧ ಕಿಡಿ:  ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ ವಿಶ್ವನಾಥ್, ನಮ್ಮ ಪಕ್ಷದವರೇ ಆದ ಸಿ.ಟಿ.ರವಿ ಓಹೋಹೋ ಎಂದು ಬಾಯಿಗೆ ಬಂದಂತೆ ಮಾತನಾಡ್ತಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ವಿದ್ಯಮಾನಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಬೇಕು. ನೀನು ಕಳ್ಳ-ನೀನು ಕಳ್ಳ ಎಂದರೆ ಸರಿಹೋಗುವುದಿಲ್ಲ ಎಂದು ತಿಳಿವಳಿಕೆ ನೀಡಿದರು.

  • ದುರ್ಬಲ ಇರೋ ಕಡೆ ಬದಲಾವಣೆ ಮಾಡಲಾಗುತ್ತೆ: ಸಿ.ಟಿ.ರವಿ

    ದುರ್ಬಲ ಇರೋ ಕಡೆ ಬದಲಾವಣೆ ಮಾಡಲಾಗುತ್ತೆ: ಸಿ.ಟಿ.ರವಿ

    ಮಂಡ್ಯ: ಸಾಮರ್ಥ್ಯ ಇದ್ದವರು ಎಲ್ಲಿದ್ದರು ಯಶಸ್ಸು ಕಾಣುತ್ತಾರೆ. ದುರ್ಬಲ ಇರೋ ಕಡೆ ಬದಲಾವಣೆ ಆಗುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

    ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದೇವೆ. ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ವಿಚಾರವಾಗಿ ನಗರದ ಮದ್ದೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಸಂತೋಷ್ ಅವರು ಯಾವ ಉದ್ದೇಶದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಗೆಲ್ಲುವ ಸಾಧ್ಯತೆ ಇರುವರಿಗೆ ಪಕ್ಷ ಬೆಂಬಲ ಕೊಡುತ್ತೆ. ದುರ್ಬಲ ಇರೋ ಕಡೆ ಬದಲಾವಣೆ ಮಾಡಲಾಗುತ್ತೆ. ಇದು ಹಿಂದಿನಿಂದ ಬಂದಿರುವ ಪದ್ದತಿ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕಾರಣ ಬ್ಯುಸಿನೆಸ್ ಅಲ್ಲ, ಅಪ್ಪ ಮಕ್ಕಳ ಸಂಸ್ಕೃತಿ ರಾಜಕಾರಣದಲ್ಲಿ ಇರಬಾರದು: ಅಶ್ವಥ್ ನಾರಾಯಣ

    ಗೆಲ್ಲುವ ಸಾಮರ್ಥ್ಯ ಇರುವವರಿಗೆ ನಮ್ಮ ಪಾರ್ಟಿ ಬೆಂಬಲ ಕೊಡುತ್ತಲೇ ಬಂದಿದೆ. ಸಾಮರ್ಥ್ಯ ಇದ್ದವರು ಎಲ್ಲಿದ್ದರೂ ಯಶಸ್ಸು ಕಾಣುತ್ತಾರೆ. ನಮ್ಮ ಪಕ್ಷ ದುರ್ಬಲರಿಗೆ ಮಣೆ ಹಾಕುವುದಿಲ್ಲ. ಕರ್ನಾಟಕಕ್ಕೆ ಕರ್ನಾಟಕದವರೇ ಮಾದರಿ. ಇಲ್ಲಿ ಗುಜರಾತ್, ಪಂಜಾಬ್ ಮಾದರಿ ಅನ್ನುವುದು ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್

  • ರಾಜಕಾರಣ ಬ್ಯುಸಿನೆಸ್ ಅಲ್ಲ, ಅಪ್ಪ ಮಕ್ಕಳ ಸಂಸ್ಕೃತಿ ರಾಜಕಾರಣದಲ್ಲಿ ಇರಬಾರದು: ಅಶ್ವಥ್ ನಾರಾಯಣ

    ರಾಜಕಾರಣ ಬ್ಯುಸಿನೆಸ್ ಅಲ್ಲ, ಅಪ್ಪ ಮಕ್ಕಳ ಸಂಸ್ಕೃತಿ ರಾಜಕಾರಣದಲ್ಲಿ ಇರಬಾರದು: ಅಶ್ವಥ್ ನಾರಾಯಣ

    ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ ಅಪ್ಪ-ಮಕ್ಕಳು, ಕುಟುಂಬ ರಾಜಕಾರಣದ ಸದ್ದು ಜೋರಾಗಿ ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ತಲ್ಲಣ ಸೃಷ್ಟಿಸಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಆತಂಕ ಸೃಷ್ಟಿ ಮಾಡಿದೆ.

    ಕುಟುಂಬ ರಾಜಕಾರಣದ ವಿರುದ್ಧ ಹೇಳಿಕೆ ಕೊಟ್ಟರುವ ಬಿ.ಎಲ್.ಸಂತೋಷ್ ಹೇಳಿಕೆಯನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸ್ವಾಗತ ಮಾಡಿದ್ದಾರೆ. ಅಲ್ಲದೆ ರಾಜಕಾರಣದಲ್ಲಿ ಅಪ್ಪ-ಮಕ್ಕಳ ಸಂಸ್ಕೃತಿ ಇರಬಾರದು ಅಂತ ಸಂತೋಷ್ ಮಾತಿಗೆ ಧ್ವನಿಗೂಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ಅನ್ನೋದು ಬ್ಯುಸಿನೆಸ್ ಅಲ್ಲ. ಪಕ್ಷ ವಿನೂತನವಾಗಿ, ಹೊಸದಾಗಿ ಏನೇ ಮಾಡಿದರು ನಮಗೆ ಸಂತೋಷ ಇದೆ. ನಮ್ಮ ಅಭ್ಯಂತರ ಇಲ್ಲ. ಪಕ್ಷಕ್ಕೆ ವ್ಯಕ್ತಿಗಳು ಮುಖ್ಯ ಅಲ್ಲ. ವ್ಯಕ್ತಿಗಿಂತ ವ್ಯವಸ್ಥೆ ಮುಖ್ಯವಾಗಿ ಇರುತ್ತದೆ. ವ್ಯವಸ್ಥೆಯಲ್ಲಿ ಯಾರಾದರೇನು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್

    ಕುಟುಂಬ ರಾಜಕಾರಣವನ್ನು ಇಡೀ ಸಮಾಜ ವಿರೋಧ ಮಾಡುತ್ತದೆ. ಕುಟುಂಬ ಆಧಾರಿತ ರಾಜಕೀಯ ಇರಬಾರದು ಅನ್ನೋದು ಸಮಾಜದ ಇಚ್ಛೆ. ಆ ದಿಕ್ಕಿನಲ್ಲಿ ಬಿಜೆಪಿ ಯೋಚನೆ ಮಾಡ್ತಿರೋದು ಒಳ್ಳೆ ಬೆಳವಣಿಗೆ. ಕೆಲವರಿಗೆ ಮೀಸಲು ಇರೋದಕ್ಕೆ ಇದು ಬ್ಯುಸಿನೆಸ್ ಅಲ್ಲ, ಇದೊಂದು ಸೇವೆ. ನಾವು ಸಮಾಜಕ್ಕೆ ಸೇವೆ ಸಲ್ಲಿಸಬೇಕು. ರಾಜಕೀಯಕ್ಕೆ ಬಂದು ನಮ್ಮ ಸೇವೆ ಮಾಡಿಕೊಳ್ಳೋದು ಸರಿಯಲ್ಲ. ಅಪ್ಪ-ಮಕ್ಕಳ ಸಂಸ್ಕೃತಿ ಸಮಾಜದಲ್ಲಿ ಇರಬಾರದು ಎಂದಿದ್ದಾರೆ.

    ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳಲ್ಲಿ ಕುಟುಂಬ ರಾಜಕಾರಣ, ಅಪ್ಪ ಮಕ್ಕಳ ಪಕ್ಷ ಅಂತ ಇದೆ. ಎಲ್ಲಾ ರಾಜ್ಯದಲ್ಲೂ ಅಪ್ಪ-ಮಕ್ಕಳ ಪಕ್ಷ ಆಗಿ ಬಿಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಇದನ್ನ ಸ್ಪಷ್ಟವಾಗಿ ವಿರೋಧ ಮಾಡಿದ್ದಾರೆ. ಇದನ್ನ ನಾವೂ ವಿರೋಧ ಮಾಡಬೇಕು. ಇದೇನು ಬ್ಯುಸಿನೆಸ್ ಮಾಡೆಲ್ ಅಲ್ಲ. ಈ ನಿಟ್ಟಿನಲ್ಲಿ ಪ್ರಧಾನಿಗಳು ನಿರ್ಧಾರ ಮಾಡಿದ್ದಾರೆ. ಯಾರು ಯಾರು ಇರಬೇಕು ಅಂತ ಪಕ್ಷ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವು ಬದ್ಧರಾಗಿ ಇರಬೇಕು. ನಾನೇ ಒಬ್ಬ, ನಾನೇ ಎಲ್ಲಾ ಅಂತ ಹೇಳೋದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಆಗಿ ಕಾಫಿನಾಡ ಬಿ.ಎಸ್.ರಾಜು ನೇಮಕ

    MODi

    ನಾಯಕತ್ವ ಬದಲಾವಣೆ ಹೈಕಮಾಂಡ್ ತೀರ್ಮಾನ:
    ನಾಯಕತ್ವ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಪಕ್ಷ ಆಲೋಚನೆ ಮಾಡಿ ನಿರ್ಧಾರ ಮಾಡುತ್ತದೆ. ಅದಕ್ಕೆ ನಾವೆಲ್ಲ ಸಹಕಾರ ಕೊಡಬೇಕು. ನಾವೆಲ್ಲ ಒಟ್ಟಾಗಿ ಇರಬೇಕು. ಪಕ್ಷವಾಗಿ ಏನು ನಿರ್ಧಾರ ಆಗುತ್ತೋ ಅದರಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

    ಅನೇಕರಲ್ಲಿ ಬೇರೆ ಬೇರೆ ಅಭಿಪ್ರಾಯಗಳು ಇರಬಹುದು. ಆದರೆ ಪಕ್ಷದ ತೀರ್ಮಾನವೇ ಅಂತಿಮ. ಅದಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು. ನಾವು ಬಂದಿರೋದು ಸಮಾಜಕ್ಕೆ ಒಳ್ಳೆಯದು ಮಾಡಲು. ಪಕ್ಷ ಏನು ತೀರ್ಮಾನ ಮಾಡುತ್ತೋ ಹಾಗೆ ನಡೆಯಬೇಕು. ಈ ದಿಕ್ಕಿನಲ್ಲಿ ಪಕ್ಷ ತೆಗೆದುಕೊಳ್ಳೊವ ತೀರ್ಮಾನಕ್ಕೆ ನಾನು ಬದ್ಧವಾಗಿ ಇರುತ್ತೇನೆ ಎಂದು ಹೇಳಿದ್ದಾರೆ.

  • ಮೋದಿ ಹೆಸರೇಳಿಕೊಂಡು ಗೆದ್ದು ಬರುತ್ತೇವೆ ಎಂಬ ಭ್ರಮೆಯಿಂದ ಹೊರಬನ್ನಿ: ಬಿ.ಎಲ್ ಸಂತೋಷ್

    ಮೋದಿ ಹೆಸರೇಳಿಕೊಂಡು ಗೆದ್ದು ಬರುತ್ತೇವೆ ಎಂಬ ಭ್ರಮೆಯಿಂದ ಹೊರಬನ್ನಿ: ಬಿ.ಎಲ್ ಸಂತೋಷ್

    ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬರೀ ಮೋದಿ ಹೆಸರೊಂದೇ ಸಾಕಾಗಲ್ಲ. ಮೋದಿ ಹೆಸರೇಳಿಕೊಂಡು ಗೆದ್ದು ಬರುತ್ತೇವೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಖಡಕ್ ಸಂದೇಶ ನೀಡಿದ್ದಾರೆ.

    ಬಿಜೆಪಿ ಕಾರ್ಯಕಾರಿಣಿಯಲ್ಲಿ ಬಿಎಲ್ ಸಂತೋಷ್ ಮಾಡಿದ ಭಾಷಣ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆಡಳಿತ ವಿರೋಧಿ ಅಲೆ ಎದುರಿಸಿ ಚುನಾವಣೆ ಗೆಲ್ಲಬೇಕು. ಇದಕ್ಕಾಗಿ ಪಕ್ಷ ಸಂಘಟಿಸಿ ಎಂದು ಕರೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೇ, ಮುಂದಿನ ಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ. ಇಲ್ಲಿಯೂ ಯುಪಿ ಮಾದರಿ ಅನುಸರಿಸಲಾಗುವುದು ಎನ್ನುವ ಮೂಲಕ ಹಲವರಿಗೆ ಬಿಗ್ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸ್ವರ್ಣಯುಗ ಆರಂಭವಾಗಿದೆ: ಜೆ.ಪಿ ನಡ್ಡಾ

    ಬಿಜೆಪಿ ಕೋರ್ ಕಮಿಟಿ ಸಭೆ ಅಂತಿಮ ಕ್ಷಣದಲ್ಲಿ ರದ್ದುಗೊಂಡಿತು. ಬಿಜೆಪಿ ಪ್ರಮುಖರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯ ಬಿಜೆಪಿ ನಾಯಕರಿಗೆ ಮೂರು ಟಾಸ್ಕ್ ನೀಡಿದ್ದಾರೆ. ಮಿಷನ್ 150 ಗುರಿ ತಲುಪಲು ಭರದ ಸಿದ್ಧತೆ ಮಾಡಿಕೊಳ್ಳಿ. ಕಷ್ಟದ ವಿಧಾನಸಭೆ ಕ್ಷೇತ್ರಗಳನ್ನು ರಿಸ್ಕ್ ಆಧಾರದಲ್ಲಿ ವಿಂಗಡಿಸಿಕೊಂಡು ಫೋಕಸ್ ಮಾಡಿ. ಕಾಂಗ್ರೆಸ್, ಜೆಡಿಎಸ್ ಕೋಟೆಗಳಲ್ಲಿ ಸ್ಪೆಷಲ್ ಫೋಕಸ್‍ಗೆ ತಾಕೀತು ಮಾಡಿದ್ದಾರೆ. ಕೇಂದ್ರ ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಿ. ಸಿಎಂ ಸಹಿತ ಪದಾಧಿಕಾರಿಗಳವರೆಗೆ ಎಲ್ಲರೂ ಪಕ್ಷ ಸಂಘಟನೆ ಮಾಡಿ. ಸಚಿವರು ತಮ್ಮ ಕ್ಷೇತ್ರದಲ್ಲಿ ಮಾತ್ರವಲ್ಲದೇ ಜಿಲ್ಲಾ ಸಂಘಟನೆಯ ಮೇಲೆ ಗಮನ ಹರಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಗಿಳಿದ ಉಕ್ರೇನ್‌ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳು