Tag: Blind Couple

  • ಅಂಧ ಜೋಡಿಗೆ ಬೆಳಕಾದ 400 ಆಟೋ ಚಾಲಕರು

    ಅಂಧ ಜೋಡಿಗೆ ಬೆಳಕಾದ 400 ಆಟೋ ಚಾಲಕರು

    ಬೆಂಗಳೂರು: ಅಂಧರ ಬಾಳಿಗೆ ಆಟೋ ಚಾಲಕರ (Auto Drivers) ಸೇನೆ ಹೊಸ ಬೆಳಕು ನೀಡಿದೆ. ಪ್ರೀತಿಸಿ ಆರ್ಥಿಕ ಸಮಸ್ಯೆಯಿಂದ ಮದುವೆಯಾಗದೇ ಇದ್ದ ಅಂಧ ಪ್ರೇಮಿಗಳಿಗೆ (Blind Couple) ಆಟೋ ಚಾಲಕರೆಲ್ಲಾ ಸೇರಿ ಅಪರೂಪದ ಮದುವೆ (Marriage) ಮಾಡಿಸಿದ್ದಾರೆ. ಆಟೋ ಚಾಲಕರ ಸಮ್ಮುಖದಲ್ಲೇ ಸಪ್ತಪದಿ ತುಳಿದ ಜೋಡಿ, ಹೊಸ ಜೀವನ ಆರಂಭಿಸಿದ್ದಾರೆ.

    ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬೇಗುರಿನ ಅಕ್ಷಯನಗರದ ವಿನಾಯಕ ದೇವಸ್ಥಾನದಲ್ಲಿ ಈ ಅಂಧ ಜೋಡಿಗೆ ಆಟೋ ಚಾಲಕರೇ ಮುಂದೆ ನಿಂತು ಮದುವೆ ಮಾಡಿಸಿದ್ದಾರೆ. ವಧುವಿಗೆ 3 ಗ್ರಾಂ ಚಿನ್ನದ ತಾಳಿ, ಕಾಲುಂಗುರ, ಸೀರೆ ಹಾಗೂ ವರನಿಗೆ ಬಟ್ಟೆ ಕೊಡಿಸಿ, ಸಂಪ್ರದಾಯದಂತೆ ಮದುವೆ ಮಾಡಿಸಿದ್ದಾರೆ. ವಧು-ವರನಿಗೆ ತಂದೆ ತಾಯಿ, ಸಂಬಂಧಿಕರು ಇರಲಿಲ್ಲ. 400 ಆಟೋ ಚಾಲಕರೇ ಇಂತಿಷ್ಟು ಹಣ ಸಂಗ್ರಹಿಸಿ ಮದುವೆ ಕಾರ್ಯಕ್ರಮ ಮಾಡಿದ್ದಾರೆ. ಇದನ್ನೂ ಓದಿ: Bengaluru-Mysuru Expressway ನಲ್ಲಿ ಬೇಸಿಗೆ ಮಳೆಗೇ ಅವಾಂತರ- ವಾಹನ ಸವಾರರ ಪರದಾಟ

    ವರ ಮಂಜುನಾಥ್ ಕೋಲಾರ ಮೂಲದವರಾಗಿದ್ದು, ಬಿಎ ವ್ಯಾಸಂಗ ಮಾಡಿದ್ದಾರೆ. ವಧು ದೇವಿರಮ್ಮ ಹಾಸನ ಮೂಲದವರು. ಅವರಿಬ್ಬರು ಹುಟ್ಟುತ್ತಲೇ ಅಂಧರು. ವಯಸ್ಸು 30 ದಾಟಿದರೂ ಇಬ್ಬರಿಗೆ ಮದುವೆಯ ಭಾಗ್ಯ ಬಂದಿರಲಿಲ್ಲ. ಹೀಗೆ ಕುಗ್ಗಿ ಹೋಗುತ್ತಿದ್ದ ಸಮಯದಲ್ಲೇ ಇಬ್ಬರಿಗೆ ಪ್ರೀತಿ ಚಿಗುರೊಡೆದಿತ್ತು. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿದೆ. ಇದೀಗ ಅಂಧ ಜೋಡಿಯ ಬಾಳಿಗೆ 400 ಆಟೋ ಚಾಲಕರು ಬೆಳಕಾಗಿದ್ದಾರೆ. ಇದನ್ನೂ ಓದಿ: `ಕೈ’ ಟಿಕೆಟ್ ಆಕಾಂಕ್ಷಿಯಿಂದ ಸೀರೆ, ತವಾ ವಿತರಣೆ- ಉಡುಗೊರೆ ಸಿಗದ ಮಹಿಳೆಯರು ಗರಂ

  • ಅಂಧ ದಂಪತಿಯ ಮಗು ಕಿಡ್ನಾಪ್ ಪ್ರಕರಣ – 3 ದಿನಗಳ ಬಳಿಕ ಮಗು ಪತ್ತೆ

    ಅಂಧ ದಂಪತಿಯ ಮಗು ಕಿಡ್ನಾಪ್ ಪ್ರಕರಣ – 3 ದಿನಗಳ ಬಳಿಕ ಮಗು ಪತ್ತೆ

    ಬೆಂಗಳೂರು: ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಏ.27 ರಂದು ಅಂಧ ದಂಪತಿಯ ಮಗು ಕಿಡ್ನಾಪ್ ಆಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮಹಿಳೆಯೊಬ್ಬರು ಮಗುವನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ.

    ರಾಯಚೂರಿನ ರಾಯದುರ್ಗಾ ಮೂಲದ ಬಸವರಾಜು, ಚಿನ್ನು ದಂಪತಿಯ ಎಂಟು ತಿಂಗಳ ಮಗು ಸಾಗರ್‍ನನ್ನು ಮಹಿಳೆಯೊಬ್ಬಳು ಸಹಾಯ ಮಾಡುವ ನೆಪದಲ್ಲಿ ಕಿಡ್ನಾಪ್ ಮಾಡಿದ್ದಳು. ಮಗು ಕಳೆದುಕೊಂಡ ಬಗ್ಗೆ ದಂಪತಿ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ಕೂಡ ವರದಿ ಮಾಡಿತ್ತು.

    ಈ ನಡುವೆಯೇ ನಗರದ ಕೆಂಗೇರಿ ನಿವಾಸಿ ಪಾರ್ವತಮ್ಮ ಎಂಬವರು ಮಗು ಸಾಗರ್‍ನನ್ನು ಇಂದು ಉಪ್ಪಾರಪೇಟೆ ಪೊಲೀಸ್ ಠಾಣೆ ತಂದು ಒಪ್ಪಿಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆ, ಈ ಮಗು ನಮಗೆ ಎರಡು ದಿನದ ಹಿಂದೆ ಇದೇ ಮೆಜೆಸ್ಟಿಕ್ ಬಳಿ ಬಸ್‍ಗೆ ಕಾಯುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರು ಕೊಟ್ಟರು. ಶೌಚಾಲಯಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿದ ಕಾರಣ ನಾನು ಮಗುವನ್ನು ನೋಡಿಕೊಳ್ಳಲು ಒಪ್ಪಿದೆ. ಆದರೆ ಆ ಬಳಿಕ ಮಹಿಳೆ ಎಷ್ಟು ಸಮಯ ಕಾದರು ಬರಲಿಲ್ಲ. ಏನು ಮಾಡುವುದೆಂದು ತಿಳಿಯದೇ ಮಗುವನ್ನು ಮನೆಗೆ ತೆಗೆದುಕೊಂಡು ಬಂದು ನಮ್ಮ ಮನೆಯಲ್ಲಿ ಇಟ್ಟುಕೊಂಡಿದ್ದೆ. ಮಾಧ್ಯಮಗಳಲ್ಲಿ ಮಗುವಿನ ಸುದ್ದಿ ಪ್ರಸಾರ ವೇಳೆ ನನಗೆ ಇದರ ಅರಿವಾಗಿದ್ದು, ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.

    ಸದ್ಯ ಮಗು ಸಿಕ್ಕಿರುವುದಿಂದ ಪ್ರಕರಣವನ್ನು ಕೈ ಬಿಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು, ಮಗು ಅಪಹರಣ ಹಿಂದಿನ ಮಹಿಳೆ ಯಾರು? 3 ದಿನಗಳ ಬಳಿಕ ಮಗು ಪತ್ತೆಯಾದ ಹಿಂದಿನ ಘಟನೆ ಬಗ್ಗೆ ಹಲವು ಅನುಮಾನಗಳು ಇರುವ ಕಾರಣ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಕಳೆದುಕೊಂಡಿದ್ದ ಮಗು ಮತ್ತೆ ತಾಯಿಯ ಮಡಿಲು ಸೇರಿದ್ದರಿಂದ ದಂಪತಿ ಸಂತಸ ವ್ಯಕ್ತಪಡಿಸಿದ್ದಾರೆ.

  • ಸಹಾಯ ಮಾಡೋ ನೆಪದಲ್ಲಿ ಅಂಧ ದಂಪತಿಯ ಮಗುವನ್ನು ಕಿಡ್ನಾಪ್‍ಗೈದ ಮಹಿಳೆ

    ಸಹಾಯ ಮಾಡೋ ನೆಪದಲ್ಲಿ ಅಂಧ ದಂಪತಿಯ ಮಗುವನ್ನು ಕಿಡ್ನಾಪ್‍ಗೈದ ಮಹಿಳೆ

    ಬೆಂಗಳೂರು: ಮಗುವಿಗೆ ನೀರು ಕುಡಿಸಲು ಸಹಾಯ ಮಾಡುವಂತೆ ಅಂಧ ದಂಪತಿಯ ಸಹಾಯಕ್ಕೆ ಬಂದ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿರುವ ಘಟನೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

    ರಾಯಚೂರು ಮೂಲದ ಅಂಧ ದಂಪತಿಯಾದ ಚಿನ್ನು ಮತ್ತು ಬಸವರಾಜು ಅವರ ಮಗುವನ್ನು ಅಪಹರಣ ಮಾಡಿದ್ದು, ಶನಿವಾರ ಬೆಳಗ್ಗೆ 7:30ರ ಸಮಯದಲ್ಲಿ ಘಟನೆ ನಡೆದಿದೆ.

    ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ದಂಪತಿ ತಮ್ಮ 8 ತಿಂಗಳ ಮಗುವಿಗೆ ನೀರು ಕುಡಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಅನಾಮಿಕ ಮಹಿಳೆ ಸಹಾಯ ನೆಪದಲ್ಲಿ ಧಾವಿಸಿದ್ದು, ಮಗುವಿನೊಂದಿಗೆ ಎಸ್ಕೇಪ್ ಆಗಿದ್ದಾಳೆ. ಘಟನೆ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದ್ದು, ಮಗುವಿನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.