Tag: BMRCL

  • ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

    ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

    ಬೆಂಗಳೂರು: ಈ ಹಿಂದೆ ಮೆಟ್ರೋ (Namma Metro) ನೇಮಕಾತಿ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಿದ್ದ ಬಿಎಂಆರ್‌ಸಿಎಲ್ (BMRCL) ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ಹೊರರಾಜ್ಯದ ಅಮುಲ್ (Amul) ಕಿಯೋಸ್ಕ್‌ಗಳನ್ನು ಸ್ಥಾಪಿಸಿದ್ದು, ನಮ್ಮ ನಂದಿನಿಗೆ (Nandini) ಮನ್ನಣೆ ಕೊಟ್ಟಿಲ್ಲ. ಇಷ್ಟಾದರೂ ಅಧಿಕಾರ ಬರೋ ಮುಂಚೆ ಸೇವ್ ನಂದಿನಿ ಅಭಿಯಾನ ಮಾಡಿದ್ದ ಕಾಂಗ್ರೇಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ.

    ಬೆಂಗಳೂರಿಗರ ಪ್ರಮುಖ ಸಂಚಾರ ನಾಡಿಯೆಂದರೆ ಅದು ನಮ್ಮ ಮೆಟ್ರೋ. ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ 6-7 ಲಕ್ಷ ಮೆಟ್ರೋ ಪ್ರಯಾಣಿಕರು ಸಂಚರಿಸಿ, ಬಿಎಂಆರ್‌ಸಿಎಲ್ ಅನ್ನು ಬೆಂಗಳೂರಿಗರು ಬೆಳೆಸುತ್ತಿದ್ದಾರೆ. ಆದರೆ ಕನ್ನಡಿಗರಿಗೆ, ಕರ್ನಾಟಕದ ಬ್ರ‍್ಯಾಂಡ್ ನಂದಿನಿಗೆ ಬೆಂಗಳೂರು ಮೆಟ್ರೋ ನಿಗಮ ಮನ್ನಣೆ ಕೊಡದೇ, ಗುಜರಾತ್‌ನ ಅಮುಲ್‌ಗೆ ಆದ್ಯತೆ ಕೊಟ್ಟು ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ಗಳನ್ನು ತೆರೆಯಲು ಅವಕಾಶ ನೀಡಿದೆ. ಇದನ್ನೂ ಓದಿ: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ

    ಇತ್ತೀಚಿಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಬಿಎಂಆರ್‌ಸಿಎಲ್ ಸಹಿ ಹಾಕಿದೆ. ಈ ಬಗ್ಗೆ ಜೂನ್ 16ರಂದು ಬಿಎಂಆರ್‌ಸಿಎಲ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಇಸ್ರೇಲ್-ಇರಾನ್ ಯುದ್ಧ ಭೀತಿ; ಭಾರತಕ್ಕೆ ಹೆಚ್ಚಿದ ಆತಂಕ

    ನಗರದ ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್ ಎಂ ವಿಶ್ವೇಶ್ವರಯ್ಯ, ನಾಡಪ್ರಭು ಕೆಂಪೇಗೌಡ ನಿಲ್ದಾಣ ,ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿಗಳಲ್ಲಿ ಕಿಯೋಸ್ಕ್ಗಳು ಆರಂಭವಾಗಲಿವೆ. ಈ ಮೂಲಕ ನಮ್ಮ ರಾಜ್ಯದ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್‌ನ ಅಮುಲ್ ಬ್ರ‍್ಯಾಂಡ್ ಅನ್ನು ಪ್ರಮೋಷನ್ ಮಾಡಲಾಗುತ್ತಿದೆ. ಈಗಾಗಲೇ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅಮುಲ್ ಕಿಯೋಸ್ಕ್ ಸ್ಥಾಪನೆಯಾಗಿದ್ದು, ಈಗಾಗಲೇ ಅಮುಲ್ ಮಳಿಗೆಯಲ್ಲಿ ಐಸ್‌ಕ್ರೀಮ್, ಚಾಕಲೇಟ್, ಸ್ಯಾಂಡ್ ವಿಚ್, ಟೀ, ಪಿಜ್ಜಾ ಸೇರಿದಂತೆ ಹಲವು ಇನ್‌ಸ್ಟೆಂಟ್ ತಿಂಡಿಗಳನ್ನು ಮಾರಲಾಗುತ್ತಿದೆ. ಇದನ್ನೂ ಓದಿ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

    ಇನ್ನೂ ಈಗೀನ ಕಾಂಗ್ರೆಸ್ ಸರ್ಕಾರ 2023ರ ಕರ್ನಾಟಕ ಚುನಾವಣೆಗೆ ಮುನ್ನ ಅಮುಲ್ ಅನ್ನು ಬೆಂಗಳೂರು ಮಾರುಕಟ್ಟೆಗೆ ಪ್ರವೇಶಿಸುವುದನ್ನು ವಿರೋಧಿಸಿತ್ತು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್, ಬಿಜೆಪಿ ಸರ್ಕಾರವು ಅಮುಲ್‌ಗೆ ಅವಕಾಶ ನೀಡುವ ಮೂಲಕ ಕರ್ನಾಟಕದ ನಂದಿನಿ ಬ್ರ‍್ಯಾಂಡ್ ಮತ್ತು ಡೈರಿ ರೈತರ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿತ್ತು. ಸೇವ್ ನಂದಿನಿ ಅಭಿಯಾನವನ್ನು ಆರಂಭಿಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಯಾನ ನಡೆಸಿದ್ದರು. ರಾಹುಲ್ ಗಾಂಧಿ ಸಹ ಅಭಿಯಾನದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

    ಈ ರಾಜಕೀಯ ಗುದ್ದಾಟ ಮರೆತು, ಈಗ ತನ್ನ ಮಾತಿಗೆ ಫುಲ್ ಉಲ್ಟಾ ಎನ್ನುವಂತೆ ಕಾಂಗ್ರೆಸ್ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಶೀಘ್ರದಲ್ಲೇ ಅಮುಲ್ ಮಳಿಗೆಗಳು ಸ್ಥಾಪಿಸಲು ಅವಕಾಶ ನೀಡಿದೆ. ಇನ್ನೂ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ, ದೇಶ ವಿದೇಶದಲ್ಲಿ ಹೆಸರಾದ ನಮ್ಮ ಕನ್ನಡಿಗರ, ಕರ್ನಾಟಕದಲ್ಲಿ ‘ನಂದಿನಿ’ ಬ್ರಾಂಡ್ ಹೆಸರಾಗಿದೆ. ಆದರೆ ನಮ್ಮೂರ ನಂದಿನಿಗೆ ಬಿಎಂಆರ್‌ಸಿಎಲ್ ಅವಕಾಶ ಕೊಡದೇ ಇರೋದಕ್ಕೆ ಕನ್ನಡಿಗರು ಕೆಂಡವಾಗಿದ್ದಾರೆ. ಇದನ್ನೂ ಓದಿ: ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

  • ಮೆಟ್ರೋ ಪಿಲ್ಲರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಗಾಯಗೊಂಡಿದ್ದ ಓರ್ವ ವ್ಯಕ್ತಿ ಸಾವು

    ಮೆಟ್ರೋ ಪಿಲ್ಲರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಗಾಯಗೊಂಡಿದ್ದ ಓರ್ವ ವ್ಯಕ್ತಿ ಸಾವು

    ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ (Namma Metro ) ಪಿಲ್ಲರ್‌ಗೆ ಡಿಕ್ಕಿಯಾದ ಘಟನೆ ಗಾಯಗೊಂಡಿದ್ದ 12 ಮಂದಿ ಪೈಕಿ ಈರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

    ಬಿಡದಿ ಮೂಲದ ಜಯರಾಮ್‌ (57) ಮೃತ ವ್ಯಕ್ತಿ. ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಕೆಂಗೇರಿಯ ಮೈಲಸಂದ್ರದ ಬಳಿ ಮೆಟ್ರೋ ಪಿಲ್ಲರ್‌ಗೆ ಬಸ್‌ ಡಿಕ್ಕಿಯಾದ ಘಟನೆ ನಡೆದಿತ್ತು. ಡ್ರೈವರ್‌, ಕಂಡಕ್ಟರ್‌ ಸೇರಿ 12 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶನಿವಾರ ತಡರಾತ್ರಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಾಮೆಡ್‌-ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

    ಅಪಘಾತಕ್ಕೀಡಾದ ಬಸ್‌ ಕೆ.ಆರ್‌ ಮಾರ್ಕೆಟ್‌ನಿಂದ ಬಿಡದಿಗೆ ಹೊರಟಿತ್ತು. ಈ ವೇಳೆ ಸ್ಟೇರಿಂಗ್‌ ಕಟ್ಟಾಗಿ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್‌ ಮೆಟ್ರೋ ಪಿಲ್ಲರ್ 607ಕ್ಕೆ ಡಿಕ್ಕಿಯಾಗಿತ್ತು. ಇದನ್ನೂ ಓದಿ: ಬೆಂಕಿ ಬಿದ್ದರೂ ತಿಳಿಯದೇ ಟ್ರ್ಯಾಕ್ಟರ್‌ ಚಾಲನೆ- ನಾಲ್ವರು ಅಪಾಯದಿಂದ ಪಾರು

    ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಷ್ಯಾದ ಏರ್‌ಬೇಸ್‌ ಉಡೀಸ್‌ ಮಾಡೋಕೆ ಉಕ್ರೇನ್ ಬಳಸಿದ FPV ಡ್ರೋನ್‌ ವಿಶೇಷವೇನು ಗೊತ್ತಾ?

  • ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ (Namma Metro ) ಪಿಲ್ಲರ್‌ಗೆ ಡಿಕ್ಕಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ.

    ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ 607ಕ್ಕೆ ಡಿಕ್ಕಿಯಾಗಿದೆ. ಪರಿಣಾಮ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬಸ್ ಬ್ರೇಕ್ ಫೇಲ್ ಆಗಿ ಸುಮಾರು ಅರ್ಧ ಕಿಮೀ ಬಸ್ ನಿಯಂತ್ರಣಕ್ಕೆ ಸಿಕ್ಕಿರಲಿಲ್ಲ.

    ಅಪಘಾತ ತಪ್ಪಿಸಲು ವಾಹನಗಳನ್ನ ಓವರ್ ಟೇಕ್ ಮಾಡಿಕೊಂಡು ಚಾಲಕ ಬಸ್ ಚಲಾಯಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕ್ರೇನ್ ಮೂಲಕ ಬಸ್ ತೆರವು ಮಾಡಲಾಗಿದೆ.

    ಚಾಲಕ, ಕಂಡಕ್ಟರ್ ಸೇರಿ 6 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

  • ಸದ್ಯಕ್ಕಿಲ್ಲ ಯೆಲ್ಲೊ ಲೈನ್ ಮೆಟ್ರೋ – ಸಿಗ್ನಲಿಂಗ್ ಸಮಸ್ಯೆಯಿಂದ ದಿನಾಂಕ ಮುಂದೂಡಿದ BMRCL

    ಸದ್ಯಕ್ಕಿಲ್ಲ ಯೆಲ್ಲೊ ಲೈನ್ ಮೆಟ್ರೋ – ಸಿಗ್ನಲಿಂಗ್ ಸಮಸ್ಯೆಯಿಂದ ದಿನಾಂಕ ಮುಂದೂಡಿದ BMRCL

    ಬೆಂಗಳೂರು: ಬಹುನೀರಿಕ್ಷಿತ ಯಲ್ಲೋ ಲೈನ್ ಮೆಟ್ರೋ (Yellow Line Metro) ಸಂಚಾರಕ್ಕೆ ಇದೀಗ ಮತ್ತೆ ಅಡ್ಡಿ ಉಂಟಾಗಿದ್ದು, ಸಿಗ್ನಲಿಂಗ್‌ನಲ್ಲಿ ಸಮಸ್ಯೆಯಿಂದಾಗಿ ಉದ್ಘಾಟನೆ ಸದ್ಯಕ್ಕಿಲ್ಲ ಎಂದು ಬಿಎಂಆರ್‌ಸಿಎಲ್ (BMRCL) ಸ್ಪಷ್ಟಪಡಿಸಿದೆ.

    ಆರ್‌ವಿ ರೋಡ್‌ನಿಂದ ಬೊಮ್ಮಸಂದ್ರದವರೆಗೆ ಸಂಚರಿಸುವ ಯಲ್ಲೋ ಮಾರ್ಗದ ಮೆಟ್ರೋ ಇದೇ ಜೂನ್‌ಗೆ ಓಪನ್ ಆಗುತ್ತದೆ ಎಂದು ನಿರೀಕ್ಷೆಯಲ್ಲಿದ್ದ ಜನರಿಗೆ ಇದೀಗ ಮತ್ತೆ ನಿರಾಸೆಯುಂಟಾಗಿದೆ. ಸಿಗ್ನಲಿಂಗ್‌ನಲ್ಲಿ ಸಮಸ್ಯೆಯಿಂದಾಗಿ ಇದನ್ನು ಸರಿಪಡಿಸಲು ತಿಂಗಳು ಬೇಕು. ಹೀಗಾಗಿ ಮಾರ್ಗ ಸದ್ಯಕ್ಕೆ ಓಪನ್ ಆಗಲ್ಲ ಎಂದಿದೆ.ಇದನ್ನೂ ಓದಿ: ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

    ಹೌದು, ಅನೇಕ ವಿಳಂಬಗಳ ಬಳಿಕ ಹಳದಿ ಮಾರ್ಗದ ಮೆಟ್ರೋವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲೋಕಾರ್ಪಣೆ ಮಾಡಲು ತಯಾರಿ ನಡೆಸಿತ್ತು. ಮೂರನೇ ರೈಲಿನ ತಪಾಸಣೆ ಕೂಡ ಈಗಾಗಲೇ ಪೂರ್ಣಗೊಂಡಿದೆ. ಮೆಟ್ರೋ ರೋಲಿಂಗ್ ಸ್ಟಾಕ್‌ಗೂ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದೆ. ಅಂತಿಮ ಹಂತದ ಪರಿಶೀಲನೆಗಾಗಿ ಶೀಘ್ರವೇ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಕೂಡ ಬರಬೇಕಿತ್ತು. ಈ ಮಧ್ಯೆ ಉಂಟಾಗಿರುವ ಸಿಗ್ನಲಿಂಗ್ ಸಮಸ್ಯೆಯಿಂದ ಈ ಬಾರಿ ಮತ್ತೆ ಮಾರ್ಗ ಉದ್ಘಾಟನೆ ಮುಂದೂಡಿಕೆಯಾಗಿದೆ.

    ಹಳದಿ ಮಾರ್ಗದ ಸಿಗ್ನಲಿಂಗ್ ಕಾರ್ಯದ ಗುತ್ತಿಗೆಯನ್ನು ವಹಿಸಿಕೊಂಡಿರುವ ಸೀಮೆನ್ಸ್ ಇಂಡಿಯಾ ಲಿಮಿಟೆಡ್ ಇತ್ತೀಚೆಗೆ ಸಿಗ್ನಲಿಂಗ್ ವ್ಯವಸ್ಥೆಯ ಪರಿಶೀಲನೆ ನಡೆಸಿತ್ತು. ಆ ಸಂದರ್ಭದಲ್ಲಿ, ಸಾಫ್ಟ್ವೇರ್ ಡೇಟಾಸೆಟ್‌ಗಳಲ್ಲಿ ದೋಷ ಕಂಡುಬಂದಿತ್ತು. ಇದೇ ಕಾರಣದಿಂದ ಕಾರ್ಯಾಚರಣೆಗೆ ಅನುಮೋದನೆ ನೀಡಲಾಗಿಲ್ಲ. ಹಳದಿ ಮಾರ್ಗದ ಮೆಟ್ರೋ ರೈಲು ಚಲನೆಯನ್ನು ಸಂಪೂರ್ಣವಾಗಿ ಸಾಫ್ಟ್‌ವೇರ್‌ನಿಂದ ನಿಯಂತ್ರಿಸಲಾಗುತ್ತದೆ. ಸಣ್ಣ ದೋಷ ಇದ್ದರೂ ವ್ಯವಸ್ಥೆಯ ಸುರಕ್ಷತೆಗೆ ಧಕ್ಕೆಯಾಗುತ್ತದೆ.

    ಈ ಸಮಸ್ಯೆ ಬಗೆಹರಿಸಲು ಸುಮಾರು ಒಂದು ತಿಂಗಳಾದರೂ ಸಮಯ ಬೇಕಾಗಬಹುದು. ಒಂದು ತಿಂಗಳ ಸಮಯಾವಾಕಾಶದ ಬಳಿಕ ಎಲ್ಲವು ಸರಿಯಾದರಷ್ಟೇ ಕೇಂದ್ರ ರೈಲ್ವೆ ಸುರಕ್ಷತಾ ಸಮಿತಿ ಪರಿಶೀಲನೆಗೆ ಆಗಮಿಸಲಿದೆ. ಸಮಿತಿ ಬಂದು ಪರಿಶೀಲಿಸಿ ಎಲ್ಲದಕ್ಕೂ ಒಪ್ಪಿಗೆ ನೀಡಿ, ಮಾರ್ಗ ಉದ್ಘಾಟನೆಗೆ ಸುಮಾರು ಎರಡು ತಿಂಗಳು ಅವಕಾಶ ಬೇಕಾಗಬಹದು. ಹಾಗಾಗಿ ಜುಲೈ ಅಂತ್ಯದ ವೇಳೆ ಮಾರ್ಗ ಮುಕ್ತವಾಗುವ ಸಾಧ್ಯತೆ ಇದೆ.ಇದನ್ನೂ ಓದಿ: ಯೋಧರಿಂದಲೇ `ಆಪರೇಷನ್ ಸಿಂಧೂರ’ ಲೋಗೋ ವಿನ್ಯಾಸ

  • ಸ್ವೈಪ್‌ ಗೇಟ್‌ನಿಂದ ಹೊರಗಿರುವ ಶೌಚಾಲಯಗಳಿಗೆ ಮಾತ್ರ ದುಡ್ಡು – BMRCL ಸ್ಪಷ್ಟನೆ

    ಸ್ವೈಪ್‌ ಗೇಟ್‌ನಿಂದ ಹೊರಗಿರುವ ಶೌಚಾಲಯಗಳಿಗೆ ಮಾತ್ರ ದುಡ್ಡು – BMRCL ಸ್ಪಷ್ಟನೆ

    ಬೆಂಗಳೂರು: ನಮ್ಮ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೂ ದುಡ್ಡು ಕೊಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಿಎಂಆರ್‌ಸಿಎಲ್ (BMRCL) ಸ್ಪಷ್ಟನೆ ನೀಡಿದ್ದು, ನಿಲ್ದಾಣದ ಹೊರಗಿರುವ ಶೌಚಾಲಯಗಳಿಗೆ ಮಾತ್ರ ಶುಲ್ಕ ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ.

    ನಮ್ಮ ಮೆಟ್ರೋ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಶುಲ್ಕ ನಿಗದಿಪಡಿಸಿತ್ತು. ಖಾಸಗಿ ಸಂಸ್ಥೆಯ ಜೊತೆಗೆ ಬಿಎಂಆರ್‌ಸಿಎಲ್ ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು, ಮೂತ್ರ ವಿಸರ್ಜನೆಗೆ 2 ರೂ., ಮಲ ವಿಸರ್ಜನೆಗೆ 5 ರೂ. ದರ ನಿಗದಿ ಮಾಡಿತ್ತು.ಇದನ್ನೂ ಓದಿ: ಮೆಟ್ರೋ ದರ ಏರಿಕೆ ಆಯ್ತು ಈಗ ಶೌಚಾಲಯ ಬಳಕೆಗೂ ಕಟ್ಟಬೇಕು ಕಾಸು!

    ನ್ಯಾಷನಲ್ ಕಾಲೇಜು, ಲಾಲ್‌ಬಾಗ್, ಸೌಥ್ ಆ್ಯಂಡ್ ಸರ್ಕಲ್, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯೆಲಚೇನಹಳ್ಳಿ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್ ಕಾಲೇಜು, ಡಾ.ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಕಬ್ಬನ್ ಪಾರ್ಕ್ ಮತ್ತು ಮೆಜೆಸ್ಟಿಕ್ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಇನ್ನು ಮುಂದೆ ಪಾವತಿಸಿ ಬಳಸಬೇಕಾಗುತ್ತದೆ ಎಂದು ತಿಳಿಸಿತ್ತು. ಇದರಿಂದಾಗಿ ಪ್ರಯಾಣಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ವಿರೋಧದ ಬೆನ್ನಲ್ಲೇ ಇದೀಗ ಸ್ಪಷ್ಟನೆ ನೀಡಿದೆ.

    ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿರುವುದಿಲ್ಲ. ಮೆಟ್ರೋ ಸ್ವೈಪ್ ಗೇಟ್ ಒಳಗಿರುವ ಶೌಚಾಲಯಗಳು ಬಳಕೆಗೆ ಉಚಿತವಾಗಿ ಇರುತ್ತದೆ. ಆದರೆ ಮೆಟ್ರೋ ಸ್ವೈಪ್ ಗೇಟ್‌ಗಿಂತ ಹೊರಗಿರುವ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರಲ್ಲದೇ ಬೇರೆ ಸಾರ್ವಜನಿಕರು ಬಳಸುತ್ತಾರೆ. ಹೀಗಾಗಿ ಅಂತಹ ಶೌಚಾಲಯಗಳಿಗೆ ಮಾತ್ರ ಶುಲ್ಕ ನಿಗದಿ ಮಾಡಲಾಗಿದೆ ಎಂದು ತಿಳಿಸಿದೆ.

    ಇದಕ್ಕೂ ಮುನ್ನ ಬಿಎಂಆರ್‌ಸಿಎಲ್ ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡಿತ್ತು.ಇದನ್ನೂ ಓದಿ: ಮೇ 25ರಂದು UPSC ಪೂರ್ವಭಾವಿ ಪರೀಕ್ಷೆ – 1 ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಶುರು

  • ಮೇ 25ರಂದು UPSC ಪೂರ್ವಭಾವಿ ಪರೀಕ್ಷೆ – 1 ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಶುರು

    ಮೇ 25ರಂದು UPSC ಪೂರ್ವಭಾವಿ ಪರೀಕ್ಷೆ – 1 ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಶುರು

    ಬೆಂಗಳೂರು: ಮೇ 25 ಭಾನುವಾರದಂದು ದೇಶದಾದ್ಯಂತ ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಅದರಂತೆ ಬೆಂಗಳೂರಿನ(Bengaluru) ವಿವಿಧ ಕೇಂದ್ರಗಳಲ್ಲೂ ಪರೀಕ್ಷೆ ನಡೆಯಲಿದ್ದು, 1 ಗಂಟೆ ಮುಂಚಿತವಾಗಿ ಮೆಟ್ರೋ ರೈಲು ಸೇವೆ(Namma Metro) ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್(BMRCL) ತಿಳಿಸಿದೆ.

    ವೈಟ್ ಫೀಲ್ಡ್, ಚಲ್ಲಘಟ್ಟ, ಮಾದಾವರ ಹಾಗೂ ರೇಷ್ಮೆ ಸಂಸ್ಥೆ ಸೇರಿ 4 ಟರ್ಮಿನಲ್‌ಗಳಿಂದಲೂ 1 ಗಂಟೆ ಮುಂಚಿವಾಗಿ ಮೆಟ್ರೋ ಸೇವೆ ಆರಂಭವಾಗಲಿದೆ. ಅಂದರೆ 7 ಗಂಟೆಗೆ ಶುರುವಾಗಬೇಕಿದ್ದ ಮೆಟ್ರೋ ಸೇವೆ 6 ಗಂಟೆಯಿಂದ ಪ್ರಾರಂಭವಾಗಲಿದೆ. ಇದನ್ನೂ ಓದಿ: ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ

    ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ 6 ಗಂಟೆಯಿಂದಲೇ ಮೆಟ್ರೋ ಸೇವೆಯನ್ನು ಆರಂಭಿಸುವ ನಿರ್ಧಾರವನ್ನು ನಮ್ಮ ಮೆಟ್ರೋ ಕೈಗೊಂಡಿದೆ. ಇದನ್ನೂ ಓದಿ: ಮೇ 24ಕ್ಕೆ UG CET ಫಲಿತಾಂಶ ಪ್ರಕಟ – ಕೆಇಎ

  • ಮೆಟ್ರೋ ದರ ಏರಿಕೆ ಆಯ್ತು ಈಗ ಶೌಚಾಲಯ ಬಳಕೆಗೂ ಕಟ್ಟಬೇಕು ಕಾಸು!

    ಮೆಟ್ರೋ ದರ ಏರಿಕೆ ಆಯ್ತು ಈಗ ಶೌಚಾಲಯ ಬಳಕೆಗೂ ಕಟ್ಟಬೇಕು ಕಾಸು!

    ಬೆಂಗಳೂರು: ಮೆಟ್ರೋ (Namma Metro) ಟಿಕೆಟ್‌ ದರವನ್ನು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬಿಎಂಆರ್‌ಸಿಎಲ್‌ ಈಗ ನಿಲ್ದಾಣಗಳಲ್ಲಿ ಶೌಚಾಲಯ (Toilet) ಬಳಕೆಗೆ ಶುಲ್ಕ ನಿಗದಿ ಮಾಡುವ ಮೂಲಕ ಮತ್ತೆ ಜನರ ಕೆಂಗಣ್ಣಿಗೆ ಗುರಿಯಾಗಿದೆ

    ನಮ್ಮ ಮೆಟ್ರೋ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್(BMRCL) ಶುಲ್ಕ ನಿಗದಿ ಮಾಡಿದೆ. ಖಾಸಗಿ ಸಂಸ್ಥೆಯ ಜೊತೆಗೆ BMRCL ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು ಮೂತ್ರ ವಿಸರ್ಜನೆಗೆ 2 ರೂ., ಮಲ ವಿಸರ್ಜನೆಗೆ 5 ರೂ. ದರ ನಿಗದಿ ಮಾಡಿದೆ. ಇದನ್ನೂ ಓದಿ: ಭಾರತ ಕೊಟ್ಟ ಏಟಿಗೆ ಡಿಆರ್‌ಎಸ್‌ ನಿಯಮವನ್ನೇ ಕೈಬಿಟ್ಟ ಪಿಎಸ್‌ಎಲ್‌!

     

    ಯಾವ ನಿಲ್ದಾಣಗಳಲ್ಲಿ ಶುಲ್ಕ?
    ನ್ಯಾಷನಲ್‌ ಕಾಲೇಜು, ಲಾಲ್‌ಬಾಗ್, ಸೌಥ್‌ ಆ್ಯಂಡ್‌ ಸರ್ಕಲ್‌, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯೆಲಚೇನಹಳ್ಳಿ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್‌ ಕಾಲೇಜು, ಡಾ.ಅಂಬೇಡ್ಕರ್‌ ನಿಲ್ದಾಣ, ವಿಧಾನಸೌಧ, ಕಬ್ಬನ್‌ ಪಾರ್ಕ್‌ ಮತ್ತು ಮೆಜೆಸ್ಟಿಕ್‌ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಇನ್ನು ಮುಂದೆ ಪಾವತಿಸಿ ಬಳಸಬೇಕಾಗುತ್ತದೆ. ಇದನ್ನೂ ಓದಿ: ವೈಟ್‌ಫೀಲ್ಡ್‌ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ – ಮೆಟ್ರೋ ಸಂಚಾರ ಸ್ಥಗಿತ

    ಶೌಚಾಲಯಕ್ಕೆ ದರ ವಿಧಿಸಿದ್ದಕ್ಕೆ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದನ್ನು ಬಿಟ್ಟು ಶೌಚಾಲಯ ಬಳಕೆ ಮಾಡಿದ್ದಕ್ಕೆ ಜನರಿಂದ ದುಡ್ಡು ಸಂಗ್ರಹಿಸುವುದು ಎಷ್ಟು ಸರಿ? ಮೆಟ್ರೋ ಪ್ರಯಾಣಿಕರೂ ಈ ಶೌಚಾಲಯ ಬಳಕೆ ಮಾಡುವುದಿಲ್ವೇ ಎಂದು ಪ್ರಶ್ನಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಎಂಆರ್‌ಸಿಎಲ್‌ ಅಧಿಕಾರಿಗಳು, ಈ ನಿಲ್ದಾಣಗಳಲ್ಲಿರುವ ಶೌಚಾಲಯಗಳು ಮೆಟ್ರೋ ಟಿಕೆಟ್‌ ಇಲ್ಲದೆ ಪ್ರವೇಶಿಸಬಹುದಾದ ಸ್ಥಳದಲ್ಲಿವೆ. ಹೀಗಾಗಿ ಈ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರು ಅಲ್ಲದೇ ಬೇರೆಯವರು ಬಳಸುತ್ತಿದ್ದಾರೆ. ಹೀಗಾಗಿ ಅದರ ನಿರ್ವಹಣೆಯನ್ನು ಸುಲಭ್‌ ಇಂಟರ್‌ನ್ಯಾಷನಲ್‌ ಸಂಸ್ಥೆಗೆ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

  • ಮತ್ತೆ ಆರಂಭವಾಗಲಿದೆ IPL – ಬೆಂಗಳೂರಲ್ಲಿ ಪಂದ್ಯದ ದಿನ ಮೆಟ್ರೋ ಸಮಯ ವಿಸ್ತರಣೆ

    ಮತ್ತೆ ಆರಂಭವಾಗಲಿದೆ IPL – ಬೆಂಗಳೂರಲ್ಲಿ ಪಂದ್ಯದ ದಿನ ಮೆಟ್ರೋ ಸಮಯ ವಿಸ್ತರಣೆ

    ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮದ ಬಳಿಕ ಮೇ 17ರಿಂದ ಐಪಿಎಲ್‌ನ (IPL 2025) ಕೊನೆಯ ಹಂತದ ಪಂದ್ಯಗಳು ಮತ್ತೆ ಆರಂಭಗೊಳ್ಳಲಿದೆ. ಈ ಹಿನ್ನೆಲೆ ಬೆಂಗಳೂರಿನ ಪಂದ್ಯಗಳ ಸಂದರ್ಭದಲ್ಲಿ ಸಾರ್ವಜನಿಕರ ಅನೂಕೂಲಕ್ಕಾಗಿ ನಮ್ಮ ಮೆಟ್ರೋ (Namma Metro) ಪಂದ್ಯಗಳ ದಿನ ಸಮಯಾವಧಿ ವಿಸ್ತರಣೆ ಮಾಡಿದೆ.

    ಮೇ 17 ಮತ್ತು ಮೇ 23ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಈ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ಟರ್ಮಿನಲ್ ಅಂದರೆ ವೈಟ್ ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ಮಧ್ಯರಾತ್ರಿ 1ರ ವರೆಗೆ ವಿಸ್ತರಿಸಿದೆ. ಇದನ್ನೂ ಓದಿ: ನಕ್ಸಲರ ವಿರುದ್ಧ ಕಾರ್ಯಾಚರಣೆ ವೇಳೆ ಜೇನು ದಾಳಿ – ಬೆಂಗ್ಳೂರಲ್ಲಿ ಪಳಗಿದ್ದ ಸ್ನಿಫರ್ ಡಾಗ್‌ ಸಾವು

    ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1:35ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ನಮ್ಮ ಮೆಟ್ರೋ ಕೋರಿದೆ. ಮೇ 17ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಕೋಲ್ಕತ್ತಾ ಮುಖಾಮುಖಿಯಾಗಲಿದೆ. ಇದನ್ನೂ ಓದಿ: ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್ ಸರಿಯಾದ ನಿಲುವು ಪ್ರಕಟಿಸಲಿ: ಆರ್.ಅಶೋಕ್

  • ಮೆಟ್ರೋ ಯಡವಟ್ಟಿಗೆ ಮತ್ತೊಂದು ಬಲಿ – ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

    ಮೆಟ್ರೋ ಯಡವಟ್ಟಿಗೆ ಮತ್ತೊಂದು ಬಲಿ – ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

    – ಮಧ್ಯರಸ್ತೆಯಲ್ಲೇ ಎರಡು ತುಂಡಾದ ಲಾರಿ
    – ಆಟೋ ಪ್ರಯಾಣಿಕ ಗ್ರೇಟ್‌ ಎಸ್ಕೇಪ್‌

    ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ (Namma Metro Work) ವೇಳೆ ನಿರ್ಲಕ್ಷ್ಯ ತೋರಿದ ಪರಿಣಾಮ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಳಿ ನಡೆದಿದೆ.

    ಖಾಸಿಂ ಸಾಬ್ ಮೃತ ಆಟೋ ಚಾಲಕ. ಈತ ಮೂಲತಃ ಹೆಗಡೆನಗರದ ನಿವಾಸಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ತಡರಾತ್ರಿ 12:05 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಆದ್ರೆ ಆಟೋದಲ್ಲಿದ್ದ ಪ್ಯಾಸೆಂಜರ್‌ ಕೊಂಚದರಲ್ಲೇ ಎಸ್ಕೇಪ್‌ ಆಗಿದ್ದಾರೆ.

    ದುರಂತ ಸಂಭವಿಸಿದ್ದು ಹೇಗೆ?
    ಮೆಟ್ರೋ ತಡೆಗೋಡೆ ನಿರ್ಮಾಣಕ್ಕಾಗಿ ಬೃಹತ್‌ ಗಾತ್ರದ ವಯಾಡೆಕ್ಟ್ (ಸಿಮೆಂಟ್‌ ಗೋಡೆ) ಕೊಂಡೊಯ್ಯಲಾಗುತ್ತಿತ್ತು. ಏರ್ಪೋಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಕೋಗಿಲು ಕ್ರಾಸ್‌ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೇ ಎರಡು ತುಂದಾಗಿದೆ. ಪರಿಣಾಮ ವಯಾಡೆಕ್ಟ್‌ ನೆಲಕ್ಕುರುಳಿದೆ.

    ಇದೇ ಸಂದರ್ಭದಲ್ಲಿ ಲಾರಿ ಪಕ್ಕದಲ್ಲೇ ಇದ್ದ ಆಟೋ ಮೇಲೆ ವಯಾಡೆಕ್ಟ್‌ ಬಿದ್ದಿದೆ. ಲಾರಿ ತುಂಡಾಗಿ ವಯಾಡೆಕ್ಟ್‌ ಬೀಳುತ್ತಿದ್ದಂತೆ ಆಟೋದಲ್ಲಿದ್ದ ಪ್ಯಾಸೆಂಜರ್‌ ತಕ್ಷಣಕ್ಕೆ ಇಳಿದು ಓಡಿಹೋಗಿದ್ದಾರೆ, ಆದ್ರೆ, ಚಾಲಕ ಇಳಿಯುವಷ್ಟರಲ್ಲಿ ಆಟೋ ಮೇಲೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಸಹ ಸಂಪೂರ್ಣ ಅಪ್ಪಚ್ಚಿಯಾಗಿದೆ.

    2023ರ ಜನವರಿಯಲ್ಲಿ ಇದೇ ರೀತಿ ನಾಗವಾರ ಮುಖ್ಯ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೃಹತ್‌ ಗಾತ್ರದ ಡೆಕ್ಟ್‌ ಕುಸಿದು ಬೈಕ್‌ ಸವಾರ ಸಾವಪ್ಪಿದ ಘಟನೆ ನಡೆದಿತ್ತು. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಕಾರ್ಡ್‌ ಇದ್ರೂ ಪ್ರಯಾಣ ಆಗಲ್ಲ – ಮೊಬಿಲಿಟಿ ಕಾರ್ಡ್‌ ಬಳಸುವ ಮೆಟ್ರೋ ಬಳಕೆದಾರರಿಗೆ ಶಾಕ್‌

    ಕಾರ್ಡ್‌ ಇದ್ರೂ ಪ್ರಯಾಣ ಆಗಲ್ಲ – ಮೊಬಿಲಿಟಿ ಕಾರ್ಡ್‌ ಬಳಸುವ ಮೆಟ್ರೋ ಬಳಕೆದಾರರಿಗೆ ಶಾಕ್‌

    ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಬಳಸುವ ಗ್ರಾಹರಿಗೆ ಬಿಗ್‌ ಶಾಕ್ ಎದುರಾಗಿದೆ. ಎನ್‌ಸಿಎಂಸಿ ಕಾರ್ಡ್‌ ಹೊಂದಿರುವ ಪ್ರಯಾಣಿಕರು ತಮ್ಮ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಲು ಮತ್ತು ಮೆಟ್ರೋ ಪ್ರಯಾಣಗಳಿಗೆ ಅವುಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ.

    ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಹಳೆಯ ಮೊಬಿಲಿಟಿ ಕಾರ್ಡ್‌ಗಳಿಗೂ ಕೂಡ ರೀಚಾರ್ಜ್ ಸಮಸ್ಯೆ ಆಗುತ್ತಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ರಿಚಾರ್ಜ್‌ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾರ್ಡ್‌ನಲ್ಲಿ ದುಡ್ಡು ಇದ್ದರೂ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: 75 ದೇಶಗಳಿಗೆ 90 ದಿನ ಬ್ರೇಕ್‌ – ಚೀನಾಗೆ 125% ಟ್ಯಾಕ್ಸ್‌ ಸಮರ

    ಮೊಬಿಲಿಟಿ ಕಾರ್ಡ್‌ನಲ್ಲಿ ಸಮಸ್ಯೆ ಆಗುತ್ತಿದ್ದಂತೆ ಏಪ್ರಿಲ್‌ 15 ರವರೆಗೂ NCMC ಕಾರ್ಡ್‌ ವಿತರಣೆ ಮಾಡದೇ ಇರಲು ಬಿಎಂಆರ್‌ಸಿಎಲ್‌ ನಿರ್ಧಾರ ತೆಗೆದುಕೊಂಡಿದೆ.

    ಸಮಸ್ಯೆ ಯಾಕಾಯ್ತು?
    NCMC  ಪೂರೈಸುವ RBL ಬ್ಯಾಂಕ್ ತನ್ನ ಮಾರಾಟಗಾರರನ್ನು ಬದಲಾಯಿಸಿದ ನಂತರ ಬ್ಯಾಕೆಂಡ್ ವ್ಯವಸ್ಥೆಗಳಲ್ಲಿನ ಪರಿವರ್ತನೆಯಿಂದ ಈ ಸಮಸ್ಯೆಗಳು ಉಂಟಾಗಿವೆ. ಏಪ್ರಿಲ್ 15 ರೊಳಗೆ ಈ ಸಮಸ್ಯೆ ಬಗೆಹರಿಯಲಿದೆ ಎಂದು  BMRCL  ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋರ್ಟ್‌ಗೆ ಗೈರು, ಸಿನಿಮಾ ವೀಕ್ಷಣೆಗೆ ದರ್ಶನ್‌ ಹಾಜರ್

    ಸಂಪರ್ಕವಿಲ್ಲದ ಸ್ಮಾರ್ಟ್ ಕಾರ್ಡ್‌ಗಳು, ಟೋಕನ್‌ಗಳು ಅಥವಾ QR ಕೋಡ್‌ಗಳನ್ನು ಬಳಸುವವರಿಗೆ ಹೋಲಿಸಿದರೆ NCMC ಕಾರ್ಡ್ ಬಳಕೆದಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ.

    ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಅನ್ನು ನಮ್ಮ ಮೆಟ್ರೋ, ಬಿಎಂಟಿಸಿ ಸೇರಿ ದೇಶದ ಎಲ್ಲ ಸಾರಿಗೆ ವ್ಯವಸ್ಥೆಗಳು ಹಾಗೂ ಚಿಲ್ಲರೆ ಅಂಗಡಿ, ಪೆಟ್ರೋಲ್ ಬಂಕ್‌ಗಳು, ಶಾಪಿಂಗ್ ಮಾಲ್‌ಗಳಲ್ಲಿ ಬಳಕೆ ಮಾಡಬಹುದು.