– ದೆಹಲಿಯ ಕರ್ನಾಟಕ ಭವನದಲ್ಲಿ ಊಟ ಮುಗಿಸಿ ಮನೆಗೆ ತೆರಳುವಾಗ ದುರಂತ
ನವದೆಹಲಿ: ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ (BMW Car Hit) ಹಣಕಾಸು ಸಚಿವಾಲಯದ ಅಧಿಕಾರಿ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 24 ಗಂಟೆಯಲ್ಲೇ ಆರೋಪಿಯನ್ನ (Accused) ಬಂಧಿಸಲಾಗಿದೆ.
ಬಂಧಿತ ಆರೋಪಿ ಮಹಿಳೆಯನ್ನ ಗಗನ್‌ಪ್ರೀತ್ ಕೌರ್ (Gaganpreet Kaur) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಗುದ್ದಿತ್ತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52) (Navjot Singh) ಸಾವನ್ನಪ್ಪಿದ್ದರು.

ಇಂದು ಮಧ್ಯಾಹ್ನ ಅಪಘಾತ ಮಾಡಿದ ಕಾರು ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕೊಲೆ ಅಪರಾಧ, ನರಹತ್ಯೆ, ಸಾಕ್ಷ್ಯ ನಾಶ ಮತ್ತು ದುಡುಕಿನ ಚಾಲನೆ ಪ್ರಕರಣಗಳನ್ನ ದಾಖಲಿಸಲಾಗಿದೆ. ಇದನ್ನೂ ಓದಿ: BMW ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ
38 ವರ್ಷ ವಯಸ್ಸಿನ ಗಗನ್‌ಪ್ರೀತ್ ಕೌರ್ 40 ವರ್ಷ ವಯಸ್ಸಿನ ಪರೀಕ್ಷಿತ್ ಮಕ್ಕಡ್ ಅವರನ್ನ ವಿವಾಹವಾಗಿದ್ದು, ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದಾರೆ. ಜೊತೆಗೆ ಐಷಾರಾಮಿ ಉತ್ಪನ್ನಗಳ ವ್ಯವಹಾರ ನಡೆಸುತ್ತಿದ್ದಾರೆ. ಅಪಘಾತ ಸಂದರ್ಭದಲ್ಲಿ ಪತಿ ಪರೀಕ್ಷಿತ್ ಮಕ್ಕಡ್ ಕೂಡ ಇದ್ದರು, ಈ ಕಾರಣಕ್ಕಾಗಿ ಎಫ್‌ಐಆರ್‌ನಲ್ಲಿ ಇಬ್ಬರ ಹೆಸರನ್ನ ಉಲ್ಲೇಖಿಸಲಾಗಿದೆ.

ಅಪಘಾತ ಸಂಭವಿಸಿದ್ದು ಎಲ್ಲಿ, ಹೇಗೆ?
ಮೃತ ನವಜೋತ್ ಸಿಂಗ್ ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಉಪ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ತಮ್ಮ ಪತ್ನಿ ಸಂದೀಪ ಕೌರ್ ಜೊತೆಗೆ ಬಾಂಗ್ಲಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದರು. ನಂತರ ಇಬ್ಬರೂ ಆರ್.ಕೆ ಪುರಂನಲ್ಲಿರುವ ಕರ್ನಾಟಕ ಭವನದಲ್ಲಿ ಊಟ ಮಾಡಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ನವಜೋತ್ ಮತ್ತು ಸಂದೀಪ್ ದಂಪತಿಯನ್ನ ವ್ಯಾನ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಮಗ ಗಗನ್‌ದೀಪ್ ಕೂಡ ಜೊತೆಗಿದ್ದರು. ಇದನ್ನೂ ಓದಿ: ʻವಕ್ಫ್ ತಿದ್ದುಪಡಿ ಕಾಯ್ದೆʼಯ ಕೆಲ ಅಂಶಗಳಿಗೆ ಸುಪ್ರೀಂ ತಡೆ; ಒಟ್ಟಾರೆ ಕಾಯ್ದೆ ಕಾನೂನು ಬದ್ಧವಾಗಿದೆ ಎಂದು ಆದೇಶ
ಪತ್ನಿ ಆರೋಪ ಏನು?
ನಾನು ಗಗನ್‌ಪ್ರೀತ್‌ಗೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳುತ್ತಲೇ ಇದ್ದೆ. ವ್ಯಾನ್ ಚಾಲಕನಿಗೂ ಮನವಿ ಮಾಡಿದೆ. ಆದ್ರೆ ಅಪಘಾತ ಸ್ಥಳದಿಂದ 19 ಕಿಮೀ ದೂರದಲ್ಲಿ ಜಿಟಿಬಿ ನಗರದಲ್ಲಿರುವ ನುಲೈಫ್ ಆಸ್ಪತ್ರೆಗೆ ಕರೆದೊಯುವಂತೆ ಆಕೆ ಹೇಳಿದಳು. ಇದರಿಂದಾಗಿ ನನ್ನಪತಿ ಸಾವನ್ನಪ್ಪಿದ್ದಾರೆ ಎಂದು ಮೃತ ನವಜೋತ್ ಪತ್ನಿ ಸಂದೀಪ ಕೌರ್ ಹೇಳಿದ್ದಾರೆ. ಇದನ್ನೂ ಓದಿ: ಕೆಲ ವಿಷಯಗಳು ಕ್ರೀಡಾ ಮನೋಭಾವಕ್ಕಿಂತಲೂ ದೊಡ್ಡದು – ಕೈಕುಲುಕದ್ದಕ್ಕೆ ಸೂರ್ಯ ಸ್ಪಷ್ಟನೆ




















