Tag: BN Bachega Gowda

  • BMTC ಬಸ್ ನಿಲ್ದಾಣದ ಉದ್ಘಾಟನೆಯ ಕಿತ್ತಾಟ-ಸಂಸದರಿಗೆ ಆಹ್ವಾನಿಸದಕ್ಕೆ ಬಿಜೆಪಿ ಕಾರ್ಯಕರ್ತರ ಕಿಡಿ

    BMTC ಬಸ್ ನಿಲ್ದಾಣದ ಉದ್ಘಾಟನೆಯ ಕಿತ್ತಾಟ-ಸಂಸದರಿಗೆ ಆಹ್ವಾನಿಸದಕ್ಕೆ ಬಿಜೆಪಿ ಕಾರ್ಯಕರ್ತರ ಕಿಡಿ

    ಬೆಂಗಳೂರು/ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮ ತಡೆದು ಪ್ರತಿಭಟನೆ ನಡೆಸಿದ್ದಾರೆ.

    ಕಾರ್ಯಕ್ರಮಕ್ಕೆ ಸಂಸದ ಬಿ.ಎನ್. ಬಚ್ಚೇಗೌಡರ ಅವರನ್ನು ಗಣನೆಗೆ ತೆಗೆದುಕೊಳ್ಳದೆ, ಸಚಿವ ಎಂಟಿಬಿ ನಾಗರಾಜ್ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಕಾಟಾಚಾರಕ್ಕೆ ಹೆಸರು ಮುದ್ರಿಸಿ ಸಂಸದರಿಗೆ ಆಹ್ವಾನ ನೀಡದೆ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಯತ್ನಿಸಿದರೂ, ಬ್ಯಾರಿಕೇಡ್‍ಗಳನ್ನು ತಳ್ಳಿಕೊಂಡು ಕಾರ್ಯಕ್ರಮ ಪ್ರವೇಶಿಸಿ ಆಕ್ರೋಶ ಹೊರಹಾಕಿದರು. ಸಮಾರಂಭದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಕಾರ್ಯಕರ್ತರನ್ನು ಸಂಧಾನಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.