Tag: Board Exam

  • CBSEಯಲ್ಲಿ ಮಹತ್ವದ ಬದಲಾವಣೆ – ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ನಿರ್ಧಾರ

    CBSEಯಲ್ಲಿ ಮಹತ್ವದ ಬದಲಾವಣೆ – ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ನಿರ್ಧಾರ

    ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026ರಿಂದ ವರ್ಷಕ್ಕೆ ಎರಡು ಬಾರಿ 10ನೇ ತರಗತಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ.

    ಮಾಹಿತಿಗಳ ಪ್ರಕಾರ, ಫೆಬ್ರವರಿಯಲ್ಲಿ ನಡೆಯಲಿರುವ ಮೊದಲ ಹಂತದ ಪರೀಕ್ಷೆಯು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿರುತ್ತದೆ. ಮೇ ತಿಂಗಳಲ್ಲಿ ನಿಗದಿಯಾಗಿರುವ ಎರಡನೇ ಹಂತದ ಪರೀಕ್ಷೆ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ. ಶೈಕ್ಷಣಿಕ ಅವಧಿಯಲ್ಲಿ ಆಂತರಿಕ ಮೌಲ್ಯಮಾಪನವನ್ನು ಒಮ್ಮೆ ಮಾತ್ರ ನಡೆಸಲಾಗುತ್ತದೆ ಎಂದು ಸಿಬಿಎಸ್‌ಇ ತಿಳಿಸಿದೆ.ಇದನ್ನೂ ಓದಿ: Bengaluru | ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

    ಈ ಕುರಿತು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಮಾತನಾಡಿ, ಮೊದಲ ಹಂತ ಫೆಬ್ರವರಿಯಲ್ಲಿ ಮತ್ತು ಎರಡನೇ ಹಂತ ಮೇ ತಿಂಗಳಲ್ಲಿ ನಡೆಯಲಿದೆ. ಎರಡು ಹಂತಗಳ ಫಲಿತಾಂಶಗಳನ್ನು ಕ್ರಮವಾಗಿ ಏಪ್ರಿಲ್ ಮತ್ತು ಜೂನ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

    ವಿದ್ಯಾರ್ಥಿಗಳಿಗೆ ಮೊದಲ ಹಂತಕ್ಕೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ. ಆದರೆ ಎರಡನೇ ಹಂತವು ಐಚ್ಛಿಕವಾಗಿರುತ್ತದೆ. ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಮತ್ತು ಇನ್ನೂ ಭಾಷೆಗಳಲ್ಲಿ ಯಾವುದೇ ಮೂರು ವಿಷಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

    ಕಳೆದ ತಿಂಗಳು, ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಒತ್ತಡರಹಿತ ಕಲಿಕೆಯ ವಾತಾವರಣವನ್ನು ಸೃಷ್ಟಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಬಹುದಾಗಿದೆ. ಈ ನಿರ್ಧಾರ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಹೆಜ್ಜೆಯಾಗಿದೆ ಎಂದರು.ಇದನ್ನೂ ಓದಿ: ಮಾವು ಬೆಳೆಗೆ ಬೆಂಬಲ ಬೆಲೆ ಕೊಡಿಸಿದ್ದು ಕುಮಾರಣ್ಣ, ಡಿಕೆ ಬ್ರದರ್ಸ್ ಏನ್ಮಾಡ್ತಿದ್ದಾರೆ: ನಿಖಿಲ್‌ ಕಿಡಿ

  • 5,8,9,11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್

    ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

    ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ (Karnataka Government) ಮೇಲ್ಮನವಿ ಸಲ್ಲಿಸಿತ್ತು. ಸುದೀರ್ಘ ವಿಚಾರಣೆ ನಡೆಸಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ.

    ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನ್ಯಾ.ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರಿದ್ದ ಪೀಠ ಸೂಚನೆ  ನೀಡಿದೆ.

    ಮಾರ್ಚ್ 11ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಿಗದಿಯಾಗಿತ್ತು. ಮಾರ್ಚ್ 11 ಮತ್ತು 12 ಎರಡು ದಿನ ಎರಡು ವಿಷಯಗಳ ಪರೀಕ್ಷೆ ನಡೆದ ಬಳಿಕ ಪರೀಕ್ಷೆಗೆ ತಡೆ ನೀಡಲಾಗಿದೆ. 5ನೇ ತರಗತಿಗೆ ಎರಡು ವಿಷಯಗಳ ಪರೀಕ್ಷೆ ಮಾತ್ರ ಬಾಕಿ ಉಳಿದಿದೆ. 8 ಮತ್ತು 9ನೇ ತರಗತಿಗಳಿಗೆ ಇನ್ನೂ 4 ವಿಷಯಗಳ ಪರೀಕ್ಷೆ ಬಾಕಿ ಇದೆ.

  • 5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ – ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ

    5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ – ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ

    ನವದೆಹಲಿ: 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (Board Exam) ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಿದ್ದು ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.

    5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ (Karnataka High Court) ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೋರ್ಡ್ ಪರೀಕ್ಷೆ ನಡೆಸದಂತೆ ತಡೆ ನೀಡಿದೆ.

    ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

    ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಮಾರ್ಚ್ 6 ರಂದು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.

    ರಾಜ್ಯಾದ್ಯಂತ 45,000 ಶಾಲೆಗಳ 28 ಲಕ್ಷ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದು, ಇದೀಗ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. 11ನೇ ತರಗತಿ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 28 ರಂದೇ ಮುಕ್ತಾಯಗೊಂಡಿವೆ. 5,8 ಮತ್ತು 9ನೇ ತರಗತಿಗಳಿಗೆ ಮಾ.11 ರಿಂದ ಪರೀಕ್ಷೆಗಳು ಆರಂಭವಾಗಿತ್ತು.

  • ಮಕ್ಕಳೇ ಗೊಂದಲ ಬೇಡ- ನಿಗದಿಯಂತೆ 5,8,9,11ನೇ ಕ್ಲಾಸ್‍ಗೆ ಬೋರ್ಡ್ ಎಕ್ಸಾಂ

    ಮಕ್ಕಳೇ ಗೊಂದಲ ಬೇಡ- ನಿಗದಿಯಂತೆ 5,8,9,11ನೇ ಕ್ಲಾಸ್‍ಗೆ ಬೋರ್ಡ್ ಎಕ್ಸಾಂ

    ಬೆಂಗಳೂರು: ರಾಜ್ಯ ಪಠ್ಯ ಕ್ರಮದ 5, 8, 9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.

    ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠದ 5,8,9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಹೀಗಾಗಿ ನಿಗದಿಯಂತೆ ಸೋಮವಾರದಿಂದ 5, 8, 9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಯಲಿವೆ. ಈ ಕುರಿತ ಗೊಂದಲಕ್ಕೆ ತೆರೆ ಬಿದ್ದಿದೆ.

    ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತ್ತು. ಹೈಕೋರ್ಟ್‍ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿತ್ತು. ಇದನ್ನೂ ಓದಿ: ದೇಶದಲ್ಲೇ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತ ರಾಜ್ಯ: ಮಮತಾ ಬ್ಯಾನರ್ಜಿ

  • 10 ನೇ ತರಗತಿ ಬೋರ್ಡ್ ಪರೀಕ್ಷೆ ವೇಳೆ ಚೀಟಿ ಪಾಸ್‌ ಮಾಡಲು ಗೋಡೆ ಏರಿದ್ರು!

    10 ನೇ ತರಗತಿ ಬೋರ್ಡ್ ಪರೀಕ್ಷೆ ವೇಳೆ ಚೀಟಿ ಪಾಸ್‌ ಮಾಡಲು ಗೋಡೆ ಏರಿದ್ರು!

    ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯ ಶಾಲೆಯೊಂದರಲ್ಲಿ 10 ನೇ ತರಗತಿಯ ಬೋರ್ಡ್ ಪರೀಕ್ಷೆಯ (10th Board Exam) ಸಂದರ್ಭದಲ್ಲಿ ನಕಲಿಗೆ ಸಹಕರಿಸಿರುವ ವಿಚಾರ ಬಯಲಾಗಿದೆ.

    ನುಹ್ ಜಿಲ್ಲೆಯ ತೌರುನಲ್ಲಿರುವ ಚಂದ್ರಾವತಿ ಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಪರೀಕ್ಷೆ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವರದಿಯಾಗಿದೆ.

    ಇದಕ್ಕೆ ಸಂಬಂಧಪಟ್ಟ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ವೀಡಿಯೋದಲ್ಲಿ ಜನರು ಬೋರ್ಡ್ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಚೀಟಿ ರವಾನಿಸಲು ಶಾಲೆಯ ಗೋಡೆಗಳನ್ನು ಏರುತ್ತಿರುವುದನ್ನು ಕಾಣಬಹುದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳ ಜೊತೆಗಿದ್ದ ಪೋಷಕರು ಮತ್ತು ಸಂಬಂಧಿಕರು ಪರೀಕ್ಷೆಯ ಹೊರಗೆ ಗಲಾಟೆ ಸೃಷ್ಟಿಸಿದರು.

    ಕೆಲವು ಮಕ್ಕಳು ಶಾಲೆಯ ಛಾವಣಿಯ ಮೇಲೆ ಹತ್ತಿದ ವೀಡಿಯೋ ನಾನು ನೋಡಿದೆ. ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಜಿಲ್ಲಾ ಶಿಕ್ಷಣಾಧಿಕಾರಿ ಪರಮಜೀತ್ ಚಹಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ- ಸರ್ಕಾರಕ್ಕೆ ತೇಜಸ್ವಿ ಸೂರ್ಯ ಎಚ್ಚರಿಕೆ

    ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪರೀಕ್ಷಾ ಕೇಂದ್ರಗಳ ಹೊರಗೆ ಪೊಲೀಸರ ನಿಯೋಜನೆಯನ್ನು ಹೆಚ್ಚಿಸಲು ಶಿಕ್ಷಣ ಮಂಡಳಿಯು ಪೊಲೀಸರನ್ನು ವಿನಂತಿಸುತ್ತದೆ ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಧರಂಪಾಲ್ ಹೇಳಿದರು.

  • 5,8,9,11ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು – ಹೈಕೋರ್ಟ್ ಆದೇಶ

    5,8,9,11ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು – ಹೈಕೋರ್ಟ್ ಆದೇಶ

    ಬೆಂಗಳೂರು: ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ (Board Exam) ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ (High Court) ರದ್ದುಪಡಿಸಿ ಆದೇಶಿಸಿದೆ.

    ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತು. ಇದನ್ನೂ ಓದಿ: ಬೆಂಗಳೂರು ಬಿಸಿ ಬಿಸಿ; 4 ವರ್ಷದ ದಾಖಲೆ ಮುರಿದ ಸಿಲಿಕಾನ್‌ ಸಿಟಿ

    ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ಇದನ್ನೂ ಓದಿ: ಮೋದಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸಂದೇಶ್‌ಖಾಲಿ ಮಹಿಳೆಯರಿದ್ದ ಬಸ್‌ಗಳಿಗೆ ತಡೆ

    ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದರು. ಇದನ್ನೂ ಓದಿ: ಕೆಲ ಪುರುಷರು ಅತ್ಯಾಚಾರ ಮಾಡಿದಾಗ, ಎಲ್ಲಾ ಭಾರತೀಯರಿಗೂ ನಾಚಿಕೆಯಾಗ್ಬೇಕು: ಗ್ಯಾಂಗ್‌ರೇಪ್‌ಗೆ ಗಾಯಕಿ ಕಿಡಿ

    ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿದ್ದರು. ಇದನ್ನೂ ಓದಿ: ದೇಶದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗ ಲೋಕಾರ್ಪಣೆ

  • 5, 8ನೇ ತರಗತಿಗಳ  ಬೋರ್ಡ್ ಎಕ್ಸಾಂಗೆ ಸುಪ್ರೀಂ ಗ್ರೀನ್ ಸಿಗ್ನಲ್

    5, 8ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಸುಪ್ರೀಂ ಗ್ರೀನ್ ಸಿಗ್ನಲ್

    ನವದೆಹಲಿ: ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ (5th And 8th Class) ಮಕ್ಕಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಅನುಮತಿ ನೀಡಿದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ (ಕುಸ್ಮಾ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.

    ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ಕುಸ್ಮಾ ವಾದವನ್ನು ತಿರಸ್ಕರಿಸಿತು. ಕುಸ್ಮಾ ಪರ ವಾದ ಮಂಡಿಸಿದ ವಕೀಲರು, ಬೋರ್ಡ್ ಎಕ್ಸಾಂ ಅತಿ ಕಡಿಮೆ ಸಮಯದಲ್ಲಿ ಜಾರಿ ಮಾಡಲು ಹೊರಟಿದೆ. ಈ ಬಗ್ಗೆ ಪೊಷಕರಿಗೂ ಮಾಹಿತಿ ಇಲ್ಲ. ಮತ್ತು ಶಾಲೆಗಳ ಜೊತೆಗೂ ಇಲಾಖೆ ಚರ್ಚೆ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ವಾದಿಸಿದರು. ಈ ವಾದವನ್ನು ಒಪ್ಪದ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿತು.

    ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನೂ ಓದಿ: ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪಟ್ಟಿ ಔಟ್ – ಯಾರಿಗೆ ವರ್ಷಕ್ಕೆ ಎಷ್ಟು ಸಂಭಾವನೆ?

    ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ದ್ವಿಸದಸ್ಯ ತೀರ್ಪು ನೀಡಿತ್ತು. ಈ ವೇಳೆ ಮಧ್ಯಪ್ರವೇಶ ಮಾಡಿದ ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸದ್ಯ ಸುಪ್ರೀಂಕೋರ್ಟ್ ಅರ್ಜಿ ವಜಾ ಮಾಡಿರುವ ಹಿನ್ನೆಲೆ ಬೋರ್ಡ್ ಪರೀಕ್ಷೆಗಳು ಸರಾಗವಾಗಿ ನಡೆಯಲಿವೆ. ಇದನ್ನೂ ಓದಿ: ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

  • 5, 8ನೇ ತರಗತಿ ಬೋರ್ಡ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ

    5, 8ನೇ ತರಗತಿ ಬೋರ್ಡ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ರಾಜ್ಯ ಪಠ್ಯಕ್ರಮ ಹೊಂದಿದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟ ಬೆನ್ನಲ್ಲೇ, ಪರೀಕ್ಷೆ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

    ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್‌ನಿಂದ ವೇಳಾಪಟ್ಟಿ ಪ್ರಕಟವಾಗಿದೆ. ಹೈಕೋರ್ಟ್ ಆದೇಶದ‌ ಮೇರೆಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

    5ನೇ ತರಗತಿಗೆ ಮಾರ್ಚ್ 27 ರಿಂದ ಮಾರ್ಚ್ 30ರ ವರೆಗೆ ಹಾಗೂ 8ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1ರ ವರೆಗೆ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಫಲಿತಾಂಶ ವಿದ್ಯಾರ್ಥಿಗೆ ಮಾತ್ರ ತಿಳಿಸಬೇಕು. ಗೌಪ್ಯತೆ ಕಾಪಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.

    5ನೇ ತರಗತಿ ವೇಳಾಪಟ್ಟಿ
    ಮಾ.27 – ಪ್ರಥಮ ಭಾಷೆ
    ಮಾ.28 – ದ್ವಿತೀಯ ಭಾಷೆ
    ಮಾ.29 – ಪರಿಸರ ಅಧ್ಯಯನ
    ಮಾ.30 – ಗಣಿತ

    8ನೇ ತರಗತಿ ವೇಳಾಪಟ್ಟಿ
    ಮಾ.27 – ಪ್ರಥಮ ಭಾಷೆ
    ಮಾ.28 – ದ್ವಿತೀಯ ಭಾಷೆ
    ಮಾ.29 – ತೃತೀಯ ಭಾಷೆ
    ಮಾ.30 – ಗಣಿತ
    ಮಾ.31 – ವಿಜ್ಞಾನ
    ಏ.1 – ಸಮಾಜ ವಿಜ್ಞಾನ

  • 5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

    5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

    ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಆ ಮೂಲಕ ಪೋಷಕರ ಗೊಂದಲಕ್ಕೂ ತೆರೆ ಎಳೆದಿದೆ.

    ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಬೋರ್ಡ್‌ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.

    10 ದಿನದ ಬಳಿಕ ಪರೀಕ್ಷೆ ನಡೆಸಬೇಕು. ಮಾ.27 ನೇ ತಾರೀಖಿನಿಂದ ಪರೀಕ್ಷೆ ಪ್ರಾರಂಭಿಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಸೂಚಿಸಿದೆ.

    ನ್ಯಾ.ನರೇಂದರ್ ಹಾಗೂ ನ್ಯಾ. ಅಶೋಕ್ ಕಿಣಗಿ ಅವರಿದ್ದ ಪೀಠವು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ. ಕುಸ್ಮಾ ಪರವಾಗಿ ವಕೀಲ ಕೆ.ವಿ.ಧನಂಜಯ ಹಾಗೂ ಸರ್ಕಾರದ ಪರವಾಗಿ ಎಎಜಿ ಧ್ಯಾನ್‌ಚಿನ್ನಪ್ಪ ವಾದ ಮಂಡಿಸಿದರು.

    ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.