Tag: Board Examination

  • 5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದು – ಹೈಕೋರ್ಟ್‌ ಆದೇಶ

    5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದು – ಹೈಕೋರ್ಟ್‌ ಆದೇಶ

    ಬೆಂಗಳೂರು: ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ (5 and 8th class) ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ (Karnataka High Court) ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.

    ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್‌ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸುಮಲತಾ ಈಗ ಬಿಜೆಪಿ ಸೇರಲು ಸಾಧ್ಯವಿಲ್ಲ ಯಾಕೆ? ಸಂವಿಧಾನದ 10ನೇ ಶೆಡ್ಯೂಲ್‌ನಲ್ಲಿ ಏನಿದೆ?

    karnataka highcourt

    5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

    ಆದೇಶ ಈ ವರ್ಷಕ್ಕೆ ಮಾತ್ರ ಅನ್ವಯ. ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ. ಮುಂದಿನ ವರ್ಷ ಎಲ್ಲಾ ನಿಯಮಗಳನ್ನ ಪಾಲಿಸಿ. ಪೋಷಕರ ಅಭಿಪ್ರಾಯವನ್ನು ಪಡೆದು, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮವಾಗಿ ನಿರ್ಧರಿಸಿ ಎಂದು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಊರಲ್ಲಿರೋ ಮಕ್ಕಳೆಲ್ಲಾ ನನ್ನವೇ ಅಂದ್ರೆ ಕಾಲಲ್ಲಿರೋದು ಕೈಗೆ ತಗೋತಾರೆ – ಸಿ.ಟಿ ರವಿ ಕಿಡಿ

    2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು. 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸದಂತೆ ಕ್ರಮವಹಿಸಲು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರು ಮೇಲ್ಮನವಿ ಸಲ್ಲಿಸಿದ್ದರು.

    ಫೆ.23 ರಂದು ವಿಚಾರಣೆ ನಡೆಸಿದ್ದ ಪೀಠವು ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ವಿಭಾಗೀಯ ಪೀಠಕ್ಕೆ ರುಪ್ಸಾ ಮೇಲ್ಮನವಿ ಸಲ್ಲಿಸಿತ್ತು.

    ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಮೌಲ್ಯಮಾಪನ ಬದಲಾವಣೆಗೆ ಸರ್ಕಾರ ಕೈಗೊಂಡಿರುವ ನಿರ್ಣಯವು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಂಘವು ಮೇಲ್ಮನವಿಯಲ್ಲಿ ತಿಳಿಸಿತ್ತು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಗೆ ಪೂರಕ – ಮೋದಿ ಬಣ್ಣನೆ

    ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠವು ತುರ್ತಾಗಿ ಅರ್ಜಿ ಇತ್ಯರ್ಥಪಡಿಸಿ ಎಂದು ಸೂಚಿಸಿತ್ತು. ಅದರಂತೆ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ.

  • ಬ್ಲಡ್  ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸಿಬಿಎಸ್‍ಇ ವಿದ್ಯಾರ್ಥಿ 96% ಅಂಕ ಪಡೆದ!

    ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸಿಬಿಎಸ್‍ಇ ವಿದ್ಯಾರ್ಥಿ 96% ಅಂಕ ಪಡೆದ!

    ನವದೆಹಲಿ: ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ 16 ವರ್ಷದ ವಿದ್ಯಾರ್ಥಿಯೊಬ್ಬ ಸಿಬಿಎಸ್‍ಇ ಬೋರ್ಡ್ ಪರೀಕ್ಷೆಯಲ್ಲಿ 96% ಫಲಿತಾಂಶ ಪಡೆದಿದ್ದು, ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾನೆ.

    ದೆಹಲಿಯ ಪ್ರಿಯೇಶ್ ತಾಯಲ್ ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಕ. 10ನೇ ತರಗತಿ ಪರೀಕ್ಷೆ ಸಮಯದಲ್ಲಿಯೇ ಅವನನ್ನು ಕೀಮೋಥೆರಪಿ ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಯಿತು. ಅಲ್ಲಿನ ಹಾಸಿಗೆಯ ಮೇಲೆ ಮಲಗಿದ್ದ ಅವನು, ಒಂದು ಕೈಯಲ್ಲಿ ಪುಸ್ತಕ ಮತ್ತೊಂದು ಕೈಯಲ್ಲಿ ಚಿಕಿತ್ಸೆ (ಸಲೈನ್) ಪಡೆದುಕೊಂಡು ಓದಿದ್ದ.

    ಮಗನಿಗೆ ಬೋರ್ಡ್ ಪರೀಕ್ಷೆ ಕಾಲದಲ್ಲಿಯೇ ಬ್ಲಡ್ ಕ್ಯಾನ್ಸರ್ ಇರುವುದು ಗೊತ್ತಾಯಿತು. ಇತರಿಂದ ಅವನ ಭವಿಷ್ಯಕ್ಕೆ ತೊಂದರೆ ಉಂಟಾಯಿತು ಎಂದು ನಾವು ಚಿಂತಿಸಬೇಕಾಯಿತು. ಆದರೆ, ಅವನು ಧೈರ್ಯ ಹಾಗೂ ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ. 2017 ಡಿಸೆಂಬರ್‍ನಲ್ಲಿ ಪೂರ್ವಭಾವಿ ಪರೀಕ್ಷೆಗಳು ಪ್ರಾರಂಭವಾಗಿದ್ದವು. ಆದರೆ ಆ ಸಮಯದಲ್ಲಿಯೇ ಪ್ರಿಯೇಶ್‍ಗೆ ಜ್ವರ ಮತ್ತು ನೀಲಿ ಮಚ್ಚೆಗಳು ಕಾಣಿಸಿಕೊಂಡವು. ಇದರಿಂದಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಿ, ಪರೀಕ್ಷೆ ಮಾಡಿಸಿದಾಗ ಅವನಿಗೆ ಬ್ಲಡ್ ಕ್ಯಾನ್ಸರ್ ಇರುವುದು ತಿಳಿದು ಬಂತು ಎಂದು ಬಾಲಕನ ತಾಯಿ ಹೇಳಿದ್ದಾರೆ.

    ಲ್ಯುಕೇಮಿಯಾ ರೋಗಿಗಳಿಗೆ ಕನಿಷ್ಠ ಎರಡುವರೆ ವರ್ಷ ಚಿಕಿತ್ಸೆ ನೀಡಬೇಕಾಗುತ್ತದೆ. ರೋಗಿಯು ಕಿಮೊಥೆರಪಿಗಾಗಿ ಆಸ್ಪತ್ರೆಗೆ ಬರಬೇಕು ಮತ್ತು ಮನೆಯಲ್ಲಿ ಔಷಧಿಗಳನ್ನು ತಗೆದುಕೊಳ್ಳಬೇಕು. ಈ ಚಿಕಿತ್ಸೆ ಕಠಿಣವಾಗಿದ್ದು, ರೋಗಿಯು ಕಾಲು ನೋವು, ನಿದ್ರೆಯ ಕೊರತೆಯಂತಹ ಭೌತಿಕ ಅಸ್ವಸ್ಥತೆಗಳನ್ನ ಎದುರಿಸಬೇಕಾಗುತ್ತದೆ ಎಂದು ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಯ ಕ್ಯಾನ್ಸರ್ ವೈದ್ಯ ಡಾ. ಮಾನಸ್ ಕಾರ್ಲಾ ಹೇಳಿದ್ದಾರೆ.

    ನಾನು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಲಾಜಿಯಲ್ಲಿ ಅಧ್ಯಯನ ಮಾಡಿ ಎಂಜಿನಿಯರ್ ಆಗಬೇಕು. ನಾನು ಕ್ಯಾನ್ಸರ್ ಮೆಟ್ಟಿನಿಲ್ಲುತ್ತೇನೆ ಮತ್ತು ನನ್ನ ಹೆಸರನ್ನು ದೇಶ ನೆನಪಿಡುವಂತಹ ಸಾಧನೆ ಮಾಡುತ್ತೇನೆ. ಎಲ್ಲಕ್ಕಿಂತ ಹೆಚ್ಚಾಗಿ ನಾನು ಉತ್ತಮ ಮಾನವನಾಗಿ ಬಾಳುತ್ತೇನೆ ಎಂದು ಪ್ರಿಯೇಶ್ ಹೇಳಿದ್ದಾನೆ.

    ಸಿಬಿಎಸ್‍ಇ 10ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಿತ್ತು. ಒಟ್ಟು 86.70% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ 88.67% ಬಾಲಕಿಯರು ಮತ್ತು 85.32% ಬಾಲಕರು ಉತ್ತೀರ್ಣರಾಗಿದ್ದಾರೆ. ಈ ವರ್ಷ 4,460 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 16,24,682 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

  • ಬೋರ್ಡ್ ಎಕ್ಸಾಂನಲ್ಲಿ `ಐ ಲವ್ ಯೂ ಪೂಜಾ’ ಎಂದು ಬರೆದ ವಿದ್ಯಾರ್ಥಿ!

    ಬೋರ್ಡ್ ಎಕ್ಸಾಂನಲ್ಲಿ `ಐ ಲವ್ ಯೂ ಪೂಜಾ’ ಎಂದು ಬರೆದ ವಿದ್ಯಾರ್ಥಿ!

    ಲಕ್ನೋ: ವಿದ್ಯಾರ್ಥಿಯೊಬ್ಬ ತಾನು ಪ್ರೀತಿಯಲ್ಲಿ ಬಿದ್ದ ಕಾರಣ ಪರೀಕ್ಷೆಗೆ ಓದಲು ಸಾಧ್ಯವಾಗಿಲ್ಲ ಎಂದು ಉತ್ತರ ಪತ್ರಿಕೆಯಲ್ಲಿ ಬರೆದಿಟ್ಟು ಉತ್ತೀರ್ಣಗೊಳಿಸುವಂತೆ ಮನವಿ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆ ಮೌಲ್ಯ ಮಾಪನದ ವೇಳೆ ಬೆಳಕಿಗೆ ಬಂದಿದೆ.

    ಉತ್ತರ ಪ್ರದೇಶದ ಶಿಕ್ಷಣ ಕ್ಷೇತ್ರದಲ್ಲಿ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಸೂಚಿಸಿದ್ದ ಸಿಎಂ ಯೋಗಿ ಆದಿತ್ಯನಾಥ್ ಅದೇಶದ ಬಳಿಕ ಲಕ್ಷ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಸದ್ಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಆಂಭವಾಗಿದ್ದು, ವಿದ್ಯಾರ್ಥಿಗಳು ವಿಚಿತ್ರ ಉತ್ತರಗಳನ್ನು ಬರೆದು ಪರೀಕ್ಷೆಯಲ್ಲಿ ಉತೀರ್ಣ ಮಾಡಲು ಕೇಳಿಕೊಂಡಿದ್ದಾರೆ.

    ಕೆಲ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯೊಂದಿಗೆ ಹಣವನ್ನು ಇಟ್ಟು ಉತೀರ್ಣ ಮಾಡಲು ಅಮಿಷ ಒಡ್ಡಿದ್ದಾರೆ. ಅಲ್ಲದೇ ತನಗೆ ತಾಯಿ ಇಲ್ಲ, ಈ ಬಾರಿ ಪರೀಕ್ಷೆಯಲ್ಲಿ ನಾನು ಅನುತ್ತೀರ್ಣವಾದರೆ ತಂದೆ ತನ್ನನ್ನು ಕೊಲೆ ಮಾಡುವುದಾಗಿ ಮತ್ತೊಬ್ಬ ವಿದ್ಯಾರ್ಥಿ ಬರೆದಿದ್ದಾನೆ. ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ತನ್ನ ಪ್ರೇಮದ ಬಗ್ಗೆ ಬರೆದಿದ್ದು, ತಾನು ಪ್ರೀತಿ ಮಾಡುವ ಯುವತಿಯ ಹೆಸರು ಹಾಗೂ ಹೃದಯದ ಚಿಹ್ನೆ ಬರೆದಿಟ್ಟಿದ್ದಾನೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಕರೊಬ್ಬರು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಅನುಕಂಪ ಪಡೆಯಲು ಈ ರೀತಿ ಮಾಡಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಹಣ ಅಮಿಷ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಉತ್ತರ ಪ್ರದೇಶದ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗೆ ಮಾರ್ಚ್ 17 ರಿಂದ ಮಾಲ್ಯ ಮಾಪನ ಆರಂಭವಾಗಿದ್ದು, 248 ಕೇಂದ್ರಗಳಲ್ಲಿ ನಡೆಯುತ್ತಿದೆ. ಸುಮಾರು 5.5 ಕೋಟಿ ಉತ್ತರ ಪತ್ರಿಗಳನ್ನು 1.46 ಲಕ್ಷ ಶಿಕ್ಷಕರು ಮೌಲ್ಯ ಮಾಪನ ಮಾಡುತ್ತಿದ್ದಾರೆ.

    ಬೋರ್ಡ್ ಪರೀಕ್ಷೆಯ ಫಲಿತಾಂಶ ಏಪ್ರಿಲ್ ಮೂರನೇ ವಾರದಲ್ಲಿ ಬಿಡುಗಡೆಯಾಗುವ ಸಂಭವವಿದೆ ಎಂದು ಯುಪಿ ಶಿಕ್ಷಣ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆಯ ಸ್ಟ್ರಿಕ್ಟ್ ರೂಲ್ಸ್ ಗೆ ಹೆದರಿ 10 ಲಕ್ಷ ವಿದ್ಯಾರ್ಥಿಗಳು ಗೈರು!