Tag: Boating

  • Tumakuru| ಚೋಳೇನಹಳ್ಳಿ ಕೆರೆಯಲ್ಲಿ ಕೆ.ಎನ್ ರಾಜಣ್ಣ ಜಾಲಿ ರೈಡ್

    Tumakuru| ಚೋಳೇನಹಳ್ಳಿ ಕೆರೆಯಲ್ಲಿ ಕೆ.ಎನ್ ರಾಜಣ್ಣ ಜಾಲಿ ರೈಡ್

    ತುಮಕೂರು: 50 ವರ್ಷದ ಬಳಿಕ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ನಡೆದ ಮಧುಗಿರಿಯ (Madhugiri) ಚೋಳೇನಹಳ್ಳಿ (Cholenahalli) ಕೆರೆಯಲ್ಲಿ ಸಚಿವ ಕೆಎನ್ ರಾಜಣ್ಣ (KN Rajnna) ಬೋಟಿಂಗ್‌ನಲ್ಲಿ (Boating) ಜಾಲಿ ರೈಡ್ ಮಾಡಿದ್ದಾರೆ.

    ಕೆರೆ ಪ್ರವಾಸಿ ತಾಣವಾಗಿ ಮಾರ್ಪಡಿಸುವ ಹಿನ್ನೆಲೆಯಲ್ಲಿ ಬೋಟಿಂಗ್‌ಗೆ ರಾಜಣ್ಣ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಚೋಳೇನಹಳ್ಳಿ ಕೆರೆಯಲ್ಲಿ ನೀರು ಕಡಿಮೆಯಾದಾಗ ಕೆರೆ ಏರಿ ಹಾಗೂ ಹೂಳನ್ನು ಎತ್ತಿಸಲಾಗುವುದು. ಈ ಕೆರೆ ನೋಡಲು ಸುಂದರವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಕೆರೆಯಲ್ಲಿ ಶಾಶ್ವತವಾಗಿ ದೋಣಿ ವಿಹಾರದ ವ್ಯವಸ್ಥೆ ಮಾಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ

    ಚೋಳೇನಹಳ್ಳಿ ಕೆರೆ ತುಂಬಿದ ಪ್ರತಿ ವರ್ಷದಲ್ಲಿ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ಆಚರಿಸಲಾಗುವುದು. ಅದಕ್ಕಾಗಿ ಕೆರೆಯೊಳಗೆ ಶಾಶ್ವತವಾಗಿ ವೇದಿಕೆಗಳನ್ನು ನಿರ್ಮಿಸಲಾಗುವುದು ಎಂದರು. ಇದನ್ನೂ ಓದಿ: ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ

  • ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್

    ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಡ್ಯಾಂನಿಂದ 11,633 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಇದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿವೆ.

    ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿರುವ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರದಿಂದ ಪ್ರವಾಸಿಗರಿಗೆ ಬೋಟಿಂಗ್ ಅನ್ನು ರದ್ದು ಮಾಡಲಾಗಿದೆ. ಇದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಮುಂದುವರಿದ ಸಂದರ್ಭದಲ್ಲಿ ಕೆಆರ್‌ಎಸ್ ಡ್ಯಾಂನಿಂದ ಮತ್ತಷ್ಟು ನೀರನ್ನು ನದಿಗೆ ಬಿಡಲಾಗುತ್ತದೆ. ಇದರಿಂದ ರಂಗನತಿಟ್ಟು ಪಕ್ಷಿಧಾಮ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಹಾವೇರಿಯಲ್ಲಿ ಚೆಂಡು ಹೂ, ಕಬ್ಬು, ತೊಗರಿ ನೀರುಪಾಲು- ಕಳಸದಲ್ಲಿ ಕೊಚ್ಚಿ ಹೋದ ತಡೆಗೋಡೆ

    ಕಳೆದ 2 ವರ್ಷಗಳ ಹಿಂದೆ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಟ್ಟಿದ್ದ ಪರಿಣಾಮ ರಂಗನತಿಟ್ಟು ಪಕ್ಷಿಧಾಮದ ಬಹುತೇಕ ನಡುಗಡ್ಡೆಗಳು ನಾಶವಾಗಿದ್ದವು. ಇದರಿಂದ ಅಲ್ಲಿದ್ದ ಪಕ್ಷಿ ಸಂಕುಲ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದವು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೆ, ಕೆಆರ್‌ಎಸ್ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ಇದರಿಂದ ರಂಗನತಿಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: 2 ವಾರಗಳ ಮಳೆಗೆ ದಕ್ಷಿಣ ಕನ್ನಡ ತತ್ತರ – ಫಲ್ಗುಣಿ ಅಬ್ಬರಕ್ಕೆ ಇಡೀ ಗ್ರಾಮವೇ ಆಪೋಷನ

    Live Tv
    [brid partner=56869869 player=32851 video=960834 autoplay=true]

  • ಪರಮಾಪ್ತರ ಜೊತೆ ಸಿದ್ದರಾಮಯ್ಯ ಬೋಟಿಂಗ್

    ಪರಮಾಪ್ತರ ಜೊತೆ ಸಿದ್ದರಾಮಯ್ಯ ಬೋಟಿಂಗ್

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟೀಂ ಜೊತೆ ಬೋಟಿಂಗ್ ಹೋಗಿರುವ ವೀಡಿಯೋ ವೈರಲ್ ಆಗುತ್ತಿದೆ.

    ಸಿದ್ದರಾಮಯ್ಯ ಅವರು ಕಳೆದ ಎರಡು ದಿನಗಳಿಂದ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆಯ ಕಬಿನಿ ಹಿನ್ನಿರಿನಲ್ಲಿರುವ ಆರೆಂಜ್ ಕೌಂಟಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವಿಶ್ರಾಂತಿ ನಡುವೆ ಬೋಟಿಂಗ್ ಕೂಡ ಹೋಗಿದ್ದಾರೆ. ಅಲ್ಲದೇ ಕಾಡಿನೊಳಗೆ ಸಫಾರಿ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಟೆನ್ಷನ್ ಫ್ರೀ – ಮೂರು ದಿನ ರೆಸಾರ್ಟ್‌ನಲ್ಲಿ ವಿಶ್ರಾಂತಿ

    ಸಿದ್ದರಾಮಯ್ಯ ಅವರ ಪರಮಾಪ್ತರಾದ ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್ ಕೂಡ ಅವರ ಜೊತೆಯಲ್ಲೇ ಇದ್ದಾರೆ. ಶಾಸಕರಾದ ಎಚ್.ಪಿ. ಮಂಜುನಾಥ್, ಅನಿಲ್ ಚಿಕ್ಕಮಾದು ಸೇರಿದಂತೆ ಕೆಲವು ಮುಖಂಡರು ಸಿದ್ದರಾಮಯ್ಯ ಅವರ ಜೊತೆ ಕಾಡು ಸುತ್ತಿದ್ದಾರೆ. ಸದ್ಯ ಇದರ ಫೋಟೋ ಹಾಗೂ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    3 ದಿನಗಳ ವಿಶ್ರಾಂತಿಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗಿಯಾಗಿ ನಂತರ ಸಿದ್ದರಾಮಯ್ಯ ಫೆಬ್ರವರಿ 2 ರಂದು ಬೆಂಗಳೂರಿಗೆ ಮರಳಲಿದ್ದಾರೆ. ಇದನ್ನೂ ಓದಿ: ದಾರಿ ತಪ್ಪಿದ ಸಂಸದ ಡಿಕೆ ಸುರೇಶ್‌: ಸುರೇಶ್‌ ಕುಮಾರ್‌ ತಿರುಗೇಟು

  • ಹೊಗೆನಕಲ್ ಜಲಪಾತ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

    ಹೊಗೆನಕಲ್ ಜಲಪಾತ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

    ಚಾಮರಾಜನಗರ: ಕಾವೇರಿ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

    ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಬಿನಿ ಜಲಾಶಯದ ಹೊರ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.

    ಅಪಾಯದ ಮಟ್ಟ ಮೀರಿ ನೀರು ಬರುತ್ತಿರುವುದರಿಂದ ಪ್ರವಾಸಿಗರು ನದಿಗೆ ಇಳಿಯುವುದಕ್ಕೆ ಹಾಗೂ ತೆಪ್ಪ ಸವಾರಿ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಜಲಪಾತದ ಸುತ್ತಮುತ್ತಲಿನ ಗ್ರಾಮಗಳಾದ ಜಮ್ಮಕುಟ್ಟಿ, ಆಲಂಬಾಂಡಿ ಮಾರಿಕೋಟೈ, ಗೋಫಿನಾಥಂ, ಆತೂರು, ಕೋಟೊಯೂರು, ವಿವಿಧ ಗ್ರಾಮಗಳಲ್ಲಿನ ಜನರು ನದಿ ದಡಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

    ಅಲ್ಲದೆ ಸ್ಥಳದಲ್ಲಿ ಈಗಾಗಲೇ 50ಕ್ಕೂ ಹೆಚ್ಚು ನುರಿತ ಈಜುಗಾರರ ನಿಯೋಜಿಸಲಾಗಿದ್ದು, ಯಾವುದೇ ಅವಘಡಗಳಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿಕೊಂಡಿದೆ.

  • ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ – ವೀಕೆಂಡ್ ಮೂಡಿನಲ್ಲಿದ್ದ ಪ್ರವಾಸಿಗರಿಗೆ ನಿರಾಸೆ

    ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ – ವೀಕೆಂಡ್ ಮೂಡಿನಲ್ಲಿದ್ದ ಪ್ರವಾಸಿಗರಿಗೆ ನಿರಾಸೆ

    ಮಂಡ್ಯ: ಕೆಆರ್‍ಎಸ್ ಡ್ಯಾಮ್‍ನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದ್ದು, ವೀಕೆಂಡ್ ಎಂಜಾಯ್ ಮಾಡಲು ಪಕ್ಷಿಧಾಮಕ್ಕೆ ಬಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.

    ಕೆಆರ್‍ಎಸ್ ಡ್ಯಾಮ್‍ನಿಂದ ಶನಿವಾರದಿಂದ ಸುಮಾರು ಏಳುವರೆ ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ನದಿ ನೀರಿನ ಸೆಳೆತ ಹೆಚ್ಚಾಗಿದೆ. ಹೀಗಾಗಿ ಬೋಟಿಂಗ್ ಮಾಡುವಾಗ ನೀರಿನ ಸೆಳೆತದಿಂದ ಪ್ರವಾಸಿಗರಿಗೆ ಅಪಾಯವಾಗಬಾರದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರದಿಂದಲೇ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.

    ನದಿಯಲ್ಲಿ ನೀರಿನ ಮಟ್ಟ ಕಡಿಮೆ ಆಗುವವರೆಗೂ ಬೋಟಿಂಗ್ ಸ್ಥಗಿತಗೊಳಿಸಲು ರಂಗನತಿಟ್ಟು ಪಕ್ಷಿಧಾಮದ ಅಧಿಕಾರಿಗಳು ನಿರ್ಧರಿಸಿದ್ದಾರೆ.

  • ರಂಗನತಿಟ್ಟು ಪಕ್ಷಿಧಾಮದಲ್ಲಿ ಮತ್ತೆ ಬೋಟಿಂಗ್ ಸ್ಥಗಿತ!

    ರಂಗನತಿಟ್ಟು ಪಕ್ಷಿಧಾಮದಲ್ಲಿ ಮತ್ತೆ ಬೋಟಿಂಗ್ ಸ್ಥಗಿತ!

    ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೊರ ಹರಿವು 26 ಸಾವಿರ ಕ್ಯೂಸೆಕ್‍ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.

    ಕಳೆದ ಹಲವು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಪ್ರವಾಹದ ಭೀತಿ ಉಂಟಾಗಿದ್ದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿ, ಬೋಟಿಂಗ್ ಸ್ಥಗಿತಗೊಳಿಸಲಾಗಿತ್ತು. ಆದರೆ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಎರಡು ದಿನಗಳ ಹಿಂದಷ್ಟೆ ಬೋಟಿಂಗ್ ಪುನರಾರಂಭ ಮಾಡಲಾಗಿತ್ತು.

    ಇದೀಗ ಕಾವೇರಿ ನದಿಯಲ್ಲಿ ಮತ್ತೆ ಹೊರಹರಿವು 26 ಸಾವಿರ ಕ್ಯೂಸೆಕ್‍ಗೆ ಹೆಚ್ಚಳವಾಗಿರುವುದರಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‍ಗೆ ಮಾತ್ರ ನಿಷೇಧ ಹೇರಲಾಗಿದೆ. ಹೀಗಾಗಿ ಮುಂಜಾಗ್ರತವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಆದರೆ ಎಂದಿನಂತೆ ಪಕ್ಷಿಧಾಮ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋಜು ಮಸ್ತಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಪ್ರವಾಸಿಗರು!

    ಮೋಜು ಮಸ್ತಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಪ್ರವಾಸಿಗರು!

    ಚಾಮರಾಜನಗರ: ಮೋಜು ಮಸ್ತಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕೆ ಇಟ್ಟಿರುವಂತಹ ದೃಶ್ಯಗಳು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಬಳಿ ಪ್ರತಿನಿತ್ಯ ಗೋಚರವಾಗುತ್ತಿದೆ.

    ಶಿವನಸಮುದ್ರದ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಹರಿಯುವ ಕಾವೇರಿಯಲ್ಲಿ ಪ್ರವಾಸಿಗರು ಪ್ರಾಣವನ್ನು ಪಣಕ್ಕಿಟ್ಟು ಮೋಜು ಮಸ್ತಿ ಮಾಡುತ್ತಿದ್ದಾರೆ. ಇಲ್ಲಿ ತೆಪ್ಪದಲ್ಲಿನ ಬೋಟಿಂಗ್‍ನ್ನು ಜಿಲ್ಲಾಡಳಿತ ನಿಷೇಧ ಮಾಡಿ ಎರಡು ವರ್ಷಗಳು ಕಳೆದ್ರೂ ಸಹ, ಇಂದಿಗೂ ಇಲ್ಲಿ ಪ್ರವಾಸಿಗರಿಗೆ ಯಾವುದೇ ಭದ್ರತೆ ಇಲ್ಲದೇ ಬೋಟಿಂಗ್ ನಡೆಲಾಗುತ್ತಿದೆ.

    ಇಲ್ಲಿ ತೆಪ್ಪದಲ್ಲಿ ಕೂರುವ ಪ್ರವಾಸಿಗರಿಗೆ ಲೈಫ್ ಜಾಕೆಟ್ ಅಥವಾ ಟ್ಯೂಬ್‍ಗಳನ್ನು ನೀಡದೇ ತೆಪ್ಪದಲ್ಲಿ ಕೂರಿಸಿ ರೌಂಡ್ ಹೊಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಲ್ಲಿ ರಭಸವಾಗಿ ನೀರು ಹರಿಯುತ್ತಿದೆ. ಸ್ವಲ್ಪ ಯಾಮಾರಿದ್ರೂ ಕೂಡ ದೋಣಿಯಲ್ಲಿ ಕೂತವರು ನೀರು ಪಾಲಾಗುವುದು ನಿಶ್ಚಿತ.

    ಈ ಬಗ್ಗೆ ಪ್ರವಾಸಿಗರು ಸಹ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ದೋಣಿ ನಡೆಸೋರನ್ನು ಕೇಳಿದರೆ ನಾವು ಹಲವಾರು ವರ್ಷಗಳಿಂದ ಹೀಗೆ ದೋಣಿ ನಡೆಸುತ್ತಿದ್ದೇವೆ. ನಮಗೆ ಸರಿಯಾದ ವ್ಯವಸ್ಥೆ ನೀಡಿ, ಅವಕಾಶ ಕೊಡಿ ಎಂದರೆ ಅಧಿಕಾರಿಗಳು ಕೊಡುತ್ತಿಲ್ಲ. ಅದಕ್ಕೆ ನಾವು ಇಲ್ಲಿ ಎಂಎಲ್‍ಎ ಹಾಗೂ ಪೊಲೀಸ್ ಅವರನ್ನು ಕೇಳಿಕೊಂಡು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.