Tag: Bochasanwasi Akshar Purushottam Swaminarayan Sanstha

  • ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ: UAE ಘೋಷಣೆಗೆ ಮೋದಿ ಕೃತಜ್ಞತೆ

    ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ: UAE ಘೋಷಣೆಗೆ ಮೋದಿ ಕೃತಜ್ಞತೆ

    ಅಬುಧಾಬಿ: ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ ನೀಡುವುದಾಗಿ ಯುಎಇ ಉಪಾಧ್ಯಕ್ಷರು ಘೋಷಿಸಿದ್ದಾರೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಕೃತಜ್ಞತೆ ಸಲ್ಲಿಸಿದ್ದಾರೆ.

    ಅಬುಧಾಬಿಯಲ್ಲಿ (Abu Dhabi) ಹಿಂದೂ ದೇವಾಲಯ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತು ಇತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಈಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದರಿಂದ ಯುಎಇಗೆ ಬರುವವರ ಸಂಖ್ಯೆಯೂ ಹೆಚ್ಚುತ್ತದೆ ಮತ್ತು ಜನರಿಂದ ಜನರ ಸಂಪರ್ಕವೂ ಹೆಚ್ಚುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: UAE ಅಧ್ಯಕ್ಷರಿಗೆ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿ: ಮೋದಿ ಮನವಿ

    ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ, ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಯುಎಇ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

    ಯುಎಇ ಸುವರ್ಣ ಅಧ್ಯಾಯ ಬರೆದಿದೆ. ದೇವಾಲಯದ ಉದ್ಘಾಟನೆಯು ವರ್ಷಗಳ ಕಠಿಣ ಪರಿಶ್ರಮವನ್ನು ಹೊಂದಿದೆ. ಅನೇಕರ ಕನಸು ದೇವಾಲಯದೊಂದಿಗೆ ಸಂಪರ್ಕ ಹೊಂದಿದೆ. ಸ್ವಾಮಿನಾರಾಯಣ ಅವರ ಆಶೀರ್ವಾದವೂ ಎಲ್ಲರ ಮೇಲಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

    ಈ ದೇವಾಲಯವು ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ. ಮಂದಿರ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯ. ನಾನು ಮಾತೆ ಭಾರತಿಯನ್ನು ಆರಾಧಿಸುತ್ತೇನೆ. ದೇವರು ನನಗೆ ಕೊಟ್ಟಿರುವ ಪ್ರತಿಯೊಂದು ಕ್ಷಣವೂ ಭಾರತಮಾತೆಗಾಗಿ ಎಂದು ಮೋದಿ ತಿಳಿಸಿದ್ದಾರೆ.

  • ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

    ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

    ಅಬುಧಾಬಿ: ಅರಬ್ಬರ ನೆಲದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಬುಧವಾರ) ಲೋಕಾರ್ಪಣೆಗೊಳಿಸಿದರು.

    ಅರಬ್‌ ಸಂಯುಕ್ತ ಸಂಸ್ಥಾನದ (ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (Bochasanwasi Akshar Purushottam Swaminarayan Sanstha) ಹಿಂದೂ ದೇವಾಲಯವನ್ನು ಮೋದಿ ಇಂದು ಸಂಜೆ ಉದ್ಘಾಟಿಸಿದರು. ಇದನ್ನೂ ಓದಿ: ಅರಬ್ಬರ ನೆಲದಲ್ಲಿ ಹಿಂದೂ ಮಂದಿರ – ವಿಶ್ವದ ಮೂರನೇ ಅತಿ ದೊಡ್ಡ ದೇವಸ್ಥಾನ ಇಂದು ಲೋಕಾರ್ಪಣೆ

    ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್‌ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು.

    ಇದೇ ವೇಳೆ ಪ್ರಧಾನಿ ಮೋದಿಗೆ ಈಶ್ವರಚರಣದಾಸ ಸ್ವಾಮೀಜಿ ಸೇರಿದಂತೆ ಇತರೆ ಸ್ವಾಮೀಜಿಗಳು ಸಾಥ್‌ ನೀಡಿದರು. ಈ ವೇಳೆ ಸ್ವಾಮೀಜಿಗಳು ಭವ್ಯ ಮಂದಿರದ ರಚನೆ ಕುರಿತು ಮೋದಿ ಅವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಅಬುಧಾಬಿಯಲ್ಲಿ ಯಕ್ಷಗಾನ ವೇಷಧಾರಿಗಳಿಂದ ಮೋದಿಗೆ ಅದ್ಧೂರಿ ಸ್ವಾಗತ

    ನಂತರ ದೇವಾಲಯದಲ್ಲಿ ಮೋದಿ ಆರತಿ ಬೆಳಗಿದರು. ಮಂದಿರದ ದೇವರಿಗೆ ಪುಷ್ಪವನ್ನು ಅರ್ಪಿಸಿ ಪ್ರಾರ್ಥಿಸಿದರು. 27 ಎಕರೆ ಜಾಗದಲ್ಲಿ 900 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ.