Tag: bomb threat

  • ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್ ಬೆದರಿಕೆ

    ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್ ಬೆದರಿಕೆ

    ಚೆನ್ನೈ: ನಗರದಲ್ಲಿರುವ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ (CP Radhakrishnan) ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಬಾಂಬ್ ಬೆದರಿಕೆ (Bomb threat) ಕರೆ ಬಂದಿದೆ. ತಪಾಸಣೆ ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

    ಸಹಾಯಕ ಪೊಲೀಸ್ ಆಯುಕ್ತರ ಕಚೇರಿಗೆ ಇಮೇಲ್ ಬೆದರಿಕೆ ಸಂದೇಶ ಬಂದ ನಂತರ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳದ ತಜ್ಞರು ಮತ್ತು ಸ್ನಿಫರ್ ನಾಯಿಯನ್ನು ಒಳಗೊಂಡ ತಂಡವನ್ನು ಉಪರಾಷ್ಟ್ರಪತಿಯವರ (Vice President) ಮನೆಗೆ ಸಂಪೂರ್ಣ ಶೋಧ ನಡೆಸಲು ಕಳುಹಿಸಲಾಯಿತು.

    ಶೋಧ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ನಿರ್ಧರಿಸಿದರು. ಕಳೆದ ಒಂದು ತಿಂಗಳಿನಿಂದ ಚೆನ್ನೈ ಪೊಲೀಸರಿಗೆ ಇದೇ ರೀತಿಯ ಹಲವಾರು ಇಮೇಲ್ ಬೆದರಿಕೆಗಳು ಬರುತ್ತಿದ್ದು, ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪ್ರತ್ಯೇಕ ಪ್ರಕರಣದಲ್ಲಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದ ವಿಶಾಲ್ ಭಾರ್ತಿ ಪಬ್ಲಿಕ್ ಶಾಲೆಗೆ ಗುರುವಾರ ಬಂದ ಬಾಂಬ್ ಬೆದರಿಕೆ ಇಮೇಲ್ ಆತಂಕ ಮತ್ತು ತುರ್ತು ಪ್ರತಿಕ್ರಿಯೆಗೆ ಕಾರಣವಾಯಿತು. ನಂತರ ಅದನ್ನು ಹುಸಿ ಬೆದರಿಕೆ ಎಂದು ಗುರುತಿಸಲಾಯಿತು. ಸಂದೇಶ ಕಳುಹಿಸುವವರು ಪರೀಕ್ಷೆಗಳನ್ನು ತಪ್ಪಿಸಲು ಬಯಸಿದ್ದ ವಿದ್ಯಾರ್ಥಿ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

  • ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಲರ್ಟ್‌ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ

    ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಲರ್ಟ್‌ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ

    – ಡಿಕೆಶಿ ಮನೆ ಎದುರಿನ ಶಾಲೆಗೂ ಬಂದಿತ್ತು ಬಾಂಬ್ ಬೆದರಿಕೆ

    ಬೆಂಗಳೂರು: ಆಗಾಗ್ಗೆ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಎಂ, ಡಿಸಿಎಂ ಮನೆಗಳನ್ನು (CM, DCM Home) ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್‌ ಇಲಾಖೆ ಬಾಂಬ್‌ ಬೆದರಿಕೆ ಪ್ರಕರಣಗಳನ್ನ ಭೇದಿಸಲು ವಿಶೇಷ ತನಿಖಾ ತಂಡ (SIT) ರಚನೆ ಮಾಡಿದೆ.

    ಕೆಲ ಶಾಲೆಗಳು, ಸರ್ಕಾರಿ ಕಚೇರಿಗಳಿಗೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಬಾಂಬ್‌ ಬೆದರಿಕೆ (Bomb Threat) ಬರುತ್ತಲೇ ಇದೆ. ಬೆಂಗಳೂರು ಒಂದರಲ್ಲೇ 34 ಪ್ರಕರಣಗಳು ದಾಖಲಾಗಿವೆ. ಮುಂಬೈನಲ್ಲಿ 27, ಚೆನ್ನೈ 22 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಬಾಂಬ್‌ ಬೆದರಿಕೆಗಳನ್ನು ತಪ್ಪಿಸಲು ಹಾಗೂ ಹುಸಿ ಬೆದರಿಕೆಯೊಡ್ಡುವವರ ಹೆಡೆಮುರಿ ಕಟ್ಟಲು ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ತನಿಖಾ ತಂಡ ರಚನೆ ಮಾಡಿದ್ದಾರೆ.

    ಸಿಎಂ, ಡಿಸಿಎಂ ಮನೆ ಸ್ಫೋಟಿಸುವುದಾಗಿ ಬೆದರಿಕೆ
    ಕಳೆದ ಶನಿವಾರ ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್‌ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಇ-ಮೇಲ್‌ ಮೂಲಕ ಹುಸಿ ಬೆದರಿಕೆ ಬಂದಿತ್ತು. ಶನಿವಾರ ಬೆಳಗಿನ ಜಾವ 4:20ರ ಸುಮಾರಿಗೆ, ಆರ್ನಾ ಅಶ್ವಿನ್ ಶೇಖರ್ (aarna.ashwinshekher@outlook.com) ಮೇಲ್ ಐಡಿಯಿಂದ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಇಮೇಲ್ ಐಡಿ (cm.kar@nic.in) ಮತ್ತು ಡಿಸಿಎಂ ಅವರ ವೈಯಕ್ತಿಕ ಇಮೇಲ್ ಐಡಿ dkshivakumar1@gmail.com ಗೆ ಇಮೇಲ್ ಬೆದರಿಕೆ ಸಂದೇಶ ಬಂದಿತ್ತು.

    ಇದರ ನಂತರ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಸಿಎಂ ಮತ್ತು ಡಿಸಿಎಂ ಅವರ ನಿವಾಸಗಳನ್ನು ಸಂಪೂರ್ಣ ಶೋಧ ನಡೆಸಲಾಗಿತ್ತು. ಬಳಿಕ ಹುಸಿ ಬಾಂಬ್‌ ಬೆದರಿಕೆ ಅನ್ನೋದು ಗೊತ್ತಾಯ್ತು. ಬಳಿಕ ಅರ್ನಾ ಅಶ್ವಿನ್ ಶೇಖರ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

    ಬಂಗಾಳದಲ್ಲಿ ಓರ್ವನ ಬಂಧನ
    ಕಳೆದ ವರ್ಷ ಅಕ್ಟೋಬರ್‌ 4ರಂದು ಬಸವನಗುಡಿಯ ಬಿಐಟಿ ಕಾಲೇಜಿಗೆ ಇ-ಮೇಲ್‌ ಮೂಲಕ ಆರೋಪಿಯು ಬಾಂಬ್‌ ಬೆದರಿಕೆ ಹಾಕಿದ್ದ. ಕಾಲೇಜು ಆವರಣದಲ್ಲೇ ಹೈಡ್ರೋಜನ್‌ ಸುಧಾರಿತ ಐಇಡಿ (IED) ಇಟ್ಟಿದ್ದು, ಅದನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ವಿವಿ ಪುರಂ ಪೊಲೀಸರು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಆರೋಪಿಯನ್ನ ಬಂಧಿಸಿದ್ದರು.

    ಆರೋಪಿಯಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳನ್ನ ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿ ಇದೇ ರೀತಿ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅನ್ನೋದು ಗೊತ್ತಾಗಿತ್ತು.

    ಇದಕ್ಕೂ ಮುನ್ನ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು. ಡಿಕೆಶಿ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ ಬಂದಿತ್ತು.

  • TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    – ಸಿಬಿಐ ತನಿಖೆಗೆ ಆಗ್ರಹಿಸಿ ಕೋರ್ಟ್‌ ಮೆಟ್ಟಿಲೇರಿದ್ದ ನಟ ವಿಜಯ್‌ & ಟೀಂ

    ಚೆನ್ನೈ: ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

    ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆಯಲಿದೆ. ಈ ನಡುವೆ ರ‍್ಯಾಲಿಗಳಿಗೆ ಇನ್ಮುಂದೆ ಪ್ರೋಟೋಕಾಲ್‌ ತಯಾರಿಸುವವರೆಗೆ ನಟ ವಿಜಯ್‌ ರ‍್ಯಾಲಿಗೂ ಅನುಮತಿ ನೀಡದಂತೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯೂ ಇಂದೇ ವಿಚಾರಣೆಗೆ ಬರುವ ಸಾಧ್ಯತೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಈ ಕುರಿತು ಮಾತನಾಡಿರುವ ಟಿವಿಕೆ ಪಕ್ಷದ ವಕೀಲ ಅರಿವಳಗನ್‌, ಕರೂರಿನಲಿ ನಡೆದ ಘಟನೆ ಹಿಂದೆ ಕ್ರಿಮಿನಲ್‌ ಪಿತೂರಿ ಇದೆ. ಆದ್ದರಿಂದ ನಾವು ರಾಜಕೀಯ ಸಂಸ್ಥೆಯ ಮೂಲಕ ತನಿಖೆ ಮಾಡೋದು ಬೇಡ. ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ನ್ಯಾಯಾಲಯವೇ ವಿಶೇಷ ತನಿಖಾ ತಂಡವನ್ನ ರಚಿಸಬೇಕು. ಇಲ್ಲದಿದ್ದರೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಅಂತ ಆಗ್ರಹಿಸಿದ್ದಾರೆ,

    ಸಾವಿನ ಸಂಖ್ಯೆ ಏರಿಕೆ
    ಇನ್ನೂ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಾರದಾ ಮೃತಪಟ್ಟಿದ್ದಾರೆ. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಸಿಸಿಟಿವಿ, ಡ್ರೋನ್‌ ವಿಡಿಯೋ ಪರಿಶೀಲನೆ
    ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿರುವ ಪೊಲೀಸರು ಕಾಲ್ತುಳಿತದ ಸ್ಥಳದಲ್ಲಿರುವ ಎಲ್ಲಾ ಸಿಸಿಕ್ಯಾಮರಾ, ಡ್ರೋನ್ ವಿಡಿಯೋ ಹಾಗೂ ಮೊಬೈಲ್‌ಗಳಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋಗಳನ್ನ ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

  • Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದೆ.

    ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ (CRPF) ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್‌ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ ಶ್ವಾನದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳಗಳಿಂದ ಮನೆಯ ಸುತ್ತಲೂ ಹಾಗೂ ಮನೆಯ ಒಳಾಂಗಣವನ್ನ ಪರಿಶೀಲನೆ ಮಾಡಲಾಗಿದೆ.

    ದುರಂತದ ಹೇಗಾಯ್ತು? ಆಮೇಲೆ ಏನಾಯ್ತು?
    ತಮಿಳುನಾಡು (Tamil Nadu) ರಾಜಕೀಯ ಪ್ರವೇಶಿಸಿರುವ ನಟ ದಳಪತಿ ವಿಜಯ್ ಕರೂರು ಜಿಲ್ಲಾ ಕೇಂದ್ರದ 2 ಕಿ.ಮೀ. ದೂರದ ವೇಲುಸ್ವಾಮಿಪುರಂನ ಹೆದ್ದಾರಿಯಲ್ಲಿ ಚುನಾವಣಾ ರ‍್ಯಾಲಿ ಹಮ್ಮಿಕೊಂಡಿದ್ದರು. ಶನಿವಾರ ರಾತ್ರಿ 7:15 ಸುಮಾರಿಗೆ ಏಕಾಏಕಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಪೈಕಿ 2 ವರ್ಷದ ಮಗು ಸೇರಿ 10 ಮಕ್ಕಳು, 17 ಮಹಿಳೆಯರೂ ಸೇರಿದ್ದಾರೆ. ಮೃತ 28 ಜನ ಕರೂರು ಜಿಲ್ಲೆಯವರಾಗಿದ್ದರೆ ಉಳಿದವರು ಈರೋಡ್, ತಿರುಪುರ, ಧಾರಾಪುರಂ, ಸೇಲಂ ಜಿಲ್ಲೆಯವರಾಗಿದ್ದಾರೆ.

    ಎಲ್ಲಾ 40 ಜನರ ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಯೇ ಸಾವನ್ನಪ್ಪಿರೋದು ಅಂತ ದೃಢವಾಗಿದೆ. ಶವಗಳ ರಾಶಿ ನೋಡಿದ ಸಚಿವ ಅನ್ಬಿಲ್ ಮಹೇಶ್ ಕಣ್ಣೀರು ಹಾಕಿದರು. ಮೃತರಿಗೆ ವಿಜಯ್ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದರೆ.. ಸಿಎಂ ಸ್ಟಾಲಿನ್ ಅವರು ಮೃತರಿಗೆ 10 ಲಕ್ಷ ಹಾಗೂ ಗಾಯಾಳುಗಳಿಗೆ 1 ಲಕ್ಷ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಪ್ರಕಟಿಸಿದ್ದಾರೆ. ತಮಿಳುನಾಡು ಬಿಜೆಪಿ ಕೂಡ 1 ಲಕ್ಷ ಪರಿಹಾರ ಪ್ರಕಟಿಸಿದೆ.

    ಕರೂರು ಕಾಲ್ತುಳಿದಲ್ಲಿ ಗಾಯಾಗಳುಗಳ ಸಂಖ್ಯೆ 150ಕ್ಕೆ ಏರಿದೆ. ಕರೂರು, ತಿರುಚ್ಚಿ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ದುರ್ಘಟನೆ ಹಿನ್ನೆಲೆಯಲ್ಲಿ ಇಡೀ ಕರೂರು ಜಿಲ್ಲೆಯಲ್ಲಿ ವ್ಯಾಪಾರ-ವಹಿವಾಟುಗಳನ್ನು ವರ್ತಕರೇ ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದರು. ಕಾಲ್ತುಳಿತ ಘಟನಾ ಸ್ಥಳವಾದ ಹೆದ್ದಾರಿಯಲ್ಲಿ ಚಪ್ಪಲಿ-ಶೂಗಳ ರಾಶಿ, ಹರಿದ ಬಟ್ಟೆಗಳು, ಮುರಿದು ಹೋಗಿರುವ ಮರದ ಕಂಬಗಳು, ನಜ್ಜುಗುಜ್ಜಾಗಿರುವ ನೀರಿನ ಬಾಟೆಲ್‌ಗಳ ರಾಶಿಯೇ ಕಂಡು ಬಂದಿತ್ತು.

    ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ
    ಕರೂರು ವಿಜಯ್ ರ‍್ಯಾಲಿಯಲ್ಲಿ ಸಾವನ್ನಪ್ಪಿದ್ದವರದ್ದು ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ನೆಚ್ಚಿನ ನಟನ ನೋಡಲು ಪತ್ನಿ ಕಣ್ಮರೆಯಾಗಿದೆ ಅಂತ ಇಡೀ ಕುಟುಂಬ ರಾತ್ರಿಯೆಲ್ಲಾ ಹುಡುಕಾಡಿದೆ. ಆದರೆ, ಬೆಳಗ್ಗೆ ಜಿಲ್ಲಾಡಳಿತದಿಂದ ಕರೆ ಬಂದಿತ್ತು. ಆತಂಕದಲ್ಲಿ ಹೋಗಿ ನೋಡಿದಾಗ ನನ್ನ ಹೆಂಡತಿ ಹೆಣವಾಗಿದ್ದಳು ಅಂತ ಕೈಮೇಲಿನ ಅಚ್ಚೆ ನೋಡಿ ಪತಿ ಗುರುತಿಸಿದ್ದಾರೆ. ಅಂದಹಾಗೆ, ದಂಪತಿಗೆ ಒಂದು ವರ್ಷದ ಮಗು ಇದ್ದು ತಾಯಿಯನ್ನು ಕಳೆದುಕೊಂಡಿದೆ. ಆಸ್ಪತ್ರೆ ಮುಂದೆ ತಮ್ಮವರ ಕಳೆದುಕೊಂಡ ಕುಟುಂಬಸ್ಥರು ಎದೆ ಬಡಿದುಕೊಂಡು ಗೋಳಾಡ್ತಿರೋದನ್ನು ನೋಡಿದ್ರೆ ಕರುಳು ಚುರ್ ಅನ್ನಿಸುತ್ತೆ. ಈ ಮಧ್ಯೆ, ಆಪ್ತರನ್ನು ಕಳೆದುಕೊಂಡ ಕುಟುಂಬವೊಂದು ವಿಜಯ್ ನಾಶವಾಗಿ ಹೋಗ್ತಾನೆ ಅಂತ ಹಿಡಿಶಾಪ ಹಾಕಿದೆ.

  • ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

    ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಹಲವು ಶಾಲೆಗಳಿಗೆ ಶನಿವಾರ ಮುಂಜಾನೆ ಬಾಂಬ್ ಬೆದರಿಕೆ (Bomb Threat) ಕರೆಗಳು ಬಂದಿದ್ದು, ಪೊಲೀಸ್ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ (Bomb Disposal Squads) ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸುತ್ತಿವೆ.

    ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್, ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಹಾಗೂ ಬಾಂಬ್ ನಿಷ್ಕ್ರಿಯ ದಳ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸ್ಥಳಾಂತರಿಸಿತು. ಇದನ್ನೂ ಓದಿ: ಜಾತಿ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಬಗ್ಗೆ ಸಿಎಂ ಬಳಿ ಕೇಳಿದ್ದೇವೆ – ಎಂ.ಬಿ ಪಾಟೀಲ್

    ಬಾಂಬ್ ಬೆದರಿಕೆ ಬಂದಿದ್ದ ಶಾಲೆಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ನಾವು ಶಾಲೆಗಳ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ರೀತಿಯ ವಸ್ತುಗಳು ಕಂಡುಬಂದಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿ ಸಾಲು ಸಾಲು ಆರೋಪ – ಬೇಲೂರು ಶಿಕ್ಷಣಾಧಿಕಾರಿ ಅಮಾನತು

  • ಹಲಸೂರು ಗುರುದ್ವಾರಕ್ಕೆ ಬಾಂಬ್ ಬೆದರಿಕೆ – ಬಾತ್ರೂಮ್‌ನಲ್ಲಿ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖ

    ಹಲಸೂರು ಗುರುದ್ವಾರಕ್ಕೆ ಬಾಂಬ್ ಬೆದರಿಕೆ – ಬಾತ್ರೂಮ್‌ನಲ್ಲಿ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖ

    ಬೆಂಗಳೂರು: ಹಲಸೂರು (Ulsoor) ಮುಖ್ಯ ರಸ್ತೆಯಲ್ಲಿರುವ ಗುರುದ್ವಾರಕ್ಕೆ (Gurudwara) ಬಾಂಬ್ ಬೆದರಿಕೆ (Bomb Threat) ಬಂದಿದ್ದು, ಬಾತ್ರೂಮ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಹಲಸೂರು ಕೆರೆ ಬಳಿಯಿರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಕಳೆದ 4 ದಿನದ ಹಿಂದೆ `De-Brahminize Dravidistan’ ಎಂಬ ಸಂಘಟನೆಯಿಂದ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಗುರುದ್ವಾರದ ಅಧಿಕೃತ ಮೇಲ್ ಐಡಿಗೆ ಬಾಂಬ್ ಬೆದರಿಕೆ ಬಂದಿದೆ. ಮೇಲ್‌ನಲ್ಲಿ, ಶೀಘ್ರವೇ 4 RDX IED ನಿಮ್ಮ ಗುರುದ್ವಾರದ ಬಾತ್ರೂಮ್‌ನಲ್ಲಿ ಬಾಂಬ್ ಸ್ಫೋಟಿಸುತ್ತದೆ. 8 ಗಂಟೆಯೊಳಗೆ ಎಲ್ಲವನ್ನೂ ಸ್ಥಳಾಂತರಿಸಿ ಎಂದು ಬರೆದಿದ್ದಾರೆ.ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

    ಈ ಕುರಿತು ಋಷಿಪಾಲ್ ಸಿಂಗ್ ಎಂಬುವವರು ಹಲಸೂರು ಪೊಲೀಸ್ ಠಾಣೆಗೆ (Ulsoor Police Station) ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ.ಇದನ್ನೂ ಓದಿ: ಹಾಸನ | ರಸ್ತೆಗೆ ಮರ ಕೆಡವಿ ವಾಹನ ಸವಾರರನ್ನು ತಡೆದ ಗಜರಾಜ!

  • ದೆಹಲಿಯ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ – 4 ದಿನಗಳಿಂದ 3 ಬಾರಿ ಬೆದರಿಕೆ

    ದೆಹಲಿಯ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ – 4 ದಿನಗಳಿಂದ 3 ಬಾರಿ ಬೆದರಿಕೆ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) 6 ಶಾಲೆಗಳಿಗೆ (Schools) ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ 7:48ರ ನಡುವೆ ಬಾಂಬ್ ಬೆದರಿಕೆಗೆ (Bomb Threat) ಸಂಬಂಧಿಸಿದ ಕರೆಗಳು, ಇಮೇಲ್ ಬಂದಿವೆ. ಇವುಗಳಲ್ಲಿ ಪ್ರಸಾದ್ ನಗರದಲ್ಲಿರುವ ಆಂಧ್ರ ಶಾಲೆ, ಬಿಜಿಎಸ್ ಇಂಟರ್‌ನ್ಯಾಷನಲ್ ಶಾಲೆ, ರಾವ್ ಮಾನ್ ಸಿಂಗ್ ಶಾಲೆ, ಕಾನ್ವೆಂಟ್ ಶಾಲೆ, ಮ್ಯಾಕ್ಸ್ ಫೋರ್ಟ್ ಶಾಲೆ ಮತ್ತು ದ್ವಾರಕಾದ ಇಂದ್ರಪ್ರಸ್ಥ ಅಂತರರಾಷ್ಟ್ರೀಯ ಶಾಲೆಗಳಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

    ಅಗ್ನಿಶಾಮಕ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳಗಳೊಂದಿಗೆ ಪೊಲೀಸ್ ತಂಡಗಳು ತಕ್ಷಣ ಆವರಣಕ್ಕೆ ಧಾವಿಸಿ, ಶೋಧ ಕಾರ್ಯ ನಡೆಸುತ್ತಿವೆ. ಇದನ್ನೂ ಓದಿ: ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು – ಪ್ರಿಯತಮನಿಂದಲೇ ಸ್ಕೆಚ್‌; ಮರ್ಮ ಅರಿಯದೇ ಹೊರಟಿದ್ದಳು ಮುಗ್ಧೆ

    ಇದೀಗ ಒಂದೇ ವಾರದಲ್ಲಿ ಮೂರು ಬಾರಿ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಆ.18 ರಂದು ದೆಹಲಿಯಾದ್ಯಂತ 32 ಶಾಲೆಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿದ್ದವು. ನಿನ್ನೆ (ಆ.20) 50 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿ 25,000 ಅಮೆರಿಕನ್ ಡಾಲರ್‌ಗೆ ಬೇಡಿಕೆ ಇಟ್ಟಿದ್ದರು. ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಇವು ಹುಸಿ ಬಾಂಬ್ ಬೆದರಿಕೆಗಳು ಎಂದು ತಿಳಿದುಬಂದಿತ್ತು.

  • ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ – 25,000 ಅಮೆರಿಕನ್ ಡಾಲರ್‌ಗೆ ಬೇಡಿಕೆ

    ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ – 25,000 ಅಮೆರಿಕನ್ ಡಾಲರ್‌ಗೆ ಬೇಡಿಕೆ

    ನವದೆಹಲಿ: ರಾಷ್ಟ್ರ ರಾಜಧಾನಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ (Bomb Threat) ಮೇಲ್ ಬಂದಿದ್ದು, 25,000 ಅಮೆರಿಕನ್ ಡಾಲರ್‌ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಟೆರರೈಸರ್ಸ್ 111 ಎಂಬ ಗುಂಪು ಆಂಗಿ ಪಬ್ಲಿಕ್ ಸ್ಕೂಲ್, ಫೇಯ್ತ್ ಅಕಾಡೆಮಿ, ಡೂನ್ ಪಬ್ಲಿಕ್ ಸ್ಕೂಲ್, ಸರ್ವೋದಯ ವಿದ್ಯಾಲಯ ಸೇರಿದಂತೆ ವಿವಿಧ ಶಾಲೆಗಳಿಗೆ 25,000 ಅಮೆರಿಕನ್ ಡಾಲರ್‌ಗೆ ಬೇಡಿಕೆಯಿಟ್ಟು ಬಾಂಬ್ ಬೆದರಿಕೆಯ ಮೇಲ್ ಕಳುಹಿಸಿದೆ. ಸದ್ಯ ಶಾಲೆಗಳಲ್ಲಿ ಪೊಲೀಸರು ಹಾಗೂ ಶ್ವಾನದಳ ಪರಿಶೀಲನೆ ನಡೆಸಿವೆ.ಇದನ್ನೂ ಓದಿ: ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು

    ಇದೇ ಗುಂಪು ಆ.18ರಂದು ಬಾಂಬ್ ಬೆದರಿಕೆ ಕರೆ ಮಾಡಿ, 5,000 ಅಮೆರಿಕನ್ ಡಾಲರ್‌ಗೆ ಬೇಡಿಕೆ ಇಟ್ಟಿತ್ತು. ವಿವಿಧ ಶಾಲೆಗಳ ಪ್ರಾಂಶುಪಾಲರು ಮತ್ತು ಆಡಳಿತ ಸಿಬ್ಬಂದಿಗೆ ಇ-ಮೇಲ್ ಕಳುಹಿಸಿರುವ ಗುಂಪು, ಶಾಲೆಯ ಸಿಸಿಟಿವಿ ಕ್ಯಾಮರಾ, ವಿದ್ಯಾರ್ಥಿಗಳ ಸಂಖ್ಯೆ ಸೇರಿದಂತೆ ಎಲ್ಲಾ ಮಾಹಿತಿ ತಮ್ಮ ಬಳಿ ಇದ್ದು, ಶಾಲೆಯ ಆವರಣದಲ್ಲಿ 48 ಗಂಟೆಗಳ ಒಳಗೆ ಬಾಂಬ್ ಸ್ಫೋಟಿಸುವುದಾಗಿ ತಿಳಿಸಿದ್ದರು.

    ನಮ್ಮದು ಟೆರರೈಸರ್ಸ್ 111 ಗುಂಪು. ನಿಮ್ಮ ಕಟ್ಟಡದ ಒಳಗೆ ಮತ್ತು ನಗರದ ಇತರೆಡೆ ಬಾಂಬ್ ಇಟ್ಟಿದ್ದೇವೆ. ಹೆಚ್ಚಿನ ಸಾಮರ್ಥ್ಯದ ಅ4 ಬಾಂಬ್‌ಗಳು ಸೇರಿದಂತೆ ಸ್ಫೋಟಕ ಸಾಧನಗಳನ್ನು ತರಗತಿ, ಸಭಾಂಗಣ, ಸಿಬ್ಬಂದಿ ಕೊಠಡಿ ಮತ್ತು ಶಾಲಾ ಬಸ್‌ಗಳಲ್ಲಿ ಇಟ್ಟಿದ್ದೇವೆ. ಅಪಾರ ಸಾವು-ನೋವು ಉಂಟು ಮಾಡುವಂತೆ ಮಾಡಿದ್ದೇವೆ. 48 ಗಂಟೆಗಳ ಒಳಗಾಗಿ 2000 ಅಮೆರಿಕನ್ ಡಾಲರ್ ವರ್ಗಾಯಿಸಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸಲಾಗುವುದು ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಿದ್ದರು.

    ರಾಷ್ಟ್ರ ರಾಜಧಾನಿಯ ಹಲವಾರು ಶಾಲೆಗಳಿಗೆ ಟೆರರೈಸರ್ಸ್ 111 ಎಂದು ಹೇಳಲಾದ ಗುಂಪಿನಿಂದ ಇಮೇಲ್ ಬಂದಿತ್ತು. 72 ಗಂಟೆಗಳ ಒಳಗೆ ಕ್ರಿಪ್ಟೋಕರೆನ್ಸಿಯಲ್ಲಿ 5,000 ಡಾಲರ್ ವರ್ಗಾಯಿಸುವಂತೆ ಬೇಡಿಕೆ ಇಡಲಾಗಿತ್ತು. ಅಷ್ಟು ಹಣವನ್ನು ಕಳುಹಿಸದಿದ್ದಲ್ಲಿ ಶಾಲೆಯ ಆವರಣದಲ್ಲಿ ಬಾಂಬ್‌ಗಳನ್ನು ಸ್ಫೋಟಿಸಲಾಗುವುದು ಅಧಿಕಾರಿಯೊಬ್ಬರು ತಿಳಿಸಿದ್ದರು.ಇದನ್ನೂ ಓದಿ: ಟೀಚರ್‌ ಮೇಲೆ ಸಿಕ್ಕಾಪಟ್ಟೆ ಲವ್‌ – ದೂರು ನೀಡಿದ್ದಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಹಳೇ ವಿದ್ಯಾರ್ಥಿ

  • ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ – ತೀವ್ರ ಶೋಧ

    ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ – ತೀವ್ರ ಶೋಧ

    ನವದೆಹಲಿ: ಇಲ್ಲಿನ ದ್ವಾರಕಾದ ದೆಹಲಿ ಪಬ್ಲಿಕ್‌ ಶಾಲೆ (DPS) ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್‌ ಬೆದರಿಕೆ (Bomb Threat) ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಮೂಲಗಳ ಪ್ರಕಾರ, ದೆಹಲಿ ಪೊಲೀಸ್‌ ತಂಡಗಳು (Delhi Police Team) ಹಾಗೂ ಬಾಂಬ್‌ ನಿಷ್ಕ್ರಿಯ ದಳಗಳು ಸ್ಥಳಕ್ಕೆ ದೌಡಾಯಿಸಿದ್ದು, ಪೂರ್ಣ ಶೋಧ ನಡೆಸುತ್ತಿವೆ. ಅಗ್ನಿಶಾಮಕ ದಳಗಳೂ ಸ್ಥಳದಲ್ಲೇ ಬೀಡುಬಿಟ್ಟಿವೆ.

    ಪೊಲೀಸರು ಹೇಳುವಂತೆ, ದ್ವಾರಕಾದ ಸೆಕ್ಟರ್-19 ಬಳಿಯ ಸೇಂಟ್ ಥಾಮಸ್ ಶಾಲೆ, ಸೆಕ್ಟರ್ 18 ಎನ ದೆಹಲಿ ಇಂಟರ್ನ್ಯಾಷನಲ್ ಸ್ಕೂಲ್ ಎಡ್ಜ್, ಸೆಂಟ್ರಲ್ ಅಕಾಡೆಮಿ ಸ್ಕೂಲ್, ಸೆಕ್ಟರ್ 10ರ ದ್ವಾರಕಾದ ಜಿಡಿ ಗೋನೆಕಾ ಸ್ಕೂಲ್, ಸೆಕ್ಟರ್ 19ರ ದ್ವಾರಕಾ ಮತ್ತು ಮಾಡರ್ನ್ ಇಂಟರ್ನ್ಯಾಷನಲ್ ಶಾಲೆಗಳಿಗೆ ಬೆದರಿಕೆ ಬಂದಿವೆ. ಎಲ್ಲ ಬೆದರಿಕೆಗಳೂ ಒಂದೇ ಇಮೇಲ್‌ ಐಡಿಯಿಂದ ಬೆದರಿಕೆ ಬಂದಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ – 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ

    ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಶಾಲೆಗಳಿಗೆ ರಜೆ ಘೊಷಿಸುವಂತೆ ಸೂಚಿಸಿದ್ದಾರೆ. ಇಡೀ ಶಾಲಾ ಆವರಣವನ್ನು ತೀವ್ರವಾಗಿ ಶೋಧಿಸಲಾಗುತ್ತಿದೆ. ಇದನ್ನೂ ಓದಿ: ಕೃಷ್ಣಾಷ್ಟಮಿ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಅವಘಡ – ಐವರು ಸಾವು

    ಕೆಲ ದಿನಗಳ ಹಿಂದೆ ಬೆಂಗಳೂರಿನಾದ್ಯಂತ 40 ಖಾಸಗಿ ಶಾಲೆಗಳಿಗೆ ಒಂದೇ ದಿನ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿತ್ತು.

  • ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ

    ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ

    – ಏರ್‌ಪೋರ್ಟ್‌ಗೆ ಅಗ್ನಿಶಾಮಕ ದಳವೂ ದೌಡು

    ಗಾಂಧೀನಗರ: ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಸ್ಥಳದಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಶೋಧಕಾರ್ಯ ನಡೆಸಿದೆ.

    ಈ ಕುರಿತು ಜಂಟಿ ಪೊಲೀಸ್ ಆಯುಕ್ತ ಶರದ್ ಸಿಂಘಾಲ್ ಅವರು ಮಾಹಿತಿ ನೀಡಿದ್ದು, ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಪರಾಧ ವಿಭಾಗಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಮಾಹಿತಿ ಬೆನ್ನಲ್ಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ಅಂಗೀಕರಿಸಿದ ದ್ರೌಪದಿ ಮುರ್ಮು

     ಈವರೆಗೂ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

    ಇದಕ್ಕೂ ಮುನ್ನ ಗುಜರಾತ್ ಮುಖ್ಯಮಂತ್ರಿ ಕಚೇರಿ ಹಾಗೂ ಗಾಂಧೀನಗರದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಕಳೆದ ತಿಂಗಳು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಏರ್ ಇಂಡಿಯಾ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ಪರಿಣಾಮ 241 ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು.ಇದನ್ನೂ ಓದಿ: ಡಾಲರ್ ಎಕ್ಸ್‌ಚೇಂಜ್‌ಗೆ ಬಂದಾಗ 2 ಕೋಟಿ ರೂ. ದರೋಡೆ ನಾಟಕ – ದೂರುದಾರ ಸೇರಿ 15 ಮಂದಿ ಅರೆಸ್ಟ್!