Tag: Bombay Films

  • ಕೆಜಿಎಫ್ 2 ಐವತ್ತನೇ ದಿನದ ಸಂಭ್ರಮದಲ್ಲಿ ತೆಲುಗು ನಟ ಪ್ರಭಾಸ್

    ಕೆಜಿಎಫ್ 2 ಐವತ್ತನೇ ದಿನದ ಸಂಭ್ರಮದಲ್ಲಿ ತೆಲುಗು ನಟ ಪ್ರಭಾಸ್

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಕೆಜಿಎಫ್ 2 ಸಿನಿಮಾ ಐವತ್ತು ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರತಂಡವು ಭರ್ಜರಿ ಪಾರ್ಟಿಯೊಂದನ್ನು ಆಯೋಜನೆ ಮಾಡಿತ್ತು. ಈ ಸಂತೋಷ ಕೂಟದಲ್ಲಿ ತೆಲುಗಿನ ಹೆಸರಾಂತ ನಟ ಪ್ರಭಾಸ್ ಕೂಡ ಆಗಮಿಸಿದ್ದರು. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ನಟಿಸುತ್ತಿರುವ ಪ್ರಭಾಸ್ ಬೆಂಗಳೂರಿಗೆ ಬಂದು ಹೊಂಬಾಳೆ ಫಿಲ್ಮ್ಸ್ ಸದಸ್ಯರಿಗೆ ಶುಭಾಶಯ ಹೇಳಿದರು. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಐವತ್ತು ದಿನಗಳ ಈ ಸಂಭ್ರಮವನ್ನು ದೊಡ್ಡಮಟ್ಟದಲ್ಲಿ ಮಾಡುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಿಗೆ ಇತ್ತು. ಆದರೆ, ಸಿನಿಮಾ ತಂಡ ತಮಗೆ ಮಾತ್ರ ಸೀಮಿತ ಮಾಡಿಕೊಂಡು ಕೇಕ್ ಕತ್ತರಿಸುವ ಮೂಲಕ ಸಂಭ್ರಮ ಆಚರಿಸಿದೆ. ಐವತ್ತು ದಿನಗಳ ಸಂಭ್ರಮಕ್ಕೆ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ ಕಿರಗಂದೂರು ಸೇರಿದಂತೆ ಚಿತ್ರ ತಂಡ ಭಾಗಿ ಆಗಿತ್ತು. ಇದನ್ನೂ ಓದಿ : ಕೆಜಿಎಫ್ 2 ಐವತ್ತು ದಿನ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ರಿಲೀಸ್ ಘೋಷಣೆ

    400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಐವತ್ತು ದಿನ ಪೂರೈಸಿರುವ ಕೆಜಿಎಫ್ 2 ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದೆ. ಬಾಲಿವುಡ್ ಮಂದಿಯನ್ನು ನಿದ್ದೆಗೆಡಿಸುವಂತೆ ಮಾಡಿದೆ. ಈಗಲೂ ಒಳ್ಳೆಯ ಗಳಿಕೆಯಲ್ಲೇ ಚಿತ್ರ ಸಾಗುತ್ತಿದೆ. ಬಹುಶಃ ನೂರು ದಿನಗಳನ್ನು ಪೂರೈಸಿದಾಗ ದೊಡ್ಡ ಮಟ್ಟದಲ್ಲಿ ಸಂಭ್ರಮಾಚಾರಣೆ ಮಾಡಬಹುದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.

  • ಜಗ್ಗೇಶ್ ಗೆ ಡಬಲ್ ಖುಷಿ : ವರಮಹಾಲಕ್ಷ್ಮೀ ಹಬ್ಬಕ್ಕೆ ರಾಘವೇಂದ್ರ ಸ್ಟೋರ್ಸ್

    ಜಗ್ಗೇಶ್ ಗೆ ಡಬಲ್ ಖುಷಿ : ವರಮಹಾಲಕ್ಷ್ಮೀ ಹಬ್ಬಕ್ಕೆ ರಾಘವೇಂದ್ರ ಸ್ಟೋರ್ಸ್

    ವರಸ ನಾಯಕ ಜಗ್ಗೇಶ್ ರಾಜ್ಯಸಭೆ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ಈ ಹೊತ್ತಲ್ಲಿ ಅವರ ವೃತ್ತಿ ಬದುಕಿನ ಮತ್ತೊಂದು ಆನಂದದ ಸುದ್ದಿ ಸಿಕ್ಕಿದೆ. ಅತ್ತ ರಾಜಕೀಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಜಗ್ಗೇಶ್, ಇತ್ತ ಸಿನಿಮಾ ರಂಗದಲ್ಲೂ ಮತ್ತೊಂದು ಮಹತ್ವದ ಸಿನಿಮಾವನ್ನು ಅಭಿಮಾನಿಗಳಿಗೆ ನೀಡುತ್ತಿದ್ದಾರೆ. ಇದನ್ನೂ ಓದಿ : ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

    ಜಗ್ಗೇಶ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನ ‘ರಾಘವೇಂದ್ರ ಸ್ಟೋರ್ಸ್’ ಸರ್ವ ರೀತಿಯಲ್ಲೂ ಸಿದ್ಧವಾಗಿದ್ದು, ಈ ಸಿನಿಮಾವನ್ನು ಮಹಾಲಕ್ಷ್ಮೀ ಹಬ್ಬದಂದು ರಿಲೀಸ್ ಮಾಡಲು ಹೊಂಬಾಳೆ ಫಿಲ್ಮ್ಸ್ ನಿರ್ಧಾರ ಮಾಡಿದೆ. ಆಗಸ್ಟ್ 5 ರಂದು ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಣ ಸಂಸ್ಥೆ ಹೇಳಿಕೊಂಡಿದೆ. ಇದನ್ನೂ ಓದಿ : ನಟ ಚೇತನ್ ಇಂದು ಕೋರ್ಟಿಗೆ ಹಾಜರ್

    ಜಗ್ಗೇಶ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಅನ್ನದ ಮಹತ್ವವನ್ನು ಹೇಳುವಂತ ಚಿತ್ರ ಇದಾಗಿದ್ದು, ಹಾಸ್ಯದ ರಸದೌತನವೇ ಈ ಸಿನಿಮಾದಲ್ಲಿ ಇರಲಿದೆಯಂತೆ. ಇದೇ ಮೊದಲ ಇಂತಹ ಪಾತ್ರವನ್ನು ನಿರ್ವಹಿಸಿದ್ದಾರಂತೆ ಜಗ್ಗೇಶ್.

  • ಹೊಂಬಾಳೆ ಫಿಲ್ಮಸ್ ಬಘೀರನಿಗೆ ಮೇ 20ಕ್ಕೆ ಮುಹೂರ್ತ – ಶ್ರೀಮುರುಳಿ ನಾಯಕ

    ಹೊಂಬಾಳೆ ಫಿಲ್ಮಸ್ ಬಘೀರನಿಗೆ ಮೇ 20ಕ್ಕೆ ಮುಹೂರ್ತ – ಶ್ರೀಮುರುಳಿ ನಾಯಕ

    ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ಈಗಾಗಲೇ ಘೋಷಣೆ ಆಗಿರುವ ಶ್ರೀಮುರುಳಿ ನಟನೆಯ ʼಬಘೀರʼ ಚಿತ್ರಕ್ಕೆ ಮೇ 20ರಂದು ಸಿಂಪಲ್ ಆಗಿ ಮುಹೂರ್ತ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಯಶ್ ನಟನೆಯ ‘ಲಕ್ಕಿ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಡಾ.ಸೂರಿ, ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಪ್ರಶಾಂತ್ ನೀಲ್ ಅವರು ಕಥೆ ಬರೆದಿದ್ದಾರೆ. ಇದನ್ನೂ ಓದಿ : ಮನೆಗೆ ಕರೆಯಿಸಿಕೊಳ್ಳುವಂಥ ಅರ್ಹತೆ ಬಾಲಿವುಡ್ ನಲ್ಲಿ ಯಾರಿಗೂ ಇಲ್ಲ : ಕಂಗನಾ ರಣಾವತ್

    ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಹಲವು ಚಿತ್ರಗಳನ್ನು ಘೋಷಣೆ ಮಾಡಿದೆ. ಸಂತೋಷ್ ಆನಂದ್ ರಾಮ್ ಜಗ್ಗೇಶ್‌ಗಾಗಿ ಒಂದು ಸಿನಿಮಾವನ್ನು ನಿರ್ದೇಶನ ಮಾಡಿದ್ದರೆ, ರಿಷಭ್ ಶೆಟ್ಟಿ ಕೂಡ ಮತ್ತೊಂದು ಚಿತ್ರಕ್ಕೆ ನಿರ್ದೇಶಕರಾಗಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಒಂದು ಚಿತ್ರವನ್ನು ನಿರ್ದೇಶನ ಮಾಡಬೇಕಿದೆ. ಈ ಸಿನಿಮಾಗೂ ಮುನ್ನ ಬಘೀರ ಸಿನಿಮಾ ಸೆಟ್ಟೇರುತ್ತಿದೆ. ಇದನ್ನೂ ಓದಿ : ಕಾನ್ ಫೆಸ್ಟಿವಲ್‌ನಲ್ಲಿ ತಾರೆಯರ ದಂಡು

    ಇದು ಹೊಂಬಾಳೆ ಬ್ಯಾನರ್‌ನಲ್ಲಿ ಮೂಡಿ ಬರುತ್ತಿರುವ ಎಂಟನೇ ಸಿನಿಮಾ. ಇದು ಪಕ್ಕಾ ಮಾಸ್ ಸಿನಿಮಾವಾಗಿದ್ದು, ವಿಭಿನ್ನ ಶೀರ್ಷಿಕೆಯಿಂದಾಗಿಯೇ ಕುತೂಹಲ ಮೂಡಿಸಿದೆ. ಈ ಚಿತ್ರಕ್ಕೆ ಶ್ರೀಮುರುಳಿ ಕೂಡ ಸಖತ್ ತಯಾರಿ ಆಗಿದ್ದಾರಂತೆ. ಎಂದಿನಂತೆ ಪ್ರಶಾಂತ್ ನೀಲ್ ಆಶಯದಂತೆಯೇ ಈ ಸಿನಿಮಾ ಮೂಡಿ ಬರುತ್ತಿರುವುದು ಮತ್ತೊಂದು ವಿಶೇಷ. ಇದನ್ನೂ ಓದಿ : ಇಂಡಸ್ಟ್ರಿಯಲ್ಲಿ ನಟಿಯರು ಎದುರಿಸುವ ಸವಾಲು ಬಿಚ್ಚಿಟ್ಟ ರಮ್ಯಾ

    ಈಗಾಗಲೇ ಲಕ್ಕಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಡಾ.ಸೂರಿ, ನಾಲ್ಕು ವರ್ಷಗಳಿಂದ ಯಾವುದೇ ಚಿತ್ರ ಮಾಡಿರಲಿಲ್ಲ. ಬಘೀರ ಮೂಲಕ ಮತ್ತೆ ಕಮ್ ಬ್ಯಾಕ್ ಆಗುತ್ತಿದ್ದಾರೆ. ಈಗಾಗಲೇ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಶ್ರೀಮುರುಳಿ ಹುಟ್ಟು ಹಬ್ಬದಂದು ವಿಶೇಷ ಪೋಸ್ಟರ್ ಮತ್ತು ಟೈಟಲ್ ರಿಲೀಸ್ ಮಾಡಲಾಗಿದೆ.