Tag: Bombay High Court

  • ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಮುಂಬೈ: ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅನಿಲ್ ದೇಶ್‌ಮುಖ್‌ (Anil Deshmukh) ಅವರಿಗೆ ಬಾಂಬೆ ಹೈಕೋರ್ಟ್ (Bombay High Court) ಇಂದು ಜಾಮೀನು ನೀಡಿದೆ. ಆದರೆ ಕೆಲವೇ ಹೊತ್ತಿನಲ್ಲಿ ತನ್ನ ಆದೇಶವನ್ನು 10 ದಿನಗಳವರೆಗೆ ತಡೆ ಹಿಡಿದಿದೆ.

    71 ವಯಸ್ಸಿನ ಅನಿಲ್‌ ದೇಶ್‌ಮುಖ್‌ ಅವರು ಅನಾರೋಗ್ಯದ ಸಮಸ್ಯೆ ಕಾರಣ ನೀಡಿ ಜಾಮೀನು ನೀಡುವಂತೆ ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ಕೋರ್ಟ್‌ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಸಂವಿಧಾನ ಉಳಿಸಲು ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ಮಾಜಿ ಸಚಿವ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

    ಎನ್‌ಸಿಪಿ ನಾಯಕನನ್ನು ನವೆಂಬರ್ 2, 2021 ರಂದು ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೂ ದೇಶ್‌ಮುಖ್‌ ಜೈಲಿನಲ್ಲಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಸಿಬಿಐ ಬಂಧಿಸಿದೆ. ನಂತರ ಕೊರೊನರಿ ಆಂಜಿಯೋಗ್ರಫಿಗಾಗಿ ಅವರನ್ನು ಅಕ್ಟೋಬರ್‌ನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    2021ರಲ್ಲಿ ಹಿರಿಯ ಐಪಿಎಸ್‌ ಅಧಿಕಾರಿ ಪರಮ್‌ಬೀರ್‌ ಸಿಂಗ್‌ (Param Bir Singh) ಅವರು, ಮುಂಬೈನಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಿಂಗಳಿಗೆ 100 ಕೋಟಿ ರೂ. ವಸೂಲಿ ಮಾಡಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಗೃಹ ಸಚಿವ ದೇಶ್‌ಮುಖ್‌ ಅವರು ಟಾರ್ಗೆಟ್‌ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ತನಿಖೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಇದನ್ನೂ ಓದಿ: ಮೊದಲ ಟೆಸ್ಟ್‌ನಿಂದ ರೋಹಿತ್ ಹೊರಕ್ಕೆ – ಕನ್ನಡಿಗ ಕ್ಯಾಪ್ಟನ್

    Live Tv
    [brid partner=56869869 player=32851 video=960834 autoplay=true]

  • ಭೀಮಾ ಕೋರೆಗಾಂವ್‌ ಪ್ರಕರಣ – ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು

    ಭೀಮಾ ಕೋರೆಗಾಂವ್‌ ಪ್ರಕರಣ – ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು

    ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ (Bhima Koregaon Case) ಡಾ. ಬಿ.ಆರ್.ಅಂಬೇಡ್ಕರ್‌ ಅವರ ಮೊಮ್ಮಗಳ ಪತಿ ಹಾಗೂ ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ (Anand Teltumbde) ಬಾಂಬೆ ಹೈಕೋರ್ಟ್ (Bombay High Court) ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಶ್ಯೂರಿಟಿ ಮೇಲೆ ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಲಾಗಿದೆ.

    ವಿಶೇಷ ಎನ್‌ಐಎ (NIA) ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ಆನಂದ್‌ ತೇಲ್ತುಂಬೆ ಕಳೆದ ವರ್ಷ ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಮತ ಹಾಕದಿದ್ದರೆ 2024ರ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಚಂದ್ರಬಾಬು ನಾಯ್ಡು

    ಭೀಮಾ ಕೋರೆಗಾಂವ್‌ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಭಾಷಣದ ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದರು.

    ಈ ಹಿಂಸಾಚಾರದಲ್ಲಿ ಓರ್ವ ಮೃತಪಟ್ಟು, ಹಲವರು ಗಾಯಗೊಂಡಿದ್ದರು. 12ಕ್ಕೂ ಹೆಚ್ಚು ಕಾರ್ಯಕರ್ತರು, ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಈ ಪ್ರಕರಣವನ್ನು ಸದ್ಯ ಎನ್‌ಐಎ ತನಿಖೆ ನಡೆಸುತ್ತಿದೆ.‌ ಇದನ್ನೂ ಓದಿ: ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವವರೆಗೂ ಭಾರತ ವಿಶ್ರಮಿಸಲ್ಲ – ಮೋದಿ

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ- ರೋಡ್ ರೋಮಿಯೋಗಳಿಗೆ ಕೋರ್ಟ್ ಖಡಕ್ ಎಚ್ಚರಿಕೆ

    ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ- ರೋಡ್ ರೋಮಿಯೋಗಳಿಗೆ ಕೋರ್ಟ್ ಖಡಕ್ ಎಚ್ಚರಿಕೆ

    ಮುಂಬೈ: ಅಪ್ರಾಪ್ತ ಬಾಲಕಿಯನ್ನು `ಐಟಂ’ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ 7 ವರ್ಷಗಳ ಬಳಿಕ 1.5 ವರ್ಷ ಜೈಲು ಶಿಕ್ಷೆ ವಿಧಿಸಿರುವ ಮುಂಬೈ ಕೋರ್ಟ್ (Mumbai Court), ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ ಎಂದು ರೋಡ್ ರೋಮಿಯೋಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.

    ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್‌ನ (Sessions Court) ವಿಶೇಷ ನ್ಯಾಯಾಧೀಶರಾದ ಎಸ್.ಜೆ ಅನ್ಸಾರಿ ಅವರ ನೇತೃತ್ವದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು. ಈ ವೇಳೆ `ಐಟಂ’ ಎಂಬ ಪದವು ಮಹಿಳೆಯರನ್ನು ಲೈಂಗಿಕ ರೀತಿಯಲ್ಲಿ ಆಕ್ಷೇಪಿಸುತ್ತದೆ. ಇದು ಐಪಿಸಿ (IPC) ಸೆಕ್ಷನ್ 354ರ ಅತಿರೇಖದ ವರ್ತನೆಯನ್ನು ಸೂಚಿಸುವ ಅಪರಾಧವಾಗಿದೆ ಎಂದು ಪರಿಗಣಿಸಿದೆ. ಇದನ್ನೂ ಓದಿ: ಮಹಿಳೆಯರ ನಗ್ನ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡ್ತಿದ್ದ ಆರೋಪಿ ಅರೆಸ್ಟ್

    ಹಾಗಾಗಿ ಅಪ್ರಾಪ್ತ ಬಾಲಕಿಯನ್ನು ಐಟಂ ಎಂದು ಕರೆದ ಉದ್ಯಮಿಯನ್ನು ಐಪಿಸಿ (IPC) ಸೆಕ್ಷನ್ 354 ಹಾಗೂ ಲೈಂಗಿಕ ಅಪರಾಧಗಳು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿ, 1.5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ ಮಹಿಳೆಯರನ್ನು (Womens) ರಕ್ಷಿಸಲು ಇಂತಹ ಕಠಿಣ ಅಪರಾಧ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತವಾಗಿದೆ ಎಂದು ನ್ಯಾಯಾಧೀಶರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ

    Law

    ಆರೋಪಿಯು `ಐಟಂ’ ಎಂಬ ಪದವನ್ನು ಬಳಸುವ ಮೂಲಕ ಆಕೆಯನ್ನು ಸಂಬೋಧಿಸಿದ್ದಾನೆ. ಇದು ಹುಡುಗಿಯರನ್ನು ಅವಹೇಳನಕಾರಿ ಶೈಲಿ ಸಂಬೋಧಿಸುವ ಸಾಮಾನ್ಯ ಪದವಾಗಿದೆ, ಜೊತೆಗೆ ಅತಿರೇಕದ ವರ್ತನೆಯನ್ನು ತೋರುತ್ತದೆ. ಇಂತಹ ಅಪರಾಧಗಳನ್ನು ಕಠಿಣ ಕ್ರಮಗಳ ಮೂಲಕ ನಿಭಾಯಿಸಬೇಕಿದೆ. ಜೊತೆಗೆ ರೋಡ್ ರೋಮಿಯೋಗಳಿಗೆ ತಕ್ಕಪಾಠ ಕಲಿಸುವ ಜೊತೆಗೆ ಮಹುಳೆಯರನ್ನು ರಕ್ಷಿಸಬೇಕಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಮೇಲಿನ ಎಲ್ಲ ಅಂಶಗಳನ್ನು ಪರಿಗಣಿಸಿ ಆರೋಪಿಗೆ 1.5 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್ 2015ರಲ್ಲಿ ನಡೆದ ಘಟನೆಗೆ ಈಗ ಶಿಕ್ಷೆ ವಿಧಿಸಿದೆ. 2015ರಂದು ಅಪ್ರಾಪ್ತ ಬಾಲಕಿ ಶಾಲೆಯಿಂದ ಹಿಂದಿರುಗುತ್ತಿದ್ದಾಗ ಉದ್ಯಮಿಯೊಬ್ಬ ಬಾಲಕಿಯನ್ನು ಐಟಂ ಎಂದು ಸಂಬೋಧಿಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು, ಇದೀಗ ಕೋರ್ಟ್ ಶಿಕ್ಷೆ ವಿಧಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನಾಪತ್ತೆಯಾಗಿರೋ ಸಂತ್ರಸ್ತೆಯೊಂದಿಗೆ ವರ್ಷದೊಳಗೆ ಮದ್ವೆಯಾಗ್ಬೇಕು- ರೇಪ್ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ

    ನಾಪತ್ತೆಯಾಗಿರೋ ಸಂತ್ರಸ್ತೆಯೊಂದಿಗೆ ವರ್ಷದೊಳಗೆ ಮದ್ವೆಯಾಗ್ಬೇಕು- ರೇಪ್ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ

    ಮುಂಬೈ: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ (Bombay High Court) ಜಾಮೀನು ಮಂಜೂರು ಮಾಡಿದೆ. ಆದರೆ ಆತನಿಗೆ ನಾಪತ್ತೆಯಾಗಿರುವ ಸಂತ್ರಸ್ತ (Victim) ಯುವತಿಯೊಂದಿಗೆ 1 ವರ್ಷದೊಳಗೆ ಮದುವೆಯಾಗಬೇಕು (Marriage) ಎಂದು ಷರತ್ತು ವಿಧಿಸಿದೆ.

    ಹೌದು, ಅತ್ಯಾಚಾರ ಆರೋಪಿ (Rape Accused) 22 ವರ್ಷದ ಯುವತಿಯೊಂದಿಗೆ ಸಮ್ಮತಿಯ ಸಂಬಂಧದಲ್ಲಿಯೇ ಇದ್ದರು. ಆದರೆ ಆಕೆ ಗರ್ಭಿಣಿಯಾಗಿದ್ದನ್ನು ತಿಳಿದ ಯುವಕ ಬಳಿಕ ಆಕೆಯನ್ನು ನಿರ್ಲಕ್ಷಿಸಲು ಪ್ರಾರಂಭಿಸಿದ್ದ. ಇದರಿಂದ ಬೇಸತ್ತ ಯುವತಿ ಅತ್ಯಾಚಾರ ಹಾಗೂ ವಂಚನೆ ಪ್ರಕರಣವನ್ನು ದಾಖಲಿಸಿದ್ದಳು.

    ಯುವತಿ 2020ರ ಫೆಬ್ರವರಿಯಲ್ಲಿ ಯುವಕನ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದಳು. ಆಕೆ ನೀಡಿದ ದೂರಿನಲ್ಲಿ ಅವರು 2018ರಿಂದ ಸಂಬಂಧ ಹೊಂದಿದ್ದು, ಈ ವಿಚಾರ ತಮ್ಮ ಕುಟುಂಬಗಳಿಗೂ ತಿಳಿದಿತ್ತು. ಯಾವುದೇ ವಿರೋಧವೂ ಇರಲಿಲ್ಲ ಎಂದು ತಿಳಿಸಿದ್ದಳು. ಆಕೆಯ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

    ಯುವತಿ ತಾನು ಗರ್ಭಿಣಿ ಎಂಬುದನ್ನು ತಿಳಿದು, ಅದನ್ನು ಆರೋಪಿಗೆ ತಿಳಿಸಿದ ಬಳಿಕ ಆತ ಅವಳನ್ನು ನಿರ್ಲಕ್ಷಿಸಲು ಪ್ರಾರಂಭಿಸಿದ್ದಾನೆ. ತನ್ನ ಗರ್ಭಾವಸ್ಥೆಯ ಬಗ್ಗೆ ಕುಟುಂಬದ ಸದಸ್ಯರಿಗೆ ತಿಳಿಸಲು ಇಷ್ಟಪಡದ ಕಾರಣ ಆಕೆ ತನ್ನ ಮನೆಯನ್ನು ತೊರೆದಿದ್ದಳು. 2020ರ ಜನವರಿ 27ರಂದು ಆಕೆ ನಗರದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮವನ್ನೂ ನೀಡಿದ್ದಳು. ಇದನ್ನೂ ಓದಿ: ದೀಪಾವಳಿಗೆ ಸಿಹಿ ಸುದ್ದಿ- ರೈತರ ಖಾತೆಗೆ 2 ಸಾವಿರ ಹಣ ಬಿಡುಗಡೆ ಮಾಡಿದ ಪ್ರಧಾನಿ

    ಬಳಿಕ ಜನವರಿ 30ರಂದು ಸಂತ್ರಸ್ತ ಯುವತಿ ಮಗುವನ್ನು ಕಟ್ಟಡವೊಂದರ ಮುಂದೆ ಬಿಟ್ಟು ಹೋಗಿದ್ದಳು. ಆಕೆ ಮಗುವನ್ನು ತ್ಯಜಿಸಿದಕ್ಕಾಗಿ ಆಕೆಯ ವಿರುದ್ಧ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

    ಇದೆಲ್ಲದರ ಬಳಿಕ ಆರೋಪಿ ಯುವತಿಯನ್ನು ಮದುವೆಯಾಗಲು ಹಾಗೂ ಮಗುವಿನ ಪಿತೃತ್ವವನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದು ಹೈಕೋರ್ಟ್‌ಗೆ ಭರವಸೆ ನೀಡಿದ್ದಾನೆ. ಆದರೆ ಯುವತಿ ನಾಪತ್ತೆಯಾಗಿದ್ದು, ಮಗುವನ್ನು ಈಗಾಗಲೇ ಶಿಶುಪಾಲನಾ ಕೇಂದ್ರದಿಂದ ದತ್ತು ನೀಡಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್

    ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ವಯಸ್ಕರಾಗಿದ್ದು, ಇಬ್ಬರ ಸಂಬಂಧ ಒಮ್ಮತದಿಂದ ಕೂಡಿದ್ದರಿಂದ ಆರೋಪಿಗೆ ಜಾಮೀನು ನೀಡಲಾಗಿದೆ. ಸಂತ್ರಸ್ತೆಯನ್ನು 1 ವರ್ಷದೊಳಗೆ ಹುಡುಕಿ ಮದುವೆಯಾಗಬೇಕು. ಆದರೆ 1 ವರ್ಷದ ನಂತರದ ಹೇಳಿಕೆ ಬದ್ಧರಾಗಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಶೀಲ್ಡ್ ಪಡೆದು ಪುತ್ರಿ ಸಾವು – ಬಿಲ್‌ಗೇಟ್ಸ್ ವಿರುದ್ಧ 1,000 ಕೋಟಿ ಪರಿಹಾರಕ್ಕಾಗಿ ತಂದೆಯ ಕಾನೂನು ಹೋರಾಟ

    ಕೋವಿಶೀಲ್ಡ್ ಪಡೆದು ಪುತ್ರಿ ಸಾವು – ಬಿಲ್‌ಗೇಟ್ಸ್ ವಿರುದ್ಧ 1,000 ಕೋಟಿ ಪರಿಹಾರಕ್ಕಾಗಿ ತಂದೆಯ ಕಾನೂನು ಹೋರಾಟ

    ಮುಂಬೈ: ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದು ಅದರ ಅಡ್ಡ ಪರಿಣಾಮಗಳಿಂದ ತಮ್ಮ ಪುತ್ರಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ದಿಲೀಪ್ ಲುನಾವತ್ ಎನ್ನುವವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್‌ಗೇಟ್ಸ್‌‌ಗೆ ನೋಟಿಸ್ ಜಾರಿ ಮಾಡಿದೆ.

    ಕೋವಿಡ್ ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ದೇಹಕ್ಕೆ ಯಾವುದೇ ಅಪಾಯ ಅಥವಾ ತೊಂದರೆಗಳನ್ನು ಉಂಟುಮಾಡುವುದಿಲ್ಲ ಎಂದು ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ತಮ್ಮ ಪುತ್ರಿ ಸ್ನೇಹಲ್ ಲುನಾವತ್ ಅವರಿಗೆ ವೈದ್ಯರು ಭರವಸೆ ನೀಡಿದ್ದರು. ಇದನ್ನು ನಂಬಿ ವ್ಯಾಕ್ಸಿನ್ ಪಡೆದು ಸಾವನ್ನಪ್ಪಿದ್ದಾಳೆ. ಹೀಗಾಗಿ 1,000 ಕೋಟಿ ಪರಿಹಾರ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸಲು ಅರ್ಜಿ – ಛೀಮಾರಿ ಹಾಕಿ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

    ಕೋವಿಶೀಲ್ಡ್ ವ್ಯಾಕ್ಸಿನ್ ಅನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಶೋಧನೆ ಮಾಡಿದೆ. ಇದಕ್ಕೆ ಬಿಲ್‌ಗೇಟ್ಸ್ ಫೌಂಡೇಶನ್ ಆರ್ಥಿಕ ನೆರವು ನೀಡಿದೆ. ಈ ವ್ಯಾಕ್ಸಿನ್ ಪಡೆದು ಮಗಳು ಸಾವನ್ನಪ್ಪಿದ್ದಾಳೆ. ಎಇಎಫ್‌ಐ ಸಮಿತಿಯು ಕೋವಿಶೀಲ್ಡ್‌ನ ಅಡ್ಡಪರಿಣಾಮಗಳಿಂದ ಯುವತಿಯ ಸಾವು ಸಂಭವಿಸಿದೆ ಎಂದು ಒಪ್ಪಿಕೊಂಡಿದೆ. ಹೀಗಾಗಿ ಪರಿಹಾರ ನೀಡಬೇಕು ಎಂದು ಕೋರಿದ್ದಾರೆ.

    ಇನ್ನು ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ, ಕೇಂದ್ರ ಆರೋಗ್ಯ ಇಲಾಖೆ, ಟಾಸ್ಕ್ ಫೋರ್ಸ್ ಸದಸ್ಯ ಡಾ.ರಣದೀಪ್ ಗುಲೇರಿಯಾ, ಡಿಜಿಸಿಐ ಹಾಗೂ ಬಿಲ್‌ಗೇಟ್ಸ್ ಅವರನ್ನು ಅರ್ಜಿದಾರ ದಿಲೀಪ್ ಲುನಾವತ್ ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಅಲ್ಲದೇ ಲಸಿಕೆ ಅಡ್ಡ ಪರಿಣಾಮಗಳಿಂದಾಗುವ ಸಾವುಗಳ ಬಗ್ಗೆ ಸರಿಯಾದ ಡೇಟಾವನ್ನು ಸಂಗ್ರಹಿಸುವಲ್ಲಿ ಪಿತೂರಿ ಮಾಡಿರುವ ಗೂಗಲ್, ಯೂಟ್ಯೂಬ್, ಮೆಟಾ ಮುಂತಾದ ಸಾಮಾಜಿಕ ಮಾಧ್ಯಮ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ಕೋರಿದರು. ಇದನ್ನೂ ಓದಿ: ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಮೋದಿ ಚಾಲನೆ

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ವಿ.ಗಂಗಾಪುರವಾಲಾ ಮತ್ತು ಮಾಧವ್ ಜಾಮ್‌ದಾರ್ ಅವರ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಬಿಲ್‌ಗೇಟ್ಸ್ ಪರವಾಗಿ ವಕೀಲ ಸ್ಮಿತಾ ಠಾಕೂರ್ ನೋಟಿಸ್ ಸ್ವೀಕರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಮುಂಬೈ: ಯುವತಿಯೊಬ್ಬಳು ಸ್ನೇಹಿತೆಯಾದ ಮಾತ್ರಕ್ಕೆ ಆಕೆಯೊಂದಿಗೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

    ಮದುವೆಯಾಗುವ ನೆಪದಲ್ಲಿ ಯುವತಿ ಗರ್ಭ ಧರಿಸುವಂತೆ ಮಾಡಿ ಬಂಧನಕ್ಕೆ ಒಳಗಾಗಿರುವ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋಟ್ ತಿರಸ್ಕರಿಸಿದೆ. ಇದನ್ನೂ ಓದಿ: IND Vs SA T20 – ರದ್ದಾದ ಪಂದ್ಯದ ಶೇ.50 ರಷ್ಟು ಟಿಕೆಟ್ ಹಣ ಜುಲೈ 1ರಿಂದ ವಾಪಸ್

    court order law

    ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಮುಂಬೈ ನಗರದ ನಿವಾಸಿ ಆಶಿಷ್ ಚಾಕೋರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠವು ಜಾಮೀನು ನೀಡಲು ನಿರಾಕರಿಸಿದೆ.

    STOP RAPE

    ಸ್ನೇಹದಿಂದ ಇರುವುದನ್ನೇ ನೆಪವಾಗಿಟ್ಟುಕೊಂಡು ಲೈಂಗಿಕ ಸಂಬಂಧಕ್ಕೆ ಆಕೆಯ ಒಪ್ಪಿಗೆ ಇದೆ ಎಂದು ತಾನೆ ಅಂದುಕೊಳ್ಳುವಂತಿಲ್ಲ. ಹೀಗಾಗಿ ಆರೋಪಿಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ

    ಈ ಬಗ್ಗೆ ಹೇಳಿಕೆ ನೀಡಿರುವ ಸಂತ್ರಸ್ತೆ, ಚಾಕೋರ್ ಜೊತೆ ಸ್ನೇಹದಿಂದ ಇದ್ದೆ, ನಂತರದ ದಿನಗಳಲ್ಲಿ ಆತ ನನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ್ದಾನೆ. ನಾನು ಗರ್ಭಿಣಿ ಆಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಆರೋಪದಿಂದ ಮುಕ್ತಗೊಳ್ಳಲು ಆತ ನನಗೂ ಸಹ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಇದೆ ಎಂದು ಹೇಳಿರುವುದಾಗಿ ಹೇಳಿಕೆ ನೀಡಿದ್ದಾಳೆ.

    Live Tv

  • ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್

    ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್

    ಮುಂಬೈ: ವಿದ್ಯಾವಂತೆ ಎನ್ನುವ ಕಾರಣಕ್ಕೆ ಮಹಿಳೆಯನ್ನು ಜೀವನ ನಿರ್ವಹಣೆಗೆ ದುಡಿಯುವಂತೆ ಒತ್ತಾಯಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    ಪುಣೆಯ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಅರ್ಜಿಯಲ್ಲಿ ವಿಚ್ಛೇದಿತ ಪತ್ನಿ ಪ್ರಸ್ತುತ ಸ್ಥಿರ ಆದಾಯದ ಮೂಲ ಹೊಂದಿದ್ದಾರೆ. ಆದರೆ ನ್ಯಾಯಾಲಯದಿಂದ ಸತ್ಯವನ್ನು ಮರೆಮಾಚಿದ್ದಾರೆ ಎಂದೂ ಆರೋಪಿಸಿದ್ದರು. ಇದನ್ನೂ ಓದಿ: ರಾಯಚೂರಿನ ನೀರಿನ ಟ್ಯಾಂಕ್ 25 ವರ್ಷಗಳಿಂದ ಸ್ವಚ್ಛತೆಯನ್ನೇ ಕಂಡಿಲ್ಲ!

    ಈ ಕುರಿತು ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಹಿಳೆ ಶೈಕ್ಷಣಿಕ ಪದವಿ, ಅರ್ಹತೆ ಹೊಂದಿದ್ದರೂ ಕೆಲಸ ಮಾಡಬಹುದು ಇಲ್ಲವೇ ಮನೆಯಲ್ಲೇ ಉಳಿಯುವ ಆಯ್ಕೆ ಮಾಡಿಕೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

    ಮನೆಯ ಮಹಿಳೆ ಆರ್ಥಿಕವಾಗಿ ಕೊಡುಗೆ ನೀಡಬೇಕು ಎಂಬುದನ್ನು ನಮ್ಮ ಸಮಾಜ ಇನ್ನೂ ಒಪ್ಪಿಕೊಂಡಿಲ್ಲ. ಏಕೆಂದರೆ ಅದು ಮಹಿಳೆಯ ಆಯ್ಕೆಯಾಗಿದೆ. ಆದ್ದರಿಂದ ಕೆಲಸಕ್ಕೆ ಹೋಗುವಂತೆ ಒತ್ತಾಯಿಸಲಾಗುವುದಿಲ್ಲ. ಪದವೀಧರಳು ಎಂಬ ಕಾರಣಕ್ಕೆ ಕುಳಿತುಕೊಳ್ಳಬಾರದು ಎಂದು ಹೇಳಲು ಸಾಧ್ಯವಿಲ್ಲ. ಉದಾಹರಣೆಗೆ `ನಾನಿಂದು ನ್ಯಾಯಧೀಶನಾಗಿದ್ದೇನೆ, ನಾಳೆ ಮನೆಯಲ್ಲೇ ಕುಳಿತುಕೊಳ್ಳಬಹುದು. ಆಗ ನಾನು ನ್ಯಾಯಾಧೀಶನಾಗಲು ಅರ್ಹನಾಗಿದ್ದೇನೆ ಮನೆಯಲ್ಲಿ ಕುಳಿತುಕೊಳ್ಳಬಾರದು’ ಎಂದು ಹೇಳುತ್ತೀರಾ ಎಂದು ಪ್ರಶ್ನಿಸಿದೆ.

    ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಕೌಟುಂಬಿಕ ನ್ಯಾಯಾಲಯವು ಆಕೆ ಪತಿಯೊಂದಿಗೆ ವಿಚ್ಛೇದನ ಪಡೆದ ನಂತರ ಜೀವನಾಂಶ ಪಡೆಯುವ ಸಾಮರ್ಥ್ಯ ಹೊಂದಿರುತ್ತಾಳೆ ಎಂದು ಹೇಳಿದೆ. ಜೊತೆಗೆ ಅರ್ಜಿದಾರರು ಪತ್ನಿಗೆ ಪ್ರತಿ ತಿಂಗಳು 5 ಸಾವಿರ ಹಾಗೂ ಪ್ರಸ್ತುತ 13 ವರ್ಷದ ಮಗಳು ತಾಯಿಯೊಂದಿಗೆ ವಾಸಿಸುತ್ತಿರುವುದರಿಂದ ಮಗಳ ನಿರ್ವಹಣೆಗಾಗಿ 7 ಸಾವಿರ ಪಾವತಿಸಲು ನ್ಯಾಯಾಲಯ ಸೂಚಿಸಿದೆ.

    ಹೆಚ್ಚಿನ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದೆ.

  • 16ರ ಹುಡುಗಿ ಮೇಲೆ ಅತ್ಯಾಚಾರ- ಕಾಂಡೋಮ್ ಬಳಸಿದ್ದಕ್ಕಾಗಿ ಜಾಮೀನು ಕೊಟ್ಟ ಹೈಕೋರ್ಟ್

    16ರ ಹುಡುಗಿ ಮೇಲೆ ಅತ್ಯಾಚಾರ- ಕಾಂಡೋಮ್ ಬಳಸಿದ್ದಕ್ಕಾಗಿ ಜಾಮೀನು ಕೊಟ್ಟ ಹೈಕೋರ್ಟ್

    ಮುಂಬೈ: 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

    2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ ಪೊಲೀಸರು ಬಂಧನದಲ್ಲಿರಿಸಿದ್ದ ಆರೋಪಿಯ ಜಾಮೀನು ಅರ್ಜಿಯನ್ನು ಏಕ-ನ್ಯಾಯಾಧೀಶ ಪೀಠದ ಸಿ.ವಿ.ಭದಂಗ್ ವಿಚಾರಣೆ ನಡೆಸಿ, ಜಾಮೀನು ನೀಡಲು ಮುಂದಾಗಿದ್ದಾರೆ. ಆರೋಪಿಯು 2 ವರ್ಷಕ್ಕಿಂತ ಹೆಚ್ಚು ಕಾಲ ಪೊಲೀಸ್ ಬಂಧನದಲ್ಲಿದ್ದಾನೆ ಎಂಬುದನ್ನು ಪರಿಗಣಿಸಿ 25,000 ರೂ. ಶ್ಯೂರಿಟಿಯೊಂದಿಗೆ ಅವರಿಗೆ ಜಾಮೀನು ನೀಡಲಾಗಿದೆ. ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    STOP RAPE

    ಸಂತ್ರಸ್ತೆಗೆ 16 ವರ್ಷ 6 ತಿಂಗಳ ವಯಸ್ಸಾಗಿದ್ದರಿಂದ ಮತ್ತು ಆಕೆಗೆ ಕ್ರಿಯೆಯ ಪರಿಣಾಮಗಳ ಬಗ್ಗೆ ಅರಿವಿದೆ ಎಂದು ಗಮನಿಸುವುದು ಅವಶ್ಯವಾಗಿದೆ. ಇದರಲ್ಲಿ ಯಾವುದೇ ಬಲವಂತದ ಅಂಶಗಳಿಲ್ಲ ಎಂದು ಸೂಚಿಸುವ ಸಂದರ್ಭಗಳಿವೆ. ಅಲ್ಲದೆ ವೈದ್ಯಕೀಯ ವರದಿಯ 15 (F)ರ ಪ್ರಕಾರ ಅರ್ಜಿದಾರರು ಸಂಭೋಗದ ವೇಳೆ ರಕ್ಷಣೆ (ಕಾಂಡೋಮ್) ಸಹ ಬಳಸಿದ್ದಾರೆಂಬುದನ್ನು ಎಂಬಿತ್ಯಾದಿ ಅಂಶಗಳನ್ನು ನ್ಯಾಯಾಲಯ ಗುರುತಿಸಿದೆ.

    ಸಂತ್ರಸ್ತೆ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಎ.ಆರ್.ಕಪಾಡ್ನಿಸ್ ಪ್ರಕಾರ, ಸಂತ್ರಸ್ತೆಯ ತಂದೆ ಎಫ್‌ಐಆರ್ ದಾಖಲಿಸಿದಾಗ ಆಕೆಗೆ 16 ವರ್ಷ 6 ತಿಂಗಳ ವಯಸ್ಸು. ಆರೋಪಿಯು ಆಕೆಗೆ ಮುಂಚೆಯೇ ಪರಿಚಯವಿದ್ದರಿಂದ 2019ರ ಮೇ ತಿಂಗಳಲ್ಲಿ ಹುಡುಗಿಯನ್ನು ತನ್ನ ಮನೆಯ ಹಿಂದೆ ಕರೆದೊಯ್ದಿದ್ದಾನೆ. ಆಕೆಯನ್ನು ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ವಾದಿಸಿದ್ದರು. ಆಕೆಯನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪ್ರಾಪ್ತೆ ಎಂದೂ ಉಲ್ಲೇಖಿಸಿದ್ದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

    crime

    ಇದು ಕೆಲವು ತಿಂಗಳ ಕಾಲ ಮುಂದುವರಿಯಿತು. ಅಂತಿಮವಾಗಿ ಸಂತ್ರಸ್ತೆಯ ತಂದೆ ಸಂಬಂಧದ ಬಗ್ಗೆ ತಿಳಿದುಕೊಂಡು ಆರೋಪಿಯ ವಿರುದ್ಧ FIR ದಾಖಲಿಸಿದರು. ಆರೋಪಿ ಪರ ವಾದ ಮಂಡಿಸಿದ ವಕೀಲ ಪರಸ್ ಯಾದವ್, ಸಂತ್ರಸ್ತೆ ಅಪ್ರಾಪ್ತ ವಯಸ್ಸಿನವಳಾಗಿದ್ದರೂ ಆಕೆಗೆ ವಯಸ್ಸಾಗಿರುವುದರಿಂದ ಕೃತ್ಯದ ಸ್ವರೂಪ ಮತ್ತು ಪರಿಣಾಮಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾಳೆ. ಈ ಸಂಬಂಧವು ಒಮ್ಮತದಿಂದ ಕೂಡಿದೆ ಎಂದು ಸೂಚಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

    ವಾದ – ಪ್ರತಿವಾದಗಳನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಯ ಪರ ವಾದವನ್ನು ಸ್ವೀಕರಿಸಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

  • ಸಲ್ಮಾನ್ ಖಾನ್‌ಗೆ ಮತ್ತೆ ಕೋರ್ಟ್ ಸಂಕಷ್ಟ: ಫೋನ್ ಕಿತ್ತುಕೊಂಡ ಪ್ರಕರಣಕ್ಕೆ ಸಲ್ಲು ಕಟಕಟೆಯಲ್ಲಿ

    ಸಲ್ಮಾನ್ ಖಾನ್‌ಗೆ ಮತ್ತೆ ಕೋರ್ಟ್ ಸಂಕಷ್ಟ: ಫೋನ್ ಕಿತ್ತುಕೊಂಡ ಪ್ರಕರಣಕ್ಕೆ ಸಲ್ಲು ಕಟಕಟೆಯಲ್ಲಿ

    ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಯಾವಾಗಲೂ ತಮ್ಮ ಟೆರರ್ ಮಾತು, ಕೋಪಕ್ಕೆ ಬಿ’ಟೌನ್‌ನಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಯಾವಾಗಲೂ ಸಿಡಿ-ಸಿಡಿ ಎನ್ನುವ ಸಲ್ಲು, ಆ ಕಾರಣಕ್ಕಾಗಿಯೇ ಟ್ರೋಲ್‌ಗೆ ಗುರಿ ಆಗುತ್ತಾರೆ. ಈಗ ಪತ್ರಕರ್ತರ ಫೋನ್ ಕಿತ್ತುಕೊಂಡಿದ್ದಕ್ಕೆ ಸಲ್ಲುಭಾಯ್ ಬಾಂಬೆ ಹೈಕೋರ್ಟ್ ನಲ್ಲಿ ನಿಲ್ಲುವಂತಾಗಿದೆ.

    ಸಲ್ಮಾನ್‌ಗೆ ಕಾನೂನು ಸಂಬಂಧಿಸಿ ತೊಂದರೆಗಳು ಎಂದಿಗೂ ಮುಗಿಯುವುದಿಲ್ಲ ಎನ್ನುವಂತೆ ಇತ್ತೀಚೆಗಷ್ಟೇ ತಮ್ಮ ಪನ್ವೆಲ್ ಫಾರ್ಮ್‍ಹೌಸ್ ಮತ್ತು ಕೃಷ್ಣಮೃಗ ಪ್ರಕರಣದಲ್ಲಿ ಸಲ್ಲು ಸಿಲುಕಿಕೊಂಡಿದ್ದರು. ಈ ಮಧ್ಯೆ ಮತ್ತೊಂದು ಕಾನೂನು ವಿವಾದ ಇವರಿಗೆ ತಳಕು ಹಾಕಿಕೊಂಡಿದೆ. ಸಲ್ಲು 2019ರಲ್ಲಿ ಪತ್ರಕರ್ತರ ಫೋನ್ ಕಿತ್ತುಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸಲ್ಮಾನ್ ಅವರನ್ನು ಏಪ್ರಿಲ್ 5 ರಂದು ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಬ್ಲಾಕ್ ಹಾಟ್ ಗೌನ್ ನಲ್ಲಿ ರಿಚಾ ಚಡ್ಡಾ : ಪಡ್ಡೆಗಳ ರಾಣಿಜೇನಿನ ಹಾಟ್ ಫೋಟೋ ಶೂಟ್

    salman khan

    ಮುಂಬೈನ ಅಂಧೇರಿಯಲ್ಲಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾಗುವುದನ್ನು ತಪ್ಪಿಸಿಕೊಳ್ಳಲು ಸಲ್ಲು ತನಗೆ ನೀಡಲಾದ ಸಮನ್ಸ್ ವಿರುದ್ಧ ಬಾಂಬೆ ಹೈಕೋರ್ಟ್ ಗೆ ಮೊರೆ ಹೋಗಿದ್ದಾರೆ. 2019ರಲ್ಲಿ ಪತ್ರಕರ್ತರು ನೀಡಿದ ದೂರಿನ ಮೇರೆಗೆ ಸಲ್ಮಾನ್ ಹಾಗೂ ಅವರ ಅಂಗರಕ್ಷಕ ನವಾಜ್ ಶೇಖ್‌ಗೆ  ‘ಸಮನ್ಸ್’ ನೀಡಲಾಗಿದೆ.

    ನಿಜವಾಗಲು ನಡೆದಿದ್ದೇನು?
    ಮುಂಬೈನ ಬೀದಿಗಳಲ್ಲಿ ಸಲ್ಮಾನ್ ಖಾನ್ ಸೈಕಲ್ ಸವಾರಿ ಮಾಡುತ್ತಿದ್ದಾಗ ಮಾಧ್ಯಮಗಳು ಫೋಟೋ ಸೆರೆ ಹಿಡಿಯಲು ಪ್ರಯತ್ನಿಸಿದ್ದವು. ಇದರಿಂದ ಕೋಪಗೊಂಡಿದ್ದ ಸಲ್ಲು ಮಾಧ್ಯಮದವರ ಜೊತೆ ತೀವ್ರ ವಾಗ್ವಾದಕ್ಕಿಳಿದರು. ಈ ವೇಳೆ ಪತ್ರಕರ್ತರ ಮೊಬೈಲ್ ಕಸಿದುಕೊಂಡಿದ್ದಾರೆ ಎನ್ನಲಾಗಿದೆ.

    ನಗರದ ಡಿಎನ್ ನಗರ ಪೊಲೀಸ್ ಠಾಣೆಯಿಂದ ಈ ವಿಷಯ ಬೆಳಕಿಗೆ ಬಂದಿದ್ದು, ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ವರದಿಯನ್ನು ಸಲ್ಲಿಸಿದ್ದಾರೆ. ಘಟನೆಯ ದಿನದಂದು ದೂರುದಾರರು ಮತ್ತು ಸಲ್ಮಾನ್, ನವಾಜ್ ಶೇಖ್ ನಡುವೆ ವಾಗ್ವಾದ ಸಂಭವಿಸಿದೆ. ಈ ವೇಳೆ ಸಲ್ಮಾನ್, ನವಾಜ್ ಶೇಖ್ ವರದಿಗಾರರ ಫೋನ್ ಕಿತ್ತುಕೊಂಡಿದ್ದಾರೆ ಎಂದು ವರದಿ ಮಾಡಿದ್ದಾರೆ. ಇದನ್ನೂ ಓದಿ: ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದು ಹೇಳಿ ನಾಚಿ ನೀರಾದ ಆಲಿಯಾ 

    ತನಿಖಾಧಿಕಾರಿಯು ಸೆಕ್ಷನ್ 504(ಉದ್ದೇಶಪೂರ್ವಕವಾಗಿ), 506(ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಹಾಗಾಗಿ ಸಲ್ಮಾನ್ ಖಾನ್ ಬಾಂಬೆ ಹೈಕೋರ್ಟ್ ಸಂಪರ್ಕಿಸುವಂತೆ ಮಾಡಿದೆ.

  • ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಲೈಂಗಿಕ ದೌರ್ಜನ್ಯ – ವಿವಾದಿತ ತೀರ್ಪು ನೀಡಿದ್ದ ಜಡ್ಜ್‌ ರಾಜೀನಾಮೆ

    ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಲೈಂಗಿಕ ದೌರ್ಜನ್ಯ – ವಿವಾದಿತ ತೀರ್ಪು ನೀಡಿದ್ದ ಜಡ್ಜ್‌ ರಾಜೀನಾಮೆ

    ಮುಂಬೈ: ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲಾಗುವುದು ಎಂದು ತೀರ್ಪು ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ ಪುಷ್ಪಾ ಗಣೇಡಿವಾಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಪುಷ್ಪಾ ಅವರು ಪ್ರಸ್ತುತ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿದ್ದಾರೆ. ಅವರ ಅಧಿಕಾರವಧಿ ಶುಕ್ರವಾರ ಕೊನೆಗೊಳ್ಳಬೇಕಿತ್ತು. ಆದರೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಅವರ ಅಧಿಕಾರವಧಿಯನ್ನು ವಿಸ್ತರಿಸಿರಲಿಲ್ಲ, ಬಡ್ತಿಯನ್ನೂ ನೀಡಿರಲಿಲ್ಲ. ತಮ್ಮ ಅಧಿಕಾರವಧಿ ಮುಗಿಯುವುದಕ್ಕೆ ಒಂದು ದಿನದ ಮೊದಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಬೇಕು, ಹಿಜಬ್ ಅಲ್ಲ : ಬಿಸ್ವಾ ಶರ್ಮಾ

    2021ರ ಜನವರಿಯಲ್ಲಿ ಅವರು ನೀಡಿದ ವಿವಾದಿತ ತೀರ್ಪುಗಳ ನಂತರ, ಸುಪ್ರೀಂ ಕೋರ್ಟ್‌ ಕೊಲಿಜಿಯಂ, ಗಣೇಡಿವಾಲ ಅವರನ್ನು ಖಾಯಂ ನ್ಯಾಯಮೂರ್ತಿಯನ್ನಾಗಿ ನೇಮಿಸುವ ತನ್ನ ಶಿಫಾರಸನ್ನು ಹಿಂತೆಗೆದುಕೊಂಡಿತು. ಬದಲಿಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಅವರ ಅಧಿಕಾರವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿತು.

    ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ, ಚರ್ಮಕ್ಕೆ ಚರ್ಮ ತಾಗಿದರೆ ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯ ಎಂದು ತೀರ್ಪು ನೀಡಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ನಾಪತ್ತೆಯಾಗಿದ್ದ ದಲಿತ ಮಹಿಳೆ ಶವವಾಗಿ ಹೂತಿಟ್ಟ ಸ್ಥಿತಿಯಲ್ಲಿ ಮಾಜಿ ಸಚಿವ ಆಶ್ರಮದ ಬಳಿ ಪತ್ತೆ!

    ಹೆಣ್ಣು ಮಗು ಮೈ ಸವರಿದ ಆರೋಪಿಗೆ ನ್ಯಾಯಮೂರ್ತಿ ಪುಷ್ಪಾ ಅವರು ಜಾಮೀನು ಮಂಜೂರು ಮಾಡಿದ್ದರು. ಪೋಕ್ಸೊ ಕಾಯ್ದೆ ಅಡಿಯಲ್ಲಿನ ಪ್ರಕರಣದ ವಿಚಾರಣೆಯನ್ನು ಅವರು ನಡೆಸಿದ್ದರು. ಚರ್ಮಕ್ಕೆ ಚರ್ಮ ತಾಗಿಲ್ಲ. ಹೀಗಾಗಿ ಇದನ್ನು ಲೈಂಗಿಕ ದೌರ್ಜನ್ಯ ಎಂದು ಹೇಳಲಾಗದು ಎಂದು ತೀರ್ಪು ನೀಡಿದ್ದರು.