Tag: bombing

  • ಉಕ್ರೇನ್ ಬಿಕ್ಕಟ್ಟು- ಶಾಲೆಯ ಮೇಲೆ ರಷ್ಯಾ ಬಾಂಬ್ ದಾಳಿ, 60 ಮಂದಿ ಸಾವು

    ಉಕ್ರೇನ್ ಬಿಕ್ಕಟ್ಟು- ಶಾಲೆಯ ಮೇಲೆ ರಷ್ಯಾ ಬಾಂಬ್ ದಾಳಿ, 60 ಮಂದಿ ಸಾವು

    ಕೀವ್: ಉಕ್ರೇನ್‍ನ ಹಳ್ಳಿಯೊಂದರ ಶಾಲೆಯ ಮೇಲೆ ರಷ್ಯಾ ನಡೆಸಿದ ಬಾಂಬ್ ದಾಳಿಯಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ ಎಂದು ಲುಹಾನ್ಸ್ಕ್ ಪ್ರದೇಶದ ಗವರ್ನರ್ ಸೆರ್ಹಿ ಗೈದೈ ಭಾನುವಾರ ಖಚಿತ ಪಡಿಸಿದ್ದಾರೆ.

    ಸುಮಾರು 90 ಮಂದಿ ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಶನಿವಾರ ಮಧ್ಯಾಹ್ನ ರಷ್ಯಾದ ಪಡೆಗಳು ಬಾಂಬ್ ದಾಳಿ ನಡೆಸಿದ್ದು, ಆ ಪೈಕಿ 60 ಜನ ಸಾವಿಗೀಡಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಬಾಂಬ್ ದಾಳಿಯ ನಂತರ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು ನಾಲ್ಕು ಗಂಟೆಗಳ ಕಾಲ ಬೆಂಕಿಯನ್ನು ನಂದಿಸಲಾಯಿತು. ನಂತರ ಅವಶೇಷಗಳನ್ನು ತೆರವುಗೊಳಿಸಲಾಯಿತು. ದುರದೃಷ್ಟವಶಾತ್, ಇಬ್ಬರ ಶವಗಳು ಪತ್ತೆಯಾಗಿವೆ. ಮೂವತ್ತು ಜನರನ್ನು ಅವಶೇಷಗಳಿಂದ ರಕ್ಷಿಸಿ ಸ್ಥಳಾಂತರಿಸಲಾಗಿದೆ. ಅವರಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಕಟ್ಟಡಗಳ ಅವಶೇಷಗಳಡಿಯಲ್ಲಿ ಅರವತ್ತು ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

    ರಷ್ಯಾದ ಪಡೆಗಳು ನಾಗರಿಕರನ್ನು ಗುರಿಯಾಗಿಸಿಕೊಂಡಿವೆ ಎಂದು ಉಕ್ರೇನ್ ಆರೋಪಿಸಿದೆ. ಈ ಆರೋಪಗಳನ್ನು ಮಾಸ್ಕೋ ತಿರಸ್ಕರಿಸಿದೆ. ಉಕ್ರೇನ್‍ನ ಮೇಲಿನ ರಷ್ಯಾದ 10 ವಾರಗಳ ಯುದ್ಧವು ಸಾವಿರಾರು ಜನರನ್ನು ಕೊಂದಿದೆ. ನಗರಗಳನ್ನು ನಾಶಪಡಿಸಿವೆ. 5 ಮಿಲಿಯನ್ ಉಕ್ರೇನಿಯನ್ನರು ವಿದೇಶಕ್ಕೆ ಪಲಾಯನ ಮಾಡುವಂತೆ ಮಾಡಿದೆ.

    ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು ಎಂಬ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ನಿಲುವನ್ನು ಭದ್ರತಾ ಮಂಡಳಿಯು ಸರ್ವಾನುಮತದಿಂದ ಅಂಗೀಕರಿಸಿದೆ.

    ರಷ್ಯಾ ಫೆ. 24ರಂದು ಉಕ್ರೇನ್ ಮೇಲೆ ಆರಂಭಿಸಿದ ಸೇನಾ ಕಾರ್ಯಾಚರಣೆಯ ನಂತರ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಕ್ರೇನ್ ಬಿಕ್ಕಟ್ಟು ಶಮನಕ್ಕೆ ಸರ್ವಾನುಮತದ ಹೇಳಿಕೆ ಬಂದಿದ್ದು, ಶಾಂತಿ ಮತ್ತು ಭದ್ರತೆಯ ಸ್ಥಾಪನೆ ಬಗ್ಗೆ ತೀವ್ರ ಕಳಕಳಿ ವ್ಯಕ್ತವಾಗಿದೆ.

  • 2ನೇ ಮಹಾಯುದ್ಧ ಕಾಲದ ಬಾಂಬ್ ಸ್ಫೋಟಕ್ಕೆ ವ್ಯಕ್ತಿ ಬಲಿ

    2ನೇ ಮಹಾಯುದ್ಧ ಕಾಲದ ಬಾಂಬ್ ಸ್ಫೋಟಕ್ಕೆ ವ್ಯಕ್ತಿ ಬಲಿ

    ಪೆರುಗ್ವೆ: ಉತ್ಖನನದ ಸಂದರ್ಭದಲ್ಲಿ 2ನೇ ವಿಶ್ವಯುದ್ಧ ಕಾಲದ ಬಾಂಬ್ ಒಂದು ಸ್ಫೋಟಿಸಿದ ಘಟನೆ ಜೆಕ್ ಗಣರಾಜ್ಯದ ಓಸ್ಟ್ರಾವಾದಲ್ಲಿ ನಡೆದಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

    ಶುಕ್ರವಾರ ಮುಂಜಾನೆ ನಡೆದಿರುವ ಘಟನೆಯಲ್ಲಿ 2ನೇ ವಿಶ್ವಸಮರ ಕಾಲದ ಬಾಂಬ್ ಸ್ಫೋಟಿಸಿರುವುದಾಗಿ ಪೊಲೀಸರು ದೃಢಪಡಿಸಿದ್ದಾರೆ. ಘಟನೆ ನಡೆದಿರುವ ಸ್ಥಳದಿಂದ 300 ಮೀ. ವ್ಯಾಪ್ತಿಯಲ್ಲಿರುವ ಮನೆಗಳಿಂದ ಸುಮಾರು 50 ಜನರನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಇದನ್ನೂ ಓದಿ: ರೈಲು ನಿಲ್ದಾಣದಲ್ಲಿ ರಾಕೆಟ್ ದಾಳಿ – 35 ಸಾವು

    ಈಶಾನ್ಯ ಜೆಕ್ ಗಣರಾಜ್ಯದಲ್ಲಿ 2ನೇ ಮಹಾಯುದ್ಧದಲ್ಲಿ ಬಳಕೆಯಾಗುತ್ತಿದ್ದ ಬಾಂಬ್‌ಗಳು ಹೆಚ್ಚಾಗಿ ಕಂಡುಬರುತ್ತವೆ. ಈ ಪ್ರದೇಶದಲ್ಲಿ ಹಲವು ಬಾರಿ ಸ್ಫೋಟಗೊಳ್ಳದ ಬಾಂಬ್‌ಗಳು ಪತ್ತೆಯಾಗಿದ್ದು, ಕಳೆದ ಬಾರಿ ಸಾವಿರಾರು ನಿವಾಸಿಗಳನ್ನು ಪೊಲೀಸರು ಸ್ಥಳಾಂತರ ಮಾಡಿದ್ದರು. ಇದನ್ನೂ ಓದಿ: ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

     

  • ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ – 23 ಮಂದಿ ಗಂಭೀರ

    ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ – 23 ಮಂದಿ ಗಂಭೀರ

    -ದಾಳಿ ಮಾಡಿದ ಉಗ್ರ ಪರಾರಿ

    ಶ್ರೀನಗರ: ಪುಲ್ವಾಮ ದಾಳಿ ಬಳಿಕ ಭಯೋತ್ಪಾದಕರು ಮತ್ತೆ ದಾಳಿ ಮುಂದುವರಿಸಿದ್ದು, ಜಮ್ಮುವಿನ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಸ್ಫೋಟಗೊಂಡು 23 ಮಂದಿ ಗಾಯಗೊಂಡಿದ್ದಾರೆ.

    ಕಾಶ್ಮೀರದಲ್ಲಿ ನಡೆದ ದಾಳಿಯ ಬಳಿಕ ನಗರದಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿತ್ತು. ಆದರೂ ಉಗ್ರರು ಈಗ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ಮಾಡುವ ಮೂಲಕ ಮತ್ತೆ ತಮ್ಮ ಅಟ್ಟಹಾಸವನ್ನು ಮೆರೆದಿದ್ದಾರೆ.

    ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಇಟ್ಟು ಸ್ಫೋಟ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಬಸ್ ಹೊರಗೆ ಇದ್ದ ಜನರಿಗೆ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಸ್ಸಿನಲ್ಲಿ ಎಷ್ಟು ಜನರು ಇದ್ದರು ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

    ಸದ್ಯಕ್ಕೆ ಸ್ಫೋಟದ ರಭಸಕ್ಕೆ ಬಸ್ ಸುಟ್ಟು ಹೋಗಿದೆ. ಕೆಲ ವರ್ಷದಿಂದ ಉಗ್ರರು ಜನರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ನಿಲ್ಲಿಸಿ ಸೈನಿಕರ ಮೇಲೆ ದಾಳಿ ಮಾಡುತ್ತಿದ್ದರು. ಆದರೆ ಈಗ ಮತ್ತೆ ಜನರ ಮೇಲೆ ದಾಳಿ ಆರಂಭಿಸಿದ್ದಾರೆ. ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದು, ಮೊತ್ತರ್ವ ಉಗ್ರ ಪರಾರಿಯಾಗಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತದ ಬಾಂಬ್ ದಾಳಿಗೆ ಜೈಷ್ ಉಗ್ರರ ಅತಿ ದೊಡ್ಡ ಕ್ಯಾಂಪ್ ಧ್ವಂಸ

    ಭಾರತದ ಬಾಂಬ್ ದಾಳಿಗೆ ಜೈಷ್ ಉಗ್ರರ ಅತಿ ದೊಡ್ಡ ಕ್ಯಾಂಪ್ ಧ್ವಂಸ

    ನವದೆಹಲಿ: ಭಾರತದ ವಾಯುಸೇನೆ ಜೈಷ್ ಸಂಘಟನೆಯ ಅತಿ ದೊಡ್ಡ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿ ಧ್ವಂಸ ಮಾಡಿದೆ.

    ಗಡಿನಿಯಂತ್ರಣ ರೇಖೆಯನ್ನು ದಾಟಿ ನಡೆದ ಏರ್ ಸ್ಟ್ರೈಕ್ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಗುರಿಯಿದ್ದ ಪ್ರದೇಶಗಳು ಜೈಷ್ ಉಗ್ರರ ಕ್ಯಾಂಪ್ ಆಗಿತ್ತು. ಹಲವು ಉಗ್ರರು, ತರಬೇತಿದಾರರು ಮತ್ತು ಕಮಾಂಡರ್ ಗಳು ನಮ್ಮ ದಾಳಿಯಲ್ಲಿ ಹತ್ಯೆಯಾಗಿದ್ದಾರೆ. ದಾಳಿ ನಡೆದ ಸ್ಥಳಗಳು ಅರಣ್ಯ ಪ್ರದೇಶದಲ್ಲಿದ್ದು ಯಾವುದೇ ಜನರಿಗೆ ಹಾನಿಯಾಗಿಲ್ಲ ಎಂದು ತಿಳಿಸಿದರು.

    ಬಾಲಕೋಟ್ ಉಗ್ರರ ನೆಲೆಯನ್ನು ಮೌಲಾನ ಯೂಸೂಫ್ ಅಜರ್ ಅಲಿಯಾಸ್ ಉಸ್ತಾದ್ ನೋಡಿಕೊಳ್ಳುತ್ತಿದ್ದ. ಈತ ಜೈಷ್ ಮುಖ್ಯಸ್ಥ ಮಸೂದ್ ಅಜರ್ ಸಹೋದರನಾಗಿದ್ದಾನೆ ಎಂದು ಗೋಖಲೆ ಮಾಹಿತಿ ನೀಡಿದರು. ಬಾಲಕೋಟ್ ಜೈಷ್ ಸಂಘಟನೆಯ ಅತಿ ದೊಡ್ಡ ಕ್ಯಾಂಪ್ ಆಗಿತ್ತು ಎನ್ನುವ ಮಾಹಿತಿ ನೀಡಿದರು.

    ಉಗ್ರರ ಬಗ್ಗೆ ಭಾರತ ಹಲವು ಬಾರಿ ಮಾಹಿತಿ ನೀಡಿದರೂ ಪಾಕಿಸ್ತಾನ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ಹೀಗಾಗಿ ಈ ಬಾರಿ ನಾವೇ ನೇರವಾಗಿ ಹೋಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದೇವೆ ಎಂದು ದಾಳಿ ಬಗ್ಗೆ ಸಮರ್ಥನೆ ನೀಡಿದರು.

    ಇದೇ ವೇಳೆ ಜೈಷ್ ಸಂಘಟನೆ ದೇಶದ ಹಲವೆಡೆ ಆತ್ಮಾಹುತಿ ದಾಳಿ ನಡೆಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ನಮಗೆ ಖಚಿತ ಗುಪ್ತಚರ ಮಾಹಿತಿಗಳು ಸಿಕ್ಕಿವೆ ಎಂದು ಗೋಖಲೆ ತಿಳಿಸಿವೆ.

    https://www.youtube.com/watch?v=m8US3svZ58Q

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv