Tag: book

  • ಪುಸ್ತಕದಲ್ಲೂ ನೋಡಿ ‘ಡೇರ್ ಡೆವಿಲ್‍ ಮುಸ್ತಾಫಾ’ ಸಿನಿಮಾ

    ಪುಸ್ತಕದಲ್ಲೂ ನೋಡಿ ‘ಡೇರ್ ಡೆವಿಲ್‍ ಮುಸ್ತಾಫಾ’ ಸಿನಿಮಾ

    ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಸಿನಿಮಾ ಡೇರ್ ಡೆವಿಲ್ ಮುಸ್ತಾಫಾ (Dare Devil Mustafa). ಕಳೆದ ವರ್ಷ ಬಿಡುಗಡೆಯಾಗಿದ್ದ ಈ ಚಿತ್ರ ಪ್ರೇಕ್ಷಕರ ಪ್ರೀತಿ ಪಡೆದಿತ್ತು. ಶಶಾಂಕ ಸೋಗಾಲ್  (Shashank Sogal) ನಿರ್ದೇಶನದಲ್ಲಿ ಮೂಡಿಬಂದಿದ್ದ ಡೇರ್ ಡೆವಿಲ್ ಮುಸ್ತಾಫಾ ಚಿತ್ರವೀಗ ಪುಸ್ತಕ ರೂಪ ಪಡೆದಿದೆ.

    ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆ ನಿರ್ದೇಶಕ ಶಶಾಂಕ್ ಸೋಗಾಲ್ ಚಿತ್ರಕಥೆ ಹಾಗೂ ಆಯ್ದ ವಿಮರ್ಶೆಗಳನ್ನು ಪುಸ್ತಕ ರೂಪಕ್ಕೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕಿ ಕಂ ನಟಿ ಸಿಂಧು ಎಸ್ ಮೂರ್ತಿ, ನಿರ್ದೇಶಕರಾದ ಅನೂಪ್ ಭಂಡಾರಿ, ನಿತಿನ್ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆ. ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಪುಸ್ತಕದಲ್ಲಿ  ಕಾಲೇಜು ದಿನಗಳನ್ನು ಮೆಲುಕು ಹಾಕುವಂತಹ ಸನ್ನಿವೇಶ. ಸಹಪಾಠಿಗಳ ನಡುವೆ ನಡೆಯುವ ಸಣ್ಣ ಪುಟ್ಟ ಜಗಳ, ಹಾಗು ಧರ್ಮಕ್ಕೂ ಮಿಗಿಲಾದದ್ದು ಫ್ರೆಂಡ್ ಶಿಪ್ ಎಂಬ ಸಾರಾಂಶವನ್ನು ಸಮಾಜಕ್ಕೆ ಸಾರುವಂತಹ ವಿಷಯದ ಜೊತೆಗೆ ಸಿನಿಮಾ ಆಸಕ್ತರಿಗೆ ಪಠ್ಯವಾಗಬಲ್ಲ ಪುಸ್ತಕ ಅಂದರು ತಪ್ಪಿಲ್ಲ. ಒಂದು ಸಣ್ಣ ಕಥೆ ಎತ್ತಿಕೊಂಡು ಸ್ಕ್ರೀನ್ ಪ್ಲೇ, ಕಥೆ ಡೈಲಾಗ್ ಬರೆದು ದೃಶ್ಯ ರೂಪಕ್ಕೆ ಹೇಗೆ ಇಳಿಸಲಾಯಿತು.? ಸಣ್ಣ ಕಥೆ ಚಿತ್ರ ಕಥೆ ಆಗಿದ್ದೇಗೆ? ಕಥೆ ಸಿನಿಮಾವಾಗಿದ್ದೇಗೆ ಎಂಬ ವಿಷಯಗಳು ಈ  ಪುಸ್ತಕ ಓದಿದರೆ ತಿಳಿಯುತ್ತದೆ.

     

    ಸಿನಿಮಾ ಮಾಧ್ಯಮದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪುಸ್ತಕಗಳ ಕೊರತೆ ಇದೆ.‌ಅದರಲ್ಲಿಯೂ ಇಂಗ್ಲೀಷ್ ಭಾಷೆಯಲ್ಲಿ ಕಥೆ ಬರೆದು ಸಿನಿಮಾ ಮಾಡುವವರು ಹೆಚ್ಚಿರುವಾಗ ಕನ್ನಡದಲ್ಲಿ ಸ್ಕ್ರೀಪ್ಟ್ ಬರೆದು ಸಿನಿಮಾ ಮಾಡಿದ್ದೇವೆ ಅನ್ನೋದನ್ನು ಡೇರ್ ಡೆವಿಲ್ ಮುಸ್ತಾಫಾ ಪುಸ್ತಕದಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದ ಸದ್ಯದ ಸಿನಿಮಾರಂಗ ಇರುವ ಪರಿಸ್ಥಿತಿಯಲ್ಲಿ ಸಿನಿಮಾ ಸೂಕ್ಷ್ಮಗಳ ಬಗ್ಗೆ ಅರಿವು ಹುಟ್ಟಿಸಬಲ್ಲ ಇಂಥ ಕೃತಿಗಳ ಅಗತ್ಯ ಖಂಡಿತ ಇದೆ.

  • ತೆಲುಗಿನ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಜೀವನ ಚರಿತ್ರೆ ರಿಲೀಸ್

    ತೆಲುಗಿನ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಜೀವನ ಚರಿತ್ರೆ ರಿಲೀಸ್

    ಕ್ಷಿಣದ ಬಹುತೇಕ ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ, ತೆಲುಗಿನ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ (Brahmanandam) ಅವರ ಜೀವನ ಕುರಿತಾದ ಪುಸ್ತಕ ಬಿಡುಗಡೆಯಾಗಿದೆ. ಈ ಪುಸ್ತಕಕ್ಕೆ ‘ನೇನು’ (Nenu) ಎಂದು ಹೆಸರಿಡಲಾಗಿದ್ದು, ಈ ಪುಸ್ತಕಗಳನ್ನು ಖ್ಯಾತನಟ ಚಿರಂಜೀವಿ ಸೇರಿದಂತೆ ಹಲವರಿಗೆ ಸ್ವತಃ ಬ್ರಹ್ಮಾನಂದಂ ಅವರೇ ನೀಡಿದ್ದಾರೆ.

    ಸಾವಿರಾರು ಚಿತ್ರಗಳಲ್ಲಿ ನಟಿಸಿದ ಬ್ರಹ್ಮಾನಂದಂ ಅವರ ಜೀವನ ಬಲು ರೋಚಕವಾದದ್ದು. ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವಾರು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಹಾಸ್ಯ ಕಲಾವಿದರಲ್ಲಿ ಮೇರುನಟರಾಗಿ ಗುರುತಿಸಿಕೊಂಡಿದ್ದಾರೆ. ಜೀವನದಲ್ಲಿ ಸಾಕಷ್ಟು ಏರಿಳಿತವನ್ನೂ ಕಂಡವರು. ಹಾಗಾಗಿ ಸಹಜವಾಗಿ ಪುಸ್ತಕದ ಬಗ್ಗೆ ಕುತೂಹಲ ಮೂಡಿದೆ.

    ಮೊನ್ನೆಯಷ್ಟೇ ಮೆಗಾಸ್ಟಾರ್ ಚಿರಂಜೀವಿ (Chiranjeevi) ಮತ್ತು ಅವರ ಪುತ್ರ ರಾಮ್ ಚರಣ್ ಭೇಟಿ ಮಾಡಿರುವ ಬ್ರಹ್ಮಾನಂದ ತಮ್ಮ ಬಯೋಗ್ರಫಿ ಪುಸ್ತಕವನ್ನು (book) ಉಡುಗೊರೆಯಾಗಿ ನೀಡಿದ್ದಾರೆ. ಆ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

  • ಭಾರತದ ಕಿರಿಯ ಕವಯಿತ್ರಿ ಅಮನ ಬರೆದ ನಾಲ್ಕನೇ ಪುಸ್ತಕ ಬಿಡುಗಡೆ

    ಭಾರತದ ಕಿರಿಯ ಕವಯಿತ್ರಿ ಅಮನ ಬರೆದ ನಾಲ್ಕನೇ ಪುಸ್ತಕ ಬಿಡುಗಡೆ

    ಬೆಂಗಳೂರು: ಕುಮಾರಿ ಅಮನ ಜೆ.ಕುಮಾರ್ (Amana Kumar) ಅವರ ನಾಲ್ಕನೇ ಪುಸ್ತಕ Galore of Mysteries ಅನ್ನು ಕರ್ನಾಟಕ ಸರ್ಕಾರದ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ (Santosh Hegde) ಬಿಡುಗಡೆ ಮಾಡಿದರು.

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ರವರ ಸಂದೇಶವು ಈ ಪುಸ್ತಕದಲ್ಲಿ ಪ್ರಕಟವಾಗಿದೆ. ಈ ಪುಸ್ತಕಕ್ಕೆ ಮುನ್ನುಡಿಯನ್ನು ಇಸ್ರೋದ ಚಂದ್ರಯಾನ 3 ಪ್ರಾಜೆಕ್ಟ್‌ ಡೈರೆಕ್ಟರ್‌ ಡಾ. ಪಿ.ವೀರ ಮುತ್ತುವೇಲ್ ಬರೆದಿದ್ದಾರೆ.

    ಅಮನ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್‌ನಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಹಾರ್ವಡ್ ವಿಶ್ವ ವಿದ್ಯಾಲಯದಿಂದ “Masterpieces of World Literature” ಕೋರ್ಸ್ ಮಾಡಿದ್ದಾರೆ.

    ಅಮಾನಾಳ Galore of Mysteries” ಪುಸ್ತಕವು, ಕವನ ಹಾಗೂ ಕಿರು ಕಥೆಗಳ ಸಂಗ್ರಹವಾಗಿದ್ದು ರಹಸ್ಯಗಳ ಕೌತುಕವನ್ನು ಒಳಗೊಂಡಿರುತ್ತದೆ. ಇದು ಸಾಹಸಮಯವಾಗಿದ್ದು ಭಯಾನಕ ಹಾಗೂ ಹಾಸ್ಯದಿಂದ ಕೂಡಿ ಓದುಗರನ್ನು ಪ್ರತಿಪುಟದಲ್ಲಿಯೂ ಕಲ್ಪನೆಯ ಲೋಕಕ್ಕೆ ಕರೆದೊಯ್ಯುವ ಆಕರ್ಷಣೆಯನ್ನು ಹೊಂದಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗಲಿರುವ ವಿಶ್ವದರ್ಜೆಯ ವಿಮಾನ, ರೈಲು ನಿಲ್ದಾಣದ ವಿಶೇಷತೆಗಳು ಏನು?

    ಡಾ. ಲತಾ ಟಿ.ಎಸ್, ಹಾಗೂ ಜೈವಂತ್ ಕುಮಾರ್ ಅವರ ಮಗಳಾದ ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲೀಷ್ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು,  ಪ್ರಥಮ ಕವನ “Echoes of Soulful Poems” ಎರಡನೇ World Amidst the Words” ಹಾಗೂ “Lafzon ki Mhfil “ ಮೂರನೇ ಹಿಂದಿ ಕವನ ಸಂಕಲನವು ಈಗಾಗಲೇ ಅಮೇಜಾನ್, ಪ್ಲಿಫ್‌  ಕಾರ್ಟ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಲಭ್ಯವಿರುತ್ತವೆ. ಇಲ್ಲಿಯವರೆಗೂ ಅಮನ ಇಂಗ್ಲಿಷ್ ಮತ್ತು ಹಿಂದಿಯಲ್ಲಿ 500 ಕ್ಕೂ ಹೆಚ್ಚು ಕವನಗಳನ್ನು ಬರೆದಿದ್ದಾರೆ.

    ಅಮನಳ ದಾಖಲೆಗಳು:
    * ಭಾರತದ ಕಿರಿಯ ಕವಯಿತ್ರಿ ಇಂಡಿಯಾ ಬುಕ್ ಆಫ್‌ ರೆಕಾಡ್ಸ್ -2021
    * ಏಷ್ಯಾ ಬುಕ್ ಆಪ್ ರೆಕಾಡ್ಸ್-2021 ಕಿರಿಯ ವಯಸ್ಸಿನಲ್ಲಿ ಕವಿತೆಗಳನ್ನು ಬರೆದಿರುವುದು.
    *ಕೌಟಿಲ್ಯ ವರ್ಷದ ಕಿರಿಯ ಕವಿ ಪ್ರಶಸ್ತಿ – 2021 ಗೋವಾದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
    *ನೋಬಲ್ ಬುಕ್ ಆಫ್‌ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ
    *ವರ್ಲ್ಡ್ ರೆಕಾರ್ಡ್ ವಿಶ್ವವಿದ್ಯಾಲಯ ಪ್ರವೇಶ 2022, ಸತತ ವರ್ಷಗಳಲ್ಲಿ ಕವನ ಸಂಕಲನ ಪುಸ್ತಕಗಳನ್ನು ಪ್ರಕಟಿಸಿದ ಕಿರಿಯ ಕವಯಿತ್ರಿ
    *ಗೋಲ್ಡನ್ ಬುಕ್ ಆಫ್‌ ವರ್ಲ್ಡ್ ರೆಕಾರ್ಡ್ಸ್ 2022 ನಲ್ಲಿ ದಾಖಲೆ ಬರೆದಿದ್ದಾರೆ.
    * ವಂಡರ್ ಬುಕ್ ಆಫ್‌ ವರ್ಲ್ಡ್ ರೆಕಾರ್ಡ್ಸ್ ಕಿರಿಯ ಕವಯತ್ರಿ
    * ಇಂಟರ್ನ್ಯಾಷನಲ್ ಬುಕ್ಅಫ್‌ ರೆಕಾರ್ಡ್ಸ್ ಕಿರಿಯ ಕವಯತ್ರಿ.

  • ಹುಟ್ಟು ಹಬ್ಬಕ್ಕೆ ಕೇಕ್, ಹಾರ ತರಬೇಡಿ ಪುಸ್ತಕ ತನ್ನಿ: ನಟ ಧ್ರುವ ಸರ್ಜಾ

    ಹುಟ್ಟು ಹಬ್ಬಕ್ಕೆ ಕೇಕ್, ಹಾರ ತರಬೇಡಿ ಪುಸ್ತಕ ತನ್ನಿ: ನಟ ಧ್ರುವ ಸರ್ಜಾ

    ನ್ನಡ ಸಿನಿಮಾ ನಟರು ತಮ್ಮ ಹುಟ್ಟು ಹಬ್ಬವನ್ನು ಹೊಸ ರೀತಿಯಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಸುದೀಪ್, ದರ್ಶನ್ ಸೇರಿದಂತೆ ಹಲವು ಕಲಾವಿದರು ತಮ್ಮ ಹುಟ್ಟು ಹಬ್ಬಕ್ಕೆ ಕೇಕ್, ಹಾರ ತರಬೇಡಿ ಎಂದು ಮನವಿ ಮಾಡಿಕೊಂಡಿದ್ದು ಇದೆ. ಆ ಹಣವನ್ನು ಅನಾಥಾಶ್ರಮಕ್ಕೂ, ವೃದ್ಧಾಶ್ರಮಕ್ಕೋ ಅಥವಾ ನಿಮ್ಮ ಕುಟುಂಬದ ಒಳ್ಳೆಯ ಕೆಲಸಕ್ಕೂ ಉಪಯೋಗಿಸಿಕೊಳ್ಳಿ ಎಂದಿದ್ದರು. ಇದೀಗ ಅದೇ ಹಾದಿಯಲ್ಲೇ ಧ್ರುವ ಸರ್ಜಾ ಕೂಡ ನಡೆಯುತ್ತಿದ್ದಾರೆ.

    ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ ಮೂರು ವರ್ಷಗಳ ನಂತರ ತಮ್ಮ ಹುಟ್ಟು ಹಬ್ಬವನ್ನು (Birthday) ಅಭಿಮಾನಿಗಳ ಜೊತೆ ಆಚರಿಸಲು ರೆಡಿಯಾಗಿದ್ದಾರೆ. ಅಕ್ಟೋಬರ್ 6ರಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಧ್ರುವ, ಅಭಿಮಾನಿಗಳಿಗಾಗಿ (Fans) ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ ಬರುವವರು ಕೇಕ್, ಹಾರ, ತುರಾಯಿಗಳನ್ನು ತರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

    ಅಕ್ಟೋಬರ್ 5ರಂದು ಧ್ರುವ ಮನೆಯ ಮುಂದೆಯೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಅಂದು ಅಭಿಮಾನಿಗಳು ಶಾಲಾ ಮಕ್ಕಳಿಗೆ ಬೇಕಾಗುವ ಸಾಮಗ್ರಿಗಳನ್ನು ಉಡುಗೊರೆ ರೂಪದಲ್ಲಿ ಕೊಡುವಂತೆ ಕೇಳಿಕೊಂಡಿದ್ದಾರೆ. ಪುಸ್ತಕ, ಬ್ಯಾಗ್, ಪೆನ್ನು ಹೀಗೆ ಅಗತ್ಯ ವಸ್ತುಗಳನ್ನು ಮಾತ್ರ ತನ್ನಿ ಎಂದು ಹೇಳಿಕೊಂಡಿದ್ದಾರೆ.

    ಹುಟ್ಟು ಹಬ್ಬಕ್ಕೂ ಮುನ್ನ ಅವರು ಮಾರ್ಟಿನ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರಲಿದ್ದಾರೆ. ನಿರ್ದೇಶಕ ಎ.ಪಿ ಅರ್ಜುನ್ ಮತ್ತು ಧ್ರುವ ಸರ್ಜಾ (Dhruva Sarja) ಕಾಂಬಿನೇಷನ್ ನ ‘ಮಾರ್ಟಿನ್’ ಸಿನಿಮಾದ ಶೂಟಿಂಗ್ (Shooting) ಮುಗಿದಿದೆ ಎಂದು ಅಂದಾಜಿಸಲಾಗಿತ್ತು. ಬಿಡುಗಡೆಗೆ ಚಿತ್ರತಂಡ ಸಿದ್ಧವಾಗುತ್ತಿದೆ ಎಂದು ನಂಬಲಾಗಿತ್ತು. ಆದರೆ, ಅಭಿಮಾನಿಗಳ ಅಂದಾಜು ಸುಳ್ಳಾಗಿದೆ. ಚಿತ್ರತಂಡವೇ ಮಾಹಿತಿ ಕೊಟ್ಟಿರುವಂತೆ ಇನ್ನೂ ಮೂರು ಹಾಡುಗಳ ಶೂಟಿಂಗ್ ಬಾಕಿ ಇದೆಯಂತೆ. ಈ ವಾರ ಒಂದು ಹಾಡಿನ ಚಿತ್ರೀಕರಣಕ್ಕೂ ಚಿತ್ರತಂಡ ಸಿದ್ಧವಾಗಿದೆ.

    ಇತ್ತೀಚೆಗಷ್ಟೇ ಈ ಸಿನಿಮಾದ ಒಂದು ಹಾಡು ಚಿತ್ರೀಕರಣವಾಗಿತ್ತು. ಈ ಹಾಡಿನಲ್ಲಿ ಇಟಾಲಿಯನ್ ಸುಂದರಿ ಜಾರ್ಜಿಯಾ (Giorgia Andriani)  ಜೊತೆ ಧ್ರುವ ಸರ್ಜಾ ಹೆಜ್ಜೆ ಹಾಕಿದ್ದರು. ಈ ಮೂಲಕ ಬಾಲಿವುಡ್‌ ನಟಿ ಜಾರ್ಜಿಯಾ ಕನ್ನಡ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು.

     

    ಹೈದರಾಬಾದ್‌ನ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಸೆಟ್ ಹಾಕಿ ಬಿಂದಾಸ್ ಹಾಡಿಗೆ ಚಿತ್ರೀಕರಣ ಮಾಡಲಾತ್ತು. ಧ್ರುವ ಜೊತೆ ಜಾರ್ಜಿಯಾ ಆಂಡ್ರಿಯಾನಿ ಸಖತ್ ಸ್ಟೆಪ್ಸ್ ಹಾಕಿದ್ದರು. ದಕ್ಷಿಣ ಭಾರತ ಚಿತ್ರರಂಗದಲ್ಲಿ ಇದು ಆಕೆಯ ಮೊದಲ ಸಿನಿಮಾವಾಗಿದೆ. ಮಣಿ ಶರ್ಮಾ ಟ್ಯೂನ್ ಹಾಕಿರುವ ಹಾಡಿಗೆ ಇಮ್ರಾನ್ ಸರ್ದಾರಿಯಾ ಕೊರಿಯೋಗ್ರಫಿ ಮಾಡಿದ್ದಾರೆ. 300ಕ್ಕೂ ಹೆಚ್ಚು ಫಾರಿನ್ ಡ್ಯಾನ್ಸರ್ಸ್ ಹಾಡಿನಲ್ಲಿ ಕುಣಿದಿದ್ದಾರೆ. 3.5 ಕೋಟಿ ರೂ. ಬಜೆಟ್‌ನಲ್ಲಿ ಬಹಳ ಅದ್ದೂರಿಯಾಗಿ ಈ ಸಾಂಗ್ ಶೂಟಿಂಗ್ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಗ್ಗೇಶ್ ಕುರಿತಾದ ಬಯೋಗ್ರಫಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟ

    ಜಗ್ಗೇಶ್ ಕುರಿತಾದ ಬಯೋಗ್ರಫಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟ

    ನಿನ್ನೆಯಷ್ಟೇ ತಮ್ಮ 60ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ ನಟ ಜಗ್ಗೇಶ್ (Jaggesh). ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಸದ್ಯದಲ್ಲೇ ತಮ್ಮ ಜೀವನಕಥನ  (Biography) ಪುಸ್ತಕ (Book) ರೂಪದಲ್ಲಿ ಬರಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಪತ್ರಿಕೆಯಲ್ಲಿ ಬಂದ ಹಳೆಯ ಲೇಖಕನವೊಂದನ್ನು ಹಂಚಿಕೊಂಡಿರುವ ಅವರು, ಸಹೋದರಿ ತುಂಗರೇಣುಕಾ (Tungarenuka) ಅವರು ನನ್ನ ಕುರಿತಾಗಿ ಪುಸ್ತಕ ಬರೆಯುತ್ತಿದ್ದಾರೆ. ಶೀಘ್ರದಲ್ಲೇ ನಿಮ್ಮ ಮುಂದೆ ಎಂದು ಬರೆದುಕೊಂಡಿದ್ದಾರೆ.

    ಹಿರಿಯ ಪತ್ರಕರ್ತೆ ತುಂಗರೇಣುಕಾ ಅವರು ಜಗ್ಗೇಶ್ ಕುರಿತಾಗಿ ಪುಸ್ತಕವೊಂದನ್ನು ಬರೆಯುತ್ತಿದ್ದು, ಈ ವಿಷಯವನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ. ತಮ್ಮ ಬದುಕಿನ ನಾನಾ ಘಟನೆಗಳನ್ನು ಈ ಪುಸ್ತಕದಲ್ಲಿ ತುಂಗರೇಣುಕಾ ಹಿಡಿದಿಟ್ಟಿರುವ ಕುರಿತಾಗಿಯೂ ಅವರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಈ ಪುಸ್ತಕ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುರಿತು ಅವರು ವಿವರಣೆ ನೀಡಿಲ್ಲ. ಆದರೆ, ಜೀವನಕಥನ ಪುಸ್ತಕವಾಗಿ ಬರುತ್ತಿರುವುದನ್ನು ಹುಟ್ಟು ಹಬ್ಬದಂದು ರಿವೀಲ್ ಮಾಡಿದ್ದಾರೆ.

    ನಿನ್ನೆಯಷ್ಟೇ ಜಗ್ಗೇಶ್ ನಟಿಸಿದ ಸಿನಿಮಾ ತಂಡದವರು ಸರ್  ಪ್ರೈಸ್ ರೀತಿಯಲ್ಲಿ ಉಡುಗೊರೆಯನ್ನು ನೀಡಿದ್ದಾರೆ. ಗುರು ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದ ‘ರಂಗನಾಯಕ’ ಚಿತ್ರ ತಂಡ ಮತ್ತು ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಘವೇಂದ್ರ ಸ್ಟೋರ್ಸ್ ಚಿತ್ರತಂಡ ಇಂದು ವಿಭಿನ್ನ ರೀತಿಯಲ್ಲಿ ಜಗ್ಗೇಶ್ ಹುಟ್ಟು ಹಬ್ಬ ಆಚರಿಸಿವೆ. ಇದನ್ನೂ ಓದಿ: ಪವನ್ ಕಲ್ಯಾಣ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಆರ್.ಚಂದ್ರು

    ಗುರು ಪ್ರಸಾದ್ ನಿರ್ದೇಶನದಲ್ಲಿ ತಯಾರಾದ ‘ರಂಗನಾಯಕ’ ಚಿತ್ರದ ಹೊಸ ಪೋಸ್ಟರ್ ಅನ್ನು ಜಗ್ಗೇಶ್ ಹುಟ್ಟು ಹಬ್ಬಕ್ಕಾಗಿಯೇ ರಿಲೀಸ್ ಮಾಡಿದ್ದು, ಸಂತೋಷ್ ಆನಂದ್ ರಾಮ್ ನಿರ್ದೇಶನದ, ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆಯಾಗಿದೆ. ಏಪ್ರಿಲ್ 28 ರಂದು ರಾಜ್ಯಾದ್ಯಂತ ಈ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

    ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು ಜಗ್ಗೇಶ್. ಕುಟುಂಬ ಸಮೇತ ಪ್ರಧಾನಿಯನ್ನು ಭೇಟಿ ಮಾಡಿ, ಅವರ ಆರ್ಶಿವಾದ ಪಡೆದಿದ್ದರು. ತಾವು ಆರಾಧಿಸುವ ರಾಯರ ಮೂರ್ತಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿ ಬಂದಿದ್ದರು. ಆ ಕ್ಷಣವನ್ನು ಅವರು ಸೋಷಿಯಲ್ ಮೀಡಿಯಾದಲ್ಲೂ ಬರೆದುಕೊಂಡಿದ್ದರು.

    ಈ ಬಾರಿಯ ಹುಟ್ಟು ಹಬ್ಬದ ಮತ್ತೊಂದು ವಿಶೇಷ ಎಂದರೆ ಜಗ್ಗೇಶ್ ಇದೀಗ 60ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅರವತ್ತನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರು ವಿಶೇಷ ಪೂಜೆ ಮತ್ತು ರಾಯರ ದರ್ಶನಕ್ಕೂ ಹೋಗಿ ಬಂದಿದ್ದಾರೆ. ಜಗ್ಗೇಶ್ ಅವರಿಗೆ ಇಡೀ ಚಿತ್ರತಂಡ ಶುಭಾಶಯ ತಿಳಿಸಿದೆ.

  • ಪ್ರೇಮಿಗಳ ದಿನದಂದು ‘ಪ್ರೇಮಪತ್ರದ ಆಫೀಸು’ ತೆರೆದ ಸಿಂಹಪ್ರಿಯಾ

    ಪ್ರೇಮಿಗಳ ದಿನದಂದು ‘ಪ್ರೇಮಪತ್ರದ ಆಫೀಸು’ ತೆರೆದ ಸಿಂಹಪ್ರಿಯಾ

    ನ್ನಡದ ಹೆಸರಾಂತ ನಟ ವಸಿಷ್ಠ ಸಿಂಹ (Vasishtha Simha) ಮತ್ತು ನಟಿ ಹರಿಪ್ರಿಯಾ (Haripriya) ಈ ಬಾರಿಯ ಪ್ರೇಮಿಗಳ ಹಬ್ಬವನ್ನು (Valentine’s Day) ಆಚರಿಸಲು ಬೆಂಗಳೂರು ತೊರೆದಿದ್ದಾರೆ. ಪ್ರಕೃತಿಯ ಮಡಿಲಿಲ್ಲದ್ದುಕೊಂಡು ಅಪರೂಪದ ಕೆಲಸಕ್ಕೆ ಸಾಕ್ಷಿಯಾಗಿದ್ದಾರೆ. ಸ್ವತಃ ಸಾಹಿತ್ಯ ಪ್ರೇಮಿಯೂ ಆಗಿರುವ ವಸಿಷ್ಠ ಪ್ರೇಮಿಗಳ ದಿನದಂದು ಖ್ಯಾತ ಲೇಖಕ ಶಿವಕುಮಾರ ಮಾವಲಿ (Shivakumar Mavali) ಬರೆದ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಪುಸ್ತಕವನ್ನು (Book) ಪತ್ನಿ ಹರಿಪ್ರಿಯಾ ಜೊತೆಯಾಗಿ ಬಿಡುಗಡೆ ಮಾಡಿದ್ದಾರೆ.

    ವರ್ಷಗಳ ಕಾಲ ಪ್ರೇಮಿಗಳಾಗಿದ್ದು ಇತ್ತೀಚಿಗಷ್ಟೆ ದಂಪತಿಗಳಾಗಿರುವ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವ್ಯಾಂಲಂಟೈನ್ ಡೇ ಅನ್ನು ಈ ಬಾರಿ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಪ್ರೇಮಿಗಳ ದಿನಾಚರಣೆಯಂದು ಒಂದು ಪ್ರೇಮಕತೆಗಳ ಪುಸ್ತಕವನ್ನು ಲೋಕಾರ್ಪಣೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನೂ ಅವರು ಮೆಲುಕು ಹಾಕಿದ್ದಾರೆ.

    ಮಾವಲಿ ಪಬ್ಲಿಕೇಶನ್ ನ ಮೊದಲ ಪುಸ್ತಕ ಇದಾಗಿದ್ದು, ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಎಂಬ ವಿಶಿಷ್ಟ ಶೀರ್ಷಿಕೆಯನ್ನು ಹೊಂದಿದೆ. ಅಲ್ಲದೇ, ಇದೊಂದು ಕಥಾ ಸಂಕಲನವಾಗಿದೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶಿವಕುಮಾರ ಮಾವಲಿ , ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವ್ಯಾಂಲಂಟೈನ್ ದಿನಗಳ ನೆನಪು ಮಾಡಿಕೊಂಡಿದ್ದಾರೆ. ಪ್ರೇಮಪತ್ರದ ಆಫೀಸು ಎಂಬ ಶೀರ್ಷಿಕೆಯೇ ಆಸಕ್ತಿ ಹುಟ್ಟಿಸುವಂತಿದೆ, ನಾವೂ ಪ್ರೇಮಪತ್ರಗಳನ್ನ ಬರೆದುಕೊಳ್ತಿದ್ವಿ ಎಂದು ನೆನಪು ಮಾಡಿಕೊಂಡು, ಪುಸ್ತಕದಲ್ಲಿದ್ದ ಎರಡು ಪತ್ರಗಳ ಸಾಲುಗಳನ್ನು ಪರಸ್ಪರರು ಪತ್ರದ ರೀತಿಯಲ್ಲಿ ಓದಿಕೊಂಡರು.

    ಹರಿಪ್ರಿಯ, ”ಸಾವಿರ ಜನರ ಮಧ್ಯೆ ಇದ್ದರೂ ನಾನು ಏಕಾಂಗಿಯೇ, ನಿನ್ನ ನೆನಪಿನ ಭಾವವಿರದಿದ್ದರೆ” ಎಂದು ಹೇಳಿದರೆ, ವಸಿಷ್ಠ ಸಿಂಹ , ” ತನಗಾಗಿ ಏನನ್ನೂ ಮಾಡಿಕೊಳ್ಳದ ನೀರಿನಂತೆ ನಾನು ನಿನ್ನನ್ನು ಪ್ರೀತಿಸುತ್ತೇನೆ ” ಎಂದು ಹರಿಪ್ರಿಯಾರ ಮುಖದಲ್ಲಿ ನಗು ಮೂಡಿಸಿದರು. ಮಾವಲಿ ಪಬ್ಲಿಕೇಶನ್ ಇಂದ ಪ್ರಕಟವಾಗುತ್ತಿರುವ ಈ ಕಥಾ ಸಂಕಲನವನ್ನು ಹೆಚ್ಚು ಜನ ಓದಲಿ ಮತ್ತು ಇಂಥ ಅನೇಕ ಪುಸ್ತಕಗಳು ಅವರಿಂದ ಮೂಡಿ ಬರಲಿ ಎಂದು ಆಶಿಸಿದರು.

    ‘ಇಷ್ಟು ವರ್ಷಗಳಿಗಿಂತ ಈ ಬಾರಿ ನಮ್ಮ ವ್ಯಾಲಂಟೈನ್ ಡೇ ವಿಶೇಷವಾಗಿ ಆಯಿತು, ಪ್ರೇಮಪುಸ್ತಕವೊಂದು ನಮ್ಮಿಂದ ಬಿಡುಗಡೆ ಆಗುವಂತಾಯಿತು’ ಎಂದು ಹರಿಪ್ರಿಯ ಹೇಳಿದರು. ಇದನ್ನೂ ಓದಿ: ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ

    ‘ದೇವರು ಅರೆಸ್ಟ್ ಆದ’ ಮತ್ತು ‘ಟೈಪಿಸ್ಟ್ ತಿರಸ್ಕರಿಸಿದ ಕತೆ’ ಎಂಬ ಕತಾ ಸಂಕಲನಗಳ ಮೂಲಕ ಹೊಸ ರೀತಿಯ ಕತೆಗಳನ್ನು ಪರಿಚಯಿಸಿದ ಶಿವಕುಮಾರ ಮಾವಲಿಯವರ ‘ಸುಪಾರಿ ಕೊಲೆ’ ನಾಟಕ ಒಂದು ಪತ್ತೇದಾರಿ ಮಾದರಿಯ ನಾಟಕವಾಗಿದ್ದರೆ, ಇತ್ತೀಚಿಗೆ ಪ್ರದರ್ಶನಗೊಂಡ ಅವರ ‘ಒಂದು ಕಾನೂನಾತ್ಮಕ ಕೊಲೆ’ ನಾಟಕವು, ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಬಳಸಿಕೊಂಡು ಸಶಕ್ತವಾಗಿ ರಾಜಕೀಯ ವಿಡಂಬನೆ ಮಾಡುವ ನಾಟಕವಾಗಿದೆ. ಹಾಗೆಯೇ ರಾಜೀವ್ ಗಾಂಧಿ ಹತ್ಯೆಯ ಸಮಯದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರ ಬದುಕಲ್ಲಿ ನಡದ ಘಟನೆಯಾಧಾರಿತ ಕಾದಂಬರಿ ‘LTTE Murthy Calling’ ಇತ್ತೀಚಿಗಷ್ಟೆ ತಮಿಳಿಗೆ ಅನುವಾದಗೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿ.ಸಿ. ನಾಗೇಶ್ ನೆನಪಿನ ಪುಸ್ತಕ ರಿಲೀಸ್ ಮಾಡಲಿದ್ದಾರೆ ನಿರ್ದೇಶಕ ನಾಗಾಭರಣ

    ಡಿ.ಸಿ. ನಾಗೇಶ್ ನೆನಪಿನ ಪುಸ್ತಕ ರಿಲೀಸ್ ಮಾಡಲಿದ್ದಾರೆ ನಿರ್ದೇಶಕ ನಾಗಾಭರಣ

    ರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಾಳೆ ಸಿನಿಮಾ ಪತ್ರಿಕಾ ಛಾಯಾಗ್ರಾಹಕ ಡಿ.ಸಿ ನಾಗೇಶ್ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಪತ್ರಕರ್ತ ಚೇತನ್ ನಾಡಿಗೇರ ಸಂಪಾದನೆ ಮಾಡಿರುವ ‘ಜೀವಬಿಂಬ’ ಪುಸ್ತಕ (Book)  ಲೋಕಾರ್ಪಣೆ ಆಗಲಿದೆ. ಡಿ.ಸಿ ನಾಗೇಶ್ (DC Nagesh) ಕುರಿತಾದ ಪುಸ್ತಕ ಇದಾಗಿದ್ದು, ನಾಗೇಶ್ ಒಡನಾಡಿಗಳು ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ಹಲವು ದಶಕಗಳ ಕಾಲ ಸಿನಿಮಾ ಪತ್ರಿಕೋದ್ಯಮದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದವರು ಡಿ.ಸಿ ನಾಗೇಶ್. ಕನ್ನಡದ ಬಹುತೇಕ ನಟ, ನಟಿಯರ ಫೋಟೋಗಳನ್ನು ಸೆರೆ ಹಿಡಿದ ಹೆಗ್ಗಳಿಕೆ ಇವರದ್ದು. ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ ನಾಗೇಶ್, ಹಿರಿಯ ಕಲಾವಿದರ ಜೊತೆ ಒಂದೊಳ್ಳೆ ಬಾಂಧವ್ಯವನ್ನು ಹೊಂದಿದ್ದವರು. ಅಲ್ಲದೇ, ಕಿರಿಯ ಸಿನಿಮಾ ಪತ್ರಕರ್ತರಿಗೆ ಮಾರ್ಗದರ್ಶಕರು ಆಗಿದ್ದವರು. ಕಳೆದ ವರ್ಷವಷ್ಟೇ ಅಗಲಿರುವ ಅವರ ನೆನಪಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಇದನ್ನೂ ಓದಿ: ಕನ್ನಡಕ್ಕೆ ವಿಜಯ್ ಸೇತುಪತಿ: ಇನ್ನೂ ಕನ್ಫರ್ಮ್ ಆಗಿಲ್ಲ ಅಂತಿದೆ ಟೀಮ್

    ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ (Nagabharana), ಹಿರಿಯ ನಟ ದೇವರಾಜ್ (Devaraj), ನಟಿ ಭಾವನಾ ರಾಮಣ್ಣ (Bhavana Ramanna) ಮತ್ತು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಆಗಮಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ವೆಬ್ ಸೈಟ್ ಕೂಡ ಲೋಕಾರ್ಪಣೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಲವು ಜಿಲ್ಲೆಗಳಲ್ಲಿ ಬೃಹತ್ ಕಾರ್ಯಕ್ರಮದಲ್ಲಿ `ಸಿದ್ದು ನಿಜಕನಸುಗಳು’ ಕೃತಿ ಬಿಡುಗಡೆಗೆ ಪ್ಲಾನ್?

    ಹಲವು ಜಿಲ್ಲೆಗಳಲ್ಲಿ ಬೃಹತ್ ಕಾರ್ಯಕ್ರಮದಲ್ಲಿ `ಸಿದ್ದು ನಿಜಕನಸುಗಳು’ ಕೃತಿ ಬಿಡುಗಡೆಗೆ ಪ್ಲಾನ್?

    ಬೆಂಗಳೂರು: ಸದ್ಯ ರಾಜಾದ್ಯಂತ ಸಂಚಲನ ಸೃಷ್ಟಿಸಿರುವ `ಸಿದ್ದು ನಿಜಕನಸುಗಳು’ (Siddu NijaKanasugalu) ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಈಗ ಆಯೋಜಿಸಿದ್ದಕ್ಕಿಂತಲೂ ದೊಡ್ಡಮಟ್ಟದಲ್ಲಿ ನಡೆಸಲು ಆಡಳಿತ ಪಕ್ಷ ಬಿಜೆಪಿ (BJP) ಪ್ಲಾನ್ ಮಾಡಿರುವುದಾಗಿ ಮೂಲಗಳು ತಿಳಿಸಿವೆ.

    `ಸಿದ್ದು ನಿಜ ಕನಸುಗಳು’ ಪುಸ್ತಕದಿಂದ ವಿಚಲಿತರಾಗಿದ್ದ ಸಿದ್ದರಾಮಯ್ಯ (Siddaramaiah) ಅಂಡ್ ಟೀಂ ಪುಸ್ತಕ ಬಿಡುಗಡೆ ಅಂತಾ ಘೋಷಣೆ ಆಗ್ತಿದ್ದಂತೆ ಕೋರ್ಟ್‌ನಿಂದ (Court) ತಡೆಯಾಜ್ಞೆ ತಂದಿದೆ. ಇದೇ ಸಿದ್ದರಾಮಯ್ಯ ಅವರ ವೀಕ್ನೆಸ್ ಅನ್ನ ಬಳಸಿಕೊಳ್ಳೋಕೆ ಬಿಜೆಪಿ ಪ್ಲಾನ್ ಮಾಡಿದೆ. ಸಿದ್ದರಾಮಯ್ಯರನ್ನೇ ನೇರ ಟಾರ್ಗೆಟ್‌ಗೆ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ.

    ಹೌದು. ಸಿದ್ದರಾಮಯ್ಯ ಅವರನ್ನ ಮಾತ್ರವೇ ಟಾರ್ಗೆಟ್ ಮಾಡ್ತಿರೋ ಬಿಜೆಪಿ, ಮತ್ತೆ ಪುಸ್ತಕ ರಿಲೀಸ್‌ಗೆ ಸಿದ್ಧತೆ ನಡೆಸಿದೆ. ಕೋರ್ಟ್ನ ತಡೆಯಾಜ್ಞೆ ತೆರವುಗೊಳಿಸೋಕೆ ವಿಶೇಷ ವಕೀಲರ ತಂಡವನ್ನ ಸಿದ್ಧತೆ ಮಾಡಿಕೊಂಡಿದೆ. ತಡೆಯಾಜ್ಞೆ ತೆರವಾಗುತಿದ್ದಂತೆ ಈಗ ಆಯೋಜಿಸಿದ್ದಕ್ಕಿಂತಲೂ ದೊಡ್ಡ ಮಟ್ಟದ ಕಾರ್ಯಕ್ರಮದಲ್ಲಿ ಸಿದ್ದು ನಿಜಕನಸುಗಳು ಕೃತಿ ಬಿಡುಗಡೆಗೆ ಪ್ಲಾನ್ ಮಾಡಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ

    ಹಾಗಾದ್ರೆ ಬಿಜೆಪಿ ಪ್ಲಾನ್ ಏನಿದೆ?: ಅದಕ್ಕಾಗಿ ವಿಶೇಷ ಲಾಯರ್‌ಗಳ ತಂಡ ಸಿದ್ಧತೆ ಮಾಡಕೊಂಡಿರೋ ಕಮಲ ಪಾಳಯ ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಕೋರ್ಟ್ ಕೊಟ್ಟಿರೋ ತಡೆಯಾಜ್ಞೆ ತೆರವು ಮಾಡಲು ಕ್ರಮವಹಿಸೋದು. ತಡೆಯಾಜ್ಞೆ ತೆರವಾದ ಕೂಡಲೇ ಮತ್ತೆ ಸಿದ್ದರಾಮಯ್ಯ ವಿರುದ್ಧ ಅಟ್ಯಾಕ್ ಮಾಡೋದು. ಈಗ ಮಾಡಿದ ಕಾರ್ಯಕ್ರಮಕ್ಕಿಂತ ದೊಡ್ಡ ಕಾರ್ಯಕ್ರಮ ಮಾಡಿ ಪುಸ್ತಕ ರಿಲೀಸ್ ಮಾಡುವುದು. ಇದನ್ನೂ ಓದಿ: ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್- ಸರಣಿ ಪೋಸ್ಟರ್ ಮೂಲಕ ತಿರುಗೇಟು

    ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಸಿದ್ದು ನಿಜ ಕನಸುಗಳು ಪುಸ್ತಕ ರಿಲೀಸ್ ಮಾಡೋದು. ಕೊಲೆಯಾದ ಹಿಂದೂ ಕಾರ್ಯಕರ್ತರ ಕುಟುಂಬ ಸದಸ್ಯರು, ಮತಾಂತರಕ್ಕೆ ಬಲಿಯಾದ ಕೊಡಗು ಭಾಗದ ಜನರನ್ನ ಕರೆಸಿ ಕಾರ್ಯಕ್ರಮದಲ್ಲಿ ಮಾತನಾಡಿಸುವುದು. ಕೇವಲ ಬೆಂಗಳೂರು ಮಾತ್ರವಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪುಸ್ತಕ ಬಿಡುಗಡೆ ಮಾಡಲು  ಪ್ಲಾನ್‌. ಪಕ್ಷದ ಪ್ರಮುಖ ಮನೇತೃತ್ವದಲ್ಲೇ ಪ್ರಮುಖ ಜಿಲ್ಲೆಗಳಲ್ಲಿ ಪುಸ್ತಕ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

    ಕೋರ್ಟ್ ತಡೆಯಾಜ್ಞೆ: ಸೋಮವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ `ಸಿದ್ದು ನಿಜಕನಸುಗಳು ಸಂಪುಟ-1′ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ (CN Ashwath Narayan) ಅವರು ಪುಸ್ತಕ ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್ ಕೋರ್ಟ್ (City Civil Court) ಪುಸ್ತಕ ಬಿಡುಗಡೆಗೆ ತಡೆ ನೀಡಿದೆ. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್- ಸರಣಿ ಪೋಸ್ಟರ್ ಮೂಲಕ ತಿರುಗೇಟು

    ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್- ಸರಣಿ ಪೋಸ್ಟರ್ ಮೂಲಕ ತಿರುಗೇಟು

    ಬೆಂಗಳೂರು: ಸಿದ್ದು ನಿಜಕನಸುಗಳು ವಿವಾದಿತ ಪುಸ್ತಕಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕೌಂಟರ್ ಕೊಟ್ಟಿದ್ದಾರೆ. ಪುಸ್ತಕ (Book) ಬಿಡುಗಡೆ ಮುನ್ನವೇ ಸರಣಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಅವರ ಸರ್ಕಾರದ ಅವಧಿಯ ಸಾಧನೆಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

    ಇವತ್ತು ಟೌನ್‌ಹಾಲ್‌ನಲ್ಲಿ ಸಿದ್ದು ನಿಜ ಕನಸುಗಳುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.‌ಅಶ್ವತ್ಥ ನಾರಾಯಣ (Ashwath Narayan) ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕದಲ್ಲಿ ಸಿದ್ದರಾಮಯ್ಯ ಫೋಟೋವನ್ನು ಟಿಪ್ಪು ಮಾದರಿಯಲ್ಲಿ ಹಾಕಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಆಯೋಜಕರ ವಿರುದ್ಧ ದೂರು ಸಹ ನೀಡಿದೆ. ಈ ನಡುವೆ ಈ ಪುಸ್ತಕಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಿದ್ದು ನಿಜಕನಸುಗಳು ಎಂಬ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

    ಸಿದ್ದರಾಮಯ್ಯ ಬಿಡುಗಡೆ ಮಾಡಿರುವ ಪೋಸ್ಟರ್‌ನಲ್ಲಿ ಏನಿದೆ?:
    ಗುಡಿಸಲು ಮುಕ್ತ ಕರ್ನಾಟಕದ ಕನಸು: ಸಿದ್ದರಾಮಯ್ಯ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು. ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

    ಶಿಕ್ಷಣ ಕ್ರಾಂತಿ -ಸಿದ್ದು ಕನಸು: ‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

    ಬಡವರಿಗೆ ಉದ್ಯೋಗಾಭಿವೃದ್ಧಿ ಕನಸು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು, ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

    ಹಸಿವು ಮುಕ್ತ ಕರ್ನಾಟಕ ಕನಸು: ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ. ಇದನ್ನೂ ಓದಿ: ಕೊಟ್ಟಿಗೆಗೆ ಚಿರತೆ ದಾಳಿ- 6 ಕೊಂದು 4 ಮೇಕೆಗಳನ್ನು ಹೊತ್ತೊಯ್ದ ಚಿರತೆ

    ಕೃಷಿರಾಮಯ್ಯನಾಗಿ ಸಿದ್ದು ಕನಸುಗಳು: ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾರ್ಚ್ 2018ರವರೆಗೆ 19,561 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಅನೇಕ ಜನಪರ ಯೋಜನೆಗಳನ್ನು ತಂದು ರೈತರ ಕನಸನ್ನು ನೆನಸು ಮಾಡಿದ್ದು ಸಿದ್ದರಾಮಯ್ಯನವರು. ಕಾಂಗ್ರೆಸ್ ಸರ್ಕಾರದ ಅವಧಿಯ ಕೃಷಿ ಬಜೆಟ್ ವೆಚ್ಚವು ಶೇ.256ರಷ್ಟು ಹೆಚ್ಚಾಗಿರುತ್ತದೆ.

    ಇಂದಿರಾ ಕ್ಯಾಂಟೀನ್: ಹಸಿದವರ ಹೊಟ್ಟೆ ತಣಿಸುತ್ತಿರುವ ಇಂದಿರಾ ಕ್ಯಾಂಟೀನ್, ಬಡವರು, ಕೂಲಿ ಕಾರ್ಮಿಕರು, ಉದ್ಯೋಗ ಅರಸಿ ದೂರದಿಂದ ಬಂದವರು, ವಿದ್ಯಾರ್ಥಿಗಳು ಮುಂತಾದವರಿಗೆ ಅತೀ ಕಡಿಮೆ ದರದಲ್ಲಿ ಉತ್ತಮ ಆಹಾರ ಒದಗಿಸುತ್ತಿರುವ ಇಂದಿರಾ ಕ್ಯಾಂಟೀನ್ ಯೋಜನೆ ಸಿದ್ದು ಕನಸಿನ ಯೋಜನೆ ನೀಡಲಾಗಿದೆ. ಹೀಗೆ ಪೋಸ್ಟರ್ ಮಾಡುವ ಮೂಲಕ ತಮ್ಮ ವಿರುದ್ಧದ ಪುಸ್ತಕ ಬಿಡುಗಡೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸೀಸನ್ ಆರಂಭ – ಪೊಲೀಸರು ಸೇರಿ 35ಕ್ಕೂ ಹೆಚ್ಚು ಜನರಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k