Tag: Book release

  • ಬುಕ್ ರಿಲೀಸ್ ಕಾರ್ಯಕ್ರಮದಲ್ಲಿ ಡಾಲಿ, ರಾಜ್ ಬಿ ಶೆಟ್ಟಿ

    ಬುಕ್ ರಿಲೀಸ್ ಕಾರ್ಯಕ್ರಮದಲ್ಲಿ ಡಾಲಿ, ರಾಜ್ ಬಿ ಶೆಟ್ಟಿ

    ನಿನ್ನೆ ಬೆಂಗಳೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ (Book release) ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್ (Dolly Dhananjay) ಮತ್ತು ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಸಾಹಿತ್ಯ ಕಾರ್ಯಕ್ರಮಗಳಿಂದ ಸಾಮಾನ್ಯವಾಗಿ ಸಿನಿಮಾ ನಟರು ದೂರ, ದೂರ. ಆದರೆ, ಡಾಲಿ ಮತ್ತು ರಾಜ್ ಬಿ ಶೆಟ್ಟಿ ಅತಿಥಿಯಾಗಿ ಬಂದು ಪುಸ್ತಕ ರಿಲೀಸ್ ಮಾಡಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ ಬಿ ಶೆಟ್ಟಿ (Raj B Shetty), ‘ಸಿನಿಮಾ ಜಗತ್ತಿನಲ್ಲಿ ಎಲ್ಲವೂ ಇದೆ. ಬರಹಗಾರರ ಕೊರತೆ ಇದೆ. ಕಥಾ ಲೋಕ ಮತ್ತು ಸಿನಿಮಾ ಲೋಕ ಹತ್ತಿರ ಬಂದಾಗ ಸಿನಿಮಾ ಕ್ಷೇತ್ರ ಶ್ರೀಮಂತ ಆಗುತ್ತದೆ ಎಂದರು. ಇದನ್ನೂ ಓದಿ:ಚೆಕ್ ಬೌನ್ಸ್ ಕೇಸ್‌ನಲ್ಲಿ ನಟ ನೀನಾಸಂ ಅಶ್ವಥ್ ಬಂಧನ

    ನಟರಿಗೂ ಒಂದು ಖಾಸಗಿ ಬದುಕು ಇರುತ್ತದೆ. ಅಲ್ಲಿ ನಾವೂ ಎಲ್ಲರ ಹಾಗೆ ಇರುತ್ತೇವೆ. ನಮ್ಮ ಒಳಗಿನ ಹುಡುಕಾಟ, ತೊಳಲಾಟ, ಸಂಘರ್ಷ ನಡೆಯುತ್ತಲೇ ಇರುತ್ತವೆ. ಒಂದು ಪ್ರೇಮಾಂಕುರ ಆಗಲಿ ಅಂತ ಕಾಯುತ್ತಿರುತ್ತವೆ. ನನ್ನ ಕೆಲಸಗಳ ನಡುವೆ ಓದು ಬಿಟ್ಟುಹೋಗಿತ್ತು. ಈಗ ಮತ್ತೆ ಓದಲು ಶುರು ಮಾಡಿದ್ದೇನೆ ಎಂದು ನಟ ನಿರ್ಮಾಪಕ ಡಾಲಿ ಧನಂಜಯ ಹೇಳಿದರು.

    ಸಾವಣ್ಣ (Sawanna) ಪ್ರಕಾಶನದ ನಾಲ್ಕು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಹಾಗೂ ಧನಂಜಯ ಮುಖ್ಯ ಅತಿಥಿಗಳಾಗಿದ್ದರು.  ಜೋಗಿ ಅವರ ಚಿಯರ್ಸ್, ಅಶ್ವತ್ಥಾಮನ್, ಕಥೆಕೂಟ ಸದಸ್ಯರ ಒಲವು ತುಂಬುವುದಿಲ್ಲ ಹಾಗೂ ಜಗದೀಶ ಶರ್ಮ ಸಂಪ ಅವರ ದಶಕಂಠ ರಾವಣ ಕೃತಿಗಳು ಅನಾವರಣಗೊಂಡವು. ಜೋಗಿ, ಗೋಪಾಲಕೃಷ್ಣ ಕುಂಟಿನಿ, ಜಮೀಲ್ ವೇದಿಕೆಯಲ್ಲಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧರ್ಮಸ್ಥಳದಲ್ಲಿ ‘ಈಶ್ವರಾರ್ಪಣ’ ಬಿಡುಗಡೆ

    ಧರ್ಮಸ್ಥಳದಲ್ಲಿ ‘ಈಶ್ವರಾರ್ಪಣ’ ಬಿಡುಗಡೆ

    ಉಜಿರೆ: ಉಡುಪಿಯ ಎಂ.ಜಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಅರವಿಂದ ಹೆಬ್ಬಾರ್ ಸಂಪಾದಕತ್ವದಲ್ಲಿ ಪ್ರಕಟಿಸಿದ ‘ಈಶ್ವರಾರ್ಪಣ’ ಗ್ರಂಥವನ್ನು ಧರ್ಮಸ್ಥಳದಲ್ಲಿ ಭಾನುವಾರ ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

    ಈಶ್ವರಯ್ಯ ಅವರ ವಿಮರ್ಶಾ ಲೇಖನಗಳ ಸಂಗ್ರಹವೇ ‘ಈಶ್ವರಾರ್ಪಣ’. ಪುಸ್ತಕದ ಸಂಪಾದಕರಾದ ಪ್ರೊ. ಅರವಿಂದ ಹೆಬ್ಬಾರ್ ಉಪಸ್ಥಿತರಿದ್ದರು. ಧರ್ಮಸ್ಥಳದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಕ್ಯಾಮರಾಗಳ ವ್ಯವಸ್ಥಿತ ಜೋಡಣೆ ಬಗ್ಗೆ ಈಶ್ವರಯ್ಯ ನೀಡಿದ ಸಹಕಾರವನ್ನು ಹೆಗ್ಗಡೆಯವರು  ಸ್ಮರಿಸಿದ್ದಾರೆ.

    ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶಾಂತಿವನ ಟ್ರಸ್ಟ್‍ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

  • ಪ್ರೀತಿಯ ಶ್ವಾನದ ಬಗ್ಗೆ ಬರೆದ ಪುಸ್ತಕವನ್ನು ಗೋಪಿ ಕೈಯಲ್ಲೇ ಬಿಡುಗಡೆ ಮಾಡಿಸಿದ ಸುಧಾಮೂರ್ತಿ

    ಪ್ರೀತಿಯ ಶ್ವಾನದ ಬಗ್ಗೆ ಬರೆದ ಪುಸ್ತಕವನ್ನು ಗೋಪಿ ಕೈಯಲ್ಲೇ ಬಿಡುಗಡೆ ಮಾಡಿಸಿದ ಸುಧಾಮೂರ್ತಿ

    ಬೆಂಗಳೂರು: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಏನಾದರೊಂದು ಸಾಮಾಜಿಕ ಕಾರ್ಯಗಳಿಗೆ ಸುದ್ದಿಯಾಗುತ್ತಿರುತ್ತಾರೆ. ಈ ಬಾರಿ ತಮ್ಮ ಪ್ರೀತಿಯ ಶ್ವಾನದ ಕೈಯಲ್ಲಿ ತಾವು ಬರೆದ ಪುಸ್ತಕವನ್ನು ಬಿಡುಗಡೆ ಮಾಡಿಸಿ ಪ್ರಾಣಿ ಪ್ರೇಮ ತೋರಿದ್ದಾರೆ.

    ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ತಮ್ಮ ಮೆಚ್ಚಿನ ಸಾಕು ನಾಯಿ ಗೋಪಿ ಬಗ್ಗೆ ಬರೆದಿರುವ ‘ದ ಗೋಪಿ ಡೈರೀಸ್ – ಕಮಿಂಗ್ ಹೋಮ್’ ಪುಸ್ತಕವನ್ನು ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಿದರು. ತಮ್ಮ ಮತ್ತು ತಮ್ಮ ಪ್ರೀತಿಯ ಶ್ವಾನ ಗೋಪಿ ಜೊತೆ ಇರುವ ಒಡನಾಟ, ಮನೆಯಲ್ಲಿ ಗೋಪಿ ಕಿತಾಪತಿಗಳನ್ನು ಈ ಪುಸ್ತಕದಲ್ಲಿ ಸುಧಾ ಮೂರ್ತಿಯವರು ನೆನಪಿಸಿಕೊಂಡು ಪದಗಳನ್ನಾಗಿಸಿದ್ದಾರೆ.

    ವಿಶೇಷ ಏನೆಂದರೆ ತಮ್ಮ ನೆಚ್ಚಿನ ಸಾಕು ನಾಯಿ ಗೋಪಿಯಿಂದಲೇ ಈ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಪ್ರೀತಿಯ ಶ್ವಾನಗಳ ಬಗ್ಗೆ ಹಲವರು ಹಲವು ರೀತಿಯ ಒಡನಾಟ, ಪ್ರೀತಿಯನ್ನು ಬೆಳೆಸಿಕೊಂಡಿರುತ್ತಾರೆ. ಸುಧಾಮೂರ್ತಿಯವರು ಕೂಡ ಅದೇ ಶ್ವಾನದ ಬಗ್ಗೆ ಬರೆದ ಪುಸ್ತಕವನ್ನು ಅದರ ಕೈಯಿಂದಲೇ ಬಿಡುಗಡೆ ಮಾಡಿಸುವ ಮೂಲಕ ನಾಯಿ ಮೇಲಿನ ಪ್ರೀತಿಯನ್ನು ತೋರಿಸಿದ್ದಾರೆ.

  • ಸಿದ್ದರಾಮಯ್ಯ ಮಾಡದ ತಪ್ಪಿಗೆ ನೋವು ಅನುಭವಿಸಿದ್ದಾರೆ: ರಮೇಶ್ ಕುಮಾರ್

    ಸಿದ್ದರಾಮಯ್ಯ ಮಾಡದ ತಪ್ಪಿಗೆ ನೋವು ಅನುಭವಿಸಿದ್ದಾರೆ: ರಮೇಶ್ ಕುಮಾರ್

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಗನನ್ನು ಕಳೆದುಕೊಂಡ ನೋವಿಗಿಂತ, ತಾವು ಮಾಡದೇ ಇರುವ ತಪ್ಪಿಗೆ ಹೆಚ್ಚು ನೋವು ಅನುಭವಿಸಿದ್ದಾರೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದ್ದಾರೆ.

    ಸಿದ್ದರಾಮಯ್ಯ ಅವರ ಆಡಳಿತ ಅಂತರಂಗ ಬಹಿರಂಗ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗೆ ಬಂದ ಮಗ ಕಣ್ಮುಂದೆ ಸಾವು, ಜನರಿಗೆ ಇನ್ನಷ್ಟು ಉತ್ತಮ ಕೆಲಸ ಮಾಡಬೇಕು ಅಂದುಕೊಂಡಾಗ ಸೋಲು. ಈ ಸೋಲಿನಿಂದ ಆ ಜೀವ ಎಷ್ಟು ಪರಿತಪಿಸಿರಬಹುದು. ಅವಿಭಕ್ತ ಕುಟುಂಬದಲ್ಲಿ ಆದ ಸಣ್ಣ ಗಲಾಟೆ ಕುಟುಂಬ ಒಡೆಯಿತು. ಅದೇ ರೀತಿ ಕಾಂಗ್ರೆಸ್‍ನಲ್ಲಿ ಆದ ಬೆಳವಣಿಗೆಗಳಿಂದ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿಗೆ ಬರಬೇಕಾಯಿತು. ಮಾಡದ ತಪ್ಪಿಗೆ ಅವರು ನೋವು ಅನುಭವಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರ ಪರಿಸ್ಥಿತಿ ತಿಳಿಸಿ ದುಃಖಿಸಿದರು.

    2018ರಲ್ಲಿ ಕಾಂಗ್ರೆಸ್ ಸೋಲುವುದಕ್ಕೆ ಕಾಂಗ್ರೆಸ್ ಒಳಜಗಳವೇ ಕಾರಣ. ದೇವರಾಜು ಅರಸು ಬಂದ ಬಳಿಕ ಭ್ರಷ್ಟಾಚಾರ ಜಾಸ್ತಿ ಆಯ್ತು ಎಂದು ಹೇಳಿದರು. ಯಾಕೆಂದರೆ ಅವರನ್ನ ಸಮರ್ಥಿಸಿಕೊಳ್ಳುವವರು ಯಾರು ಇರಲಿಲ್ಲ. ಹಾಗೆಯೇ ಸಿದ್ದರಾಮಯ್ಯ ಅವರಿಗೂ ಅದೇ ಪರಿಸ್ಥಿತಿ ಆಗಿದೆ. ಇವರಿಬ್ಬರಿಗಿಂತ ಮೊದಲು ಬಂದವರು ಬಹಳ ಹಣ ತಿಂದರು. ಅವರಿಗೆ ಸಮರ್ಥಿಸಿಕೊಳ್ಳಲು ಜನರಿದ್ದರು ಎಂದರು.

    ನೀವು ನೋಡಿರುವುದು ಬಹಿರಂಗ ಆದರೆ ಒಳಗೆ ಕೈ, ಕಾಲು ಹಿಡಿದುಕೊಂಡು ನಮ್ಮನ್ನ ಬದುಕಿಸಿ ಎಂದು ಸಹಿ ಹಾಕಿಸಿರುತ್ತಾರೆ, ಅದು ಅಂತರಂಗ. ಇದರ ಬಗ್ಗೆ ಪುಸ್ತಕದಲ್ಲಿ ಬರೆದಿಲ್ಲ, ಇದು ಸಿದ್ದರಾಮಯ್ಯ ಅವರೇ ಬರೆಯಲು ಸಾಧ್ಯ. ಹೀಗಾಗಿ ಟೈಟಲ್ ಕೊಟ್ಟಿರುವುದು ಸರಿಯಲ್ಲ ಎಂದು ಪುಸ್ತಕದ ಬಗ್ಗೆ ಅಭಿಪ್ರಾಯ ತಿಳಿಸಿದರು.

    ಕೋಲಾರಕ್ಕೆ ಬನ್ನಿ ಎಂದು ನಾನು, ನಜೀರ್ ಅಹಮದ್ ಸಿದ್ದರಾಮಯ್ಯ ಅವರನ್ನು ಬೇಡಿಕೊಂಡಿದ್ದೆವು. ತನ್ನ ಕ್ಷೇತ್ರ ಬಿಟ್ಟು ಬರಬಾರದು ಎಂದು ಅವರು ಬರಲಿಲ್ಲ. ಕೆಲವರು ಬಿಟ್ಟಿಲ್ಲವಾ ಕ್ಷೇತ್ರವನ್ನ? ಅವರಿಗಿಲ್ಲದು ನಿಮಗೆ ಬೇಕಾ? ಚಾಮುಂಡೇಶ್ವರಿ ಸೋಲಿನಿಂದ ಹೊರಬನ್ನಿ. ನೀವೇ ಸಾಕಿದ ಗಿಣಿ ನಿಮಗೆ ಕುಕ್ಕಿದೆ ಎಂದು ಹಾಡು ಹೇಳಿ, ಅನರ್ಹ ಶಾಸಕರು ಕೇಳಿದ್ದೆಲ್ಲ ಕೊಟ್ಟಿರಿ, ಆದರೆ ಅವರು ನಿಮಗೆ ಕುಕ್ಕಿ ಹೋಗಿದ್ದಾರೆ. ಆದ್ದರಿಂದ ನಿಮ್ಮ ಮುಖದ ಮೇಲೆ ಗಾಯ ಆಗಿದೆ. ಅದನ್ನ ಹೊಗಲಾಡಿಸಬೇಕಿದೆ ಎಂದು ಅನರ್ಹ ಶಾಸಕರ ವಿರುದ್ಧ ರಮೇಶ್ ಕುಮಾರ್ ಕಿಡಿಕಾರಿದರು.

  • ಮಾಜಿ ಪ್ರಧಾನಿಯಿಂದ ಆಸ್ಪತ್ರೆಯಲ್ಲಿಯೇ ಸ್ನೇಹಿತನ ಜೀವನ ಕಥನ ಬಿಡುಗಡೆ

    ಮಾಜಿ ಪ್ರಧಾನಿಯಿಂದ ಆಸ್ಪತ್ರೆಯಲ್ಲಿಯೇ ಸ್ನೇಹಿತನ ಜೀವನ ಕಥನ ಬಿಡುಗಡೆ

    ಮಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯ ಅವಿಭಜಿತ ಜನತಾದಳ ಮುಖಂಡರಾಗಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕದ್ರಿ ಎಂ.ಸಂಜೀವ ಅವರ ಜೀವನ ಕಥನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ರಾತ್ರಿ ಯುನಿಟಿ ಆಸ್ಪತ್ರೆಯ ವಾರ್ಡಿನಲ್ಲಿ ಬಿಡುಗಡೆ ಮಾಡಿದರು.

    ಮಂಗಳೂರಿಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿದೇವೇಗೌಡ್ರು, ಆಸ್ಪತ್ರೆಗೆ ದಾಖಲಾಗಿದ್ದ ತಮ್ಮ ರಾಜಕೀಯ ಸ್ನೇಹಿತ ಎಂ.ಸಂಜೀವ ಅವರ ಯೋಗ ಕ್ಷೇಮ ವಿಚಾರಿಸಲು ತೆರಳಿದರು. ಇದೇ ಸಂದರ್ಭದಲ್ಲಿ ಎಂ.ಸಂಜೀವ ಅವರ `ಸಂಜೀವನ- ಜನನಾಯಕ ಎಂ.ಸಂಜೀವ ಅವರ ಜೀವನ ಕಥನ’ ಎಂಬ ಕೃತಿಯನ್ನು ಬಿಡುಗಡೆ ಮಾಡಿದರು.

    ಪುಸ್ತಕ ಬಿಡಗಡೆಗೊಳಿಸಿದ ಬಳಿಕ ಮಾತನಾಡಿದ ಮಾಜಿ ಪ್ರಧಾನಿ, ತನಗಾಗಿ ಜೀವನ ನಡೆಸದೆ ಯಾವುದೇ ಫಲಾಪೇಕ್ಷೆ ಇಲ್ಲದೆ ಇತರರಿಗಾಗಿ ಕೆಲಸ ಮಾಡಿದವರಿದ್ದರೆ ಅದು ಸಂಜೀವರು. ಸಂಜೀವರಿಗೆ ಸ್ಥಾನಮಾನಗಳು ಸಿಗಲಿ ಸಿಗದೇ ಇರಲಿ, ಅವರು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕಾಯಕ ಜೀವಿಯಾಗಿದ್ದರು. ಬಡವರು, ಕಾರ್ಮಿಕರು, ಹಿಂದುಳಿದ ವರ್ಗದ ಪರವಾಗ ನಿರಂತರ ಹೋರಾಟ ಮಾಡುತ್ತಲೇ ತಮ್ಮ ಆಯುಷ್ಯದ ಬಹುಪಾಲು ಸವೆಸಿದವರು ಸಂಜೀವ ಅಂತ ಹೇಳಿದರು.

    ಅಷ್ಟೆ ಅಲ್ಲದೆ ಶಾಲಾ ದಿನಗಳಲ್ಲಿ ಸ್ವಾತಂತ್ರ್ಯ ಹೋರಾಟದಿಂದ ಸಾಮಾಜಿಕ ಜೀವನ ಪ್ರವೇಶಿಸಿದ ಸಂಜೀವರು ತುರ್ತು ಪರಿಸ್ಥಿತಿಯಲ್ಲಿ ಸಕ್ರಿಯರಾಗಿದ್ದು ಅವರನ್ನು ಹಲವು ಬಾರಿ ಬಂಧಿಸಲಾಗಿತ್ತು. ಅನಂತರ, ಭೂಸುಧಾರಣೆ ಕಾಲದಲ್ಲಿ ಬಡವರಿಗೆ ಭೂಮಿ ದೊರಕಿಸಲು, ಬಾಡಿಗಾರರ ವಿರುದ್ಧ ನಡೆಯುತ್ತಿದ್ದ ಅನ್ಯಾಯದ ವಿರುದ್ಧ ಕೆಲಸ ಮಾಡಿದ್ದರು. ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯರಾಗಿದ್ದ ಎಂ.ಸಂಜೀವ ಅವರು ತುರ್ತು ಪರಿಸ್ಥಿತಿ ಕಾಲದಿಂದಲೂ ಜನಪರ ಹೋರಾಟದಲ್ಲಿ ಭಾಗಿಯಾಗಿದ್ದರು. ಯಾವುದೇ ರೀತಿಯ ರಾಜಕೀಯ ಅಧಿಕಾರ ದೊರೆಯದಿದ್ದರೂ ಎಂ.ಸಂಜೀವ ಅವರು ಜನಪರವಾದ ಕಾರ್ಯದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದವರು ಎಂದು ಹೇಳಿದರು.

    ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಸ್ನೇಹಿತ ಎಂ.ಸಂಜೀವ ಅವರಿಗಿಂತ ಕೇವಲ ಹತ್ತು ದಿವಸ ಹಿರಿಯರಾಗಿದ್ದಾರೆ. ಸಂಸ್ಥಾ ಕಾಂಗ್ರೆಸ್, ಜನತಾ ಪಕ್ಷ, ಜನತಾದಳ ಮುಖಂಡರಾಗಿದ್ದ ಎಂ.ಸಂಜೀವ ಅವರು ತಮ್ಮ ಜೀವನವನ್ನು ಪರರಿರಾಗಿ ತ್ಯಾಗ ಮಾಡಿದ ಸಮಾಜ ಸೇವಕ ಮತ್ತು ಬ್ರಹ್ಮಚಾರಿ ಆಗಿದ್ದರು. ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಜನತಾದಳ ಟಿಕೇಟಿನಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋಲನುಭವಿಸಿದ್ದರು. ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾಗ ಹಲವಾರು ವಸತಿ ಬಡಾವಣೆ ಅಭಿವೃದ್ಧಿ ಮಾಡಿದ್ದಲ್ಲದೆ ನಗರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದ್ದರು.

    ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಮಾಜಿ ಸಚಿವರಾದ ಅಮರನಾಥ ಶೆಟ್ಟಿ ದಂಪತಿಗಳು, ಯೆನೆಪೋಯ ಮೊಹಮ್ಮದ್ ಕುಂಞ, ಯುನಿಟಿ ಆಸ್ಪತ್ರೆಯ ಹಬೀಬ್ ರೆಹಮಾನ್, ಹಬೀಬ್ ಮೊಹಮ್ಮದ್ ಆಜ್ಮಾಲ್, ಪ್ರಜ್ವಲ್ ರೇವಣ್ಣ, ಜಾತ್ಯತೀತ ಜನತಾದಳ ಮುಖಂಡರಾದ ಮಹಮ್ಮದ್ ಕುಂಞ, ಎಂ.ಬಿ.ಸದಾಶಿವ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ, ಎಂ.ಸಂಜೀವ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬುದ್ಧಿಯನ್ನು ಮಾರಾಟಕ್ಕೆ ಇಟ್ಟವರು ವಿಚಾರವಾದಿಗಳು – ಬಣ್ಣ ಕಳಚಿದ್ರೆ ಅವ್ರ ಮುಖ ನೋಡಲು ಸಾಧ್ಯವಿಲ್ಲ: ಸಚಿವ ಹೆಗಡೆ

    ಬುದ್ಧಿಯನ್ನು ಮಾರಾಟಕ್ಕೆ ಇಟ್ಟವರು ವಿಚಾರವಾದಿಗಳು – ಬಣ್ಣ ಕಳಚಿದ್ರೆ ಅವ್ರ ಮುಖ ನೋಡಲು ಸಾಧ್ಯವಿಲ್ಲ: ಸಚಿವ ಹೆಗಡೆ

    ಬೆಂಗಳೂರು: ಎಲ್ಲೊ ಓದಿ, ಕಾಪಿ ಪೇಸ್ಟ್ ಮಾಡಿ ಪಿಎಚ್ ಡಿ ಪಡೆದ ವ್ಯಕ್ತಿಗಳ ರೀತಿ ಸಾರ್ವಕರ್ ಅಲ್ಲ. ತಮ್ಮ ಭಾವನೆ, ಅನಿಸಿಕೆಗಳನ್ನು ಸಾರ್ವಕರ್ ಬರೆದಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

    ನಗರದ ಸುಚಿತ್ರಾ ಕಲಾ ಕೇಂದ್ರದಲ್ಲಿ ಆಯೋಜಿಸಿದ್ದ ಬಿ.ಬಿ.ಹರೀಶ್ ಅನುವಾದ `ಹಿಂದುತ್ವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ವಿಚಾರವಾದಿಗಳು ತಾವು ಹೇಳಿದ್ದೇ ಸರಿ ಎಂದು ವಾದಿಸುತ್ತಾರೆ. ಅವರು ಬುದ್ಧಿಯನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಅಂತಹ ಮೊಂಡು ಸ್ವಭಾವದಲ್ಲಿ ನಾನು ಬೆಳೆದಿಲ್ಲ, ಒಳ್ಳೆಯದನ್ನು ಸ್ವೀಕರಿಸುವುದು ನನಗೆ ಗೊತ್ತು ಎಂದು ಹೇಳಿದರು.

    ವಿಚಾರವಾದಿಗಳು ನಾಟಕೀಯ ಜೀವನ ಮಾಡುತ್ತಿದ್ದಾರೆ. ಅವರು ಜಾತ್ಯತೀತ ಬಣ್ಣ ಹಚ್ಚಿಕೊಂಡು ಬಣ್ಣ ಕಳಚಿದ ಮೇಲೆ ಅವರ ಮುಖ ನೋಡಲು ಸಾಧ್ಯವಾಗುವುದಿಲ್ಲ. ಕೆಲವು ದಿನ ವಿದೇಶದಲ್ಲಿದ್ದು, ಮತ್ತೇ ಭಾರತಕ್ಕೆ ಬಂದು ದೇಶದ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ವಿದೇಶದಲ್ಲಿ ಕಲಿತ ನಾಲ್ಕು ಪದಗಳ ಬಳಕೆಯಲ್ಲಿಯೇ ದೇಶವನ್ನು ತೆಗಳಿ ಮೆಚ್ಚುಗೆ ಪಡೆಯಲು ಕೆಲವರು ತುಡಿಯುತ್ತಿರುತ್ತಾರೆ ಎಂದು ವ್ಯಂಗ್ಯವಾಡಿದರು.

    ಹಿಂದೂಗಳು ಎಲ್ಲಿಂದಲೋ ವಲಸೆ ಬಂದವರಲ್ಲ. ಸಂಸ್ಕೃತಿ, ಇತಿಹಾಸ ಗೊತ್ತಿಲ್ಲದ ವಿಚಾರವಾದಿಗಳು ಅವರಿಗೆ ಬೇಕಾದ ಹಾಗೇ ಮಾತನಾಡುತ್ತಾರೆ. ಹಿಂದುತ್ವ ನಾಲ್ಕು ಜನ ಕವಿಗಳು ಬರೆದ ಸಾಹಿತ್ಯವಲ್ಲ. ಹಿಂದುತ್ವಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ, ಹಿಂದುತ್ವ ರಾಜಕಾರಣದ ಫುಟ್ಬಾಲ್ ಅಲ್ಲ ಎಂದರು.

    ಹಿಂದುತ್ವ ರಾತ್ರಿ ಬಿದ್ದ ಕನಸು ಅಲ್ಲ, ಅದು ಬದುಕಿನ ಸಿದ್ಧಾಂತವಾಗಿದೆ. ಸೊನ್ನೆ ಇಲ್ಲದೆ ಜಗತ್ತು ಬದಲಾವಣೆ ಆಗುತ್ತಿರಲಿಲ್ಲ ಎಂದು ಐನ್‍ಸ್ಟೀನ್ ಹೇಳುತ್ತಾರೆ. ಹಾಗೇ ನಾವು ಹಿಂದುತ್ವದ ಬಗ್ಗೆ ಮಾತನಾಡಿದರೆ ಅದು ಸಂವಿಧಾನಕ್ಕೆ ಮಾಡಿದ ಅಪರಾಧ ಎನ್ನುತ್ತಾರೆ. ಅಲ್ಲದೇ ನಮ್ಮನ್ನು ಜಾತ್ಯಾತೀತ ವಿರೋಧಿ ಎಂದು ಕರೆಯುತ್ತಾರೆ. ಬೆಕ್ಕಿನ ಹಾಗೇ ಮೀಯಾವ್ ಅಂದ್ರೆ ಮಾತ್ರ ನೀನು ಜಾತ್ಯಾತೀತ ಎನ್ನುತ್ತಾರೆ. ಕ್ರೈಸ್ತರು, ಮುಸ್ಲಿಮರು ತಮ್ಮ ಧರ್ಮದ ಬಗ್ಗೆ ಎದೆತಟ್ಟಿ ಹೇಳಿಕೊಳ್ಳುತ್ತಾರೆ. ಆದರೆ ಹಿಂದೂಗಳು ಹೇಳಿಕೊಳ್ಳುವುದಿಲ್ಲ. ಏಕಂದರೆ ನಮಗೆ ನಮ್ಮ ರಕ್ತದ ಪರಿಚಯವಿಲ್ಲ ಎಂದು ಅವರು ಹೇಳಿದರು.

    ಹಿಂದುತ್ವವನ್ನು ಚಿಕ್ಕದಾಗಿ ಮಾಡುವ ಪ್ರಯತ್ನಕ್ಕೆ ಕೈ ಹಾಕಬಾರದು. ವಿದೇಶಿ ಬಂಡವಾಳಕ್ಕೆ ಬುದ್ಧಿ ಜೀವಿಗಳು ತಮ್ಮನ್ನ ಮಾರಿಕೊಂಡಿದ್ದು, ಹಿಂದುತ್ವವನ್ನು ಕೀಳಾಗಿ ಕಾಣುತ್ತಿದ್ದಾರೆ. ರಾಮ, ಕೃಷ್ಣ, ಗಣೇಶ, ಸುಬ್ರಮಣ್ಯರು ಬ್ರಾಹ್ಮಣರಲ್ಲ. ಜಾತಿಯಿಂದ ನಾವು ಗೌರವ ನೀಡಿಲ್ಲ, ಬದಲಾಗಿ ಶ್ರೇಷ್ಠ ವಿಚಾರಗಳನ್ನು ಒಪ್ಪಿಕೊಂಡಿದ್ದೇವೆ. ಸತ್ಯ ಒಪ್ಪಿಕೊಳ್ಳುವು, ಜಗತ್ತಿನ ಒಳ್ಳೆಯ ಸ್ವಭಾವವೇ ಹಿಂದುತ್ವವಾಗಿದೆ. ಇಂತಹ ವಿಚಾರಗಳು ಮುರ್ಖ ವಿಚಾರವಾದಿಗಳಿಗೆ ಅರ್ಥವಾಗುವುದಿಲ್ಲ. ಯಾರದ್ದೋ ನಾಲಿಗೆ ಹೊರಳಿದ್ದಕ್ಕೆ ನಾವು ಹಿಂದೂಗಳು ಆಗಿಲ್ಲ ಎಂದು ಹೇಳುವ ಮೂಲಕ ವಿಚಾರವಾದಿಗಳನ್ನು ಕುಟುಕಿದರು.

    ಮಾಧ್ಯಮಗಳ ವಿರುದ್ಧ ಕಿಡಿ: ನಾನು ಏನು ತಪ್ಪು ಮಾಡುತ್ತೇನೋ ಅದನ್ನೇ ಮಾಧ್ಯಮದವರು ಹೈಲೆಟ್ ಮಾಡುತ್ತಾರೆ. ಏಕೆಂದರೆ ಮಾಧ್ಯಮಗಳ ಸಾಮಥ್ರ್ಯ ಅಷ್ಟೇ. ಅವರು ಏನು ಹೇಳಿದರೂ ಅಂತಾ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ರಕ್ತದ ಪರಿಚಯ ನನಗಿದೆ. ಯಾರೋ ಏನೋ ಹೇಳಿದರು ಅಂತಾ ನನ್ನ ತನವನ್ನು ನಾನು ಬದಲಾವಣೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.