Tag: Booker Prize

  • ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿದ್ದರಾಮಯ್ಯ

    ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿದ್ದರಾಮಯ್ಯ

    ಬೆಂಗಳೂರು: ಸಾಹಿತ್ಯಕ್ಕೆ (Literature) ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ (Vidhana Soudha) ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕರ್ನಾಟಕ ಸರ್ಕಾರ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೂಕರ್ ಪ್ರಶಸ್ತಿ ವಿಜೇತರಿಗೆ ಸನ್ಮಾನ ಮಾಡಿದ ಬಳಿಕ ಸಿಎಂ ಮಾತನಾಡಿದರು. ಇದನ್ನೂ ಓದಿ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್

    ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ. ಬಾನು ಅವರ ಕತೆಗಳನ್ನು ಇಂಗ್ಲಿಷ್‌ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು. ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: Chikkaballapura | ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ – ಆಟೋ ಚಾಲಕ ಅರೆಸ್ಟ್

    ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿಯನ್ನು ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

    ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ. ಬಸವಣ್ಣನವರು ಇವ ನಮ್ಮವ ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು. ಇದನ್ನೂ ಓದಿ: 4,000 ಸಕ್ರಿಯ ಕೊರೊನಾ ಕೇಸ್‌ಗಳ ಸನಿಹದಲ್ಲಿ ಭಾರತ – ಕೇರಳದಲ್ಲಿಯೇ 1,400 ಪ್ರಕರಣ

    ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ ಸರ್ಕಾರದಿಂದ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು. ಇದನ್ನೂ ಓದಿ: ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

  • ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ – ಸಿಎಂ, ಹೆಚ್‌ಡಿಕೆ ಅಭಿನಂದನೆ

    ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ – ಸಿಎಂ, ಹೆಚ್‌ಡಿಕೆ ಅಭಿನಂದನೆ

    ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್(Banu Mushtaq) ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ(Siddaramaiah) ಅವರು, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮ್ಯಾನೇಜರ್ ದಿಢೀರ್ ವರ್ಗಾವಣೆ

    ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ `ಹೃದಯ ದೀಪ’ವನ್ನು ಇಂಗ್ಲಿಷ್‌ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ

    ಅಭಿನಂದಿಸಿದ ಹೆಚ್‌ಡಿಕೆ
    ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಹಾಗೆಯೇ, ಬೂಕರ್ ಪ್ರಶಸ್ತಿ ಭಾಜನವಾಗಿರುವ ಅವರ `ಹೃದಯ ದೀಪ’ ಕೃತಿಯನ್ನು ಇಂಗ್ಲಿಷ್ ಭಾಷೆಗೆ ಅನುವಾದಿಸಿರುವ ಲೇಖಕಿ ದೀಪಾ ಭಸ್ತಿ ಅವರಿಗೂ ಅಭಿನಂದನೆಗಳು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 26 ನಕ್ಸಲರು ಬಲಿ, ಯೋಧ ಹುತಾತ್ಮ

    ಬಾನು ಮುಷ್ತಾಕ್ ಅವರಿಂದ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಕೃತಿಗಳು ಬರಲಿ. ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತವಾಗಲಿ ಹಾಗೂ ಜಗತ್ತಿನ ಉದ್ದಗಲಕ್ಕೂ ಕನ್ನಡದ ಕಂಪು ಹರಡಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್ ಮೂಲಕ ಶುಭಕೋರಿದ್ದಾರೆ.