Tag: Border Issues

  • ನಮ್ಮ ನೆಲ, ಜಲ, ಗಡಿ ವಿಚಾರ ಮುಖ್ಯ – ಬೊಮ್ಮಾಯಿ

    ನಮ್ಮ ನೆಲ, ಜಲ, ಗಡಿ ವಿಚಾರ ಮುಖ್ಯ – ಬೊಮ್ಮಾಯಿ

    ಬೆಂಗಳೂರು: ನಮಗೆ ನಮ್ಮ ನೆಲ, ಜಲ, ಗಡಿ ವಿಚಾರ ಮುಖ್ಯ. ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್‌ ಶಾ (Amit Shah) ಅವರಿಗೆ ಸ್ಪಷ್ಟಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ನಗರದಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗುತ್ತಿದ್ದೇನೆ. ಗಡಿ ವಿಚಾರದ ಬಗ್ಗೆ ಅಮಿತ್ ಶಾ ಅವರು ಸಭೆ ಕರೆದಿದ್ದಾರೆ. ಗಡಿ ವಿಚಾರದ ಸಭೆ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡ್ತೇನೆ. ನಾನು ಎಲ್ಲ ಸಿದ್ಧತೆಗಳ ಜೊತೆ ಹೋಗುತ್ತಿದ್ದೇನೆ. ಅವಕಾಶ ಸಿಕ್ಕಿದರೆ ಸಂಪುಟ ಬಗ್ಗೆ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೋಮುವಾದಿ ಪಕ್ಷ ಮಣಿಸಲು ಕಾಂಗ್ರೆಸ್‌ ಸೇರಲು ನಿರ್ಧಾರ – ವೈಎಸ್‌ವಿ ದತ್ತ

    ಗಡಿ ವಿವಾದ ಕುರಿತು ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಆರು ದಶಕಗಳಿಂದ ಗಡಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ನಾವು ಹಾಗಲ್ಲ, ನಮಗೆ ನಮ್ಮ ನೆಲ-ಜಲ-ಗಡಿ ವಿಚಾರ ಮುಖ್ಯ ಎಂದು ಹೇಳಿದರು.

    ಒಳಮೀಸಲಾತಿಗೆ ಸಂಪುಟ ಉಪಸಮಿತಿ ರಚನೆ ಕಣ್ಣೊರೆಸುವ ತಂತ್ರ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಒಳಮೀಸಲಾತಿ ಕುರಿತು ನ್ಯಾ.ಸದಾಶಿವ ವರದಿ ಕಡೆ ಐದು ವರ್ಷ ಸಿದ್ದರಾಮಯ್ಯ ತಿರುಗಿ ನೋಡಿರಲಿಲ್ಲ. ಆ ರಿಪೊರ್ಟ್ ಅನ್ನು ತೆಗೆದು ನೋಡುವ ಧೈರ್ಯವಿರಲಿಲ್ಲ. ಇದೇ ಸಮುದಾಯ ಹುಬ್ಬಳಿಯಲ್ಲಿ ಸಮಾವೇಶ ಮಾಡಿತ್ತು. ಆಗ ದೀಪ ಹಚ್ಚಿ ಮಾತ್ರ ಬಂದ್ರು ಸಿದ್ದರಾಮಯ್ಯ. ಅಂಥವರ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ

    ನಮ್ಮ ಬದ್ದತೆ ಏನು ಅಂತ ಗೊತ್ತಿದೆ. ಅಂತಹ ಪ್ರಮುಖ ವಿಚಾರಗಳಲ್ಲಿ ದಿಟ್ಟತನ ತೆಗೆದುಕೊಂಡಿದ್ದೇವೆ. ನೀವು ಇನ್ನೊಬ್ಬರ ಬಗ್ಗೆ ಮಾತಾಡುವ ಮುಂಚೆ, ತಾವು ಯಾವ ರೀತಿ ನಡೆದುಕೊಂಡಿದ್ರಿ ಅಂತಾ ಹಿಂತಿರುಗಿ ನೋಡಿದ್ರೆ ಒಳ್ಳೆಯದು ಎಂದು ಸಿದ್ದರಾಮಯ್ಯಗೆ ಟಾಂಗ್‌ ಕೊಟ್ಟರು.

    Live Tv
    [brid partner=56869869 player=32851 video=960834 autoplay=true]

  • ಗಡಿ ಬಂದ್‍ನಿಂದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ- ಸುಪ್ರೀಂಗೆ ಕೇರಳ ಮಾಹಿತಿ

    ಗಡಿ ಬಂದ್‍ನಿಂದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ- ಸುಪ್ರೀಂಗೆ ಕೇರಳ ಮಾಹಿತಿ

    ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಬಂದ್ ಮಾಡಲಾಗಿದ್ದು, ಪರಿಣಾಮ ಕೇರಳದ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿದೆ.

    ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವ ಕೇರಳ ಸರ್ಕಾರ, ಕೂಡಲೇ ಗಡಿ ಭಾಗವನ್ನು ತೆರವು ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿಕೊಂಡಿದೆ. ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮತ್ತಷ್ಟು ಮಾಹಿತಿ ಕೋರಿ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್‍ಗೆ ಅಫಿಡವಿಟ್ ಮೂಲಕ ಉತ್ತರ ಸಲ್ಲಿಸಿರುವ ಕೇರಳ ಈ ಆರೋಪಗಳನ್ನು ಮಾಡಿದೆ.

    ಗಡಿ ಭಾಗ ಬಂದ್ ಆಗಿರುವ ಹಿನ್ನೆಲೆ ಕೇರಳಕ್ಕೆ ತೊಂದರೆಯಾಗಿದೆ. ತುರ್ತು ಆರೋಗ್ಯ ಕಾರ್ಯಗಳಿಗೆ ತೊಂದರೆ ಉಂಟಾಗಿದೆ. ಇತರ ಅಗತ್ಯ ವಸ್ತುಗಳು ಸಾಗಾಟಕ್ಕೂ ತೊಂದರೆಯಾಗಿದೆ. ಕರ್ನಾಟಕ ತನ್ನ ರಸ್ತೆ ತಡೆ ಕ್ರಮ ಹಿಂಪಡೆಯಬೇಕೆಂದು ಆಗ್ರಹ ಮಾಡಿತ್ತು. ಆದರೆ ಕಾಸರಗೋಡು ನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದ್ದು ಗಡಿ ಭಾಗ ತೆರವು ಮಾಡಿದ್ದಲ್ಲಿ ಮತ್ತಷ್ಟು ಸೋಂಕು ಕರ್ನಾಟಕಕ್ಕೆ ಹಬ್ಬುವ ಸಾಧ್ಯತೆ ಇದೆ. ಈ ಹಿನ್ನೆಲೆ ಗಡಿ ಭಾಗ ತೆರವು ಮಾಡಲು ಸಾಧ್ಯವಿಲ್ಲ. ಇದಲ್ಲದೇ ಕೇಂದ್ರ ಸರ್ಕಾರದಿಂದಲೂ ಈ ಬಗ್ಗೆ ಆದೇಶಗಳಿದೆ ಎಂದು ಕರ್ನಾಟಕ ವಾದ ಮಂಡಿಸಿತ್ತು.

    ಎರಡೂ ಕಡೆಯ ವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸೂಚನೆ ನೀಡಿತ್ತು. ಇದಕ್ಕೂ ಮುನ್ನ ಕೇರಳ ಹೈಕೋರ್ಟ್ ಗಡಿ ತೆರವು ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಕರ್ನಾಟಕ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದೆ.

  • ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದಿಂದ ಗಡಿ ಕಿತಾಪತಿ: ಬಚ್ಚೇಗೌಡ

    ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದಿಂದ ಗಡಿ ಕಿತಾಪತಿ: ಬಚ್ಚೇಗೌಡ

    – ನಾವೇನು ಪಾಕಿಸ್ತಾನ ಶ್ರೀಲಂಕಾದಲ್ಲಿದ್ದೀವಾ?

    ಚಿಕ್ಕಬಳ್ಳಾಪುರ: ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಆಗಾಗ ಕಾಲು ಕರೆದುಕೊಂಡು ಬೆಳಗಾವಿ ಗಡಿ ಭಾಗದಲ್ಲಿ ಕಿತಾಪತಿ ಮಾಡುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಹೇಳಿದರು.

    ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ಬೆಳಗಾವಿ ಗ್ರಾಮೀಣ ಭಾಗ ರಾಜ್ಯದ ಅವಿಭಾಜ್ಯ ಅಂಗ ಎಂದು ಮಹಾಜನ್ ವರದಿಯಲ್ಲಿ ಸ್ಪಷ್ಟವಾಗಿದೆ. ಆದರೂ ಈಗಲೂ ಈ ಸಂಬಂಧ ಸುಪ್ರೀಂಕೋರ್ಟಿನಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಡಿಭಾಗದ ಮರಾಠಿಗರು ನಾವು ಕನ್ನಡಿಗರು ಸಹ ಶಾಂತವಾಗಿ ಚೆನ್ನಾಗಿದ್ದೇವೆ ಎಂದು ತಿಳಿಸಿದರು.

    ಪದೇ ಪದೇ ಮಹಾರಾಷ್ಟ್ರ ಸರ್ಕಾರ ಆಗಾಗ ಕಾಲು ಕರೆದುಕೊಂಡು ಕಿತಾಪತಿ ಮಾಡುತ್ತೆ ಇದು ಸರಿಯಲ್ಲ ತಪ್ಪು ಎಂದರು. ಅಕ್ಕ ಪಕ್ಕದ ರಾಜ್ಯಗಳಲ್ಲಿ ಅನ್ಯೋನ್ಯತೆ, ಸೌಮ್ಯತೆ, ಸಮಾಧಾನ ಇರಬೇಕು. ನಾವೇನು ಪಾಕಿಸ್ತಾನ, ಶ್ರೀಲಂಕಾದಲ್ಲಿದ್ದೀವಾ ಎಂದು ಟೀಕಿಸಿದರು. ನಾವು ನಮ್ಮ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ರಾಜ್ಯಗಳು ಭಾರತ ತಾಯಿಯ ಮಕ್ಕಳಂತೆ ಹೋಗಬೇಕು. ಅದು ಬಿಟ್ಟು ಬಾವುಟಕ್ಕೆ ಬೆಂಕಿ ಹಚ್ಚುವುದು, ಬಸ್ಸುಗಳಿಗೆ ಕಲ್ಲು ತೂರುವುದು ಇದು ಒಳ್ಳೆಯ ಸಂಸ್ಕೃತಿ ಅಲ್ಲ ಎಂದರು.