Tag: Borewell lorry

  • ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ

    ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ

    ತುಮಕೂರು: ಕಂಬಳ (Kambala) ನೋಡಿ ವಾಪಸ್ಸಾಗುತ್ತಿದ್ದ ವೇಳೆ ಬೋರ್‌ವೆಲ್ ಲಾರಿ (Borewell Lorry) ಹಾಗೂ ಕಾರಿನ (Car) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ತುಮಕೂರು ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ಚಿಗಣಿಪಾಳ್ಯ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಮಂಗಳೂರಿನ (Mangaluru) ಪೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲೀಪ್ ಲೋಬೋ (32) ಮೃತಪಟ್ಟಿದ್ದಾರೆ. ನಿತೀಶ್ ಬಂಡಾರಿ, ಪ್ರೀತಿ ಲೋಬೋ ಮತ್ತು ಹರೀಶ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಫ್ಲೈಓವರ್‌ಗೆ ಬಸ್ ಡಿಕ್ಕಿ- ನಾಲ್ವರಿಗೆ ಗಾಯ

    ಬೆಂಗಳೂರಿನಲ್ಲಿ (Bengaluru) ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಬೋರ್‌ವೆಲ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪಾಲಿಕೆ ಪ್ಲ್ಯಾನ್ – ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾದ ಪಾಲಿಕೆ

    ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಹಾಗೂ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 3ನೇ ಬ್ಯಾಚ್ ಒತ್ತೆಯಾಳುಗಳನ್ನು ಇಂದು ಬಿಡುಗಡೆ ಮಾಡಲಿದೆ ಹಮಾಸ್

  • ಬೋರ್‌ವೆಲ್ ಲಾರಿ ಪಲ್ಟಿ- ಮೂವರು ದಾರುಣ ಸಾವು

    ಬೋರ್‌ವೆಲ್ ಲಾರಿ ಪಲ್ಟಿ- ಮೂವರು ದಾರುಣ ಸಾವು

    ಚಿಕ್ಕಬಳ್ಳಾಪುರ: ಬೋರ್‌ವೆಲ್ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ.

    ಮಧ್ಯಪ್ರದೇಶ ಮೂಲದ ಮೂವರು ಕಾರ್ಮಿಕರಾದ ಅನದೇಶ್(25), ಜಗದೇವ್(21) ಹಾಗೂ ರಾಜಾರಾಮ್(26) ಮೃತ ದುರ್ದೈವಿಗಳು. ಲಾರಿ ತಮಿಳುನಾಡಿಗೆ ಸೇರಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.