Tag: BPL

  • ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದ ಅಂತ್ಯೋದಯ, ಬಿಪಿಎಲ್ ಪಡಿತರದಾರರ ಮೇಲಿನ ಕ್ರಮಕ್ಕೆ ಬ್ರೇಕ್

    ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದ ಅಂತ್ಯೋದಯ, ಬಿಪಿಎಲ್ ಪಡಿತರದಾರರ ಮೇಲಿನ ಕ್ರಮಕ್ಕೆ ಬ್ರೇಕ್

    ಬೆಂಗಳೂರು: ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ರೇಕ್‌ ನೀಡಿದೆ.

    ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದು ಬಡವರ ʼಅನ್ನಭಾಗ್ಯʼಕ್ಕೆ ಕನ್ನ ಹಾಕಿದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಆಹಾರ ಇಲಾಖೆ ಆರಂಭಿಸಿತ್ತು. ಅನರ್ಹ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸುವ ಪ್ರಕ್ರಿಯೆ ನಡೆಸಿತ್ತು. ಇದನ್ನೂ ಓದಿ: ಮದರಸಾಗಳಿಗಾಗಿ ವಿಶೇಷ ಮಂಡಳಿ ರಚನೆಗೆ ಪ್ಲಾನ್- ತಜ್ಞರ ವರದಿ ಕೇಳಿದ ಸಚಿವ ನಾಗೇಶ್

    ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 3 ಹೆಕ್ಟೇರ್‌ಗಿಂತ ಹೆಚ್ಚು ಜಮೀನು ಹೊಂದಿದವರು, 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿದವರು ಮತ್ತು ನಾಲ್ಕು ಚಕ್ರದ ವೈಯಕ್ತಿಕ ವಾಹನ ಇರುವವರು ಅಂತ್ಯೋದಯ ಅಥವಾ ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಅರ್ಹರಲ್ಲ ಎಂದು ಇಲಾಖೆ ಪಟ್ಟಿ ಮಾಡಿತ್ತು.

    ಈ ಸಂಬಂಧ ಕ್ರಮ ಕೈಗೊಳ್ಳಲು ಎಲ್ಲ ಡಿಸಿಗಳು ಮತ್ತು ಇಲಾಖೆ ಜಂಟಿ/ಉಪನಿರ್ದೇಶಕರಿಗೂ ಈ ಹಿಂದೆ ಆಹಾರ ಇಲಾಖೆ ಸೂಚನೆ ನೀಡಿತ್ತು. ಆದರೆ ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರನ್ನು ಅನರ್ಹ ಪಟ್ಟಿಗೆ ಸೇರಿಸಿರುವುದಕ್ಕೆ ಸರ್ಕಾರ ಹಾಗೂ ಪಕ್ಷದವರಲ್ಲೇ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಆದೇಶ ವಾಪಸ್‌ ತೆಗೆದುಕೊಳ್ಳಲು ಸಿಎಂ ಮೇಲೆ ಒತ್ತಡ ಕೂಡ ಹೇರಲಾಗಿತ್ತು. ಇದನ್ನೂ ಓದಿ: ಶಾಸಕ ಪ್ರೀತಂಗೌಡ ಭರ್ಜರಿ ಗಿಫ್ಟ್ – ಗೌರಿ ಹಬ್ಬಕ್ಕೆ ಸೀರೆ, ಬಳೆ, ಕುಂಕುಮ ಭಾಗ್ಯ

    ಇದೀಗ ತನ್ನ ಸುತ್ತೋಲೆಯನ್ನು ಮುಂದಿನ ಆದೇಶದವರೆಗೆ ಆಹಾರ ಇಲಾಖೆ ತಡೆ ಹಿಡಿದಿದೆ. ಆ ಸಂಬಂಧ ಆದೇಶವನ್ನು ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನೈಜ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಕಾಮತ್ ಸೂಚನೆ

    ನೈಜ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಕಾಮತ್ ಸೂಚನೆ

    ಮಂಗಳೂರು: ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅಧಿಕಾರಿಗಳಿಗೆ ಸೂಚಿಸಿದರು.

    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಆದಾಯ ಪ್ರಮಾಣ ಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳಿಂದಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ನೈಜ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧ

    ಬಿಪಿಎಲ್ ನಿಂದ ಎಪಿಎಲ್ ಗೆ ಪರಿವರ್ತನೆಯಾದ ಪಡಿತರ ಚೀಟಿದಾರರ ಸಂಬಂಧಿಸಿದ ಗ್ರಾಮ ಲೆಕ್ಕಿಗರಿಗೆ ನೀಡಲು ಸೂಚನೆ ನೀಡಿದರು. ಅವರಿಂದ ಪಡಿತರ ಚೀಟಿದಾರರ ಆದಾಯ ದೃಢೀಕರಣ ಪತ್ರವನ್ನು ಪರಿಷ್ಕರಿಸಿ ಆಹಾರ ಇಲಾಖೆಗೆ ವರದಿ ಸಲ್ಲಿಸುವಂತೆ ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಬಿಪಿಎಲ್ ಕಾರ್ಡ್ ಹೊಂದಿರುವ ಕ್ಷೇತ್ರದ ಬಡವರಿಗೆ ಉಚಿತ ಕೋವಿಡ್ ಚಿಕಿತ್ಸೆ – ಬಿ.ಸಿ.ಪಾಟೀಲ್

    ಬಿಪಿಎಲ್ ಕಾರ್ಡ್ ಹೊಂದಿರುವ ಕ್ಷೇತ್ರದ ಬಡವರಿಗೆ ಉಚಿತ ಕೋವಿಡ್ ಚಿಕಿತ್ಸೆ – ಬಿ.ಸಿ.ಪಾಟೀಲ್

    ಹಾವೇರಿ: ಜಿಲ್ಲೆಯ ಹಿರೇಕೆರೂರು ಶಾಸಕ ಹಾಗೂ ಕೃಷಿ ಸಚಿವ ಬಿ.ಸಿ ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು ಕೋವಿಡ್-19 ಸೋಂಕಿತರಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕು ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿದವರು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರು ಚಿಕಿತ್ಸೆ ಪಡೆದ ಬಳಿಕ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಹಾಗೂ ಆಸ್ಪತ್ರೆ ಬಿಲ್ ನೀಡಿದರೆ ವೆಚ್ಚ ಭರಿಸುತ್ತೇನೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಮಹಾಮಾರಿ ಕೊರೊನಾ ವಿಶ್ವವ್ಯಾಪಿಯಾಗಿ ಹೆಚ್ಚು ಸೋಂಕು ಹರಡುತ್ತಿದೆ. ಸರ್ಕಾರ ಕೂಡ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಜನರು ಸಹ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಕೊರೊನಾ ಅಂದರೆ ಭಯಬೇಡ, ಅಗತ್ಯವಾದ ಸುರಕ್ಷತಾ ಕ್ರಮಗಳನ್ನು ನಾವು ಪಾಲನೆ ಮಾಡೋಣ ಎಂದು ಎಚ್ಚರಿಕೆ ನೀಡಿದ್ದಾರೆ.

  • ಎಪಿಎಲ್ ಕಾರ್ಡ್‍ನ್ನು ಬಿಪಿಎಲ್‍ಗೆ ಪರಿವರ್ತಿಸುತ್ತಿದ್ದ ಆರೋಪಿಗಳ ಬಂಧನ

    ಎಪಿಎಲ್ ಕಾರ್ಡ್‍ನ್ನು ಬಿಪಿಎಲ್‍ಗೆ ಪರಿವರ್ತಿಸುತ್ತಿದ್ದ ಆರೋಪಿಗಳ ಬಂಧನ

    ರಾಯಚೂರು: ಎಪಿಎಲ್ ಪಡಿತರ ಕಾರ್ಡ್‍ನ್ನು ಬಿಪಿಎಲ್‍ಗೆ ಪರಿವರ್ತಿಸುತ್ತಿದ್ದ ಆರೋಪಿಗಳನ್ನು ಸಿಂಧನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲೆಯ ಸಿಂಧನೂರು ನಗರದ ಕಂಪ್ಯೂಟರ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಎಪಿಎಲ್ ಕಾರ್ಡ್ ಅನ್ನು ಬಿಪಿಎಲ್ ಆಗಿ ಮಾಡುತ್ತಿದ್ದ ಕಂಪ್ಯೂಟರ್ ಆಪರೇಟರ್ ಬಸವರಾಜ್ ಹಾಗೂ ಕಾರ್ಡ್ ಹೊಂದಿದ್ದ ಮಹಿಳೆ ಪತಿ ಬಸಪ್ಪ ಬಂಧಿತ ಆರೋಪಿಗಳು. ಬಾದರ್ಲಿ ಗ್ರಾಮದ ಹುಲಿಗೆಮ್ಮಳ ಎಪಿಎಲ್ ಕಾರ್ಡನ್ನ ಬಿಪಿಎಲ್ ಗೆ ಪರಿವರ್ತಿಸಲಾಗಿತ್ತು. ಈ ಕುರಿತು ಸಿಂಧನೂರು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಹಾರ ನಿರೀಕ್ಷಕ ಅಮರೇಶ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

    ತಪ್ಪಿನಲ್ಲಿ ಭಾಗಿಯಾದ ಎಪಿಎಲ್ ಕಾರ್ಡದಾರಳಾದ ಹುಲಿಗೆಮ್ಮ ಹಾಗೂ ಪತಿ ಬಸಪ್ಪ ವಿರುದ್ಧವೂ ದೂರು ದಾಖಲಾಗಿದೆ. ಎಪಿಎಲ್ ಕಾರ್ಡ್ ಅನ್ನು fcjsdit ಲಾಗಿನ್ ನಿಂದ ಬಿಪಿಎಲ್ ಕಾರ್ಡ್ ಆಗಿ ಆರೋಪಿಗಳು ಪರಿವರ್ತಿಸಿದ್ದಾರೆ. ಪರಿವರ್ತನೆಯಾದ ಕಾರ್ಡ್‍ಗಳ ಬಗ್ಗೆ ತನಿಖೆ ಮುಂದುವರೆದಿದೆ.

  • ಬೈಕ್‌, ಟಿವಿ, ‍ಫ್ರಿಡ್ಜ್‌ ಇದ್ದರೆ ಬಿಪಿಎಲ್ ಪಡಿತರ ರದ್ದು – ಉಮೇಶ್‌ ಕತ್ತಿ

    ಬೈಕ್‌, ಟಿವಿ, ‍ಫ್ರಿಡ್ಜ್‌ ಇದ್ದರೆ ಬಿಪಿಎಲ್ ಪಡಿತರ ರದ್ದು – ಉಮೇಶ್‌ ಕತ್ತಿ

    ಬೆಳಗಾವಿ: ಮನೆಯಲ್ಲಿ ಬೈಕ್, ಫ್ರಿಡ್ಜ್‌, ಟಿವಿ ಇದ್ದರೆ ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಎಕ್ರೆಗಿಂತದ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್‌, ಟಿವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಇವುಗಳಲ್ಲಿ ಯಾವುದಾದರು ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದವರೆಗೆ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

     

    ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಅವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

    ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂ. ಆದಾಯ ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿರಲು ಸಾಧ್ಯವೇ ಇಲ್ಲ. ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಹೀಗಾಗಿ ಈಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

     

    ಈ ಕಾರಣಕ್ಕೆ ಕಾರ್ಡ್‌ ಹೊಂದಿದವರಿಗೆ ಮತ್ತೊಂದು ಅವಕಾಶವನ್ನು ಸರ್ಕಾರ ನೀಡುತ್ತಿದೆ. ಮಾರ್ಚ್ ಅಂತ್ಯದ ವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ. ಬಳಿಕ ಸರ್ಕಾರವೇ ಸರ್ವೇ ನಡೆಸಿ ಪತ್ತೆ ಹಚ್ಚಲಿದೆ ಎಂದು ಹೇಳಿದರು.

    ಇದೇ ವೇಳೆ ಏಪ್ರಿಲ್‌ನಿಂದ ಉತ್ತರದ ಜಿಲ್ಲೆಗಳಿಗೆ ಅಕ್ಕಿ ಜೊತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಕತ್ತಿ ತಿಳಿಸಿದರು.

  • ಬಿಪಿಎಲ್‍ ಕಾರ್ಡಿಗೆ ಅರ್ಜಿ ಹಾಕಿದವ್ರಿಗೂ ನಾಳೆಯಿಂದ ಪಡಿತರ: ಗೋಪಾಲಯ್ಯ

    ಬಿಪಿಎಲ್‍ ಕಾರ್ಡಿಗೆ ಅರ್ಜಿ ಹಾಕಿದವ್ರಿಗೂ ನಾಳೆಯಿಂದ ಪಡಿತರ: ಗೋಪಾಲಯ್ಯ

    ಬೆಂಗಳೂರು: ನಾಳೆ(ಶನಿವಾರ)ದಿಂದ ಬಿಪಿಎಲ್‍ ರಹಿತರಿಗೂ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‍ಗಾಗಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ 3 ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಏಪ್ರಿಲ್, ಮೇ ಹಾಗೂ ಜೂನ್ ಈ ಮೂರು ತಿಂಗಳ ಪಡಿತರ ನಿಡಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸಿದ ಪ್ರತಿ ತೋರಿಸಿ ಪಡಿತರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.

    2 ಲಕ್ಷದ 22 ಸಾವಿರ ಜನ ಬಿಪಿಲ್ ಕಾರ್ಡ್‍ಗೆ ಅರ್ಜಿ ಹಾಕಿದ್ರು. ಈಗ 1 ಲಕ್ಷ 89 ಸಾವಿರ ಅರ್ಜಿಗಳು ವಿಲೇವಾರಿಯಾಗಲು ಬಾಕಿ ಇವೆ. ಹೀಗಾಗಿ ಅರ್ಜಿ ಹಾಕಿರುವ ಫಲಾನುಭವಿಗಳಿಗೆ ಸರ್ಕಾರ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ನೀಡುವ ತೀರ್ಮಾನವನ್ನು ಮಾಡಲಾಗಿದ್ದು, ನಾಳೆಯಿಂದ ವಿತರಣೆ ಮಾಡಲಾಗುತ್ತದೆ. ಈ ರಾಜ್ಯದಲ್ಲಿ ಬಿಪಿಲ್ ಕಾರ್ಡಿಗೆ ಅರ್ಜಿ ಹಾಕಿದ್ದಾರೆಯೋ ಅವರು ಅರ್ಜಿ ಸಲ್ಲಿಸಿರುವ ನಕಲು ತೆಗೆದುಕೊಂಡು ಹೋಗಿ ತೋರಿಸಿ ಓಟಿಪಿ ಮುಖೇನ ಮೂರು ತಿಂಗಳ ತಲಾ 10 ಕೆ.ಜಿ ಅಕ್ಕಿಯನ್ನು ಕೊಡಲಾಗುತ್ತದೆ ಎಂದು ಹೇಳಿದರು.

    ಕೇಂದ್ರದಿಂದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆ(ಪಿಎಂಜಿಕೆವೈ) ವತಿಯಿಂದ ಮೂರು ತಿಂಗಳು ಓರ್ವನಿಗೆ 5 ಕೆ.ಜಿ ಅಕ್ಕಿ ಹಾಗೂ ಕುಟುಂಬಕ್ಕೆ 1 ಕೆ.ಜಿ ಬೇಳೆಯನ್ನು ಕೊಡುವ ಘೋಷಣೆ ಮಾಡಲಾಗಿದೆ. ಹೀಗಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವರು ತಿಳಿಸಿದರು.

    ಕೇಂದ್ರ ಸರ್ಕಾರ ಕೊಟ್ಟಿರುವಂತಹ ದಾಸ್ತಾನುಗಳನ್ನು ಈಗಾಗಲೇ ನಮ್ಮ ಮಳಿಗೆಗೆ ಸಾಗಿಸುವ ಕೆಲಸ ಮಾಡಿದ್ದೇವೆ. ಮೇ.1ರಂದು ರಾಜ್ಯದ 19, 800 ಅಂಗಡಿಗಳನ್ನು ಒಟ್ಟಿಗೆ ಪ್ರಾರಂಭ ಮಾಡುವ ಉದ್ದೇಶವಿದೆ. ಈ ಮೂಲಕ ಮೇ 1ರಿಂದ ಓರ್ವ ವ್ಯಕ್ತಿಗೆ 2 ತಿಂಗಳಿಗಾಗುವಷ್ಟು 10 ಕೆ.ಜಿ ಅಕ್ಕಿ ಹಾಗೂ 1 ಕೆ.ಜಿ ಬೇಳೆಯನ್ನು ಕೊಡಲಾಗುತ್ತದೆ. ಮುಂದಿನ ತಿಂಗಳು 5 ಕೆ.ಜಿ ಅಕ್ಕಿ ಹಾಗೂ 2 ಕೆ.ಜಿ ಬೇಳೆಯನ್ನು ಕೊಡುವ ಮೂಲಕ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದರು.

  • ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸಿಗುತ್ತೆ ರೇಷನ್

    ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸಿಗುತ್ತೆ ರೇಷನ್

    ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ನೀಡುವ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

    ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೂ ಏಪ್ರಿಲ್‍ನಿಂದ ಜೂನ್‍ವರೆಗೆ ಅಕ್ಕಿ ವಿತರಣೆ ಮಾಡಲು ಸರ್ಕಾರ ಆದೇಶ ನೀಡಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಸಿಗಲಿದೆ. ಆದರೆ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರ ಹಣ ನಿಗದಿ ಮಾಡಿದೆ. ಹೀಗಾಗಿ ಎಪಿಎಲ್ ಕಾರ್ಡ್ ಅರ್ಜಿದಾರರು ಪ್ರತಿ ಕೆಜಿಗೆ 15 ರೂ.ರಂತೆ 10 ಕೆಜಿ ಅಕ್ಕಿ ಖರೀದಿಸಬಹುದಾಗಿದೆ.

    ಈವರೆಗೂ ಬಿಪಿಎಲ್ ಕಾರ್ಡ್‍ಗೆ 1,88,152 ಕುಟುಂಬ ಹಾಗೂ ಎಪಿಎಲ್ ಕಾರ್ಡ್‍ಗೆ 61,333 ಕುಟುಂಬಗಳು ಅರ್ಜಿ ಸಲ್ಲಿಸಿವೆ. ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

  • ಬೃಹತ್ ಬೆಂಗ್ಳೂರು ಭೂ ಹಗರಣ ತನಿಖೆ ನಡೆಸಿ- ಎಚ್‍ಡಿಕೆಗೆ ಹಿರೇಮಠ ಸವಾಲ್

    ಬೃಹತ್ ಬೆಂಗ್ಳೂರು ಭೂ ಹಗರಣ ತನಿಖೆ ನಡೆಸಿ- ಎಚ್‍ಡಿಕೆಗೆ ಹಿರೇಮಠ ಸವಾಲ್

    ಬೆಂಗಳೂರು: ಬೃಹತ್ ಕಂಪೆನಿಯಿಂದ ನಡೆದಿರುವ ಭೂ ಹಗರಣವೊಂದನ್ನು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಆಗ್ರಹಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಬಿಡಿ) ಬಿಪಿಎಲ್ ಕಂಪನಿ ಕೈಗಾರಿಕೆ ಸ್ಥಾಪನೆ ಮಾಡುವುದಾಗಿ ಭೂಮಿಯನ್ನು ಪಡೆದಿತ್ತು. ಈ ವೇಳೆ ರೈತರಿಗೆ ಪ್ರತಿ ಎಕರೆ ಭೂಮಿಗೆ ಕೇವಲ 1.10 ಲಕ್ಷ ರೂ. ನೀಡಲಾಗಿತ್ತು. ಆದರೆ ಈಗ ಅದೇ ಭೂಮಿಯನ್ನು ಪ್ರತಿ ಎಕರೆಗೆ 1.30 ಕೋಟಿ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ತನಿಖೆಗೆ ಆದೇಶ ನೀಡುವಿರಾ ಎಂದು ಸಿಎಂಗೆ ಸವಾಲು ಹಾಕಿದರು.

    ಖರೀದಿಯಾದ ಜಮೀನು ಎಷ್ಟು?
    ಕೆಐಎಡಿಬಿ ರೈತರಿಂದ 276 ಎಕರೆ ಭೂಮಿಯನ್ನು ಖರೀದಿ ಮಾಡಿತ್ತು. ಈ ಪೈಕಿ 175 ಎಕರೆ ಭೂಮಿಯನ್ನು ಬಿಪಿಎಲ್ ಕಂಪೆನಿಗೆ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಮಾರಾಟ ಮಾಡಲಾಗಿತ್ತು. ಆದರೆ ಬಿಪಿಎಲ್ ಕಂಪನಿಯು ಇತರೆ ಕಂಪೆನಿಗಳಿಗೆ 149 ಎಕರೆ ಭೂಮಿಯನ್ನು ಕೋಟ್ಯಂತರ ಹಣ ಪಡೆದು ಅಕ್ರಮವಾಗಿ ಮಾರಾಟ ಮಾಡಿದೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೈಗಾರಿಕೆ ಸಚಿವರಾಗಿದ್ದಾಗ ಈ ಹಗರಣ ನಡೆದಿದೆ ಎಂದು ಆರೋಪಿಸಿದರು.

    ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಈ ಕುರಿತು ಸದನದಲ್ಲಿ ಪ್ರಸ್ತಾಪಿಸಿದ್ದರು. ಸದ್ಯ ಅವರೇ ಮುಖ್ಯಮಂತ್ರಿ ಆಗಿದ್ದು, ಹಗರಣದ ಕುರಿತು ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದ ಅವರು, ಬಿಪಿಎಲ್ ಕಂಪನಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮಾಲೀಕರಾಗಿರುವ ಅನುಮಾನವನ್ನು ವ್ಯಕ್ತ ಪಡಿಸಿದರು.