Tag: BR Naidu

  • VRS ತೆಗೆದುಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್‌

    VRS ತೆಗೆದುಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್‌

    ತಿರುಪತಿ: ಹೊಸದಾಗಿ ರಚನೆಯಾಗಿರುವ ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು (VRS) ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆರಿಸಿಕೊಳ್ಳಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ.

    ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು (BR Naidu) ಅವರು ಸೋಮವಾರ ಈಗ ನಿರ್ಧಾರವನ್ನು ದೃಢಪಡಿಸಿದ್ದಾರೆ. ಹಿಂದೂಯೇತರ ಉದ್ಯೋಗಿಗಳ ನಿಖರ ಸಂಖ್ಯೆಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಮಂಡಳಿಯ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಗೆ ಈ ಕ್ರಮವು ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಟಿಟಿಡಿಯು ಸುಮಾರು 14,000 ಗುತ್ತಿಗೆ ಕಾರ್ಮಿಕರನ್ನು ಸಹ ನೇಮಿಸಿಕೊಂಡಿದೆ.

     

    ಈ ನಿರ್ಧಾರವು ಆಂಧ್ರಪ್ರದೇಶದ ದತ್ತಿ ಕಾಯ್ದೆಮತ್ತು ಟಿಟಿಡಿ ಕಾಯ್ದೆಯೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿರುವ ಟಿಟಿಡಿ ವಿವಿಧ ನೌಕರರ ಸಂಘಗಳಿಂದ ಬೆಂಬಲವನ್ನು ಪಡೆದುಕೊಂಡಿದೆ. ಅಕ್ಟೋಬರ್ 31 ರಂದು ಟಿಟಿಡಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ನಾಯ್ಡು ಅವರು ದೇವಸ್ಥಾನವನ್ನು ಹಿಂದೂಗಳು ಮಾತ್ರ ನಡೆಸಬೇಕು ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಇನ್ಮುಂದೆ ಎರಡರಿಂದ ಮೂರು ಗಂಟೆಯಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ!

    ತಿರುಮಲದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿದ್ದು, ದೇವಸ್ಥಾನದಲ್ಲಿ ಕೆಲಸ ಮಾಡಲು ಹಿಂದೂಯೇತರರನ್ನು ನೇಮಿಸಿಕೊಳ್ಳಬಾರದು ಎಂದು ಮಂಡಳಿ ಅಭಿಪ್ರಾಯಪಟ್ಟಿದೆ. ಅವರನ್ನು ಬೇರೆ ಬೇರೆ ಇಲಾಖೆಗಳಲ್ಲಿ ಸೇರಿಸಿಕೊಳ್ಳಲು ಅಥವಾ ಅವರಿಗೆ ಸ್ವಯಂ ನಿವೃತ್ತಿ ಯೋಜನೆ ನೀಡಲು ನಾವು ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ನಾಯ್ದು ತಿಳಿಸಿದರು.

    ಹಲವು ವರ್ಷಗಳಿಂದ, ದೇವಸ್ಥಾನ ಮಂಡಳಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂದು ಟಿಟಿಡಿ ಕಾಯ್ದೆಯನ್ನು ಮೂರು ಬಾರಿ ತಿದ್ದುಪಡಿ ಮಾಡಲಾಗಿದೆ. 1989 ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶವು ಟಿಟಿಡಿ-ಆಡಳಿತದ ಹುದ್ದೆಗಳಿಗೆ ನೇಮಕಾತಿಗಳನ್ನು ಹಿಂದೂಗಳಿಗೆ ಸೀಮಿತಗೊಳಿಸಬೇಕೆಂದು ಆದೇಶಿಸಿತ್ತು. ಈ ನಿಬಂಧನೆಗಳ ಹೊರತಾಗಿಯೂ, ಹಿಂದೂಯೇತರರು ದೇವಸ್ಥಾನದ ಒಳಗಡೆ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಮೂಲಗಳು ಹೇಳಿವೆ.

     

  • PayCM ಕೇಸ್ – ಬೆಳಗ್ಗೆ ಮೂವರು ಅರೆಸ್ಟ್, ಮಧ್ಯಾಹ್ನ ಬಿಡುಗಡೆ

    PayCM ಕೇಸ್ – ಬೆಳಗ್ಗೆ ಮೂವರು ಅರೆಸ್ಟ್, ಮಧ್ಯಾಹ್ನ ಬಿಡುಗಡೆ

    ಬೆಂಗಳೂರು: ಪೇ ಸಿಎಂ (Pay CM) ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿ ಬಿಡುಗಡೆಗೊಳಿಸಿದ್ದಾರೆ.

    ಪೇ ಸಿಎಂ ಕಾಂಗ್ರೆಸ್ ಅಭಿಯಾನ (Congress Campaign) ಹಿನ್ನೆಲೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ಮಾಜಿ ಮುಖ್ಯಸ್ಥ ಬಿ.ಆರ್.ನಾಯ್ಡು (BR Naidu), ಪವನ್, ಗಗನ್ ಎಂಬಾತನನ್ನು ಹೈ ಗ್ರೌಂಡ್ಸ್ ಪೊಲೀಸರು (High Grounds Police) ಬಂಧಿಸಿದ್ದರು. ಇದೀಗ ಸಿಆರ್‌ಪಿಸಿ 107 ಅಡಿ ಬಾಂಡ್ ಬರೆಸಿಕೊಂಡು ಪೊಲೀಸರು ಮೂವರನ್ನು ಬಿಡುಗಡೆ ಮಾಡಿದ್ದಾರೆ.

    ಈವರೆಗೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಾದ ಸಂಜಯ್ ಹಾಗೂ ವಿಶ್ವಮೂರ್ತಿಯನ್ನು ಪಕ್ಷದ ನಾಯಕರು ಸರೆಂಡರ್ ಮಾಡಿಸಿದ್ದರು. ಆದರೆ ಇನ್ನೂ ಮೂವರಿಗಾಗಿ ಪೊಲೀಸರು ಕಾಯುತ್ತಿದ್ದು, ಪೋಸ್ಟರ್ ಅಂಟಿಸಿದ ಐದು ಮಂದಿಯನ್ನು ನಾಲ್ಕು ಗಂಟೆ ವೇಳೆಗೆ ಕೋರ್ಟ್ ಮುಂದೆ ಹೈ ಗ್ರೌಂಡ್ಸ್ ಪೊಲೀಸರು ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ʼPAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ

    ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ (Srinivas Gowda) ಅವರು, ಸದ್ಯ ಬಿ.ಆರ್. ನಾಯ್ಡು ರನ್ನ ಬಿಡುಗಡೆ ಮಾಡಲಾಗಿದೆ. ಪವನ್, ಗಗನ್ ಬಿಡುಗಡೆಗೆ ಪ್ರಕ್ರಿಯೆ ನಡೆಸಲಾಗುತ್ತಿದೆ. ನಂತರ ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಲಾಗಿದೆ. ಇನ್ನೂ 3 ಜನರನ್ನ ಕರೆತರಲಾಗುತ್ತಿದೆ. ಸಂಜೆ ಐವರನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ನಾವೇ ಪೇಸಿಎಂ ಪೋಸ್ಟರ್ ಅಂಟಿಸ್ತೇವೆ: ಡಿಕೆಶಿ

    ರಾಹುಲ್ ಗಾಂಧಿಯ ಕರ್ನಾಟಕ ಸ್ಟ್ರಾಟಜಿ ತಂಡದ ಸುನಿಲ್ ಕುಂದಗೋಳ ತಂಡ ಈ ಅಭಿಯಾನದ ಮಾಸ್ಟರ್ ಮೈಂಡ್ ಎನ್ನಲಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್, ಈ ವಿಚಾರದಲ್ಲಿ ದಿನಕ್ಕೊಂದು ಅಸ್ತ್ರ ಪ್ರಯೋಗಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಲು ಪ್ರಯತ್ನ ನಡೆಸಿದೆ. ಬುಧವಾರ ಯುಪಿಐ ಪೇಮೆಂಟ್ ಆಪ್ `ಪೇಟಿಎಂ ಮಾದರಿಯಲ್ಲಿ `ಪೇ ಸಿಎಂ’ ಪೋಸ್ಟರ್‌ಗಳನ್ನು ಅಂಟಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಇತ್ತ ಪೋಸ್ಟರ್ ಅಭಿಯಾನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಸರ್ಕಾರ ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೆಪಿಸಿಸಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿ ಬಿ.ಆರ್.ನಾಯ್ಡು ನೇಮಕ

    ಕೆಪಿಸಿಸಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿ ಬಿ.ಆರ್.ನಾಯ್ಡು ನೇಮಕ

    ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿ ಯುವ ಮುಖಂಡ ಬಿ.ಆರ್.ನಾಯ್ಡು ನೇಮಕಗೊಂಡಿದ್ದಾರೆ.

    ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಕರ್ನಾಟಕ ರಾಜ್ಯದ ಸಾಮಾಜಿಕ ಜಾಲತಾಣದ ಜವಾಬ್ದಾರಿಯನ್ನು ಬಿ.ಆರ್.ನಾಯ್ಡು ಅವರಿಗೆ ವಹಿಸಿದ್ದಾರೆ. ಈ ವರೆಗೆ ನಟರಾಜ ಗೌಡ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಇದೀಗ ಇವರನ್ನು ನೇಮಕ ಮಾಡಲಾಗಿದೆ.