Tag: Brahmavara Police

  • ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

    ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

    ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarodi) ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

    ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ, ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BNS 196(1),352,353(2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತಿಮರೋಡಿಗೆ ಬ್ರಹ್ಮಾವರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. 2 ಬಾರಿ ನೋಟಿಸ್‌ ಜಾರಿಮಾಡಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಲ್ಲಿ ಇಂದು ಬೆಳಗ್ಗೆ ವಶಕ್ಕೆ ಪಡೆಯಲಾಗಿತ್ತು. ಕೆಲಕಾಲ ವಿಚಾರಣೆ ಬಳಿಕ ಬಂಧಿಸಿದ್ದಾರೆ. ಇದನ್ನೂ ಓದಿ: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

    ತಿಮರೋಡಿಯ ಉಜಿರೆ ನಿವಾಸದಲ್ಲಿ ಹೈಡ್ರಾಮಾ
    ಇನ್ನೂ ಬೆಳಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯ 30ಕ್ಕೂ ಹೆಚ್ಚು ಪೊಲೀಸರು 8ಕ್ಕೂ ಹೆಚ್ಚು ವಾಹನಗಳಲ್ಲಿ ಭಾರೀ ಬಂದೋಬಸ್ತ್‌ನಿಂದ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ತೆರಳಿದ್ರು. ಪೊಲೀಸರು ತೆರಳಿದ್ದ ವೇಳೆ ಮಹೇಶ್ ಶೆಟ್ಟಿ ಹಾಗೂ ಅವರ ಆಪ್ತ ಬಳಗ ಉಜಿರೆಯ ನಿವಾಸದಲ್ಲೇ ಇದ್ದರು. ತಿಮರೋಡಿಯನ್ನು ವಶಕ್ಕೆ ಪಡೆಯಲು ಪೊಲೀಸ್ರು ಮುಂದಾದಾಗ ಮತ್ತೊಬ್ಬ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಹಲವು ಬೆಂಬಲಿಗರು ವಿರೋಧಿಸಿದ್ರು. ತಿಮರೋಡಿಯನ್ನು ವಶಕ್ಕೆ ಪಡೆಯೋದು ಸರಿಯಲ್ಲ. ಯಾವ ಕಾರಣಕ್ಕೆ ವಶಕ್ಕೆ ಪಡೆಯುತ್ತಿದ್ದೀರಿ. ಅರೆಸ್ಟ್ ವಾರೆಂಟ್ ತೋರಿಸಿ.. ನಾವು ಠಾಣೆಗೆ ಬಂದಿಲ್ಲ ಅಂದಾಗ ಕ್ರಮ ಕೈಗೊಳ್ಳಿ ಎಂದು ವಾದಿಸಿದ್ರು.

    ಮನೆಯ ಆವರಣದಲ್ಲಿ ಪೊಲೀಸರು ಹಾಗೂ ಬೆಂಬಲಿಗರ ನಡುವೆ ವಾಗ್ವಾದ ಜೋರಾಗ್ತಿದ್ರೆ, ಇತ್ತ ಮನೆಯ ಕೋಣೆಯನ್ನು ಲಾಕ್ ಮಾಡಿ ತಿಮರೋಡಿ ಕೂತಿದ್ರು. ತಿಮರೋಡಿಯನ್ನು ತಮ್ಮ ವಶಕ್ಕೆ ಪಡೆಯುವ ಸಂದರ್ಭದಲ್ಲಿ ಅವ್ರ ವಕೀಲರು, ಬೆಂಬಲಿಗರು ಪೊಲೀಸರಿಗೆ ಕ್ಲಾರಿಟಿ ಕೊಡಿ ಎಂದು ಒತ್ತಾಯಿಸಿದ್ರು. ಇದಕ್ಕೆ ಪೊಲೀಸರು, ತಿಮರೋಡಿಯವ್ರೇ ಹೊರ ಬರಲಿ ಎಂದು ಹೇಳಿದ್ದಾರೆ. ಹೀಗಾಗಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

    ತಮ್ಮ ಕಾರಿನಲ್ಲೇ ಠಾಣೆಗೆ ತೆರಳಿದ ತಿಮರೋಡಿ
    ವಾಗ್ದಾದ, ಕೆಲಕಾಲ ಉದ್ವಿಗ್ನ ವಾತಾವರಣ ಬಳಿಕ ಭಾರೀ ಹೈಡ್ರಾಮಾ ಸೃಷ್ಟಿಯಾದರೂ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ರು. ಆದರೆ ಪೊಲೀಸ್ ವಾಹನದಲ್ಲಿ ಬರುವುದಿಲ್ಲ ಎಂದು ತಿಮರೋಡಿ ನಿರಾಕರಿಸಿದ್ದಾರೆ. ನಂತರ ಅವರೇ ಬರುವುದಾಗಿ ಹೇಳಿದ್ದಾರೆ. ಹೀಗಾಗಿ ಪೊಲೀಸರ ಸುಪರ್ಧಿಯಲ್ಲೇ ತಿಮರೋಡಿ ಖಾಸಗಿ ವಾಹನದಲ್ಲೇ ತೆರಳಿದ್ರು. ಇದೇ ವಾಹನದಲ್ಲಿ ಮತ್ತೊಬ್ಬ ದೂರುದಾರ ಜಯಂತ್, ಗಿರೀಶ್ ಮಟ್ಟಣ್ಣನವರ್ ಸಹ ತೆರಳಿದ್ರು.

    ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹ
    ಇನ್ನು ಮನೆಯಿಂದ ಪೊಲೀಸರು ಕರೆದೊಯ್ಯುತ್ತಿದ್ದಾಗ ಮಹೇಶ್ ಶೆಟ್ಟಿ ತಿಮರೋಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳು ಕೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರ ಸುಳ್ಳು ದಾಖಲೆ. ಬಿಜೆಪಿಯವರ ಪಾಪದ ಕೂಸು, ಸೌಜನ್ಯಳಿಗೆ ನ್ಯಾಯ ಸಿಗಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

  • ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

    ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

    – ಸುಜಾತಾ ಭಟ್ ವಿರುದ್ಧವೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಕಂಪ್ಲೆಂಟ್

    ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Darmasthala Case) ಸುಜಾತ ಭಟ್ ಅವರನ್ನ ಮುಂದಿಟ್ಟುಕೊಂಡು ಸುಳ್ಳು ಆರೋಪಗಳನ್ನು ಮಾರುತ್ತಿದ್ದಾರೆಂದು ಆರೋಪಿಸಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

    ಮಹೇಶ್‌ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ ಹಾಗೂ ಸುಜಾತಾ ಭಟ್ ಅವರ ವಿರುದ್ಧ ಪೊಲೀಸ್ ಠಾಣೆಗೆ (Darmasthala Police Station) ದೂರು ನೀಡಿದ್ದಾರೆ. ಇದನ್ನೂ ಓದಿ: Exclusive | ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ – ಮಾಸ್ಕ್‌ ಮ್ಯಾನ್‌ ಊರು ಯಾವ್ದು? ಓದಿದ್ದೇನು?

    ಈ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ಸುಜಾತ ಭಟ್ ತನಗೆ ಮಗಳಿದ್ದಾಳೆ ಅಂತ ಸುಳ್ಳು ಹೇಳಿದ್ದಾರೆ. ಅವರಿಗೆ ಅನನ್ಯಾ ಭಟ್ ಅನ್ನೋ ಮಗಳೇ ಇಲ್ಲ ಎಂಬುದು ಗೊತ್ತಾಗಿದೆ. ವಾಸಂತಿ ಎನ್ನುವವರ ಫೋಟೋ ತೋರಿಸಿ ಇವಳೇ ನನ್ನ ಮಗಳು ಅನನ್ಯಾ ಭಟ್ ಅಂತ ಹೇಳಿದ್ದಾರೆ. ಪ್ರತಿದಿನ ಒಂದೊಂದು ಸುಳ್ಳು ಹೇಳ್ತಿದ್ದಾರೆ. ಅದಕ್ಕೆ ಅವರ ವಿರುದ್ಧ ದೂರು ಕೊಟ್ಟಿದ್ದೀನಿ. ಜೊತೆಗೆ ಸುಜಾತಾ ಭಟ್‌ ಅವರನ್ನ ಮುಂದಿಟ್ಟುಕೊಂಡು ಸುಳ್ಳು ಆರೋಪ ಮಾಡಿದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ ವಿರುದ್ಧ ದೂರು ಕೊಟ್ಟಿದ್ದೇನೆ. ಸೇರಿ ಪುಣ್ಯ ಕ್ಷೇತ್ರದ ವಿರುದ್ಧ ಅವಹೇಳನ ಮಾಡ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exclusive | ಅನನ್ಯಾ ಭಟ್ ಎಂಬಿಬಿಎಸ್ ಓದಿಲ್ಲ, ಇದೆಲ್ಲ `ಬುರುಡೆ’: ಮಹೇಶ್ ಠಾಕೂರ್

  • ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

    ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

    – ಸೌಜನ್ಯಳಿಗೆ ನ್ಯಾಯ ಸಿಗಬೇಕು, ಅತ್ಯಾಚಾರಿಗಳ ಬಂಧನವಾಗಬೇಕೆಂದು ಒತ್ತಾಯ

    ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarodi) ಹೇಳಿದ್ದಾರೆ.

    ಬಿ. ಎಲ್‌ ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು (Brahmavara Police) ವಶಕ್ಕೆ ಪಡೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

    ನಮ್ಮ ಉದ್ದೇಶ ಏನಿದ್ದರೂ ಸೌಜನ್ಯಗೆ ನ್ಯಾಯ ಸಿಗಬೇಕು. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹಿಸಿದರಲ್ಲದೇ ಬಿಜೆಪಿಯವರ ಪಾಪದ ಕೂಸು ಸರ್ವನಾಶ ಆಗುತ್ತೆ ಎಂದು ನುಡಿದರು. ಇದನ್ನೂ ಓದಿ: ಬಿಜೆಪಿಯ ಮತ್ತೊಂದು ತಂಡದಿಂದ ಇಂದು `ಧರ್ಮಸ್ಥಳ ಚಲೋ’ – 500 ಕಾರುಗಳಲ್ಲಿ ಹೊರಟ ಕಾರ್ಯಕರ್ತರು

    ಅಲ್ಲದೇ ನಾನೀಗ ಪೊಲೀಸ್‌ ಠಾಣೆಗೆ ಹೋಗ್ತೀನಿ, ಪೊಲೀಸರಿಗೆ ಸರಿಯಾದ ಮಾಹಿತಿ ಕೊಡ್ತೀನಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಬೆಂಬಲಿಗರು ʻಜಸ್ಟೀಸ್‌ ಫಾರ್‌ ಸೌಜನ್ಯʼ ಎಂದು ಘೋಷಣೆ ಕೂಗಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    ಏನಿದು ಪ್ರಕರಣ?
    ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್‌ ಕುಲಾಲ್‌ (Rajeev Kulal) ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

    ತಿಮರೋಡಿ ನಿವಾಸದ ಬಳಿ ಹೈಡ್ರಾಮಾ
    ಇದಕ್ಕೂ ಮುನ್ನ ಮನೆಯ ಮುಂಭಾಗ ದೊಡ್ಡಮಟ್ಟದಲ್ಲಿ ಜಮಾಯಿಸಿದ್ದ ತಿಮರೋಡಿ ಬೆಂಬಲಿಗರು ಬಂಧಿಸದಂತೆ ಆಗ್ರಹಿಸಿದರು. ಏನೇ ವಿಚಾರಣೆ ಇದ್ದರೂ ಇಲ್ಲೇ ನಡೆಸಿ ಎಂದು ಪಟ್ಟು ಹಿಡಿದರು. ಗಿರೀಶ್‌ ಮಟ್ಟಣ್ಣನವರ್‌ (Girish Mattannavar) ಕೂಡ ಕಾರಣ ಕೇಳಿ ಪೊಲೀಸರೊಂದಿಗೆ ವಾಗ್ದಾದ ನಡೆಸಿದರು.

    ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

  • ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

    ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

    – ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಬಳಿ ಹೈಡ್ರಾಮಾ

    ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್‌ ಕುಲಾಲ್‌ (Rajeev Kulal) ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಬಿಜೆಪಿಯ ಮತ್ತೊಂದು ತಂಡದಿಂದ ಇಂದು `ಧರ್ಮಸ್ಥಳ ಚಲೋ’ – 500 ಕಾರುಗಳಲ್ಲಿ ಹೊರಟ ಕಾರ್ಯಕರ್ತರು

    ತಿಮರೋಡಿ ನಿವಾಸದ ಬಳಿ ಹೈಡ್ರಾಮಾ
    ಇದಕ್ಕೂ ಮುನ್ನ ಮನೆಯ ಮುಂಭಾಗ ದೊಡ್ಡಮಟ್ಟದಲ್ಲಿ ಜಮಾಯಿಸಿದ್ದ ತಿಮರೋಡಿ ಬೆಂಬಲಿಗರು ಬಂಧಿಸದಂತೆ ಆಗ್ರಹಿಸಿದರು. ಏನೇ ವಿಚಾರಣೆ ಇದ್ದರೂ ಇಲ್ಲೇ ನಡೆಸಿ ಎಂದು ಪಟ್ಟು ಹಿಡಿದರು. ಗಿರೀಶ್‌ ಮಟ್ಟಣ್ಣನವರ್‌ (Girish Mattannavar) ಕೂಡ ಕಾರಣ ಕೇಳಿ ಪೊಲೀಸರೊಂದಿಗೆ ವಾಗ್ದಾದ ನಡೆಸಿದರು. ಇದನ್ನೂ ಓದಿ: ಮೋದಿ ದೇಶದ ದೊಡ್ಡ ಫ್ರಾಡ್, ಹೀಗೆ ಮಾಡಿದ್ದಕ್ಕೆ ಟ್ರಂಪ್‌ 50% ಸುಂಕ ಹಾಕಿದ್ದು: ನಜೀರ್ ಅಹಮದ್

    ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು – ಪ್ರಿಯತಮನಿಂದಲೇ ಸ್ಕೆಚ್‌; ಮರ್ಮ ಅರಿಯದೇ ಹೊರಟಿದ್ದಳು ಮುಗ್ಧೆ