Tag: brahmins

  • ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    – ಡೊನಾಲ್ಡ್‌ ಟ್ರಂಪ್‌ ವ್ಯಾಪಾರ ಸಲಹೆಗಾರ ಪೀಟರ್ ನವರೊ ಹೇಳಿಕೆ
    – ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ ಎಂದಿದ್ದ ನವರೊ

    ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ (Modis War) ಎಂದು ಕರೆದಿದ್ದ ಡೊನಾಲ್ಡ್‌ ಟ್ರಂಪ್‌ (Donald Trump) ವ್ಯಾಪಾರ ಸಲಹೆಗಾರ ಪೀಟರ್ ನವರೊ (Peter Navarro) ಈಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

    ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು (Brahmins) ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ (SCO Summit) ಮೋದಿ, ಪುಟಿನ್‌, ಕ್ಸಿ ಜಿನ್‌ಪಿಂಗ್‌ ಮಾತುಕತೆ ನಡೆಸುತ್ತಿರುವ ಮಹತ್ವದ ಸಮಯದಲ್ಲೇ ಈ ಹೇಳಿಕೆ ಬಂದಿರುವುದು ವಿಶೇಷ.

    ಟಿವಿ ವಾಹಿನಿಯ ಜೊತೆ ಮಾತನಾಡಿದ ಪೀಟರ್ ನವರೊ, ಮೋದಿ ಒಬ್ಬ ಮಹಾನ್ ನಾಯಕ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ ಅವರು ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಜೊತೆ ಯಾಕೆ ಮಾತನಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ. ನಾನು ಭಾರತೀಯ ಜನರಿಗೆ ಹೇಳುತ್ತೇನೆ, ದಯವಿಟ್ಟು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸಿ ಶ್ರೀಮಂತರಾಗುತ್ತಿದ್ದಾರೆ. ಇದನ್ನು ನಾವು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

    ತನ್ನ ಒತ್ತಡಕ್ಕೆ ಭಾರತ (India) ಬಗ್ಗದೇ ಸೆಡ್ಡು ಹೊಡೆದ ಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್‌ (Donald Trump) ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ (Narendra Modi) ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 50% ತೆರಿಗೆ ಹಾಕಿ ಯುರೋಪ್‌ಗೆ ಅಮೆರಿಕ ಮನವಿ

    ಹಿಂದೆ ಪೀಟರ್ ನವರೊ ಹೇಳಿದ್ದೇನು?
    ರಷ್ಯಾದ ಇಂಧನವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವುದರಿಂದ ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ನಡೆಸುತ್ತಿದೆ. ಮಾಸ್ಕೋದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿದರೆ ಅಮೆರಿಕ ಭಾರತದ ಮೇಲೆ ವಿಧಿಸಿದ 25% ಸುಂಕ ಕಡಿತ ಕಾಣಬಹುದು.

    ರಷ್ಯಾದಿಂದ ಭಾರತ ರಿಯಾಯಿತಿ ದರದಲ್ಲಿ ತೈಲವನ್ನು ಖರೀದಿಸುತ್ತದೆ. ಖರೀದಿಸಿದ ಕಚ್ಚಾತೈಲವನ್ನು ರಿಫೈನರಿಯಲ್ಲಿ ಸಂಸ್ಕರಿಸಿ ಬೇರೆ ದೇಶಗಳಿಗೆ ಮಾರಾಟ ಮಾಡುವ ಮೂಲಕ ಲಾಭ ಮಾಡುತ್ತಿದೆ. ಈ ನಿರ್ಧಾರದಿಂದ ಭಾರತ ರಷ್ಯಾಕ್ಕೆ ಸಹಾಯ ಮಾಡಿದರೆ ಅಮೆರಿಕಕ್ಕೆ ಹಾನಿ ಮಾಡುತ್ತಿದೆ. ಇದನ್ನೂ ಓದಿಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಾರೆ. ಭಾರತದ ಹೆಚ್ಚಿನ ಸುಂಕಗಳು ನಮ್ಮ ಉದ್ಯೋಗಗಳು, ಕಾರ್ಖಾನೆಗಳನ್ನು ಕಸಿದುಕೊಳ್ಳುತ್ತಿದೆ. ಅಮೆರಿಕನ್ನರು ಆರ್ಥಿಕವಾಗಿ ಬಳಲುತ್ತಿರುವಾಗ ಉಕ್ರೇನ್‌ ಯುದ್ಧಕ್ಕೆ ರಷ್ಯಾಕ್ಕೆ ಹಣಕಾಸಿನ ಸಹಾಯ ಮಾಡುತ್ತಿದೆ. ಇನ್ನೊಂದು ಕಡೆ ಉಕ್ರೇನ್‌ ನೆರವು ನೀಡುವಂತೆ ಅಮೆರಿಕ ಮತ್ತು ಯುರೋಪ್‌ ದೇಶವನ್ನು ಕೇಳಿಕೊಳ್ಳುತ್ತಿದೆ.

    ಭಾರತಕ್ಕೆ ಈಗ ಅಹಂಕಾರ ಬಂದಿದೆ. ನಮಗೆ ಹೆಚ್ಚಿನ ಸುಂಕಗಳು ಇಲ್ಲ. ನಮ್ಮದು ಸಾರ್ವಭೌಮ ಹೊಂದಿದ ದೇಶ. ನಾವು ಯಾರಿಂದ ಬೇಕಾದರೂ ತೈಲ ಖರೀದಿಸಬಹುದು ಎಂಬಂತೆ ಭಾರತ ವರ್ತಿಸುತ್ತಿದೆ. ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ ಹೌದು. ಆದರೆ ಅಮೆರಿಕದ ವಿಶ್ವದ ದೊಡ್ಡ ಆರ್ಥಿಕತೆತಯನ್ನು ಹೊಂದಿದ ದೇಶವಾಗಿದೆ. ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಿದ್ದಾರೆ ಎಂದರು.

  • ಸಿದ್ದರಾಮಯ್ಯ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ

    ಸಿದ್ದರಾಮಯ್ಯ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ ಬ್ರಾಹ್ಮಣರು (Brahmins) ಸಾಫ್ಟ್‌ ಟಾರ್ಗೆಟ್‌ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇದೆ. ಅವರು ಪ್ರತಿರೋಧ ತೋರುವುದಿಲ್ಲ ಎಂಬ ಭಾವನೆ ಸಿದ್ದರಾಮಯ್ಯ ಅವರಿಗಿದೆ ಎಂದರು.

    ಉಡುಪಿಯ ಹಿಜಾಬ್ (Hijab) ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿದರು. ಈಗ ಯಾಕೆ ಜನಿವಾರ (Janivara) ಪ್ರಕರಣದಲ್ಲಿ ಸಿದ್ದರಾಮಯ್ಯ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದರು.  ಇದನ್ನೂ ಓದಿ: ಪರಿಸರ ಚಟುವಟಿಕೆಯಲ್ಲಿ ತೊಡಗುತ್ತೇನೆ – ಬಿಜೆಪಿಗೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ

     

    ಜಾತಿ ಜನಗಣತಿಯಲ್ಲೂ ಬ್ರಾಹ್ಮಣರ ಸಂಖ್ಯೆ ಕಡಿಮೆ ತೋರಿಸಲಾಗಿದೆ, ಅವರೇನೂ ಹೇಳಲ್ಲ ಅಂತನಾ? ಜನಿವಾರವೇ ಒಂದು ಸಮಸ್ಯೆ ಅಂತ ಅನ್ಕೊಂಡು ಜನಿವಾರವನ್ನೇ ತೆಗೆಸುವ ಕೆಲಸ ಆಗಿದೆ. ಇದು ಹಿಂದೂಗಳ ಮೇಲಿನ ಆಕ್ರಮಣ. ಹಿಂದೂ ಸಮಾಜ ಒಟ್ಟಾಗಿ ಜನಿವಾರ ಪ್ರಕರಣ ವಿರೋಧಿಸಬೇಕು ಎಂದು ಹೇಳಿದರು.  ಇದನ್ನೂ ಓದಿ: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? – ಅನುರಾಗ್‌ ಕಶ್ಯಪ್‌ ವಿವಾದ

    ಒಕ್ಕಲಿಗರು, ಲಿಂಗಾಯತರಿಗೆ ತಮ್ಮ ಸಮುದಾಯ ಸಂಖ್ಯೆ ಕಡಿಮೆಯಾಗಿದೆ ಅಂತ ಸಿಟ್ಟಿದೆ. ದಲಿತ ನಾಯಕರು ತಮ್ಮ ಸಂಖ್ಯೆ ಒಂದು ಕೋಟಿ ಆಗಿದೆ ಅಂತ ಒಳಗೊಳಗೇ ಖುಷಿ ಆಗಿರಬಹುದು. ಆದರೆ ಈ ಹಿಂದೆಯೇ ಅಹಿಂದ ಪ್ರಾರಂಭಿಸಿ ಸಿದ್ದರಾಮಯ್ಯ ಹಿಂದೂಗಳನ್ನು ಒಡೆದಿದ್ದರು. ಈಗ ಅಧಿಕಾರದಲ್ಲಿ ಮುಂದುವರೆಯಲು ಸಮಸ್ತ ಹಿಂದೂ ಧರ್ಮ ಒಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

    ಇನ್ನಾದರೂ ಜಾತಿ ಜಾತಿ ಎನ್ನುವುದನ್ನು ಬಿಟ್ಟು ಹಿಂದೂಗಳು ಸಿದ್ದರಾಮಯ್ಯನವರ ಅವರ ಕುರ್ಚಿ ತಂತ್ರ ಅರ್ಥ ಮಾಡಿಕೊಳ್ಳಬೇಕು. ಇನ್ನೂ ನಾನು ಗೌಡ, ಲಿಂಗಾಯತ, ಒಬಿಸಿ, ಎಸ್ಸಿ, ಎಸ್ಟಿ, ಕುರುಬ ಅನ್ನುವ ಮನಸ್ಥಿತಿಯಿಂದ ಹೊರಗೆ ಬರಬೇಕು. ಜಾತಿ ಆಧಾರದಲ್ಲಿ ಅಪಸ್ವರ ಎತ್ತಲು ಹೋಗಬಾರದು. ಹಿಂದೂ ಸಮಾಜದ ಪ್ರತಿನಿಧಿಗಳ ರೀತಿ ಸಮಯದಾಯಗಳ ನಾಯಕರು ಮಾತಾಡಬೇಕು ಎಂದು ಅಭಿಪ್ರಾಯಪಟ್ಟರು.

  • ಬ್ರಾಹ್ಮಣರ ಸಂಖ್ಯೆ 15 ಲಕ್ಷ ಅಲ್ಲ, ನಮ್ಮ ಸಂಖ್ಯೆ 45 ಲಕ್ಷ: ಅಶೋಕ್ ಹಾರನಹಳ್ಳಿ

    ಬ್ರಾಹ್ಮಣರ ಸಂಖ್ಯೆ 15 ಲಕ್ಷ ಅಲ್ಲ, ನಮ್ಮ ಸಂಖ್ಯೆ 45 ಲಕ್ಷ: ಅಶೋಕ್ ಹಾರನಹಳ್ಳಿ

    – ನಾವು ಪ್ರತ್ಯೇಕವಾಗಿ ಡಿಜಿಟಲ್‌ ಸಮೀಕ್ಷೆ ಮಾಡುತ್ತೇವೆ
    – ರಾಜ್ಯದಲ್ಲಿ ಬ್ರಾಹ್ಮಣರ ಸಂಖ್ಯೆ 15,64,741

    ಬೆಂಗಳೂರು: ಜಾತಿ ಗಣತಿಯ (Caste Census) ಮೇಲೆ ತೆಗೆದುಕೊಳ್ಳುವ ರಾಜಕೀಯ ನಿರ್ಧಾರಗಳು ತಪ್ಪಾಗಬಹುದು ಬ್ರಾಹ್ಮಣ (Brahmins) ಸಮುದಾಯದ ಸಂಖ್ಯೆ 15 ಲಕ್ಷ ಎನ್ನುತ್ತಿದ್ದಾರೆ. ನಮ್ಮ ಪ್ರಕಾರ ಸಮುದಾಯದ ಜನಸಂಖ್ಯೆ 45 ಲಕ್ಷ ಇದೆ ಎಂದು ಬ್ರಾಹ್ಮಣ ಮಹಾಸಭಾ ಮಾಜಿ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ (Ashok Haranahalli) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯದ ಅಂಕಿ ಸಂಖ್ಯೆಗಳನ್ನು ನೋಡಿದ ಸಾಕಷ್ಟು ಜನರು ಮನೆಗೆ ಗಣತಿಗೆ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ನಾನು ರಾಜ್ಯಾದ್ಯಂತ ಓಡಾಡಿ ಮಾಹಿತಿಯನ್ನು ತೆಗೆದುಕೊಂಡಾಗಲೂ ಬಂದಿಲ್ಲ ಅಂದವರ ಸಂಖ್ಯೆ ಜಾಸ್ತಿ ಇದೆ. ಹೀಗಾಗಿ ಈ ವರದಿ ವೈಜ್ಞಾನಿಕವಾಗಿ ತಯಾರಿಸಿಲ್ಲ ಎನ್ನುವವುದು ನನ್ನ ಭಾವನೆ ಎಂದು ಹೇಳಿದರು. ಇದನ್ನೂ ಓದಿ: ಜಾತಿಗಣತಿ ವಿರುದ್ಧ ಸಿಡಿದ ಒಕ್ಕಲಿಗರು- ವರದಿ ಜಾರಿಯಾದ್ರೆ ಸರ್ಕಾರ ಪತನದ ಎಚ್ಚರಿಕೆ

     

    ಈ ಸಮೀಕ್ಷೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಂಡರೆ ಮುಂದೆ ನಾವು ಕಾನೂನು ಹೋರಾಟ ನಡೆಸಬೇಕಾಗುತ್ತದೆ. ಬ್ರಾಹ್ಮಣ ಸಮುದಾಯದಿಂದಲೇ ನಾವು ಪ್ರತ್ಯೇಕವಾಗಿ ಸಮೀಕ್ಷೆ ಮಾಡಿಸುತ್ತೇವೆ. ನಮ್ಮ ಸಮುದಾಯದ ಡಿಜಿಟಲ್ ಸರ್ವೆ ಮಾಡಿಸುತ್ತೇವೆ ಎಂದು ತಿಳಿಸಿದರು.

    ಬ್ರಾಹ್ಮಣರಲ್ಲಿ 55 ಒಳ ಪಂಗಡಗಳನ್ನು ಗುರುತಿಸಿರುವ ಹಿಂದುಳಿದ ವರ್ಗಗಳ ಆಯೋಗ, ರಾಜ್ಯದಲ್ಲಿ ಒಟ್ಟಾರೆ ಬ್ರಾಹ್ಮಣರ ಜನಸಂಖ್ಯೆ 15,64,741 ಎಂದು ವರದಿಯಲ್ಲಿ ಉಲ್ಲೇಖಿಸಿದೆ.

     ಬ್ರಾಹ್ಮಣ ಸಮುದಾಯದ ಜಾತಿಗಣತಿ
    * ಬ್ರಾಹ್ಮಣರ ಜನಸಂಖ್ಯೆ – 15,64,741
    * ಬ್ರಾಹ್ಮಣ – 11,85,605
    * ಗೌಡ ಸಾರಸ್ವತ – 1,14,119
    * ಹವ್ಯಕ – 85,595
    * ಶ್ರೀವೈಷ್ಣವ – 16,286
    * ಮಾಧ್ವ – 13,302,
    * ಅಯ್ಯಂಗಾರ್ – 12,070
    * ಸ್ಥಾನಿಕ 3,820
    * ಸಂಕೇತಿ – 1,276 ಇದನ್ನೂ ಓದಿ: ಜಾತಿಗಣತಿ | ಮನೆ ಮನೆಗೆ ಹೋಗಿ ಮತ್ತೆ ಸಮೀಕ್ಷೆ ಮಾಡ್ಬೇಕು – ಶಾಸಕ ಬಾಲಕೃಷ್ಣ ಆಗ್ರಹ

     

  • ಬ್ರಾಹ್ಮಣ ದಂಪತಿ ನಾಲ್ಕು ಮಕ್ಕಳನ್ನು ಹೆತ್ತರೇ 1 ಲಕ್ಷ ಬಹುಮಾನ – ಪರಶುರಾಮ್ ಕಲ್ಯಾಣ್ ಬೋರ್ಡ್ ಘೋಷಣೆ

    ಬ್ರಾಹ್ಮಣ ದಂಪತಿ ನಾಲ್ಕು ಮಕ್ಕಳನ್ನು ಹೆತ್ತರೇ 1 ಲಕ್ಷ ಬಹುಮಾನ – ಪರಶುರಾಮ್ ಕಲ್ಯಾಣ್ ಬೋರ್ಡ್ ಘೋಷಣೆ

    ಭೋಪಾಲ್‌: ನಾಲ್ಕು ಮಕ್ಕಳನ್ನು ಹೆತ್ತರೇ 1 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಮಧ್ಯಪ್ರದೇಶ (Madhya Pradesh) ಸರ್ಕಾರದ ಅಧೀನದ ಪರಶುರಾಮ್ ಕಲ್ಯಾಣ್ ಬೋರ್ಡ್ (Parshuram Kalyan Board) ಸಂಚಲನಾತ್ಮಕ ಘೋಷಣೆ ಮಾಡಿದೆ.

    ತಮ್ಮ ಸಮುದಾಯವನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಹೆಚ್ಚು ಮಕ್ಕಳನ್ನು ಹೆರುವಂತೆ ಕರೆ ನೀಡಿದೆ. ನಾಲ್ಕು ಮಕ್ಕಳನ್ನು ಹೆರುವ ಬ್ರಾಹ್ಮಣ ದಂಪತಿಗೆ 1 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

    ಭೋಪಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾಡಿದ ಪರಶುರಾಮ್ ಕಲ್ಯಾಣ್ ಬೋರ್ಡ್ ಅಧ್ಯಕ್ಷ ಪಂಡಿತ ವಿಷ್ಣು ರಾಜೌರಿಯಾ, ನಾವು ನಮ್ಮ ಕುಟುಂಬಗಳ ಬಗ್ಗೆ ಗಮನ ಹರಿಸುವುದನ್ನು ನಿಲ್ಲಿಸಿದ್ದೇವೆ. ಇತ್ತೀಚಿನ ದಂಪತಿ ಒಂದು ಮಗು ಸಾಕು ಅಂತಿದ್ದಾರೆ. ಆದರೆ ಹಿಂದೂಯೇತರರ ಜನಸಂಖ್ಯೆ ಹೆಚ್ಚಾಗುತ್ತಿದೆ  ಎಂದು ಕಳವಳ ವ್ಯಕ್ತಪಡಿಸಿದರು.


    ಭವಿಷ್ಯದ ತಲೆಮಾರುಗಳನ್ನು ರಕ್ಷಿಸುವ ಹೊಣೆ ನಮ್ಮ ಮೇಲಿದೆ. ಅದಕ್ಕೆ ಕನಿಷ್ಠ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಕರೆ ನೀಡಿದ್ದಾರೆ. 4 ಮಕ್ಕಳನ್ನು ಹೆತ್ತ ದಂಪತಿಗೆ 1 ಲಕ್ಷ ರೂ. ನೀಡುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.

    ತನ್ನ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ರಾಜೋರಿಯಾ (Pandit Vishnu Rajoria) ಅವರು ತಮ್ಮ ಸ್ವಂತ ಸಾಮರ್ಥ್ಯದಲ್ಲಿ ಅಥವಾ ಸಾಮಾಜಿಕ ಬೆಂಬಲದ ಮೂಲಕ ಬಹುಮಾನದ ಹಣವನ್ನು ವ್ಯವಸ್ಥೆ ಮಾಡಲಾಗುವುದು. ರಾಜ್ಯದ ಬಿಜೆಪಿ ಸರ್ಕಾರವು ಯಾವುದೇ ಯೋಜನೆಯನ್ನು ಪ್ರಾರಂಭಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಭಾನುವಾರದ ಕಾರ್ಯಕ್ರಮದಲ್ಲಿ ಒಟ್ಟು 58 ಜೋಡಿಗಳು ವಿವಾಹ ನಡೆದಿತ್ತು. ಈ ಸಂದರ್ಭದಲ್ಲಿ ನಾಲ್ಕು ಮಕ್ಕಳನ್ನು ಹೊಂದಿರುವ ದಂಪತಿಗೆ 1 ಲಕ್ಷ ಬಹುಮಾನವನ್ನು ನಾನು ಘೋಷಿಸಿದ್ದೆ. 1951ಕ್ಕೆ ಹೋಲಿಸಿದರೆ ದೇಶದಲ್ಲಿ ಬ್ರಾಹ್ಮಣರ ಜನಸಂಖ್ಯೆ ಅರ್ಧದಷ್ಟು ಕುಸಿತವಾಗಿದೆ ಎಂದು ಹೇಳಿದರು.

     

  • ಬ್ರಾಹ್ಮಣರು ಭಾರತದವರಲ್ಲ, ರಷ್ಯಾದಿಂದ ಬಂದಿದ್ದಾರೆ: ಆರ್‌ಜೆಡಿ ನಾಯಕ ಯದುವಂಶ್ ಕುಮಾರ್

    ಬ್ರಾಹ್ಮಣರು ಭಾರತದವರಲ್ಲ, ರಷ್ಯಾದಿಂದ ಬಂದಿದ್ದಾರೆ: ಆರ್‌ಜೆಡಿ ನಾಯಕ ಯದುವಂಶ್ ಕುಮಾರ್

    ಪಾಟ್ನಾ: ಬ್ರಾಹ್ಮಣ (Brahmins) ಸಮುದಾಯದವರು ಭಾರತಕ್ಕೆ ಸೇರಿದವರಲ್ಲ. ಅವರು ರಷ್ಯಾದಿಂದ (Russia) ಬಂದವರು ಎಂದು ಆರ್‌ಜೆಡಿ (RJD) ನಾಯಕ ಯದುವಂಶ್ ಕುಮಾರ್ ಯಾದವ್ (Yaduvansh Kumar Yadav) ವಿವಾದವೊಂದನ್ನು ಹುಟ್ಟುಹಾಕಿದ್ದಾರೆ.

    ಬಿಹಾರದ (Bihar) ಸುಪೌಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಡಿಎನ್‌ಎ (DNA) ಪರೀಕ್ಷೆ ಬ್ರಾಹ್ಮಣರು ಭಾರತ ದೇಶಕ್ಕೆ ಸೇರಿಲ್ಲ ಎಂಬುದನ್ನು ತೋರಿಸುತ್ತದೆ. ಅವರು ರಷ್ಯಾದಿಂದ ಬಂದು ಇಲ್ಲಿ ನೆಲೆಸಿದ್ದಾರೆ. ಬ್ರಾಹ್ಮಣರು ನಮ್ಮನ್ನು ವಿಭಜಿಸಿ ದೇಶವನ್ನು ಆಳಲು ಯತ್ನಿಸುತ್ತಿದ್ದಾರೆ. ಯಾದವ ಸಮುದಾಯಕ್ಕೆ ಸೇರಿದ ಜನರು ಮೂಲತಃ ಈ ದೇಶದವರು. ಬ್ರಾಹ್ಮಣರನ್ನು ಇಲ್ಲಿಂದ ಓಡಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಮೋದಿ ಸಾಕ್ಷ್ಯಾಚಿತ್ರ ಪ್ರಕರಣ – ಬಿಬಿಸಿಗೆ ಸಮನ್ಸ್ ನೀಡಿದ ದೆಹಲಿ ಕೋರ್ಟ್

    ಯದುವಂಶ್ ಕುಮಾರ್ ಅವರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಆರ್‌ಜೆಡಿ ನಾಯಕನ ಈ ಹೇಳಿಕೆಯನ್ನು ಬಿಜೆಪಿ (BJP) ನಾಚಿಕೆಗೇಡಿನ ಸಂಗತಿ ಎಂದು ಕರೆದಿದೆ. ಇಂತಹ ಜನರೇ ನಮ್ಮ ರಾಷ್ಟ್ರದಲ್ಲಿ ಕೋಮು ಗಲಭೆಗೆ ಕಾರಣವಾಗಿದ್ದು, ಅವರು ಬಿಹಾರವನ್ನು ಆಳುತ್ತಿರುವುದು ವಿಪರ್ಯಾಸದ ಸಂಗತಿ ಎಂದಿದೆ. ಇದನ್ನೂ ಓದಿ: ಅಕ್ರಮ ಆಸ್ತಿ ಸಂಪಾದನೆ – ಕೇಂದ್ರದ ಮಾಜಿ ನೌಕರ ಅರೆಸ್ಟ್‌

    ಈ ಕುರಿತು ಬಿಜೆಪಿ ನಾಯಕ ಅಮಿತ್ ರಕ್ಷಿತ್ (Amit Rakshit) ತಮ್ಮ ಟ್ವಿಟ್ಟರ್‌ನಲ್ಲಿ, ಡಿಎನ್‌ಎ ಪರೀಕ್ಷೆಯು ಈ ದೇಶಕ್ಕೆ ಸೇರಿಲ್ಲ. ಇವರು ರಷ್ಯಾದಿಂದ ಬಂದು ಇಲ್ಲಿ ನೆಲೆಸಿದ್ದಾರೆ. ಅವರನ್ನು ಇಲ್ಲಿಂದ ಓಡಿಸಬೇಕು ಎಂಬ ಆರ್‌ಜೆಡಿ ನಾಯಕನ ಹೇಳಿಕೆ ಅತ್ಯಂತ ನಾಚಿಗೇಡಿನ ಸಂಗತಿ ಎಂದು ಟ್ವೀಟ್ (Tweet) ಮಾಡಿದ್ದಾರೆ. ಇದನ್ನೂ ಓದಿ: ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ

  • ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಾಲಿಗೆ ಬಿಸಿ ತುಪ್ಪ?

    ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಾಲಿಗೆ ಬಿಸಿ ತುಪ್ಪ?

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ನೀಡಿದ ಹೇಳಿಕೆ ಹಳೇ ಮೈಸೂರು (Old Mysuru( ಭಾಗದಲ್ಲಿ ಜೆಡಿಎಸ್‌ ಮೇಲೆ ಭಾರೀ ಪರಿಣಾಮ ಬೀರುವ ಆತಂಕ ಎದುರಾಗಿದೆ.

    ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ರಾಹ್ಮಣ (Brahmins) ಸಮುದಾಯ ಕುರಿತ ಹೇಳಿಕೆ ಬಗ್ಗೆ ನಾನಾ ಲೆಕ್ಕಾಚಾರಗಳು ಶುರುವಾಗಿದ್ದು, ಹಳೇ ಮೈಸೂರು ಭಾಗದ ಜೆಡಿಎಸ್ ಅಭ್ಯರ್ಥಿಗಳು ಈಗ ಧರ್ಮ ಸಂಕಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಮಾತನಾಡಲಿಲ್ಲ: ಪ್ರಜ್ವಲ್‌ ರೇವಣ್ಣ

    ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ (Congress) ವಿರೋಧಿ ಮತಗಳ ಪಾಲಿಗೆ ಜೆಡಿಎಸ್ ಆಸರೆಯಾಗಿದ್ದು, ಬ್ರಾಹ್ಮಣ ಸಮುದಾಯ ಸಹ ಸಾಕಷ್ಟು ಹಂತದಲ್ಲಿ ಜೆಡಿಎಸ್ ನಾಯಕರನ್ನು ಬೆಂಬಲಿಸಿತ್ತು. ಕಾಂಗ್ರೆಸ್ ವಿರೋಧಿ ಮತಗಳನ್ನು ಕ್ರೋಢಿಕರಿಸುವ ಜೆಡಿಎಸ್‌ ಸಮುದಾಯಕ್ಕೆ ದೊಡ್ಡ ಮಟ್ಟದ ಬೆಂಬಲ ಈ ಸಮುದಾಯದಿಂದ ಸಿಕ್ಕಿತ್ತು.

    ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯದ ವಿರುದ್ಧ ನೀಡಿದ ಹೇಳಿಕೆ ಈಗ ಈಗ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಹೊಸ ಭಯ ಹುಟ್ಟು ಹಾಕಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಧರ್ಮದ ಹೆಸರಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ ನಾಯಕ

    ಧರ್ಮದ ಹೆಸರಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ ನಾಯಕ

    ಭೋಪಾಲ್: ಧರ್ಮದ ಹೆಸರಿನಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಜೊತೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ವಾಲಿಯರ್-ಚಂಬಲ್ ಪ್ರದೇಶದ ನಾಯಕ ಪ್ರೀತಂ ಸಿಂಗ್ ಲೋಧಿ ಅವರು ವಿವಾದತ್ಮಕ ಹೇಳಿಕೆ ನೀಡಿದ್ದು, ಇದೀಗ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.

    ಶನಿವಾರ ಬೆಳಗ್ಗೆ ಅವರನ್ನು ಭೋಪಾಲ್‍ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಕರೆಸಿ, ಪ್ರೀತಂ ಸಿಂಗ್ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಬುಧವಾರ ಯೋಧ ರಾಣಿ ಅವಂತಿಬಾಯಿ ಲೋಧಿ ಅವರ ಜನ್ಮದಿನದಂದು ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರೀತಂ ಸಿಂಗ್ ಲೋಧಿ, ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

    bjP

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಪ್ರೀತಂ ಸಿಂಗ್ ಲೋಧಿ ಹೇಳಿಕೆ ವಿರುದ್ಧ ಬಿಜೆಪಿ ಯುವ ಘಟಕದ ನಾಯಕ ಪ್ರವೀಣ್ ಮಿಶ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದರು. ಅಲ್ಲದೇ ಲೋಧಿ ಅವರು ಜನರ ನಡುವೆ ದ್ವೇಷವನ್ನುಂಟುಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಜಯಪುರದ ಹಲವೆಡೆ ಭಾರೀ ಶಬ್ದದೊಂದಿಗೆ ಕಂಪಿಸಿದ ಭೂಮಿ

    62 ವರ್ಷದ ಅವರು ಈಗಾಗಲೇ 37 ಪ್ರಕರಣಗಳ ಆರೋಪಿಯಾಗಿದ್ದಾರೆ. ನಾಲ್ಕು ಕೊಲೆ ಯತ್ನ ಪ್ರಕರಣಗಳು ಮತ್ತು ಎರಡು ಕೊಲೆ ಪ್ರಕರಣಗಳು ಇವರ ಮೇಲಿದೆ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಂ ಸಿಂಗ್ ಲೋಧಿ ಅವರು 2013 ಮತ್ತು 2018 ರ ವಿಧಾನಸಭಾ ಚುನಾವಣೆಯಲ್ಲಿ ಪಿಚೋರ್ (ಶಿವಪುರಿ) ನಿಂದ ಬಿಜೆಪಿ ಟಿಕೆಟ್‍ನಲ್ಲಿ ಸೋತಿದ್ದರು. ಆದರೆ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿದ್ದಾರೆ.

    ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಹಿರಿಯ ಮತ್ತು ಆರು ಬಾರಿ ಹಾಲಿ ಶಾಸಕ ಕೆಪಿ ಸಿಂಗ್ ‘ಕಕ್ಕಜು’ ವಿರುದ್ಧ ಪಿಚೋರ್ ವಿಧಾನಸಭಾ ಕ್ಷೇತ್ರದಿಂದ ಪ್ರೀತಂ ಸಿಂಗ್ ಲೋಧಿ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಕೇವಲ 2,500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು. ಇದನ್ನೂ ಓದಿ: ಷರತ್ತಿನೊಂದಿಗೆ ಗಣೇಶೋತ್ಸವಕ್ಕೆ BBMP ಗ್ರೀನ್ ಸಿಗ್ನಲ್ – ಈದ್ಗಾ ಮೈದಾನ ಗಣಪನಿಗೆ ಸಿಕ್ಕಿಲ್ಲ ಪರ್ಮಿಷನ್

    ಶಿವಪುರಿಯ ಖರೈಹ್ ಗ್ರಾಮದಲ್ಲಿ ಬುಧವಾರ ನಡೆದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ರಾಹ್ಮಣರು ಹಿಂದಿನ ಜನರ ಹಣ ಮತ್ತು ಸಂಪನ್ಮೂಲದಿಂದ ಏಳಿಗೆ ಹೊಂದುತ್ತಿದ್ದರು. ಒಳ್ಳೆಯ ಕುಟುಂಬದ ಸುಂದರ ಮಹಿಳೆಯರನ್ನು ನೋಡಿ, ಬ್ರಾಹ್ಮಣರು ಆ ಮಹಿಳೆಯರ ಮನೆಯಲ್ಲಿ ಊಟ ಮಾಡಲು ಬಯಸುತ್ತಾರೆ. ಬ್ರಾಹ್ಮಣರು ಯುವತಿಯರನ್ನು ಮುಂದಿನ ಸಾಲಿನಲ್ಲಿ ಕೂರಿಸಿ, ವಯಸ್ಸಾದ ಮಹಿಳೆಯರನ್ನು ಹಿಂದಿನ ಸಾಲಿನಲ್ಲಿ ಕೂರಿಸುತ್ತಾರೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರದಲ್ಲಿ ಬ್ರಾಹ್ಮಣರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ: ರಾವ್‍ಸಾಹೇಬ್ ಪಾಟೀಲ್ ದಾನ್ವೆ

    ಮಹಾರಾಷ್ಟ್ರದಲ್ಲಿ ಬ್ರಾಹ್ಮಣರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ: ರಾವ್‍ಸಾಹೇಬ್ ಪಾಟೀಲ್ ದಾನ್ವೆ

    ಮುಂಬೈ: ಮಹಾರಾಷ್ಟ್ರದಲ್ಲಿ ಬ್ರಾಹ್ಮಣ ಸಮುದಾಯದವರು ಮುಖ್ಯಮಂತ್ರಿಯಾಗುವುದನ್ನು ನೋಡಲು ನಾನು ಬಯಸುತ್ತೇನೆ ಎಂದು ಕೇಂದ್ರ ರೈಲ್ವೆ, ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವ ರಾವ್‍ಸಾಹೇಬ್ ಪಾಟೀಲ್ ದಾನ್ವೆ ಹೇಳಿದ್ದಾರೆ.

    ಮಂಗಳವಾರ ರಾತ್ರಿ ಜಾಲ್ನಾದಲ್ಲಿ ನಡೆದ ಪರಶುರಾಮ ಜಯಂತಿ ಆಚರಣೆಯಲ್ಲಿ ಬ್ರಾಹ್ಮಣ ಸಮುದಾಯದವರು ಆಯೋಜಿಸಿದ್ದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ನಾನು ಬ್ರಾಹ್ಮಣರನ್ನು ಕಾಪೊರೇಟರ್‌ಗಳಾಗಿ ಅಥವಾ ನಾಗರಿಕ ಸಂಸ್ಥೆಗಳ ಮುಖ್ಯಸ್ಥರನ್ನಾಗಿ ನೋಡಲು ಬಯಸುವುದಿಲ್ಲ. ಬ್ರಾಹ್ಮಣರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತೇನೆ ಎಂದಿದ್ದಾರೆ.

    ಈ ವರ್ಷದ ಆರಂಭದಲ್ಲಿ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದೆ. ರಾಜಕೀಯಕ್ಕೆ ಜಾತೀಯತೆ ಬಂದಿದ್ದು, ಅದನ್ನು ಕಡೆಗಣಿಸುವಂತಿಲ್ಲ. ಆದರೆ ಸಮುದಾಯಗಳನ್ನು ಒಗ್ಗೂಡಿಸುವ ನಾಯಕನಿರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಆರ್‌ಸಿಬಿ ಅಭಿಮಾನಿಗೆ ಪ್ರಪೋಸ್ ಮಾಡಿ ಮನಗೆದ್ದ ಹುಡುಗಿ – ನೆಟ್ಟಿಗರು ಫುಲ್ ಆಕ್ಟಿವ್

    ರಾವ್‍ಸಾಹೇಬ್ ಪಾಟೀಲ್ ದಾನ್ವೆ ಅವರ ಈ ಹೇಳಿಕೆಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಜಾತಿ ಅಥವಾ ಲಿಂಗದ ಆಧಾರದ ಮೇಲೆ ಬೆಂಬಲಿಸಿದರೇ 145 ಶಾಸಕರು ಕೂಡ ಮುಖ್ಯಮಂತ್ರಿಯಾಗಬಹುದು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆರ್ಭಟಕ್ಕೆ ಸೈಲೆಂಟಾದ ಕಿಂಗ್ಸ್ – ಚೆನ್ನೈ ವಿರುದ್ಧ 13 ರನ್‍ಗಳ ಜಯ

  • ಬ್ರಾಹ್ಮಣರು, ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ: ಮುರಳೀಧರ್ ರಾವ್

    ಬ್ರಾಹ್ಮಣರು, ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ: ಮುರಳೀಧರ್ ರಾವ್

    ಭೋಪಾಲ್: ಜಾತಿಗಳ ಹೆಸರಿನಲ್ಲಿ ಮತ ಕೇಳಲು ಕಾರಣವೇನೆಂಬ ಪ್ರಶ್ನೆಗೆ ಸೋಮವಾರ ಮಧ್ಯಪ್ರದೇಶದ ಬಿಜೆಪಿ ಉಸ್ತುವಾರಿ ಪಿ ಮುರಳೀಧರ್ ರಾವ್ ಅವರು ವಿವಾದಾದ್ಮಕ ಉತ್ತರ ನೀಡಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‍ಟಿ, ಎಸ್‍ಸಿ ಮತ್ತು ಒಬಿಸಿ ಜನಸಂಖ್ಯೆಯನ್ನು ಕೇಂದ್ರೀಕರಿಸುವ ಬಿಜೆಪಿಯ ಭವಿಷ್ಯದ ಕಾರ್ಯತಂತ್ರದ ಕುರಿತು ರಾವ್ ಮಾತನಾಡಿದರು. ಇಲ್ಲಿಯವರೆಗೆ ಬ್ರಾಹ್ಮಣರು ಮತ್ತು ಬನಿಯಾಗಳ (ಮೇಲ್ವರ್ಗದ ವರ್ತಕ ಸಮುದಾಯ) ಪಕ್ಷ ಎಂದು ಕರೆಯಲಾಗುತ್ತಿದ್ದ ಬಿಜೆಪಿ ಈಗ ಎಸ್‍ಸಿ, ಎಸ್‍ಟಿ, ಒಬಿಸಿ ಪಕ್ಷವಾಗಲಿದೆಯೇ ಎಂಬ ಪ್ರಶ್ನೆಗೆ, ರಾವ್ ಅವರು ಹಿಂದಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಕುರ್ತಾದ ಎರಡು ಪಾಕೆಟ್‍ಗಳನ್ನು ತೋರಿಸುತ್ತಾ ‘ಬ್ರಾಹ್ಮಣರು’ ಮತ್ತು ‘ಬನಿಯಾಗಳು’ ನನ್ನ ಎರಡು ಜೇಬಿನಲ್ಲಿದ್ದಾರೆಂದು ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

    ಈ ಹೇಳಿಕೆ ವಿರುದ್ಧ ವಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗಿದೆ. ಮುರಳೀಧರ್ ವಿರುದ್ಧ ವಾಗ್ದಾಳಿ ನಡೆಸಿದ ಕಮಲ್ ನಾಥ್, ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಘೋಷಣೆಯನ್ನು ನೀಡುವ ಬಿಜೆಪಿಯ ಮಧ್ಯಪ್ರದೇಶದ ಉಸ್ತುವಾರಿ, ಈಗ ನಾವು ಒಂದು ಜೇಬಿನಲ್ಲಿ ಬ್ರಾಹ್ಮಣರು ಮತ್ತು ಒಂದು ಕಿಸೆಯಲ್ಲಿ ಬನಿಯಾ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಅಪ್ಪುನಂತ ತಮ್ಮನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ: ಶಿವಣ್ಣ ಭಾವುಕ

    ಈ ಸಮುದಾಯಗಳಿಗೆ ಮಾಡಿದ ದೊಡ್ಡ ಅವಮಾನ. ಮತದಾರರು ಪಕ್ಷದ ಆಸ್ತಿಯಾಗಬೇಕು. ಆದರೆ ಬಿಜೆಪಿ ಜೇಬಿನಲ್ಲಿದ್ದಾರೆ ಎಂದು ಹೇಳುತ್ತದೆ. ಬಿಜೆಪಿಯನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಮುದಾಯಗಳಿಗೆ ಯಾವ ರೀತಿಯ ಗೌರವವಾಗಿದೆ. ಬಿಜೆಪಿ ನಾಯಕರು ಅಧಿಕಾರ ಮತ್ತು ಅಹಂಕಾರದ ಅಮಲಿನಲ್ಲಿದ್ದಾರೆ. ಇದು ಇಡೀ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಕ್ಕೆ ಮಾಡಿದ ಅವಮಾನವಾಗಿದ್ದು, ಬಿಜೆಪಿ ನಾಯಕತ್ವವು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

    ಎಲ್ಲರನ್ನು ಜೊತೆಯಲ್ಲಿ ಕರೆದೊಯ್ಯುವ ಘೋಷಣೆಯನ್ನು ನೀಡುವ ಬಿಜೆಪಿ ಜನರನ್ನು ಈಗ ನಿರ್ದಿಷ್ಟ ಗುಂಪುಗಳನ್ನು ಕೇಂದ್ರೀಕರಿಸುವ ಮತ್ತು ಎರಡು ಸಮುದಾಯಗಳನ್ನು ಅವಮಾನಿಸುವ ಮಾತನಾಡುತ್ತಿದ್ದಾರೆ. ಇದು ಯಾವ ರೀತಿಯ ಮನಸ್ಥಿತಿ. ಅಧಿಕಾರದ ಹಸಿವಿನಲ್ಲಿ ಬಿಜೆಪಿ ಯಾವ ಹಂತಕ್ಕೂ ಹೋಗಬಹುದು. ಅದರ ನೀತಿಗಳು, ವರ್ತನೆ ಮತ್ತು ತತ್ವಶಾಸ್ತ್ರವು ಅಧಿಕಾರಕ್ಕೆ ಸೀಮಿತವಾಗಿದೆ” ಎಂದು ಕಮಲ್ ನಾಥ್ ಆರೋಪಿಸಿದ್ದಾರೆ.

  • ಬ್ರಾಹ್ಮಣ್ಯದ ವಿರುದ್ಧ ನಟ ಚೇತನ್ ಹೇಳಿಕೆ – ವಿಚಾರಣೆಗೆ ಹಾಜರು

    ಬ್ರಾಹ್ಮಣ್ಯದ ವಿರುದ್ಧ ನಟ ಚೇತನ್ ಹೇಳಿಕೆ – ವಿಚಾರಣೆಗೆ ಹಾಜರು

    ಬೆಂಗಳೂರು: ಆ ದಿನಗಳು ಖ್ಯಾತಿಯ ನಟ ಚೇತನ್ ಇವತ್ತು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

    ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‍ಐಆರ್ ದಾಖಲಿಸಿದ್ದ ಬಸವನಗುಡಿ ಪೊಲೀಸರು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇದನ್ನೂ ಓದಿ:ಕನ್ನಡ ಸಿನಿಮಾ ಕಳಪೆ ಎಂದ ನೆಟ್ಟಿಗ – ಚೇತನ್ ಬೆಂಬಲ, ರಕ್ಷಿತ್ ಶೆಟ್ಟಿ ಕಿಡಿ

    ಅದರಂತೆ ಇಂದು ವಿಚಾರಣೆಗೆ ಹಾಜರಾದ ಚೇತನ್‍ರವರಿಗೆ ಬ್ರಾಹ್ಮಣ್ಯ, ಪುರೋಹಿತ ಶಾಹಿ, ಬ್ರಾಹ್ಮಣ ವಿರೋಧವಾಗಿ ಮಾತಾಡಿರುವ ವೀಡಿಯೋ ನಿಮ್ಮದೇನಾ? ನಿಮ್ಮ ಪಾಸ್ಪೋರ್ಟ್ ನಂಬರ್ ಏನು? ವೀಸಾ ಮಾಹಿತಿ ತಿಳಿಸಿ? ಶ್ರೇಣಿಕೃತ ಅಸಮಾನತೆಯ ವ್ಯವಸ್ಥೆಯಿಂದ ಪುರೋಹಿತ ಶಾಹಿ ವರ್ಗದವರಿಗೆ ಹೇಗೆ ಲಾಭವಾಗುತ್ತದೆ? ಹೀಗೆ 36 ಪ್ರಶ್ನೆಗಳನ್ನ ಕೇಳಿ ಉತ್ತರ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

    ವಿಚಾರಣೆ ಮುಗಿಸಿ ಹೊರ ಬಂದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾನೂನು ಮೇಲೆ ಅಪಾರ ನಂಬಿಕೆ ಇದೆ. ಜಾತಿ, ಜನಾಂಗದ ವಿರುದ್ಧ ಹೋರಾಟ ಮಾಡುತ್ತಲ್ಲ. ಕೆಲವರು ಹುಟ್ಟಿದ ತಕ್ಷಣ ಶ್ರೇಷ್ಠ, ಕೆಲವರು ಕೀಳು ಅಂಥ ಮಾಡಬಾರದು. ಬೇಧ ಭಾವದ ವಿರುದ್ಧ ಹೋರಾಟ ಮಾಡುತ್ತೀವಿ. ಈ ಹೋರಾಟವನ್ನು ಮುಂದುವರಿಸುತ್ತೇವೆ. ನಮಗೆ ನ್ಯಾಯ ಸಿಗುತ್ತೆ. ವಿಚಾರಣೆಗೆ ಅಗತ್ಯವಿದ್ದಲ್ಲಿ ಮತ್ತೆ ಬರುತ್ತೇನೆ. 18ನೇ ತಾರೀಖು ಮತ್ತೆ ಬರುವುದಕ್ಕೆ ಹೇಳಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಸಂಪೂರ್ಣ ಉತ್ತರ ಕೊಡುತ್ತೇನೆ. ತನಿಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ