Tag: brain hemorrhage

  • SSLCಯಲ್ಲಿ 99% ಅಂಕ ತೆಗೆದ ವಿದ್ಯಾರ್ಥಿನಿಯ ಮೆದುಳಿನಲ್ಲಿ ರಕ್ತಸ್ರಾವವಾಗಿ ದುರ್ಮರಣ

    SSLCಯಲ್ಲಿ 99% ಅಂಕ ತೆಗೆದ ವಿದ್ಯಾರ್ಥಿನಿಯ ಮೆದುಳಿನಲ್ಲಿ ರಕ್ತಸ್ರಾವವಾಗಿ ದುರ್ಮರಣ

    ಗಾಂಧಿನಗರ: ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯಾದ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ (Brain Hemorrhage) ಸಾವನ್ನಪ್ಪಿದ್ದಾಳೆ.

    ಗುಜರಾತ್ (Gujrat) ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಎಜುಕೇಶನ್ ಬೋರ್ಡ್ (GSEB) ಫಲಿತಾಂಶ ಮೇ 11 ರಂದು ಪ್ರಕಟವಾಗಿದೆ. ಹೀರ್ ಘೆಟಿಯಾ ಎಂಬಾಕೆ 10 ನೇ ತರಗತಿ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ್ದಾಳೆ.

    ಆಕೆಗೆ ಮೆದುಳಿನ ರಕ್ತಸ್ರಾವವಾಗಿದ್ದು, ಒಂದು ತಿಂಗಳ ಹಿಂದೆ ರಾಜ್‌ಕೋಟ್‌ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್ ಕೂಡ ಆಗಿ ಮನೆಗೆ ತೆರಳಿದ್ದಳು. ಆದರೆ ವಾರದ ಹಿಂದೆ ಆಕೆಯಲ್ಲಿ ಮತ್ತೆ ಉಸಿರಾಟ ಮತ್ತು ಹೃದಯದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು.

    ಎಂಆರ್‌ಐ ವರದಿಯಲ್ಲಿ 80% ರಿಂದ 90% ರಷ್ಟು ಆಕೆಯ ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ತೋರಿಸಿದೆ. ಆಕೆಯ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ ಹೀರ್ ಬುಧವಾರ ನಿಧನರಾದಳು. ಬಳಿಕ ಆಕೆಯ ಕಣ್ಣುಗಳು ಮತ್ತು ಆಕೆಯ ದೇಹವನ್ನು ಪೋಷಕರು ದಾನ ಮಾಡಿದರು. ಇದನ್ನೂ ಓದಿ: ನನ್ನ ಮಗಳದ್ದು ಆತ್ಮಹತ್ಯೆ ಅಲ್ಲ, ಕೊಲೆ- ಮೃತ ಪ್ರಭುಧ್ಯಾ ತಾಯಿ ಗಂಭೀರ ಆರೋಪ

    ತಂದೆ ಮಾಧ್ಯಮಗಳ ಜೊತೆ ಮಾತನಾಡಿ, ಹೀರ್ ವೈದ್ಯೆ ಆಗಬೇಕೆಂದು ಬಯಸಿದ್ದಳು. ಆದರೆ ವಿಧಿ ಲಿಖಿತ ಬೇರೆಯೇ ಆಗಿತ್ತು. ಸದ್ಯ ಆಕೆಯ ದೇಹವನ್ನು ದಾನ ಮಾಡಿದ್ದೇವೆ. ಈ ಮೂಲಕ ಅವಳು ವೈದ್ಯನಾಗಲು ಸಾಧ್ಯವಾಗದಿದ್ದರೂ, ಅವಳು ಇತರ ಜೀವಗಳನ್ನು ಉಳಿಸಲು ಸಹಾಯ ಮಾಡಲು ಸಾಧ್ಯವಾಗುತ್ತದೆ ಎಂದು ಗದ್ಗದಿತರಾದರು.

  • ಚಿಕಿತ್ಸೆಗೆ ಸ್ಪಂದಿಸಿದ ನಟಿ ಹೇಮಾ ಚೌಧರಿ : ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ

    ಚಿಕಿತ್ಸೆಗೆ ಸ್ಪಂದಿಸಿದ ನಟಿ ಹೇಮಾ ಚೌಧರಿ : ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ

    ರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ (Brain Hemorrhage) ಗೆ ತುತ್ತಾಗಿದ್ದ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ನಗರ ಪ್ರತಿಷ್ಠಿತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಬೆಳಗ್ಗೆಗಿಂತ ಈಗ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ.

    ಬೆಳಗ್ಗೆ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು,  ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.

    ಮೂರು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ.

     

    ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿ ಇದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರ ಪುತ್ರನೇ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

    ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

    ನ್ನಡದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ (Brain Hemorrhage) ಆಗಿತ್ತು ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಮೂರು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ.

     

    ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿ ಇದ್ದಾರೆ. ಅವರು ಅಲ್ಲಿಂದ ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ.

  • ಕೆಲವೇ ಗಂಟೆಗಳಲ್ಲಿ ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಸಾವು

    ಕೆಲವೇ ಗಂಟೆಗಳಲ್ಲಿ ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಸಾವು

    ವಾಷಿಂಗ್ಟನ್: ವಿವಾಹವಾಗಲು (Wedding) ಕೆಲವೇ ಗಂಟೆಗಳು ಬಾಕಿ ಇರುವಾಗ ಅಗ್ನಿ ಅವಘಡದಲ್ಲಿ (Fire Incident) ವಧು (Bride) ದುರಂತ ಅಂತ್ಯ ಕಂಡ ಘಟನೆ ಅಮೆರಿಕಾದ (America) ವಿಸ್ಕಾನ್ಸಿನ್‌ನಲ್ಲಿ ನಡೆದಿದೆ ಎಂದು ವರದಿಗಳು ತಿಳಿಸಿವೆ.

    ಪೈಜ್ ರಡ್ಡಿ (19) ಮೃತಪಟ್ಟ ವಧು. ಮೇ 23ರಂದು ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ಪೈಜ್ ರಡ್ಡಿ ನಿದ್ರಿಸುತ್ತಿದ್ದಳು. ಈ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯ ಹೊಗೆಯನ್ನು ಉಸಿರಾಡಿದ ವಧುವಿಗೆ ಮೆದುಳಿನ ರಕ್ತಸ್ರಾವವಾಗಿ (Brain Haemorrhage) ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಬೈಬಲ್‌ ಹೊಂದಿದ್ದಕ್ಕೆ 2 ವರ್ಷದ ಮಗುವಿಗೆ ಜೀವಾವಧಿ ಶಿಕ್ಷೆ!

    ವಧು ತಮ್ಮ ಭಾವೀ ಪತಿಯಾದ ಲೋಗನ್ ಮಿಚೆಲ್ – ಕಾರ್ಟರ್ ಅವರೊಂದಿಗೆ ಸೋಮವಾರ ಪ್ರತಿಜ್ಞಾ ವಿಧಿಗಳನ್ನು ವಿನಿಮಯ ಮಾಡಿಕೊಂಡಿದ್ದಳು. ಅಲ್ಲದೇ ಸೌಕ್ ಕೌಂಟಿ ಕೋರ್ಟ್‌ಹೌಸ್‌ನಲ್ಲಿ ತಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಸಣ್ಣ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ವಧು ಮತ್ತು ವರ ನೆಲೆಸಿದ್ದ ಮನೆ ವರನ ಅಜ್ಜಿಗೆ ಸೇರಿದ್ದು, ಘಟನೆ ನಡೆದ ಸಂದರ್ಭ ಹೊಗೆ ತುಂಬಿದ್ದರಿಂದ ವಧುವಿಗೆ ಹೊಗೆಯಿಂದ ಆಚೆಬರಲಾಗಲಿಲ್ಲ ಎಂದು ಅಗ್ನಿಶಾಮಕ (Fire Extinguisher)  ವಿಭಾಗದ ಮುಖ್ಯಸ್ಥ ಕ್ರೇಗ್ ಡೌಗ್ಲಾಸ್ ತಿಳಿಸಿದ್ದಾರೆ. ಇದನ್ನೂ ಓದಿ: 72 ವರ್ಷದ ವೃದ್ಧನನ್ನು ಕೊಂದು ತಿಂದ 40 ಮೊಸಳೆಗಳು!

    ಪ್ರಾಥಮಿಕ ತನಿಖೆಯು ಆಕೆ ಹೊಗೆ ಸೇವನೆ ಮಾಡಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ತೋರಿಸುತ್ತದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದ್ದು, ಯಾವುದೇ ಅನುಮಾನಾಸ್ಪದ ಘಟನೆಗಳು ನಡೆದಿಲ್ಲ ಎಂದು ಸೌಕ್ ಕೌಂಟಿಯ ಕರೋನರ್ ಕಚೇರಿಯು ಮಾಹಿತಿ ನೀಡಿದೆ. ಅಲ್ಲದೇ ಘಟನೆ ನಡೆದ ಸಂದರ್ಭ ಇನ್ನೂ ಮೂವರು ಮನೆಯಲ್ಲಿದ್ದು, ಅಗ್ನಿಶಾಮಕ ದಳ ಬರುವಷ್ಟರಲ್ಲಿ ಅವರು ಬೆಂಕಿಯಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ

    ಪೈಜ್ ರಡ್ಡಿ ರೀಡ್ಸ್‌ಬರ್ಗ್ ಏರಿಯಾ ಹೈಸ್ಕೂಲ್‌ನಿಂದ ಜೂನ್ 2022ರಲ್ಲಿ ಪದವಿ ಪಡೆದಿದ್ದಳು. ಅಲ್ಲದೇ ಮ್ಯಾಡಿಸನ್ ಏರಿಯಾದ ಟೆಕ್ನಿಕಲ್ ಕಾಲೇಜಿನಲ್ಲಿ ವೆಟ್ ಟೆಕ್ ಕಾರ್ಯಕ್ರಮಕ್ಕೆ ಸೇರಲು ಯೋಚಿಸಿದ್ದಳು ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ. ಮುಂದಿನ ವಾರ ಆಕೆಯ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ಮತ್ತು ಆಕೆಯ ವೈದ್ಯಕೀಯ ಚಿಕಿತ್ಸೆಗಳ ವೆಚ್ಚವನ್ನು ಭರಿಸಲು ಆಕೆಯ ಕುಟುಂಬಸ್ಥರು ಗೋಫಂಡ್‌ಮೀ (GoFundMe) ಅನ್ನು ಸ್ಥಾಪಿಸಿದ್ದಾರೆ.‌ ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

  • ಸೂಪರ್ ಬೈಕ್ ಚಾಲನೆ ಮಾಡ್ತಿದ್ದಾಗ ಅಪಘಾತ- ಹೆಲ್ಮೆಟ್ ತೆಗೆಯಲಾಗದೆ ವ್ಯಕ್ತಿ ಸಾವು

    ಸೂಪರ್ ಬೈಕ್ ಚಾಲನೆ ಮಾಡ್ತಿದ್ದಾಗ ಅಪಘಾತ- ಹೆಲ್ಮೆಟ್ ತೆಗೆಯಲಾಗದೆ ವ್ಯಕ್ತಿ ಸಾವು

    ಜೈಪುರ: 30 ವರ್ಷದ ವ್ಯಕ್ತಿಯೊಬ್ಬರು ಸೂಪರ್ ಬೈಕ್ ಚಾಲನೆ ಮಾಡುತ್ತಿದ್ದಾಗ ಅಪಘಾತಕ್ಕೀಡಾಗಿ ಸಾವನ್ನಪ್ಪಿರೋ ಘಟನೆ ಬುಧವಾರದಂದು ರಾಜಸ್ಥಾನದ ಜೈಪುರ್‍ನಲ್ಲಿ ನಡೆದಿದೆ.

    ಬೈಕರ್ ರೋಹಿತ್ ಸಿಂಗ್ ಶೆಖಾವತ್ ಬುಧವಾರ ರಾತ್ರಿ ತನ್ನ ಸೂಪರ್ ಬೈಕ್, ಕವಾಸಾಕಿ ನಿಂಜಾ ಝೆಡ್‍ಎಕ್ಸ್ 10ಆರ್ ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ರೋಹಿತ್ ಧರಿಸಿದ್ದ ಹೆಲ್ಮೆಟ್ ತೆಗೆಯಲಾಗದ ಕಾರಣ ಬ್ರೇನ್ ಹ್ಯಾಮೊರೇಜ್ (ಮೆದುಳಿನ ರಕ್ತಸ್ರಾವ)ದಿಂದ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

    ರೋಹಿತ್ ಆಟೋಮೋಟಿವ್ ಸಂಸ್ಥೆಯೊಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದರು. ಅವರ ಬೈಕ್ ಸುಮಾರು 22 ಲಕ್ಷ ರೂ ಮೌಲ್ಯದ್ದಾಗಿದ್ದು, ಗಂಟೆಗೆ 300 ಕಿ.ಮೀ ನಷ್ಟು ವೇಗವನ್ನ ತಲುಪುವ ಸಾಮರ್ಥ್ಯ ಹೊಂದಿದೆ. ಕೆಲವು ವರದಿಗಳ ಪ್ರಕಾರ ರೋಹಿತ್ 50 ಸಾವಿರ ರೂ. ಮೌಲ್ಯದ ಇಂಪೋರ್ಟೆಡ್ ಹೆಲ್ಮೆಟ್ ಧರಿಸಿದ್ದರು. ಅತೀ ವೇಗದಲ್ಲಿ ಚಾಲನೆ ಮಾಡುವಾಗಲೂ ಅಲುಗಾಡದಂತೆ ಈ ಹೆಲ್ಮೆಟ್ ವಿನ್ಯಾಸ ಮಾಡಲಾಗಿರುತ್ತದೆ.

    ರೋಹಿತ್ ಅವರು ಇಲ್ಲಿನ ಜೆಎಲ್‍ಎನ್ ಮಾರ್ಗ್‍ನಲ್ಲಿ ಹೋಗುವಾಗ ರಸ್ತೆ ದಾಟುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆಯೋದು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ಕಳೆದುಕೊಂಡಿದ್ದಾರೆ. ಈ ವೇಳೆ ರಸ್ತೆ ದಾಟುತ್ತಿದ್ದವರಿಗೆ ಗುದ್ದಿದ್ದು, ಬೈಕ್ ಸ್ಕಿಡ್ ಆಗಿ ಸುಮಾರು 50 ಅಡಿಗಳಷ್ಟು ದೂರ ರೋಹಿತ್‍ರನ್ನ ಎಳೆದುಕೊಂಡು ಹೋಗಿದೆ.

    ರಸ್ತೆ ಮೇಲೆ ಬಿದ್ದಿದ್ದ ರೋಹಿತ್‍ಗೆ ತೀವ್ರ ರಕ್ತಸ್ರಾವವಾಗಿದ್ದು, ಸ್ಥಳದಲ್ಲಿದ್ದವರು ರೋಹಿತ್ ಧರಿಸಿದ್ದ ಹೆಲ್ಮೆಟ್ ತೆಗೆಯಲು ಪ್ರಯತ್ನಿಸಿದ್ದಾರೆ. ಆದ್ರೆ ಹೆಲ್ಮೆಟ್ ತೆಗೆಯಲು ಆಗಿರಲಿಲ್ಲ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ವೈದ್ಯರು ಹೆಲ್ಮೆಟ್ ಕಟ್ ಮಾಡಿ ತೆಗೆಯಬೇಕಾಯ್ತು ಎಂದು ವರದಿಯಾಗಿದೆ.

    ಅತ್ತ ರೋಹಿತ್ ಅವರ ಬೈಕ್ ಗುದ್ದಿದ ವ್ಯಕ್ತಿಗೂ ಗಂಭೀರ ಗಾಯಗಳಾಗಿವೆ. ರೋಹಿತ್ ಅವರ ಬೈಕ್ ನಜ್ಜುಗುಜ್ಜಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.