Tag: Bramhavar

  • ಬ್ರಹ್ಮಾವರ ಲಾಕಪ್ ಡೆತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

    ಬ್ರಹ್ಮಾವರ ಲಾಕಪ್ ಡೆತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

    ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ (Brahmavar Police Station) ನಡೆದ ಲಾಕಪ್ ಡೆತ್ (Lockup Death) ಪ್ರಕರಣ ಕೇರಳ ಸಿಎಂ ಅಂಗಳಕ್ಕೆ ತಲುಪಿದೆ. ಬಿಜು ಮೋನು ಸಾವಿನ ಬಗ್ಗೆ ಸಂಶಯ ಇದೆ ಎಂದು ಮೃತ ಕುಟುಂಬ ಗಂಭೀರ ಆರೋಪ ಮಾಡಿದೆ. ಬೆಂಗಳೂರಿನ ಸಿಐಡಿ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದು ಸಮಗ್ರ ತನಿಖೆ ನಡೆಸಿ ನ್ಯಾಯ ಕೊಡಿ ಎಂದು ಮನವಿ ಮಾಡಿದೆ.

    ನವೆಂಬರ್ 9 ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದಲ್ಲಿ ಕೇರಳ ಮೂಲದ ಬಿಜು ಮೋನು ಮೃತಪಟ್ಟಿದ್ದ. ಮದ್ಯಪಾನ ಮಾಡಿ ಮಹಿಳೆಗೆ ಕಿರುಕುಳ ಕೊಟ್ಟ ಆರೋಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದು ಸಾವು ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿ ಬರುವ ಮೊದಲೇ ಕುಟುಂಬ ಗಂಭೀರ ಆರೋಪ ಮಾಡಿದೆ. ಆರೋಪಿ ಮೈ ಮೇಲೆ ಪೊಲೀಸ್ ಏಟಿನ ಗಂಭೀರ ಗಾಯಗಳ ಗುರುತು ಇತ್ತು. ಲಾಠಿ ಮತ್ತು ಶೂಗಳಿಂದ ಹಲ್ಲೆ ಮಾಡಲಾಗಿತ್ತು ಎಂಬ ಅರ್ಥದಲ್ಲಿ ಕುಟುಂಬ ದೂರಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಚೆನ್ನೈ ಜಲಾವೃತ

     

    ಮೊಣಕಾಲಿನ ಕೆಳಗೆ ಲಾಠಿ ಏಟಿನ ರೀತಿಯ ಗಾಯದ ಗುರುತು ಇದೆ. ಲಾಕಪ್ ಡೆತ್ ಪ್ರಕರಣವನ್ನು ಅಸಹಜ ಸಾವು ಎಂದು ಪೊಲೀಸರು ಬಿಂಬಿಸಲು ಪ್ರಯತ್ನ ಪಟ್ಟಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸರ ವಿರುದ್ಧ ಬಿಜು ಮೋನು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು ಮಾತ್ರವಲ್ಲ, ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ (Pinarayi Vijayan) ಈ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೃತ ಬಿಜು ಮೋನು ಸಹೋದರ ಬಿನು ಯೋಹನ್ನಾನ್ ಈ ಕುರಿತು ಮಾತನಾಡಿದ್ದು, ನಾವು ಮೃತದೇಹ ನೋಡದಂತೆ ಪೊಲೀಸರು ಶವಗಾರದಲ್ಲಿ ಲೈಟ್ ಆಫ್ ಮಾಡಿದ್ದರು. ಮೊಬೈಲ್ ಬೆಳಕಿನಲ್ಲಿ ನೋಡಿದಾಗ ಮೊಣಕಾಲಿನ ಕೆಳಗೆ ಬಹಳಷ್ಟು ಗಾಯದ ಗುರುತುಗಳಿತ್ತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಮೇರೆಗೆ ಮೃತದೇಹ ಪರಿಶೀಲಿಸಲಾಗಿತ್ತು. ದೇಹದಲ್ಲಿ ಸಾಕಷ್ಟು ಗಾಯದ ಗುರುತುಗಳು ಕಂಡು ಬಂದಿದ್ದವು. ನನ್ನ ಸಹೋದರನನ್ನು ಪೊಲೀಸರು ಕಾನೂನು ಪ್ರಕಾರವಾಗಿ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ. ಮಹಿಳೆಯೋರ್ವಳ ದೂರಿನ ಹಿನ್ನೆಲೆಯಲ್ಲಿ ನನ್ನ ಸಹೋದರನನ್ನು ಬಂಧಿಸಲಾಗಿದೆ ಎಂದಿದ್ದರು. ದೂರು ಕೊಟ್ಟ ಮಹಿಳೆ ಯಾರು? ಅವರು ಕೊಟ್ಟ ದೂರಿನ ಕಾಪಿ ಬಗ್ಗೆ ಮಾಹಿತಿ ನೀಡಿಲ್ಲ. ಇವೆಲ್ಲವನ್ನೂ ನಾವು ಕೇರಳ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದೇವೆ. ಬ್ರಹ್ಮಾವರ ಪೊಲೀಸರ ಮೇಲೆ ತುಂಬಾ ಅನುಮಾನವಿದೆ. ಸಿಐಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದೇವೆ. ನಮಗೆ ತುಂಬಾ ಮಂದಿ ಕರೆ ಮಾಡಿ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು. ಈ ಬಗ್ಗೆಯೂ ನಾವು ಸಿಐಡಿಗೆ ಮಾಹಿತಿ ನೀಡಿದ್ದೇವೆ. ನಮಗೆ ನ್ಯಾಯ ಬೇಕು, ಪೊಲೀಸರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

    ಮರಣೋತ್ತರ ಪರೀಕ್ಷೆ ವರದಿ ಇನ್ನು ಪೊಲೀಸರ ಕೈ ಸೇರಿಲ್ಲ. ಪ್ಯಾಥಾಲಜಿ ರಿಪೋರ್ಟ್ಗಾಗಿ ಕಾಯುತ್ತಿದ್ದಾರೆ. ವೈದ್ಯಕೀಯ ವರದಿ ಬಂದ ಮೇಲಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿಕೆಶಿ

  • ಮನೆಯಲ್ಲಿ ಮತ ಚಲಾಯಿಸಿದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದ ವೃದ್ಧೆ

    ಮನೆಯಲ್ಲಿ ಮತ ಚಲಾಯಿಸಿದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದ ವೃದ್ಧೆ

    ಉಡುಪಿ: ಮನೆಯಲ್ಲಿ ಮತದಾನ (Vote) ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ (Old Woman) ಮೃತಪಟ್ಟ ಘಟನೆ ಉಡುಪಿ (Udupi) ಜಿಲ್ಲೆಯಲ್ಲಿ ನಡೆದಿದೆ.

    ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟ ಹಿರಿಯ ಮಹಿಳೆ. ಉಡುಪಿ ಜಿಲ್ಲೆಯ ಬ್ರಹ್ಮಾವರ (Bramhavar) ತಾಲೂಕಿನ ಸಾಸ್ತಾನ ಪಾಂಡೇಶ್ವರ ನಿವಾಸಿಯಾಗಿರುವ ಯಶೋಧಾ, ಚಡಗರ ಅಗ್ರಹಾರದ ನಿವಾಸಿಯಾಗಿದ್ದಾರೆ. ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿರುವ ಅವರು, ತನ್ನ ಜೀವನದಲ್ಲಿ ಎಲ್ಲಾ ಚುನಾವಣೆಗಳಲ್ಲೂ ತಪ್ಪದೆ ಹಕ್ಕು ಚಲಾಯಿಸಿದ್ದಾರೆ. ಇದನ್ನೂ ಓದಿ: ಡಿ.ಕೆ.ಸುರೇಶ್‌ ಆಪ್ತನ ಮನೆ ಮೇಲೆ ಐಟಿ ದಾಳಿ

    ಈ ಬಾರಿ ಹಿರಿಯ ನಾಗರಿಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು. ಬೆಳಗ್ಗೆಯಿಂದ ಕೊಂಚ ಎದೆನೋವು ಇತ್ತು ಎಂದು ಮನೆಯವರ ಬಳಿ ಹೇಳಿಕೊಂಡಿದ್ದರು. ಆದರೆ ಮತದಾನ ಮಾಡಿ ಆಸ್ಪತ್ರೆ ತೆರಳುವುದಾಗಿ ಹೇಳಿದ್ದ ಮಹಿಳೆ ಯಶೋಧಾ ಅವರನ್ನು ಮತ ಪ್ರಕ್ರಿಯೆ ಮುಗಿದ ಮೇಲೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದನ್ನೂ ಓದಿ: ಕೊತ್ವಾಲ್ ಬ್ರದರ್ಸ್ ‘ಆ ದಿನಗಳ’ ಗೂಂಡಾಗಿರಿ ಮುಂದುವರೆಸಿದ್ದಾರೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

    ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋಧಮ್ಮ ಕೊನೆಯುಸಿರೆಳೆದಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಚುನಾವಣಾ ಪ್ರಕ್ರಿಯೆ ತನ್ಮ ಹಕ್ಕು ಚಲಾಯಿಸಬೇಕೆಂಬ ಆಸೆಯನ್ನು ಪೂರ್ತಿಗೊಳಿಸಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಇದನ್ನೂ ಓದಿ: ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ‌ಮಾಡಿದ್ದೇನೆ: ಈಶ್ವರಪ್ಪ