Tag: Brand Bengaluru

  • ಬೆಂಗ್ಳೂರು ಜನರು ಬ್ರ್ಯಾಂಡೆಡ್‌ ನರಕದಲ್ಲಿ ನರಳುತ್ತಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗ್ಳೂರು ಜನರು ಬ್ರ್ಯಾಂಡೆಡ್‌ ನರಕದಲ್ಲಿ ನರಳುತ್ತಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

    – ಕಾಂಗ್ರೆಸ್ ಸಾಧನೆ ಬೆಂಗ್ಳೂರಿನ ರಸ್ತೆ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ
    – ಬ್ರ‍್ಯಾಂಡ್ ಅಂದ್ರೆ ಬೆಂಗಳೂರನ್ನ ಮುಳುಗಿಸೋದಾ? – ಕೇಂದ್ರ ಸಚಿವ

    ಬೆಂಗಳೂರು: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಬ್ರ‍್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮಳೆ ಅವಾಂತರದಿಂದಾಗಿ ಬೆಂಗಳೂರು ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ (Congress) ನಾಯಕರಿಗೆ ಸಾಧನಾ ಸಮಾವೇಶದ ಚಿಂತೆಯಾಗಿದೆ. ಒಂದು ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತುಗಳನ್ನು ಹಾಕುತ್ತಿದ್ದಾರೆ. ಬೆಂಗಳೂರು ಜನ ಬ್ರ‍್ಯಾಂಡೆಡ್ ನರಕದಲ್ಲಿದ್ದಾರೆ. ನಗರದ ಜನ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಸಿವಿಲ್ ನ್ಯಾಯಾಧೀಶ ಸ್ಥಾನಕ್ಕೆ ನೇಮಕಾತಿಯಾಗಲು ಕನಿಷ್ಠ ಮೂರು ವರ್ಷಗಳ ವಕೀಲಿಕಿ ಅನುಭವ ಕಡ್ಡಾಯ: ಸುಪ್ರೀಂ

    ಹೆಚ್‌ಡಿಕೆ ಎಕ್ಸ್‌ನಲ್ಲಿ ಏನಿದೆ?
    ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ (Congress) ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ. ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ. ಬೆಂಗಳೂರು ಜನ ಬ್ರ‍್ಯಾಂಡೆಡ್ ನರಕದಲ್ಲಿದ್ದಾರೆ. ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು.

    ಕಾಂಗ್ರೆಸ್ ಸರ್ಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರ್ಕಾರಕ್ಕೆ ಸಾಧನೆ ಸಮಾವೇಶ ಬೇರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ.

    ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು? ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ. ಯಾವ ಪುರುಷಾರ್ಥಕ್ಕೆ ಗ್ರೇಟರ್ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ‍್ಯಾಂಡ್ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ? ಎರಡು ವರ್ಷಗಳಿಂದ ಬ್ರ‍್ಯಾಂಡ್, ಬ್ರ‍್ಯಾಂಡ್ ಎಂದು ಭಜನೆ ಮಾಡುತ್ತಿದ್ದೀರಲ್ಲ. ಬ್ರ‍್ಯಾಂಡ್ ಎಂದರೆ ಬೆಂಗಳೂರನ್ನು ಮುಳುಗಿಸುವುದಾ?

    ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಈ ವ್ಯಕ್ತಿ ಪಾಲಿಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ. ಬಯಸಿದಾಗ ನೋಟಿನ ಮಳೆ ಸುರಿಸುವ ಅಕ್ಷಯಪಾತ್ರೆ. ಎರಡು ವರ್ಷಗಳಿಂದ ಸುರಿದ ನೋಟಿನ ಮಳೆ ಪ್ರಮಾಣ ಎಷ್ಟು? ಕೈ ಇಟ್ಟ ಕಡೆಯಲ್ಲಾ ದುಡ್ಡು, ಜನರ ಮೇಲೆ ತೆರಿಗೆ ಮೇಲೆ ತೆರಿಗೆ, ಎರಡು ವರ್ಷಗಳಲ್ಲಿ ಎಷ್ಟೊಂದು ಬಾರಿ ಸಾಯಿ ಬಡವಾಣೆ ಮುಳುಗಿತು? ಅಲ್ಲಿಗೆ ಡಿಸಿಎಂ ಎಷ್ಟು ಸಲ ಹೋಗಿದ್ದರು? ಈ ಹಿಂದೆ ನಗರಾಭಿವೃದ್ಧಿ ಮಂತ್ರಿ ಆಗಿದ್ದಾಗ ನಗರಕ್ಕೇನು ಮಾಡಿದ್ದರು? ಸಚಿವಗಿರಿಯನ್ನು ಸ್ವ-ನಗದು ಅಭಿವೃದ್ಧಿಗೆ ಬಳಸಿಕೊಂಡರಷ್ಟೇ.

    ಮಾತೆತ್ತಿದರೆ ಬೆಂಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡಿದರೆಂದು ಕೇಳುತ್ತಾರೆ. 2006ರ 20 ತಿಂಗಳ ಅವಧಿಯಲ್ಲಿ 58 ರಸ್ತೆ ಅಗಲೀಕರಣ, ಮೆಟ್ರೋ ಮೊದಲ ಹಂತ ಕಾಮಗಾರಿಗೆ ಚಾಲನೆ, ಹೊಸ ಏರ್‌ಪೋರ್ಟ್ ರಸ್ತೆ, ನೆಲಮಂಗಲ ರಸ್ತೆ, ಎಲೆಕ್ಟ್ರಾನಿಕ್ ರಸ್ತೆ ಅಭಿವೃದ್ಧಿ ಸೇರಿ ಎಷ್ಟೋ ಕೆಲಸ ಮಾಡಿದ್ದೇನೆ. ಕೆರೆಯನ್ನೇ ನುಂಗಿ ಜೆಪಿ ನಗರ ಡಾಲರ್ಸ್ ಕಾಲೋನಿ ಮಾಡಿದ್ದರಲ್ಲ, ಆ ಮನೆಗಳಿಗೆ ಕೆರೆ ನೀರು ನುಗ್ಗುತ್ತಿದ್ದನ್ನು ತಪ್ಪಿಸಿದ್ದು ಯಾರು? ನನ್ನ ಆಡಳಿತ ಅತ್ಯಲ್ಪ. ಹಿಂದೆ ಬಿಜೆಪಿ ಜೊತೆ 20 ತಿಂಗಳು, ಇನ್ನೊಮ್ಮೆ ನಿಮ್ಮ ಜೊತೆ 14 ತಿಂಗಳು. ನನ್ನ ಕೆಲಸಗಳಿಗೆ ದಾಖಲೆಗಳಿವೆ, ಓದಿಕೊಳ್ಳಿ.

    ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಜನ ನಿಮಗೆ ಕುದುರೆ ಕೊಟ್ಟಿದ್ದಾರೆ. ಕುದುರೆ ಶೋಕಿಗಲ್ಲ. ಪೆನ್ನು ಅಲಂಕಾರಕ್ಕಲ್ಲ. ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ. ಇಲ್ಲವಾದರೆ ನಿಮ್ಮ ಬ್ರ‍್ಯಾಂಡಿಗೆ ಜನ ಅದೇ ನೀರು ಬಿಟ್ಟಾರು. ಬ್ರ‍್ಯಾಂಡೆಡ್ ನರಕ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ: ರಾಹುಲ್‌ ಗಾಂಧಿ

  • ಬಿಬಿಎಂಪಿ ಬಜೆಟ್ ಮಂಡನೆ – 19,927 ಕೋಟಿ ಬೃಹತ್ ಯೋಜನೆಗಳ ಘೋಷಣೆ

    ಬಿಬಿಎಂಪಿ ಬಜೆಟ್ ಮಂಡನೆ – 19,927 ಕೋಟಿ ಬೃಹತ್ ಯೋಜನೆಗಳ ಘೋಷಣೆ

    – ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್‌ನಲ್ಲಿ ಹೆಚ್ಚಿನ ಮಹತ್ವ

    ಬೆಂಗಳೂರು: 2025-26ನೇ ಸಾಲಿನ ಬಿಬಿಎಂಪಿ ಬಜೆಟ್ (BBMP Budget) ಮಂಡನೆಯಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್ ಬಜೆಟ್‌ಗೆ ಅನುಮೋದನೆ ನೀಡಿದ್ದು, ಸತತ ಐದನೇ ಬಾರಿಗೆ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡಿದ್ದಾರೆ.

    19,927 ಕೋಟಿ ಬೃಹತ್ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್ ಬಜೆಟ್ ಅನುಮೋದನೆ ನೀಡಿದ್ದು, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡನೆ ಮಾಡಿದ್ದಾರೆ.

    ಬ್ರ‍್ಯಾಂಡ್ ಬೆಂಗಳೂರು (Brand Bengaluru) ದೃಷ್ಟಿಕೋನಕ್ಕೆ ಅನುಗುಣವಾಗಿ ಬೆಂಗಳೂರನ್ನು ಅಧುನಿಕ ನಗರವನ್ನಾಗಿಸುವ ಘೋಷಣೆ ಮಾಡಲಾಗಿದೆ. ಬ್ರ‍್ಯಾಂಡ್ ಬೆಂಗಳೂರಿಗೆ ಬಿಬಿಎಂಪಿ ಬಜೆಟ್‌ನಲ್ಲಿ ಅತಿ ಹೆಚ್ಚಿನ ಮಹತ್ವ ನೀಡಲಾಗಿದೆ. ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ ಟ್ರಾಫಿಕ್ ಮುಕ್ತ, ಗ್ರೀನ್ ಸಿಟಿ, ಟೆಕ್, ಶಿಕ್ಷಣ, ಆರೋಗ್ಯ, ರೋಮಾಂಚಕ ಬೆಂಗಳೂರು, ನೀರಿನ ಭದ್ರತೆಗೆ ಅತಿ ಹೆಚ್ಚಿನ ಒತ್ತು ನೀಡಲಾಗಿದೆ. ಬ್ರ‍್ಯಾಂಡ್ ಬೆಂಗಳೂರಿಗೆ 1,790 ಕೋಟಿ ವೆಚ್ಚ ಮಾಡಲು ನಿರ್ಧಾರ ಮಾಡಲಾಗಿದೆ.

    ಯಾವುದಕ್ಕೆ ಎಷ್ಟು ಅನುದಾನ ಮೀಸಲು?
    *ಘನತ್ಯಾಜ್ಯ ನಿರ್ವಹಣೆ ಯೋಜನೆಗಾಗಿ 1,400 ಕೋಟಿ ಮೀಸಲು ಇರಿಸಲಾಗಿದೆ. ತ್ಯಾಜ್ಯ ವಿಲೇವಾರಿ ಘಟಕ, ಒಣ ತ್ಯಾಜ್ಯ ನಿರ್ವಹಣಾ ಘಟಕ, ಮೆಕ್ಯಾನಿಕ್ ಸ್ವೀಪಿಂಗ್ ಯಂತ್ರಗಳು, ಇನ್ನಿತರ ಘನತ್ಯಾಜ್ಯ ನಿರ್ವಹಣೆ ಯೋಜನೆಗೆ 1,400 ಕೋಟಿ ಅನುದಾನ ಮೀಸಲಿರಿಸಲಾಗಿದೆ.
    *ಬೆಂಗಳೂರು ಶಿಕ್ಷಣ ಯೋಜನೆ ಅನುಷ್ಠಾನಗಳಿಗೆ 183 ಕೋಟಿ ಮೀಸಲಿಡಲಾಗಿದೆ. 15 ಶಾಲೆಗಳ ನವೀಕರಣ, 60 ಶಾಲೆಗಳ ಸ್ಮಾರ್ಟ್ ಬೋರ್ಡ್, ಶಾಲಾ ಕಟ್ಟಡಗಳ ನಿರ್ವಹಣೆಗೆ 23 ಕೋಟಿ, ಶಾಲಾ ಮೈದಾನ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.
    *ಆರೋಗ್ಯ ಬೆಂಗಳೂರು ಯೋಜನೆಗೆ 413 ಕೋಟಿ ಅನುದಾನ ಕೊಟ್ಟಿದ್ದು, 19 ಹೊಸ ಆಸ್ಪತ್ರೆಗಳು, 26 ಹೊಸ ಡೆಂಟಲ್ ಆಸ್ಪತ್ರೆ, ಬೀದಿನಾಯಿಗಳ ನಿರ್ವಹಣೆಗೆ 60 ಕೋಟಿ ಅನುದಾನ ನೀಡಲಾಗಿದೆ.
    *ಬೆಂಗಳೂರು ನಗರವನ್ನು ಸುಂದರೀಕರಿಸಲು, ಆಕರ್ಷಣೆ ಮಾಡಲು 50 ಕೋಟಿ, ಜಂಕ್ಷನ್ ಮತ್ತು ಸಾರ್ವಜನಿಕ ಸ್ಥಳಗಳ ಸುಂದರೀಕರಣಕ್ಕೆ 25 ಕೋಟಿ ಮೀಸಲು ಇಡಲಾಗಿದೆ.
    *ಸ್ಕೈ ಡೆಕ್ ನಿರ್ಮಾಣಕ್ಕಾಗಿ 50 ಕೋಟಿ ಅನುದಾನ ನೀಡಲಾಗಿದೆ.
    *ಬೆಂಗಳೂರು ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 247.25 ಕೋಟಿ ಮೀಸಲು ಇಡಲಾಗಿದೆ.
    *225 ವಾರ್ಡ್‌ಗಳ ಅಭಿವೃದ್ಧಿಗಾಗಿ ವಾರ್ಡ್‌ಗೆ ತಲಾ 2.50 ಕೋಟಿಯಂತೆ 675 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
    *ಪ್ರೀಮಿಯರ್ ಎಫ್‌ಎಆರ್ ನೀತಿ ಜಾರಿ ಮಾಡಿದ್ದು, ಇದರಿಂದ 2 ಕೋಟಿ ಆದಾಯ ನೀರಿಕ್ಷೆ ಮಾಡಲಾಗಿದೆ.
    *ಪಾಲಿಕೆ ಸಿಬ್ಬಂದಿ ವರ್ಗಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಅವಕಾಶ ಕೊಡಲಾಗಿದೆ.
    *ಸಿಬ್ಬಂದಿ ಹಾಜರಾತಿ ಕಠಿಣಗೊಳಿಸಲು ಜಿಯೋ ಫೆನ್ಸಿಂಗ್ ವ್ಯವಸ್ಥೆ ಮಾಡಲಾಗಿದೆ.
    *12,692 ಪೌರಕಾರ್ಮಿಕರ ಕಾಯಂಗೊಳಿಸಿ 500 ಕೋಟಿ ಮೀಸಲು ಇರಿಸಲಾಗಿದೆ.
    *5,716 ಕೋಟಿ ಕಂದಾಯ ನಿರೀಕ್ಷೆ ಪಾಲಿಕೆ ವ್ಯಾಪ್ತಿಯ 20 ಲಕ್ಷ ಸ್ವತ್ತುಗಳ ಸರ್ವೇಗೆ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುವುದು.
    *ಅನಧಿಕೃತ ಜಾಹೀರಾತಿಗೆ ಬ್ರೇಕ್ ಹಾಕಲು ಹೊಸ ನಿಯಮ ಜಾರಿ ಮಾಡಿದ್ದು, ಇದರಿಂದ 750 ಕೋಟಿ ಆದಾಯ ನಿರೀಕ್ಷಿಸಲಾಗಿದೆ.

  • ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಕೆಶಿ

    ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಕೆಶಿ

    – 1,700 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಯೋಜನೆ

    ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು (Brand Bengaluru) ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ 1,700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

    ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯಲ್ಲಿ 14 ಪ್ಯಾಕೇಜ್‌ಗಳ ಮೂಲಕ ಬೆಂಗಳೂರಿನ 150 ಕಿ.ಮೀ ಉದ್ದದ 97 ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬಿಡಬ್ಲ್ಯೂಎಸ್‌ಎಸ್‌ಬಿ, ಬಿಬಿಎಂಪಿ, ಬಿಡಿಎ, ಬೆಸ್ಕಾಂಗಳ ನಡುವೆ ಸಮನ್ವಯತೆ ಸಾಧಿಸಿ ಶಾಶ್ವತ ರಸ್ತೆ ನಿರ್ಮಿಸಲಾಗುತ್ತಿದೆ. ಕೇಬಲ್, ಪವರ್ ವೈಯರ್‌ಗಳಿಗೆ ಅವಕಾಶ ಕಲ್ಪಿಸಿ, ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಈ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: 422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ

    ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ ಎಂದರು. ಇದನ್ನೂ ಓದಿ: IPL 2025 Schedule | ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ KKR vs RCB ಕಾದಾಟ – ಪಂದ್ಯ ಯಾವಾಗ?

    ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ: ಕೊತ್ತೂರು ಮಂಜುನಾಥ್

    ಇದರ ಜೊತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

    ಈ ಯೋಜನೆಗೆ ಮೀಸಲಿಟ್ಟಿರುವ 1,700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ. ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂಎಸ್‌ಎಸ್‌ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

    ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ

    ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

  • ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

    ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

    ಬೆಂಗಳೂರು: ಬೆಂಗಳೂರು ಮಳೆಗೆ (Bengaluru Rain) ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಏನು ಇಲ್ಲ. ಇದಾ ಡಿಕೆ ಶಿವಕುಮಾರ್ (DK Shivakumar) ಅವರ ಬ್ರ‍್ಯಾಂಡ್ ಬೆಂಗಳೂರು (Brand Bengaluru) ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ಸರ್ಕಾರ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

    ಬೆಂಗಳೂರಿನ ಮಳೆ ಅವಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿವಕುಮಾರ್ ಹಾಗೂ ನನ್ನ ವಿಷನ್ ಬೇರೆ. ಬ್ರ‍್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಹೇಳುತ್ತಾರೆ. ಡ್ರೈನೇಜ್ ಸಿಸ್ಟಮ್ ಬೆಂಗಳೂರಿನಲ್ಲಿ ಹಾಳಾಗಿದೆ. ಇವರು ಬಂದು ಒಂದೂವರೆ ವರ್ಷ ಆಗಿದೆ. ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ನೂರೆಂಟು ಸಮಸ್ಯೆಗಳು ಅನ್ನಿಸುತ್ತದೆ. ಇಂತಹ ದೊಡ್ಡ ಸಿಟಿ, ಬೇರೆ ದೇಶ ನಮ್ಮ ಕಡೆ ಇನ್ವೆಸ್ಟ್ ಮಾಡೋಕೆ ನೋಡುತ್ತಿದೆ. ಆದರೆ ಒಂದು ದಿನ ಮಳೆ ಬಂದರೂ ಅದನ್ನು ಸರಿ ಮಾಡಲು ಆಗುತ್ತಿಲ್ಲ. ಸರಿಯಾದ ವ್ಯವಸ್ಥೆ ಮಾಡದ ಇವರು ಯಾವ ರೀತಿ ಬ್ರ‍್ಯಾಂಡ್ ಬೆಂಗಳೂರು ಮಾಡುತ್ತಾರೆ? ಈ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇಂತಹ ದೊಡ್ಡ ಸಿಟಿಯಲ್ಲಿ ರಸ್ತೆ, ಚರಂಡಿ ಸರಿಯಾಗಿ ಮಾಡದ ಈ ಸರ್ಕಾರ ನಾಲಾಯಕ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಾಳೆಗರಿಯಲ್ಲಿ ಗದಾಯುದ್ಧ ಬರೆಯಲು ಮುಂದಾದ ಸಂಗಮೇಶ ಕಲ್ಯಾಣಿ

    ಬೆಂಗಳೂರಿನ 7 ಜನ ಮಂತ್ರಿಗಳಿಗೆ ಜನರ ಮುಂದೆ ಹೋಗೋಕೆ ಮುಖವಿಲ್ಲ. ಅನುದಾನ ಕೊಡೋಕೆ ಆಗುತ್ತಿಲ್ಲ. ಕಾರ್ಪೊರೇಷನ್ ಎಲೆಕ್ಷನ್ ಮಾಡೋಕೆ ಯೋಗ್ಯತೆ ಇಲ್ಲ. ಸಂವಿಧಾನ ಉಳಿಸುತ್ತೇನೆ ಎನ್ನುತ್ತಾರೆ. ಆದರೆ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಕಾರ್ಪೋರೇಷನ್ ಎಲೆಕ್ಷನ್ ಮಾಡುತ್ತಿಲ್ಲ. ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ

    ಕಾಂಗ್ರೆಸ್ ಶಾಸಕರೇ ಅನುದಾನ ಕೊಡಿ ಇಲ್ಲ ಸಾಯುತ್ತೇನೆ ಅಂತ ಹೇಳೋ ಪರಿಸ್ಥಿತಿ ಬಂದಿರಲಿಲ್ಲ. ಬೆಂಗಳೂರು ಬ್ರ‍್ಯಾಂಡ್ ಬೆಂಗಳೂರು ಮಾಡೋಕೆ ಆಗಿಲ್ಲ. ರಾಮನಗರವನ್ನು ಬೆಂಗಳೂರು ದಕ್ಷಿಣ ಅಂತ ಮಾಡಿದ್ದಾರೆ. ಇದು ವ್ಯಾಪಾರ ಮಾಡೋಕೆ ಅಷ್ಟೇ. ಬೆಂಗಳೂರು ದಕ್ಷಿಣ ಮಾಡಲು ಹೊರಟಿರುವುದು ಅಭಿವೃದ್ಧಿ ಮಾಡಲು ಅಲ್ಲ. ಇವರ ಆಸ್ತಿ ಬೆಲೆ ಜಾಸ್ತಿ ಮಾಡಿಕೊಳ್ಳೋಕೆ ಮಾಡಿದ್ದಾರೆ ಅಷ್ಟೇ ಎಂದರು. ಇದನ್ನೂ ಓದಿ: ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

    ನೀರು ಮನೆಗೆ ನುಗ್ಗಿವೆ. ರಸ್ತೆಯಲ್ಲಿ ವಾಹನಗಳು ಮುಳುಗಿವೆ. ಜನರಿಗೆ ರಕ್ಷಣೆ ಕೊಡೋಕೆ ಆಗುತ್ತಿಲ್ಲ. ಇದು ಕೆಟ್ಟ ಸರ್ಕಾರ. ಕಾಂಗ್ರೆಸ್ ಅವರು ಬೇರೆ ಅವರ ಮೇಲೆ ದೂಷಣೆ ಮಾಡೋಕೆ ಎತ್ತಿದ ಕೈ. ಪರಿಸ್ಥಿತಿ ಸರಿ ಮಾಡೋ ಕೆಲಸ ಮಾಡುತ್ತಿಲ್ಲ. ಈಗಲಾದರೂ ಸರ್ಕಾರ ಗಮನಹರಿಸಲಿ. ಜನರು ನಿಮಗೆ ಒಳ್ಳೆಯ ಸ್ಥಾನವನ್ನ ಕೊಟ್ಟಿದ್ದಾರೆ ಅಂತ ಮನವರಿಕೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾನು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ: ದೂರಿನ ಬೆನ್ನಲ್ಲೇ ಸಚಿವ ಬೋಸರಾಜು ಸ್ಪಷ್ಟನೆ

  • ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ – ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ – ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.ಇದನ್ನೂ ಓದಿ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

    ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ಅವ್ಯವಸ್ಥೆ ಆಗಿದೆ ಎಂದು ಎಕ್ಸ್ (X) ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟ್ ಹಾಕಿದೆ. ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.

    ಟ್ವೀಟ್‌ನಲ್ಲಿ ಏನಿದೆ?
    ಮಾನ್ಯ ಹೆಚ್‌ಡಿ ದೇವೇಗೌಡ (HD Devegowda) ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರ್ಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ‍್ಯಾಂಡ್ ಬೆಂಗಳೂರು!! ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್‌ನಲ್ಲಿ ಬ್ಯುಸಿಯಾಗಿದ್ದಾರೆ!! ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ಲೇವಡಿ ಮಾಡಿದೆ.ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

  • ದಾಸರಹಳ್ಳಿಯಲ್ಲಿ ತಲೆಯೆತ್ತಿದ್ದ ಗುಂಡಿ ಸಮಸ್ಯೆ – ಡೆಡ್‌ಲೈನ್ ಮುಗಿದರೂ ದುರಸ್ತಿಯಿಲ್ಲ

    ದಾಸರಹಳ್ಳಿಯಲ್ಲಿ ತಲೆಯೆತ್ತಿದ್ದ ಗುಂಡಿ ಸಮಸ್ಯೆ – ಡೆಡ್‌ಲೈನ್ ಮುಗಿದರೂ ದುರಸ್ತಿಯಿಲ್ಲ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಇತ್ತೀಚಿಗಷ್ಟೇ ಗುಂಡಿಯನ್ನು ಮುಚ್ಚಬೇಕು ಎನ್ನುವ ಡೆಡ್‌ಲೈನ್ (DeadLine) ಮುಗಿದಿದ್ದು, ನಗರದ ಹೊರವಲಯದಲ್ಲಿರುವ ಚಿಕ್ಕಸಂದ್ರ (Chikkasandra) ಮುಖ್ಯ ರಸ್ತೆಯಿಂದ ಹೆಸರುಘಟ್ಟ (Hesaraghatta) ರಸ್ತೆಯ ಸಾಕಷ್ಟು ಮುಖ್ಯ ರಸ್ತೆಗಳ ಗುಂಡಿಗಳು ಮುಚ್ಚದೇ ಹಾಗೇ ಉಳಿದಿವೆ.

    ಡಿಸಿಎಂ ಡಿ.ಕೆ.ಶಿವಕುಮಾರ್‌ರವರು (DCM DKShivakumar) ಬೆಂಗಳೂರು ನಗರವನ್ನು ಬ್ರಾಂಡ್ ಬೆಂಗಳೂರು (Brand Bengaluru) ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ನಡುವೆ ಬಿಬಿಎಂಪಿ (BBMP) ಅಧಿಕಾರಿಗಳಿಗೆ ನಗರದ ಗುಂಡಿಗಳನ್ನು ಮುಚ್ಚಲು ಗಡುವು ನೀಡಿದ್ದರು. ಈಗಾಗಲೇ ಗಡುವು ಮುಗಿದು ಹಲವು ದಿನಗಳು ಕಳೆದಿವೆ. ಆದರೆ ಟಿ.ದಾಸರಹಳ್ಳಿ (T Dasarahalli) ವಿಧಾನಸಭಾ ಕ್ಷೇತ್ರದ ಚಿಕ್ಕಸಂದ್ರ ಮುಖ್ಯ ರಸ್ತೆಯಿಂದ ಹೆಸರುಘಟ್ಟ ರಸ್ತೆಯ ಸಾಕಷ್ಟು ಮುಖ್ಯ ರಸ್ತೆಗಳು ಗುಂಡಿ ಗಂಡಾಂತರಗಳಿಂದ ಕೂಡಿದ್ದು, ಅವ್ಯವಸ್ಥೆಯಾಗಿ ಉಳಿದಿದೆ.ಇದನ್ನೂ ಓದಿ: 2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

    ಗಡುವು ನೀಡಿದ್ದರೂ ಈ ವಿಧಾನಸಭಾ ಕ್ಷೇತ್ರದಲ್ಲಿ ಜನರ ಪಾಡು ಕೇಳುವವರೇ ಇಲ್ಲದಂತಾಗಿದೆ. ಸಾಕಷ್ಟು ಬಾರಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಈ ಸಮಸ್ಯೆ ಹಾಗೆಯೇ ಉಳಿದಿದೆ. ಹೀಗಾಗಿ ರಸ್ತೆ ದುರಸ್ತಿಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

    ಮಂಡಿಯುದ್ದದ ಗುಂಡಿಗಳು ವಾಹನ ಸವಾರರಲ್ಲಿ ಮೃತ್ಯು ಕೂಪವಾಗಿ ಪರಿಣಮಿಸಿವೆ. ಯಮಸ್ವರೂಪಿ ಗುಂಡಿ ಗಂಡಾಂತರದಿಂದ ಎದ್ದು ಬಿದ್ದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ತಮ್ಮ ಮಕ್ಕಳನ್ನು ಶಾಲೆಗೆ, ಶಾಲೆಯಿಂದ ಮನೆಗೆ ಕರೆತರಬೇಕಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇನ್ನೂ ಮಳೆಗಾಲದಲ್ಲಿ ಎಲ್ಲಿ ಗುಂಡಿ ಇದೆಯೋ, ಎಲ್ಲಿ ಮಳೆಯ ನೀರು ಇದೆಯೋ ಎಂಬುದು ತಿಳಿಯದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ತಮ್ಮ ಅಳಲನ್ನು ಆಕ್ರೋಶದ ರೀತಿಯಲ್ಲಿ ದುರಸ್ತಿ ಮಾಡಲು ಮನವಿ ಮಾಡಿದ್ದಾರೆ.

    ಒಟ್ಟಾರೆ ಬೃಹತ್ ಮಹಾನಗರ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಗಳು ಈ ವರ್ಷದಲ್ಲಿ ದುರಸ್ತಿಯಾಗುತ್ತದೆಯಾ? ಎಂಬ ಅನುಮಾನವಿದ್ದು, ಬಿಬಿಎಂಪಿ ಅಧಿಕಾರಿಗಳು ಡಿಸಿಎಂ ಆದೇಶಕ್ಕೆ ದುರಸ್ತಿ ಮಾಡುತ್ತಾರಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌

    &

  • ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

    ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

    ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು (Brand Bengaluru) ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ ಕಲ್ಪಿಸಿದ್ದಾರೆ. ಹೀಗಾಗಿ ಇದು ಬ್ರ್ಯಾಂಡ್ ಬೆಂಗಳೂರು ಆಗುತ್ತದೊ, ಬ್ಯಾಂಡ್ ಬೆಂಗಳೂರು ಆಗುತ್ತದೊ ಗೊತ್ತಿಲ್ಲ. ಬೆಂಗಳೂರನ್ನು ಸ್ವಚ್ಛ ಬೆಂಗಳೂರನ್ನಾಗಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಸೋಮಕ್ಷತ್ರಿಯ ಗಾಣಿಗ ಸಮುದಾಯದ ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಗಾಣಿಗ ಸಮಾಜ ತನ್ನದೇ ಆದ ಇತಿಹಾಸ ಪರಂಪರೆ ಹೊಂದಿದೆ. ಚಿಂತನೆಯಲ್ಲಿ ಬಹಳ ಶ್ರೇಷ್ಠವಾಗಿದೆ. ವಿಜಯನಗರ ಕಾಲದಿಂದಲೂ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡು ಬಂದಿದೆ. ಯಾರಿಗೆ ಸ್ವಾಭಿಮಾನದ ಬದುಕು ಬದುಕಲು ಸಾಧ್ಯವಿಲ್ಲವೋ ಅವರಿಗೆ ಬದುಕು ಕಟ್ಟುವ ಕೆಲಸ ಮಾಡುವುದು ಮುಖ್ಯ. ಬಡತನದಿಂದ ಬಂದು ಬಡವರ ಪರವಾಗಿ ಕೆಲಸ ಮಾಡುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರು. ಅವರು ಗಾಣಿಗ ವೃತ್ತಿ ಮಾಡುತ್ತ ಬೆಳೆದವರು. ಅವರನ್ನು ನೋಡಿದಾಗ ಈ ಸಮಾಜದ ಶಕ್ತಿ ಎಷ್ಟಿದೆ ಅಂತಾ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

    ಒಂದು ಕಾಲ ಇತ್ತು. ಭೂಮಿ ಇದ್ದವರು ಜಗತ್ತು ಆಳುತ್ತಿದ್ದರು. ನಂತರ ಹಣ ಇದ್ದವರು ಜಗತ್ತು ಆಳುತ್ತಿದ್ದರು. ಈಗ 21 ನೇ ಶತಮಾನ, ಇದು ಜ್ಞಾನದ ಯುಗ. ಜ್ಞಾನ ಎಲ್ಲಿದೆಯೋ ಅವರು ಜಗತ್ತನ್ನು ಆಳುತ್ತಾರೆ. ಅನೇಕ ವಿದೇಶಿಗರು ಭಾರತಕ್ಕೆ ಬಂದರೆ ಮೊದಲು ಬೆಂಗಳೂರಿಗೆ ಬರುತ್ತಾರೆ. ಅವರು ಬಂದು ವಿಧಾನಸೌಧಕ್ಕೆ ಬರುವುದಿಲ್ಲ. ಇನ್ಫೊಸಿಸ್ ಹಾಗೂ ವಿಪ್ರೋ ಕಡೆಗೆ ಹೋಗುತ್ತಾರೆ ಎಂದು ತಿಳಿಸಿದರು.

    ಗಾಣಿಗ ಸಮಾಜ ಉತ್ತಮ ಐಕ್ಯೂ ಇರುವ ಸಮಾಜ. ಬುದ್ದಿವಂತರ ಸಮಾಜ. ಕಾರ್ಪೋರೇಷನ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಅಣ್ಣಿಗೇರಿಯವರು ದೊಡ್ಡ ಬ್ಯಾಂಕ್ ನಡೆಸಿದರು. ಈ ಸಮಾಜದ ಮಕ್ಕಳಲ್ಲಿ ಪ್ರತಿಭೆ ಇದೆ. ಈ ಕಟ್ಟಡ ಕಟ್ಟಿರುವುದು ಒಳ್ಳೆಯದು. ಇದರಿಂದ ಬರುವ ಆದಾಯ ನಿಮ್ಮ ಮಕ್ಕಳ ಬವಿಷ್ಯಕ್ಕೆ ಬಳಸಿಕೊಳ್ಳಿ. ಎಸ್.ಎಂ.ಕೃಷ್ಣ ಅವರು ಜಮೀನು ಕೊಟ್ಟಿದ್ದಕ್ಕೆ ಈ ಕಟ್ಟಡ ಕಟ್ಟಲು ಸಾಧ್ಯವಾಗಿದೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದರು. ಇದನ್ನೂ ಓದಿ: ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ

    ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಜನೋಪಯೋಗಿ ಶಾಸಕರಾಗಿದ್ದಾರೆ. ಅವರು ಕೇಳಿದ ಕೆಲಸಗಳಿಗೆಲ್ಲ ಹಣ ಕೊಟ್ಟಿದ್ದೇನೆ. ಈ ಭಾಗದಲ್ಲಿ ರಸ್ತೆ ಮಾಡಲು ಮಾಲೀಕರು ಜಮೀನು ನೀಡಲು ನಿರಾಕರಿಸಿದಾಗ ಮುನಿರತ್ನ ಅವರು ತಮ್ಮ ಬಾಂಡ್ ಪೇಪರ್‌ನಲ್ಲಿ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಬರೆದು ಕೊಟ್ಟರು. ಮುನಿರತ್ನ ಅವರು ಕೋವಿಡ್ ಸಂದರ್ಭದಲ್ಲಿ ಜನರಿಗೆ ಮಾಡಿರುವ ಕೆಲಸದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಮುನಿರತ್ನ ಅವರು ಕ್ಷೇತ್ರವನ್ನು ಸ್ವಚ್ಛವಾಗಿ ಇಟ್ಟುಕೊಂಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ, ಮಾಜಿ ಸಭಾಪತಿ ವಿ.ಆರ್. ಸುದರ್ಶನ, ಬಿಜೆಪಿ ಯುವ ಮುಖಂಡ ಭರತ ಬೊಮ್ಮಾಯಿ, ಚನ್ನಮ್ಮ ಬಸವರಾಜ ಬೊಮ್ಮಾಯಿ, ಮಂಜುನಾಥ ಉಡುಪಿ ಸೇರಿದಂತೆ ಗಾಣಿಗ ಸಮುದಾಯದ ಮುಖಂಡರು ಹಾಜರಿದ್ದರು.

  • ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ: ನಿಖಿಲ್

    ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ: ನಿಖಿಲ್

    ರಾಮನಗರ: ಬ್ರ್ಯಾಂಡ್ ಬೆಂಗಳೂರು (Brand Bengaluru) ಹೆಸರಲ್ಲಿ ರಾಮನಗರದ (Ramanagara) ಇತಿಹಾಸ ಅಳಿಸುವ ಕೆಲಸ ಆಗುತ್ತಿದೆ. ಜಿಲ್ಲೆಯ ಜನತೆ ಇದರ ವಿರುದ್ಧವಾಗಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

    ರಾಮನಗರ ಹೆಸರು ಬದಲಾವಣೆಗೆ ಸಂಪುಟ ಅನುಮೋದನೆ ಕುರಿತು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ರಾಮನ ಪಾದಸ್ಪರ್ಶದ ಪುಣ್ಯಕ್ಷೇತ್ರ. ಆದರೆ ರಾಜಕೀಯ ಉದ್ದೇಶಕ್ಕೆ ಹೆಸರು ಬದಲಾವಣೆ ಮಾಡಲಾಗುತ್ತಿದೆ. ರಾಮನಗರ ಜಿಲ್ಲೆ ಸ್ಥಾಪನೆ ಆದಾಗಾ ಯಾರೂ ಇದಕ್ಕೆ ನಕಾರ ಎತ್ತಲಿಲ್ಲ. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಲಿಲ್ಲ ಎಂದರು. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್‌ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!

    ಹೆಸರು ಬದಲಾವಣೆ ಆದರೆ ಜನರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ರೆವೆನ್ಸೂ ದಾಖಲಾತಿ ಬದಲಾವಣೆ ಮಾಡಬೇಕು. ಸಾಕಷ್ಟು ಟೆಕ್ನಿಕಲ್ ಸಮಸ್ಯೆಗಳು ಎದುರಾಗುತ್ತವೆ. ಜನತೆ ನಿತ್ಯ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗುತ್ತದೆ. ಈ ಬಗ್ಗೆ ದೊಡ್ಡಮಟ್ಟದ ಹೋರಾಟಕ್ಕೆ ಚರ್ಚೆ ಮಾಡುತ್ತಿದ್ದೇವೆ. ಭಾನುವಾರ (ಜು.28) ಕೇಂದ್ರ ಸಚಿವ ಕುಮಾರಣ್ಣ ಹಾಗೂ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಲೇಡಿಸ್‌ ಪಿಜಿಯಲ್ಲಿ ಯುವತಿಯ ಹತ್ಯೆ – ಆರೋಪಿ 10 ದಿನ ಪೊಲೀಸ್‌ ಕಸ್ಟಡಿಗೆ

    ಹೆಸರು ಬದಲಾವಣೆಗೆ ಹಾಸನದವರ ವಿರೋಧ ಎಂಬ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರ ಕುರಿತು ಮಾತನಾಡಿದ ಅವರು, ಜನರ ಅಭಿಪ್ರಾಯ ತಿಳಿಯದೇ ಏಕಾಏಕಿ ಆದೇಶ ಮಾಡೋದು ಸರಿಯಲ್ಲ. ಈ ಬಗ್ಗೆ ರಾಮನಗರದ ಟೋಕನ್ ಶಾಸಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡುಹೊಡೆಯೋದು ಬಿಟ್ಟು ಮೊದಲು ಜನರ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದರು.‌ ಇದನ್ನೂ ಓದಿ: ಬೆಂಗಳೂರಿನ ಹೋಟೆಲ್‌, ಪಬ್‌, ಬಾರ್‌ & ರೆಸ್ಟೋರೆಂಟ್‌ಗಳಿಗೆ ಹೊಸ ರೂಲ್ಸ್‌ – ಇಲ್ಲಿದೆ ಡೀಟೆಲ್ಸ್

  • ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ: ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

    ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ: ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು (Brand Bengaluru) ಹೆಸರಲ್ಲಿ ಲೂಟಿ ನಡೀತಿದೆ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು‌.

    ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಕುಮಾರಸ್ವಾಮಿ, ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ ಮಾಡಿದ್ದಾರಂತೆ. ಬೆಂಗಳೂರಿಗೆ ಇವರ ಕೊಡುಗೆ ಏನು? ಲೂಟಿ ಅಷ್ಟೇ ಎಂದು ಡಿಕೆಶಿ (D.K.Shivakumar) ಹೆಸರೇಳದೆ ಕಿಡಿಕಾರಿದರು. ಇದನ್ನೂ ಓದಿ: ಚನ್ನಗಿರಿ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ: ಪರಮೇಶ್ವರ್

    ಈ ಸರ್ಕಾರ ಬಂದ ನಂತರ ಬೆಂಗಳೂರಿನಲ್ಲಿ, ರಾಜ್ಯದಲ್ಲಿ ಒಂದೂ ಹೊಸ ಅಭಿವೃದ್ಧಿ ಆಗಿಲ್ಲ. ‌ಅಕ್ಕಿ ಕೊಡೋ ಯೋಗ್ಯತೆ ಇಲ್ಲ. ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೂರು ತಿಂಗಳಿಂದ ಕೊಟ್ಟಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ. ಬಿತ್ತನೆ ಬೀಜದ ಬೆಲೆ 70% ಏರಿಕೆ ಮಾಡಿದ್ದಾರೆ. ಗೊಬ್ಬರ ಸಿಕ್ತಿಲ್ಲ. ಇವತ್ತು ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಳೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿದ್ದ ನಾಗಮಂಗಲದ ಮಹಾನುಭಾವ, ತಾನು ಅಭ್ಯರ್ಥಿ ಆಗಬೇಕು ಅಂತಾ ಗೊಂದಲ ಮಾಡಿದ್ದ. ಆಗ ನಮ್ಮಲ್ಲೇ ಇದ್ದ ದೇವೇಗೌಡ ಟಿಕೆಟ್ ಸಿಗುತ್ತೋ ಇಲ್ವೋ ಅಂತಾ ಬಿಜೆಪಿ ಸೇರಿದ್ರಾ? ನಂತರ ಆ ಮಹಾನುಭಾವನೂ ಬಿಜೆಪಿ ಹೋದ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಮತ್ತೆ ಸಿಎಂ ಕುರ್ಚಿ ಫೈಟ್ – ಆಪ್ತನ ಮೂಲಕ ಮುನ್ನುಡಿ ಬರೆಸಿದ್ರಾ ಡಿಕೆಶಿ?

  • ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

    ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

    ಬೆಂಗಳೂರು: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ (Brand Bengaluru) ಧಕ್ಕೆ ಆಗುತ್ತದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಭಾರೀ ಟೀಕೆಗಳು ವ್ಯಕ್ತವಾಗಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಬೆಂಗಳೂರಿನಲ್ಲಿ ಬಂದ್‌ಗೆ (Bengaluru Bandh) ಕರೆ, ಬೆಂಬಲ ನೀಡಿದಾಗ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ ಆಗಲಿಲ್ವೇ? ನೀವು ಇದ್ದಾಗ ಸರಿ, ಈಗ ತಪ್ಪು ಹೇಗಾಗುತ್ತದೆ ಎಂಬ ಆಕ್ರೋಶವು ವ್ಯಕ್ತವಾಗುತ್ತಿದೆ.

    ಡಿಕೆಶಿ ಹೇಳಿದ್ದೇನು?
    ಬೆಂಗಳೂರು ಗೌರವವನ್ನು ಹಾಳು ಮಾಡಿದರೆ ನೀವೇ ನಿಮ್ಮ ಹೃದಯಕ್ಕೆ ಚುಚ್ಚಿಕೊಂಡಂತೆ. ನಾವು ಎಲ್ಲಾ ತರದ ಸಹಕಾರ ರೈತರಿಗೆ ಕೊಟ್ಟಿದ್ದೇವೆ ಕಾಪಾಡಿದ್ದೇವೆ. ಮುಂದೆ ಕೂಡ ಕಾಪಾಡುತ್ತೇವೆ. ಇದರಿಂದ ನಿಮಗೆ ಏನು ಲಾಭ? ಏನಾದರೂ ಲಾಭ ಆಗುವುದಾದರೆ ಏನ್ ಬೇಕಾದರೂ ಮಾಡಿ. ನಿಮ್ಮ ಪರವಾಗಿ, ರಾಜ್ಯದ ಪರವಾಗಿ ಹೋರಾಟ ಮಾಡಲು ನಾವಿದ್ದೇವೆ. ದಯವಿಟ್ಟು ಅಂತಹ ತಪ್ಪುಗಳನ್ನು ಮಾಡಲು ಹೋಗಬೇಡಿ. ಕರ್ನಾಟಕ (Karnataka) ಸರ್ಕಾರನೇ ರಾಜ್ಯದ ಹಿತ ಕಾಪಾಡುತ್ತದೆ.

    ಇದೊಂದು ಬೇಜವಾಬ್ದಾರಿ ಹೇಳಿಕೆ
    ಕಾವೇರಿ ನೀರು (Cauvery Water) ಬೆಂಗಳೂರಿನ ಜೀವನಾಡಿ. ಕಾವೇರಿ ಸಂಕಷ್ಟದ ಸಂದರ್ಭದಲ್ಲಿ ಬೆಂಗಳೂರಿಗರು ಬೆಂಬಲಿಸಬೇಕು ಎಂಬುದು ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ವಾದ. ಈ ವಿಚಾರದಲ್ಲಿ ಬಂದ್ ಮಾಡಿದರೆ ಅದು ಬೆಂಗಳೂರಿನ ಗೌರವಕ್ಕೆ ಹೇಗೆ ಧಕ್ಕೆ ಆಗುತ್ತದೆ ಎಂದು ರೈತ ಸಂಘಟನೆಗಳು ಪ್ರಶ್ನಿಸಿವೆ. ಡಿಕೆಶಿ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಅಂತ ಕುರುಬೂರು ಶಾಂತಕುಮಾರ್ (Kurubur Shanthakumar) ಆಗ್ರಹಿಸಿದ್ದಾರೆ.

    ಡಿಕೆಶಿ ಹೀಗೆ ಅವಾಂತರ ಮಾಡಿ ತಮಿಳುನಾಡಿಗೆ (Tamil Nadu) ನೀರು ಬಿಟು ಬಿಟ್ಟರು. ಬೇಜವಾಬ್ದಾರಿ ಹೇಳಿಕೆಗಳು ಕರ್ನಾಟಕ ರಾಜ್ಯದ ರೈತರನ್ನು ಬಲಿ ತೆಗೆಯುವ ಕೆಲಸ ಮಾಡುತ್ತಿದೆ. ಸರ್ಕಾರ ಹೋರಾಟ ಮಾಡಿದರೆ ನೀರು ಯಾಕೆ ಬಿಡುತ್ತಿದ್ದರು. ನೀರು ಬಿಡುವುದಿಲ್ಲ ಎಂದು ಹೇಳಿಕೆ ನೀಡಿ ನೀರು ಬಿಡುತ್ತಿರುವುದು ಇವರೇ ಅಲ್ವಾ? ಈ ರೀತಿಯ ನಡವಳಿಕೆಗಳಿಗೇ ಜನರು ಸಾಯುತ್ತಿದ್ದಾರೆ. ಸೆ.26ಕ್ಕೆ ಬಂದ್ ಮಾಡುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವೇನು ರಾಜಕೀಯ ಮಾಡುತ್ತಿಲ್ಲ ಎಂದು ಶಾಂತಕುಮಾರ್‌ ಪ್ರತಿಕ್ರಿಯಿಸಿದ್ದಾರೆ.  ಇದನ್ನೂ ಓದಿ: ಒಂದೇ ದಿನ 19 ಮಂದಿ ಸಂಚಾರಿ ಪೊಲೀಸರ ಅಮಾನತು

    ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ ಆಗುತ್ತದೆ ಎಂದು ಡಿಕೆಶಿ ಈ ಹೇಳಿಕೆ ನೀಡುತ್ತಿದ್ದಂತೆ ಹಿಂದೆ ಕಾಂಗ್ರೆಸ್‌ ಏನು ಮಾಡಿತ್ತು? ಅಂದು ಅವತ್ತು ಮಾಡಿದಾಗ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ ಆಗಿರಲಿಲ್ವಾ ಎಂಬ ಪ್ರಶ್ನೆಗಳು ಈಗ ಎದ್ದಿದೆ.

    2019 ಮಾರ್ಚ್ 28:
    ಆದಾಯ ತೆರಿಗೆ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ಐಟಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. 3-4 ಗಂಟೆಗಳ ಕಾಲ ಐಟಿ ದಾಳಿ ಖಂಡಿಸಿ ನಡೆಸಿದ ಪ್ರತಿಭಟನೆ ಫುಲ್ ಟ್ರಾಫಿಕ್ ಜಾಮ್‌ಗೆ ಕಾರಣವಾಗಿತ್ತು.

    2021 ಜನವರಿ 20
    ಕೃಷಿ ಕಾಯ್ದೆ ವಿರೋಧಿಸಿ ನಡೆಸಿದ ಬಂದ್‌ಗೆ ಬೆಂಬಲ ನೀಡಿತ್ತು. ಕಾಂಗ್ರೆಸ್ ನಾಯಕರು ಫ್ರೀಡಂ ಪಾರ್ಕ್‌ವರೆಗೆ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಿದ್ದರು.

    2021 ಮಾರ್ಚ್ 1-3ರವರೆಗೆ
    3 ದಿನ ಮೇಕೆದಾಟು ಪಾದಯಾತ್ರೆ ಬೆಂಗಳೂರಿನಲ್ಲಿ ನಡೆದಿತ್ತು. 7 ದಿನದ ಪಾದಯಾತ್ರೆಯಲ್ಲಿ 3 ದಿನ ಬೆಂಗಳೂರಲ್ಲೇ ನಡೆದಿದ್ದು, ಟ್ರಾಫಿಕ್‌ ಜಾಮ್‌ ಆಗಿತ್ತು.

     

    2022 ಜೂನ್ 16
    ಜಾರಿ ನಿರ್ದೇಶನಾಲಯ ವಿರುದ್ಧ ಪ್ರತಿಭಟನೆ ಹಾಗೂ ರ‍್ಯಾಲಿ ನಡೆಸಲಾಗಿತ್ತು. ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ರಾಹುಲ್ ಗಾಂಧಿಗೆ ಇಡಿ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿಯಿಂದ ರಾಜಭವನಕ್ಕೆ ಪ್ರತಿಭಟನಾ ರ‍್ಯಾಲಿ ನಡೆದಿತ್ತು.

    2022 ಆಗಸ್ಟ್ 15
    ಕಾಂಗ್ರೆಸ್ ಸ್ವತಂತ್ರ ನಡಿಗೆ ಜಾಥಾ ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರ‍್ಯಾಲಿಯನ್ನು ಭಾಗವಹಿಸಿದ್ದರು.

     

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]