Tag: Brian Lara

  • ಹೈದರಾಬಾದ್‌ಗೆ ಲಾರಾ ಬ್ಯಾಟಿಂಗ್, ಸ್ಟೇನ್ ಬೌಲಿಂಗ್ ಕೋಚ್

    ಹೈದರಾಬಾದ್‌ಗೆ ಲಾರಾ ಬ್ಯಾಟಿಂಗ್, ಸ್ಟೇನ್ ಬೌಲಿಂಗ್ ಕೋಚ್

    ಹೈದರಾಬಾದ್: ಐಪಿಎಲ್ 2022 ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತಂಡಕ್ಕೆ ವೆಸ್ಟ್ ಇಂಡೀಸ್‌ನ ಲೆಜೆಂಡ್ ಬ್ಯಾಟ್ಸ್‌ಮನ್‌ ಬ್ರಿಯಾನ್ ಲಾರಾ ಮತ್ತು ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟಿಗ ಡೇಲ್ ಸ್ಟೇನ್ ಅವರನ್ನು ಹೊಸ ಸಹಾಯಕ ಸಿಬ್ಬಂದಿಯಾಗಿ ನೇಮಕಮಾಡಿಕೊಂಡಿದೆ.

    ಬ್ರಿಯಾನ್ ಲಾರಾ ಎಸ್‌ಆರ್‌ಹೆಚ್ ತಂಡದ ತರಬೇತುದಾರರಾಗಿ ನೇಮಕವಾಗಿದ್ದಾರೆ. ಬ್ಯಾಟಿಂಗ್ ಕೋಚ್ ಮತ್ತು ಕಾರ್ಯಾತಂತ್ರದ ಸಲಹೆಗಾರರಾಗಿ ಅವರನ್ನು ನೇಮಕ ಮಾಡಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಮಾಹಿತಿ ನೀಡಿದೆ.   ಇದನ್ನೂ ಓದಿ: ಬಿಸಿಸಿಐಯನ್ನು ಟೀಕಿಸಿ ಕೊಹ್ಲಿ ಪರ ಅಫ್ರಿದಿ ಬ್ಯಾಟಿಂಗ್

    ಐಪಿಎಲ್‌ನಲ್ಲಿ ಹಲವು ತಂಡಗಳಿಗೆ ಆಡಿರುವ ಡೇಲ್ ಸ್ಟೇನ್ ಅವರನ್ನು ಹೈದರಾಬಾದ್ ತಂಡದ ವೇಗದ ಬೌಲಿಂಗ್ ಕೋಚ್ ಆಗಿ ನೇಮಕಮಾಡಲಾಗಿದೆ. ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳಿಧರನ್ ಅವರು ಸ್ಪಿನ್ ಬೌಲಿಂಗ್ ಕೋಚ್ ಆಗಿ ಮುಂದುವರಿಯಲಿದ್ದಾರೆ.

    ಭಾರತ ತಂಡದ ಮಾಜಿ ಕ್ರಿಕೆಟಿಗ ಹೇಮಂತ್ ಬದಾನಿ ಅವರನ್ನು ಫೀಲ್ಡಿಂಗ್ ಕೋಚ್ ಆಗಿ ಮತ್ತು  ಆಸ್ಟ್ರೇಲಿಯಾದ ಸೈಮನ್ ಕ್ಯಾಟಿಚ್ ಅವರನ್ನು ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದೆ. ಇದನ್ನೂ ಓದಿ: ಯುವತಿಯರ ಮದುವೆ ವಯಸ್ಸು 21ಕ್ಕೆ ಏರಿಕೆ ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ: ಶೋಭಾ ಕರಂದ್ಲಾಜೆ

     

  • ಇದೇ ದಿನ 1994ರಲ್ಲಿ ಅಜೇಯ 501 ರನ್ ಸಿಡಿಸಿದ್ದ ಬ್ರಿಯಾನ್ ಲಾರಾ

    ಇದೇ ದಿನ 1994ರಲ್ಲಿ ಅಜೇಯ 501 ರನ್ ಸಿಡಿಸಿದ್ದ ಬ್ರಿಯಾನ್ ಲಾರಾ

    ಪೋರ್ಟ್ ಆಫ್ ಸ್ಪೇನ್: ದೊಡ್ಡ ಇನ್ನಿಂಗ್ಸ್ ಆಡುವ ವಿಷಯ ಬಂದಾಗ, ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟರ್ ಬ್ರಿಯಾನ್ ಲಾರಾ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಾರೆ. ಅವರು ಇತರ ಬ್ಯಾಟ್ಸ್‌ಮನ್‌ಗಳಿಗೆ ಅಸಾಧ್ಯವಾದ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.

    ಅಂತಹ ದಾಖಲೆ ಇದೇ ದಿನ 1994ರಲ್ಲಿ ಇತಿಹಾಸದ ಪುಟ ಸೇರಿತ್ತು. ಅಂದಿನ ಮಾಂತ್ರಿಕ ಬ್ಯಾಟಿಂಗ್‍ನಿಂದ ಬ್ರಿಯಾನ್ ಚಾರ್ಲ್ಸ್ ಲಾರಾ ಅವರು ಪ್ರಥಮ ದರ್ಜೆ ಕ್ರಿಕೆಟ್‍ನ ಇನ್ನಿಂಗ್ಸ್ ನಲ್ಲಿ 500 ರನ್ ಗಳಿಸಿದ ಮೊದಲ ಮತ್ತು ಏಕೈಕ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ವೇಳೆ ಅವರು ಅಜೇಯ 501 ರನ್ ಗಳಿಸಿದ್ದರು.

    ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 100, 200, 300, 400 ಮತ್ತು 500 ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್‌ ಎಂಬ ಹಿರಿಮೆ ಲಾರಾ ಅವರಿಗೆ ಸಲ್ಲುತ್ತದೆ. ಈವರೆಗೂ ಬೇರೆ ಯಾವುದೇ ಬ್ಯಾಟ್ಸ್‌ಮನ್‌ ಈ ಸಾಧನೆ ಮಾಡಿಲ್ಲ.

    1958ರಲ್ಲಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ ಮಾಜಿ ಕ್ರಿಕೆಟರ್ ಗ್ಯಾರಿ ಸೋಬರ್ಸ್ ಅವರು ಅಜೇಯ 365 ರನ್ ಗಳಿಸಿ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿ ದಾಖಲೆ ಬರೆದಿದ್ದರು. ಆದರೆ 1994 ಏಪ್ರಿಲ್‍ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಲಾರಾ 375 ರನ್ ಚಚ್ಚಿ ದಾಖಲೆ ಮುರಿದಿದ್ದರು. ಆದರೆ ಇಷ್ಟಕ್ಕೆ ನಿಲ್ಲಿಸದ ಅವರು ಎರಡು ತಿಂಗಳ ಬಳಿಕ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಪ್ರಥಮ ದರ್ಜೆ ಕ್ರಿಕೆಟ್‍ನ ಇನ್ನಿಂಗ್ಸ್ ನಲ್ಲಿ ವಿಶೇಷ ದಾಖಲೆ ಬರೆದರು. ಅಂದು ವಾರ್ವಿಕ್‍ಷೈರ್ ಪರ ಆಡಿದ ಲಾರಾ ಡರ್ಹಾಮ್ ವಿರುದ್ಧ ಅಜೇಯ 501 ರನ್ ಗಳಿಸಿದ್ದರು.

    ಹನೀಫ್ ಮೊಹಮ್ಮದ್:
    ಪಾಕಿಸ್ತಾನ ಮಾಜಿ ಕ್ರಿಕೆಟರ್ ಹನೀಫ್ ಮೊಹಮ್ಮದ್ 1959ರಲ್ಲಿ ವಹಾವಲ್ಪುರ್ ವಿರುದ್ಧ ಕರಾಚಿ ಪರ ಆಡುತ್ತಿದ್ದರು. ಕುತೂಹಲಕಾರಿಯಾಗಿ ರನ್ ಗಳಿಸಿದ ಅವರು ಇನ್ನೇನು 3 ರನ್ ಗಳಿಸಿದ್ದರೆ ಲಾರಾ ಅವರ ದಾಖಲೆ ಮುರಿಯುತ್ತಿದ್ದರು. ಆದರೆ 499 ರನ್ ಗಳಿಸಿದ್ದಾಗ ರನೌಟ್ ಆಗಿದ್ದರು.

    ಇತ್ತೀಚೆಗಷ್ಟೇ ಪಾಕಿಸ್ತಾನ ವಿರುದ್ಧ ಆಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಡೇ ನೈಟ್ ಟೆಸ್ಟ ಪಂದ್ಯದಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅಜೇ 335 ರನ್ ಚಚ್ಚಿದ್ದರು. ಈ ವೇಳೆಯಲ್ಲಿ ಆಸೀಸ್ ಡಿಕ್ಲೇರ್ ಘೋಷಿಸಿದ್ದ ಪರಿಣಾಮ ವಾರ್ನರ್‌ಗೆ ದಾಖಲೆ ಬರೆಯುವ ಅವಕಾಶ ಕೈತಪ್ಪಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಲಾರಾ, ನಾನು ಡೇವಿಡ್ ವಾರ್ನರ್ ಜತೆಗೆ ಮಾತನಾಡಿದ್ದೇನೆ. ಇದು ತಂಡದ ನಿರ್ಧಾರವಾಗಿತ್ತು. ಅಲ್ಲಿ ಮಳೆ ಬರುವ ಸಾಧ್ಯತೆಗಳಿದ್ದವು ಎಂದು ಲಾರಾ ತಿಳಿಸಿದ್ದರು.

  • ‘ಮಿಸ್ಟರ್ 360’ ರಾಹುಲ್ ಈ ಯುಗದ ನನ್ನ ನೆಚ್ಚಿನ ಬ್ಯಾಟ್ಸ್‌ಮನ್: ಬ್ರಿಯಾನ್ ಲಾರಾ

    ‘ಮಿಸ್ಟರ್ 360’ ರಾಹುಲ್ ಈ ಯುಗದ ನನ್ನ ನೆಚ್ಚಿನ ಬ್ಯಾಟ್ಸ್‌ಮನ್: ಬ್ರಿಯಾನ್ ಲಾರಾ

    ಮುಂಬೈ: ವೆಸ್ಟ್ ಇಂಡೀಸ್ ಮಾಜಿ ನಾಯಕ, ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಅವರು ಈ ಯುಗದ ತಮ್ಮ ನೆಚ್ಚಿನ ಬ್ಯಾಟ್ಸ್‌ಮನ್ ಹೆಸರನ್ನು ರಿವೀಲ್ ಮಾಡಿದ್ದಾರೆ.

    ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್, ಟೀಂ ಇಂಡಿಯಾದ ವಿರಾಟ್ ಕೊಹ್ಲಿ, ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರ ಹೆಸರು ಹೇಳಬಹುದು ಎಂದು ನೀವು ನಿರೀಕ್ಷಿಸಿದರೆ ತಪ್ಪಾದಿತು. ಕನ್ನಡಿಗ ಕೆ.ಎಲ್.ರಾಹುಲ್ ಅವರ ಹೆಸರನ್ನು ಆಯ್ಕೆ ಮಾಡಿ ಲಾರಾ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ: ಕೆ.ಎಲ್.ರಾಹುಲ್ ‘360 ಡಿಗ್ರಿ’ ಬ್ಯಾಟ್ಸ್‌ಮನ್‌: ಮಂಜ್ರೇಕರ್

    ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2020 ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡವನ್ನು ಮುನ್ನಡೆಸುತ್ತಿರುವ ಲಾರಾ, ಪ್ರಸ್ತುತ ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತದ ‘ಮಿಸ್ಟರ್ 360’ ಕೆ.ಎಲ್.ರಾಹುಲ್ ಅವರ ಅತ್ಯಂತ ನೆಚ್ಚಿನ ಬ್ಯಾಟ್ಸ್‌ಮನ್ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಿಂಚಿನ ವೇಗದಲ್ಲಿ ರನೌಟ್ ಮಾಡಿದ ರಾಹುಲ್- ವಿಡಿಯೋ 

    ಕೆ.ಎಲ್.ರಾಹುಲ್ ಅವರ 360 ಡಿಗ್ರಿ ಬ್ಯಾಟಿಂಗ್ ಕೌಶಲ್ಯದಿಂದಾಗಿ ಲಾರಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ರಾಹುಲ್, ವಿಕೆಟ್ ಕೀಪರ್ ಆಗಿ ಉತ್ತಮ ಸಾಧನೆ ತೋರಿದ್ದರು. ಅಷ್ಟೇ ಅಲ್ಲದೆ ಅವರು ಓಪನರ್, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ಜೊತೆಗೆ ಕಿವೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ವಿರಾಟ್ ವಿಶ್ರಾಂತಿ ಪಡೆದಿದ್ದರು. ಆದರೆ ತಂಡದ ನಾಯಕತ್ವ ವಹಿಸಿಕೊಂಡಿದ್ದ ರೋಹಿತ್ ಶರ್ಮಾ ಗಾಯಗೊಂಡು ಪಂದ್ಯದಿಂದ ಹೊರಗುಳಿದಾಗ ಕೆ.ಎಲ್.ರಾಹುಲ್ ನಾಯಕತ್ವದ ಜವಾಬ್ದಾರಿ ನಿರ್ವಹಿಸಿ ತಂಡ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದರು.

    ಈ ಯುಗದ ನಿಮ್ಮ ನೆಚ್ಚಿನ ಆಟಗಾರ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಬ್ರಿಯನ್ ಲಾರಾ, “ನಿಮಗೆ ತಿಳಿದಿರುವಂತೆ ನಾನು ವೆಸ್ಟ್ ಇಂಡೀಸ್ ತಂಡವನ್ನು ಹೊಗಳುತ್ತೇನೆ. ವಿಂಡೀಸ್ ತಂಡವು ಶ್ರೀಲಂಕಾದಲ್ಲಿ ಟಿ20 ಸರಣಿಯನ್ನು ಉತ್ತಮವಾಗಿ ಆಡುತ್ತಿದ್ದಾರೆ. ಪ್ರಪಂಚದಾದ್ಯಂತ ಅದ್ಭುತ ಬ್ಯಾಟ್ಸ್‌ಮನ್‍ಗಳಿದ್ದಾರೆ. ಸ್ಟೀವ್ ಸ್ಮಿತ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಬರುತ್ತಾರೆ. ಆದರೆ ನನ್ನ ನೆಚ್ಚಿನ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್” ಎಂದು ಅವರು ತಿಳಿಸಿದ್ದಾರೆ.

    ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಕೆ.ಎಲ್.ರಾಹುಲ್ ಆಯ್ಕೆ ಆಗಿದ್ದಾರೆ. ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ಮಾರ್ಚ್ 12ರಂದು ನಡೆಯಲಿದೆ. ಎರಡನೇ ಏಕದಿನ ಪಂದ್ಯವು ಲಕ್ನೋದಲ್ಲಿ ಮಾರ್ಚ್ 15ರಂದು ಹಾಗೂ ಮೂರನೇ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‍ನಲ್ಲಿ ಮಾರ್ಚ್ 18 ರಂದು ನಡೆಯಲಿದೆ.

  • ಸಚಿನ್, ಲಾರಾ ಹಿಂದಿಕ್ಕಿ ಕೊಹ್ಲಿ ವಿಶ್ವದಾಖಲೆ

    ಸಚಿನ್, ಲಾರಾ ಹಿಂದಿಕ್ಕಿ ಕೊಹ್ಲಿ ವಿಶ್ವದಾಖಲೆ

    ಮ್ಯಾಂಚೆಸ್ಟರ್: ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ.

    ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತಿ ವೇಗವಾಗಿ 20 ಸಾವಿರ ರನ್ ಗಳಿಸಿದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಮೂಲಕ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ವೆಸ್ಟ್ ಇಂಡೀಸ್‍ನ ಬ್ರಿಯನ್ ಲಾರಾ 453 ಇನ್ನಿಂಗ್ಸ್ ನಲ್ಲಿ ಈ ಸಾಧನೆ ನಿರ್ಮಿಸಿದರೆ ಕೊಹ್ಲಿ 417 ಇನ್ನಿಂಗ್ಸ್ ನಲ್ಲಿ ಈ ಸಾಧನೆ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಟಿಂಗ್ 468 ಇನ್ನಿಂಗ್ಸ್ ಗಳಿಂದ ಈ ಸಾಧನೆ ಮಾಡಿದ್ದರು. ಇದನ್ನೂ ಓದಿ: 3ನೇ ಅಂಪೈರ್ ಬೇಡ, 4ನೇ ಅಂಪೈರ್ ಬೇಕು – ಐಸಿಸಿ ವಿರುದ್ಧ ನೆಟ್ಟಿಗರು ಕಿಡಿ

    ವಿರಾಟ್ ಕೊಹ್ಲಿ 417 ಇನ್ನಿಂಗ್ಸ್ ಅಂದರೆ 131 ಟೆಸ್ಟ್, 222 ಏಕದಿನ ಪಂದ್ಯ ಹಾಗೂ 62 ಟಿ20 ಪಂದ್ಯಗಳಿಂದ ಈ ದಾಖಲೆ ನಿರ್ಮಿಸಿದ್ದಾರೆ. 37 ರನ್ ಗಳಿಸಿದಾಗ ಕೊಹ್ಲಿ ಈ ಸಾಧನೆ ಮಾಡಿದ್ದು ಈ ಪಂದ್ಯದಲ್ಲಿ 72 ರನ್(82 ಎಸೆತ, 8 ಬೌಂಡರಿ) ಹೊಡೆದು ಔಟಾದರು.

    ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧ 18 ರನ್, ಆಸ್ಟ್ರೇಲಿಯಾ ವಿರುದ್ಧ 82 ರನ್, ಪಾಕಿಸ್ತಾನದ ವಿರುದ್ಧ 77 ರನ್, ಅಫ್ಘಾನಿಸ್ತಾನ ವಿರುದ್ಧ 67 ರನ್ ಹೊಡೆದಿದ್ದಾರೆ.

  • ಸಚಿನ್, ಲಾರಾ ವಿಶ್ವದಾಖಲೆ ಮುರಿಯುವ ಸನಿಹದಲ್ಲಿ ಕೊಹ್ಲಿ

    ಸಚಿನ್, ಲಾರಾ ವಿಶ್ವದಾಖಲೆ ಮುರಿಯುವ ಸನಿಹದಲ್ಲಿ ಕೊಹ್ಲಿ

    ಲಂಡನ್: ಪಾಕಿಸ್ತಾನ ವಿರುದ್ಧ ಅರ್ಧ ಶತಕ ಸಿಡಿಸಿ ವೇಗವಾಗಿ ಏಕದಿನ ಕ್ರಿಕೆಟಿನಲ್ಲಿ 11 ಸಾವಿರ ರನ್ ಸಿಡಿಸಿ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಶನಿವಾರ ನಡೆಲಿರುವ ಅಫ್ಘಾನಿಸ್ತಾನದ ವಿರುದ್ಧ ಪಂದ್ಯದಲ್ಲಿ ಮತ್ತೊಂದು ವಿಶ್ವದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ.

    2019 ರ ವಿಶ್ವಕಪ್ ಟೂರ್ನಿಯಲ್ಲಿ ಶತಕ ಸಿಡಿಸಬೇಕಿರುವ ಕೊಹ್ಲಿ, 104 ರನ್ ಗಳಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವೇಗವಾಗಿ 20 ಸಾವಿರ ರನ್ ಸಿಡಿಸಿದ ವಿಶ್ವ ದಾಖಲೆ ಬರೆಯಲಿದ್ದಾರೆ.

    ವಿರಾಟ್ ಕೊಹ್ಲಿ 415 ಇನ್ನಿಂಗ್ಸ್ ಅಂದರೆ 131 ಟೆಸ್ಟ್, 222 ಏಕದಿನ ಪಂದ್ಯ ಹಾಗೂ 62 ಟಿ20 ಪಂದ್ಯಗಳಿಂದ ಒಟ್ಟು 19,896 ರನ್ ಸಿಡಿಸಿದ್ದಾರೆ. ಸದ್ಯ ಕೊಹ್ಲಿ 20 ಸಾವಿರ ರನ್ ಸಾಧನೆ ಮಾಡಲು 104 ರನ್ ಮಾತ್ರ ಅಗತ್ಯವಿದ್ದು, ಅಫ್ಘಾನಿಸ್ತಾನ ವಿರುದ್ಧ ಪಂದ್ಯದಲ್ಲಿ ಈ ಸಾಧನೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ.

    ಈ ಹಿಂದೆ ಸಚಿನ್ ತೆಂಡೂಲ್ಕರ್ ಹಾಗೂ ಲಾರಾ 453 ಇನ್ನಿಂಗ್ಸ್ ಗಳಿಂದ 20 ಸಾವಿರ ರನ್ ಸಿಡಿಸಿದ್ದರು. ಉಳಿದಂತೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಟಿಂಗ್ 468 ಇನ್ನಿಂಗ್ಸ್ ಗಳಿಂದ ಈ ಸಾಧನೆ ಮಾಡಿದ್ದರು. ಮೂವರು ದಿಗ್ಗಜರನ್ನು ಹಿಂದಿಕ್ಕುವ ಅವಕಾಶವನ್ನು ಕೊಹ್ಲಿ ಹೊಂದಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ, ಸೌತ್ ಆಫ್ರಿಕಾ ವಿರುದ್ಧ 18 ರನ್, ಆಸ್ಟ್ರೇಲಿಯಾ ವಿರುದ್ಧ 82 ರನ್ ಹಾಗೂ ಪಾಕಿಸ್ತಾನದ ವಿರುದ್ಧ 77 ರನ್ ಸಿಡಿಸಿದ್ದಾರೆ. ಸದ್ಯ ಟೀಂ ಇಂಡಿಯಾ ವಿಶ್ವಕಪ್ ಅಂಕಪಟ್ಟಿಯಲ್ಲಿ 4 ಸ್ಥಾನದಲ್ಲಿದ್ದು, ಟೂರ್ನಿಯಲ್ಲಿ ನಾವು ಯಾವುದೇ ತಂಡವನ್ನು ಸುಲಭವಾಗಿ ಪರಿಗಣಿಸುವುದಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್- ಬ್ರಿಯಾನ್ ಲಾರಾ

    ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್- ಬ್ರಿಯಾನ್ ಲಾರಾ

    ನವದೆಹಲಿ: ಟೀಂ ಇಂಡಿಯಾ ನಾಯಕರ ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್ ಎಂದು ವೆಸ್ಟ್ ಇಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಅವರು ಪ್ರಶಂಸಿದ್ದಾರೆ.

    ವಿರಾಟ್ ಕೊಹ್ಲಿ ಅವರು ಪಂದ್ಯದ ದಿಕ್ಕನ್ನೂ ಬದಲಿಸಬಲ್ಲ ಆಟಗಾರ. ಅವರು ಭಾರತ ತಂಡಕ್ಕೆ ವರದಾನವಾಗಲಿದ್ದಾರೆ. ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಕೊಹ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಹೇಳಿದ್ದಾರೆ.

    ಕೊಹ್ಲಿ ಭಾರತ ತಂಡದ ರನ್ ಮಷಿನ್. ಅವರು ಕ್ರಿಕೆಟ್ ಆಟದ ರೀತಿಯನ್ನೇ ಬದಲಾವಣೆ ಮಾಡಿದ್ದಾರೆ ಮತ್ತು ಹೊಸ ಅಯಾಮವನ್ನು ಸೃಷ್ಟಿಮಾಡಿದ್ದಾರೆ. ಇದು ಪ್ರಸ್ತುತ ಆಟಗಾರರಿಗೂ ಮತ್ತು ಭವಿಷ್ಯದ ಆಟಗಾರರಿಗೂ ಉತ್ತಮವಾದ ಪಾಠ. 80 ಮತ್ತು 90 ದಶಕ ನಾವು ಆಡಿದ ಕ್ರಿಕೆಟ್‍ಗಿಂತ ವಿಭಿನ್ನ ಕ್ರಿಕೆಟ್ ಆಟವನ್ನು ಅವರು ಪರಿಚಯ ಮಾಡಿದ್ದಾರೆ ಎಂದು ಹೊಗಳಿದ್ದಾರೆ.

    ಆಟದಲ್ಲಿ ಫಿಟ್ನೆಸ್ ತುಂಬ ಮುಖ್ಯವಾದದ್ದು. ಆದರೆ ಈಗ ಪ್ರಸ್ತುತ ಕಾಲದಲ್ಲಿ ಆಟದಲ್ಲಿ ಅದನ್ನು ಕಾಪಡಿಕೊಳ್ಳಲು ಆಗುತ್ತಿಲ್ಲ. ಏಕದಿನ ಪಂದ್ಯಗಳಲ್ಲೂ 11,000 ರನ್ ಹೊಡೆದಿರುವ ಕೊಹ್ಲಿ ಇಷ್ಟು ವರ್ಷದಲ್ಲಿ ಒಂದು ಬಾರಿಯೂ ಅವರು ತಮ್ಮ ದೈಹಿಕ ಸಾಮರ್ಥ್ಯ ವನ್ನು ಕಳೆದುಕೊಂಡಿಲ್ಲ. ಈ ಕಾರಣಕ್ಕೆ ಅವರನ್ನು ರನ್ ಮಷಿನ್ ಎಂದು ಕರೆದಿದ್ದೇನೆ ಎಂದು ಹೇಳಿದರು.

    ವಿರಾಟ್ ಕೊಹ್ಲಿ ಆಡಿದ ಪ್ರತಿ ಪಂದ್ಯದಲ್ಲೂ ಬಹುತೇಕ ರನ್ ಹೊಡೆಯುತ್ತಾರೆ. ನನಗೆ ಪ್ರಕಾರ ಸಚಿನ್ ತೆಂಡೂಲ್ಕರ್ ಅವರು ಒಬ್ಬ ಶ್ರೇಷ್ಠವಾದ ಆಟಗಾರ ಅವರು ಕೂಡ ಉತ್ತಮವಾಗಿ ಆಡಿದ್ದಾರೆ ಆದರೆ ನಾನು ಅವರನ್ನು ಮತ್ತು ಕೊಹ್ಲಿಯನ್ನು ಹೋಲಿಕೆ ಮಾಡಲು ಇಷ್ಟವಿಲ್ಲ. ಇಬ್ಬರು ಉತ್ತನ ಆಟಗಾರರು ಅವರ ಅವರ ಕಾಲದಲ್ಲಿ ಉತ್ತಮ ಪರಂಪರೆಯ ಆಟವಾನ್ನು ಆಡಿದ್ದಾರೆ ಎಂದು ಹೇಳಿದ್ದಾರೆ.

    ಕೊಹ್ಲಿ ತನ್ನ ವೃತ್ತಿ ಜೀವನದ ಮೂರನೇ ವಿಶ್ವಕಪ್ ಆಡುತ್ತಿದ್ದು ಪ್ರಥಮ ಬಾರಿಗೆ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತದ ಎಲ್ಲಾ ಆಟಗಾರರು ಉತ್ತಮ ಲಯದಲ್ಲಿದ್ದು 2019ರ ವಿಶ್ವಕಪ್ ಗೆಲ್ಲಲು ಇದು ಒಳ್ಳೆಯ ಅವಕಾಶ ಎಂದು ಬ್ರಿಯಾನ್ ಲಾರಾ ಅವರು ಹೇಳಿದ್ದಾರೆ.

  • ಸಚಿನ್ ಮನೆಗೆ ಸಪ್ರೈಸ್ ವಿಸಿಟ್ ನೀಡಿದ ಲಾರಾ

    ಸಚಿನ್ ಮನೆಗೆ ಸಪ್ರೈಸ್ ವಿಸಿಟ್ ನೀಡಿದ ಲಾರಾ

    ಮುಂಬೈ: ಇಂಡೋ ವಿಂಡೀಸ್ ಸಿಮೀತ ಓವರ್ ಗಳ ಸರಣಿ ಅ.21 ರಿಂದ ಆರಂಭವಾಗಲಿದ್ದು, ಇದೇ ವೇಳೆ ವೆಸ್ಟ್ ಇಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ, ಸಚಿನ್ ಅವರ ಮನೆಗೆ ಭೇಟಿ ನೀಡಿ ಸಪ್ರೈಸ್ ನೀಡಿದ್ದಾರೆ.

    ಈ ಕುರಿತು ಇಬ್ಬರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಚಿನ್, ವಾರಾಂತ್ಯವನ್ನು ಸ್ವಾಗತಿಸುವ ಬಹುದೊಡ್ಡ ದಾರಿ. ಒಳ್ಳೆಯ ಸ್ನೇಹಿತ ಲಾರಾ ಸಪ್ರೈಸ್ ವಿಸಿಟ್ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    https://www.instagram.com/p/BpGn68-B-8b/?taken-by=sachintendulkar

    ವಿಶ್ವ ಕ್ರಿಕೆಟ್ ದಿಗ್ಗಜರು ಎಂದೇ ಗುರುತಿಸಿಕೊಂಡಿರುವ ಇಬ್ಬರು ಆಟಗಾರರು ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ ಬಹು ವರ್ಷಗಳ ಬಳಿಕವೂ ತಮ್ಮ ಸ್ನೇಹವನ್ನು ಮುಂದುವರಿಸಿದ್ದು, ಗುವಾಹತಿಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಇಬ್ಬರು ಭೇಟಿ ಮಾಡಿದ್ದಾರೆ.

    ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿ ಹಲವು ವರ್ಷಗಳು ಕಳೆದರೂ ಕೂಡ ಇಬ್ಬರು ತಮ್ಮ ಹೆಸರಿನಲ್ಲಿ ಹಲವು ದಾಖಲೆಗಳನ್ನ ಹೊಂದಿದ್ದಾರೆ. ಸಚಿನ್ 34,357 ರನ್, 100 ಶತಕಗಳ ದಾಖಲೆ ಹೊಂದಿದ್ದರೆ, ಲಾರಾ 22,358 ರನ್ ಗಳಿಸಿ ಟೆಸ್ಟ್ ಕ್ರಿಕೆಟ್‍ನಲ್ಲಿ 400 ಸಿಡಿಸಿದ ಮೊದಲ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ.

    ವಿಶೇಷ ಎಂಬಂತೆ ವಿಂಡೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾದಾರ್ಪಣೆ ಮಾಡಿದ ಪೃಥ್ವಿ ಶಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದು, ಈ ವೇಳೆ ಪ್ರತಿಕ್ರಿಯೆ ನೀಡಿದ್ದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ, ಪೃಥ್ವಿ ಶಾ ಕ್ರಿಕೆಟ್ ದಿಗ್ಗಜರಾದ ಸಚಿನ್ ಹಾಗೂ ಲಾರಾರ ಸಮ್ಮಿಲನ ರೂಪ ಎಂದು ವಿಶ್ಲೇಷಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಲಾರಾ, ರವಿಶಾಸ್ತ್ರಿ ಅವರ ಹೇಳಿಕೆಯನ್ನು ನಿರಾಕರಿಸಿ, ಪೃಥ್ವಿ ಶಾ ಎಡಗೈ ಆಟಗಾರರಾಗಿದ್ದು, ಸಚಿನ್ ಹಾಗೂ ಸೆಹ್ವಾಗ್ ರ ಸಮ್ಮಿಲನ. ನಾನು 18 ವರ್ಷ ವಯಸ್ಸಿನಲ್ಲಿ ಇಷ್ಟು ಬಲಶಾಲಿಯಾಗಿ ಇರಲಿಲ್ಲ ಎಂದು ಹೊಗಳಿಕೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.instagram.com/p/BpEuQsVBsaX/?taken-by=sachintendulkar

  • ಲಾರಾ ವಿಶ್ವದಾಖಲೆ ಮುರಿದ ವಿರಾಟ್, ಸಚಿನ್‍ರನ್ನೂ ಹಿಂದಿಕ್ಕಿದ್ರು!

    ಲಾರಾ ವಿಶ್ವದಾಖಲೆ ಮುರಿದ ವಿರಾಟ್, ಸಚಿನ್‍ರನ್ನೂ ಹಿಂದಿಕ್ಕಿದ್ರು!

    – ಸಚಿನ್, ದ್ರಾವಿಡ್, ಗಂಗೂಲಿ ದಿಗ್ಗಜರ ಸಾಲಿಗೆ ಕೊಹ್ಲಿ

    ಲಂಡನ್: ಓವೆಲ್ ಕ್ರೀಡಾಂಗಣ ನಡೆಯುತ್ತಿರುವ ಇಂಗ್ಲೆಂಡ್ ಅಂತಿಮ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಹತ್ವದ ಸಾಧನೆ ಮಾಡಿದ್ದು, ವಿಶ್ವ ಕ್ರಿಕೆಟ್‍ನಲ್ಲಿ ವೇಗವಾಗಿ 18 ಸಾವಿರ ರನ್ ಪೂರೈಸಿದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

    ಕೊಹ್ಲಿ 382 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದು, ಈ ಹಿಂದೆ ವೆಸ್ಟ್ ಇಂಡೀಸ್‍ನ ಬ್ರಿಯಾನ್ ಲಾರಾ 411 ಇನ್ನಿಂಗ್ಸ್ 18 ಸಾವಿರ ರನ್ ಪೂರೈಸಿದ್ದರು. ಇನ್ನು ಸಚಿನ್ ತೆಂಡೂಲ್ಕರ್ 412 ಇನ್ನಿಂಗ್ಸ್‍ಗಳಲ್ಲಿ ಈ ಸಾಧನೆ ಮಾಡಿದ್ದರು. ಟೀಂ ಇಂಡಿಯಾ ಪರ ಸಚಿನ್ (34,357) ಸೇರಿದಂತೆ ರಾಹುಲ್ ದ್ರಾವಿಡ್ (24,208), ಸೌರವ್ ಗಂಗೂಲಿ (18,575) ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಕೊಹ್ಲಿ ಟೀಂ ಇಂಡಿಯಾ ಪರ 18 ಸಾವಿರ ರನ್ ಪೂರೈಸಿದ 4ನೇ ಆಟಗಾರನಾಗಿ ದಿಗ್ಗಜರ ಸಾಲಿಗೆ ಸೇರಿದ್ದಾರೆ.

    ಅಂತಿಮ 5ನೇ ಟೆಸ್ಟ್ ಪಂದ್ಯದಲ್ಲಿ ಅರ್ಧ ಶತಕದಿಂದ ವಂಚಿತರಾದ ಕೊಹ್ಲಿ 49 ರನ್ ಗಳಿಗೆ ಬೇನ್ ಸ್ಟೋಕ್ಸ್‍ಗೆ ವಿಕೆಟ್ ಒಪ್ಪಿಸಿದರು. ಟೀಂ ಇಂಡಿಯಾ 174 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ಹಿನ್ನಡೆ ಅನುಭವಿಸುವ ಸಂಕಷ್ಟದಲ್ಲಿದ್ದು, ಇನ್ನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಲು ಇನ್ನು 158 ರನ್ ಗಳಿಸಬೇಕಿದೆ. ಮೊದಲ ಟೆಸ್ಟ್ ಪಂದ್ಯವಾಡುತ್ತಿರುವ ಹನುಮ ವಿಹಾರಿ 25 ರನ್ ಮತ್ತು ಜಡೇಜಾ 8 ರನ್ ಗಳಿಸಿ 3ನೇ ದಿನದಾಟಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.

    ಕೊಹ್ಲಿ ರನ್ ಸಾಧನೆ:
    15 ಸಾವಿರ ರನ್ (333 ಇನ್ನಿಂಗ್ಸ್)
    16 ಸಾವಿರ ರನ್ (350 ಇನ್ನಿಂಗ್ಸ್)
    17 ಸಾವಿರ ರನ್ (363 ಇನ್ನಿಂಗ್ಸ್)
    18 ಸಾವಿರ ರನ್ (382 ಇನ್ನಿಂಗ್ಸ್)

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv