Tag: BRICS Summit

  • ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕ್‌ ವಿರುದ್ಧ ಮೋದಿ ಕಟು ವಾಗ್ದಾಳಿ – ಬುದ್ಧನ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ

    ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕ್‌ ವಿರುದ್ಧ ಮೋದಿ ಕಟು ವಾಗ್ದಾಳಿ – ಬುದ್ಧನ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ

    ಬ್ರೆಸಿಲಿಯಾ: ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪ್ರಧಾನಿ ನರೇಂದ್ರ ಮೋದಿ (Narendra Modi) ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಭಯೋತ್ಪಾದನೆ (Terrorism) ಮಾನವೀಯತೆಗೆ ಅತಿ ದೊಡ್ಡ ಬೆದರಿಕೆ ಎಂದು ಕರೆದ ಮೋದಿ, ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುವಲ್ಲಿ ಭಾರತದ ಜೊತೆ ನಿಂತ ಎಲ್ಲಾ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಯೋಗಿ ಮಾತಿಗೂ ಕಿಮ್ಮತ್ತಿಲ್ಲ – ವಿದ್ಯಾರ್ಥಿನಿಗೆ ಶುಲ್ಕ ವಿನಾಯ್ತಿ ಕೊಡಲು ನಿರಾಕರಿಸಿ‌ದ RSS ಮೂಲದ ಶಿಕ್ಷಣ ಸಂಸ್ಥೆ

    ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದ ಮೋದಿ, ಭಾರತ ಭಯೋತ್ಪಾದನೆಯ ಬಲಿಪಶು ರಾಷ್ಟ್ರವಾಗಿದ್ದರೆ, ಪಾಕಿಸ್ತಾನ ಅದರ ಬೆಂಬಲಿಗ ರಾಷ್ಟ್ರವಾಗಿದೆ ಎಂದು ಬ್ರಿಕ್ಸ್‌ ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ಮನವರಿಕೆ ಮಾಡಿಕೊಟ್ಟ ಪ್ರಧಾನಿ ಮೋದಿ, ಬಲಿಪಶುಗಳು ಮತ್ತು ಬೆಂಬಲಿಗರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.

    ಭಯೋತ್ಪಾದನೆಗೆ ಬೆಂಬಲ ನೀಡುವುದು, ಭಯೋತ್ಪಾದಕರಿಗೆ ಮೌನ ಒಪ್ಪಿಗೆ ನೀಡುವುದನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುವಂತೆ ಎಲ್ಲಾ ರಾಷ್ಟ್ರಗಳಿಗೆ ಮನವಿ ಮಾಡಿದ್ರು. ಅಲ್ಲದೇ ಭಾರತ ಮಹಾತ್ಮ ಗಾಂಧಿ, ಗೌತಮ ಬುದ್ಧರಿಂದ ಪ್ರೇರಿತರಾಗಿ ಶಾಂತಿಯ ಹಾದಿಯಲ್ಲಿ ಮುಂದುವರಿಯುತ್ತಿದೆ. ಎಷ್ಟೇ ಕಠಿಣ ಪರಿಸ್ಥಿತಿ ಬಂದರೂ, ಮಾನವಕುಲದ ಕಲ್ಯಾಣಕ್ಕೆ ಶಾಂತಿಯೇ ಅತ್ಯುತ್ತಮ ಮಾರ್ಗವಾಗಿದೆ ಎಂದು ಪ್ರತಿಪಾದಿಸಿದ್ರು. ಇದನ್ನೂ ಓದಿ: ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

    ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವ ಮೂಲಕ ಭಯೋತ್ಪಾದನೆಯನ್ನ ರಾಜ್ಯ ನೀತಿಯಾಗಿ ಹೇಗೆ ಬಳಸುತ್ತಿದೆ ಎಂಬುದನ್ನು ಭಾರತವು 17ನೇ ಬಾರಿಗೆ ಸ್ಪಷ್ಟ ಪುರಾವೆಗಳೊಂದಿಗೆ ತೋರಿಸಿದೆ. ಇತ್ತೀಚಿಗೆ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ನಡೆದ ಶಾಂಘೈ ಸಹಕಾರ ಒಕ್ಕೂಟದ ರಕ್ಷಣಾ ಸಚಿವರ ಸಭೆಯಲ್ಲಿ, ಪಹಲ್ಗಾಮ್‌ ದಾಳಿ ಉಲ್ಲೇಖವಿರದ ಜಂಟಿ ಹೇಳಿಕೆಗೆ ಸಹಿ ಮಾಡಲು, ಭಾರತ ನಿರಾಕರಿಸಿತ್ತು. ಇದನ್ನೂ ಓದಿ: ಭಾಷೆ ಹೆಸರಲ್ಲಿ ಜನರನ್ನು ವಿಭಜಿಸಬಾರದು: ಮರಾಠಿ-ಹಿಂದಿ ಸಂಘರ್ಷ ಬಗ್ಗೆ ಕಂಗನಾ ಪ್ರತಿಕ್ರಿಯೆ

    ಉಗ್ರವಾದಕ್ಕೆ ಖಂಡನೆ
    ಇನ್ನೂ ಪ್ರಧಾನಿ ಮೋದಿ ಅವರ ಭಾಷಣದ ಬಳಿಕ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಜಂಟಿ ಹೇಳಿಕೆ ಅಥವಾ ʻರಿಯೊ ಡಿ ಜನೈರೊ ಘೋಷಣೆʼಯನ್ನು ಹೊರಡಿಸಿದವು. ಯಾವುದೇ ರೀತಿಯ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸುವುದಾಗಿ ಸ್ಪಷ್ಟಪಡಿಸಿರುವ ಬ್ರಿಕ್ಸ್‌ ನಾಯಕರು, ಭಯೋತ್ಪಾದನೆಗೆ ಯಾರೇ ಬೆಂಬಲ ನೀಡಿದರೂ ಅದನ್ನು ಉಗ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.

    ನೆನಪಿದೆಯಾ ಪಹಲ್ಗಾಮ್‌ ಉಗ್ರರ ದಾಳಿ
    ಕಳೆದ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಬೈಸರನ್‌ ಕಣಿವೆ ಪ್ರದೇಶದಲ್ಲಿರುವ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಇದರಲ್ಲಿ ಓರ್ವ ವಿದೇಶಿ ಸೇರಿ 26 ಮಂದಿ ಸಾವನ್ನಪ್ಪಿದ್ದರು. ನೇಕರು ಗಾಯಗೊಂಡರು. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಇದನ್ನೂ ಓದಿ:  ಹಾವಿನ ದ್ವೇಷ 12 ವರುಷ – ಹಾಗೇ ಪ್ರೀತಿಯೂ ಪುರಾಣದಿಂದಲೇ ಹುಟ್ಟಿದ್ದಾ?

  • ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

    ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

    ಮಾಸ್ಕೋ: ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆಯೇ ಹೊರತು ಯುದ್ಧವನ್ನಲ್ಲ ಎಂದು ರಷ್ಯಾದಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ (BRICS Summit) ಪ್ರಧಾನಿ ನರೇಂದ್ರ ಮೋದಿ (Narendra Modi) ಸ್ಪಷ್ಟಪಡಿಸಿದ್ದಾರೆ.

    ಜಗತ್ತು ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ನಮ್ಮ ಸಭೆ ನಡೆಯುತ್ತಿದೆ. ಪ್ರಪಂಚವು ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ವಿಭಜನೆಯ ಬಗ್ಗೆಯೂ ಮಾತನಾಡುತ್ತಿದೆ. ಈ ಸಂದರ್ಭದಲ್ಲಿ ಹಣದುಬ್ಬರವನ್ನು ತಡೆಗಟ್ಟುವುದು ಮತ್ತು ಆಹಾರ, ಶಕ್ತಿ, ಆರೋಗ್ಯ ಮತ್ತು ನೀರಿನ ಭದ್ರತೆಯನ್ನು ಖಾತ್ರಿಪಡಿಸುವುದು ಆದ್ಯತೆಯ ವಿಷಯಗಳಾಗಿವೆ. ತಂತ್ರಜ್ಞಾನದ ಈ ಯುಗದಲ್ಲಿ ತಪ್ಪು ಮಾಹಿತಿ (ಆನ್‌ಲೈನ್‌ನಲ್ಲಿ ಹರಡುವಿಕೆ) ಮತ್ತು ಡೀಪ್‌ಫೇಕ್‌ ಮೊದಲಾದ ಸೈಬರ್ ವಂಚನೆಗಳಂತಹ ಹೊಸ ಸವಾಲುಗಳು ಎದುರಾಗಿವೆ ಎಂದು ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಂತಿ ಮಾತುಕತೆ ಯಶಸ್ವಿ – 5 ವರ್ಷದ ಬಳಿಕ ನಡೆಯಲಿದೆ ಮೋದಿ-ಜಿನ್‌ಪಿಂಗ್‌ ದ್ವಿಪಕ್ಷೀಯ ಸಭೆ

    ಇಂತಹ ಸನ್ನಿವೇಶದಲ್ಲಿ ಬ್ರಿಕ್ಸ್ ಗುಂಪಿನ ಬಗ್ಗೆ ಹೆಚ್ಚಿನ ನಿರೀಕ್ಷೆಗಳಿವೆ. ನಾವು ವೈವಿಧ್ಯಮಯ ಮತ್ತು ಅಂತರ್ಗತ ವೇದಿಕೆಯಾಗಿ ಈ ಎಲ್ಲಾ ಕ್ಷೇತ್ರಗಳಲ್ಲಿ ಸಕಾರಾತ್ಮಕ ಪಾತ್ರವನ್ನು ವಹಿಸಬಹುದು ಎಂದು ನಾನು ನಂಬುತ್ತೇನೆಂದು ಹೇಳಿದ್ದಾರೆ.

    ನಮ್ಮ ವಿಧಾನವು ಜನಕೇಂದ್ರಿತವಾಗಿರಬೇಕು. ಬ್ರಿಕ್ಸ್‌ ವಿಭಜನೆ ಮಾಡುವುದಕ್ಕಾಗಿ ಅಲ್ಲ. ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆಯೇ ಹೊರತು ಯುದ್ಧವಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ: ಯುದ್ಧ ಕುರಿತು ಪುಟಿನ್‌ ಜೊತೆ ಮೋದಿ ಮಾತು

    ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವು ನೀಡುವವರನ್ನು ಎದುರಿಸಲು ನಮಗೆ ಎಲ್ಲರ ಏಕ ಮನಸ್ಸಿನ ಮತ್ತು ದೃಢವಾದ ಬೆಂಬಲ ಬೇಕು. ಈ ಗಂಭೀರ ವಿಷಯದಲ್ಲಿ ಎರಡು ಮಾನದಂಡಗಳಿಗೆ ಸ್ಥಳವಿಲ್ಲ ಎಂದು ಒತ್ತಿ ಹೇಳಿದ್ದಾರೆ.

  • ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ: ಯುದ್ಧ ಕುರಿತು ಪುಟಿನ್‌ ಜೊತೆ ಮೋದಿ ಮಾತು

    ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ: ಯುದ್ಧ ಕುರಿತು ಪುಟಿನ್‌ ಜೊತೆ ಮೋದಿ ಮಾತು

    – ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ಮೋದಿ-ಪುಟಿನ್‌ ಭೇಟಿ

    ಮಾಸ್ಕೋ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ ಎಂದು ಉಕ್ರೇನ್‌ ಮೇಲಿನ ರಷ್ಯಾ ಯುದ್ಧದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ಮಾತುಕತೆ ನಡೆಸಿದರು.

    ಮಂಗಳವಾರ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಅವರು ಪುಟಿನ್ ಅವರನ್ನು ಭೇಟಿಯಾದರು. ಉಭಯ ನಾಯಕರು ಪರಸ್ಪರ ಆಲಿಂಗಿಸಿಕೊಂಡರು. ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ (ಬ್ರಿಕ್ಸ್) ಒಳಗೊಂಡಿರುವ ದೇಶಗಳ ಅನೌಪಚಾರಿಕ ಗುಂಪಿನ ಶೃಂಗಸಭೆಯು ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿದೆ.

    ಬ್ರಿಕ್ಸ್ ಗುಂಪಿನ ಯಶಸ್ಸನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಅನೇಕ ಇತರ ರಾಷ್ಟ್ರಗಳು ಅದರಲ್ಲಿ ಸೇರಲು ಬಯಸುತ್ತವೆ ಎಂದು ಇದೇ ವೇಳೆ ತಿಳಿಸಿದರು.

    ನಾವು ರಷ್ಯಾ-ಉಕ್ರೇನ್ ಸಮಸ್ಯೆ ವಿಚಾರವಾಗಿ ಎಲ್ಲಾ ಕಡೆ ಸಂಪರ್ಕದಲ್ಲಿದ್ದೇವೆ. ಎಲ್ಲಾ ಸಂಘರ್ಷಗಳನ್ನು ಮಾತುಕತೆಯಿಂದ ಪರಿಹರಿಸಬಹುದು ಎಂಬುದು ನಮ್ಮ ನಿಲುವು. ಸಂಘರ್ಷಗಳಿಗೆ ಶಾಂತಿಯುತ ಪರಿಹಾರಗಳು ಇರಬೇಕು ಎಂದು ನಾವು ನಂಬುತ್ತೇವೆ. ಶಾಂತಿಯನ್ನು ತರುವುದಕ್ಕೆ ಸಹಾಯ ಮಾಡಲು ಭಾರತ ಯಾವಾಗಲೂ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

    ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಅವರ ಎರಡನೇ ರಷ್ಯಾ ಭೇಟಿಯಾಗಿದೆ. ಅವರು 22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜುಲೈನಲ್ಲಿ ಮಾಸ್ಕೋಗೆ ಹೋಗಿದ್ದರು. ಅಲ್ಲಿ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದರು. ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಅನ್ನು ಮೋದಿ ಪಡೆದಿದ್ದರು.

  • BRICS Summit | ಗಡಿಯಲ್ಲಿ ಗಸ್ತು ತಿರುಗಲು ಭಾರತ, ಚೀನಾ ಅಸ್ತು

    BRICS Summit | ಗಡಿಯಲ್ಲಿ ಗಸ್ತು ತಿರುಗಲು ಭಾರತ, ಚೀನಾ ಅಸ್ತು

    ನವದೆಹಲಿ: ಭಾರತ (India) ಮತ್ತು ಚೀನಾ (China) ಪೂರ್ವ ಲಡಾಖ್‌ನ ಗಡಿ ನಿಯಂತ್ರಣ ರೇಖೆಯ (LAC) ಉದ್ದಕ್ಕೂ ಎರಡೂ ದೇಶಗಳ ಸೇನೆ ಗಸ್ತು ತಿರುಗುವುದನ್ನು ಪುನರಾರಂಭಿಸುವ ಒಪ್ಪಂದಕ್ಕೆ ಬಂದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    16ನೇ ಬ್ರಿಕ್ಸ್ ಶೃಂಗಸಭೆಗಾಗಿ (BRICS Summit) ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಗಡಿಯಲ್ಲಿ ಉಭಯ ದೇಶಗಳ ಗಸ್ತು ತಿರುಗುವ ವಿಚಾರವಾಗಿ ಕಳೆದ ಹಲವಾರು ವಾರಗಳಿಂದ ಚರ್ಚೆ ನಡೆಯುತ್ತಿತ್ತು. ಇದರ ಪರಿಣಾಮವಾಗಿ, ಭಾರತ-ಚೀನಾ ಗಡಿ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಗಸ್ತು ವ್ಯವಸ್ಥೆಯ ಒಪ್ಪಂದಕ್ಕೆ ಬರಲಾಗಿದೆ.

    ಡೆಪ್ಸಾಂಗ್ ಪ್ಲೇನ್ಸ್ ಮತ್ತು ಡೆಮ್ಚೋಕ್ LAC ಉದ್ದಕ್ಕೂ ಇರುವ ಗಸ್ತು ತಿರುಗುವಿಕೆ ಪುನರಾರಂಭಗೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಚೀನಾ ನಡುವೆ ರಾಜತಾಂತ್ರಿಕ ಮತ್ತು ಮಿಲಿಟರಿ ಚರ್ಚೆಗಳು ನಡೆಯುತ್ತಿವೆ. ಈ ಮೂಲಕ 2020 ರಲ್ಲಿ ಈ ಪ್ರದೇಶಗಳಲ್ಲಿ ಉದ್ಭವಿಸಿದ ಸಮಸ್ಯೆಗಳಿಗೆ ಪರಿಹಾರ ಸಿಕ್ಕಂತಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

    ಈ ನಡುವೆ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮೋದಿ ಸಂಭಾವ್ಯ ದ್ವಿಪಕ್ಷೀಯ ಸಭೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

    ಜೂನ್ 15, 2020 ರಂದು ಗಾಲ್ವಾನ್‌ನಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಿತ್ತು. ಇದರ ಪರಿಣಾಮವಾಗಿ ಭಾರತವು ಕರ್ನಲ್ ಸೇರಿದಂತೆ 20 ಸೈನಿಕರನ್ನು ಕಳೆದುಕೊಂಡಿತು. ಚೀನಾ ಕೇವಲ ನಾಲ್ಕು ಸಾವುನೋವುಗಳನ್ನು ಒಪ್ಪಿಕೊಂಡಿದ್ದರೂ, ಘರ್ಷಣೆಯಲ್ಲಿ 40 ​​ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು. 1962ರ ಯುದ್ಧದ ನಂತರ ಈ ಘಟನೆ ತೀವ್ರವಾಗಿತ್ತು. ಇದು ಚೀನಾ-ಭಾರತದ ಸಂಬಂಧಗಳಲ್ಲಿ ಬಿರುಕಿಗೆ ಕಾರಣವಾಗಿತ್ತು.

  • BRICS ಶೃಂಗಸಭೆ: ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡು ಗೌರವ ತೋರಿದ ಮೋದಿ

    BRICS ಶೃಂಗಸಭೆ: ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡು ಗೌರವ ತೋರಿದ ಮೋದಿ

    ಕೇಪ್‌ಟೌನ್: ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದಕ್ಷಿಣ ಆಫ್ರಿಕಾದ (South Africa) ಜೋಹನ್ಸ್‌ಬಗ್‌ಗೆ (Johannesburg) ತೆರಳಿದ್ದಾರೆ. ಪ್ರವಾಸದಲ್ಲಿರುವ ಮೋದಿಯವರು ಭಾರತದ ತ್ರಿವರ್ಣ ಧ್ವಜಕ್ಕೆ (Tricolor) ಗೌರವ ತೋರಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

    ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾದ ನಾಯಕರನ್ನು ಗ್ರೂಪ್ ಫ್ರೋಟೋ ಕ್ಲಿಕ್ಕಿಸಿಕೊಳ್ಳಲು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ನರೇಂದ್ರ ಮೋದಿ ಅವರು ವೇದಿಕೆಯ ನೆಲದ ಮೇಲೆ ತಾವು ನಿಲ್ಲಬೇಕಾಗಿದ್ದ ಸ್ಥಳದಲ್ಲಿ ಪುಟ್ಟ ತ್ರಿವರ್ಣ ಧ್ವಜವನ್ನು ಗಮನಿಸಿದ್ದಾರೆ.

    ತಕ್ಷಣ ಮೋದಿ ಧ್ವಜದ ಮೇಲೆ ತಾವು ಕಾಲಿಡದಂತೆ ನೋಡಿಕೊಂಡು, ಪುಟ್ಟ ರಾಷ್ಟ್ರ ಧ್ವಜವನ್ನು ಕೈಗೆತ್ತಿಕೊಂಡು, ತಮ್ಮ ಜೇಬಿನಲ್ಲಿ ಇರಿಸಿಕೊಂಡರು. ಇದನ್ನು ಗಮನಿಸಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲೆ ರಾಮಾಫೋಸಾ ಕೂಡಾ ಮೋದಿಯವರನ್ನು ಅನುಸರಿಸಿ, ನೆಲದ ಮೇಲೆ ಇಡಲಾಗಿದ್ದ ದಕ್ಷಿಣ ಆಫ್ರಿಕಾದ ಧ್ವಜವನ್ನು ಎತ್ತಿಕೊಂಡರು. ಇದನ್ನೂ ಓದಿ: ಆ.26ಕ್ಕೆ ಬೆಂಗಳೂರಿಗೆ ಮೋದಿ – ಇಸ್ರೋ ಕೇಂದ್ರ ಕಚೇರಿಗೆ ಭೇಟಿ

    ಇದಾದ ಬಳಿಕ ಮೋದಿ ಅವರು ವೇದಿಕೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

    ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ರಾಷ್ಟ್ರಧ್ವಜಕ್ಕೆ ತೋರಿದ ಗೌರವದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]