Tag: Brigade Road

  • ಕೆಲವೇ ಕ್ಷಣಗಳಲ್ಲಿ ಬಂದೇ ಬಿಡ್ತು ಹೊಸ ವರ್ಷ – ಹೇಗಿದೆ ಯುವಜನರ ಜೋಶ್‌?

    ಕೆಲವೇ ಕ್ಷಣಗಳಲ್ಲಿ ಬಂದೇ ಬಿಡ್ತು ಹೊಸ ವರ್ಷ – ಹೇಗಿದೆ ಯುವಜನರ ಜೋಶ್‌?

    ಬೆಂಗಳೂರು: 2025ರ ಹೊಸ ವರ್ಷ (New Year 2025) ಸ್ವಾಗತಕ್ಕೆ ಇಡೀ ಜಗತ್ತೇ ಸಜ್ಜಾಗಿದೆ. ಹೊಸ ಹುರುಪಿನೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ರಾಜ್ಯ ರಾಜಧಾನಿಯೂ ಸಜ್ಜಾಗಿದೆ. 2024ಕ್ಕೆ ಗುಡ್‌ಬೈ ಹೇಳಿ 2025ಕ್ಕೆ ಹಾಯ್ ಹೇಳಲು ಸಿಲಿಕಾನ್ ಸಿಟಿ ಮಂದಿ ಕಾತರರಾಗಿದ್ದಾರೆ.

    ಈಗಾಗಲೇ ಬೆಂಗಳೂರು ಸಂಭ್ರಮಾಚರಣೆಯ ಮೂಡ್‌ನಲ್ಲಿದೆ.. ಹೊಸ ವರ್ಷದ ಹಾಟ್‌ಸ್ಪಾಟ್‌ಗಳಾದ ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌, ಕೋರಮಂಗಲ, ಇಂದಿರಾ ನಗರ ಕಲರ್‌ಫುಲ್ ಆಗಿವೆ.. ಝಗಮಗ ಎನ್ನುತ್ತಿವೆ.. ಸಹಸ್ರ ಸಹಸ್ರ ಮಂದಿ ಕುಣಿದು ಕುಪ್ಪಳಿಸಲು.. ಗೆಳೆಯ ಗೆಳೆತಿಯರ ಜೊತೆ ಸಂಭ್ರಮಿಸಲು ಸೆಲೆಬ್ರೆಷನ್ ಸ್ಟಾಟ್‌ಗಳಿಗೆ ಬರ್ತಿದ್ದಾರೆ.

    ರಾತ್ರಿ 12 ಗಂಟೆ ಹೊತ್ತಿಗೆ ಎಂ.ಜಿ ರೋಡ್, ಬ್ರಿಗೇಡ್ ರೋಡ್‌ನಲ್ಲಿ 2 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮಹಿಳೆಯರಿಗಾಗಿ 40 ಸೇಫ್ಟಿ ಐಲ್ಯಾಂಡ್, ವಾಚ್ ಟವರ್ ನಿರ್ಮಿಸಲಾಗಿದೆ. ಮಧ್ಯರಾತ್ರಿ 1 ಗಂಟೆ ವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ.

    ಮಹಿಳೆಯರ ಸುರಕ್ಷತೆಗಾಗಿ ಪ್ರತಿ ಮೆಟ್ರೋ ಕೋಚ್‌ನಲ್ಲೂ ಭದ್ರತಾ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಫ್ಲೈಓವರ್‌ಗಳನ್ನು ಮುಂಜಾಗ್ರತಾ ಕ್ರಮವಾಗಿ ಬಂದ್ ಮಾಡಲಾಗಿದೆ.

  • ಹೊಸ ವರ್ಷಾಚರಣೆ – ಬ್ರಿಗೇಡ್‌ ರಸ್ತೆಯಲ್ಲಿ ಜೋಡಿಗಳಿಗೆ ಪ್ರತ್ಯೇಕ ಮಾರ್ಗ

    ಹೊಸ ವರ್ಷಾಚರಣೆ – ಬ್ರಿಗೇಡ್‌ ರಸ್ತೆಯಲ್ಲಿ ಜೋಡಿಗಳಿಗೆ ಪ್ರತ್ಯೇಕ ಮಾರ್ಗ

    ಬೆಂಗಳೂರು: ಬ್ರಿಗೇಡ್ ರಸ್ತೆಯಲ್ಲಿ (Brigade Road) ಹೊಸ ವರ್ಷ (New Year) ಸಂಭ್ರಮಾಚರಣೆಗೆ ಹೋಗುವ ಜೋಡಿಗಳಿಗೆ (Couple) ಬೆಂಗಳೂರು ಪೊಲೀಸರು (Benngaluru Police) ಸಿಹಿ ಸುದ್ದಿ ಕೊಡಲು ಪ್ಲಾನ್ ಮಾಡಿಕೊಂಡಿದ್ದಾರೆ.

    ಹೊಸ ವರ್ಷಕ್ಕೆ ಬೆಂಗಳೂರಿನ (Bengaluru) ಬ್ರಿಗೇಡ್ ರೋಡ್‌ನಲ್ಲಿ ಜೋಡಿಗೆ ಈ ಬಾರಿ ಪ್ರತ್ಯೇಕವಾದ ಮಾರ್ಗ ಮಾಡಿಕೊಟ್ಟು ಸಂಭ್ರಮಾಚರಣೆಗೆ ಅನುವು ಮಾಡಿಕೊಡಲು ಬೆಂಗಳೂರು ಪೊಲೀಸರು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ.  ಇದನ್ನೂ ಓದಿ: ಬೆಂಗಳೂರು ಟೆಕ್ಕಿ ಮೇಲೆ ಗ್ಯಾಂಗ್ ರೇಪ್?

    ಕಳೆದ ವರ್ಷ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಕೆಲ ಪುಂಡರು ಜನರ ಗುಂಪಿನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಅಲ್ಲಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳಿಗೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಆಗಮಿಸುವ ಜೋಡಿಗೆ ಎಂದೇ ಪ್ರತ್ಯೇಕ ಮಾರ್ಗ ಮಾಡಿ ಅಲ್ಲಿಯೇ ಹೊಸ ವರ್ಷ ಸಂಭ್ರಮಾಚರಣೆ ಮಾಡಿಕೊಳ್ಳಲು ವಿಶೇಷ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆದಿದೆ.  ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಮಾಸ್ಟರ್‌ಮೈಂಡ್‌ ಲಲಿತ್‌ ಬಂಧನ

    ಈ ಮೂಲಕ ಸಂಭ್ರಮಾಚರಣೆ ಹೆಸರಲ್ಲಿ ನಡೆಸುವ ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕಬಹುದೆಂದು ಹೊಸ ಪ್ರಯೋಗಕ್ಕೆ ಇಲಾಖೆ ಮುಂದಾಗಿದೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

     

  • ಮಿಡ್‌ನೈಟ್ ಆಪರೇಷನ್, ವೇಶ್ಯಾವಾಟಿಕೆಯಲ್ಲಿ ಭಾಗಿ ಶಂಕೆ – ಸಿನಿಮಿಯ ರೀತಿಯಲ್ಲಿ ವಿದೇಶಿಗರ ಬಂಧನ

    ಮಿಡ್‌ನೈಟ್ ಆಪರೇಷನ್, ವೇಶ್ಯಾವಾಟಿಕೆಯಲ್ಲಿ ಭಾಗಿ ಶಂಕೆ – ಸಿನಿಮಿಯ ರೀತಿಯಲ್ಲಿ ವಿದೇಶಿಗರ ಬಂಧನ

    ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನ (Bengaluru) ವಿವಿಧೆಡೆ ಮಿಡ್‌ನೈಟ್ ಆಪರೇಷನ್ ನಡೆಸಿದ ಖಾಕಿ ಪಡೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿದ್ದ ವಿದೇಶಿಗರನ್ನು ಸಿನಿಮಿಯ ರೀತಿಯಲ್ಲಿ ಬಂಧಿಸಿರುವ ಘಟನೆ ನಡೆಸಿದೆ.

    ಎಂ.ಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ (Brigade Road) ದಾಳಿ ಮಾಡಿದ ಕೇಂದ್ರ ವಿಭಾಗದ ಪೊಲೀಸರು (Police) ಆಫ್ರಿಕನ್ ಪ್ರಜೆಗಳ ಆಟಟೋಪಕ್ಕೆ ಬ್ರೇಕ್ ಹಾಕಿದ್ದಾರೆ. ವೇಶ್ಯಾವಾಟಿಕೆ, ಡ್ರಗ್ಸ್‌ ದಂದೆ ಸೇರಿದಂತೆ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾದ ಶಂಕೆ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು ಹಲವರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಹೆಡ್‍ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

    ಎಂ.ಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ ನಿಂತು ಗ್ರಾಹಕರನ್ನ ಸೆಳೆಯುತ್ತಿದ್ದವರನ್ನ ಸಿನಿಮಿಯು ರೀತಿಯಲ್ಲಿ ಅಟ್ಟಾಡಿಸಿ ಖಾಕಿ ಪಡೆ ಲಾಕ್ ಮಾಡಿದೆ. ಒಟ್ಟು 55 ವಿದೇಶಿ ಪ್ರಜೆಗಳನ್ನ ಬಂಧಿಸಿದ್ದು, ಅವರಲ್ಲಿ 25ಕ್ಕೂ ಹೆಚ್ಚು ಮಂದಿ ಮಹಿಳೆಯರು (Foreign Women) ಇದ್ದಾರೆ. ಬಂಧಿಸಿದ ಬಳಿಕ ಆಫ್ರಿಕನ್ ಪ್ರಜೆಗಳಿಗೆ ಮೆಡಿಕಲ್ ಮತ್ತು ನಾರ್ಕೊಟಿಕ್ ಟೆಸ್ಟ್ ಮಾಡಿಸಲಾಗಿದೆ. ಇದನ್ನೂ ಓದಿ: 15 ದಿನಗಳ ಹಿಂದಷ್ಟೇ ಡಿವೋರ್ಸ್- ಪತ್ನಿಯನ್ನು ಕೊಲ್ಲಲು ಪಿಸ್ತೂಲ್ ಖರೀದಿಸಿ ಅರೆಸ್ಟ್ ಆದ!

    ಆಫ್ರಿಕನ್ ಮಹಿಳೆಯರ ಹೈಡ್ರಾಮಾ:
    ಪೊಲೀಸರು ವಶಕ್ಕೆ ಪಡೆಯುವ ವೇಳೆ ವಿದೇಶಿ ಯುವತಿಯರು ಭಾರೀ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಮದ್ಯದ ನಶೆಯಲ್ಲಿ ಪಬ್‌ನಿಂದ ಹೊರ ಬರ್ತಿದ್ದಂತೆ ಕೆಲ ಯುವತಿಯರು ಖಾಕಿ ಜೊತೆಗೆ ಕಿರಿಕ್ ತೆಗೆದಿದ್ದಾರೆ. ಬಾಯಿ ಬಡಿದುಕೊಂಡು ಚೀರಾಟ ನಡೆಸಿದ್ದಾರೆ. ಕುಡಿದ ಅಮಲಿನಲ್ಲಿ ಕ್ಯಾಮೆರಾ ಚಿತ್ರೀಕರಣಕ್ಕೂ ಅಡ್ಡಿಪಡಿಸಿದ್ದಾರೆ. ಇನ್ನೂ ಕೆಲವರು ಪೊಲೀಸರು ಹತ್ತಿರ ಬರುತ್ತಿದ್ದಂತೆ ದಿಕ್ಕಾಪಾಲಾಗಿ ಓಡಲು ಯತ್ನಿಸಿದ್ದು, ಬೆರಳೆಣಿಕೆಯಷ್ಟು ಮಹಿಳೆಯರು ಎಸ್ಕೇಪ್ ಆಗಿದ್ದಾರೆ. ಉಳಿದ ಮಹಿಳೆಯರನ್ನ ಸಮಾಧಾನ ಮಾಡಿ ವಶಕ್ಕೆ ಪಡೆಯುವಷ್ಟರಲ್ಲಿ ಪೊಲೀಸರು ಹೈರಾಣಾಗಿದ್ದಾರೆ.

    60 ಮಂದಿ ಖಾಕಿ ಪಡೆ ಕಾರ್ಯಾಚರಣೆ:
    ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕಾರ್ಯಚರಣೆಯಲ್ಲಿ ಓರ್ವ ಡಿಸಿಪಿ, ಇಬ್ಬರು ಎಸಿಪಿ, 6 ಮಂದಿ ಇನ್ಸ್ಪೆಕ್ಟರ್, 10 ಮಂದಿ ಪಿಎಸ್‌ಐ, 20 ಮಹಿಳಾ ಸಿಬ್ಬಂದಿ, 20 ಪುರುಷ ಸಿಬ್ಬಂದಿಯಿAದ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಡಿಸಿಪಿ ಶ್ರೀನಿವಾಸಗೌಡ ನೇತೃತ್ವದ ತಂಡ ಏಕಕಾಲದಲ್ಲಿ ಮೂರು ಕಡೆಗಳಿಂದ ದಾಳಿ ನಡೆಸಿದೆ. ಎಂ.ಜಿ ರಸ್ತೆಯಿಂದ ಒಂದು ತಂಡ, ಚರ್ಚ್ ಸ್ಟ್ರೀಟ್ ನಿಂದ ಒಂದು ತಂಡ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಫೀಲ್ಡಿಗಿಳಿದು ಆಪರೇಷನ್ ನಡೆಸಿ, ವಿದೇಶಿಗರನ್ನ ಬಂಧಿಸುವಲ್ಲಿ ತಂಡ ಯಶಸ್ವಿಯಾಗಿದೆ.

  • ಡೋಲು ಬಡಿಯುತ್ತ ಪಬ್ ಮೇಲೆ ದಾಳಿ- ಸಂಘಟನೆ ಕಾರ್ಯಕರ್ತರು ವಶಕ್ಕೆ

    ಡೋಲು ಬಡಿಯುತ್ತ ಪಬ್ ಮೇಲೆ ದಾಳಿ- ಸಂಘಟನೆ ಕಾರ್ಯಕರ್ತರು ವಶಕ್ಕೆ

    ಬೆಂಗಳೂರು: ಬ್ರಿಗೇಡ್ ರೋಡ್‍ನ (Brigade road) ಪಬ್ (Pub) ಒಂದರಲ್ಲಿ ಲೈಟ್ ನೈಟ್ ಪಾರ್ಟಿ (Light Night Party) ಮಾಡುತ್ತಿದ್ದವರ ಮೇಲೆ ಕರ್ನಾಟಕ ಕಾರ್ಮಿಕರ ಪರಿಷತ್ ಕಾರ್ಯಕರ್ತರು ತಡರಾತ್ರಿ ದಾಳಿ ಮಾಡಿದ ಘಟನೆ ನಡೆದಿದೆ.

    ನಗರದಲ್ಲಿ ಹೆಚ್ಚುತ್ತಿರುವ ಪಾಶ್ಚಿಮಾತ್ಯ ಸಂಸ್ಕøತಿ ವಿರೋಧಿಸಿ ಡೋಲು ಬಡಿದುಕೊಂಡು 15 ಜನರ ಗುಂಪು ಪಬ್ ಪ್ರವೇಶಿಸಲು ಮುಂದಾಗಿದೆ. ಸಂಘಟನೆಯ ಕಾರ್ಯಕರ್ತರನ್ನು ಪಬ್ ಬೌನ್ಸರ್‍ಗಳು ಬಾಗಿಲಿನಲ್ಲೇ ತಡೆದಿದ್ದಾರೆ. ಬೌನ್ಸರ್‍ಗಳು ಹಾಗೂ ಗುಂಪಿನ ನಡುವೆ ಮಾತಿನ ಚಕಮುಕಿ ನಡೆದಿದೆ. ನಂತರ ಪಬ್‍ನ ಎದುರು ಎರಡು ಗುಂಪುಗಳು ಹೊಡೆದಾಡಿಕೊಂಡಿವೆ. ಇದನ್ನೂ ಓದಿ: ಮತ್ತೊಂದು ಕೇಸ್ – ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

    ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಶೋಕನಗರ (Ashoka Nagar) ಪೊಲೀಸರು (Police) ಭೇಟಿ ನೀಡಿ ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದವರನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ಕಾಲುವೆ ಕಡೆ ಬಸ್ ಚಲಾಯಿಸಿದ ಚಾಲಕ – ಪ್ರಯಾಣಿರಿಂದ ಕ್ಲಾಸ್

  • ಪಿಲ್ಲರ್ ದುರಂತ ಬಳಿಕ ಮತ್ತೊಂದು ಎಡವಟ್ಟು – ಬ್ರಿಗೇಡ್ ರಸ್ತೆಯಲ್ಲಿ 30 ಅಡಿ ಆಳಕ್ಕೆ ಕುಸಿದ ರಸ್ತೆ

    ಪಿಲ್ಲರ್ ದುರಂತ ಬಳಿಕ ಮತ್ತೊಂದು ಎಡವಟ್ಟು – ಬ್ರಿಗೇಡ್ ರಸ್ತೆಯಲ್ಲಿ 30 ಅಡಿ ಆಳಕ್ಕೆ ಕುಸಿದ ರಸ್ತೆ

    ಬೆಂಗಳೂರು: ಹೆಣ್ಣೂರು ಕ್ರಾಸ್ (Hennuru Cross) ಬಳಿ ಮೆಟ್ರೋ ಪಿಲ್ಲರ್ ನಿರ್ಮಿಸಲು ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಉರುಳಿ ತಾಯಿ-ಮಗ ಬಲಿಯಾಗಿದ್ರು. ಈ ದುರಂತ ಮಾಸುವ ಮುನ್ನವೇ, ಗುರುವಾರ ಮೆಟ್ರೋ ಕಾಮಗಾರಿ ಎಫೆಕ್ಟ್ ನಿಂದ ಬ್ರಿಗೇಡ್ ರಸ್ತೆಯಲ್ಲಿ ಆಳವಾದ ಗುಂಡಿ ಬಿದ್ದಿದ್ದು, ಇಬ್ಬರು ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    30 ಅಡಿ ಅಳಕ್ಕೆ ಗುಂಡಿ ಬಿದ್ದಿದ್ದು, ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್‌ (BMRCL) ವಿರುದ್ಧ ಜನಾಕ್ರೋಶ ವ್ಯಕ್ತವಾಗ್ತಿವೆ. ಗುಂಡಿ ಬಿದ್ದ ಜಾಗದ ಆಳದಲ್ಲಿ, ಕಳೆದ 5 ದಿನಗಳ ಹಿಂದೆ 35 ಫೀಟ್‍ನ ಅಂತರದಲ್ಲಿ ಗ್ರಾನೈಟ್ ರಾಕ್ ಮೂಲಕ ನಮ್ಮ ಮೆಟ್ರೋದ ಟನಲ್ ಹಾದು ಹೋಗಿತ್ತು. ಸದ್ಯ ಗುಂಡಿಗೆ ಫುಲ್ ಕಾಂಕ್ರೀಟ್ ತುಂಬಿದ್ದು, ರಾತ್ರಿವಿಡೀ ರಸ್ತೆ ಬಂದ್ ಮಾಡಿ, ಕ್ವಾಲಿಟಿ ಚೆಕ್ ಮಾಡಲಾಗ್ತಿದೆ. ಕೆಲಸ ನಡೆದ 10 ಗಂಟೆಯ ನಂತರ ಕ್ವಾಲಿಟಿ ಪರಿಶೀಲಿಸಿ ರಸ್ತೆ ಓಪನ್ ಮಾಡೋಕೆ ಬಿಎಂಆರ್ ಸಿಎಲ್ ಅಧಿಕಾರಿಗಳು ನಿರ್ಧರಿಸಿದ್ದಾರೆ.

    ಕುಸಿತಗೊಂಡಿರೋ ರಸ್ತೆ ಕೆಳಭಾಗದಲ್ಲಿ ಎರಡು ಟನಲ್ ಮೆಷಿನ್ ಈಗಾಗಲೇ ಪಾಸ್ ಆಗಿದ್ದವು. ಈ ವೇಳೆ ಮಣ್ಣು ಸಡಿಲವಾಗಿರೋದು ಹಾಗೂ ನೀರು ಕಾಣಿಸಿಕೊಂಡಿಲ್ಲ. ಆದ್ರೇ ಇದು ಹೇಗೆ ಕುಸಿತ ಆಯ್ತು ಅನ್ನೋ ಮಾಹಿತಿ ಬಿಎಂಆರ್ ಸಿಎಲ್ ಅಧಿಕಾರಿಗಳಿಗೂ ಇಲ್ಲ. ಜಲಮಂಡಳಿಯ ಪೈಪ್‍ಲೈನ್ ಏನಾದ್ರೂ ಹೋಗಿದ್ಯಾ ಅಂತ ಜಲಮಂಡಳಿಯ ಜೊತೆ ಮಾತುಕತೆ ನಡೆಸಲು ಬಿಎಂಆರ್‍ಸಿಎಲ್ ಮುಂದಾಗಿದೆ. ಇದನ್ನೂ ಓದಿ: ಪತ್ನಿ, ಮಗನ ಸಾವಿಗೆ ಕಾರಣರಾದವ್ರ ವಿರುದ್ಧ ಕ್ರಮಕ್ಕೆ ಲೋಹಿತ್ ದೂರು- ಎಫ್‍ಐಆರ್

    ಪಿಲ್ಲರ್ ದುರಂತ (Metro Pillar Tragedy) ಖಂಡಿಸಿ ಪ್ರತಿಭಟನೆ: ಪಿಲ್ಲರ್ ದುರಂತ ಖಂಡಿಸಿ ಬಿಎಂಆರ್‍ಸಿಎಲ್ ಮುಖ್ಯ ಕಛೇರಿಗೆ ನಮ್ಮ ಕರ್ನಾಟಕ ಸೇನೆ ದಿಢೀರ್ ನುಗ್ಗಿ ಪ್ರತಿಭಟನೆ ನಡೆಸ್ತು. ಪ್ರತಿಭಟನಾಕಾರರ ಮನವಿ ಸ್ವೀಕರಿಸದಿದ್ದಕ್ಕೆ ರೊಚ್ಚಿಗೆದ್ದು, ಕಛೇರಿಯಲ್ಲಿನ ಸೋಫಾ, ಚೇರ್‍ಗಳನ್ನು ಹೊರಗೆಳೆದು ಧ್ವಂಸಗೊಳಿಸಿದ್ರು. ಮೆಟ್ರೋ ಕಾಮಗಾರಿ ದುರಂತದಲ್ಲಿ ಮೃತರಾದ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಹಾಗೂ ಸರ್ಕಾರಿ ನೌಕರಿ ನೀಡುವಂತೆ ಒತ್ತಾಯಿಸಿದ್ರು.

    ಬಿಎಂಆರ್ ಸಿಎಲ್ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೆಜ್‍ಗೆ ಚೇಂಬರ್ ಹೊರ ಭಾಗದಲ್ಲೇ ಧಿಕ್ಕಾರ ಕೂಗಿದ್ರು. ಮನವಿ ಸ್ವೀಕರಿಸದಿದ್ದಕ್ಕೆ ಸಿಟ್ಟಿಗೆದ್ದ ಪ್ರತಿಭಟನಾಕಾರರು ಕಚೇರಿಗೆ ನುಗ್ಗಿ ಮನಬಂದಂತೆ ಸಿಕ್ಕ ಸಿಕ್ಕ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ರು. ಕೆಲಕಾಲ ಉದ್ವಿಗ್ನ ವಾತಾವರಣ ಇತ್ತು. ನಂತರ ಮನವಿ ಪತ್ರವನ್ನು ಸ್ವೀಕರಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗ್ತೇವೆ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಮುಂಜಾಗ್ರತಾ ಕ್ರಮ ವಹಿಸ್ತೇವೆ ಎಂದು ಬಿಎಂಆರ್‍ಸಿಎಲ್ ಎಂಡಿ ಅಂಜುಂ ಫರ್ವೇಜ್ ತಿಳಿಸಿದ್ರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಹರಿದುಬಂದ ಜನಸಾಗರ – 3 ಲಕ್ಷಕ್ಕೂ ಆಧಿಕ ಜನ ಭಾಗಿ

    ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಹರಿದುಬಂದ ಜನಸಾಗರ – 3 ಲಕ್ಷಕ್ಕೂ ಆಧಿಕ ಜನ ಭಾಗಿ

    ಬೆಂಗಳೂರು: ನಗರದಲ್ಲಿ ನಡೆದ ನ್ಯೂ ಇಯರ್ ಸೆಲೆಬ್ರೇಷನ್ (New Year Celebration) ದೊಡ್ಡ ದಾಖಲೆ ಎಂದೇ ಹೇಳಬಹುದು. ಯಾಕಂದ್ರೆ ಪೊಲೀಸರು (Police) ನಿರೀಕ್ಷೆ ಮಾಡಿದ್ದಕ್ಕಿಂತ ಎರಡು ಪಟ್ಟು ಜನ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಬ್ರಿಗೇಡ್ ರೋಡ್ (Brigade Road), ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ (MG Road) ಸಂಭ್ರಮಾಚರಣೆಗೆ ಬಂದ ಜನರ ಸಂಖ್ಯೆ ಸುಮಾರು 3 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ.

    ಕಳೆದೆರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ವರ್ಷಾಚರಣೆಗೆ ಬ್ರೇಕ್ ಬಿದ್ದಿತ್ತು. ಈ ವರ್ಷ ಕೊರೊನಾ (Corona) ರೂಪಾಂತರಿ ಆತಂಕ ಇದ್ರೂ ನಿರ್ಬಂಧಗಳ ಜೊತೆ ಹೊಸ ವರ್ಷ ಸ್ವಾಗತಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ ಜನಸಾಗರ ಸೇರಿತ್ತು. ಒಂದು ಅಂದಾಜಿನ ಪ್ರಕಾರ ಸಂಭ್ರಮಾಚರಣೆಗೆ ಬಂದ ಜನರ ಸಂಖ್ಯೆ ಸುಮಾರು 3 ಲಕ್ಷಕ್ಕೂ ಹೆಚ್ಚಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಚರ್ಚ್ ಸ್ಟ್ರೀಟ್‌ನಲ್ಲಿ ಮಾರಾಮಾರಿ – ಲವರ್ ಮುಟ್ಟಿದ್ದಕ್ಕೆ ಬಿತ್ತು ಗೂಸಾ

    ಕೊರೊನಾದಿಂದಾಗಿ ಕಳೆದೆರಡು ವರ್ಷಗಳಿಂದ ಡಲ್ ಹೊಡೆದಿದ್ದ ಹೊಸ ವರ್ಷಾಚರಣೆ ಈ ಬಾರಿ ಗ್ರ್ಯಾಂಡ್ ಆಗಿ ಜರುಗಿದೆ. ಜನ ಕಳೆದೆರಡು ವರ್ಷ ಜನ ವರ್ಷಾರಣೆಗೆ ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಮನೆಯಿಂದ ಹೊರ ಬಂದಿರಲಿಲ್ಲ. ಈ ಬಾರಿ ಅವಕಾಶವಿದ್ದ ಕಾರಣ ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‍ನಲ್ಲಂತೂ ಜನಸಾಗರವೇ ಸೇರಿತ್ತು. ಹಾಡು, ಕುಣಿತ, ಡ್ಯಾನ್ಸ್, ಮಸ್ತಿ ಮಾಡಿ, ಪಟಾಕಿ ಸಿಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡರು. ಬಾರ್, ಪಬ್, ಕ್ಲಬ್‍ಗಳಲ್ಲಿ ಸೇರಿದ್ದ ಪಾರ್ಟಿ ಪ್ರಿಯರು ಸಖತ್ ಎಂಜಾಯ್ ಮಾಡಿದರು. ಸಂಭ್ರಮಾಚರಣೆ ಬಳಿಕ ಪ್ರಮುಖ ರಸ್ತೆಗಳಲ್ಲಿ ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್‌ನಿಂದ ವಾಹನ ಸವಾರರು ಪರದಾಡಿದರು. ಇದನ್ನೂ ಓದಿ: ಹೊಸ ವರ್ಷ ಸಂಭ್ರಮ – ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟ ಸಾವಿರಾರು ಪ್ರವಾಸಿಗರು

    ಒಂದೆರಡು ಕಡೆ ಸಣ್ಣಪುಟ್ಟ ಗಲಾಟೆಗಳು ಹೊರತುಪಡಿಸಿ, ಉಳಿದಂತೆ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ ಯಶಸ್ವಿಯಾಗಿ ನಡೆದಿದೆ. 8,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಸಿಸಿಟಿವಿ ಕಣ್ಗಾವಲಿನಲ್ಲಿ ಭದ್ರತೆ ಕಲ್ಪಿಸಲಾಗಿತ್ತು. ಹಾಗಾಗಿ ಕೊರೊನಾ ರೂಪಾಂತರಿ ಆತಂಕದ ಮಧ್ಯೆ ಜನ ಸಂಭ್ರಮದಲ್ಲಿ ಮಿಂದೆದ್ದರು.

    Live Tv
    [brid partner=56869869 player=32851 video=960834 autoplay=true]

  • ಗಾಂಜಾ ಮತ್ತಿನಲ್ಲಿ ಗಲಾಟೆ- ಕಿಡಿಗೇಡಿಗಳು ಪೊಲೀಸರ ವಶಕ್ಕೆ

    ಗಾಂಜಾ ಮತ್ತಿನಲ್ಲಿ ಗಲಾಟೆ- ಕಿಡಿಗೇಡಿಗಳು ಪೊಲೀಸರ ವಶಕ್ಕೆ

    ಬೆಂಗಳೂರು: ಗಾಂಜಾ ಸೇವಿಸಿ ಗಲಾಟೆ ಮಾಡುತ್ತಿದ್ದ ಕಿಡಿಗೇಡಿಗಳನ್ನು ಬೆಂಗಳೂರಿನ (Bengaluru) ಕಬ್ಬನ್ ಪಾರ್ಕ್ ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

    ಹೊಸ ವರ್ಷದ (New Year) ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ರಂಗು ರಂಗಾಗಿದೆ. ಎಂಜಿ ರೋಡ್, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್‍ಗಳಲ್ಲಿ ಕಿಕ್ಕಿರಿದು ಜನರು ಸೇರಿದ್ದು, 2023ರನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈ ವೇಳೆ ಬ್ರಿಗೇಡ್ ರೋಡ್ (Brigade Road) ಎಂಟ್ರಿಯಲ್ಲಿ ಕೆಲವರು ಗಾಂಜಾ ಸೇದುತ್ತಿದ್ದರು. ಅಷ್ಟೇ ಅಲ್ಲದೇ ಗಾಂಜಾ ಮತ್ತಿನಲ್ಲಿ ಗಲಾಟೆ ನಡೆಸಿದ್ದಾರೆ. ಇದನ್ನೂ ಓದಿ: ಚರ್ಚ್ ಸ್ಟ್ರೀಟ್‌ನಲ್ಲಿ ಮಾರಾಮಾರಿ – ಲವರ್ ಮುಟ್ಟಿದ್ದಕ್ಕೆ ಬಿತ್ತು ಗೂಸಾ

    ಘಟನೆಗೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ (Police Station) ಪೊಲೀಸರು ಗಾಂಜಾ ಸೇವಿಸಿ ಗಲಾಟೆ ಮಾಡುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್ – ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ವಾಹನ ಸವಾರರು

    Live Tv
    [brid partner=56869869 player=32851 video=960834 autoplay=true]

  • ಬ್ರಿಗೇಡ್ ರೋಡ್‍ನಲ್ಲಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು

    ಬ್ರಿಗೇಡ್ ರೋಡ್‍ನಲ್ಲಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿಯಿಂದ ಬ್ರಿಗೇಡ್ ರಸ್ತೆಯ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಅವಘಡವೊಂದು ನಡೆದಿದೆ.

    ಫುಡ್‍ಕೋರ್ಟ್‍ನಲ್ಲಿ ಊಟ ಮುಗಿಸಿ ಐದನೇ ಮಹಡಿಯಿಂದ ಮೆಟ್ಟಿಳಿಯುವಾಗ ಯುವತಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಆಕೆಯನ್ನು ರಕ್ಷಿಸುವ ಭರದಲ್ಲಿ ಗೆಳೆಯನೂ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಯುವತಿ ಲಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಪೀಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಫ್ರೆಂಡ್‌ ಜೊತೆ ಜ್ಯೂಸ್ ಕುಡಿಯಲು ಬಂದಿದ್ದ ಯುವತಿ ಶಾಪಿಂಗ್‌ ಮಾಲ್‌ನಿಂದ ಆಯತಪ್ಪಿ ಬಿದ್ದು ಸಾವು

    ಮೃತಪಟ್ಟ ಯುವತಿಯ ರಕ್ತದ ಮಾದರಿಯನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗಿದೆ. ಮಾಲ್‍ನಲ್ಲೂ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಯುವಕ ಯುವತಿ ಜೊತೆ ಬಂದಿದ್ದ ಸ್ನೇಹಿತರಿಂದಲೇ ಮಾಹಿತಿ ಕಲೆ ಹಾಕಿದ್ದಾರೆ. ಘಟನೆ ಸಂಬಂಧ ಮೃತ ಯುವತಿ ಲಿಯಾ ತಾಯಿ ಆಕಸ್ಮಿಕ ಸಾವು ಎಂದು ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇಂದು ಯುವತಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ.

  • ಕುಡಿದ ಮತ್ತಿನಲ್ಲಿ ಬಿಗ್‍ಬಾಸ್ ಸ್ಪರ್ಧಿ ದಿವ್ಯ ಸುರೇಶ್ ರಂಪಾಟ

    ಕುಡಿದ ಮತ್ತಿನಲ್ಲಿ ಬಿಗ್‍ಬಾಸ್ ಸ್ಪರ್ಧಿ ದಿವ್ಯ ಸುರೇಶ್ ರಂಪಾಟ

    ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್  ಬ್ರಿಗೇಡ್ ರೋಡ್‍ನಲ್ಲಿ ರಂಪಾಟ ಮಾಡಿದ ಘಟನೆ ಇಂದು ರಾತ್ರಿ ನಡೆದಿದೆ.

    ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಗಲಾಟೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಪೊಲೀಸರು ಮತ್ತು ಮಾಧ್ಯಮಗಳು ಬರುತ್ತಿದ್ದಂತೆ ಕ್ಯಾಮೆರಾ ಕಂಡು ದಿವ್ಯ ಸುರೇಶ್ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾಗಿ ಡಿಂಪಲ್ ಕ್ವೀನ್ ರಚಿತಾ ಡಿಸ್ಚಾರ್ಜ್

    ಪೊಲೀಸರು ದಿವ್ಯ ಸುರೇಶ್ ಜೊತೆ ಮಾತನಾಡುತ್ತಿದ್ದಂತೆ ಮಾಧ್ಯಮಗಳು ಕೂಡ ಸ್ಥಳಕ್ಕೆ ದಾವಿಸಿವೆ. ಈ ವೇಳೆ ದಿವ್ಯ ಸುರೇಶ್ ಕ್ಯಾಮೆರಾ ಕಂಡು ಆಟೋ ಹತ್ತಿ ತೆರಳಿದಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಸೆಲೆಬ್ರೆಷನ್‍ಗೆ ಮಾಲ್ಡೀವ್ಸ್‌ಗೆ ಹಾರಿದ ಬಾಲಿವುಡ್ ಲವ್​ ಬರ್ಡ್ಸ್

    ಬಿಗ್‍ಬಾಸ್ ಕನ್ನಡ ಸೀಸನ್ 8ರಲ್ಲಿ 6ನೇ ಸ್ಥಾನ ಪಡೆದುಕೊಂಡು ಮನೆಯಿಂದ ಹೊರ ಬಂದ ದಿವ್ಯಾ ಸುರೇಶ್ ಅವರು ಟಾಸ್ಕ್‌ಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕವೇ ಹೆಚ್ಚು ಜನಪ್ರಿಯವಾಗಿದ್ದರು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

     

  • ಹೊಸ ವರ್ಷ ಆಚರಣೆಗೆ ಸಜ್ಜಾಗಲ್ಲ ಬ್ರಿಗೇಡ್ ರಸ್ತೆ

    ಹೊಸ ವರ್ಷ ಆಚರಣೆಗೆ ಸಜ್ಜಾಗಲ್ಲ ಬ್ರಿಗೇಡ್ ರಸ್ತೆ

    ಬೆಂಗಳೂರು: ಹೊಸ ವರ್ಷ ಆಚರಣೆಗೆ ಬ್ರಿಗೇಡ್ ರಸ್ತೆ ಸಜ್ಜಾಗಲ್ಲ. ಯಾವುದೇ ಡೆಕೊರೇಷನ್ ಮತ್ತು ಲೈಟಿಂಗ್ಸ್ ಇರಲ್ಲ ಎಂದು ಬ್ರಿಗೇಡ್ಸ್ ಶಾಪ್ ಆ್ಯಂಡ್ ಎಸ್ಟಾಬ್ಲಿಷ್ಮೆಂಟ್ ಅಸೋಸಿಯೇಷನ್ ನಿರ್ಧಾರ ತೆಗೆದುಕೊಂಡಿದೆ ಎಂದು ಅಧ್ಯಕ್ಷ ಸುಹೇಲ್ ಹೇಳಿದ್ದಾರೆ.

    ಕೋವಿಡ್ ಹಿನ್ನೆಲೆಯಲ್ಲಿ ಹೊಸವರ್ಷದ ಆರಂಭಕ್ಕೆ ಈ ಹಿಂದೆ ಬ್ರಿಗೇಡ್ ರೋಡ್‍ನಲ್ಲಿ ಮಾಡುತ್ತಿರುವ ಡೆಕೊರೇಷನ್‍ಗೆ ಬ್ರೇಕ್ ಹಾಕಿದೆ. ಬ್ರಿಗೇಡ್ ರಸ್ತೆ ಹೊಸ ವರ್ಷಕ್ಕೆ ಸಜ್ಜಾಗುವುದಿಲ್ಲ ಎಂದು ತಿಳಿಸಿದ್ದಾರೆ.

    ಪ್ರತಿ ವರ್ಷ ಹೊಸ ವರ್ಷದ ಆರಂಭಕ್ಕೆ 7 ಲಕ್ಷ ವೆಚ್ಚ ಖರ್ಚು ಮಾಡಿ ಅಲಂಕಾರ ಲೈಟ್ ಹಾಗೂ ಭದ್ರತೆ ನೇಮಕ ಮಾಡಲು ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಇಂತಹ ಅಲಂಕಾರಿಕ ಲೈಟ್ ಅಥವಾ ಡೆಕೊರೇಷನ್ ಯಾವುದು ಇರುವುದಿಲ್ಲ ಎಂದು ಹೇಳಿದ್ದಾರೆ.

     

    ಡಿ. 15ಕ್ಕೆ ದೀಪಗಳು ಝಗಮಗಿಸುತ್ತಿದ್ದವು. ಇಯರ್ ಎಂಡ್ ಆಫರ್‍ಗಾಗಿ ಶಾಪಿಂಗ್ ಭರಾಟೆ ಕೂಡ ಜೋರಾಗಿರುತ್ತಿತ್ತು. ಆದರೆ ಈ ಬಾರಿ ಲೈಟಿಂಗ್ ಇರಲ್ಲ. ನಮಗೆ ನಷ್ಟ ಆಗಬಹುದು ಆದರೆ ಜೀವನವೇ ಮುಖ್ಯವಾಗಿದೆ. ಸೆಲ್ಫಿ, ಫೋಟೋಗಾಗಿಯೇ ಹೆಚ್ಚು ಜನರು ಬರುತ್ತಿದ್ದರು. ಅಲಂಕಾರವೇ ಇಲ್ಲ ಎಂದರೆ ಜನರು ಗುಂಪು ಸೇರುವುದಿಲ್ಲ. ಸರ್ಕಾರದ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸುಹೇಲ್ ಹೇಳಿದ್ದಾರೆ.