Tag: Brindavan Garden

  • ಚಿರತೆ ಕಣ್ಣಾಮುಚ್ಚಾಲೆ, 15 ದಿನಗಳಿಂದ ಬೃಂದಾವನ ಕ್ಲೋಸ್ – ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

    ಚಿರತೆ ಕಣ್ಣಾಮುಚ್ಚಾಲೆ, 15 ದಿನಗಳಿಂದ ಬೃಂದಾವನ ಕ್ಲೋಸ್ – ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

    ಮಂಡ್ಯ: ಅದು ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಪ್ರವಾಸಿ ಸ್ಥಳ. ಆ ಸ್ಥಳದಲ್ಲಿ ಇಚೆಗೆ ಚಿರತೆ (Leopard) ಕಾಣಿಸಿಕೊಂಡಿದ್ದು, 15 ದಿನಗಳಿಂದ ಬಾಗಿಲು ಮುಚ್ಚಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಾ ಇದ್ದಾರೆ. ಇತ್ತ ಪ್ರವಾಸಿ ಸ್ಥಳವನ್ನು ಜೀವನೋಪಾಯಕ್ಕಾಗಿ ನಂಬಿಕೊಂಡಿದ್ದ ವ್ಯಾಪಾರಸ್ಥರು ಕಣ್ಣೀರು ಹಾಕುತ್ತ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

    ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಈ ಸಂಘರ್ಷದಿಂದ ಕೆಲ ಕಡೆ ಕಾಡು ಪ್ರಾಣಿಗಳಿಗೆ ತೊಂದರೆಯಾದರೆ, ಇನ್ನೂ ಕೆಲವೆಡೆ ಮನುಷ್ಯರಿಗೆ ತೊಂದರೆಯಾಗುತ್ತಿದೆ. ಇಂತಹದೇ ಪರಿಸ್ಥಿತಿ ನಿರ್ಮಾಣವಾಗಿರುವುದು ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್‌ನ (KRS) ಬೃಂದಾವನದಲ್ಲಿ (Brindavan Garden). ಕಳೆದ 1 ತಿಂಗಳಿನಿಂದ ಕೆಆರ್‌ಎಸ್ ಹಾಗೂ ಬೃಂದಾವನದಲ್ಲಿ ಚಿರತೆ ಕಣ್ಣಾಮುಚ್ಚಾಲೆಯಾಡುತ್ತಿದೆ. ಇದರಿಂದ ಕಳೆದ 15 ದಿನಗಳಿಂದ ಸುಧೀರ್ಘವಾಗಿ ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ.

    ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಕಾವೇರಿ ನೀರಾವರಿ ನಿಗಮ ಬೃಂದಾವನವನ್ನು ಬಂದ್ ಮಾಡಿದೆ. ಇತ್ತ ನಾವು ಚಿರತೆಯನ್ನು ಹಿಡಿಯುತ್ತೇವೆ ಎಂದು ಕಾಟಚಾರಕ್ಕೆ 8 ಬೋನ್‌ಗಳನ್ನು ಅರಣ್ಯ ಇಲಾಖೆ ಇರಿಸಿದೆ. ಇದಲ್ಲದೆ ಕೆಲ ಟ್ರ‍್ಯಾಪ್ ಕ್ಯಾಮೆರಾವನ್ನು ಸಹ ಅಳವಡಿಸಿದ್ದಾರೆ. ಆದರೆ ಇದರಿಂದ ಯಾವುದೇ ಪ್ರಯೋಜವಾಗುತ್ತಿಲ್ಲ. ಕೂಂಬಿಂಗ್ ಮಾಡಿ ಚಿರತೆ ಕಾರ್ಯಾಚರಣೆ ಮಾಡಬೇಕಾದ ಅರಣ್ಯ ಇಲಾಖೆ ಸಿಬ್ಬಂದಿ ಕಾಟಾಚಾರಕ್ಕೆ ಆಗೊಮ್ಮೆ ಈಗೊಮ್ಮೆ ಬಂದು ಹೋಗುತ್ತಾ ಇದ್ದಾರೆ.

    ಒಂದು ಕಡೆ ಚಿರತೆಯ ಆತಂಕದಲ್ಲಿ ಬೃಂದಾವನವನ್ನು 15 ದಿನಗಳಿಂದ ಬಂದ್ ಮಾಡಲಾಗಿದ್ದು, ಇತ್ತ ಅರಣ್ಯ ಇಲಾಖೆಯ ಅಧಿಕಾರಿಗಳು ನಾವು ಚಿರತೆ ಹಿಡಿಯುತ್ತಿದ್ದೇವೆ, ಆದರೆ ಚಿರತೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಪ್ರತಿ ದಿನ ಸಿಸಿ ಕ್ಯಾಮೆರಾದಲ್ಲಿ ಚಿರತೆಯ ಚಲನವಲನಗಳು ಸೆರೆಯಾಗುತ್ತಿದೆ. ನಿನ್ನೆಯೂ ಸಹ ಉತ್ತರ ಬೃಂದಾವನದ ವ್ಯಾಪ್ತಿಯಲ್ಲಿ ಮುಳ್ಳು ಹಂದಿಯ ಜೊತೆ ಚಿರತೆ ಸೆಣೆಸಾಡುವ ದೃಶ್ಯ ಕಾಣಿಸಿಕೊಂಡಿದೆ. ಆದರೆ ಕಾಟಾಚಾರದ ಅಧಿಕಾರಿಗಳಿಗೆ ಮಾತ್ರ ಚಿರತೆ ಕಾಣಿಸುತ್ತಿಲ್ಲ. ದೊಡ್ಡದಾದ 8 ಬೋನ್ ಇಟ್ಟಿದ್ದೇವೆ ಎನ್ನುತ್ತಿದ್ದಾರೆ. ಇದನ್ನೂ ಓದಿ: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್- ಪೊಲೀಸರ ಮುಂದೆ ನಾಲ್ವರು ತಪ್ಪೊಪ್ಪಿಗೆ

    ಬೋನ್ ಇಟ್ಟರೆ ಮಾತ್ರ ಚಿರತೆ ಬೀಳುವುದಿಲ್ಲ. ಸರಿಯಾದ ರೀತಿಯ ಕೂಂಬಿಂಗ್ ಮಾಡಿದರೆ ಮಾತ್ರ ಚಿರತೆ ಸೆರೆಯಾಗುವುದು. ಬೋನ್ ಇಟ್ಟು ಕೂಂಬಿಂಗ್‌ಗೆ ಇವರು ಬಂದಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಇಷ್ಟಾದರೂ ಸಹ ಸಚಿವರು ಆಗಲಿ, ಜಿಲ್ಲಾಧಿಕಾರಿಯಾಗಲಿ ಇತ್ತ ತಲೆಹಾಕಿಲ್ಲ.

    ಕಳೆದ 15 ದಿನಗಳಿಂದ ಬೃಂದಾವನ ಬಂದ್ ಆಗಿರುವ ಕಾರಣ ಇದನ್ನೇ ಜೀವನ ನಿರ್ವಹಣೆಗೆ ಆಧಾರವನ್ನಾಗಿ ಮಾಡಿಕೊಂಡಿರುವ ವ್ಯಾಪಾರಸ್ಥರ ಸ್ಥಿತಿ ಚಿಂತಾಜನಕವಾಗಿದೆ. ಪ್ರವಾಸಿಗರನ್ನೇ ನಂಬಿಕೊಂಡಿದ್ದ ವ್ಯಾಪಾರಸ್ಥರು ಇದೀಗ ವ್ಯಾಪಾರವಿಲ್ಲದೇ ಕುಟುಂಬ ನಿರ್ವಹಣೆಗೂ ಕಷ್ಟಪಡುವ ಸ್ಥಿತಿಗೆ ಬಂದಿದ್ದಾರೆ. ಇವರು ಚಿರತೆ ಇದೆ ಅಂತಾರೆ ಆದರೆ ಚಿರತೆ ಹಿಡಿಯೋಕೆ ಮಾತ್ರ ಬರ್ತಾ ಇಲ್ಲ. ನಮ್ಮ ಕಷ್ಟ ಕೇಳೋರು ಯಾರು ಸ್ವಾಮಿ ಎಂದು ವ್ಯಾಪಾರಸ್ಥರು ಕಣ್ಣೀರು ಹಾಕುತ್ತಿದ್ದಾರೆ.

    ಒಟ್ಟಾರೆ ಬೃಂದಾವನಲ್ಲಿ ಚಿರತೆಯ ಕಣ್ಣಾಮುಚ್ಚಾಲೆಯಿಂದ ಪ್ರವಾಸಿಗರಿಗೆ ನೀರಾಸೆಯಾದರೆ, ಇದನ್ನೇ ನಂಬಿಕೊಂಡಿರುವ ವ್ಯಾಪಾರಸ್ಥರು ಕಷ್ಟಪಡುವಂತಾಗಿದೆ. ಈಗಲಾದರೂ ಅರಣ್ಯ ಇಲಾಖೆಯ ಅಧಿಕಾರಿಗಳು ತನ್ನ ಬೇಜವಾಬ್ದಾರಿತನ ಬಿಟ್ಟು ಚಿರತೆ ಸೆರೆಗೆ ಸರಿಯಾಗಿ ಕಾರ್ಯಾಚರಣೆ ಮಾಡಬೇಕಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳು ರಿಲೀಸ್

    Live Tv
    [brid partner=56869869 player=32851 video=960834 autoplay=true]

  • ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ

    ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಚಿರತೆ (Leopard) ಹಾವಳಿ ಮಿತಿಮೀರಿದೆ. ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ ಆತಂಕ ಸೃಷ್ಟಿಸುತ್ತಿದೆ. ಒಂದು ಕಡೆ ಕುರಿ-ಮೇಕೆ ಬೇಟೆಗಾಗಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳ ಕೈಗೆ ಲಾಕ್ ಆದ್ರೆ, ಇತ್ತ ಕಳೆದ ಹದಿನೈದು ದಿನದಿಂದ ಕೆಆರ್‌ಎಸ್‌ (KRS) ಬೃಂದಾವನದಲ್ಲಿ ಕಣ್ಣಾಮುಚ್ಚಾಲೆ ಆಡಿಸುತ್ತಿರುವ ಚಿರತೆ ಪ್ರವಾಸಿಗರಿಗೆ ಆತಂಕ ಮೂಡಿಸಿದೆ.

    ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುಂದನಗುಪ್ಪೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು, ಜಾನುವಾರುಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿಸಿತ್ತು. ಗ್ರಾಮಸ್ಥರು ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಚಿರತೆ ಸೆರೆಹಿಡಿಯುವಂತೆ ಒತ್ತಾಯಿಸಿದ್ರು. ಆದ್ರೆ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕುಂದನಗುಪ್ಪೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಚಿರತೆ ಕಷ್ಣಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದೆ. ಕೊಟ್ಟಿಗೆಯಲ್ಲಿ 15ಕ್ಕೂ ಹೆಚ್ಚು ಕುರಿ-ಮೇಕೆ, ಒಂದು ಕರು, ಕೋಳಿ ಕೂಡ ಇತ್ತು. ಬೇಟೆಗೆ ನುಗ್ಗಿದ ಚಿರತೆಗೆ ಟಗರು ಗುದ್ದಿದ್ದು, ಚಿರತೆ ಗಾಬರಿಗೆ ಒಳಗಾಗಿದೆ. ಕುರಿ-ಮೇಕೆ ಚೀರಾಟ ಕೇಳಿ ಹೊರಬಂದ ಕೃಷ್ಣಪ್ಪ ಕುಟುಂಬ ಕೊಟ್ಟಿಗೆಯಲ್ಲಿ ಚಿರತೆ ಕಂಡು ದಿಗ್ಭ್ರಮೆಗೊಂಡಿದ್ದಾರೆ. ಚಿರತೆ ಬೇಟೆಗೆ ನುಗ್ಗಿ ಕೊಟ್ಟಿಗೆ ಸುತ್ತ ಹಾಕಿದ್ದ ಕಬ್ಬಿಣದ ಗೂಡಿನಿಂದ ಹೊರಬರಲಾಗದೆ ಕುರಿ ಮೇಕೆಯೊಂದಿಗೆ ಹಲವು ಗಂಟೆ ಕಳೆದಿದೆ. ನಂತರ ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಡಿಎಫ್‍ಓ ವೃತ್ತಾರನ್ ಹಾಗೂ ಹತ್ತಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯಲು ಪ್ಲಾನ್ ರೂಪಿಸಿದ್ರು. ಪ್ಲಾನ್‍ನಂತೆ ಚಿರತೆ ಜನರನ್ನು ನೋಡಿ ಗಾಬರಿಯಾಗದಂತೆ ಕೊಟ್ಟಿಯನ್ನು ಟಾರ್ಪಾಲಿನಲ್ಲಿ ಮುಚ್ಚಿದ್ದು, ನಂತರ ಮೈಸೂರಿನಿಂದ ಅರವಳಿಕೆ ತಜ್ಞರನ್ನು ಕರೆಸಿ, ಚಿರತೆಗೆ ಅರವಳಿಕೆ ಮದ್ದು ನೀಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚಿರತೆಯನ್ನು ಸೆರೆಹಿಡಿದ್ರು. ಇದನ್ನೂ ಓದಿ: ಬರೀ ಒಂದು ಕಾಲಲ್ಲ, ಆತನ ಮೈಯೆಲ್ಲ ಕೊಳೆತು ಹೋಗಬೇಕು – ಆ್ಯಸಿಡ್ ಸಂತ್ರಸ್ತೆ

    ಚಿರತೆ ಸೆರೆಯಿಂದ ಕುಂದನಗುಪ್ಪೆ ಗ್ರಾಮಸ್ಥರೇನೋ ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿ ಚಿರತೆ ಆತಂಕ ಮುಂದುವರಿದಿದೆ. ಕಳೆದ ಹದಿನೈದು ದಿನದಿಂದಲು ಚಿರತೆ ಕಣ್ಣಾಮುಚ್ಚಾಲೆ ಆಟ ಆಡ್ತಿದ್ದು, ಪ್ರವಾಸಿಗರಲ್ಲಿ ಆತಂಕದ ಜೊತೆಗೆ ಬೇಸರ ಮೂಡಿಸಿದೆ. ಅಕ್ಟೋಬರ್ 22 ರಂದು ಕೆಆರ್‌ಎಸ್‌ ಡ್ಯಾಂ ಪಕ್ಕದಲ್ಲಿ ಚಿರತೆ ಸಿಬ್ಬಂದಿ ಕಣ್ಣಿಗೆ ಕಾಣಿಸಿತ್ತು. ಅಂದು ಬೋನ್ (Cage) ಇಟ್ಟು, ಒಂದು ದಿನ ಕಾರ್ಯಾಚರಣೆ ನಡೆಸಿ ಚಿರತೆ ಸಿಗದಿದ್ದಕ್ಕೆ ಸುಮ್ಮನಾಗಿದ್ರು. ಯಾವಾಗ ಮತ್ತೆ ಅ.28 ರಂದು ಬೃಂದಾವನದ ಉತ್ತರ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷವಾಗಿ, ಸಿಸಿಟಿವಿಯಲ್ಲಿ (CCTV) ಚಿರತೆಯ ಚಲನವಲನ ಸೆರೆಯಾಯ್ತೋ ಅಂದಿನಿಂದ ಇಂದಿನವರೆಗೂ ಉತ್ತರ ಬೃಂದಾವನ ಬಂದ್ ಮಾಡಿ, ಬೋನ್ ಇಟ್ಟು ಜವಬ್ದಾರಿಯಿಂದ ಕೈತೊಳೆದುಕೊಂಡಿದೆ. ಆದ್ರೆ ಇದು ಪ್ರವಾಸಿಗರ ಬೇಸರಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಬೃಂದಾವನದ ಪ್ರಮುಖ ಆಕರ್ಷಣೆ ಅಂದರೇ ಅದು ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿ. ಆ ಸೌಂದರ್ಯ ಸವಿಯಬೇಕೆಂದು ರಾಜ್ಯವಲ್ಲದೆ ಹೊರರಾಜ್ಯದಿಂದಲು ಬಹಳಷ್ಟು ಜನ ಬರ್ತಾರೆ. ಆದ್ರೆ ಉತ್ತರ ಬೃಂದಾವನ ಬಂದ್ ಆಗಿರುವುದು ಬೇಸರ ಆಗುತ್ತಿದೆ ಎನ್ನುತ್ತಿದ್ದಾರೆ. ಅಷ್ಟೇ ಅಲ್ಲ ಆರ್ಥಿಕ ಹೊಡೆತ ಉಂಟುಮಾಡಿದೆ. ಅಲ್ಲದೇ ಟಿಕೆಟ್ ದರವನ್ನು ಕಡಿಮೆ ಮಾಡದೇ, ಚಿರತೆ ಸೆರೆಹಿಡಿಯದೆ ನಿರ್ಲಕ್ಷ್ಯ ಮಾಡ್ತಿರುವ ಕಾವೇರಿ ನೀರಾವರಿ ನಿಗಮ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]