Tag: British Columbia

  • ವಿದೇಶದಲ್ಲಿ ಮುಂದುವರೆದ ಜನಾಂಗೀಯ ದ್ವೇಷ: ಕೆನಾಡದಲ್ಲಿ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ

    ವಿದೇಶದಲ್ಲಿ ಮುಂದುವರೆದ ಜನಾಂಗೀಯ ದ್ವೇಷ: ಕೆನಾಡದಲ್ಲಿ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ

    ಒಟ್ಟಾವ: ವಿದೇಶಗಳಲ್ಲಿ ಜನಾಂಗೀಯ ದ್ವೇಷ (Racial hatred) ಮರುಕಳಿಸಿದ್ದು, ಕೆನಡಾದ (Canada) ಬ್ರಿಟಿಷ್ ಕೊಲಂಬಿಯಾದಲ್ಲಿ (British Columbia) ಭಾರತದ (India) ಸಿಖ್ (Sikh) ವಿದ್ಯಾರ್ಥಿಯ ಮೇಲೆ (Student) ಅಪರಿಚಿತ ವ್ಯಕ್ತಿಗಳ ಗುಂಪು ಶುಕ್ರವಾರ ಹಲ್ಲೆ ನಡೆಸಿದೆ.

    ಗಗನ್‍ದೀಪ್ ಸಿಂಗ್ (21) ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾತ್ರಿ ಅಂಗಡಿಯೊಂದಕ್ಕೆ ತೆರಳಿದ್ದ ಗಗನ್‍ದೀಪ್ ಸಿಂಗ್ ರಾತ್ರಿ 10.30ರ ವೇಳೆಗೆ ಬಸ್‍ನಲ್ಲಿ ಬರುತ್ತಿದ್ದ. ಈ ಸಂದರ್ಭದಲ್ಲಿ 10 ರಿಂದ 15 ಜನರ ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ ಎಂದು ಕೌನ್ಸಿಲರ್ ಮೋಹಿನಿ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚಾಕಲೇಟ್ ಆಮಿಷವೊಡ್ಡಿ 4ರ ಬಾಲಕಿ ಮೇಲೆ ಅತ್ಯಾಚಾರ

    ಆತನನ್ನು ಹಿಂಬಾಲಿಸಿ ಧರಿಸದ್ದ ಪೇಟವನ್ನು ಕಿತ್ತೆಸೆದಿದ್ದಾರೆ. ಆತನ ಕಾಲು, ಕೈ ಹಾಗೂ ಪಕ್ಕೆಲುಬುಗಳಿಗೆ ಒದ್ದು, ತಲೆಕೂದಲನ್ನು ಹಿಡಿದೆಳೆದು ರಸ್ತೆ ಬದಿಗೆ ತಳ್ಳಿದ್ದಾರೆ ಎಂದು ಕೌನ್ಸಿಲರ್ ತಿಳಿಸಿದ್ದಾರೆ.

    ನಂತರ ಆತನ ಸ್ನೇಹಿತರು ಸ್ಥಳಕ್ಕೆ ಬಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಭಾರತೀಯರು ಎಂಬ ಒಂದೇ ಕಾರಣದಿಂದ ಹಲ್ಲೆ ನಡೆದಿದೆ ಎಂದು ಕೌನ್ಸಿಲರ್ (Councillor) ಆರೋಪಿಸಿದ್ದಾರೆ.

    ಕೆಲೋವ್ನಾದ ಆರ್‌ಸಿಎಂಪಿ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಹಾಗೂ ತಮ್ಮ ವ್ಯಾಪ್ತಿಯಲ್ಲಿ ಅಪರಾಧ ನಡೆದಿದ್ದಕ್ಕೆ ವಕ್ತಾರ ಕಾನ್ಸ್‌ಟೇಬಲ್‌ ಮೈಕ್ ಡೆಲ್ಲಾ ಪೋಲೆರಾ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: HDK `ಪಂಚರತ್ನ’ಯಾತ್ರೆ ಪಂಚರ್ ಆಗಿದೆ, ಕಾಂಗ್ರೆಸ್ಸಿಗೆ ಹೀನಾಯ ಸ್ಥಿತಿ ಬಂದಿದೆ – ಕಟೀಲ್ ಲೇವಡಿ

  • ಕೆನಡಾದಲ್ಲಿ ಸಾಮೂಹಿಕ ಗುಂಡಿನ ದಾಳಿ: ಹಲವರ ಸಾವು

    ಕೆನಡಾದಲ್ಲಿ ಸಾಮೂಹಿಕ ಗುಂಡಿನ ದಾಳಿ: ಹಲವರ ಸಾವು

    ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಸೋಮವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಹಲವು ಜನ ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

    ಬ್ರಿಟಿಷ್ ಕೊಲಂಬಿಯಾದ ಲಾಂಗ್ಲಿ ನಗರದಲ್ಲಿ ಗುಂಡಿನ ದಾಳಿ ಪ್ರಾರಂಭವಾಗುತ್ತಲೇ ಪೊಲೀಸರು ತುರ್ತು ಎಚ್ಚರಿಕೆಯನ್ನು ನೀಡಿದ್ದರು. ಘಟನೆಯ ಪ್ರದೇಶದಿಂದ ಜಾಗರೂಕರಾಗಿರಲು ಹಾಗೂ ದೂರವಿರಲು ನಿವಾಸಿಗಳನ್ನು ಕೇಳಿಕೊಂಡಿದ್ದರು. ಆದರೆ ಇಂದಿನ ಗುಂಡಿನ ದಾಳಿಯಿಂದಾಗಿ ಹಲವು ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 939 ಮಂದಿ ಕೊರೊನಾ ಸೋಂಕು – ಓರ್ವ ಸಾವು

    ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ವಕ್ತಾರರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಗುಂಡಿನ ದಾಳಿಯಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ನಿರ್ದಿಷ್ಟವಾಗಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿಲ್ಲ. ವರದಿಗಳ ಪ್ರಕಾರ ನಿರಾಶ್ರಿತರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿಯನ್ನು ನಡೆಸಲಾಗಿದೆ. ಶಂಕಿತನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಮುಫ್ತಿ ಅಪಮಾನ- ಖರ್ಗೆಗೆ ಆಸನ ನಿಗದಿಯಲ್ಲಿ ಶಿಷ್ಟಾಚಾರ ಉಲ್ಲಂಘನೆ

    Live Tv
    [brid partner=56869869 player=32851 video=960834 autoplay=true]