Tag: British Parliament

  • ಭದ್ರತಾ ಕಾರಣಕ್ಕೆ TikTok ಬ್ಯಾನ್ ಮಾಡಿದ ಬ್ರಿಟಿಷ್ ಸಂಸತ್ತು

    ಭದ್ರತಾ ಕಾರಣಕ್ಕೆ TikTok ಬ್ಯಾನ್ ಮಾಡಿದ ಬ್ರಿಟಿಷ್ ಸಂಸತ್ತು

    ಲಂಡನ್: ಚೀನಾದ (China) ವೀಡಿಯೋ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಅನ್ನು ಬ್ರಿಟನ್ ಸಂಸತ್ತು (British Parliament) ನಿಷೇಧಿಸಿದೆ.

    ಭದ್ರತಾ ಕಾಳಜಿಯ ಹಿನ್ನೆಲೆ ಬ್ರಿಟನ್ ಸಂಸತ್ತು ತನ್ನ ನೆಟ್‌ವರ್ಕ್‌ನಲ್ಲಿರುವ ಎಲ್ಲಾ ಸಾಧನಗಳಿಂದಲೂ ಟಿಕ್‌ಟಾಕ್ ಅನ್ನು ನಿರ್ಬಂಧಿಸಿದೆ. ಈ ಹಿಂದೆಯೇ ಭಾರತ ಇಡೀ ದೇಶದಲ್ಲಿ ಟಿಕ್‌ಟಾಕ್ ಅನ್ನು ಬ್ಯಾನ್ ಮಾಡಿದೆ. ಇದೀಗ ಬ್ರಿಟನ್ ಸಂಸತ್ತು ಭದ್ರತಾ ಕಾರಣಕ್ಕೆ ಟಿಕ್‌ಟಾಕ್ ಅನ್ನು ನಿಷೇಧಿಸಿದೆ.

    ಹೌಸ್ ಆಫ್ ಕಾಮನ್ಸ್ ಹಾಗೂ ಲಾರ್ಡ್ಸ್ ಎರಡೂ ಆಯೋಗಗಳು ಟಿಕ್‌ಟಾಕ್ ಅನ್ನು ಎಲ್ಲಾ ಸಂಸದೀಯ ಸಾಧನಗಳು ಹಾಗೂ ಸಂಸದೀಯ ನೆಟ್‌ವರ್ಕ್‌ಗಳಿಂದ ನಿರ್ಬಂಧಿಸಲು ನಿರ್ಧರಿಸಿವೆ ಎಂದು ಸಂಸತ್ತಿನ ವಕ್ತಾರರು ತಿಳಿಸಿದ್ದಾರೆ. ಆದರೆ ಈ ಕ್ರಮವನ್ನು ಟಿಕ್‌ಟಾಕ್ ವಕ್ತಾರರು ವಿರೋಧಿಸಿದ್ದು, ಇದು ಕಂಪನಿಗೆ ಕೆಟ್ಟ ಹೆಸರು ತಂದುಕೊಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಅಮೆಜಾನ್‌ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ – 3 ತಿಂಗಳೊಳಗೆ 27 ಸಾವಿರ ಮಂದಿ ಮನೆಗೆ

    ಬ್ರಿಟನ್ ಕಳೆದ ವಾರ ಸರ್ಕಾರಿ ಫೋನ್‌ಗಳಲ್ಲಿ ಚೀನಾದ ಒಡೆತನದ ವೀಡಿಯೊ ಅಪ್ಲಿಕೇಶನ್ ಅನ್ನು ನಿಷೇಧಿಸಿತ್ತು. ಸೈಬರ್ ಭದ್ರತೆಯು ಸಂಸತ್ತಿನ ಪ್ರಮುಖ ಆದ್ಯತೆಯಾಗಿದೆ ಎಂದು ವಕ್ತಾರರು ಹೇಳಿದ್ದಾರೆ. ಅಮೆರಿಕ, ಕೆನಡಾ, ಬೆಲ್ಜಿಯಂ ಹಾಗೂ ಯುರೋಪಿಯನ್ ಕಮಿಷನ್ ಈಗಾಗಲೇ ಸರ್ಕಾರಿ ಸಾಧನಗಳಿಂದ ಈ ಅಪ್ಲಿಕೇಶನ್ ಅನ್ನು ನಿಷೇಧಿಸಿವೆ. ಇದನ್ನೂ ಓದಿ: 2 ವರ್ಷ ಬ್ಯಾನ್ ಬಳಿಕ ಫೇಸ್‌ಬುಕ್, ಯೂಟ್ಯೂಬ್‌ಗೆ ಮರಳಿದ ಟ್ರಂಪ್

  • ಭಾರತದ ಕ್ಷಮೆಯಾಚಿಸಿದ ಬ್ರಿಟೀಷ್ ವಿದೇಶಾಂಗ ಕಚೇರಿ

    ಭಾರತದ ಕ್ಷಮೆಯಾಚಿಸಿದ ಬ್ರಿಟೀಷ್ ವಿದೇಶಾಂಗ ಕಚೇರಿ

    ಲಂಡನ್: ಇಂಗ್ಲೆಂಡಿನ ಲಂಡನ್ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಇಂಗ್ಲೆಂಡ್ ವಿದೇಶಾಂಗ ಕಚೇರಿ ಕ್ಷಮೆಯಾಚಿಸಿದೆ.

    ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿದ್ದ ಕೆಲ ಸದಸ್ಯರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ರಾಯಭಾರಿ ಯಶ್‍ವರ್ಧನ್ ಕುಮಾರ್ ಸಿನ್ಹಾ ಅವರೊಂದಿಗೆ ಮಾತುಕತೆ ಮಾಡಿದ್ದೇವೆ ಎಂದು ಲಂಡನ್ ವಿದೇಶಾಂಗ ಕಚೇರಿ ಮತ್ತು ಕಾಮನ್ ವೆಲ್ತ್ ಕಚೇರಿ ತಿಳಿಸಿದೆ.

    ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಮತ್ತೆ ಭಾರತದ ತ್ರಿವರ್ಣ ಧ್ವಜ ಹಾರಿಸಲು ಬ್ರಿಟೀಷ್ ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿಸಿದೆ.

    ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಯಿಂದ ಭಾರತದೊಂದಿನ ಸಂಬಂಧ ಮತ್ತಷ್ಟು ಉತ್ತಮವಾಗಿದೆ. ಮತ್ತಷ್ಟು ಹತ್ತಿರದಿಂದ ಜೊತೆಯಾಗಿ ಕಾರ್ಯನಿರ್ವಹಿಸಲು ನಾವು ಬಯಸಿದ್ದೇವೆ ಎಂದು ಬ್ರಿಟೀಷ್ ವಿದೇಶಾಂಗ ಕಚೇರಿ ತಿಳಿಸಿದೆ.

    53 ಕಾಮನ್ ವೆಲ್ತ್ ದೇಶಗಳ ಧ್ವಜಗಳ ಮಧ್ಯೆ ಹಾರುತ್ತಿದ್ದ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ ಸುಟ್ಟಿರುವ ಗುಂಪಿನ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದು ಕೊಳ್ಳುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಇಂಗ್ಲೆಂಡ್ ಸರ್ಕಾರವನ್ನು ಆಗ್ರಹಿಸಿದೆ.

    ಏನಿದು ಘಟನೆ?
    ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧವಾಗಿ ಇಲ್ಲಿನ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಕೆಲವರು ಪ್ರತಿಭಟನೆ ನಡೆಸುತ್ತಿದ್ದರು. ಭಾರತದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳನ್ನು ಖಂಡಿಸುವ ಉದ್ದೇಶದಿಂದ ಸೇರಿದ್ದರು. ಪಾರ್ಲಿಮೆಂಟ್ ಸ್ಕ್ವೇರ್ ಮೇಲೆ ಹಾರಾಡುತ್ತಿದ್ದ ಭಾರತೀಯ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿರುವ ಪಾಕ್ ಹಾಗೂ ಖಲೀಸ್ತಾನದ ಕೆಲ ಪ್ರತಿನಿಧಿಗಳು ಅದನ್ನು ಸುಟ್ಟು ಹಾಕಿದ್ದಾರೆ. ಭಾರತದ ಧ್ವಜವನ್ನು ಕೆಳಗಿಳಿಸಿದ ಬಳಿಕ ಅದೇ ಜಾಗದಲ್ಲಿ ಪಾಕ್ ಧ್ವಜನ್ನು ಹಾರಿಸಿದ್ದಾರೆ. ಭದ್ರತಾ ಸಿಬ್ಬಂದಿ ಮುಂದುಗಡೆಯೇ ಪ್ರತಿಭಟನಾಕಾರರು ತ್ರಿವರ್ಣ ಧ್ಚಜವನ್ನು ಸುಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರತೀಯರು ಇಂಗ್ಲೆಂಡ್ ಸರ್ಕಾರವನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.