Tag: BRS

  • ತಡೆಗೋಡೆಗೆ ಕಾರು ಡಿಕ್ಕಿ- BRS ಶಾಸಕಿ ಲಾಸ್ಯ ನಂದಿತಾ ದುರ್ಮರಣ

    ತಡೆಗೋಡೆಗೆ ಕಾರು ಡಿಕ್ಕಿ- BRS ಶಾಸಕಿ ಲಾಸ್ಯ ನಂದಿತಾ ದುರ್ಮರಣ

    ಹೈದರಾಬಾದ್:‌ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ (BRS) ಶಾಸಕಿ ಜಿ ಲಾಸ್ಯ ನಂದಿತಾ (G Lasya Nanditha) (37) ದುರ್ಮರಣಕ್ಕೀಡಾಗಿದ್ದಾರೆ.

    ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್‌ನ (Hyderabad) ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.

    ನಂದಿತಾ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್‌ಪ್ರೆಸ್‌ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ನಿಧನ

    ನಂದಿತಾ ಅವರು ಫೆಬ್ರವರಿ 13 ರಂದು ಬಿಆರ್‌ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮರ್ರಿಗುಡ ಜಂಕ್ಷನ್‌ನಲ್ಲಿ ಇದೇ ರೀತಿಯ ರಸ್ತೆ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದರು.

    ಬಿಆರ್‌ಎಸ್‌ನ ಮಾಜಿ ಶಾಸಕ ದಿವಂಗತ ಜಿ ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ ಅವರು ಕಳೆದ ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಜಿ ವೆನ್ನೆಲ ಅವರನ್ನು ಸೋಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದರು.

  • ತೆಲಂಗಾಣ ಮಾಜಿ ಸಿಎಂ KCR ದಿಢೀರ್‌ ಆಸ್ಪತ್ರೆಗೆ ದಾಖಲು – ಬೆಂಬಲಿಗರಲ್ಲಿ ಆತಂಕ

    ತೆಲಂಗಾಣ ಮಾಜಿ ಸಿಎಂ KCR ದಿಢೀರ್‌ ಆಸ್ಪತ್ರೆಗೆ ದಾಖಲು – ಬೆಂಬಲಿಗರಲ್ಲಿ ಆತಂಕ

    ಹೈದರಾಬಾದ್‌: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (K Chandrashekar Rao )ಅವರು ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಚಂದ್ರಶೇಖರ್‌ ರಾವ್‌ ಅವರಿಂದು (ಡಿ.8) ಮುಂಜಾನೆ 2 ಗಂಟೆ ಸುಮಾರಿಗೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು, ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ (Hyderabad Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ

    ಕೆ. ಚಂದ್ರಶೇಖರ್ ರಾವ್ ಅವರು ಕುಸಿದು ಬಿದ್ದ ನಂತರ ಸೊಂಟ ಮುರಿತಕ್ಕೆ ಒಳಗಾಗಿಗಿರಬಹುದು ಎಂದು ವೈದ್ಯರು (Doctor) ಶಂಕಿಸಿದ್ದಾರೆ. ಆರೋಗ್ಯ ತಪಾಸಣೆ (ಸ್ಕ್ಯಾನಿಂಗ್‌) ನಡೆಸಿದ ಬಳಿಕ ನಿಜಾಂಶ ತಿಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ. ಕೆಸಿಆರ್‌ (KCR) ಕಳೆದ ಮೂರು ದಿನಗಳಿಂದ ತಮ್ಮ ಮನೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

    ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದ್ರೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (BRS) ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

  • ತೆಲಂಗಾಣದಲ್ಲಿ ಬಿಆರ್‌ಎಸ್‌ ಸೋಲು – ತನ್ನನ್ನು ತಾನೇ ಟ್ರೋಲ್‌ ಮಾಡಿಕೊಂಡ ಕೆಸಿಆರ್‌ ಪುತ್ರ

    ತೆಲಂಗಾಣದಲ್ಲಿ ಬಿಆರ್‌ಎಸ್‌ ಸೋಲು – ತನ್ನನ್ನು ತಾನೇ ಟ್ರೋಲ್‌ ಮಾಡಿಕೊಂಡ ಕೆಸಿಆರ್‌ ಪುತ್ರ

    ಹೈದರಾಬಾದ್: ತೆಲಂಗಾಣದಲ್ಲಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಆರ್‌ಎಸ್‌ ಪಕ್ಷಕ್ಕೆ ನಿರಾಸೆಯಾಗಿದೆ. ಪಕ್ಷದ ಹೀನಾಯ ಸೋಲನ್ನು ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರ ಹಾಗೂ ಮಾಜಿ ಸಚಿವ ಕೆ.ಟಿ.ರಾಮ ರಾವ್‌ ಒಪ್ಪಿಕೊಂಡಿದ್ದಾರೆ. ಅಲ್ಲದೇ ತಮ್ಮದೇ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ ತಮ್ಮನ್ನು ತಾವೇ ಟ್ರೋಲ್‌ ಮಾಡಿಕೊಂಡಿದ್ದಾರೆ.

    ಚುನಾವಣೆ ಫಲಿತಾಂಶಕ್ಕೂ ಮುನ್ನ ಕೆಟಿಆರ್ ಪೋಸ್ಟ್‌ ಮಾಡಿದ್ದ ಹಳೇ ಟ್ವೀಟ್‌ ಅನ್ನು ಮತ್ತೆ ಹಂಚಿಕೊಂಡಿದ್ದಾರೆ. ಹಳೇ ಟ್ವೀಟ್‌ನಲ್ಲಿ, ಕ್ಯಾಮೆರಾದ ಕಡೆಗೆ ಗನ್ ತೋರಿಸುತ್ತಿರುವ ಚಿತ್ರವಿದೆ. ಈ ಹಳೆಯ ಪೋಸ್ಟ್‌ನ ಶೀರ್ಷಿಕೆಯಲ್ಲಿ, “ಹ್ಯಾಟ್ರಿಕ್ ಲೋಡಿಂಗ್ 3.0. ಸಂಭ್ರಮಿಸಲು ಸಿದ್ಧರಾಗಿ” ಎಂದು ಕೆಟಿಆರ್ ಬರೆದುಕೊಂಡಿದ್ದರು. ಇದನ್ನೂ ಓದಿ: ಜನತಾ ಜನಾರ್ದನರಿಗೆ ನಮಿಸುತ್ತೇವೆ, ತೆಲಂಗಾಣದೊಂದಿಗಿನ ನಮ್ಮ ಬಾಂಧವ್ಯ ಮುರಿಯಲಾಗದು: ಮೋದಿ

    ಆದರೆ ಫಲಿತಾಂಶದ ನಂತರ ಸಚಿವರು ತಮ್ಮದೇ ಪೋಸ್ಟ್ ಅನ್ನು ಮತ್ತೆ ಹಂಚಿಕೊಂಡಿದ್ದಾರೆ. ಅದರಲ್ಲಿ ‘ಇವನಿಗೆ ವಾಯಸ್ಸಾಗಿದೆ. ಗುರಿ ತಪ್ಪಿದೆ’ ಎಂದು ಬರೆದುಕೊಂಡಿದ್ದಾರೆ. ಪಕ್ಷದ ಸೋಲಿಗೆ ತಮ್ಮ ಕಾಲನ್ನು ತಾವೇ ಎಳೆದುಕೊಂಡಿದ್ದಾರೆ.

    ಸಚಿವರ ಟ್ವೀಟ್‌ಗೆ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್, ಎಷ್ಟೋ ಮಂದಿ ಸೋಲನ್ನು ಮನೋಹರವಾಗಿ ಸ್ವೀಕರಿಸುವುದಿಲ್ಲ. ಸೋಲಿನ ನಂತರವೂ ನಿಮ್ಮ ಹಾಸ್ಯಪ್ರಜ್ಞೆಯನ್ನು ನೀವು ಉಳಿಸಿಕೊಂಡಿರುವುದು ಒಳ್ಳೆಯದು’ ಎಂದು ರಿಯಾಕ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಲೋಕ ಸಮರಕ್ಕೆ ಬೂಸ್ಟ್‌ – ಸೆಮಿಫೈನಲ್‌ ಗೆದ್ದ ಮೋದಿ

    ‘ತಮ್ಮನ್ನು ತಾವೇ ಟ್ರೋಲ್‌ ಮಾಡಿಕೊಳ್ಳುವುದು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮತ್ತೊಬ್ಬ ನೆಟ್ಟಿಗ ಪ್ರತಿಕ್ರಿಯಿಸಿದ್ದಾರೆ. ಇನ್ನೊಬ್ಬರು, ‘ಬೆಟರ್‌ ಲಕ್‌ ನೆಕ್ಸ್ಟ್‌ ಟೈಮ್‌’ ಎಂದು ಸಚಿವರ ಪೋಸ್ಟ್‌ಗೆ ಕಾಮೆಂಟ್‌ ಹಾಕಿದ್ದಾರೆ.

  • ಚುನಾವಣಾ ಫಲಿತಾಂಶದ ಬಗ್ಗೆ INDIA ಒಕ್ಕೂಟ ಇವಿಎಂ ಮಷಿನ್‌ಗಳನ್ನು ದೂರಿದರೆ ಆಶ್ಚರ್ಯವಿಲ್ಲ: ಅಜಿತ್ ಪವಾರ್

    ಚುನಾವಣಾ ಫಲಿತಾಂಶದ ಬಗ್ಗೆ INDIA ಒಕ್ಕೂಟ ಇವಿಎಂ ಮಷಿನ್‌ಗಳನ್ನು ದೂರಿದರೆ ಆಶ್ಚರ್ಯವಿಲ್ಲ: ಅಜಿತ್ ಪವಾರ್

    ಮುಂಬೈ: ವಿಧಾನಸಭೆ ಚುನಾವಣೆ (Assembly Election) ಫಲಿತಾಂಶದ ಕುರಿತು ಕೆಲವರು ಇವಿಎಂ ಮಷಿನ್‌ಗಳನ್ನು (EVM Machine) ದೂಷಿಸಿದರೆ ಆಶ್ಚರ್ಯವಿಲ್ಲ ಎಂದು ಮಹಾರಾಷ್ಟ್ರ (Maharashtra) ಉಪ ಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಹೇಳಿದ್ದಾರೆ.

    ನಾಲ್ಕು ರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ (BJP) ಅಧಿಕಾರದ ಚುಕ್ಕಾಣಿ ಹಿಡಿಯಲು ತುದಿಗಾಲಿನಲ್ಲಿ ನಿಂತಿದೆ. ಇನ್ನು ತೆಲಂಗಾಣದಲ್ಲಿ (Telangana) ಕಾಂಗ್ರೆಸ್ (Congress) ಭಾರೀ ಮುನ್ನಡೆ ಸಾಧಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಜಿತ್ ಪವಾರ್, ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕಾರ್ಯವನ್ನು ಜನ ಮೆಚ್ಚುತ್ತಿದ್ದಾರೆ. ಇಂಡಿಯಾ (INDIA) ಮೈತ್ರಿಕೂಟದ ಜನರು ಫಲಿತಾಂಶಗಳಿಗಾಗಿ ಇವಿಎಂಗಳನ್ನು (ವಿದ್ಯುನ್ಮಾನ ಮತಯಂತ್ರಗಳು) ದೂಷಿಸಲು ಪ್ರಾರಂಭಿಸಿದರೆ ಆಶ್ಚರ್ಯವಿಲ್ಲ ಎಂದರು. ಇದನ್ನೂ ಓದಿ: ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಭವಿಷ್ಯವಿಲ್ಲ: ಸಂಸದ ಮುನಿಸ್ವಾಮಿ

    ನಾನು ಹಿಂದೆ ಸರ್ಕಾರದಲ್ಲಿದ್ದಾಗ, ಇವಿಎಂಗಳನ್ನು ತಿದ್ದುಪಡಿ ಮಾಡುವುದು ಅಸಾಧ್ಯ ಎಂಬುದು ನನ್ನ ಅಭಿಪ್ರಾಯವಾಗಿತ್ತು. ಕೇವಲ ಒಬ್ಬ ವ್ಯಕ್ತಿ ಇವಿಎಂಗಳನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಈ ಮೂರು ರಾಜ್ಯಗಳಲ್ಲಿ (ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ) ಇವಿಎಂಗಳನ್ನು ದೂಷಿಸಿದರೆ, ತೆಲಂಗಾಣದ ಬಗ್ಗೆ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: RSS, ABVP ಕಾರ್ಯಕರ್ತ ರೇವಂತ್‌ ರೆಡ್ಡಿ ಈಗ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ – ತೆಲಂಗಾಣಕ್ಕೆ ಸಿಎಂ ಯಾರು?

    ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಣ ಮತ್ತು ಅವರ ಕಾರ್ಯವನ್ನು ಜನ ಮೆಚ್ಚುತ್ತಿದ್ದಾರೆ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು. ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿ ಬಿಆರ್‌ಎಸ್ (BRS) ಹಿಂದೆ ಬಿದ್ದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬಿಆರ್‌ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrashekar Rao) ಅತಿಯಾದ ಆತ್ಮವಿಶ್ವಾಸವನ್ನು ತೋರಿಸಿದ್ದು, ತಮ್ಮ ಪಕ್ಷದ ನೆಲೆಯ ವಿಸ್ತರಣೆಗಾಗಿ ಮಹಾರಾಷ್ಟ್ರಕ್ಕೆ ಬಂದಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: 51,000 ಮತಗಳ ಅಂತರದ ಜಯ – ಗೆಲುವನ್ನು ಮೋದಿಗೆ ಅರ್ಪಿಸಿದ ವಸುಂಧರಾ ರಾಜೆ

    ಚಂದ್ರಶೇಖರ್ ರಾವ್ ತಮ್ಮ ರಾಜ್ಯದಲ್ಲಿ ಬೃಹತ್ ರ‍್ಯಾಲಿಗಳನ್ನು ನಡೆಸಿದರು ಮತ್ತು ಹಲವಾರು ಭರವಸೆಗಳನ್ನು ನೀಡಿದರು. ಆದರೆ ಅವರನ್ನು ಅವರ ಸ್ವಂತ ರಾಜ್ಯವೇ ತಿರಸ್ಕರಿಸಿದೆ. ಜನರ ತೀರ್ಮಾನವೇ ಸರ್ವೋಚ್ಚ ಎಂದರು. ಇದನ್ನೂ ಓದಿ: ದೇಶಾದ್ಯಂತ ಜಾತಿ ಗಣತಿಗೆ ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್‌ ಶಾಕ್‌

  • ಕೆಸಿಆರ್‌, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ

    ಕೆಸಿಆರ್‌, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ

    ಹೈದರಾಬಾದ್: ತೆಲಂಗಾಣ (Telangana Election Results) ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ (Congress) ಸ್ಪಷ್ಟ ಬಹುಮತ ಸಾಧಿಸುವುದು ಖಚಿತವಾಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಪ್ರತಿಕ್ರಿಯಿಸಿದ್ದಾರೆ.

    ತೆಲಂಗಾಣದ ಜನರು ಬದಲಾವಣೆ ಬಯಸಿದ್ದಾರೆ. ಪ್ರಗತಿ ಮತ್ತು ಅಭಿವೃದ್ಧಿಗೆ ತಮ್ಮ ಬೆಂಬಲ ಎಂದು ನಿರ್ಧರಿಸಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ. ಅವರೇ ತಂಡದ ನಾಯಕ ಎಂದು ಡಿಕೆಶಿ ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ಮಾಮಾಜಿ ಮ್ಯಾಜಿಕ್‌ – ಬಿಜೆಪಿ ಸುನಾಮಿಗೆ ಕಾಂಗ್ರೆಸ್‌ ಕೊಚ್ಚಿ ಹೋಗಿದ್ದು ಹೇಗೆ?

    ಸಿಎಂ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ನಡೆದಿತ್ತು. ನಾನು ಕೆಸಿಆರ್ ಅಥವಾ ಕೆಟಿಆರ್ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ತೆಲಂಗಾಣ ಜನರೇ ಅವರಿಗೆ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

    ಆಂಧ್ರದಿಂದ ಬೇರ್ಪಟ್ಟು ಹೊಸ ರಾಜ್ಯವಾಗಿ ಉದಯವಾದ ನಂತರ ತೆಲಂಗಾಣದಲ್ಲಿ ಎರಡು ಬಾರಿ ಚುನಾವಣೆ ನಡೆದಿದೆ. ಎರಡು ಬಾರಿಯೂ ಕೆ.ಚಂದ್ರಶೇಖರ್‌ ರಾವ್‌ ನೇತೃತ್ವದ ಬಿಆರ್‌ಎಸ್‌ ಪಕ್ಷವು ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿದೆ. ಈ ಬಾರಿ ಚುನಾವಣೆಯು ಕೆಸಿಆರ್‌ಗೆ ಸುಲಭದ ಹಾರಿಯಾಗಿ ಉಳಿದಿಲ್ಲವೆಂಬ ಸೂಚನೆಯನ್ನು ಮತಗಟ್ಟೆ ಸಮೀಕ್ಷೆಗಳು ನೀಡಿದ್ದವು. ಅದರಂತೆ ಕಾಂಗ್ರೆಸ್‌ ರಾಜ್ಯದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ – #ModiKiGuarantee ಫುಲ್‌ ಟ್ರೆಂಡ್‌

    119 ಮತ ಕ್ಷೇತ್ರಗಳಿರುವ ತೆಲಂಗಾಣದಲ್ಲಿ ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್‌ 66, ಬಿಆರ್‌ಎಸ್‌ 39, ಬಿಜೆಪಿ 9, ಎಐಎಂಐಎಂ 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

  • ಕರ್ನಾಟಕದಲ್ಲಿ ನಮ್ಮ ಮುಟ್ಟಾಳತನದಿಂದಲೇ ಅಧಿಕಾರ ಕಳೆದುಕೊಂಡ್ವಿ – ಈಶ್ವರಪ್ಪ

    ಕರ್ನಾಟಕದಲ್ಲಿ ನಮ್ಮ ಮುಟ್ಟಾಳತನದಿಂದಲೇ ಅಧಿಕಾರ ಕಳೆದುಕೊಂಡ್ವಿ – ಈಶ್ವರಪ್ಪ

    – ಸಿದ್ದರಾಮಯ್ಯ, ಡಿಕೆಶಿ ಸ್ವರ್ಗದಲ್ಲಿದ್ದಾರೆ ಎಂದು ಮಾಜಿ ಸಚಿವ ವ್ಯಂಗ್ಯ
    – ಕಾಂಗ್ರೆಸ್‌ನಲ್ಲಿ ದಿನಕ್ಕೊಬ್ಬ ಸಿಎಂ ಹುಟ್ಟಿಕೊಳ್ಳುತ್ತಿದ್ದಾರೆ ಎಂದ ಈಶ್ವರಪ್ಪ

    ಬೆಂಗಳೂರು: ಮಧ್ಯಪ್ರದೇಶ, ಛತ್ತಿಸ್‌ಗಢ (Chhattisgarh), ರಾಜಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಉತ್ಸಾಹದಲ್ಲಿದೆ. ಈ ನಡುವೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ (Eshwarappa) ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದಾರೆ.

    4 ರಾಜ್ಯಗಳ ಚುನಾವಣಾ ಫಲಿತಾಂಶ (4 State Election Results) ನೋಡಿದ ಮೇಲೆ ನಮ್ಮ ದೇಶಕ್ಕೆ ಭವಿಷ್ಯ ಇದೆ ಅನ್ನಿಸಿದೆ. ಆದ್ರೆ ಕರ್ನಾಟಕದ ಮತದಾರರ (Karnataka Voters) ವಿಚಾರದಲ್ಲಿ ನಾವು ಮಾಡಿಕೊಂಡ ಮುಟ್ಟಾಳತನದಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು. ರಾಜ್ಯದಲ್ಲಿಯೂ ಬಿಜೆಪಿ ಒಟ್ಟಾಗಿ ಹೋಗಿದ್ದರೆ, ಅಧಿಕಾರ ಕಳೆದುಕೊಳ್ಳುತ್ತಿರಲಿಲ್ಲ ಎಂದು ಅವಲೋಕನ ಮಾಡಿಕೊಂಡಿದ್ದಾರೆ.

    ಕರ್ನಾಟಕದಲ್ಲಿ ಬಿಜೆಪಿ (Karnataka BJP) ಒಟ್ಟಾಗಿ ಹೋಗದೇ ಇದ್ದದ್ದು, ನಮ್ಮ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾದೆವು. ಈ ನಡುವೆ ಕಾಂಗ್ರೆಸ್‌ ಬಡವರಿಗೆ ಕೊಟ್ಟ ಗ್ಯಾರಂಟಿಗಳನ್ನ ಅರ್ಥಮಾಡಿಕೊಳ್ಳುವಲ್ಲಿ ವಿಫಲರಾದೆವು. ಇದೆಲ್ಲವೂ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ತೆಲಂಗಾಣ ಜನರ ಹೃದಯದಲ್ಲಿ ಗಾಂಧಿ ಕುಟುಂಬಕ್ಕೆ ವಿಶೇಷ ಸ್ಥಾನವಿದೆ – ಈ ಬಾರಿ ಸರ್ಕಾರ ನಮ್ಮದೇ ಎಂದ ಕಾಂಗ್ರೆಸ್ ಸಂಸದ

    ಮಧ್ಯಪ್ರದೇಶ, ರಾಜಸ್ಥಾನ, ಛತ್ತಿಸ್‌ಗಢ ರಾಜ್ಯಗಳೂ ಸೇರಿದಂತೆ ಇಡೀ ದೇಶದಲ್ಲಿ ಗ್ಯಾರಂಟಿ ನೀಡಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಪ್ರಯತ್ನಿಸಿತ್ತು. ಈ ಚುನಾವಣೆಗಳಲ್ಲಿ ಅದು ವಿಫಲವಾಗಿದೆ. ಅಲ್ಲದೇ ಹಿಂದೂ-ಮುಸ್ಲಿಮರ ಬಗೆಗಿನ ತುಷ್ಟೀಕರಣ ರಾಜಕೀಯ ಇವೆಲ್ಲವೂ ಕಾಂಗ್ರೆಸ್‌ ಸೋಲಿಗೆ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ನಾಯಕರು ಇಂದೇ ಪಾಠ ಕಲಿಯಬೇಕು. ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ನಾಯಕರು ಮಾಡಿದ ತಪ್ಪಿಗೆ‌ ಕಾರ್ಯಕರ್ತರು ನೊಂದಿದ್ದಾರೆ. ಆದ್ದರಿಂದ ನಾವೆಲ್ಲ ಒಂದಾಗಿ ಮುಂದಿನ ಚುನಾವಣೆ ಎದುರಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: 2 ದೊಡ್ಡ ರಾಜ್ಯಗಳಲ್ಲಿ ಗೆಲುವು ಸಿಕ್ಕಿದೆ, ಈ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಎಂದು ಹೇಳ್ತಿದೆ: ಮುನಿರತ್ನ

    ಸಿದ್ದು, ಡಿಕೆಶಿ ಸ್ವರ್ಗದಲ್ಲಿದ್ದಾರೆ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಸ್ವರ್ಗದಲ್ಲಿದ್ದಾರೆ. ನಮ್ಮ ಸ್ಥಾನ ಯಾರೂ ಕಸಿದುಕೊಳ್ಳಲಾಗದು ಎಂಬ ಭ್ರಮೆಯಲ್ಲಿದ್ದಾರೆ. ಈ ಭ್ರಮೆಯಿಂದ ಹೊರಬರಬೇಕಾದ್ರೆ ಮುಂದಿನ ಚುನಾವಣೆವರೆಗೆ ಕಾಯಬೇಕು ಎಂದಿದ್ದಾರೆ.

    ಅಲ್ಲದೇ ಕಾಂಗ್ರೆಸ್‌ನಲ್ಲಿ ಪ್ರತಿದಿನ ಒಬ್ಬೊಬ್ಬ ಮುಖ್ಯಮಂತ್ರಿ ಹುಟ್ಟಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನೇ ತಿದ್ದುಪಡಿ ಮಾಡಿ 224 ಮುಖ್ಯಮಂತ್ರಿಗಳನ್ನ ಮಾಡಿಬಿಟ್ಟರೆ ಯಾರಿಗೂ ಸಮಸ್ಯೆಯಿಲ್ಲ ಎಂದು ಲೇವಡಿ ಮಾಡಿದ್ದಾರೆ.

  • ತೆಲಂಗಾಣ ಜನರ ಹೃದಯದಲ್ಲಿ ಗಾಂಧಿ ಕುಟುಂಬಕ್ಕೆ ವಿಶೇಷ ಸ್ಥಾನವಿದೆ – ಈ ಬಾರಿ ಸರ್ಕಾರ ನಮ್ಮದೇ ಎಂದ ಕಾಂಗ್ರೆಸ್ ಸಂಸದ

    ತೆಲಂಗಾಣ ಜನರ ಹೃದಯದಲ್ಲಿ ಗಾಂಧಿ ಕುಟುಂಬಕ್ಕೆ ವಿಶೇಷ ಸ್ಥಾನವಿದೆ – ಈ ಬಾರಿ ಸರ್ಕಾರ ನಮ್ಮದೇ ಎಂದ ಕಾಂಗ್ರೆಸ್ ಸಂಸದ

    ಹೈದರಾಬಾದ್‌: ತೆಲಂಗಾಣದಲ್ಲಿ ಕಾಂಗ್ರೆಸ್‌ (Telangana Congress) ಭಾರೀ ಮುನ್ನಡೆ ಸಾಧಿಸಿದ್ದು, ಬಹುತೇಕ ಅಧಿಕಾರಕ್ಕೆ ಬಂದಂತಿದೆ. ಕಾಂಗ್ರೆಸ್‌ ನಾಯಕರು ಸಹ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸ ಹೊರಹಾಕಿದ್ದಾರೆ.

    ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ತೆಲಂಗಾಣ ಕಾಂಗ್ರೆಸ್‌ ಸಂಸದ ಉತ್ತಮ್ ಕುಮಾರ್ ರೆಡ್ಡಿ (Uttam Kumar Reddy), ತೆಲಂಗಾಣ ಜನರ ಹೃಯದಲ್ಲಿ ಗಾಂಧಿ ಕುಟುಂಬಕ್ಕೆ ವಿಶೇಷ ಸ್ಥಾನವಿದೆ. 2014 ಮತ್ತು 2018ರ ಚುನಾವಣೆಯಲ್ಲಿ ನಾವು ಮಾಡಿದ ತಪ್ಪನ್ನು ಈ ಬಾರಿ ಸರಿಪಡಿಸಿಕೊಂಡಿದ್ದೇವೆ. ಆದ್ದರಿಂದ ಗೆಲುವಿನ ಹಾದಿಯಲ್ಲಿದ್ದೇವೆ. ಮತ್ತೊಂದು ಕಡೆ ಬಿಆರ್‌ಎಸ್‌ ಸರ್ಕಾರದ ಅಸಮರ್ಥತೆ, ದುರಹಂಕಾರ, ಭ್ರಷ್ಟಾಚಾರ ಅವರ ಸೋಲಿಗೆ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಕೈ ಹಿಡಿಯುತ್ತಾ ಗ್ಯಾರಂಟಿ?
    12 ಗಂಟೆ ಸಮೀಪಿಸುತ್ತಿದ್ದಂತೆ ತೆಲಂಗಾಣದಲ್ಲಿ ಕಾಂಗ್ರೆಸ್‌ 64, BRS 42, ಬಿಜೆಪಿ ಹಾಗೂ ಇತರೇ ಪಕ್ಷಗಳು 05 ಸ್ಥಾನಗಳಲ್ಲಿದೆ. ಹಾಗಾಗಿ ಬಹುತೇಕ ಕಾಂಗ್ರೆಸ್‌ ಅಧಿಕಾರ ಹಿಡಿಯುವ ವಿಶ್ವಾಸ ಹೊಂದಿದೆ. ಇದನ್ನೂ ಓದಿ: 2 ದೊಡ್ಡ ರಾಜ್ಯಗಳಲ್ಲಿ ಗೆಲುವು ಸಿಕ್ಕಿದೆ, ಈ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಎಂದು ಹೇಳ್ತಿದೆ: ಮುನಿರತ್ನ

    2023ರ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಸರ್ಕಾರದ ಕೈ ಹಿಡಿದಿತ್ತು. ಇದೇ ತಂತ್ರವನ್ನು ತೆಲಂಗಾಣ ಚುನಾವಣೆಯಲ್ಲಿ ಅನುಸರಿಸಲಾಗಿತ್ತು. 6 ಪ್ರಮುಖ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಕರ್ನಾಟಕದ ಪ್ರಮುಖ ನಾಯಕರೂ ತೆಲಂಗಾಣದ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು.

    ತೆಲಂಗಾಣದಲ್ಲಿ ಕಾಂಗ್ರೆಸ್‍ನಲ್ಲಿ 6 ಗ್ಯಾರಂಟಿ
    * ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ. – ಸೊಸೆಗೆ 2,500 ರೂ.
    * ಗ್ಯಾರಂಟಿ 2 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ)
    * ಗ್ಯಾರಂಟಿ 3 – ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ
    * ಗ್ಯಾರಂಟಿ 4 – 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್
    * ಗ್ಯಾರಂಟಿ 5 – ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು
    * ಗ್ಯಾರಂಟಿ 6 – ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್

    ಎಲ್ಲಿ ಎಷ್ಟು ಮ್ಯಾಜಿಕ್ ನಂಬರ್?
    ಮಧ್ಯಪ್ರದೇಶ: ಒಟ್ಟು ಸ್ಥಾನ- 230, ಸರಳ ಬಹುಮತಕ್ಕೆ-116, ರಾಜಸ್ಥಾನ: ಒಟ್ಟು ಸ್ಥಾನ- 199, ಸರಳ ಬಹುಮತಕ್ಕೆ-100, ಛತ್ತಿಸ್‌ಗಢ: ಒಟ್ಟು ಸ್ಥಾನ- 90, ಸರಳ ಬಹುಮತಕ್ಕೆ-46, ತೆಲಂಗಾಣ- ಒಟ್ಟು ಸ್ಥಾನ-119, ಸರಳ ಬಹುಮತಕ್ಕೆ-60. ಇದನ್ನೂ ಓದಿ: ಭೋಪಾಲ್‌ ಅನಿಲ ದುರಂತಕ್ಕೆ 39 ವರ್ಷ – ಇನ್ನೂ ಮಾಸಿಲ್ಲ 3,000ಕ್ಕೂ ಹೆಚ್ಚು ಜನರನ್ನ ಬಲಿ ಪಡೆದ ಕಹಿ ನೆನಪು

  • Election Results : ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಮುನ್ನಡೆ

    Election Results : ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಮುನ್ನಡೆ

    ಹೈದಾರಾಬಾದ್‌: ತೆಲಂಗಾಣದಲ್ಲಿ (Telangana) ಕಾಂಗ್ರೆಸ್‌ಗೆ (Congress) ಭಾರೀ ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ.

    ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ (Revanth Reddy) ನಿವಾಸದಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಕಾರ್ಯಕರ್ತರು ಸಿಹಿ ಹಂಚುತ್ತಿದ್ದಾರೆ.  ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

    ಬೆಳಗ್ಗೆ 10:15ರ ಟ್ರೆಂಡ್‌ ಪ್ರಕಾರ ಬಿಆರ್‌ಎಸ್‌ 50, ಕಾಂಗ್ರೆಸ್‌ 60, ಬಿಜೆಪಿ 3, ಎಐಎಂಐಎಂ 5 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಒಟ್ಟು 119 ಸ್ಥಾನಗಳಿದ್ದು ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದೆ.

    ತೆಲಂಗಾಣದಲ್ಲಿ 2018 ರ ಚುನಾವಣೆಯಲ್ಲಿ ಬಿಆರ್‌ಎಸ್‌ 88 ಸೀಟ್‌ಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 19, ಎಐಎಂಐಎಂ 7, ಟಿಡಿಪಿ 2 ಸ್ಥಾನಗಳನ್ನು ಗೆದ್ದಿದ್ದವು. ಬಿಜೆಪಿ ಒಂದು ಕ್ಷೇತ್ರದಲ್ಲಿ ಮಾತ್ರ ಜಯ ಸಾಧಿಸಿತ್ತು.

  • Election Results: ಛತ್ತಿಸ್‌ಗಢದಲ್ಲಿ ಬಿಜೆಪಿ-ಕಾಂಗ್ರೆಸ್‌ ಹಾವು ಏಣಿ ಆಟ

    Election Results: ಛತ್ತಿಸ್‌ಗಢದಲ್ಲಿ ಬಿಜೆಪಿ-ಕಾಂಗ್ರೆಸ್‌ ಹಾವು ಏಣಿ ಆಟ

    ರಾಯಪುರ: ಛತ್ತಿಸ್‌ಗಢದಲ್ಲಿ ಸದ್ಯ ಬಿಜೆಪಿ-ಕಾಂಗ್ರೆಸ್‌ (Congress, BJP) ನಡುವೆ ಹಾವು ಏಣಿ ಆಟ ಶುರುವಾಗಿದೆ. ಜಿದ್ದಾ ಜಿದ್ದಿ ಕಣದಲ್ಲಿ ಒಮ್ಮೆ ಬಿಜೆಪಿ, ಒಮ್ಮೆ ಕಾಂಗ್ರೆಸ್‌ ನಡುವೆ ಏರಿಳಿತ ಕಂಡುಬರುತ್ತಿದೆ.

    ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಿದೆ. ಬೆಳಗ್ಗೆ 9:35ರ ವರೆಗೂ ಮುನ್ನಡೆ ಸಾಧಿಸಿದ್ದ ಆಡಳಿತ ಪಕ್ಷ ಕಾಂಗ್ರೆಸ್‌ನಲ್ಲಿ ಇದ್ದಕ್ಕಿದ್ದಂತೆ ಒಂದೊಂದೇ ಸ್ಥಾನ ಇಳಿಕೆಯಾಗುತ್ತಿರುವುದು ಕಂಡುಬರುತ್ತಿದೆ.

    ಬೆಳಗ್ಗೆ 9:15ರ ವೇಳೆಗೆ ಛತ್ತಿಸ್‌ಗಢದಲ್ಲಿ (Chhattisgarh) ಬಿಜೆಪಿ 30, ಕಾಂಗೆಸ್ 49, ಇತರೇ 1 ಸ್ಥಾನಗಳಲ್ಲಿ, ಬೆಳಗ್ಗೆ 9:35ರ ವೇಳೆಗೆ ಬಿಜೆಪಿ 31, ಕಾಂಗೆಸ್ 59, ಇತರೇ 2 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. 10:05 ಗಂಟೆ ವೇಳೆಗೆ ಬಿಜೆಪಿ 42, ಕಾಂಗ್ರೆಸ್‌ 46 ಹಾಗೂ ಇತರೇ 2 ಸ್ಥಾನಕ್ಕೆ ಬಂದು ನಿಂತಿತ್ತು. ಆದ್ರೆ 10:06 ಗಂಟೆ ವೇಳೆಗೆ ಪುನಃ ಬಿಜೆಪಿ 45, ಕಾಂಗ್ರೆಸ್‌ 44, ಇತರೇ 1 ಸ್ಥಾನಕ್ಕೆ ಬಂದು ನಿಂತಿದೆ. ಸದ್ಯ ಛತ್ತಿಸ್‌ಗಡದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಆಡಳಿತದಲ್ಲಿದೆ. ಪ್ರತಿ 5 ನಿಮಿಷಕ್ಕೆ ಫಲಿತಾಂಶ ಏರಿಳಿತ ಕಂಡುಬರುತ್ತಿದೆ.

    ಎಲ್ಲಿ ಎಷ್ಟು ಮ್ಯಾಜಿಕ್ ನಂಬರ್?
    ಮಧ್ಯಪ್ರದೇಶ: ಒಟ್ಟು ಸ್ಥಾನ- 230, ಸರಳ ಬಹುಮತಕ್ಕೆ-116, ರಾಜಸ್ಥಾನ: ಒಟ್ಟು ಸ್ಥಾನ- 199, ಸರಳ ಬಹುಮತಕ್ಕೆ-100, ಛತ್ತಿಸ್‌ಗಢ: ಒಟ್ಟು ಸ್ಥಾನ- 90, ಸರಳ ಬಹುಮತಕ್ಕೆ-46, ತೆಲಂಗಾಣ- ಒಟ್ಟು ಸ್ಥಾನ-119, ಸರಳ ಬಹುಮತಕ್ಕೆ-60.

  • Madhya Pradesh: ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಸಿಎಂ ಅಭಿನಂದನೆ ಪೋಸ್ಟರ್‌ ಹಾಕಿದ ಕಾಂಗ್ರೆಸ್‌

    Madhya Pradesh: ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಸಿಎಂ ಅಭಿನಂದನೆ ಪೋಸ್ಟರ್‌ ಹಾಕಿದ ಕಾಂಗ್ರೆಸ್‌

    – ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

    ಭೋಪಾಲ್:‌ ಮಧ್ಯಪ್ರದೇಶದಲ್ಲಿ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ ಗೆಲುವು ಘೋಷಿಸಿಕೊಂಡಿದೆ. ರಾಜಧಾನಿ ಭೋಪಾಲ್‌ನಲ್ಲಿರುವ ಪಕ್ಷದ ಕಚೇರಿಯ ಮುಂಭಾಗ ಕಮಲ್‌ನಾಥ್‌ ಅವರು ಮುಖ್ಯಮಂತ್ರಿಯಾಗಿ ಅಭಿನಂದನೆ ಸ್ವೀಕರಿಸುತ್ತಿರುವ ದೊಡ್ಡ ಪೋಸ್ಟರ್‌ ಸಹ ಅಳವಡಿಸಲಾಗಿದೆ. ‘ಮುಖ್ಯಮಂತ್ರಿಯಾದ ಗೌರವಾನ್ವಿತ ಕಮಲ್ ನಾಥ್ ಅವರಿಗೆ ಅಭಿನಂದನೆಗಳು’ ಎಂದು ಪೋಸ್ಟರ್‌ನಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.

    ಇನ್ನೂ ಭಾನುವಾರ (ಇಂದು) ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಚುನಾವಣಾ ಅಭ್ಯರ್ಥಿ ಕಮಲ್‌ನಾಥ್‌, ಬಿಜೆಪಿಐ ಆರಂಭಿಕ ಮುನ್ನಡೆಯ ನಡುವೆಯೂ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ, ಛತ್ತಿಸ್‌ಗಡದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ – ಕೈ ಹಿಡಿಯುತ್ತಾ ಗ್ಯಾರಂಟಿ?

    ನಾವು ಈವರೆಗೆ ಯಾವುದೇ ಟ್ರೆಂಡ್‌ ನೋಡಿಲ್ಲ. 11 ಗಂಟೆವರೆಗೆ ಟ್ರೆಂಡ್‌ ನೋಡುವ ಅಗತ್ಯವೂ ಇಲ್ಲ. ನಾನು ಮಧ್ಯಪ್ರದೇಶದ ಮತದಾರರನ್ನು ನಂಬುತ್ತೇನೆ. ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ನನಗಿದೆ. ಜನ ಯಾವುದೇ ತೀರ್ಪು ಕೊಟ್ಟರೂ ನಾವು ಸ್ವೀಕರಿಸಲು ಸಿದ್ಧ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಈ ಬಾರಿಯೂ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಅಶೋಕ್‌ ಗೆಹ್ಲೋಟ್‌ ವಿಶ್ವಾಸ

    ಮಧ್ಯ ಪ್ರದೇಶದಲ್ಲಿ 230 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ. ಬೆಳಗ್ಗೆ 9:35ರ ವೇಳೆಗೆ ಬಿಜೆಪಿ 138 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 91, ಇತರೇ ಪಕ್ಷಗಳು 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಇದನ್ನೂ ಓದಿ: ಕೈ ಗ್ಯಾರಂಟಿಯೋ – ಮೋದಿ ಜನಪ್ರಿಯತೆಯೋ; ಇಂದು 4 ರಾಜ್ಯಗಳ ಚುನಾವಣಾ ಫಲಿತಾಂಶ – ಯಾರಿಗೆ ಎಲ್ಲಿ ಸಿಗುತ್ತೆ ಅಧಿಕಾರದ ಚುಕ್ಕಾಣಿ?