Tag: BSY

  • ಲೀಲಾವತಿ ಅಂತಿಮ ದರ್ಶನ ಪಡೆದ ಹಾಲಿ, ಮಾಜಿ ಸಿಎಂ

    ಲೀಲಾವತಿ ಅಂತಿಮ ದರ್ಶನ ಪಡೆದ ಹಾಲಿ, ಮಾಜಿ ಸಿಎಂ

    ಹಿರಿಯ ನಟಿ ಲೀಲಾವತಿ (Leelavathi) ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದೀಗ ಹಾಲಿ ಸಿಎಂ ಸಿದ್ದರಾಮಯ್ಯ(Siddaramaiah), ಮಾಜಿ ಸಿಎಂ ಯಡಿಯೂರಪ್ಪ (Yediyurappa) ಅವರು ಲೀಲಾವತಿ ಅಂತಿಮ ದರ್ಶನ ಪಡೆದಿದ್ದಾರೆ.

    ನಿನ್ನೆ (ಡಿ.8) ಲೀಲಾವತಿ ನಿಧನದ ಸುದ್ದಿ ಕೇಳ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದರು. ಇಂದು (ಡಿ.9) ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಈ ವೇಳೆ, ವಿನೋದ್‌ ರಾಜ್‌ ಭೇಟಿಯಾಗಿ ಸಿದ್ದರಾಮಯ್ಯ ಅವರು ಸಂತೈಸಿ ಧೈರ್ಯ ತುಂಬಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಲೀಲಾವತಿ ಅಂತಿಮ ದರ್ಶನದ ಬಳಿಕ ವಿನೋದ್‌ ರಾಜ್‌ಗೆ ಸಾಂತ್ವನ ಹೇಳಿದ್ದಾರೆ.

    ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಕಲಾವಿದರು, ಆಪ್ತರು, ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಸೋಲದೇವನಹಳ್ಳಿ ತೋಟದಲ್ಲಿ ಲೀಲಾವತಿ ಅವರ ಅಂತ್ಯ ಸಂಸ್ಕಾರ ಮಧ್ಯಾಹ್ನ 3:30ಕ್ಕೆ ನೆರವೇರಲಿದೆ. ಇದನ್ನೂ ಓದಿ:ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪಿಎಂ ಮೋದಿ ಸಂತಾಪ

    ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ (ಡಿ.8) ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಡಿಸೆಂಬರ್ 8ರಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ಇಹಲೋಕ ತ್ಯಜಿಸಿದ್ದರು.

  • `ಗಂಧದಗುಡಿ’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಯಡಿಯೂರಪ್ಪ

    `ಗಂಧದಗುಡಿ’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಯಡಿಯೂರಪ್ಪ

    ವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್(Puneeth Rajkumar) ನಟಿಸಿದ ಕೊನೆಯ ಸಿನಿಮಾ `ಗಂಧದಗುಡಿ'(Gandadagudi) ಚಿತ್ರವನ್ನ ಮಾಜಿ ಸಿಎಂ ಯಡಿಯೂರಪ್ಪ ವೀಕ್ಷಿಸಿದ್ದಾರೆ. ಅಪ್ಪು ಕನಸಿನ ಸಿನಿಮಾ `ಗಂಧದಗುಡಿ’ ಪುತ್ರ ರಾಘವೇಂದ್ರ(Raghavendra) ಜೊತೆ ವೀಕ್ಷಿಸಿದ್ದಾರೆ.

    ಕರ್ನಾಟಕ ರತ್ನ ಪುನೀತ್ ನಟನೆಯ `ಗಂಧದಗುಡಿ’ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. `ಜೇಮ್ಸ್’ ಸೂಪರ್ ಡೂಪರ್ ಹಿಟ್ ಆದ್ಮೇಲೆ ಗಂಧದಗುಡಿಗಾಗಿ ಕಾಯುತ್ತಿದ್ದ ಫ್ಯಾನ್ಸ್, ಅಪ್ಪು ಕನಸಿನ ಸಿನಿಮಾ ನೋಡಿ ಖುಷಿಪಟ್ಟಿದ್ದರು. ಇದೀಗ ಮಾಜಿ ಸಿಎಂ ಯಡಿಯೂರಪ್ಪ(Bs Yediyurappa) ಶಿವಮೊಗ್ಗದ ಶಿವಪ್ಪನಾಯಕ ಸರ್ಕಲ್‌ನಲ್ಲಿರುವ ಭಾರತ್ ಸಿನಿಮಾಸ್ ಮಾಲ್‌ಗೆ `ಗಂಧದಗುಡಿ’ ಚಿತ್ರ ವೀಕ್ಷಿಸಿದ್ದಾರೆ. ಈ ವೇಳೆ ಪುತ್ರ ರಾಘವೇಂದ್ರ ಕೂಡ ಸಾಥ್ ನೀಡಿದ್ದಾರೆ. ಇದನ್ನೂ ಓದಿ: `ಗಂಧದಗುಡಿ’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಯಡಿಯೂರಪ್ಪ 

    ಸಿನಿಮಾ ವೀಕ್ಷಿಸಲು ಬಂದ ವೇಳೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇನ್ನೂ `ಗಂಧದಗುಡಿ’ಯಲ್ಲಿ ಅಪ್ಪು ನೈಜ ನಟನೆ ನೋಡಿ ಮಾಜಿ ಸಿಎಂ ಯಡಿರೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮನೆಮಂದಿಯೆಲ್ಲರೂ ಕುಳಿತು ಈ ಚಿತ್ರಕ್ಕೆ ಸಾಥ್ ನೀಡಿ ಎಂದಿದ್ದಾರೆ. ಎಲ್ಲರೂ ವೀಕ್ಷಿಸಿ ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡಿ ನೋಟಿಫಿಕೇಷನ್ ಪ್ರಕರಣ – ದೀಪಾವಳಿ ಬಳಿಕ ಬಿಎಸ್‍ವೈಗೆ ಸಂಕಷ್ಟ?

    ಡಿ ನೋಟಿಫಿಕೇಷನ್ ಪ್ರಕರಣ – ದೀಪಾವಳಿ ಬಳಿಕ ಬಿಎಸ್‍ವೈಗೆ ಸಂಕಷ್ಟ?

    ನವದೆಹಲಿ: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಭೂಮಿಯನ್ನು ಡಿ ನೋಟಿಫಿಕೇಷನ್ (De-Notification Case) ಮಾಡಿದ ಪ್ರಕರಣವನ್ನು ದೀಪಾವಳಿ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ (Uday Umesh Lalit) ತಿಳಿಸಿದ್ದಾರೆ.

    ತಮ್ಮ ವಿರುದ್ಧ ತನಿಖೆಗೆ ಸೂಚಿಸಿದ್ದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ.ಯು.ಯು ಲಲಿತ್, ಈ ಹಿಂದೆ ಬಿ.ಎಸ್ ಯಡಿಯೂರಪ್ಪ (B.S.Yediyurappa) ಪರವಾಗಿ ವಾದ ಮಂಡಿಸಿದ್ದರು. ಈ ಹಿನ್ನೆಲೆ ಅವರ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಲು ನಿರಾಕರಿಸಿದರು. ಬೇರೊಂದು ಪೀಠದಲ್ಲಿ ದೀಪಾವಳಿ (Diwali) ಬಳಿಕ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಾಂಧಿ ಪರಿವಾರ ಪವರ್ ಸೆಂಟರ್ ಅಲ್ಲ, ಅಧ್ಯಕ್ಷನಾದ ಬಳಿಕವೂ ಸಲಹೆ ಪಡೆಯುತ್ತೇನೆ: ಖರ್ಗೆ

    ದೇವನಹಳ್ಳಿಯಲ್ಲಿರುವ (Devanahalli) ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಭೂಮಿಯನ್ನು ಡಿ ನೋಟಿಫಿಕೇಷನ್ ಮಾಡಿರುವುದಾಗಿ ಆರೋಪಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಲಂಪಾಷ ಲೋಕಾಯುಕ್ತಕ್ಕೆ ದೂರು ನೀಡಿದರು. ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್ ತನಿಖೆಗೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ಬಿಎಸ್‍ವೈ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಎಷ್ಟೇ ದೊಡ್ಡವರಾದರು ಕಾನೂನಿನ ಮುಂದೆ ಎಲ್ಲರೂ ಒಂದೇ : ಆರಗ ಜ್ಞಾನೇಂದ್ರ

    Live Tv
    [brid partner=56869869 player=32851 video=960834 autoplay=true]

  • ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ವಿಜಯೇಂದ್ರಗೆ ಸಂಕಷ್ಟ

    ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ವಿಜಯೇಂದ್ರಗೆ ಸಂಕಷ್ಟ

    ನವದೆಹಲಿ: ಕೊನದಾಸಪುರದಲ್ಲಿ ಬಿಡಿಎ ಫ್ಲಾಟ್‍ಗಳ (BDA Flat) ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B. S. Yediyurappa) ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ (Supreme Court) ಮಧ್ಯಂತರ ತಡೆ ನೀಡಿದೆ. ಬಿ.ಎಸ್ ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತಡೆ ನೀಡಲಾಗಿದೆ.

    ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ (Governer) ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಮಾಡಿದೆ, ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ನ್ಯಾ.ಡಿ.ವೈ ಚಂದ್ರಚೂಡ್ (Dhananjaya Yeshwant Chandrachud)ನೇತೃತ್ವದ ಪೀಠ ವಿಚಾರಣೆ ನಡೆಸಿತು.

    Law

    ವಿಚಾರಣೆ ವೇಳೆ ಬಿ.ಎಸ್ ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ಮುಕುಲ್ ರೊಹಟಗಿ, ಜನಪ್ರತಿನಿಧಿಗಳ ವಿಷಯದಲ್ಲಿ ತನಿಖೆಗೆ ರಾಜ್ಯಪಾಲರ ಪೂರ್ವಾನುಮತಿ ಕಡ್ಡಾಯ, ಹೀಗಿದ್ದರು ಹೈಕೋರ್ಟ್ ತನಿಖೆಗೆ ಸೂಚಿಸಿದೆ ಎಂದು ವಾದಿಸಿದರು. ವಾದ ಆಲಿಸಿದ ಬಳಿಕ ಯಡಿಯೂರಪ್ಪ ವಿರುದ್ಧ ತನಿಖೆಗೆ ಪೀಠ ತಡೆ ನೀಡಿ, ಪ್ರತಿವಾದಿಗಳಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿತು.

    ಸಚಿವ ಎಸ್.ಟಿ. ಸೋಮಶೇಖರ್ (S.T. Somashekar) ಬಿಡಿಎ ಅಧ್ಯಕ್ಷ ಆಗಿದ್ದ ವೇಳೆ ಅಕ್ರಮ ನಡೆದಿದೆ ಎನ್ನಲಾಗಿದ್ದು, ಬಿಎಸ್‍ವೈ ಪುತ್ರ ಬಿ.ವೈ. ವಿಜಯೇಂದ್ರ (B. Y. Vijayendra) ಸೇರಿ ಒಟ್ಟು ಒಂಬತ್ತು ಮಂದಿ ಆರೋಪಿಗಳಾಗಿದ್ದಾರೆ. ಬಿಎಸ್‍ವೈ ಬಿಟ್ಟು ಉಳಿದವರ ವಿರುದ್ಧ ತನಿಖೆ ಮುಂದುವರಿಸಲು ಸುಪ್ರೀಂಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಬ್ರೇಕ್‍ಅಪ್ ಮಾಡಿದ್ದಕ್ಕೆ ಪ್ರಿಯತಮೆಯ ನಗ್ನ ಫೋಟೋ ಲೀಕ್ ಮಾಡ್ದ

    ಅಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಬಳಿಕ ತನಿಖೆಗೆ ಸೂಚಿಸಲು ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಹೈಕೋರ್ಟ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿತ್ತು. ಇದನ್ನೂ ಓದಿ: ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

    Live Tv
    [brid partner=56869869 player=32851 video=960834 autoplay=true]

  • ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ

    ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ

    ಬೆಂಗಳೂರು: ಭಾರತ ಸರ್ಕಾರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ 2022-23 ಸಾಲಿನ ಆಯವ್ಯಯವು ಕೋವಿಡ್-19 ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

    ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ವಿಶ್ಲೇಷಿಸಿದ್ದಾರೆ.  ಇದನ್ನೂ ಓದಿ: Budget 2022: ವರ್ಲ್ಡ್‌ ಕ್ಲಾಸ್‌ ಶಿಕ್ಷಣಕ್ಕೆ ಡಿಜಿಟಲ್‌ ವಿಶ್ವವಿದ್ಯಾಲಯ ಸ್ಥಾಪನೆ

    ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯ ಎಂದಿದ್ದಾರೆ. ಇದನ್ನೂ ಓದಿ: Budget: 2022-23ರ ಹೊತ್ತಿಗೆ 5G ಮೊಬೈಲ್‌ ಸೇವೆ

    ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು “ಅಂತರಾಷ್ಟ್ರೀಯ ಸಿರಿಧಾನ್ಯ” ವರ್ಷವೆಂದು ಘೋಷಣೆ ಮಾಡಿದ್ದು ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

    &

  • ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ: ಬಿಎಸ್‍ವೈ

    ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ: ಬಿಎಸ್‍ವೈ

    – ಕರ್ನಾಟಕದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ

    ಕೊಪ್ಪಳ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ.

    ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇತ್ತೀಚಿಗೆ ಏನೇನೋ ಮಾತಾಡುತ್ತಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಅನ್ನೋದನ್ನೆ ಮರೆತಿದ್ದಾರೆ. ನಮ್ಮ ಸರ್ಕಾರ ಅಲ್ಪ ಸಂಖ್ಯಾತರ ವಿರೋಧಿ ಅಲ್ಲ, ನನ್ನ ಅವಧಿಯಲ್ಲಿ ಅಲ್ಪ ಸಂಖ್ಯಾತರ ಪರ ಅನೇಕ ಕೆಲಸ ಮಾಡಿದ್ದೇವೆ. ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಯಡಿಯೂರಪ್ಪ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ. ಇದನ್ನ ನಾನು ಹೇಳುತ್ತಿಲ್ಲ, ಜನರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ:  ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ್ ಏನೇನೋ ಹೇಳುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದರು. ಸುರ್ಜೆವಾಲ್ ಹೀಗೆ ಮಾತಾಡಿದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ರಾಜ್ಯದ ಎರಡು ಕ್ಷೇತ್ರದಲ್ಲಿ ವಾತಾವರಣ ಚೆನ್ನಾಗಿದೆ. ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮೋದಿ ಮಾಡಿದ ಅಭಿವೃದ್ಧಿ ಕೆಲಸದಿಂದ ಮತದಾರ ನಮ್ಮ ಪರ ಇದ್ದಾರೆ. ಇನ್ನೂ ಸಲೀಂ ಹಾಗೂ ಉಗ್ರಪ್ಪ ವೀಡಿಯೋ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಾನು ಈ ಬಗ್ಗೆ ಏನೂ ಮಾತನಾಡೋದಿಲ್ಲ. ಅವರ ಭ್ರಷ್ಟಾಚಾರ ಬಯಲಾಗಿದೆ ಎಂದು ಹೇಳಿ ಪರೋಕ್ಷವಾಗಿ ಡಿಕೆಶಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.

  • ಬಿಎಸ್‍ವೈ ರಾಜೀನಾಮೆ – ನೇಣಿಗೆ ಶರಣಾದ ಅಭಿಮಾನಿ

    ಬಿಎಸ್‍ವೈ ರಾಜೀನಾಮೆ – ನೇಣಿಗೆ ಶರಣಾದ ಅಭಿಮಾನಿ

    ಚಾಮರಾಜನಗರ: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

     

    ರವಿ (35) ಮೃತ ವ್ಯಕ್ತಿ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಯಾದ ಈತ ಬಿಎಸ್‍ವೈ ಅಭಿಮಾನಿಯಾಗಿದ್ದನು. ನಿನ್ನೆ ರಾಜೀನಾಮೆ ನೀಡಿರುವ ಕುರಿತಾಗಿ ಮನನೊಂದು ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ:  ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

    ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನು. ನಿನ್ನೆ ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣದಿಂದ ಸಾಕಷ್ಟು ನೊಂದಿದ್ದ. ನಿನ್ನೆ ಹೋಟೆಲಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

  • ಯಡಿಯೂರಪ್ಪ ರಾಜೀನಾಮೆ – ಡಾಲರ್ಸ್ ಕಾಲೋನಿ ನಿವಾಸಕ್ಕೆ ಹೆಚ್ಚಿದ ಭದ್ರತೆ

    ಯಡಿಯೂರಪ್ಪ ರಾಜೀನಾಮೆ – ಡಾಲರ್ಸ್ ಕಾಲೋನಿ ನಿವಾಸಕ್ಕೆ ಹೆಚ್ಚಿದ ಭದ್ರತೆ

    ಬೆಂಗಳೂರು: ರಾಜಾಹುಲಿಯ ರಾಜ್ಯಾಡಳಿತ ಇಂದಿಗೆ ಕೊನೆಯಾಗಿದ್ದು, ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

    ರಾಜೀನಾಮೆ ಬೆನ್ನಲ್ಲೇ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ನಿವಾಸ ಖಾಲಿ ಖಾಲಿ ಹೊಡೆಯುತ್ತಿದೆ. ಜೊತೆಗೆ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ. ಐವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆ ನೀಡುತ್ತಿದ್ದಾರೆ. ಸಿಎಂ ನಿವಾಸದ ಎರಡು ಕಡೆ ರಸ್ತೆಗೆ ಮೂವತ್ತಕ್ಕೂ ಹೆಚ್ಚು ಬ್ಯಾರಿಕೇಡ್ ಅಳವಡಿಸಲಾಗಿದೆ. ಸದ್ಯ ಸಿ.ಎಂ ಕುಟುಂಬಸ್ಥರು ಯಾರು ಡಾಲರ್ಸ್ ಕಾಲೋನಿ ನಿವಾಸದಲ್ಲಿಲ್ಲ. ಕೇವಲ ಅಡುಗೆ ಸಿಬ್ಬಂದಿ, ಡ್ರೈವರ್ ಗಳು ಹಾಗೂ ಮನೆ ಕೆಲಸದವರು ಮಾತ್ರ ಇದ್ದಾರೆ.

    ಎರಡು ವರ್ಷದ ಪೂರೈಸಿದ ಬಿಜೆಪಿ ಸಂಭ್ರಮಾಚರಣೆ ಕಾರ್ಯಕ್ರಮದ ವೇಳೆ ಮಾತನಾಡಿದ ಯಡಿಯೂರಪ್ಪನವರು, 75 ವರ್ಷ ವಯಸ್ಸಾಗಿದ್ರೂ ಪಕ್ಷ ನನಗೆ ಸಿಎಂ ಸ್ಥಾನ ನೀಡಿ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಈ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಈ ರಾಜೀನಾಮೆಯನ್ನು ನೋವಿನಂದಲ್ಲ, ಸಂತೋಷದಿಂದ ನೀಡುತ್ತಿದ್ದೇನೆ ಎಂದು ಹೇಳಿ ರಾಜ ಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದರು.

    ಇಲ್ಲಿಯವರೆಗೂ ಬಿ.ಎಸ್.ಯಡಿಯೂರಪ್ಪನವರು ನಾಲ್ಕು ಬಾರಿ ಸಿಎಂ ಆದ್ರೂ ಪೂರ್ಣವಾಧಿಯನ್ನು ಪೂರೈಸಲು ಆಗಿಲ್ಲ.

  • ಭ್ರಷ್ಟ ಮುಖ್ಯಮಂತ್ರಿ ತೆಗೆದು ಭ್ರಷ್ಟನನ್ನು ಮಾಡಿದರೆ ಸಾಮಾನ್ಯ ಜನರಿಗೇನು ಲಾಭ: ಸಿದ್ದರಾಮಯ್ಯ

    ಭ್ರಷ್ಟ ಮುಖ್ಯಮಂತ್ರಿ ತೆಗೆದು ಭ್ರಷ್ಟನನ್ನು ಮಾಡಿದರೆ ಸಾಮಾನ್ಯ ಜನರಿಗೇನು ಲಾಭ: ಸಿದ್ದರಾಮಯ್ಯ

    ಬೆಂಗಳೂರು: ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಎಂದು ಪ್ರಶ್ನಿಸಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾದೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ  ಜೆಪಿ ನಡ್ಡಾ ಅವರಿಗೆ ಬಿಎಸ್‍ವೈ ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ. ಸ್ವತಃ ಬಿಜೆಪಿ ಶಾಸಕರೇ ಯಡಿಯೂರಪ್ಪನವರ ಕುಟುಂಬ ಸರ್ಕಾರದ ಖಜಾನೆಯನ್ನು ಲೂಟಿ ಮಾಡುತ್ತಿದೆ ಅಂದಿದ್ದಾರೆ, ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

    ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ಆಡಳಿತ ಪಕ್ಷದ ವಿರೋದ್ಧವಾಗಿ ಆಕ್ರೋಶ ಹೊರಹಾಕಿದ್ದಾರೆ.

    ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

  • ರಾಜ್ಯಪಾಲರ ಹುದ್ದೆ ಅಲಂಕರಿಸಲ್ಲ, ಪಕ್ಷ ಸಂಘಟನೆ ಮಾಡುತ್ತೇನೆ: ಬಿಎಸ್‌ವೈ

    ರಾಜ್ಯಪಾಲರ ಹುದ್ದೆ ಅಲಂಕರಿಸಲ್ಲ, ಪಕ್ಷ ಸಂಘಟನೆ ಮಾಡುತ್ತೇನೆ: ಬಿಎಸ್‌ವೈ

    ಬೆಂಗಳೂರು: ರಾಜೀನಾಮೆ ನೀಡುವಂತೆ ದೆಹಲಿಯಿಂದ ನನಗೆ ಯಾವುದೇ ಒತ್ತಡ ಇಲ್ಲ ನಾನೇ ಸ್ವಯಂ ನಿರ್ಧಾರ ಮಾಡಿ ರಾಜೀನಾಮೆ ನೀಡಿದ್ದೇನೆ, ರಾಜ್ಯಪಾಲು ಹುದ್ದೆ ಸೇರಿ ಯಾವುದೇ ಸ್ಥಾನಮಾನ ಪಡೆಯದೇ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ರಾಜಭವನದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟು ಬೇರೆಯವರಿಗೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಸಿಗಬೇಕು ಎಂದು ನಾನು ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ.  ಪ್ರಧಾನಿಯಾಗಲಿ ಆಗಲಿ, ವರಿಷ್ಠರಾಗಲಿ ನನ್ನ ಮೇಲೆ ಯಾವುದೇ ಒತ್ತಡ ಹೇರಿಲ್ಲ ಇದು ನನ್ನ ಸ್ವಂತ ನಿರ್ಧಾರ ಎಂದರು.

    ಮುಂದೆ ಮುಖ್ಯಮಂತ್ರಿ ಯಾರಾಗಬೇಕು? ಎಂದು ನಾನು ಯಾವುದೇ ಹೆಸರನ್ನು ಪ್ರಸ್ತಾಪ ಮಾಡುವುದಿಲ್ಲ, ಅದು ಹೈಕಮಾಂಡಿಗೆ ಬಿಟ್ಟಿದ್ದು. ಅವರು ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೋ ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನ.  ಒಟ್ಟಾಗಿ ಸೇರಿ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ಕೆಲಸ ಮಾಡುತ್ತೇವೆ ಎಂದರು.

    ಪಕ್ಷ ನನಗೆ ಎಲ್ಲ ರೀತಿಯ ಸ್ಥಾನಮಾನ ಕೊಟ್ಟಿದೆ. ನಾಲ್ಕು ಬಾರಿ ಮುಖ್ಯಮಂತ್ರಿ ಮಾಡಿದೆ. ಪಕ್ಷದ ಅಧ್ಯಕ್ಷ ಸ್ಥಾನ ಕೊಟ್ಟಿದೆ‌ ಹಾಗಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಯಾವುದೇ ಸ್ಥಾನಮಾನ ಪಡೆಯುವುದಿಲ್ಲ.  ವಾಜಪೇಯಿ ಕಾಲದಲ್ಲಿ ಕೇಂದ್ರಕ್ಕೆ ಸಚಿವನಾಗಲು ಆಹ್ವಾನಿಸಿದ್ದರು ನಾನು ಒಪ್ಪಿರಲಿಲ್ಲ. ಈಗಲೂ ರಾಜ್ಯಪಾಲನಾಗುವುದಿಲ್ಲ. ಪಕ್ಷದ ಸಂಘಟನೆ ಬಲಪಡಿಸುವ ಕೆಲಸ ಮಾಡುತ್ತೇನೆ ಯಾವುದೇ ಸ್ಥಾನಮಾನ ಕೇಳಿಲ್ಲ ಯಾವುದೇ ಸ್ಥಾನಮಾನ ತೆಗೆದುಕೊಳ್ಳುವುದಿಲ್ಲ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತೇನೆ ಎಂದು ನಿರ್ಗಮಿತ ಸಿಎಂ ತಿಳಿಸಿದರು.

    ಮುಂದೆ ಬರುವ ಮುಖ್ಯಮಂತ್ರಿಗಳು ಸಹ ಯಾರು ಸರ್ಕಾರ ಬರಲು ಅವಕಾಶ ಕೊಟ್ಟಿದ್ದರೋ ಅವರೆಲ್ಲರಿಗೂ ಸಹಕಾರ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ವಲಸಿಗರಿ ಭಯಪಡಬೇಕಿಲ್ಲ ಎಂದು ಯಡಿಯೂರಪ್ಪ ಅಭಯ ನೀಡಿದರು. ಎಲ್ಲರೂ ಜವಾಬ್ದಾರಿ ಹೊತ್ತು ಕೆಲಸ ಮಾಡಲಿದ್ದಾರೆ ಮುಂದೆ ಬರುವ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರ ಕೊಡಲಿದ್ದಾರೆ ಎಂದರು.

    ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾಗೆ ಕೃತಜ್ಞತೆ ಸಲ್ಲಿಸುತ್ತೇನೆ 75 ವರ್ಷ ದಾಟಿದವರಿಗೆ ಇಡೀ ದೇಶದಲ್ಲಿ ಯಾರಿಗೂ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ಯಡಿಯೂರಪ್ಪನ ಮೇಲೆ ಅಭಿಮಾನ ಇಟ್ಟು ನಮ್ಮ ರಾಷ್ಟ್ರೀಯ ನಾಯಕರು ನನಗೆ ಎರಡು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದರು ಅದಕ್ಕಾಗಿ ನಮ್ಮ ಶಾಸಕರು ಸಚಿವ ಸಂಪುಟ ಸಹೋದ್ಯೋಗಿಗಳು ರಾಜ್ಯದ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್ ಶಾ ನಡ್ಡಾರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಎರಡು ತಿಂಗಳ ಹಿಂದೆ ರಾಜೀನಾಮೆಗೆ ನಿರ್ಧಾರ ಮಾಡಿದ್ದೆ ಆದರೆ ಎರಡು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜೀನಾಮೆ ಕೊಡುವುದು ಸೂಕ್ತ ಎಂದು ಯೋಚನೆ ಮಾಡಿ ನಾನು ಇಂದು ರಾಜೀನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ ರಾಜ್ಯಪಾಲರು ಅಂಗೀಕರಿಸಿದ್ದಾರೆ. ರಾಜ್ಯದ ಜನತೆ ನನಗೆ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯದ ಜನತೆಗೆ, ರಾಜ್ಯದ ಕಾರ್ಯಕರ್ತರಿಗೆ, ಶಿಕಾರಿಪುರ ಮತದಾರರು ಏಳು ಬಾರಿ ಶಾಸಕರಾಗಿ ಮುಖ್ಯಮಂತ್ರಿಯಂತಹ ಉನ್ನತ ಸ್ಥಾನಕ್ಕೆ ಹೋಗಲು ಅವಕಾಶ ಮಾಡಿಕೊಟ್ಟರು, ನನ್ನ ಕ್ಷೇತ್ರದ ಜನತೆಯನ್ನೂ ನಾನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಅವರಿಗೂ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.