Tag: BSY
-

ಅಮಿತ್ ಶಾ ಜೊತೆಗೆ ನಾಳೆ ಬಿಎಸ್‌ವೈ 20 ನಿಮಿಷ ಚರ್ಚೆ
ಬೆಂಗಳೂರು: ಕರ್ನಾಟಕ ಭೇಟಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಸಿಎಂ ಕಚೇರಿಯಲ್ಲಿ 20 ನಿಮಿಷ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವ ಸ್ಥಾನ ವಂಚಿತ ಶಾಸಕರು ಆರೋಪಿಸಿದ ಸಿ.ಡಿ. ವಿಚಾರದ ಚರ್ಚೆಯೂ ನಡೆಯಲಿದೆ ಎನ್ನಲಾಗಿದ್ದು, ಆ 20 ನಿಮಿಷದ ಸಿಟ್ಟಿಂಗ್ ರಹಸ್ಯ ತೀವ್ರ ಕುತೂಹಲ ಮೂಡಿಸಿದೆ. -

ಯೋಗೇಶ್ವರ್ ಜೈಲಿಗೆ ಹೋಗುವ ಸಾಧ್ಯತೆಗಳಿವೆ: ಹೆಚ್. ವಿಶ್ವನಾಥ್
ಹುಬ್ಬಳ್ಳಿ: ಸಚಿವ ಯೋಗೇಶ್ವರ್ ಮೇಲೆ ಮೆಗಾಸಿಟಿ ಪ್ರಕರಣದಲ್ಲಿ 9731 ಕೇಸ್‍ಗಳಿವೆ. ಈ ಕುರಿತಾಗಿ ದೆಹಲಿಯಲ್ಲಿ ಪ್ರಕರಣ ವಿಚಾರಣೆ ನಡೆಯುತ್ತಿದೆ. ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಜೈಲಿಗೆ ಹೋಗುವ ವ್ಯಕ್ತಿಯನ್ನ ಮಂತ್ರಿ ಮಾಡಬೇಕಾ..? ಯೋಗೇಶ್ವರ್ ಪ್ರಕರಣ ಸದ್ಯ ಸ್ಟೇ ಆಗಿದೆ. ಸ್ಟೇ ಕ್ಲೀಯರ್ ಆದರೆ ಅವರು ಜೈಲಿಗೆ ಹೋಗುವ ಸಾಧ್ಯತೆಯಿದೆ ಎಂದು ಎಂಎಲ್‍ಸಿ ಎಚ್ ವಿಶ್ವನಾಥ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜೀನಾಮೆ ಕೊಟ್ಟು ನಾವು ಕೂಡ ರಾಜ್ಯಪಾಲರ ಬಳಿ ಹೋದವರು, ನಮ್ಮದು ಪಕ್ಷಾಂತರ ಅಲ್ಲ. ನಾನು 40 ವರ್ಷಗಳಿಂದ ರಾಜಕೀಯದಲ್ಲಿ ಇರುವವನು. ಯಡಿಯೂರಪ್ಪರಿಗೆ ಅಧಿಕಾರದ ಮೋಹ ಇದೆ ಎಂದು ವಾಗ್ದಾಳಿ ನಡೆಸಿದರು.

ರಮೇಶ್ ಜಾರಕಿಹೊಳಿ, ಸಿಪಿ ಯೋಗೇಶ್ವರ್ ಸಾಲ ಮಾಡಿ ಸರ್ಕಾರ ತಂದ್ರು ಅನ್ನೋದನ್ನ ಒಪ್ಪಕ್ಕೆ ಆಗುತ್ತಾ. ಮೂರು ದಿನದ ಬೆಳವಣಿಗೆ ನನಗೆ ಹೇಸಿಗೆ ತರಿಸಿದೆ. ನಾನು ಮಾತನಾಡುವುದನ್ನ ಬಿಟ್ಟು ಬರವಣಿಗೆ ಮಾಡಬೇಕು ಅನ್ನಿಸುತ್ತಿದೆ. ರಾಜ್ಯ ಸರ್ಕಾರ ಬದಲಾವಣೆ ಬಗ್ಗೆ ಪುಸ್ತಕ ಬರೆಯುವೆ. ಈಗಾಗಲೇ 8 ಅಧ್ಯಾಯಗಳು ಮುಗಿದಿವೆ. ನಾನು ಬಿಎಸ್‍ವೈಗೆ ಮಂತ್ರಿ ಮಾಡಿ ಎಂದು ಯಾವತ್ತೂ ಕೇಳಿಲ್ಲ. ನಮ್ಮಿಬ್ಬರ ಮಧ್ಯೆ ನಡೆದ ಮಾತುಕತೆ ಏನಾಯ್ತು ಅಂತ ಪ್ರಶ್ನೆ ಮಾಡುತ್ತಿರುವೆ ಎಂದರು.

ಸಿಪಿ ಯೋಗೇಶ್ವರ್ ಯಾರು..? ಅವರನ್ನ ಸಚಿವರನ್ನಾಗಿ ಮಾಡುವ ಅನಿವಾರ್ಯತೆ ಏನಿತ್ತು. ಮುನಿರತ್ನಗೆ ಸಚಿವ ಸ್ಥಾನ ನೀಡುವುದು ಬಿಟ್ಟು ಯೋಗೇಶ್ವರ್ ಗೆ ಯಾಕೆ ಕೊಡಬೇಕಿತ್ತು..? ನಾನು ಅಧಿಕಾರಕ್ಕೆ ಹಂಬಲಿಸದವನಲ್ಲ. ಸಾರಾ ಮಹೇಶ್ ಕೊಚ್ಚೆಗುಂಡಿ. ಕೊಚ್ಚೆಗುಂಡಿಗೆ ಕಲ್ಲು ಎಸೆದು ಹೊಲಸು ಮಾಡಿಕೊಳ್ಳಲು ಇಷ್ಟವಿಲ್ಲ ಎಂದರು.
ಕುರುಬ ಸಮಾಜ ಎಸ್‍ಟಿ ಮಿಸಲಾತಿಗಾಗಿ ಹೋರಾಟ ಮಾಡುತ್ತಿದೆ. ಈ ಹೋರಾಟ ನಾಲ್ವರು ಶ್ರೀಗಳು ಹಾಗೂ ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆಯುತ್ತಿದೆ. ವೀರಶೈವ ಲಿಂಗಾಯತದವರೇ ಸಿಎಂ ಇರುವಾಗ ಲಿಂಗಾಯತ ಸಮುದಾಯ ಮೀಸಲಾತಿಗೆ ಹೋರಾಟಕ್ಕೆ ಇಳಿದಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈಶ್ವರಪ್ಪ ಮೀಸಲಾತಿ ಕೊಡಿಸಲಿ ಅನ್ನೋ ಸಿದ್ದರಾಮಯ್ಯರ ಮಾತು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿಗೆ ಅಮಿತ್ ಶಾ ಆಗಮನದ ವೇಳೆ ಭೇಟಿಗೆ ಅವಕಾಶ ಕೇಳಿದ್ದೇನೆ. ಆಗ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಮಾತುನಾಡುತ್ತೇನೆ. ರಾಜ್ಯದ ನಾಯಕತ್ವದ ಬಗ್ಗೆ ಚರ್ಚೆ ಮಾಡುತ್ತೇನೆ. ನಾನು ಬಿಎಸ್‍ವೈ ನಾಯಕತ್ವ ಪ್ರಶ್ನೆ ಮಾಡಲ್ಲ. ಆದರೆ ಅವರ ನಡವಳಿಕೆ ಪ್ರಶ್ನೆ ಮಾಡಬೇಕಾಗಿದೆ. ಬಿಜೆಪಿಯ ನಡವಳಿಕೆಗೆ ಬಗ್ಗೆ ಚರ್ಚೆ ಮಾಡಬೇಕಿದೆ ಎಂದರು.
-

ನೀರಿಕ್ಷೆಯಂತೆ ನಾವು ಯಾವ ಕೆಲಸನೂ ಮಾಡಿಲ್ಲ – ಬಿಎಸ್‍ವೈ ಬೇಸರ
ಕೊಪ್ಪಳ: ನೀರಿಕ್ಷೆಯಂತೆ ನಾವು ಯಾವ ಕೆಲಸನೂ ಮಾಡಿಲ್ಲ ಎಂದು ಕೊಪ್ಪಳ ತಾಲೂಕಿನಲ್ಲಿ ಬಸಾಪೂರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಕುಕನೂರು ತಾಲೂಕಿನ ಭಾನಾಪೂರ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಆಟಿಕೆ ಕ್ಲಸ್ಟರ್ ಭೂಮಿ ಪೂಜೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕೋವಿಡ್, ಅತಿವೃಷ್ಟಿ, ಬರಗಾಲದಿಂದ ಕೆಲಸ ಮಾಡಲು ಸಾಧ್ಯವಾಗಿಲ್ಲ. ರಾಜ್ಯದ ಅರ್ಥಿಕ ಸ್ಥಿತಿ ಸರಿ ಇಲ್ಲದ ಕಾರಣ ಸರಿ ಇಲ್ಲದ ಕಾರಣದಿಂದಾಗಿ ಹೀಗಾಗಿದೆ. ಈ ಬಾರಿ ಬಜೆಟ್‍ನಲ್ಲಿ 40,50 ಸಾವಿರ ನಷ್ಟ ಆಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಮೊದಲ ಟಾಯ್ಸ್ ಕ್ಲಸ್ಟರ್ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡ್ತಿದ್ದೇವೆ. ಕೆಲಸ ಆರಂಭ ಆದ ಬಳಿಕ ಪ್ರಧಾನಿ ಮೋದಿ ಕರೆಸಿ ಉದ್ಘಾಟನೆ ಮಾಡಬೇಕೆಂಬ ಅಪೇಕ್ಷೆ ಇದೆ. ಟಾಯ್ಸ್ ಕ್ಲಸ್ಟರ್‍ಗೆ ಭೂಮಿ ಪೂಜೆ ಮಾಡುವ ಮೂಲಕವಾಗಿ ಕೃಷಿ ಸಂಜೀವಿನಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಸ್ವಾಭಿಮಾನಿ ರೈತ ಕಾರ್ಡ್ ವಿತರಣೆ ಮಾಡಲಾವುದು. ಕೇಂದ್ರ ಯಾವಾಗ ಹೇಳತ್ತೆ ಅವಾಗ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಬಿಎಸ್‍ವೈ ಹೇಳಿದ್ದಾರೆ.
-

ಕಾಯ್ದೆಯಿಂದ ರೈತರ ಆದಾಯ ಹೆಚ್ಚಳ – ಪ್ರತಿಪಕ್ಷಗಳ ವಿರುದ್ಧ ಬಿಎಸ್‍ವೈ ಕಿಡಿ
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಕರೆ ನೀಡಲಾಗಿದ್ದು, ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ಈ ಸಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ @narendramodi ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ. (1/2)
— B.S.Yediyurappa (@BSYBJP) December 8, 2020
ಇನ್ನೊಂದು ಟ್ವೀಟ್ ಮಾಡಿ, ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದು ತಿಳಿಸಿದ್ದಾರೆ.
ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ. (2/2)
— B.S.Yediyurappa (@BSYBJP) December 8, 2020
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಈ ಹಿನ್ನೆಲೆ ಇಂದು ಸಂಪೂರ್ಣ ಭಾರತ್ ಬಂದ್ ಆಗಿದ್ದು ನೂತನ ಕಾಯ್ದೆಗಳು ವಿರೋಧಿಸಿ ದೇಶದ್ಯಾಂತ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ ಕಾಯ್ದೆ ವಾಪಸ್ ಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಕಳೆದ ಹದಿಮೂರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು ಈವರೆಗೂ ನಡೆದ ಐದು ಸಂಧಾನ ಸಭೆಗಳು ವಿಫಲವಾಗಿದೆ. ಸಭೆಯಲ್ಲಿ ಮೂರು ಕಾಯ್ದೆಗಳನ್ನು ವಾಪಸ್ ಪಡೆಯುವಂತೆ 40 ಕ್ಕೂ ಹೆಚ್ಚು ರೈತ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಮಾತ್ರ ಕಾಯ್ದೆ ವಾಪಸ್ ಪಡೆಯಲು ಹಿಂದೆಟು ಹಾಕಿದ್ದು ಕೆಲವು ಮಾರ್ಪಡಿಗೆ ಮಾತ್ರ ಒಪ್ಪಿಕೊಂಡಿದೆ. ಸರ್ಕಾರದ ಈ ಭರವಸೆಗೆ ಬಗ್ಗದ ಹೋರಾಟಗಾರು ಭಾರತ್ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.
-

ತಂದೆಯನ್ನ ಕೊಂದವನನ್ನೇ ತಾಯಿ ಮದ್ವೆ ಆಗಿ ಮೆರವಣಿಗೆ ಹೊರಟಂತಿದೆ- ಹಳ್ಳಿಹಕ್ಕಿ ಹೀಗಂದಿದ್ಯಾಕೆ?
ಮೈಸೂರು: ಸರ್ಕಾರದ ಇಂದಿನ ಸ್ಥಿತಿಯ ಬಗ್ಗೆ ಎಂಎಲ್‍ಸಿ ಹೆಚ್. ವಿಶ್ವನಾಥ್ ಅವರು ಮಾರ್ಮಿಕವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯನ್ನ ಕೊಂದವನನ್ನೆ ತಾಯಿ ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ನಾವು ವಿರೋಧಿಸಿದವರೇ ಈಗ ಅವರ ಸ್ನೇಹಿತರಾಗಿದ್ದಾರೆ ಎಂದು ಅಸಮಾದಾನ ಹೊರಹಾಕಿದ್ದಾರೆ.

ನಾವು ಯಾರನ್ನು ವಿರೋಧ ಮಾಡಿ ಬಂದ್ವಿ, ಅವರೇ ಈಗ ಬಿಎಸ್‍ವೈ ಸ್ನೇಹಿತರಾಗಿದ್ದಾರೆ. ಇದು ತಂದೆಯನ್ನ ಕೊಂದವನನ್ನ ತಾಯಿ ಮದುವೆಯಾದಂತೆ ಕಾಣುತ್ತಿದೆ. ಶೇಕ್ಸ್‍ಪಿಯರ್ ನಾಟಕದಲ್ಲಿ ಇದೆ ರೀತಿಯ ಪ್ರಸಂಗ ಇದೆ. ನಮ್ಮ ಪರಿಸ್ಥಿತಿ ಹಾಗೂ ಸರ್ಕಾರದ ಪರಿಸ್ಥಿತಿಯೂ ಹಾಗೇ ಇದೆ ಎಂದರು.
ಇದೇ ವೇಳೆ ಮತ್ತೊಮ್ಮೆ ಸಿ.ಪಿ ಯೋಗೇಶ್ವರ್ ವಿರುದ್ಧ ಗುಡುಗಿದ ಹಳ್ಳಿಹಕ್ಕಿ, ಯೋಗೇಶ್ವರ್‍ಗೆ ಮಂತ್ರಿ ಸ್ಥಾನ ನೀಡೋಕೆ ಅರ್ಜೆಂಟ್ ಯಾಕೇ?. ಅವರೇನು ಸರ್ಕಾರ ಬಿಳಿಸೋಕೆ ಕಾರಣರಾದವರೇ?, ಅವರೇನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರೇ?. ಮುಂಬೈ, ಪುಣೆಯಲ್ಲಿ ಸೂಟ್‍ಕೇಸ್ ಹಿಡ್ಕೊಂಡು ಓಡಾಡುತ್ತಿದ್ದವರು. ಅವರನ್ನ ಮಂತ್ರಿ ಮಾಡೋಕೆ ಅರ್ಜೆಂಟ್ ಯಾಕೇ ಬೇಕು. ಬಿಜೆಪಿ ಸರ್ಕಾರ ಬರೋದಕ್ಕೆ ಯೋಗೇಶ್ವರ್ ಪಾತ್ರ ಏನೂ ಇಲ್ಲ. ಅವನ ಪಾತ್ರ ಏನು ಇಲ್ಲದ ಮೇಲೆ ಅವನಿಗ್ಯಾಕೆ ಮಂತ್ರಿ ಸ್ಥಾನ ಕೊಡಬೇಕು ಎಂದು ಕಿಡಿಕಾರಿದ್ದಾರೆ.

ಯತ್ನಾಳ್ ಅಥವಾ ಕತ್ತಿಯಂತಹ ನಾಯಕರು ಸರತಿಯಲ್ಲಿದ್ದಾರೆ. ಅವರನ್ನು ಮಂತ್ರಿ ಮಾಡಿ. ಇಂತಹ ಆತುರದ ನಿರ್ಧಾರ ತೆಗೆದುಕೊಂಡರೆ ನಿಮ್ಮ ನಾಯಕತ್ವದ ಬಗ್ಗೆ ಅಪನಂಬಿಕೆ ಬರಲಿದೆ ಎಂದು ಸಿಎಂ ಯಡಿಯೂರಪ್ಪಗೆ ನೇರವಾಗಿ ಸಲಹೆ ನೀಡಿದರು. ಕೋರ್ಟ್ ಮಧ್ಯಂತರ ತೀರ್ಪಿನ ಆದೇಶ ನೋಡಿದ್ದೇನೆ. ಅದರ ತೀರ್ಪಿನ ಆರ್ಡರ್ ಕಾಪಿ ಇನ್ನೂ ನನ್ನ ಕೈಸೇರಿಲ್ಲ. ಅದರಲ್ಲಿ ಸಚಿವರಾಗಬಾರದು ಅಂತ ಮಾತ್ರ ಹೇಳಿದ್ದಾರೆ. 2027ರವರೆಗೆ ನಾನು ವಿಧಾನಪರಿಷತ್ ಸ್ಥಾನಕ್ಕೆ ತೊಂದರೆಯಿಲ್ಲ ಎಂದರು.

ಸರ್ಕಾರದ ರಚನೆ ಸಂದರ್ಭದಲ್ಲಿ ಬಿಎಸ್‍ವೈ ನನ್ನ ಮುಂದೆ ನಿಂತಿದ್ದ ಸ್ಥಿತಿಯೇ ಬೇರೆ. ಇಂದಿನ ಬಿಎಸ್‍ವೈ ನಡವಳಿಕೆಗಳೇ ಬೇರೆ. ರಾಜಕಾರಣದಲ್ಲಿ ಕೃತಜ್ಞತೆ ಕಡಿಮೆ ಆಗುತ್ತಿದೆ. ನಾವು ಮಾಡಿದ ಕೆಲಸವನ್ನ ಯಾರು ಕೃತಜ್ಞತೆ ಮಾಡಿಕೊಂಡಿಲ್ಲ. ಯಡಿಯೂರಪ್ಪನವರೇ ಮೇಲೆ ಒತ್ತಡ ಇದೆ. ಅದಕ್ಕೆ ಈಗ ಏನಾಗುತ್ತೆ ನೋಡಿಕೊಂಡು ತೀರ್ಮಾನ ಮಾಡ್ತೀವಿ ಎಂದು ಸಿಎಂ ನಡವಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಸಾ.ರಾ.ಮಹೇಶ್ ನನ್ನ ಅನುಭವದ ಮುಂದೆ ನನಗೆ ಸಮಾನಲ್ಲ. ಅಂತವರ ಬಗ್ಗೆ ನಾನು ಪ್ರತಿಕ್ರಿಯೆಯನ್ನೆ ನೀಡೋಲ್ಲ. ಆತ ನಮ್ಮ ಊರಿನವನು ಅಲ್ವಾ. ಅದಕ್ಕೆ ನನ್ನ ಮೇಲಿನ ಪ್ರಿತಿಯಿಂದ ಪದೆ ಪದೆ ಮಾತನಾಡುತ್ತಾನೆ. ಆದ್ರೆ ಅವನ ಬಗ್ಗೆ ನನ್ನ ಬಳಿ ಪ್ರಶ್ನೆಯನ್ನೆ ಕೇಳಬೇಡಿ ಎಂದು ಪತ್ರಕರ್ರರ ಮುಂದೆ ಕೈಮುಗಿದರು.
-

ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.
ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಸಿದ್ದರು. ಖುಡಲೇ ಅವರನ್ನು ಮನೆಯವರು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ರವಾನೆ ಮಾಡಲಾಗಿದ್ದು, ಈ ವರದಿ ಸದಾಶಿವನಗರ ಪೊಲೀಸರ ಕೈ ಸೇರಿದೆ. ವರದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ದಾಖಲಾಗಿದೆ. ಅಲ್ಲದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸದ್ಯ ಮಾತಾನಾಡಲಿಕ್ಕೆ ಶಕ್ತನಲ್ಲ ಎಂದು ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಕೌಟುಂಬಿಕವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಂತೋಷ್ ಪತ್ನಿ

ಅಸ್ಪತ್ರೆಯ ಎಂಎಲ್ ಸಿ ರಿಪೋರ್ಟ್ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. ಎನ್ ಆರ್ ಸಂತೋಷ್ ಗುಣಮುಖನಾದ ಬಳಿಕ ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಇಂದು ಬೆಳಗ್ಗೆ 11 ಗಂಟೆಗೆ ಎಮ್ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಸಂತೋಷ್ ಆರೋಗ್ಯ ಕುರಿತು ಸುದ್ದಿ ಗೊಷ್ಠಿ ನಡೆಸಲಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಸಂತೋಷ್ ಪತ್ನಿ ಜಾಹ್ನವಿ ಮಾತನಾಡಿ, ರಾಜಕೀಯ ಒತ್ತಡದಿಂದ ಸಂತೋಷ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದಿದ್ದಾರೆ.
-

ಕೌಟುಂಬಿಕವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಂತೋಷ್ ಪತ್ನಿ
ಬೆಂಗಳೂರು: ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಪತ್ನಿ ಜಾಹ್ನವಿ ತಿಳಿಸಿದ್ದಾರೆ.
ನಿನ್ನೆ ರಾತ್ರಿ ಪತಿಯನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗಿನಿಂದಲೇ ಅವರು ಸ್ವಲ್ಪ ಬೇಜಾರಾಗಿದ್ದರು. ಸಂಜೆ ಹೊರಗಡೆ ಹೋಗಿದ್ದರು. ಹೀಗೆ ಹೋದವರು ಸಂಜೆ ಸುಮಾರು 7 ಗಂಟೆಗೆ ಮನೆಗೆ ಬಂದರು. ಓದುತ್ತಾ ಇರುತ್ತೀನಿ ಅಂತ ಮನೆಯ ಮೇಲೆ ಹೋಗಿದ್ದರು ಎಂದರು.

ಈ ವೇಳೆ ನಾನು ಊಟಕ್ಕೆ ಏನು ಮಾಡ್ಲಿ ಅಂತ ಕೇಳೋದಕ್ಕೆ ಹೋದೆ. ಆಗ ಅವರು ಸ್ವಲ್ಪ ಬೇಜಾರಲ್ಲಿದ್ದರು. ಅದಾಗಲೇ ಅವರು ಏನು ಮಾತನಾಡುವ ಪರಿಸ್ಥಿತಿಯಲ್ಲಿರಲಿಲ್ಲ. ಅವರು ಪ್ರಜ್ಞೆ ಕಳೆದುಕೊಳ್ಳುತ್ತಾ ಇದ್ದರು. ಇದರಿಂದ ಗಾಬರಿಗೊಂಡ ನಾವು ಅವರನ್ನು ಅಲ್ಲಿಂದ ಕರೆದುಕೊಂಡು ಬಂದು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದೆವು ಎಂದು ತಿಳಿಸಿದರು.

ರಾಜಕೀಯ ಅಸಮತೋಲನದಿಂದ ಸ್ವಲ್ಪ ಬೇಜಾರಾಗಿದ್ದರು ಅಷ್ಟೆ. ಇನ್ನು ಕೌಟುಂಬಿಕವಾಗಿ ನಾವು ತುಂಬಾನೇ ಚೆನ್ನಾಗಿದ್ದೇವೆ. ಅಂಥದ್ದೇನೂ ಸಮಸ್ಯೆ ನಮ್ಮ ನಡುವೆ ಇಲ್ಲ. ಮುಕ್ತವಾಗಿ ಮಾತಾಡಿಕೊಂಡು ಎಲ್ಲಾ ರೀತಿಯಲ್ಲೂ ನಾವಿಬ್ಬರೂ ಚೆನ್ನಾಗಿದ್ದೇವೆ. ನಿದ್ದೆ ಮಾತ್ರೆಗಳನ್ನು ತೆಗೆದುಕೊಂಡ ಕಾರಣ ಸ್ವಲ್ಪ ಅವರಿಗೆ ಪ್ರಜ್ಞೆ ಇಲ್ಲ. ಆದರೆ ಬೆಳಗ್ಗೆ ವೇಳೆ ಸರಿಹೋಗುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಜಾಹ್ನವಿ ಹೇಳಿದ್ದಾರೆ.

ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ನಿನ್ನೆ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ಮದುವೆ ಮನೆಯಲ್ಲಿ ಚೆನ್ನಾಗಿದ್ದರು. ಯಾಕೆ ಏನು ಎನ್ನುವುದು ನನಗೂ ತಿಳಿದಿಲ್ಲ. ಈಗ ನಾನು ಅವರ ಕುಟುಂಬದ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದು ತಿಳಿಸಿದ್ದರು.

-

ಮೋದಿ, ಬಿಎಸ್‍ವೈ ಸರ್ಕಾರ ರೈತರ ಪರ ಕೆಲಸ ಮಾಡ್ತಿದೆ: ಕಟೀಲ್
ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಮನೆಗೆ ನಳಿನ್ ಕುಮಾರ್ ಕಟೀಲ್ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಳೀನ್‍ಗೆ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕಟೀಲ್, ಅಶೋಕ್ ಗಸ್ತಿ ಹಲವಾರು ವರ್ಷ ಪಾರ್ಟಿ ಕಟ್ಟಿದ್ದಾರೆ. ಅವರ ಕುಟುಂಬದೊಂದಿಗೆ ಪಕ್ಷವಿದೆ ಎಂದರು.

ಭೂಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳು ರೈತ ಪರವಾಗಿವೆ. ನಾನೂ ರೈತನಾಗಿದ್ದು, ರೈತನಿಗೆ ಅನುಕೂಲವಾಗುವ ಕಾಯ್ದೆಯಾಗಿದೆ. ರೈತನ ಹೆಸರಿನಲ್ಲಿ ಈಗ ಪ್ರತಿಭಟನೆ ಮಾಡುತ್ತಿದ್ದಾರೆ. ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ಕೋವಿಡ್ 19 ಸೋಂಕಿಗೆ ಒಳಗಾಗಿ ಅಶೋಕ್ ಗಸ್ತಿ ಸೆಪ್ಟೆಂಬರ್ 17ರಂದು ನಿಧನರಾಗಿದ್ದರು. ಕೋವಿಡ್ 19 ಹಾಗೂ ನ್ಯುಮೋನಿಯಾದಿಂದ ಬಳುತ್ತಿದ್ದ ಅವರು ಸೆ.2 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ಸಮಿತಿಯ ನಿರಂತರ ವೀಕ್ಷಣೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು-ಅಂಗಾಂಗ ವೈಫಲ್ಯದಿಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಎಬಿವಿಪಿಯಿಂದ ಶುರುವಾಗಿ ಆರ್ ಎಸ್ ಎಸ್ ನಲ್ಲಿ ಗುರುತಿಸಿಕೊಂಡಿದ್ದ ಗಸ್ತಿ ರಾಯಚೂರು ಬಳ್ಳಾರಿ ಕೊಪ್ಪಳ ಪ್ರಭಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಎರಡು ರಾಯಚೂರು ನಗರ ಕ್ಷೇತ್ರದ ಟಿಕೆಟ್ ಗೆ ಯತ್ನಿಸಿದ್ದರೂ ಸಿಕ್ಕಿರಲಿಲ್ಲ. ಬಿಜೆಪಿ ಹೈಕಮಾಂಡ್ ಅಶೋಕ್ ಗಸ್ತಿಯವರಿಗೆ ರಾಜ್ಯಸಭಾ ಟಿಕೆಟ್ ನೀಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಜುಲೈ 22 ರಂದು ಅಶೋಕ್ ಗಸ್ತಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

-

ಬ್ರಾಹ್ಮಣರಿಗೆ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ಅನುಮತಿ – ಸಿಎಂಗೆ ಧನ್ಯವಾದ ತಿಳಿಸಿದ ಸಚ್ಚಿದಾನಂದ ಮೂರ್ತಿ
ಕೋಲಾರ: ಎಂಎಲ್‍ಸಿ ಆಕಾಂಕ್ಷಿಯಾಗಿದ್ದ ನನಗೆ ಮಂಡಳಿ ಅದ್ಯಕ್ಷರನ್ನಾಗಿ ಮಾಡಿದ್ದು, ಪ್ರಾರಂಭದಲ್ಲಿ ಇಷ್ವವಿರಲಿಲ್ಲ. ಆದರೆ ಇದೀಗ ತೃಪ್ತಿ ತಂದಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೋಲಾರದಲ್ಲಿ ಹೇಳಿದ್ದಾರೆ.
ಕೋಲಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ಶಾಸಕನಾಗಿ, ಎಂಎಲ್‍ಸಿ ಆಗಬೇಕೆಂಬುವ ಆಸೆ ಇತ್ತು. ಆದರೆ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಿದ್ದು, ಇದೀಗ ತೃಪ್ತಿತಂದಿದೆ ಎಂದರು. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಯಡಿಯೂರಪ್ಪ ಅವರು ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡುವುದಕ್ಕೆ ಅನುಮತಿ ಕೊಟ್ಟಿರುವುದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಅಲ್ಲದೆ ಹಲವು ವರ್ಷಗಳಿಂದ ಬ್ರಾಹ್ಮಣರಿಗೆ ಜಾತಿ ಹಾಗೂ ಅದಾಯ ಪ್ರಮಾಣ ಪತ್ರವನ್ನು ನೀಡುತ್ತಿರಲಿಲ್ಲ. ಅನೇಕ ಬಾರಿ ಮನವಿ ಮಾಡಿಕೊಂಡ ನಂತರ ಇದೀಗ ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪತ್ರ ನೀಡುತ್ತಿರುವುದಕ್ಕೆ ಯಡಿಯೂರಪ್ಪ ಅವರಿಗೆ ಕೃತಜ್ಞತೆ ತಿಳಿಸಿದರು. ಅರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳ ವಿದ್ಯಾರ್ಥಿಗಳಿಗೆ, ರೈತರಿಗೆ ಹಾಗೂ ವೇದ ಉಪನ್ಯಾಕರಿಗೆ ಸೇರಿದಂತೆ ಸಣ್ಣ ಪ್ರಮಾಣದ ಗುಡಿ ಕೈಗಾರಿಕೆಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದೇ ತಿಂಗಳ 28ರಂದು ಬ್ರಾಹ್ಮಣರ ವೆಬ್‍ಸೈಟ್ ತೆರೆಯಲಾಗುತ್ತದೆ. ಆನ್‍ಲೈನ್ ಮೂಲಕ ಅರ್ಜಿಗಳನ್ನು ಹಾಕುವುದರ ಮೂಲಕ ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
-

ಸಜ್ಜನ ಕೋಟಾ ಶ್ರೀನಿವಾಸ ಪೂಜಾರಿ ಸಿಎಂ ಆಗಲಿ ಎಂಬುದೇ ನನ್ನ ಹಾರೈಕೆ: ಶರವಣ
– ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಸಿಎಂ ಗೈರು
ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಹಳ ಸಜ್ಜನರು. ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿ ಎಂದು ಹಾರೈಸುತ್ತೇನೆ ಎಂದು ಟಿ.ಎ ಶರವಣ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಅವಧಿ ಪೂರ್ಣಗೊಳಿಸಿದ 15 ಮಂದಿ ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ವಿಪಕ್ಷ ನಾಯಕ ಎಸ್.ಆರ್ ಪಾಟೀಲ್, ವಿಪಕ್ಷ ಸಚೇತಕ ನಾರಾಯಣಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ. ಅಲ್ಲದೆ ಶರವಣ, ಜಯಮಾಲ, ಜಯಮ್ಮ, ರೇವಣ್ಣ, ಶರಣಪ್ಪ ಮಟ್ಟೂರು, ಬೋಸರಾಜು ಸೇರಿ ಹಲವು ನಿವೃತ್ತಿ ಹೊಂದಿದ ಪರಿಷತ್ ಸದಸ್ಯರು ಕೂಡ ಪಾಲ್ಗೊಂಡಿದ್ದಾರೆ.

ಶರವಣ ಮಾತನಾಡಿ, ನಾನು ಮತ್ತೆ ಪುನರಾಯ್ಕೆ ಆಗುತ್ತೇನೆಂಬ ನಿರೀಕ್ಷೆ ಇತ್ತು. ಆದರೆ ನಿರಾಸೆ ಆಗಿದೆ. ಕೇವಲ ಮುನ್ನೂರು ಜನ ಮಾತ್ರ ಶಾಸಕರು ಎಂದು ಕರೆಸಿಕೊಳ್ಳುತ್ತಾರೆ. ಅವರಲ್ಲಿ ನಾನೂ ಒಬ್ಬನಾಗಿದ್ದೆ ಅನ್ನೋದೇ ಸಂತೋಷದ ವಿಚಾರ. ಕೋಟಾ ಶ್ರೀನಿವಾಸ ಪೂಜಾರಿ ಅವರು ಬಹಳ ಸಜ್ಜನರು. ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿ ಎಂದು ಹಾರೈಸುತ್ತೇನೆ. ಈ ಸಂದರ್ಭದಲ್ಲಿ ನನಗೆ ಸಹಕಾರ ಕೊಟ್ಟ ಎಲ್ಲರಿಗೂ ಪಕ್ಷಾತೀತವಾಗಿ ಧನ್ಯವಾದಗಳು ಎಂದು ತಿಳಿಸಿದರು.

ಹಿಂದುಳಿದ ಸಮುದಾಯದಿಂದ ಬಂದ ನನಗೆ ಉತ್ತಮ ಅವಕಾಶ ದೊರಕಿಸಿ ಕೊಟ್ಟಿದ್ರಿ. ನನಗೆ ತಂದೆ ಇಲ್ಲ. ಸಭಾಪತಿಗಳನ್ನು ತಂದೆ ಸ್ಥಾನದಲ್ಲಿ ನೋಡಿದ್ದೇನೆ. ಕೋಟಾ ಶ್ರೀನಿವಾಸ್ ಪೂಜಾರಿಯನ್ನು ಸೋದರನ ಸ್ಥಾನದಲ್ಲಿ ನೋಡಿದ್ದೇನೆ ಎಂದು ಹೇಳುತ್ತಾ ತಿಪ್ಪಣ್ಣ ಕಮಕನೂರು ಭಾವುಕರಾದರು. ಜಯಮಾಲ, ತಿಪ್ಪಣ್ಣ ಕಮಕನೂರು, ಶರಣಪ್ಪ ಮಟ್ಟೂರು, ಜಯಮ್ಮ, ಬೋಸರಾಜ್, ಎಚ್.ಎಂ.ರೇವಣ್ಣ, ಟಿಎ ಶರವಣ, ಎಂಸಿ ವೇಣುಗೋಪಾಲ್‍ಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿದ ಬೀಳ್ಕೊಡಲಾಯಿತು. ಬೀಳ್ಕೊಡುಗೆ ಸಮಾರಂಭದಲ್ಲಿ 8 ಮಂದಿ ನಿವೃತ್ತ ಪರಿಷತ್ ಸದಸ್ಯರು ಮಾತ್ರ ಇದ್ದರು. ಉಳಿದ 8 ಜನರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಕಾರ್ಯಕ್ರಮಕ್ಕೆ ಸಿಎಂ ಗೈರು:
ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಗೈರಾಗಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ಸಿಎಂ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ.