Tag: BSY

  • ಮಂತ್ರಿಗಿರಿ ಸಿಕ್ಕಿಲ್ಲ, ಅನುದಾನ ಇಲ್ಲ – ಬಿಎಸ್‍ವೈ ವಿರುದ್ಧ ದೂರು

    ಮಂತ್ರಿಗಿರಿ ಸಿಕ್ಕಿಲ್ಲ, ಅನುದಾನ ಇಲ್ಲ – ಬಿಎಸ್‍ವೈ ವಿರುದ್ಧ ದೂರು

    – ಹೈಕಮಾಂಡ್ ಭೇಟಿಗೆ ಉ.ಕರ್ನಾಟಕ ಶಾಸಕರ ಯತ್ನ

    ನವದೆಹಲಿ: ಕೊರೊನಾ ವೈರಸ್ ಸೋಂಕು ತಡೆಗೆ ಸಿಎಂ ಬಿಎಸ್‍ವೈ ನೇತೃತ್ವದ ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದ್ದರೆ, ಇತ್ತ ಸದ್ದಿಲ್ಲದೆ ಅವರ ವಿರುದ್ಧವೇ ದೂರು ನೀಡಲು ಶಾಸಕರ ಬಣವೊಂದು ಸಿದ್ಧವಾಗಿದೆ.

    ಮಂತ್ರಿಗಿರಿಗಾಗಿ ಸಿಗದೆ ಅತೃಪ್ತಗೊಂಡಿರುವ ಮಾಜಿ ಸಚಿವ ಶಾಸಕ ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ ಸೇರಿ ಉತ್ತರ ಕರ್ನಾಟಕದ ಕೆಲ ನಾಯಕರು ದೆಹಲಿ ತೆರಳಿದ್ದು ಹೈಕಮಾಂಡ್ ಭೇಟಿಗೆ ಪ್ರಯತ್ನ ನಡೆಸಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಕೆಲ ಕೇಂದ್ರ ಸಚಿವರ ಭೇಟಿ ಮಾಡಿರುವ ನಾಯಕರು ಕೇಂದ್ರ ಸಚಿವರ ಮೂಲಕ ಹೈಕಮಾಂಡ್ ಭೇಟಿಗೆ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಇದರೆ ಇದುವರೆಗೂ ಹೈಕಮಾಂಡ್ ಭೇಟಿಗೆ ಅವಕಾಶ ನೀಡಿಲ್ಲ.

    ಹೈಕಮಾಂಡ್ ಭೇಟಿಗೆ ಅವಕಾಶ ನೀಡಿದ್ದಲ್ಲಿ ಸಿಎಂ ಬಿಎಸ್‍ವೈ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ಶಾಸಕರಲ್ಲಿ ಸೃಷ್ಟಿಯಾಗಿರುವ ಅಸಮಾಧಾನ ಹೊರ ಹಾಕುವ ಸಾಧ್ಯತೆ ಇದೆ. ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಹೈಕಮಾಂಡ್ ಮುಂದೆ ಬಿಎಸ್‍ವೈ ಕಾರ್ಯವೈಖರಿ ಬಗ್ಗೆ ಕಂಪ್ಲೆಂಟ್ ನೀಡಲು ನಿರಾಣಿ ಹಾಗೂ ಗ್ಯಾಂಗ್ ಯತ್ನ ನಡೆದಿದೆ.

    ಇದೇ ವೇಳೆ ಬಸನಗೌಡ ಪಾಟೀಲ್, ಮುರುಗೇಶ್ ನಿರಾಣಿ ಮಂತ್ರಿಗಿರಿ ಸ್ಥಾನ ನೀಡುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ. ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಒಂದು ಸ್ಥಾನ ನೀಡುವಂತೆ ಇತರೆ ಉತ್ತರ ಕರ್ನಾಟಕ ಶಾಸಕರೊಂದಿಗೆ ತೆರಳಿ ಬೇಡಿಕೆ ಇಡುವ ಸಾಧ್ಯದೆ ಎನ್ನಲಾಗಿದೆ.

  • ಅನಾಮಧೇಯ ಪತ್ರಕ್ಕೆ ಯಡಿಯೂರಪ್ಪ ಆಪ್ತರಿಂದ ಮೆಗಾ ಟಾಂಗ್

    ಅನಾಮಧೇಯ ಪತ್ರಕ್ಕೆ ಯಡಿಯೂರಪ್ಪ ಆಪ್ತರಿಂದ ಮೆಗಾ ಟಾಂಗ್

    ಬೆಂಗಳೂರು: ಅನಾಮಧೇಯ ಪತ್ರಕ್ಕೆ ಯಡಿಯೂರಪ್ಪ ಆಪ್ತರು ಮೆಗಾ ಟಾಂಗ್ ನೀಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಆಪ್ತ ತಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾಗೆ ರಹಸ್ಯವಾಗಿ ಪತ್ರ ರವಾನಿಸಿದೆ ಎಂದು ತಿಳಿದು ಬಂದಿದೆ.

    ರಾಜ್ಯ ಬಿಜೆಪಿಯಲ್ಲಿ ಮಂಗಳವಾರ ಮಹತ್ವದ ಬೆಳವಣಿಗೆ ನಡೆದಿದೆ. ಯಡಿಯೂರಪ್ಪ ನಂತರದ ನಾಯಕ ಯಾರು ಹೇಳಿ ಎಂದು ಅನಾಮಧೇಯ ಪತ್ರ ಬಂದಿತ್ತು. ಯಡಿಯೂರಪ್ಪ ವಿರುದ್ಧದ ಅನಾಮಧೇಯ ಪತ್ರಕ್ಕೆ ಬಿಎಸ್‍ವೈ ಟೀಂ ಎರಡು ಪುಟಗಳ ರಹಸ್ಯ ಪತ್ರ ಬರೆದು ಹೈಕಮಾಂಡ್‍ಗೆ ರವಾನಿಸುವ ಮೂಲಕ ಕೌಂಟರ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ರಹಸ್ಯ ಪತ್ರದ ಸಾರಾಂಶ ಏನು?
    ಯಡಿಯೂರಪ್ಪಗೆ ವಯಸ್ಸಾಗಿದೆ, ಆಡಳಿತ ನಡೆಸಲು ಆಗುತ್ತಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಪಕ್ಷದ ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳೇ ಇದನ್ನು ಸೃಷ್ಟಿಸಿರಬಹುದು. ಅನಾಮಧೇಯ ಪತ್ರದ ಮೂಲಕ ಅಪಪ್ರಚಾರ ಮಾಡಿದವರ ಬಗ್ಗೆ ಪಕ್ಷ ಎಚ್ಚರಿಕೆ ಕೊಡಬೇಕು. ಮುಖ್ಯಮಂತ್ರಿ ಆಗುವ ಮೊದಲು ಇಲ್ಲದಿದ್ದ ವಯಸ್ಸು ಈಗ ಎಲ್ಲಿಂದ ಬರುತ್ತೆ? ವಿಶೇಷ ಪ್ರಕರಣ ಎಂದೇ ಯಡಿಯೂರಪ್ಪ ಸಿಎಂ ಆಗಿದ್ದು ಎನ್ನುವ ಅರಿವು ಎಲ್ಲರಿಗೂ ಇದೆ. ಹೀಗಿರುವಾಗ ಪದೇ ಪದೇ ಗೊಂದಲ ಸೃಷ್ಟಿಸುವ ಕೆಲಸ ಆಗುತ್ತಿದೆ. ಲಿಂಗಾಯತ ಸಮುದಾಯದ ಮತ್ತೊಬ್ಬ ನಾಯಕನನ್ನು ಹೆಸರಿಸಲಿ. ಯಡಿಯೂರಪ್ಪ ನಂತರದ ನಾಯಕತ್ವ ಯಾರದ್ದು ಎನ್ನುವ ಪ್ರಶ್ನೆಗೆ ಯಾರ ಬಳಿಯೂ ಉತ್ತರ ಇಲ್ಲ. ಯಡಿಯೂರಪ್ಪ ಕೆಳಗಿಳಿದರೆ ಈ ನಾಯಕ ಮುಂದುವರಿಸುತ್ತಾನೆ ಎನ್ನುವ ವಿಶ್ವಾಸವೇ ಪಕ್ಷದಲ್ಲಿ ಇಲ್ಲ. ಇನ್ನು ಯಡಿಯೂರಪ್ಪಗೆ ವಯಸ್ಸಾಗಿರಬಹುದು, ಆದ್ರೆ ಅನಾರೋಗ್ಯ ಇಲ್ಲ. ಪಕ್ಷಕ್ಕೆ ನೀಡಿದ ಕೊಡುಗೆಯನ್ನೇ ಪರಿಗಣಿಸಿ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಅವರನ್ನು ಕೇಂದ್ರ ಸರ್ಕಾರದ ಸಂಪುಟದಲ್ಲಿ ಉಳಿಸಿಕೊಂಡಿದ್ದನ್ನು ಗಮನಕ್ಕೆ ತರುತ್ತೇವೆ. ಯಡಿಯೂರಪ್ಪ ಮತ್ತೊಂದು ಅವಧಿಗೆ ಆಸೆಯನ್ನು ಪಟ್ಟಿಲ್ಲ. ಹೀಗಿರುವಾಗ ಪೂರ್ಣಾವಧಿ ತನಕ ಸಿಎಂ ಆಗಿ ಕೆಲಸ ಮಾಡಲು ಹೈಕಮಾಂಡ್ ಬೆಂಬಲ ಕೊಡಬೇಕು. ಅನಾಮಧೇಯ ಪತ್ರ ಸೃಷ್ಟಿಸುವ ವಿರೋಧಿಗಳಿಗೆ ಸಂದೇಶ ರವಾನಿಸಿ. ಇಲ್ಲದಿದ್ದರೆ ಪಕ್ಷ, ಸರ್ಕಾರ ಎರಡಕ್ಕೂ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

  • ಪ್ರಧಾನಿಯವರೇ ನಾವು ನಿಮ್ಮ ಜೊತೆಗಿದ್ದೇವೆ ಪಾಕಿಸ್ತಾವನ್ನು ಮುಗಿಸಿಬಿಡಿ: ವಿ.ಎಸ್ ಉಗ್ರಪ್ಪ

    ಪ್ರಧಾನಿಯವರೇ ನಾವು ನಿಮ್ಮ ಜೊತೆಗಿದ್ದೇವೆ ಪಾಕಿಸ್ತಾವನ್ನು ಮುಗಿಸಿಬಿಡಿ: ವಿ.ಎಸ್ ಉಗ್ರಪ್ಪ

    _ ಬಿಎಸ್‍ವೈ, ಸಿಟಿ ರವಿಗೆ ನಾಚಿಕೆ ಆಗಬೇಕು

    ತುಮಕೂರು: ಪಾಕಿಸ್ತಾನ ನಮ್ಮ ಶತ್ರುರಾಷ್ಟ್ರ ಅನ್ನೋದರಲ್ಲಿ ಯಾವುದೇ ಪ್ರಶ್ನೆಯಿಲ್ಲ. ಪ್ರಧಾನಿ ಮೋದಿಯವರು ನಮ್ಮೆಲ್ಲರ ಬೆಂಬಲ ಪಡೆದು ಪಾಕಿಸ್ತಾನವನ್ನು ಮುಗಿಸಿ ಬಿಡಲಿ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪ್ರಧಾನಿಯವರಿಗೆ ಬೆಂಬಲ ಸೂಚಿಸಿದ್ದಾರೆ.

    ಮೊದಲು ದೇಶ ಎಂಬ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಆದರೆ ಬಿಜೆಪಿಯ ದ್ವಂದ್ವ ನಿಲುವಿನಿಂದ ದೇಶದ ರಕ್ಷಣೆ ವಿಚಾರ ಕಗ್ಗಂಟಾಗಿ ಉಳಿದಿದೆ. 1971 ರಲ್ಲಿ ಇಂದಿರಾ ಗಾಂಧಿ ಪಾಕಿಸ್ತಾನವನ್ನು ಚಿತ್ರಾನ್ನ ಮಾಡಿದ್ದರು. ವಾಜಪೇಯಿ, ಎಲ್.ಕೆ ಅಡ್ವಾಣಿಯವರ ಸಹಕಾರ ಪಡೆದು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿ ದಿಟ್ಟತನ ತೋರಿದ್ದರು. ಪ್ರಧಾನಿ ಮೋದಿಯವರೂ ಈಗ ಪಾಕಿಸ್ತಾನಕ್ಕೆ ಬುದ್ಧಿ ಕಲಿಸುವುದರಲ್ಲಿ ನಮ್ಮ ಅಭ್ಯಂತರ ಇಲ್ಲ. ನಾವೂ ಅವರಿಗೆ ಬೆಂಬಲ ನೀಡುತ್ತೇವೆ ಎಂದರು.

    ರಾಜ್ಯದ ಪ್ರವಾಸಿ ತಾಣಗಳಲ್ಲಿ ಜೂಜು ಕೇಂದ್ರವನ್ನು ಸ್ಥಾಪಿಸಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಉಗ್ರಪ್ಪ ಖಂಡಿಸಿದ್ದಾರೆ. ಇದು ಬಿಜೆಪಿಯ ರಾಷ್ಟ್ರ ಪ್ರೇಮ ಹಾಗೂ ಸಂಸ್ಕೃತಿಯನ್ನು ತೋರಿಸುತ್ತದೆ. ಈ ರೀತಿಯ ಜೂಜು ಕೇಂದ್ರವನ್ನು ತೆರೆಯಲು ಹೊರಟಿರುವ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಸಿ.ಟಿ ರವಿಗೆ ನಾಚಿಕೆ ಆಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

  • ರಾಜಾಹುಲಿ ಮಹಾ ಹೋಮದ ಹಿಂದಿದೆ ಸೀಕ್ರೆಟ್!

    ರಾಜಾಹುಲಿ ಮಹಾ ಹೋಮದ ಹಿಂದಿದೆ ಸೀಕ್ರೆಟ್!

    ಬೆಂಗಳೂರು: ದೊಡ್ಡ ಗೌಡ್ರ ಮಹಾಪೂಜೆಯ ಮಾದರಿಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸುದರ್ಶನ ನರಸಿಂಹ ಹೋಮ ನಡೆಸಿದ್ದಾರೆ.

    ಗೌಡ್ರು ಹಾಗೂ ರೇವಣ್ಣ ಈ ಹಿಂದೆ ಮಹಾ ಹೋಮ ನಡೆಸಿದ್ದರು. ವಿಶೇಷ ಅಂದರೆ ಗೌಡ್ರು ದೇಗುಲದಲ್ಲಿ ಈ ಪೂಜೆ ನಡೆಸಿದ್ರೆ, ಬಿಎಸ್‍ವೈ ತಮ್ಮ ಮನೆಯೊಳಗೆ ಅಗೋಚರಿತ ಪೂಜೆ ನಡೆಸುತ್ತಿದ್ದಾರೆ. ಇದು ಅತ್ಯಂತ ಶಕ್ತಿಶಾಲಿಯಾಗಿ ರಾಜಕೀಯದ ಶತ್ರುಗಳ ಶಕ್ತಿಯನ್ನು ಉಡುಗಿಸುವ ಪವರ್ ಫುಲ್ ಹೋಮ ಇದಾಗಿದೆ.

    ಕೇವಲ ರಾಜಕೀಯದ ಹೊರಗಡೆಯ ಶತ್ರು ಮಾತ್ರವಲ್ಲ, ಪಕ್ಷದೊಳಗೆ ಇದ್ದು ತಮಗೆ ಕೇಡು ಬಯಸುವ ಶಕ್ತಿಯ ಬಾಧೆಯೂ ತಮಗೆ ತಟ್ಟದಿರಲಿ ಅಂತ ಈ ಪೂಜೆ ಮಾಡಿದ್ದಾರೆ.

    ಎರಡು ವರ್ಷದ ಹಿಂದೆ ಬಿಎಸ್‍ವೈ ರಾಜಕೀಯ ವಾಗಿ ಹಿಂದೆ ಸರಿದಾಗ ಅಪರೇಷನ್ ಕಮಲ ಕೈಕೊಟ್ಟಾಗ ಈ ಪೂಜೆಯನ್ನು ಮಾಡಿದ್ದರು. ಅಂದಿನಿಂದ ಬಿಎಸ್ ವೈ ಬದುಕಿನಲ್ಲಿ ಸಣ್ಣ ಬದಲಾಗಿತ್ತು. ಎರಡು ವರ್ಷದಲ್ಲಿ ಬಿಎಎಸ್ ವೈ ಎದುರಾಳಿಗಳ ರೆಕ್ಕೆ-ಪುಕ್ಕ ಮುರಿದು ಹಾಕಿ ಸಿಎಂ ಕುರ್ಚಿಯನ್ನು ಭದ್ರಪಡಿಸಿದರ ಹಿಂದೆ ಈ ಹೋಮದ ಶಕ್ತಿಯಿತ್ತು ಎನ್ನಲಾಗಿದೆ.

    ಅಲ್ಲಿಂದ ಬಿಎಸ್ ವೈ ತಮಗೆ ರಾಜಕೀಯದಲ್ಲಿ ಎಡರು-ತೊಡರುಗಳು ಶುರುವಾಗುತ್ತದೆ. ಬಾಹ್ಯ-ಅಂತರ್ ಶತ್ರುಗಳ ಕಾಟ ಶುರುವಾಗುತ್ತೆ ಅಂದಾಗೆಲ್ಲ ಈ ಪೂಜೆ ಮಾಡುತ್ತಿದ್ದಾರೆ. ಇದು ಎರಡನೇ ಬಾರಿ ಈ ವಿಶೇಷ ಹೋಮ ನಡೆಸಿರೋದು ವಿಶೇಷವಾಗಿದೆ. ಪಕ್ಷದೊಳಗೆ ಕಾಲೆಳೆಯುವ, ತಮ್ಮ ಪುತ್ರನ ಏಳ್ಗೆಯನ್ನು ಸಹಿಸದ ಕೆಲ ಶಕ್ತಿಗಳು ಪಕ್ಷದೊಳಗೆ ಕೆಲಸ ಮಾಡುತ್ತಿರೋದು ಈ ಪೂಜೆಗೆ ಮುಖ್ಯ ಕಾರಣ ಎನ್ನಲಾಗಿದ್ದರೂ. ಹೊರಗಡೆಯ ಶತ್ರುಗಳನ್ನು ಮಣಿಸಲು ಈ ಪೂಜೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಸುದರ್ಶನ ನರಸಿಂಹ ಹೋಮದ ವೈಶಿಷ್ಟ್ಯವೇನು?
    ಪುರಾಣದಲ್ಲಿ ಶತ್ರು ಸಂಹಾರಕ್ಕಾಗಿ ದೇವತೆಗಳು ಹೋಮ ಪೂಜೆಯ ಮೂಲಕ ವಿಷ್ಣುವನ್ನು ಸುದರ್ಶನ ಚಕ್ರ ಪ್ರಯೋಗಿಸುವಂತೆ ಮಾಡಿ ಶತ್ರುಸಂಹಾರ ಮಾಡುತ್ತಿದ್ದರು. ಪ್ರಹ್ಲಾದನನ್ನು ರಕ್ಷಿಸಲು ಹರಿ ನರಸಿಂಹನ ಅವಾತರವೆತ್ತುವಂತೆ ಇದು ಮಹಾ ವಿಷ್ಣುವನ್ನು ಶತ್ರು ಸಂಚಾರಕ್ಕಾಗಿ ಒಲಿಸಿ ಕೊಳ್ಳುವ ಪರಿ. ಸುದರ್ಶನ ಜಪದಿಂದ ಜೊತೆಯಲ್ಲಿದ್ದು ಕೆಡುಕು ಬಯಸುವವರು ನಾಶವಾದರೆ ಅವರ ಶಕ್ತಿ ಕುಂದಿದರೆ ನರಸಿಂಹನ ಜಪದಿಂದ ಶತ್ರು ಸಂಹಾರವೇ ಆಗಲಿದೆ. ಎದುರಾಳಿ ಸಂಪೂರ್ಣ ಶಕ್ತಿ ಕಳೆದುಕೊಳ್ಳುತ್ತಾನೆ.

    ಒಟ್ಟು 12 ಸಾವಿರ ಜಪವನ್ನು ಮಾಡಲಾಗುತ್ತದೆ. ನವರಾತ್ರಿಯ ಸಂದರ್ಭದಲ್ಲಿ ದುರ್ಗೆ ಒಂದೊಂದು ಅವತಾರ ವೆತ್ತಯತ್ತಾಳೋ ಅದೇ ರೀತಿ ಈ ಹೋಮದಿಂದ ವಿಷ್ಣು ನಾನಾ ಅವತಾರವೆತ್ತಿ ಶತ್ರುಸಂಹಾರ ಮಾಡುತ್ತಾನೆ ಅನ್ನುವ ನಂಬಿಕೆ ಇದೆ.

  • ಸಿಎಂಗೆ ನಿತ್ಯ ಬೆಳಗ್ಗೆ ‘ಕತ್ತಿ’ ದರ್ಶನ

    ಸಿಎಂಗೆ ನಿತ್ಯ ಬೆಳಗ್ಗೆ ‘ಕತ್ತಿ’ ದರ್ಶನ

    ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದಿದ್ದೇ ತಡ ಸಿಎಂ ಯಡಿಯೂರಪ್ಪ ಅವರು ಅದರ ಸಂಭ್ರಮವನ್ನೂ ಸರಿಯಾಗಿ ಅನುಭವಿಸದೇ ತಳಮಳ ಪಡುತ್ತಿದ್ದಾರೆ. ಭರ್ಜರಿ ಫಲಿತಾಂಶಕ್ಕೆ ಖುಷಿ ಪಡಬೇಕೋ ಇಲ್ಲ ಸಂಪುಟ ತಲೆನೋವು ಕಡಿಮೆ ಮಾಡಿಕೊಳ್ಳಬೇಕೋ ಅಂತ ಗೊತ್ತಾಗದೇ ಸಿಎಂ ತೊಳಲಾಡುತ್ತಿದ್ದಾರೆ. ಈ ಮಧ್ಯೆ ಸಂಪುಟ ವಿಸ್ತರಣೆಗೆ ಇನ್ನಷ್ಟು ವಿಳಂಬ ಆಗುವುದರಿಂದ ಸಿಎಂ ಅವರ ತಾಳ್ಮೆಯೂ ಕಮ್ಮಿಯಾಗತೊಡಗಿದೆ. ಇದೆಲ್ಲದರ ನಡುವೆ ಸಚಿವ ಸ್ಥಾನದ ಪ್ರಭಾವೀ ಆಕಾಂಕ್ಷಿ ಹಿರಿಯ ಶಾಸಕ ಉಮೇಶ್ ಕತ್ತಿ, ಸಿಎಂಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದ್ದಾರೆ.

    ಸರ್ಕಾರದ ಮೊದಲ ಸಂಪುಟ ರಚನೆ ಬಳಿಕ ಮುನಿಸಿಕೊಂಡಿದ್ದ ಉಮೇಶ್ ಕತ್ತಿ, ಉಪಚುನಾವಣೆವರೆಗೂ ಸಿಎಂ ಭೇಟಿಗೆ ಅಷ್ಟಾಗಿ ಮನಸ್ಸು ಮಾಡುತ್ತಿರಲಿಲ್ಲ. ಆದರೆ ಯಾವಾಗ ಫಲಿತಾಂಶ ಬಂತೋ ಅಂದು ರಾತ್ರಿಯೇ ಬೆಳಗಾವಿಯಿಂದ ಹೊರಟ ಉಮೇಶ್ ಕತ್ತಿ ಬೆಂಗಳೂರಿನಲ್ಲೇ ಇದ್ದಾರೆ.

    ಫಲಿತಾಂಶ ಬಂದ ನಂತರ ಸಚಿವ ಸ್ಥಾನ ಬೇಕೇ ಬೇಕು ಎಂದು ಶಾಸಕ ಉಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ. ಅವತ್ತಿನಿಂದಲೂ ನಿತ್ಯ ಎರಡು-ಮೂರು ಸಲ ಉಮೇಶ್ ಕತ್ತಿ ಸಿಎಂ ಭೇಟಿ ಮಾಡುತ್ತಿದ್ದಾರೆ. ಬೆಳಗ್ಗೆ ಎದ್ದರೆ ಸಾಕು ಉಮೇಶ್ ಕತ್ತಿ ಸಿಎಂ ಯಡಿಯೂರಪ್ಪ ಅವರ ಧವಳಗಿರಿ ನಿವಾಸದಲ್ಲಿ ಪ್ರತ್ಯಕ್ಷರಾಗುತ್ತಿದ್ದಾರೆ. ಇಂದು ಸಹ ಬೆಳ್ಳಂಬೆಳಗ್ಗೆ 2 ಬಾರಿ ಉಮೇಶ್ ಕತ್ತಿ ಸಿಎಂ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಸಿಎಂಗೆ ಬೆಳಗ್ಗೆ ಎದ್ದರೆ ಕತ್ತಿಯವರೇ ದರ್ಶನ ಕೊಡುತ್ತಿದ್ದಾರೆ.

    ಸಿಎಂ ನಿವಾಸ, ವಿಧಾನಸೌಧ, ಗೃಹ ಕಚೇರಿ ಕೃಷ್ಣಾ.. ಹೀಗೆ ಎಲ್ಲೆಂದರಲ್ಲಿ ಉಮೇಶ್ ಕತ್ತಿಯವರು ಸಿಎಂ ಭೇಟಿ ಮಾಡುತ್ತಿದ್ದಾರೆ. ಉಪಚುನಾವಣೆಗೂ ಮುನ್ನ ಕಾಣಿಸಿಕೊಳ್ಳದ ಶಾಸಕ, ಈಗ ನಿತ್ಯ ಸಿಎಂ ಎದುರು ಪ್ರತ್ಯಕ್ಷರಾಗಿ ಸಚಿವ ಸ್ಥಾನಕ್ಕೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಉಮೇಶ್ ಕತ್ತಿ ಕಾಟದಿಂದ ಹೇಗೆ ತಪ್ಪಿಸಿಕೊಳ್ಳಬೇಕೆಂದು ಸಿಎಂ ಯೋಚನೆ ಮಾಡಿರೋದರಲ್ಲಿ ಅಚ್ಚರಿಯಿಲ್ಲ. ಸದ್ಯದ ಸನ್ನಿವೇಶದಲ್ಲಿ ಸಚಿವ ಸಂಪುಟ ವಿಸ್ತರಣೆ ಇನ್ನೊಂದು ತಿಂಗಳು ಆಗುವುದಿಲ್ಲ ಎಂಬ ಮಾತುಗಳು ಕೇಳಿಬರ್ತಿವೆ. ಇದು ನಿಜವಾದ್ರೆ ಅಲ್ಲಿಯವರೆಗೂ ಸಿಎಂ ಯಡಿಯೂರಪ್ಪ ಉಮೇಶ್ ಕತ್ತಿಯವರ ಈ ಕೊಸರಾಟವನ್ನು ಸಹಿಸಿಕೊಳ್ಳಲೇಬೇಕಾಗುತ್ತದೆ.

     

  • ಅಭಿವೃದ್ಧಿ ಹಾಗೂ ಅಪಪ್ರಚಾರದ ನಡುವಿನ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ – ಕೋಟ

    ಅಭಿವೃದ್ಧಿ ಹಾಗೂ ಅಪಪ್ರಚಾರದ ನಡುವಿನ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ – ಕೋಟ

    – ಜೆಡಿಎಸ್‍ನ ಕಣ್ಣೀರಿಗೆ ಉತ್ತರ ಕೊಟ್ಟಿದ್ದೇವೆ

    ಉಡುಪಿ: ಉಪಚುನಾವಣೆ ಗೆಲುವು ನಮಗೆ ಹರ್ಷ ತಂದಿದೆ. ಇದು ಅಭಿವೃದ್ಧಿ ಮತ್ತು ಅಪಪ್ರಚಾರದ ನಡುವಿನ ಚುನಾವಣೆ ಆಗಿತ್ತು. ಸಿಎಂ ಯಡಿಯೂರಪ್ಪನವರ ಅವಿರತ ಹೋರಾಟದಿಂದ 12 ಕಡೆ ಬಿಜೆಪಿ ಗೆದ್ದಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ಅಸ್ಥಿರ ವ್ಯವಸ್ಥೆ ಹೋಗಿ ಸ್ಥಿರ ಸರ್ಕಾರ ಬಂದಿದೆ. ಮೂರೂವರೆ ವರ್ಷ ಪರಿಣಾಮಕಾರಿ ಆಡಳಿತ ಕೊಡುತ್ತೇವೆ ಎಂದರು. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡಗೆ ಗೆಲುವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಜನರ ತೀರ್ಮಾನವನ್ನು ಗೌರವದಿಂದ ಸ್ವೀಕರಿಸಿದ್ದೇವೆ. ಮುಂದೆ ಏನು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಬಿಜೆಪಿಗೆ ಬೆಂಬಲಿಸುವುದಾಗಿ ಹೇಳಿದ್ದ ಶರತ್ ಬಚ್ಚೇಗೌಡ ಬಗ್ಗೆ ಸಿಎಂ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತೀರ್ಮಾನಿಸುತ್ತಾರೆ ಎಂದು ಹೇಳಿದರು.

    ಇದೇ ವೇಳೆ ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ ಎಂದ ಕೋಟ, ಕಣ್ಣೀರು ಹಾಕಿದರೆ ಕೇಕೆ ಹಾಕಿದರೆ ಗೆಲುವು ಸಿಗಲ್ಲ. ಯಡಿಯೂರಪ್ಪ ಈ ವಯಸ್ಸಿನಲ್ಲಿ ಓಡಾಟ ಮಾಡಿದ ಫಲ ಇದು. ಬಿಜೆಪಿ ಮತ್ತು ಬಿಎಸ್‍ವೈ ಅವರನ್ನು ಟೀಕಿಸುವವರು ಇನ್ನಾದರು ನಮ್ಮ ಶಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ಯಡಿಯೂರಪ್ಪ ಪುತ್ರ ವಿಜಯೇಂದ್ರ, ಡಿಸಿಎಂ ಅಶ್ವಥನಾರಾಯಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಓಡಾಟ ಮಾಡಿ ಕೆ.ಆರ್ ಪೇಟೆಯಲ್ಲಿ ಪಕ್ಷದ ಗೆಲುವಿಗೆ ಕಾರಣವಾಗಿದ್ದಾರೆ ಎಂದರು.

    ಬಿಜೆಪಿ ಮಂತ್ರಿಮಂಡಲದ ವಿಸ್ತರಣೆಯಾಗುತ್ತದೆ. ಸಾಕಷ್ಟು ಸಚಿವ ಸ್ಥಾನಗಳು ಖಾಲಿಯಿವೆ. ಮುಖ್ಯಮಂತ್ರಿಗಳ ಬಳಿ ಹಲವು ಖಾತೆಗಳಿವೆ. ಗೆದ್ದು ಬಂದವರಿಗೆ ಅವಕಾಶ ಕೊಡಲು ಸಿಎಂ ಖಾತೆ ಉಳಿಸಿಕೊಂಡಿದ್ದಾರೆ. ಸೂಕ್ಷ್ಮವಾಗಿ, ಪಕ್ಷವನ್ನು ಗಮನದಲ್ಲಿಟ್ಟುಕೊಂಡು ಖಾತೆ ಹಂಚಿಕೆ ಮಾಡುತ್ತಾರೆ. ಕೇಂದ್ರದ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇಡೀ ಪಕ್ಷವನ್ನು ಒಟ್ಟಾಗಿ ಒಂದಾಗಿ ತೆಗೆದುಕೊಂಡು ಹೋಗುವ ಸಚಿವರ ತಂಡ ರಚನೆಯಾಗುತ್ತದೆ. ರಾಜ್ಯಾಧ್ಯಕ್ಷರು, ಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಇಡೀ ರಾಜ್ಯ ಬದ್ಧವಾಗಿರಬೇಕು ಎಂದು ಪಕ್ಷದೊಳಗೆ ತೀರ್ಮಾನವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

  • 43 ರೋಡ್ ಶೋ, 10 ಬೈಕ್ ರ‍್ಯಾಲಿ – ತವರಿನಲ್ಲಿ ಅಪ್ಪನ ಕೈಲಾಗದ್ದು ಮಗನಿಗೆ ಸಾಧ್ಯವಾಗಿದ್ದು ಹೇಗೆ?

    43 ರೋಡ್ ಶೋ, 10 ಬೈಕ್ ರ‍್ಯಾಲಿ – ತವರಿನಲ್ಲಿ ಅಪ್ಪನ ಕೈಲಾಗದ್ದು ಮಗನಿಗೆ ಸಾಧ್ಯವಾಗಿದ್ದು ಹೇಗೆ?

    ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ತನ್ನ ಖಾತೆ ತೆರೆದಿದ್ದು ಕೆ.ಆರ್ ಪೇಟೆಯಲ್ಲಿ ಭರ್ಜರಿ ಜಯಸಾಧಿಸಿದೆ. ಸಿಎಂ ಬಿಎಸ್‍ವೈ ತವರಿನಲ್ಲಿ ಮೊದಲ ಬಾರಿಗೆ ಕಮಲ ಅರಳಿದ್ದು, ಸಿಎಂ ಪುತ್ರ ವಿಜಯೇಂದ್ರನ ಶ್ರಮಕ್ಕೆ ಫಲ ಸಿಕ್ಕಿದೆ.

    ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ 9,509 ಮತಗಳಿಂದ ಗೆಲ್ಲುವ ಮೂಲಕ ಮಂಡ್ಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದ ಎಲ್ಲ 7 ಕ್ಷೇತ್ರಗಳನ್ನು ಜೆಡಿಎಸ್ ಗೆದ್ದ ಹಿನ್ನೆಲೆಯಲ್ಲಿ ಈ ಬಾರಿ ಇಲ್ಲಿ ಗೆಲ್ಲುವುದು ಕಷ್ಟ ಎನ್ನಲಾಗಿತ್ತು. ಆದರೆ ಎಲ್ಲ ವಿಶ್ಲೇಷಣೆಗಳು ವಿಜಯೇಂದ್ರ ಅವರ ಸ್ಟಾಟರ್ಜಿಗೆ ತಲೆಕೆಳಗಾಗಿದ್ದು ಮೊದಲ ಬಾರಿಗೆ ಬಿಜೆಪಿ ಜಯಭೇರಿ ಭಾರಿಸಿದೆ.

    ನಮ್ಮ ತವರು ಜಿಲ್ಲೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿದ್ದ ವಿಜಯೇಂದ್ರ, ಇಪ್ಪತ್ತು ದಿನ ಕೆಆರ್ ಪೇಟೆಯಲ್ಲೇ ಇದ್ದರು. ಜೊತೆಗೆ 43 ರೋಡ್ ಶೋ, 10 ಬೈಕ್ ರ‍್ಯಾಲಿ ಮತ್ತು 20 ಕ್ಕಿಂತ ಹೆಚ್ಚು ಸಭೆಗಳನ್ನು ಮಾಡಿದ್ದರು. ಪ್ರತಿದಿನ ಊರಿನ ದೇವಸ್ಥಾನ, ಊರಿನ ಕಟ್ಟೆಯಲ್ಲಿ ಬಿಜೆಪಿ ಮುಖಂಡರು ಸಭೆ ಮಾಡಿದ್ದು, ಪಕ್ಷದ ಕಾರ್ಯಕರ್ತರ ಜೊತೆ ಊರಿನ ಮುಖಂಡರನ್ನು ಅವರು ವಿಜಯೇಂದ್ರ ಅವರ ಹತ್ತಿರಕ್ಕೆ ಕರೆದುಕೊಂಡು ಬಂದಿದ್ದರು. ಅವರ ಬೇಡಿಕೆಯ ಪಟ್ಟಿ ಕೇಳಿದ್ದ ವಿಜಯೇಂದ್ರ ಅವರು ಪ್ರತಿ ಮುಖಂಡರಿಗೆ ತನ್ನ ಫೋನ್ ನಂಬರ್ ಹಾಗೂ ಪಿಎ ನಂಬರ್ ಅನ್ನುಕೊಟ್ಟು ಸಮಸ್ಯೆಯನ್ನು ಆಲಿಸಿ ಅದಕ್ಕೆ ಬೇಕಾದ ಪರಿಹಾರವನ್ನು ಮಾಡಿಸಿಕೊಟ್ಟಿದ್ದರು.

    ಸಚಿವ ಮಾಧುಸ್ವಾಮಿಯ ಹೇಳಿಕೆಯಿಂದ ಡ್ಯಾಮೇಜ್ ಆಗುತ್ತಿದ್ದಂತೆ ಅಶ್ವಥ್ ನಾರಾಯಣರನ್ನು ತನ್ನ ಜೊತೆ ಉಸ್ತುವಾರಿಗೆ ಸೇರಿಸಿಕೊಂಡು ಒಕ್ಕಲಿಗ ಮತ ಸೆಳೆಯುವಲ್ಲಿ ಬಿಜೆಪಿ ಸಫಲವಾಗಿತ್ತು. ಇದರ ಜೊತೆಗೆ ವಿಜಯೇಂದ್ರ ಅವರು ಯುವಜನರ ಜೊತೆ ಸಮಾಲೋಚನೆ ನಡೆಸಿ ತನ್ನ ತಂದೆಯವರ ಹುಟ್ಟೂರು ಇದು ಇಲ್ಲಿ ಬಿಜೆಪಿ ಗೆದ್ದರೇ ನಿಮ್ಮೂರಿನ ಅಭಿವೃದ್ಧಿಯಾಗುತ್ತೆ ಎಂದು ಭಾವನಾತ್ಮಕ ದಾಳ ಉರುಳಿಸಿದ್ದರು. ಈ ಎಲ್ಲಾ ಕಾರಣದಿಂದ ಬಿಜೆಪಿ ಮೊದಲ ಬಾರಿಗೆ ಮಂಡ್ಯದಲ್ಲಿ ತನ್ನ ಖಾತೆ ತೆರೆದಿದೆ.

    ಮತ ಎಣಿಕೆಯ ಮೊದಲ ಮೂರು ಸುತ್ತಿನಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿತ್ತು. 4ನೇ ಸುತ್ತಿನಲ್ಲಿ ನಾರಾಯಣ ಗೌಡರಿಗೆ ಮನ್ನಡೆ ಸಿಗಲು ಆರಂಭವಾಯಿತು. ಕೊನೆಗೆ 17ನೇ ಸುತ್ತು ಮುಕ್ತಾಯದ ವೇಳೆ ನಾರಾಯಣ ಗೌಡ 9,509 ಮತಗಳ ಅಂತರದಿಂದ ಜಯಗಳಿಸಿದರು. ಬಿಜೆಪಿ 62,265 ಮತಗಳನ್ನು ಪಡೆದರೆ ಜೆಡಿಎಸ್ 52,756 ಮತಗಳನ್ನು ಪಡೆದಿದೆ. ಕಾಂಗ್ರೆಸ್ 37,938 ಮತಗಳನ್ನು ಪಡೆದಿದೆ.

  • ಉಪ ಚುನಾವಣೆ ಫಲಿತಾಂಶ – ಮಂಜುನಾಥನ ಮೊರೆ ಹೋದ ಬಿಎಸ್‍ವೈ

    ಉಪ ಚುನಾವಣೆ ಫಲಿತಾಂಶ – ಮಂಜುನಾಥನ ಮೊರೆ ಹೋದ ಬಿಎಸ್‍ವೈ

    ಮಂಗಳೂರು: ರಾಜ್ಯ ಸರ್ಕಾರದ ಉಳಿವಿಗೆ ನಿರ್ಣಾಯಕವಾಗಿರುವ ಉಪ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನದಲ್ಲಿ ಗೆಲುವಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಧರ್ಮಸ್ಥಳದ ಮಂಜುನಾಥನ ಮೊರೆ ಹೋಗಿದ್ದಾರೆ.

    ಫಲಿತಾಂಶ ಪ್ರಕಟವಾಗುವ ಮುನ್ನವೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪರಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾಥ್ ನೀಡಿದರು. ಮಂಜುನಾಥನಿಗೆ ರುದ್ರಾಭಿಷೇಕ ಪೂಜೆ ಸಲ್ಲಿಸಿದ ಯಡಿಯೂರಪ್ಪ ಉಪ ಚುನಾವಣೆಯ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದರು.

    ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡರು. ಮಂಜುನಾಥನಲ್ಲಿ ಸಿಎಂ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪೂಜೆಯ ಬಳಿಕ ಹುಮ್ಮಸ್ಸಿನಿಂದ ಹೊರ ಬಂದ ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಮುಂದಿನ ಮೂರೂವರೆ ವರ್ಷ ಸುಭಧ್ರ ಸರ್ಕಾರ ನಡೆಸುತ್ತೇವೆ. ಉಪಚುನಾವಣೆಯ ಫಲಿತಾಂಶದಲ್ಲಿ 13 ಕ್ಷೇತ್ರಗಳನ್ನು ಗೆದ್ದು ಮತ್ತೆ ಸರ್ಕಾರ ಭದ್ರವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ರೋಷನ್ ಬೇಗ್ ತಂತ್ರಗಾರಿಕೆ ರಾಜಕಾರಣ – ಬಿಜೆಪಿಗೆ ಬೆಂಬಲಿಗರು ಸೇರ್ಪಡೆ

    ರೋಷನ್ ಬೇಗ್ ತಂತ್ರಗಾರಿಕೆ ರಾಜಕಾರಣ – ಬಿಜೆಪಿಗೆ ಬೆಂಬಲಿಗರು ಸೇರ್ಪಡೆ

    ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಶಿವಾಜಿನಗರದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ತಂತ್ರಗಾರಿಕೆ ರಾಜಕಾರಣ ಮಾಡುತ್ತಿದ್ದು, ತನ್ನ ಬೆಂಬಲಿಗರನ್ನು ಸದ್ದಿಲ್ಲದೇ ಬಿಜೆಪಿಗೆ ಸೇರ್ಪಡೆ ಮಾಡಿದ್ದಾರೆ.

    ಇಂದು ಸಿಎಂ ಯಡಿಯೂರಪ್ಪ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ರೋಷನ್ ಬೇಗ್ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಈ ಬಗ್ಗೆ ರೋಷನ್ ಬೇಗ್ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಅವರ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗಿರುವ ಫೋಟೋಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಈ ವಿಚಾರವಾಗಿ ಮಂಗಳವಾರ ಬಿಎಸ್‍ವೈ ಮನೆಗೆ ಹೋಗಿದ್ದ ರೋಷನ್ ಬೇಗ್ ಅವರು, 15 ನಿಮಿಷಗಳ ಕಾಲ ಮಾತನಾಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದರು. ಆದರೆ ಬಿಜೆಪಿಗೆ ನೀವು ಬೆಂಬಲ ನೀಡಿದರೆ ಮುಂದೆ ನಿಮಗೆ ಒಳ್ಳೆಯದಾಗುತ್ತದೆ. ಪಕ್ಷಕ್ಕೆ ಸೇರಿಸಿಕೊಳ್ಳದಿರಲು ಕಾರಣ ನಿಮಗೆ ಗೊತ್ತಿದೆ. ನೀವು ಸಹಕಾರ ಕೊಟ್ಟರೆ ಮುಂದೆ ಒಳ್ಳೆಯದಾಗುತ್ತದೆ ಎಂದು ಬಿಎಸ್‍ವೈ ರೋಷನ್ ಬೇಗ್‍ಗೆ ಹೇಳಿದ್ದರು. ಸಿಎಂ ಭರವಸೆಗೆ ರೋಷನ್ ಬೇಗ್ ಒಪ್ಪಿಗೆ ನೀಡಿದ್ದು ಶಿವಾಜಿನಗರದಲ್ಲಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಮಹತ್ವದ ತೀರ್ಪು ನೀಡಿದ ಬಳಿಕ 16 ಮಂದಿಯ ಜೊತೆಗೆ ರೋಷನ್ ಬೇಗ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಶಿವಾಜಿನಗರದಿಂದ ಪಕ್ಷೇತರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದರು. ಆದರೆ ಈಗ ಚುನಾವಣಾ ರಾಜಕೀಯಕ್ಕೆ ಪೂರ್ಣವಿರಾಮ ಹಾಕಲು ಮುಂದಾಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

    ರೋಷನ್ ಬೇಗ್ ಶನಿವಾರ ಆಪ್ತರ ಜೊತೆ ಮಾತನಾಡಿದ್ದು, ಈ ವೇಳೆ ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿಯುವ ಮಾತನ್ನು ಆಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಬೆಂಬಲಿಗರು ಚುನಾವಣೆಗೆ ಸ್ಪರ್ಧಿಸಬೇಕೆಂದು ಒತ್ತಡ ಹೇರಿದಾಗ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ರೋಷನ್ ಬೇಗ್ 3 ಕಾರಣಗಳಿಂದಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮೊದಲನೆಯದಾಗಿ ಐಎಂಎ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದೆ. ಈ ವಿಚಾರದಲ್ಲಿ ಮುಸ್ಲಿಮ್ ಸಮುದಾಯ ಸಹ ಬೇಗ್ ವಿರುದ್ಧ ನಿಂತುಕೊಂಡಿದೆ. ಎರಡನೇಯದಾಗಿ ಬಿಜೆಪಿ ಟಿಕೆಟ್ ಸಿಕ್ಕಿದರೆ ನಿಲ್ಲುವ ಸಾಧ್ಯತೆ ಇತ್ತು. ಆದರೆ ಬಿಜೆಪಿ ಕೊನೆ ಕ್ಷಣದಲ್ಲಿ ಟಿಕೆಟ್ ನೀಡದೇ ಬಿಬಿಎಂಪಿಯ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ. ಮೂರನೇಯದಾಗಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತರೂ ಸದ್ಯದ ಪರಿಸ್ಥಿತಿಯಲ್ಲಿ ಗೆಲ್ಲುವುದು ಕಷ್ಟ. ಈ ಎಲ್ಲ ಕಾರಣದಿಂದ ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿದಿದ್ದಾರೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

  • ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದೆ – ಎಂಟಿಬಿ ಕಿಡಿ

    ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದೆ – ಎಂಟಿಬಿ ಕಿಡಿ

    – ಶರತ್ ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ

    ಬೆಂಗಳೂರು: ಹೈವೋಲ್ಟೆಜ್ ಕ್ಷೇತ್ರ ಎಂದೇ ಬಿಂಬಿತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ. ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ 15 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧಾರ ಮಾಡಿದ್ದಾರೆ.

    ಶರತ್ ಕಣಕ್ಕಿಳಿಯೋದು ಖಚಿತವಾಗುತ್ತಿದ್ದಂತೆ ಎಂಟಿಬಿ ನಾಗರಾಜ್ ಸಂಸದ ಬಚ್ಚೇಗೌಡರ ವಿರುದ್ದ ಕಿಡಿಕಾರಿದ್ದಾರೆ. ಎಂಟಿಬಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಸಂಸದ ಬಿ.ಎನ್ ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದ್ದಾಗಿ ಎಂಟಿಬಿ ಒಪ್ಪಂದವನ್ನು ಬಹಿರಂಗ ಪಡಿಸಿದ್ದಾರೆ. ಹೊಸಕೋಟೆ ಕ್ಷೇತ್ರದ ಮುಖಂಡರ ಮನೆಯೊಂದರಲ್ಲಿ ಬಹಿರಂಗವಾಗಿ ಸತ್ಯವನ್ನು ಹೊರಹಾಕಿದ್ದಾರೆ.

    ಬಿಜೆಪಿಗೆ ಬರಲು ಒಪ್ಪಿಕೊಂಡ ಬಚ್ಚೇಗೌಡ ಇದೀಗ ಉಲ್ಟಾ ಹೊಡೆಯುತ್ತಿದ್ದು, ಶರತ್‍ಗೆ ಎಂಎಲ್‍ಸಿ ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ಅಥವಾ ಮುಂದಿನ ಎಂಪಿ ಚುನಾವಣೆಗೆ ಟಿಕೆಟ್ ನಿಡೋದಾಗಿ ಬಿಎಸ್‍ವೈ ಭರವಸೆ ನೀಡಿದ್ದರು ಎಂದು ಎಂಟಿಬಿ ಹೇಳಿದ್ದಾರೆ. ಜೊತೆಗೆ ಬಿಜೆಪಿ ಟಿಕೆಟ್ ಬದಲಾಗಿ ಗೃಹಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೂ ತಿರಸ್ಕರಿಸಿದ ಶರತ್ ಬಚ್ಚೇಗೌಡ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆಂದು ಆಕ್ರೋಶವನ್ನು ಹೊರಹಾಕಿದ್ದಾರೆ.

    ಒಂದು ಶರತ್ ಗೆಲ್ಲಬೇಕು, ಇಲ್ಲವೆ ಕಾಂಗ್ರೆಸ್ ಗೆಲ್ಲಬೇಕು, ಯಾವುದೇ ಕಾರಣಕ್ಕೂ ಎಂಟಿಬಿ ನಾಗರಾಜ್ ಗೆಲ್ಲಲು ಬಿಡಬಾರದೆಂದು ಒಳತಂತ್ರವನ್ನು ರೂಪಿಸಿದ್ದಾರೆಂದು ಎಂಟಿಬಿ ಆರೋಪಿಸಿದ್ದಾರೆ. ಈ ಮೊದಲೇ ಮಾಡಿಕೊಂಡ ಒಪ್ಪಂದಂತೆ ನಾನು ಬಚ್ಚೇಗೌಡ, ಅವರ ಪುತ್ರ ಶರತ್ ಮೂವರು ಸೇರಿ ಹೊಸಕೋಟೆ ತಾಲೂಕನ್ನು ಅಭಿವೃದ್ಧಿ ಪಡಿಸುವುದನ್ನು ಬಿಟ್ಟು ಅಪ್ಪ ಮಗ ಹೈಡ್ರಾಮಾ ಮಾಡುತ್ತಿದ್ದಾರೆ ಎಂದು ಎಂಟಿಬಿ ವಾಗ್ದಾಳಿ ನಡೆಸಿದ್ದಾರೆ.