Tag: BTS

  • ಮೈಸೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಹೊಸ ನಗರಗಳ ನಿರ್ಮಾಣ – ಬೊಮ್ಮಾಯಿ

    ಮೈಸೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಹೊಸ ನಗರಗಳ ನಿರ್ಮಾಣ – ಬೊಮ್ಮಾಯಿ

    ಬೆಂಗಳೂರು: ರಾಜ್ಯದಲ್ಲಿ 6 ಹೊಸ ನಗರಗಳ (New Cities) ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ (Hubballi) ಧಾರವಾಡ, ಮೈಸೂರು (Mysuru), ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ವರ್ಚುಯಲ್ ಆಗಿ ಉದ್ಘಾಟಿಸಿದ, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ 3 ದಿನಗಳ ಟೆಕ್ ಸಮ್ಮೇಳನ (BengaluruTechSummit) ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಎಲೆಕ್ಟ್ರಾನಿಕ್‌ ವಲಯದಲ್ಲಿ 36 ಸಾವಿರ ಕೋಟಿ ರೂ.ಗೂ ಹೆಚ್ಚು ಹೂಡಿಕೆ : ಅಶ್ವತ್ಥನಾರಾಯಣ

    ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ. ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ (Tech City) ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. 6 ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್‌ಗಳನ್ನು (Startups)  ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ (Government) ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಇದೂ ಕೂಡ 6 ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಸೃಜನಶೀಲತೆ ಹಲವಾರು ಆಯಾಮಗಳನ್ನು ಒಳಗೊಂಡಿದೆ. ನಾವು ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಗಳಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಉದ್ಯಮಿಗಳು ಆವಿಷ್ಕಾರ ಮಾಡುವುದರ ಜೊತೆಗೆ ಅಭಿವೃದ್ದಿಗೆ ಪೂರಕವಾದ ಕೆಲಸ ಮಾಡಿ ಸರ್ಕಾರಕ್ಕೂ ಆದಾಯ ತರುವ ಕೆಲಸ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು. ಇದನ್ನೂ ಓದಿ: ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ, ನಾಯಕತ್ವದ ತವರು: ಮೋದಿ

    ನಮ್ಮ ಪೂರ್ವಜರು ವ್ಯವಸ್ಥಿತ ಜೀವನ ಮಾಡುತ್ತಿದ್ದರು. ನಾವು ನಮ್ಮ ಮಕ್ಕಳಿಗೂ ಉತ್ತಮ ಭವಿಷ್ಯ ನೀಡಬೇಕು. ಭವಿಷ್ಯದಿಂದ ಕಳ್ಳತನ ಮಾಡಬಾರದು. ಭವಿಷ್ಯಕ್ಕಾಗಿ ಭೂಮಿಯನ್ನು ಉಳಿಸಬೇಕು. ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಚಿಂತನೆ ಅಗತ್ಯ. ಯಾವುದೇ ತಂತ್ರಜ್ಞಾನ ಬಂದರೂ ಈ ಪರಿಸರ ಉಳಿಸುವ ಗುಣ ಹೊಂದಿರಬೇಕು. ಡಿಜಿಟಲ್ ಅಂತರ ಕಡಿಮೆ ಮಾಡುವತ್ತಲೂ ನಾವು ಗಮನಹರಿಸಬೇಕು. ಪರಿಸರ ಸ್ನೇಹಿ ವಾತಾವರಣ ಹೊಂದಬೇಕು ಎಂದು ಹತ್ತು ಹಲವು ಸಲಹೆ ನೀಡಿದರು.

    ಪರಿಸರ ಸ್ನೇಹಿ ತಂತ್ರಜ್ಞಾನ, ನಾವೀನ್ಯತೆ ಹಾಗೂ ಇಕೋ ಇಕನಾಮಿಕ್ಸ್ ಅನ್ನು ಸಾಧ್ಯವಾಗಿಸಬೇಕು. ಐಟಿ ಬಿಟಿ, ಕೃತಕ ಬುದ್ಧಿಮತ್ತೆ ನಮ್ಮ ಸಂಪನ್ಮೂಲಗಳನ್ನು ಉಳಿಸಿ ರಕ್ಷಣೆ ಮಾಡುವ ಸಾಧ್ಯತೆ ಇದೆ. ಮನುಕುಲಕ್ಕೆ ಯಾವುದು ಅನುಕೂಲವಾಗುತ್ತದೆ ಅನ್ನೊದನ್ನ ನೀವರ ಪರೀಕ್ಷಿಸಬೇಕು. ತಂತ್ರಜ್ಞಾನ ಮಾಹಿತಿಯ ಕಣಜವನ್ನೇ ನಮ್ಮ ಮುಂದಿರಿಸಿದೆ. ನವೀಕರಿಸಬಹುದಾದ ಇಂಧನ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.

    ಮೈಸೂರು ಮಹಾರಾಜರು ವಿಜ್ಞಾನ ತಂತ್ರಜ್ಞಾನಕ್ಕೆ, ಶಿಕ್ಷಣಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಂತರ ಉದ್ಯಮಕ್ಕೆ ಆದ್ಯತೆ ನೀಡಿದ್ದಾರೆ. ಈಗ ಐಟಿ, ಬಿಟಿ ಬಂದಿದೆ. ಬೆಂಗಳೂರಿಗೆ ಬಂದವರು ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲವಿತ್ತು. ಈಗ ಜ್ಞಾನ ಇರುವವರ ಕಾಲ. ಬೆಂಗಳೂರಿಗೆ ಪ್ರತಿದಿನ 5,000ಕ್ಕೂ ಹೆಚ್ಚು ಇಂಜಿನಿಯರ್‌ಗಳು ಬಂದು ಹೋಗುತ್ತಾರೆ. 400 ಆರ್ ಆಂಡ್ ಡಿ ಸೆಂಟರ್ ಇವೆ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು.

    ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ.40 ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ-ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಬೇಕು ಎಂದು ಕರೆ ನೀಡಿದರು.

    ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. ನಮ್ಮ ಪ್ರಧಾನಿಗಳು ಬಿಐಎಎಲ್‌ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ತಂತ್ರಜ್ಞಾನಗಳೆಲ್ಲವೂ ವಿಶ್ವದ ಭವಿಷ್ಯಕ್ಕೆ ಮಾನವ ಅಭಿವೃದ್ಧಿ ಸಮಾವೇಶದ ಧ್ಯೇಯವಾಗಲಿ ಎಂದು ಶ್ಲಾಘಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರು ಟೆಕ್ ಸಮ್ಮಿಟ್ ಬೆಳ್ಳಿ ಹಬ್ಬ – ಉದ್ಘಾಟನೆಗೆ ಪ್ರಧಾನಿ ಆಹ್ವಾನ: ಅಶ್ವಥ್ ನಾರಾಯಣ

    ಬೆಂಗಳೂರು ಟೆಕ್ ಸಮ್ಮಿಟ್ ಬೆಳ್ಳಿ ಹಬ್ಬ – ಉದ್ಘಾಟನೆಗೆ ಪ್ರಧಾನಿ ಆಹ್ವಾನ: ಅಶ್ವಥ್ ನಾರಾಯಣ

    ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ(ಬಿಟಿಎಸ್)ಯ 25ನೇ ವರ್ಷದ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಜಾಗತಿಕ ನಾವೀನ್ಯತಾ ಸಹಭಾಗಿ(ಜಿಐಎ) ರಾಷ್ಟ್ರಗಳ ಕಾನ್ಸುಲ್ ಜನರಲ್, ಡೆಪ್ಯುಟಿ ಕಾನ್ಸುಲ್ ಜನರಲ್ ಮತ್ತು ಗೌರವ ಕಾನ್ಸುಲ್ ಜನರಲ್ ಗಳೊಂದಿಗೆ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಬುಧವಾರ ಸಮಾಲೋಚನೆ ನಡೆಸಿದರು.

    ಬಿಟಿಎಸ್-25ರ ಭಾಗವಾಗಿರುವ ಜಾಗತಿಕ ನಾವೀನ್ಯತಾ ಸಹಭಾಗಿ(ಜಿಐಎ) ದೇಶಗಳನ್ನು ಆಹ್ವಾನಿಸಲು ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟಿಎಸ್-25 ಸಮಾವೇಶದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು. ರಾಜ್ಯವು ಈಗಾಗಲೇ 30ಕ್ಕೂ ಹೆಚ್ಚು ಜಿಐಎ ಸಹಭಾಗಿಗಳನ್ನು ಹೊಂದಿದ್ದು, 50ಕ್ಕೂ ಹೆಚ್ಚು ಮಹತ್ವದ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. ಇದನ್ನೂ ಓದಿ: 10 ತಿಂಗಳ ಹಸುಳೆಯನ್ನು ಅಪಹರಿಸಿದ ಮಹಿಳೆ – 24 ಗಂಟೆಯಲ್ಲಿ ಪೊಲೀಸರ ಅತಿಥಿ 

    ಮುಖ್ಯವಾಗಿ ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್, ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್(ಐಒಟಿ) ಕ್ಷೇತ್ರಗಳಲ್ಲಿ ನಾವೀನ್ಯತಾ ಸಹಭಾಗಿತ್ವದ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದೆ. 25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶವು ಟೆಕ್4ನೆಕ್ಸ್-ಜೆನ್ ಘೋಷವಾಕ್ಯದೊಂದಿಗೆ ನ.16, 17 ಮತ್ತು 18ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 48ಕ್ಕೂ ಹೆಚ್ವು ದೇಶಗಳು ಪಾಲ್ಗೊಳ್ಳಲಿವೆ.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಈಗಾಗಲೇ 40 ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಇವೆ. ಇನ್ನೂ ಹೆಚ್ಚಿನ ಕಂಪನಿಗಳ ಇಂತಹ ಕೇಂದ್ರಗಳು ಇಲ್ಲಿ ಆರಂಭಗೊಳ್ಳಬೇಕು. ಇದಕ್ಕೆ ಪೂರಕವಾಗಿ ರಾಜ್ಯವು ಸ್ಟಾರ್ಟಪ್ ಕರ್ನಾಟಕ, ಇನ್ನೊವೇಟ್ ಕರ್ನಾಟಕ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಶನ್ ತರಹದ ಉಪಕ್ರಮಗಳನ್ನು ಕೈಗೊಂಡಿದೆ ಎಂದರು.

    ಅಭಿವೃದ್ಧಿ ವಿಚಾರದಲ್ಲಿ ಸುಸ್ಥಿರತೆ, ಕೈಗೆಟುಕುವಿಕೆ, ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮಾಲಿನ್ಯ ರಹಿತತೆ ಇವುಗಳನ್ನು ಮರೆಯಬಾರದು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ನಾನಾ ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳು ಮಾತನಾಡಿ, ಸೈಬರ್ ಸೆಕ್ಯುರಿಟಿ, ಏರೋಸ್ಪೇಸ್, ರೋಬೋಟಿಕ್ಸ್, ಐಒಟಿ, ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಸಹಭಾಗಿತ್ವ ಸ್ಥಾಪನೆಗೆ ಒಲವು ವ್ಯಕ್ತಪಡಿಸಿದರು.

    ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಜಾಗತಿಕ ಮಟ್ಟದ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಲೆಂದೇ ಕರ್ನಾಟಕವು 2017ರಲ್ಲೇ ಜಿಐಎ ಉಪಕ್ರಮ ಆರಂಭಿಸಿದೆ. ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿ ಇರುವ ರಾಷ್ಟ್ರಗಳೊಂದಿಗೆ ಬಹುಪಕ್ಷೀಯ ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದರು. ಇದನ್ನೂ ಓದಿ: ಬೆಳ್ಳಿ ಪದಕ ಪಡೆದ ಭಾರತೀಯ ಕ್ರೀಡಾ ಪ್ರಾಧಿಕಾರದ ಐವರು ವಿದ್ಯಾರ್ಥಿನಿಯರಿಗೆ ಸನ್ಮಾನ

    ಭಾರತದಲ್ಲಿರುವ 100 ಯೂನಿಕಾರ್ನ್ ಕಂಪನಿಗಳ ಪೈಕಿ 39 ಬೆಂಗಳೂರಿನಲ್ಲೇ ಇವೆ. ನಾವೀನ್ಯತಾ ಸಹಭಾಗಿತ್ವಕ್ಕೆ ಬೇಕಾದ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯ ಪರಿಸರವೂ ನಮ್ಮಲ್ಲಿದೆ ಎಂದು ನುಡಿದರು. ಕಳೆದ ವರ್ಷ(2021-22) ಭಾರತಕ್ಕೆ 83.57 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ಹರಿದು ಬಂದಿದೆ. ಇದರಲ್ಲಿ ಶೇ.38ರಷ್ಟು ಹೂಡಿಕೆ ರಾಜ್ಯದಲ್ಲೇ ಆಗಿದೆ ಎಂದು ಹೇಳಿದರು.