Tag: Buddhadeb Bhattacharjee

  • ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ವಿಧಿವಶ

    ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ವಿಧಿವಶ

    ಕೋಲ್ಕತ್ತಾ: ಹಿರಿಯ ಎಡಪಂಥೀಯ ನಾಯಕ ಮತ್ತು ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (80) ವಿಧಿವಶರಾಗಿದ್ದಾರೆ.

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಇಂದು ಬೆಳಗ್ಗೆ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattacharjee) ಅವರು ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ನಿಧನರಾದರು.

    ಕಳೆದ ವರ್ಷ ಅವರು ನ್ಯುಮೋನಿಯಾಕ್ಕೆ ತುತ್ತಾದ ನಂತರ ಅವರನ್ನು ಲೈಫ್ ಸಪೋರ್ಟ್‌ನಲ್ಲಿ ಇರಿಸಲಾಗಿತ್ತು. ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಆಗಮಿಸಿದ್ದರು. ಅವರು ಪತ್ನಿ ಮೀರಾ ಮತ್ತು ಪುತ್ರ ಸುಚೇತನ್ ಅವರನ್ನು ಅಗಲಿದ್ದಾರೆ.  ಇದನ್ನೂ ಓದಿ: Paris Olympics | ವಿನೇಶ್‌ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ – ಅಂತಿಮ್‌ ಪಂಘಲ್‌ ಗಡಿಪಾರು

    ಸಿಪಿಎಂನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಪಾಲಿಟ್‌ಬ್ಯೂರೊದ ಮಾಜಿ ಸದಸ್ಯರಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ 2000 ರಿಂದ 2011 ರವರೆಗೆ ಬಂಗಾಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಜ್ಯೋತಿ ಬಸು ಅವರ ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ್ದರು.

    2011ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸುವುದರೊಂದಿಗೆ 34 ವರ್ಷಗಳ ಕಮ್ಯುನಿಸ್ಟ್ ಆಳ್ವಿಕೆಯನ್ನು ಕೊನೆಗೊಳಿಸಿದ್ದರು. 2011ರ ಚುನಾವಣೆಯನ್ನು ಕಮ್ಯೂನಿಸ್ಟ್‌ ಪಕ್ಷ ಬುದ್ಧದೇವ್ ಭಟ್ಟಾಚಾರ್ಯ ನೇತೃತ್ವದಲ್ಲಿ ಎದುರಿಸಿತ್ತು.

  • ಪದ್ಮಭೂಷಣ ಪ್ರಶಸ್ತಿ ಬೇಡ: ಬುದ್ಧದೇವ್ ಭಟ್ಟಾಚಾರ್ಜಿ

    ಪದ್ಮಭೂಷಣ ಪ್ರಶಸ್ತಿ ಬೇಡ: ಬುದ್ಧದೇವ್ ಭಟ್ಟಾಚಾರ್ಜಿ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಜಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವನ್ನು ನೀಡುವುದಾಗಿ ಅಧಿಕೃತ ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

    ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಯಾರೂ ನನಗೆ ಈ ಬಗ್ಗೆ ಏನನ್ನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಅಂತ ಬುದ್ಧದೇವ್ ಭಟ್ಟಾಚಾರ್ಜಿ ಹೇಳಿದ್ದಾರೆ. ಸಿಪಿಐ(ಎಮ್) ಮತ್ತು ಅವರ ಹೇಳಿಕೆಯಲ್ಲಿ, ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ನಮ್ಮ ಪಕ್ಷದ ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ ಎಂದರು. ಇದನ್ನೂ ಓದಿ: ದೈಹಿಕ ಅನ್ಯೋನ್ಯತೆ ಸಂಬಂಧದ ಪ್ರಮುಖ ಭಾಗವಲ್ಲ: ದೀಪಿಕಾ ಪಡುಕೋಣೆ

    ಮತ್ತೊಂದೆಡೆ ಹಿರಿಯ ಬಿಜೆಪಿ ನಾಯಕ ಮತ್ತು ಸಂಸದ ರವಿಶಂಕರ್ ಪ್ರಸಾದ್ ಅವರು ಟ್ವಿಟ್ಟರ್‌ ನಲ್ಲಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರವರು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಅವರಿಗೆ ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಮೌನಿರಾಯ್ ಬ್ಯಾಚುಲರ್ ಪಾರ್ಟಿ

    ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಸಿಪಿಎಂ ನಾಯಕ ಭಟ್ಟಾಚಾರ್ಯ ಜಿ ಅವರಿಗೆ ಪದ್ಮಭೂಷಣ ನೀಡುವುದು ಸಾರ್ವಜನಿಕರ ಜೀವನದಲ್ಲಿ ಅವರ ಕೊಡುಗೆಗಳನ್ನು ಗುರುತಿಸಿದೆ ಎಂದರು.

    ಇದು ಪ್ರಧಾನಿ ನರೇಂದ್ರ ಮೋದಿಯವರ ಉದಾರತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ಅವರ ಬದ್ಧತೆಯನ್ನು ತೋರಿಸುತ್ತದೆ ಎಂದು ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಸಿಪಿಐ(ಎಮ್) ನಾಯಕ, ಬುದ್ಧದೇವ್ ಭಟ್ಟಾಚಾರ್ಜಿ ಅವರು 2000 ರಿಂದ 2011 ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು.

    ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ:
    ಪದ್ಮ ವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

  • ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

    ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.

    ಈ ಕುರಿತಂತೆ ಬುದ್ಧದೇವ್ ಭಟ್ಟಾಚಾರ್ಯ ಅವರು, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೆದ್ದಾರಿಯನ್ನು ಅಡವಿಟ್ಟು ಸಾಲ ಪಡೆದ ಪಾಕಿಸ್ತಾನ

    ಈ ಕುರಿತಂತೆ ಪಕ್ಷವು ತನ್ನ ಟ್ವಿಟ್ಟರ್‌ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಜನರಿಗಾಗಿ, ಪ್ರಶಸ್ತಿಗಳಿಗಾಗಿ ಅಲ್ಲ ಎಂದು ಬರೆದುಕೊಂಡಿದೆ. ಇದನ್ನೂ ಓದಿ: ಉಗ್ರರಿಗೆ ಸಹಕಾರ – ಪಾಕಿಸ್ತಾನದ ಜೊತೆ ಬೂದುಪಟ್ಟಿಗೆ ಸ್ನೇಹಿತ ಟರ್ಕಿಯೂ ಸೇರ್ಪಡೆ

    ಜನವರಿ 25 ರಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‍ಎ) ಈ ವರ್ಷ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗುವ ವ್ಯಕ್ತಿಗಳ ಹೆಸರಿನ ಪಟ್ಟಿಯನ್ನು ಹಂಚಿಕೊಂಡಿದೆ. ಈ ಬಾರಿ ವಿವಿಧ ಕ್ಷೇತ್ರಗಳ 128 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗೆ ಆರಿಸಲಾಗಿದೆ.