Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
Tag: budget 2023
-

Karnataka Budget 2023: ಶಕ್ತಿ ಯೋಜನೆಗೆ ವರ್ಷಕ್ಕೆ 4,000 ಕೋಟಿ!
-

Karnataka Budget 2023: ಸಿಎಂ ತವರು ಜಿಲ್ಲೆಗೆ ಸಿಕ್ಕಿದ್ದೇನು?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ (Mysuru) ಭರ್ಜರಿ ಕೊಡುಗೆ ನೀಡಿದ್ದಾರೆ.
ಶುಕ್ರವಾರ ಬಜೆಟ್ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ (Mysuru Mallige), ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರ್ಯಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮಗಳನ್ನ ರೂಪಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಸದನದಲ್ಲಿ ಭದ್ರತಾ ಲೋಪ – ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಖಾಸಗಿ ವ್ಯಕ್ತಿ
ಅಲ್ಲದೇ, ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 3.27 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ 4 ಗ್ಯಾರಂಟಿಗೆ ಬೇಕು 57,910 ಕೋಟಿ ರೂ – ಯಾವುದಕ್ಕೆ ಎಷ್ಟು?
ಮೈಸೂರಿಗೆ ಏನೇನು ಕೊಡುಗೆ?
* ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳ ಆಯೋಜನೆ.
* ಮೈಸೂರಿನ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣವನ್ನು ಮೇಲ್ದರ್ಜೆಗೇರಿಸಲು ಕ್ರಮ.
* ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ.
* ಮಾನವ – ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ ಅನಾರೋಗ್ಯಪೀಡಿತ ಪ್ರಾಣಿಗಳ ರಕ್ಷಣೆ/ನಿರ್ವಹಣೆಗಾಗಿ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆ ಹಾಗೂ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳ ನಿರ್ಮಾಣ.
* ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.
* ಮೈಸೂರು ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /] -

Karnataka Budget 2023: ಬೆಂಗ್ಳೂರು ಅಭಿವೃದ್ಧಿಗೆ ಸಿಕ್ಕಿದ್ದೇನು?
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬೆಂಗಳೂರು ನಗರಾಭಿವೃದ್ಧಿಗೆ ಹಲವು ಅನುದಾನ ಪ್ರಕಟಿಸಿದ್ದಾರೆ.
ಭಾಷಣದಲ್ಲಿ ಹೇಳಿದ್ದೇನು?
ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಗರಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಪ್ರಾರಂಭಿಸಿದ ನಗರೋತ್ಥಾನ, ಇಂದಿರಾ ಕ್ಯಾಂಟೀನ್ ನಂತಹ ಹಲವಾರು ಜನಪರ ಯೋಜನೆಗಳನ್ನ ನಿರ್ಲಕ್ಷಿಸುವ ಮೂಲಕ ಹಿಂದಿನ ಸರ್ಕಾರದ ಅವಧಿಯಲ್ಲಿ ನಗರಗಳ ಅಭಿವೃದ್ಧಿಯು (Bengaluru Development) ಕುಂಠಿತಗೊಂಡಿರುತ್ತದೆ. ಅಲ್ಲದೇ, 2022-23ನೇ ಸಾಲಿಗೆ 45,000 ಕೋಟಿ ರೂ.ಗಳ ಅಪೂರ್ಣ ಕಾಮಗಾರಿಗಳ ಮತ್ತು ಬಾಕಿ ಮೊತ್ತದ ಹೊರೆಯನ್ನು ಹಿಂದಿನ ಸರ್ಕಾರ ನಮ್ಮ ಸರ್ಕಾರದ ಮೇಲೆ ಹೊರಿಸಿರುತ್ತದೆ. ಪ್ರಸ್ತುತ ಇರುವ ಆಯವ್ಯಯದ ಮಿತಿಯಲ್ಲಿ ಬಾಕಿ ಹೊರೆಯನ್ನು ತೀರಿಸಲು ಕನಿಷ್ಠ 6-8 ವರ್ಷಗಳ ಕಾಲಾವಕಾಶದ ಅಗತ್ಯತೆ ಇರುತ್ತದೆ. ಇದು ಅವರ ಅಶಿಸ್ತು ಮತ್ತು ಅವಿವೇಚನೆಗೆ ಹಿಡಿದ ಕನ್ನಡಿಯಾಗಿರುತ್ತದೆ. ಆದಾಗ್ಯೂ, ನಮ್ಮ ಸರ್ಕಾರ ನಗರಗಳ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಅಮೃತ ನಗರೋತ್ಥಾನ, ಹೈಡೆನ್ಸಿಟಿ ಕಾರಿಡಾರ್, ವೈಟ್ ಟಾಪಿಂಗ್ ರಸ್ತೆ, ತ್ಯಾಜ್ಯ ನಿರ್ವಹಣೆ, ರಾಜಕಾಲುವೆಗಳ ತೆರವು ಮತ್ತು ದುರಸ್ತಿ, ರಸ್ತೆ ಗುಂಡಿ ಮುಚ್ಚುವುದು ಮತ್ತಿತರ ಹಲವಾರು ಪ್ರಗತಿಯಲ್ಲಿರುವ ಯೋಜನೆಗಳಿಗೆ ಪ್ರಸ್ತುತ 12,000 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವ್ಯಯಿಸಲಾಗುತ್ತಿದೆ. ಇದಲ್ಲದೇ ಸಂಚಾರ ದಟ್ಟಣೆ ನಿವಾರಣೆಗಾಗಿ 30,000 ಕೋಟಿ ರೂ.ಗಳಿಗೂ ಹೆಚ್ಚಿನ ಅಂದಾಜು ವೆಚ್ಚದಲ್ಲಿ ನಮ್ಮ ಮೆಟ್ರೋ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗಳು ಪೂರ್ಣಗೊಳ್ಳಲು 5 ವರ್ಷಗಳ ಕಾಲಾವಕಾಶದ ಅಗತ್ಯವಿದೆ. ಇಷ್ಟು ಬೃಹತ್ ಮೊತ್ತದ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿದ್ದರೂ ಹಿಂದಿನ ಸರ್ಕಾರದ ಮಿತಿ ಮೀರಿದ ಭ್ರಷ್ಟಾಚಾರ ಹಾಗೂ ಅಸಮರ್ಪಕ ನಿರ್ವಹಣೆಯ ಕಾರಣದಿಂದ ನಗರದ ಮೂಲ ಸೌಕರ್ಯಗಳಲ್ಲಿ ಗಮನಾರ್ಹ ಬದಲಾವಣೆ ಕಂಡು ಬಂದಿರುವುದಿಲ್ಲ.
ʻಬ್ರ್ಯಾಂಡ್ ಬೆಂಗಳೂರುʼ ಪರಿಕಲ್ಪನೆಯು ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಹಾಗೂ ಅನುಕೂಲವನ್ನು ಕೇಂದ್ರಬಿಂದುವಾಗಿಸಿದೆ. ಈ ಪರಿಕಲ್ಪನೆಯು ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆ – ಈ 9 ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ನಮ್ಮ ಗುರಿಯಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು 1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಂಪನ್ಮೂಲದಿಂದ ಅನುಷ್ಠಾನಗೊಳಿಸಲು ಅನುಮೋದನೆ ನೀಡಿದ್ದು, ಮಾರ್ಚ್ 2026 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಗಳ ಮೂಲಕ ಬೆಂಗಳೂರಿನಲ್ಲಿ ಸುಸ್ಥಿರ ಜಲ ಮತ್ತು ಪರಿಸರ ಸಂರಕ್ಷಣೆಯಾಗಲಿದೆ.
ನೈಋತ್ಯ ರೈಲ್ವೆ ಇಲಾಖೆಯವರು ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನಿರ್ಮಿಸಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ತಲುಪಲು ಸರಿಯಾದ ಮೆಟ್ರೋ ಮತ್ತು ರಸ್ತೆಗಳ ಸಂಪರ್ಕ ಇಲ್ಲದೇ ಇರುವುದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನಾನುಕೂಲ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಈ ಸಮಸ್ಯೆಯ ನಿವಾರಣೆಗಾಗಿ 263 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಹೊಸ ಮೇಲ್ಸೇತುವೆ ನಿರ್ಮಿಸಲಾಗುವುದು.
ಪದೇ ಪದೇ ದುರಸ್ತಿಗೆ ಮರುಕಳಿಸುವ ವೆಚ್ಚವನ್ನು ತಪ್ಪಿಸಲು ನಗರದ ರಸ್ತೆಗಳನ್ನು ವೈಟ್ ಟ್ಯಾಪಿಂಗ್ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ನಮ್ಮ ಸರ್ಕಾರದಿಂದ 2016-17 2017-18ರಲ್ಲಿ ವೈಟ್ ಟಾಪಿಂಗ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾದ 190 ಕಿ.ಮೀ. ರಸ್ತೆಗಳು ಇಂದಿಗೂ ಅತ್ಯುತ್ತಮ ಸ್ಥಿತಿಯಲ್ಲಿವೆ. ತದನಂತರ, ಹಿಂದಿನ ಸರ್ಕಾರ ಯಾವುದೇ ವೈಟ್ ಟ್ಯಾಪಿಂಗ್ ಯೋಜನೆಯನ್ನು ಕೈಗೊಂಡಿರುವುದಿಲ್ಲ. ಈ ಯೋಜನೆಯನ್ನು ಪುನರಾರಂಭಿಸಿ 2023-24ನೇ ಸಾಲಿನಲ್ಲಿ 800 ಕೋಟಿ ರೂ. ವೆಚ್ಚದಲ್ಲಿ 100 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ವೈಟ್ ಟಾಸ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರು ನಗರದಲ್ಲಿರುವ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ 192 ಕಿ.ಮೀ. ಉದ್ದದ ವಿವಿಧ 12 ಪ್ರಮುಖ ರಸ್ತೆಗಳನ್ನು ಹೈಡೆನ್ಸಿಟಿ ಕಾರಿಡಾರ್‌ಗಳೆಂದು (High Density Corridor) 2016ರಲ್ಲಿ ಗುರುತಿಸಲಾಗಿರುತ್ತದೆ. ಈ ಪೈಕಿ 92 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. 2023-24ನೇ ಸಾಲಿನಲ್ಲಿ 83 ಕಿ.ಮೀ. ಉದ್ದದ ರಸ್ತೆಗಳನ್ನು ರಸ್ತೆಗಳನ್ನು 273 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆಗಾಗಿ ರೂಪಿಸಿರುವ ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಪ್ರಕ್ರಿಯೆಯು ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಎದುರಾದ ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಸರ್ವೋಚ್ಛ ನ್ಯಾಯಾಲಯದಿಂದ ದಿನಾಂಕ: 25.11.2021 ರಂದು ಅನುಮತಿ ದೊರಕಿದೆ. ಇದೀಗ ನಮ್ಮ ಸರ್ಕಾರವು ಎಲ್ಲಾ ಕಾನೂನಾತ್ಮಕ ಸಮಸ್ಯೆಗಳನ್ನ ಬಗೆಹರಿಸಿಕೊಂಡು ತ್ವರಿತವಾಗಿ ಯೋಜನೆಯನ್ನ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆನೀರು ಸರಾಗವಾಗಿ ಹರಿಯದಿರಲು ರಾಜಕಾಲುವೆಗಳ ಒತ್ತುವರಿ ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ಪ್ರವಾಹ ಉಂಟಾಗುವುದಲ್ಲದೆ, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಂತು, ಮನೆಗಳಿಗೆ ನೀರು ನುಗ್ಗಿ ಅನಾಹುತಗಳು ಸಂಭವಿಸುತ್ತಿವೆ. ಈ ಸಮಸ್ಯೆಯನ್ನು ನಿವಾರಿಸಲು ಕಂದಾಯ ಇಲಾಖೆ ಗುರುತಿಸಿರುವ ಒತ್ತುವರಿಗಳನ್ನು ಆದ್ಯತೆ ಮೇಲೆ ತೆರವುಗೊಳಿಸಲಾಗುವುದು.
ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಬೆಂಗಳೂರು ನಗರದ 97 ಲಕ್ಷ ಟನ್ ನಷ್ಟು ಹಳೆ ತ್ಯಾಜ್ಯವನ್ನು (Legacy Waste) ಜೈವಿಕ ಗಣಿಗಾರಿಕೆ ಮತ್ತು ಜೈವಿಕ ಪರಿಹಾರದ ಮೂಲಕ ಸಂಸ್ಕರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳ ಅವಧಿಯಲ್ಲಿ ಇಂತಹ 256 ಎಕರೆ ಭೂಮಿಯನ್ನು ಉದ್ಯಾನವನಗಳಾಗಿ ಪರಿವರ್ತಿಸಲಾಗುವುದು.
ಸುಮಾರು 5.7 ಲಕ್ಷ ಪ್ರಯಾಣಿಕರು ದಿನಂಪ್ರತಿ ಸಂಚರಿಸುವ 70 ಕಿ.ಮೀ. ಉದ್ದದ ಸಂಪರ್ಕ ಜಾಲವನ್ನು ಹೊಂದಿರುವ ನಮ್ಮ ಮೆಟ್ರೋ ರಾಷ್ಟ್ರದಲ್ಲಿಯೇ 2ನೇ ಅತೀ ದೊಡ್ಡ ಮೆಟ್ರೋ ಸೇವೆಯಾಗಿರುತ್ತದೆ. 2040 ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ, ಕೆಂಗೇರಿಯಿಂದ ಚಲ್ಲಘಟ್ಟದವರೆಗೆ, ನಾಗಸಂದ್ರದಿಂದ ಮಾದಾವರದವರೆಗೆ, ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಒಟ್ಟು 27 ಕಿ.ಮೀ.ಗಳ ನೂತನ ಮಾರ್ಗಗಳನ್ನು ಪ್ರಾರಂಭಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ ಈಗಿರುವ 70 ಕಿಮೀ ನ ಸಂಪರ್ಕಜಾಲವನ್ನ 176 ಕಿಮೀಗೆ ವಿಸ್ತರಿಸುವ ಮೂಲಕ ಮೆಟ್ರೊ ಕಾರ್ಯಾಚರಣೆಯ ಸಂಪರ್ಕ ಜಾಲವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗುವುದು. ಪ್ರಗತಿಯಲ್ಲಿರುವ ಏರ್‌ಪೋರ್ಟ್ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ 2026 ರಲ್ಲಿ ಕಾರ್ಯಾರಂಭ ಮಾಡಲಾಗುವುದು.
ಇದಲ್ಲದೇ, ಮೆಟ್ರೋ 3ನೇ ಹಂತದಡಿ ಅಂದಾಜು 16,328 ಕೋಟಿ ರೂ. ವೆಚ್ಚದಲ್ಲಿ ಕೆಂಪಾಪುರದಿಂದ ಜೆ.ಪಿ. ನಗರ 4ನೇ ಹಂತದವರೆಗಿನ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಓ.ಆರ್.ಆರ್. ಮಾರ್ಗವನ್ನು ಒಳಗೊಳ್ಳುವಂತಹ 45 ಕಿ.ಮೀ. ಉದ್ದದ ಮಾರ್ಗದ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುವುದು.
ಬೆಂಗಳೂರು ರೂಪಿಸಲಾಗಿರುವ ನಗರದ ಸುಗಮ ಸಂಚಾರಕ್ಕೆ ಪೂರಕವಾಗಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಜಾರಿಗೊಳಿಸಲು ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಹಿಂದಿನ ಸರ್ಕಾರವು ವಿಫಲವಾಗಿದೆ. ಈ ಯೋಜನೆಯ ಒಟ್ಟು ಮೊತ್ತ 15,767 ಕೋಟಿ ರೂ.ಗಳಾಗಿದ್ದು, ಕೇಂದ್ರ ಸರ್ಕಾರದ ಪಾಲು 3,242 ಕೋಟಿ ರೂ.ಗಳು, ರಾಜ್ಯ ಸರ್ಕಾರದ ಪಾಲು 5,087 ಕೋಟಿ ರೂ.ಗಳು ಮತ್ತು ಸಾಲದ (ಬಾಹ್ಯ ಮೂಲಗಳಿಂದ) ಮೊತ್ತ 7,438 ಕೋಟಿ ರೂ.ಗಳಾಗಿರುತ್ತದೆ. ಸದರಿ ಯೋಜನೆಗೆ ಈವರೆಗೂ ಕೇಂದ್ರ ಸರ್ಕಾರವು 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರದಿಂದ 660 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಈ ಯೋಜನೆಗೆ ರಾಜ್ಯ ಸರ್ಕಾರವು 1,000 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
ಪಾರಂಪರಿಕ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆ ಹಾಗೂ ಒಳಚರಂಡಿ ನೀರು ಸಂಸ್ಕರಿಸುವ ಆಧುನಿಕ ಪದ್ಧತಿಗಳನ್ನು ಅಳವಡಿಸುವ ಮೂಲಕ ನದಿಗಳು ಮತ್ತು ಕೆರೆಗಳಿಗೆ ಹರಿಯುವ ಮಾಲಿನ್ಯ ನಿಯಂತ್ರಿಸಲು 1,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಮತ್ತು ಇತರೇ ಪಟ್ಟಣಗಳಲ್ಲಿ 2,150 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 3,400 ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ 2.0 ಯೋಜನೆಯನ್ನು ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೊಳಿಸಿದ್ದು, ಬಿಬಿಎಂಪಿ ಸೇರಿದಂತೆ ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,900 ಕೋಟಿ ರೂ. ಮತ್ತು ರಾಜ್ಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 2,600 ಕೋಟಿ ರೂ. ಗಳಾಗಿವೆ. ಈ ಯೋಜನೆಯಡಿಯಲ್ಲಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರಿನ ನಿರ್ವಹಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ರಾಜ್ಯದ ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ 287 ಪಟ್ಟಣಗಳಲ್ಲಿ ನೀರು ಸರಬರಾಜು ಮತ್ತು ಜಲಮೂಲಗಳ ಸಂರಕ್ಷಣೆ ಕಾಮಗಾರಿ ಕೈಗೊಳ್ಳಲು 9,230 ಕೋಟಿ ರೂ. ಗಳ ಮೊತ್ತದಲ್ಲಿ ಯೋಜಿಸಲಾಗಿದೆ. ಈ ಅನುದಾನದಲ್ಲಿ ಕೇಂದ್ರ ಸರ್ಕಾರದ ಪಾಲು 4,615 ಕೋಟಿ ರೂ.ಗಳು, ರಾಜ್ಯ ಸರ್ಕಾರದ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 4,612 ಕೋಟಿ ರೂ.ಗಳಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಒಟ್ಟು 800 ಕೋಟಿ ರೂ. ಗಳನ್ನು ಒದಗಿಸಲಾಗಿದೆ.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್ ಯೋಜನೆಯು ನಗರ ಪ್ರದೇಶಗಳಲ್ಲಿ ಬಡವರು ಹಾಗೂ ಶ್ರಮಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಮೂಲಕ ಅವರ ನೆಮ್ಮದಿಗೆ ಕಾರಣವಾಗಿತ್ತು. ಆದರೆ ಹಿಂದಿನ ಸರ್ಕಾರ ವಿವಿಧ ನೆಪಗಳೊಡ್ಡಿ, ಈ ಯೋಜನೆಯನ್ನು ಸ್ಥಗಿತಗೊಳಿಸಿ, ಬಡವರ ವಿರೋಧಿ ಕ್ರಮವನ್ನು ಅನುಸರಿಸಿತು. ಇದೀಗ ಮೊದಲನೇ ಹಂತದಲ್ಲಿ (Phase-1) ಹೊಸ ಮೆನುವಿನೊಂದಿಗೆ, ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಬಿಬಿಎಂಪಿ ಹಾಗೂ ರಾಜ್ಯದ – ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪುನರಾರಂಭ ಮಾಡಲಾಗುವುದು. 2ನೇ ಹಂತದಲ್ಲಿ (Phase-2) ಎಲ್ಲಾ ಹೊಸ ಪಟ್ಟಣಗಳಲ್ಲಿ ಮತ್ತು ಬಿಬಿಎಂಪಿಯ ಹೊಸ ವಾರ್ಡ್‌ಗಳಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್‌ಗಳ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗೆ ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲಿದೆ.
ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಹೆಚ್ಚು ವೈಜ್ಞಾನಿಕವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ವಿಲೇವಾರಿ ಮಾಡಲು ಬೆಂಗಳೂರು ಘನತಾಜ್ಯ ನಿರ್ವಹಣಾ ಸಂಸ್ಥೆಯ (BSWMCL) ಪರಿಣಾಮಕಾರಿ ಕಾರ್ಯಾಚರಣೆಗಾಗಿ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /] -

Karnataka Budget 2023: ರಾಜ್ಯಕ್ಕೆ 7,780 ಕೋಟಿ ರೂ. ನಷ್ಟ, 26,954 ಕೋಟಿ GST ಕೊರತೆ
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ (Karnataka Budget) ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ರಾಜ್ಯದ ಹೊಸ ಯೋಜನೆಗಳ ಅನುಷ್ಠಾನಕ್ಕೆ ತೀವ್ರ ಅನುದಾನ ಕೊರತೆ ತಲೆದೋರಿದೆ 26,954 ಕೋಟಿ GST ಕೊರೆತೆಯಾಗಿದ್ದು, ಆರ್ಥಿಕ ಪರಿಸ್ಥಿತಿಗೆ ಇದು ಬಹುದೊಡ್ಡ ಆಘಾತ ಉಂಟು ಮಾಡಿದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಭಾಷಣದಲ್ಲಿ ಹೇಳಿದ್ದೇನು?
ಕೇಂದ್ರ ಸರ್ಕಾರ ವಿಧಿಸುವ ಸೆಸ್ (Cess) ಮತ್ತು ಸರ್‌ಚಾರ್ಜ್ (Surcharge) ರಾಜ್ಯಗಳಿಗೆ ಹಂಚಿಕೆ ಮಾಡದೆ ತನ್ನ ಬಳಿಯೇ ಉಳಿಸಿಕೊಳ್ಳುತ್ತದೆ. ತೆರಿಗೆಗಳ ಮೇಲೆ ವಿಧಿಸುವ ಸೆಸ್ ಮತ್ತು ಸರ್ ಚಾರ್ಜ್ ಹೆಚ್ಚುತ್ತಿರುವುದರಿಂದ ರಾಜ್ಯಗಳಿಗೆ ಸಂದಾಯವಾಗುವ ತೆರಿಗೆ ಪಾಲು ಕಡಿಮೆಯಾಗಿರುತ್ತದೆ. 2022-23ರಲ್ಲಿ ಎಲ್ಲಾ ರಾಜ್ಯಗಳಿಂದ ಒಟ್ಟು 5,20,570 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರವು ಸೆಸ್ ಮತ್ತು ಸರ್‌ಚಾರ್ಜ್ ಮೂಲಕ ಸಂಗ್ರಹಿಸಿರುವುದರಿಂದ ನಮ್ಮ ರಾಜ್ಯಕ್ಕೆ ಸುಮಾರು 7,780 ಕೋಟಿ ರೂ.ಗಳಷ್ಟು ನಷ್ಟವಾಗಿರುತ್ತದೆ. ನಮ್ಮ ಸರ್ಕಾರವು ಕೇಂದ್ರದ ಈ ನಡೆಯನ್ನು ಬಲವಾಗಿ ವಿರೋಧಿಸುತ್ತದೆ.
ಹೊಸ ಯೋಜನೆಗಳಿಗೆ ಅನುದಾನ ಕೊರತೆ:
ಕೇಂದ್ರ ಸರ್ಕಾರವು, ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯಗಳಿಗೆ ನೀಡುವ ಅನುದಾನವನ್ನು ಕಡಿಮೆ ಮಾಡುತ್ತಾ ಬಂದಿದೆ. ಕೇಂದ್ರದ ಪಾಲು ಕಡಿಮೆಯಾಗಿರುವುದರಿಂದ ರಾಜ್ಯದ ಜನರ ಹಿತದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯದ ಪಾಲನ್ನು ಹೆಚ್ಚಿಸುವ ಅನಿವಾರ್ಯತೆ ಉಂಟಾಗಿದೆ ಹಾಗೂ ಇದರಿಂದಾಗಿ ರಾಜ್ಯದ ಹೊಸ ಯೋಜನೆಗಳಿಗೆ ಅನುದಾನದ ತೀವ್ರ ಕೊರತೆ ತಲೆದೋರಿದೆ.
ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯದ 14.13 ಲಕ್ಷ ಫಲಾನುಭವಿಗಳಿಗೆ ಮಾತ್ರ ಪಿಂಚಣಿಯನ್ನು ನೀಡುತ್ತಿದ್ದು, ರಾಜ್ಯ ಸರ್ಕಾರವು ತನ್ನ ಸ್ವಂತ ಸಂಪನ್ಮೂಲಗಳಿಂದ ಹೆಚ್ಚುವರಿ 64.21 ಲಕ್ಷ ಫಲಾನುಭವಿಗಳಿಗೆ ಪಿಂಚಣಿಯನ್ನು ನೀಡುತ್ತಿದೆ. 2022-23 ರಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೇವಲ 447 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರವು 8,636 ಕೋಟಿ ರೂ.ಗಳನ್ನು ನೀಡಿರುತ್ತದೆ. ಅಂದ್ರೆ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೇವಲ ಶೇ.4.9 ರಷ್ಟು ಅನುದಾನ ನೀಡಿದರೆ ಬಾಕಿ ಶೇ.95.1 ರಷ್ಟು ಅನುದಾನವನ್ನ ರಾಜ್ಯ ಸರ್ಕಾರವೇ ನೀಡುತ್ತಿದೆ.
ಈ ಹಿಂದಿನ ಸರ್ಕಾರವು ಬದ್ಧ ವೆಚ್ಚಗಳಿಗೆ ಕಡಿವಾಣ ಹಾಕಿ ಜನಕಲ್ಯಾಣ ಕಾರ್ಯಕ್ರಮಗಳಿಗೆ ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿರುತ್ತದೆ. ಆಯವ್ಯಯ ಗಾತ್ರವು 2018-19 2023-24ರ ವರೆಗೆ ಶೇ.50ರಷ್ಟು ಹೆಚ್ಚಳವಾಗಿರುತ್ತದೆ. ಆದ್ರೆ ಬದ್ಧ ವೆಚ್ಚಗಳಾದ ವೇತನ, ಬಡ್ಡಿ ಪಾವತಿ ಮತ್ತು ಪಿಂಚಣಿ ವೆಚ್ಚಗಳು ಈ 5 ವರ್ಷಗಳಲ್ಲಿ ಶೇ.81ರಷ್ಟು ಹೆಚ್ಚಾಗಿರುತ್ತದೆ ಎಂದು ವಿವರಿಸಿದ್ದಾರೆ.
ಹಿಂದಿನ ಸರ್ಕಾರದ ಆಡಳಿತದಿಂದ ರಾಜ್ಯದ ಆರ್ಥಿಕತೆಯು ಕತ್ತಲೆಯಲ್ಲಿ ಮುಳುಗಿದ್ದರೂ, ರಾಜ್ಯದ ಆರ್ಥಿಕತೆಯನ್ನು ಪುನಶ್ಚತನಗೊಳಿಸಲು ದೃಢ ನಿಲುವನ್ನು ತೆಗೆದುಕೊಳ್ಳಲು ನಾನು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಜನತೆಯು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನಿರಿಸಿ ಸ್ಪಷ್ಟ ಬಹುಮತ ನೀಡಿರುತ್ತಾರೆ. ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಕಂಕಣಬದ್ಧವಾಗಿರುತ್ತೇನೆ. ನಮ್ಮ ಸರ್ಕಾರವು ಎಲ್ಲಾ 5 ಗ್ಯಾರಂಟಿಗಳನ್ನು ಪೂರೈಸಲು, ಅಗತ್ಯವಿರುವ ಆದಾಯವನ್ನು ಸೃಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಬಂಡವಾಳ ಹೂಡಿಕೆ ಹಾಗೂ ನೇರ ನಗದು ವರ್ಗಾವಣೆಯಿಂದ ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಿ, ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿಗೆ ಸ್ಪಷ್ಟ ಯೋಜನೆಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಡಬಲ್ ಎಂಜಿನ್ ಸರ್ಕಾರ ವಿಫಲ:
15ನೇ ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ರಾಜ್ಯ ಕೇಂದ್ರಿತ ಕಾಮಗಾರಿಗಳ/ಯೋಜನೆಗಳಿಗೆ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ. ನಮ್ಮ ರಾಜ್ಯಕ್ಕೆ 3,000 ಕೋಟಿ ರೂ.ಗಳ ಅನುದಾನವನ್ನು ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಮತ್ತು 3,000 ಕೋಟಿ ರೂ.ಗಳನ್ನು ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆಗಾಗಿ ಎಂದು ರಾಜ್ಯ-ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ. ಆದರೆ, ಕೇಂದ್ರ ಸರ್ಕಾರವು ಅನುದಾನವನ್ನು ನಮ್ಮ ರಾಜ್ಯಕ್ಕೆ ನೀಡಿರುವುದಿಲ್ಲ. ಕೇಂದ್ರದ ವಿತ್ತ ಮಂತ್ರಿಯವರು ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿದ್ದರೂ, ನಮ್ಮದು ಡಬಲ್ ಎಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರವಿದ್ದರೂ ಸಹ, ಕೇಂದ್ರದಿಂದ ಈ ಅನುದಾನವನ್ನು ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ.
26,954 ಕೋಟಿ ರೂ. ಜೆಎಸ್‌ಟಿ ಕೊರತೆ:
ರಾಜ್ಯದಲ್ಲಿ ಜಿಎಸ್‌ಟಿ ತೆರಿಗೆ ಜಾರಿಗೆ ತರುವ ಸಮಯದಲ್ಲಿ ಕೇಂದ್ರ ಸರ್ಕಾರವು ರಾಜ್ಯದ ಜಿಎಸ್‌ಟಿ ತೆರಿಗೆಯು ವರ್ಷವಾರು ಶೇ.14 ರಷ್ಟು ಬೆಳವಣಿಗೆಯಾಗಲಿದೆ ಎಂದು ಭರವಸೆ ನೀಡಿತ್ತು. ಆದ್ರೆ ಕಳೆದ 5 ವರ್ಷಗಳ ರಾಜ್ಯದ ಜಿಎಸ್‌ಟಿ ತೆರಿಗೆ ಸಂಗ್ರಹಣೆಯನ್ನು ಗಮನಿಸಿದರೆ ಕೇಂದ್ರ ಸರ್ಕಾರದ ಭರವಸೆ ಹುಸಿಯಾಗಿರುವುದು ಸಾಬೀತಾಗಿದೆ. ಅಲ್ಲದೇ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡುತ್ತಿದ್ದ ಜಿಎಸ್‌ಟಿ ಪರಿಹಾರವನ್ನು 2022 ಜುಲೈನಿಂದ ಸ್ಥಗಿತಗೊಳಿಸಿರುತ್ತದೆ. ಇದರಿಂದಾಗಿ 2023-24ರ ಆರ್ಥಿಕ ವರ್ಷದಲ್ಲಿಯೇ ಸುಮಾರು 26,954 ಕೋಟಿ ರೂ.ಗಳಷ್ಟು ಜಿಎಸ್‌ಟಿ ಕೊರತೆ ಉಂಟಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಇದು ಬಹುದೊಡ್ಡ ಆಘಾತ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /] -

Karnataka Budget 2023: ಗೃಹಲಕ್ಷ್ಮಿಗೆ 30 ಸಾವಿರ ಕೋಟಿ – ಮಹಿಳೆಯರಿಗೆ ಸಿಕ್ಕಿದ್ದು ಏನು?
– ಆ್ಯಸಿಡ್ ದಾಳಿಗೊಳಗಾದ ಮಹಿಳಾ ಸಂತ್ರಸ್ತರಿಗೆ 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲಕ್ಕೆ ಅಸ್ತು
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ಮಹಿಳೆಯರಿಗೆ ಬಂಪರ್ ಉಡುಗೊರೆ ನೀಡಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ರಾಜ್ಯದಲ್ಲಿನ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು 2 ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ., ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು. ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ ಎಂದು ಹೇಳಿದ್ದಾರೆ.
ಇದರೊಂದಿಗೆ ವಿಶೇಷಚೇತನರಿಗೆ ಆರ್ಥಿಕ ಸದೃಢತೆ ಒದಗಿಸಲು ಸಾಮಾಜಿಕವಾಗಿ ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನ 30 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಅಲ್ಲದೆ, ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು. ಇದನ್ನೂ ಓದಿ: Karnataka Budget 2023: ಡಾ.ರಾಜ್ ಸ್ಮಾರಕದ ಬಳಿ ಸಿನಿ ವಸ್ತು ಸಂಗ್ರಹಾಲಯ
ಮಹಿಳಾ ಉದ್ಯಮಿಗಳು ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹ ಸೇವಾ ವಲಯದಲ್ಲಿ ಮಹಿಳೆಯರು ಹೆಚ್ಚಿನ ಅವಕಾಶ ಪಡೆಯುತ್ತಿದ್ದಾರೆ. ಆದ್ದರಿಂದ ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನ 2 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು. 2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನ 7 ಜಿಲ್ಲೆಗಳಲ್ಲಿ NGOಗಳ ಸಹಯೋಗದೊಂದಿಗೆ 2 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /] -

ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ – ಸಿಎಂ ಬೊಮ್ಮಾಯಿ
ಬೆಂಗಳೂರು: ಜನವರಿ ಒಂದೇ ತಿಂಗಳಲ್ಲಿ 6085 ಕೋಟಿ ರೂ. ಜಿಎಸ್‌ಟಿ (GST) ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ (Karnataka) ಶೇ.30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣ ಹೊಂದಿರುವ ರಾಜ್ಯವಾಗಿದೆ. ಇದನ್ನೂ ಓದಿ: ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ

ತೆರಿಗೆ ಸಂಗ್ರಹದಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರ ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF
Live Tv
[brid partner=56869869 player=32851 video=960834 autoplay=true]Join our Whatsapp group by clicking the below link
https://chat.whatsapp.com/E6YVEDajTzH06LOh77r25k -

2022ರ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಗೆಹ್ಲೋಟ್
ಜೈಪುರ: ರಾಜಸ್ಥಾನ ಮುಖ್ಯಮಂತ್ರಿ (Rajasthan CM) ಅಶೋಕ್ ಗೆಹ್ಲೋಟ್ (Ashok Gehlot) ಅವರು 2023-24ನೇ ಸಾಲಿನ ಬಜೆಟ್ ಮಂಡಿಸುವ ಬದಲು 2022ರ ಬಜೆಟ್ (Budget 2022) ಓದಿ ಇದೀಗ ನಗೆಪಾಟಲಿಗೀಡಾಗಿದ್ದಾರೆ.
ಸುಮಾರು 8 ನಿಮಿಗಳ ಕಾಲ ಹಿಂದಿನ ವರ್ಷದ ಬಜೆಟ್ ಓದಿ ಹಾಸ್ಯಕ್ಕೆ ಒಳಗಾಗಿದ್ದಾರೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಶಾಲಾ ಮಕ್ಕಳ ಜೊತೆ ಕೂತು ಬಿಸಿಯೂಟ ಸವಿದ ಸಿಪಿವೈ
Rajasthan CM Ashok Gehlot, who also holds the Finance portfolio, while presenting this year’s budget, starts reading an old one. The Chief Whip had to step in and stop him. Embarrassing as it is, also shows how callous and poorly invested Congress is, in matters of governance… pic.twitter.com/I6a4RnqcKr
— Amit Malviya (@amitmalviya) February 10, 2023
ಹೌದು. ಶುಕ್ರವಾರ ಅಶೋಕ್ ಗೆಹ್ಲೋಟ್ (Ashok Gehlot) ರಾಜ್ಯ ಬಜೆಟ್ ಮಂಡಿಸಬೇಕಿತ್ತು. ಅದರಂತೆ ಬಜೆಟ್ ಓದಲು ಶುರು ಮಾಡಿದ್ದರು. ಸುಮಾರು 8 ನಿಮಿಷಗಳ ಕಾಲ ಬಜೆಟ್ ಓದಿದ ನಂತರ ಸಚಿವ ಮಹೇಶ್ ಜೋಶಿ ಅವರು ತಿಳಿಸಿದ ಬಳಿಕ ಬಜೆಟ್ ಭಾಷಣವನ್ನು ನಿಲ್ಲಿಸಿದರು. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣ ರಣತಂತ್ರ
2023-24ರ ಬಜೆಟ್ ಮಂಡಿಸಬೇಕಿದ್ದ ಗೆಹ್ಲೋಟ್ ಕಳೆದ ವರ್ಷ ಜಾರಿಗೆ ತಂದಿದ್ದ ಯೋಜನೆಗಳು ಹಾಗೂ ನಗರಾಭಿವೃದ್ಧಿ ಯೋಜನೆಗಳನ್ನೇ ಓದುತ್ತಿದ್ದರು. ಈ ವೇಳೆ ಸಚಿವ ಮಹೇಶ್ ಜೋಶಿ (Mahesh Joshi) ಸಿಎಂಗೆ ಕಳೆದ ವರ್ಷದ ಬಜೆಟ್ ಓದುತ್ತಿರುವುದಾಗಿ ತಿಳಿಸಿದರು. ಬಳಿಕ ಹಳೆಯ ಬಜೆಟ್ ನಿಲ್ಲಿಸಿದ ಮುಖ್ಯಮಂತ್ರಿ ಕ್ಷಮೆಯಾಚಿಸಿದರು.
भाजपा सिर्फ़ यह दिखाना चाहती है कि वह राजस्थान के विकास और तरक्की के खिलाफ है। इनका मन-गढ़ंत आरोप कि बजट लीक हो गया यह दर्शाता है कि बजट को भी यह अपनी ओछी राजनीति से नहीं छोड़ेंगे। 'बचत, राहत, बढ़त' में एक ही बाधा है – भाजपा।
— Ashok Gehlot (@ashokgehlot51) February 10, 2023
ಈ ವೇಳೆ ಬಿಜೆಪಿ (BJP) ನಾಯಕರು ಪ್ರತಿಭಟನೆಗಳಿದು (Protest) ತೀವ್ರ ಟೀಕೆಗೆ ಮುಂದಾದರು. ಬಜೆಟ್ ತಾಂತ್ರಿಕವಾಗಿ ಸೋರಿಕೆಯಾಗಿದೆ. ಬಜೆಟ್ ಪ್ರತಿಯನ್ನು ಮುಖ್ಯಮಂತ್ರಿ ಹೊರತು ಬೇರೆ ಯಾರೂ ತರುವಂತಿರಲಿಲ್ಲ. ಆದರೆ ಬಜೆಟ್ ಪ್ರತಿ ತರಲು ರಾಜ್ಯ ಸರ್ಕಾರದ ಅಧಿಕಾರಿಗಳು ದೌಡಾಯಿಸಿದ್ದರು. ಅದು ಐದಾರು ಜನರ ಕೈಗಳಿಂದ ಕೊನೆಗೆ ಮುಖ್ಯಮಂತ್ರಿ ಅವರಿಗೆ ತಲುಪಿದೆ ಎಂದು ಬಿಜೆಪಿ ಶಾಸಕ ಪ್ರತಾಪ್ ಸಿಂಗ್ ಸಿಂಘ್ವಿ ಆರೋಪಿಸಿದರು.
ಇದರ ಹೊರತಾಗಿ ಬಜೆಟ್ ಸೋರಿಕೆಯಾಗಿದೆ ಎಂಬ ಆರೋಪ ನಿರಾಕರಿಸಿದ ಗೆಹ್ಲೋಟ್, ಹಳೆಯ ಬಜೆಟ್ ಪ್ರತಿ ಓದಿರುವುದಾಗಿ ಹೇಳಿ ಕ್ಷಮೆಯಾಚಿಸಿದರು. ಹಳೆಯ ಬಜೆಟ್ ಓದಿದರೆ ಹೊಸ ಬಜೆಟ್ ಸೋರಿಕೆಯಾದ ಪ್ರಶ್ನೆ ಹೇಗೆ ಉದ್ಭವಿಸುತ್ತದೆ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕಿ ಮಾಜಿ ಸಿಎಂ ವಸುಂಧರ ರಾಜೆ ಅವರು ಗೆಹ್ಲೋಟ್ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಸಿಎಂ ಆಗಿದ್ದಾಗ, ಬಜೆಟ್ ಮಂಡಿಸುವ ಮುನ್ನ ಪದೇ – ಪದೇ ಪರಿಶೀಲಿಸುತ್ತಿದೆ, ಓದುತ್ತಿದೆ. ಆದರೆ ಇಂದಿನ ಮುಖ್ಯಮಂತ್ರಿ ಕೈಯಲ್ಲಿ ಬಜೆಟ್ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಊಹಿಸಿಕೊಳ್ಳಿ ಎಂದು ಟಾಂಗ್ ಕೊಟ್ಟರು.
ಸದನದ ಬಾವಿಗಿಳಿದು ಪ್ರತಿಭಟನೆ: 2022-23ನೇ ಸಾಲಿನ ಬಜೆಟ್‌ನಲ್ಲಿನ ಮೊದಲ ಎರಡು ಘೋಷಣೆಗಳನ್ನು ಮಾಡುತ್ತಿದ್ದಂತೆಯೇ, ವಿರೋಧ ಪಕ್ಷವು ಗದ್ದಲ ಶುರುಮಾಡಿತು. ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಸುಮಾರು 30 ನಿಮಿಷಗಳ ಕಾಲ ಪ್ರತಿಭಟನೆ ನಡೆಯಿತು.
Live Tv
[brid partner=56869869 player=32851 video=960834 autoplay=true]Join our Whatsapp group by clicking the below link
https://chat.whatsapp.com/E6YVEDajTzH06LOh77r25k -

ಕೇಂದ್ರ ಬಜೆಟ್ ನವಭಾರತದ ದೃಷ್ಟಿಕೋನ: ಯೋಗಿ ಆದಿತ್ಯನಾಥ್
ಲಕ್ನೋ: 2023-24ರ ಕೇಂದ್ರ ಬಜೆಟ್ (Union Budget) ನವ ಭಾರತದ ದೃಷ್ಟಿಕೋನವನ್ನು ಹೊಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅಭಿಪ್ರಾಯಪಟ್ಟರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2023ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು ಮೋದಿ (Narendra Modi) ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿದೆ. ಕೇಂದ್ರ ಬಜೆಟ್ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಬಜೆಟ್‍ನಲ್ಲಿ ನವ ಭಾರತ, ದೇಶದ ಸಮೃದ್ಧಿಯ ದೃಷ್ಟಿಕೋನ ಹಾಗೂ 130 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸುವ ಗುರಿಯನ್ನು ಹೊಂದಿದೆ. ಬಜೆಟ್ ಬಡವರು, ರೈತರು, ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ನಿರೀಕ್ಷೆಗಳು ಹಾಗೂ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ
आज प्रस्तुत हुए आम बजट 2023-24 में ‘नए भारत’ की समृद्धि का संकल्प है, अंत्योदय का विजन है, 130 करोड़ देश वासियों की सेवा का लक्ष्य है।#AmritKaalBudget
— Yogi Adityanath (@myogiadityanath) February 1, 2023
ಈ ಬಜೆಟ್ ದೇಶದ ಆರ್ಥಿಕತೆಯನ್ನು ಸೂಪರ್ ಪವರ್ ಮಾಡುವಲ್ಲಿ ಒಂದು ಮೈಲುಗಲ್ಲು ಎಂದು ಸಾಬೀತು ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು
Live Tv
[brid partner=56869869 player=32851 video=960834 autoplay=true]Join our Whatsapp group by clicking the below link
https://chat.whatsapp.com/E6YVEDajTzH06LOh77r25k -

ಮಧ್ಯಮ ವರ್ಗದರಿಗೆ ಬಂಪರ್ – 7 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ
ನವದೆಹಲಿ: ಮಧ್ಯಮ ವರ್ಗದವರಿಗೆ ಬಜೆಟ್‌ನಲ್ಲಿ (Union Budget 2023) ಬಂಪರ್ ಘೋಷಣೆ ಮಾಡಿದ್ದು ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡಲಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.
ನಿರ್ಮಲಾ ಸೀತಾರಾಮನ್ ಹೊಸ ಸ್ಲ್ಯಾಬ್ ದರವನ್ನು ಪ್ರಕಟಿಸಿದ್ದಾರೆ.
ಯಾವುದಕ್ಕೆ ಎಷ್ಟು?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%12-15 ಲಕ್ಷ ರೂ. 20%
15 ಲಕ್ಷ ರೂ. 30%Live Tv
[brid partner=56869869 player=32851 video=960834 autoplay=true]Join our Whatsapp group by clicking the below link
https://chat.whatsapp.com/E6YVEDajTzH06LOh77r25k -

ಕರ್ನಾಟಕಕ್ಕೆ ಗಿಫ್ಟ್ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ
ನವದೆಹಲಿ: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದ್ದು ಭದ್ರಾ ಮೇಲ್ದಂಡೆ ಯೋಜನೆಯನ್ನು (Upper Bhadra Project) ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.
ಬಜೆಟ್ ಭಾಷಣದಲ್ಲಿ (Union Budget 2023) ನಿರ್ಮಲಾ ಸೀತಾರಾಮನ್ (Nirmala Sitaraman) ಈ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದರು. ಇದನ್ನೂ ಓದಿ: 1 ವರ್ಷ ಉಚಿತ ಆಹಾರ, ಕೇಂದ್ರವೇ ಸಂಪೂರ್ಣ ವೆಚ್ಚ ಭರಿಸಲಿದೆ: ನಿರ್ಮಲಾ ಸೀತಾರಾಮನ್
ಈ ಹಿಂದೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ‘‘ಯೋಜನೆಗೆ 23,000 ಕೋಟಿ ರೂ. ವೆಚ್ಚವಾಗಲಿದ್ದು, ಸದ್ಯ 16,000 ಕೋಟಿ ರೂ. ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆ ಘೋಷಣೆ ನಂತರ ಯೋಜನೆಯಡಿ ಬಾಕಿಯಿರುವ ಮೊತ್ತದಲ್ಲಿಶೇ. 60ರಷ್ಟನ್ನು ಕೇಂದ್ರ ಭರಿಸಲಿದೆ. ಅದರಂತೆ ಕೇಂದ್ರದಿಂದ ಯೋಜನೆಗೆ 5,300 ಕೋಟಿ ರೂ. ಸಿಗುವ ನಿರೀಕ್ಷೆ ಇದೆ,’’ ಎಂದು ತಿಳಿಸಿದ್ದರು.
Live Tv
[brid partner=56869869 player=32851 video=960834 autoplay=true]Join our Whatsapp group by clicking the below link
https://chat.whatsapp.com/E6YVEDajTzH06LOh77r25k
