ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಮ್ಮ 8ನೇ ಬಜೆಟ್‌ನಲ್ಲಿ, ರೈತರು ಹಾಗೂ ಮಹಿಳೆಯರಿಗೆ ಬಂಪರ್ ಉಡುಗೊರೆಗಳನ್ನ ಘೋಷಣೆ ಮಾಡಿದ್ದಾರೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಹೊಸ ಯೋಜನೆಯೊಂದನ್ನ ಘೋಷಿಸಿದ್ದಾರೆ.
ಮೊದಲ ಬಾರಿಗೆ ಉದ್ಯಮ ಆರಂಭಿಸುವ 5 ಲಕ್ಷ ಎಸ್‌ಸಿ, ಎಸ್ಟಿ ಮಹಿಳಾ ಉದ್ಯಮಿಗಳಿಗೆ (Women Entrepreneurs) ಸಾಲ ಸೌಲಭ್ಯ ನೀಡಲು ಉದ್ದೇಶಿಸಿದ್ದು, ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ 2 ಕೋಟಿ ರೂ.ವರೆಗೆ ಸಾಲ ಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: Budget 2025| ಕಿತ್ತಾಟ ನಡೆಸಿದ್ರೂ ಮಾಲ್ಡೀವ್ಸ್‌ಗೆ ಅನುದಾನ ಹೆಚ್ಚಳ,ಬಾಂಗ್ಲಾಗೂ ಸಹಾಯ- ಯಾವ ದೇಶಕ್ಕೆ ಎಷ್ಟು ಕೋಟಿ?
ಇನ್ನೂ ದೇಶದ 1 ಕೋಟಿಗೂ ಅಧಿಕ ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ʻಧನ್ ಧಾನ್ಯ ಕೃಷಿʼ ಯೋಜನೆಯನ್ನು ಘೋಷಿಸಲಾಗಿದೆ. ಇದರೊಂದಿಗೆ ಕಿಸಾನ್ ಕ್ರೆಡಿಡ್ ಸಾಲದ ಮಿತಿಯನ್ನು 3 ರಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಜೊತೆಗೆ ಉದ್ಯೋಗ ಸೃಷ್ಟಿಸುವ ಗುರಯೊಂದಿಗೆ 3 ಯೂರಿಯಾ ಪ್ಲ್ಯಾಂಟ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೂರಿಯಾ ಪ್ಲ್ಯಾಂಟ್ ಸ್ಥಾಪನೆಯಿಂದ 7.5 ಕೋಟಿ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಅಲ್ಲದೇ ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ʻಧನ್ ಧಾನ್ಯʼ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ. ಇದು ಸಾಂಸ್ಕೃತಿಕ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ. ಇದನ್ನೂ ಓದಿ: ಎತ್ತುಗಳಿಗೆ ಸ್ನಾನ ಮಾಡಿಸಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ
ತರಕಾರಿಗಳು, ಹಣ್ಣುಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸಲು ಸಮಗ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಕೃಷಿಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ವಲಸೆ ತಡೆಯಬಹುದು. ಯುವಕರನ್ನು ಕೃಷಿಯತ್ತ ಸೆಳೆಯುವ ಉದ್ದೇಶ ಹೊಂದಿದೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ ಮಾಡಲಾಗುವುದು. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: Union Budget 2025: 77 ನಿಮಿಷಗಳ ಕಾಲ 8ನೇ ಬಜೆಟ್ ಮಂಡಿಸಿದ ಸೀತಾರಾಮನ್
ನವದೆಹಲಿ: ಉಡಾನ್ ಯೋಜನೆ (UDAN Scheme) ಅಡಿಯಲ್ಲಿ 120 ನಗರಗಳಲ್ಲಿ ನೂತನ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಣೆ ಮಾಡಿದ್ದಾರೆ.
ಸಾಮಾನ್ಯ ಜನರ ಕೂಡ ವಿಮಾನದಲ್ಲಿ ಪ್ರಯಾಣ ಮಾಡಲು ನೆರವಾಗಲೆಂದು, ಕೇಂದ್ರ ಸರ್ಕಾರ 2017 ರಲ್ಲಿ ಉಡಾನ್ ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆ ಅಡಿಯಲ್ಲಿ 120 ನಗರಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತದೆ. ಇದು ಮುಂದಿನ 10 ವರ್ಷಗಳಲ್ಲಿ 4 ಕೋಟಿ ಜನರಿಗೆ ಅನುಕೂಲ ಕಲ್ಪಿಸಲಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಅಲ್ಲದೇ ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಜೊತೆಗೆ ಪಾಟ್ನಾ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
UNION BUDGET 2025-26: BOOST TO SHIPPING AND AVIATION SECTOR
????Maritime Development Fund of ₹25,000 Crore proposed
????Modified Udan Scheme to connect 120 new destinations and carry 4 crore passengers in the next 10 years
ಡೆಲಿವರಿ ಬಾಯ್ಸ್‌ಗಳಿಗೆ ಪೋರ್ಟಲ್
ಇನ್ನೂ ಆನ್ಲೈನ್ ಪ್ಲಾಟ್ ಫಾರಂ ಕಾರ್ಮಿಕರಿಗೆ ಪ್ರತ್ಯೇಕವಾಗಿ ʻಶ್ರಮ್ ಪೋರ್ಟ್‌ಲ್ʼ ಆರಂಭಿಸಲಾಗುವುದು. ಇದರಿಂದ ಇದರಿಂದ 1 ಕೋಟಿ ಗಿಗ್ ವರ್ಕರ್‌ಗಳಿಗೆ ಅನುಕೂಲವಾಗಲಿದೆ. ಜೊತೆಗೆ ಪಿಎಂ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ 30,000 ಮೌಲ್ಯದ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಹೋಂ ಸ್ಟೇಗಳಿಗೆ ಮುದ್ರಾ ಲೋನ್:
ಅಲ್ಲದೇ ಪ್ರವಾಸೋದ್ಯಮ ಅಭಿವೃಡಿಸುವ ಉದ್ದೇಶದಿಂದ ಹೋಮ್ ಸ್ಟೇಗಳಿಗೆ ಮುದ್ರಾ ಲೋನ್ ನೀಡುವ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತದೆ. ಜೊತೆಗೆ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಟೂರಿಸಂ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಚಿವರು ಘೋಷಿಸಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಇಂದು 2025-26ನೇ ಸಾಲಿನ ಪೂರ್ಣಾವಧಿ ಬಜೆಟ್ ಮಂಡನೆ ಮಾಡಿದ್ದು, ವಿವಿಧ ವಲಯಗಳಿಗೆ ಆದ್ಯತೆ ನೀಡಿದ್ದಾರೆ.
ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ (Union Budget 2025) ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಶನಿವಾರ ಮಂಡಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ ಕೇಂದ್ರದ ಬೊಕ್ಕಸದಿಂದ ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಹಣ ಜಮೆಯಾಗಲಿದೆ. ಯಾವ್ಯಾವ ವಲಯದಿಂದ ಎಷ್ಟೆಷ್ಟು ಹಣ ವೆಚ್ಚವಾಗಲಿದೆ ಎಂಬ ವಿವರ ಇಲ್ಲಿದೆ.
ಜಮೆ ಪೈಸೆಗಳಲ್ಲಿ
ಆದಾಯ ತೆರಿಗೆ – 22
ಸಾಲ ಮತ್ತು ಇತರೆ ಹೊಣಗಾರಿಕೆ – 24
ತೆರಿಗೆಯೇತರ ರಾಜಸ್ವ – 9
ಸಾಲ-ರಹಿತ ಬಂಡವಾಳ – 1
ಕಸ್ಟಮ್ಸ್ – 4
ಕಾರ್ಪೊರೇಷನ್ ತೆರಿಗೆ – 17
ಜಿಎಸ್‌ಟಿ ಮತ್ತು ಇತರ ತೆರಿಗೆಗಳು – 18
ಕೇಂದ್ರ ಅಬಕಾರಿ ಸುಂಕಗಳು – 5
ಯಾವ ವಲಯಕ್ಕೆ ಎಷ್ಟು ವೆಚ್ಚ (ಪೈಸೆಗಳಲ್ಲಿ)
ಬಡ್ಡಿ ಪಾವತಿಗಳು – 20
ಕೇಂದ್ರ ವಲಯ ಯೋಜನೆ (ರಕ್ಷಣಾ ಮತ್ತು ಸಬ್ಸಿಡಿಯ ಮೇಲಿನ ಬಂಡವಾಳ ವೆಚ್ಚವನ್ನು ಹೊರತುಪಡಿಸಿ) – 16
ಪ್ರಮುಖ ಸಬ್ಸಿಡಿಗಳು – 6
ರಕ್ಷಣಾ – 8
ತೆರಿಗೆಗಳು ಮತ್ತು ಸುಂಕಗಳಲ್ಲಿ ರಾಜ್ಯಗಳ ಪಾಲು – 22
ಹಣಕಾಸು ಆಯೋಗ ಮತ್ತು ಇತರ ವರ್ಗಾವಣೆಗಳು – 8
ಕೇಂದ್ರ ಪ್ರಾಯೋಜಿತ ಯೋಜನೆ – 8
ಇತರ ವೆಚ್ಚಗಳು – 8
ಪಿಂಚಣಿ – 4
ಶನಿವಾರ ವಿತ್ತ ಸಚಿವೆ ಮಂಡಿಸಿದ 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ, ಔಷಧೀಯ ಕಂಪನಿಗಳು ನಡೆಸುವ ರೋಗಿ ನೆರವು ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡಿದರೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ಪಡೆಯಬಹುದು. ಹೆಚ್ಚುವರಿಯಾಗಿ, 37 ಹೊಸ ಔಷಧಿಗಳು ಮತ್ತು 13 ಹೊಸ ರೋಗಿ ನೆರವು ಕಾರ್ಯಕ್ರಮಗಳನ್ನು ವಿನಾಯಿತಿ ಪಟ್ಟಿಯಲ್ಲಿ ಸೇರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕ್ಯಾನ್ಸರ್ ರೋಗಿಗಳು, ಅಪರೂಪದ ಕಾಯಿಲೆಗಳು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ಒದಗಿಸಲು, 36 ಜೀವ ಉಳಿಸುವ ಔಷಧಿಗಳಿಗೆ ಮೂಲ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುವುದು ಹಾಗೂ 6 ಜೀವ ಉಳಿಸುವ ಔಷಧಿಗಳಿಗೆ ಕಸ್ಟಮ್ಸ್ ಸುಂಕದಲ್ಲಿ 5% ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಕೊನೆಗೆ ಧರ್ಮಕ್ಕೆ ಗೆಲುವು: ಕಾಶಿಯಲ್ಲಿ ಪವಿತ್ರಾ ಗೌಡ
ನವದೆಹಲಿ: ಬಜೆಟ್ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದ್ದಾರೆ.
ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ (Income Tax) ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಬರೋಬ್ಬರಿ 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿ ಮಧ್ಯಮ ವರ್ಗದವರಿಗೆ ಬಂಪರ್ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Budget 2025: ರೈತರಿಗಾಗಿ ‘ಧನ್ ಧಾನ್ಯ ಕೃಷಿ’ ಯೋಜನೆ ಘೋಷಿಸಿದ ಸೀತಾರಾಮನ್
ಮುಂದಿನ ವಾರ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮಸೂದೆಯಲ್ಲಿ ಈ ವಿಚಾರದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಶನಿವಾರ 2025-26ರ ಕೇಂದ್ರ ಬಜೆಟ್ ಮಂಡಿಸುತ್ತಾ, ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ. ಇದು ಸಾಂಸ್ಕೃತಿಕ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.
ತರಕಾರಿಗಳು, ಹಣ್ಣುಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸಲು ಸಮಗ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.
ಕೃಷಿಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ವಲಸೆ ತಡೆಯಬಹುದು. ಯುವಕರನ್ನು ಕೃಷಿಯತ್ತ ಸೆಳೆಯುವ ಉದ್ದೇಶ ಹೊಂದಿದೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ ಮಾಡಲಾಗುವುದು. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹತ್ತಿ ಬೆಳೆಗೆ ಈ ಐದು ವರ್ಷದಲ್ಲಿ ಆದ್ಯತೆ. ತಂತ್ರಜ್ಞಾನದ ಸಹಕಾರ ನೀಡುವುದು. ಇದು ಟೆಕ್ಸ್‌ಟೈಲ್ಸ್ ವಲಯದಲ್ಲಿ ಹೆಚ್ಚು ಆದಾಯ ತಂದು ಕೊಡಲಿದೆ ಎಂದು ತಿಳಿಸಿದ್ದಾರೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿ ಹೆಚ್ಚಳ ಮಾಡಲಾಗಿದೆ. ಐದು ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿ: ಈ ಬಜೆಟ್‌ನಲ್ಲಿ ಪ್ರಸ್ತಾವಿತ ಅಭಿವೃದ್ಧಿ ಕ್ರಮಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸತತ 8ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಲ್ಲಿ ನಮ್ಮ ಅಭಿವೃದ್ಧಿ ದಾಖಲೆ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನ ಸೆಳೆದಿವೆ. ಈ ಅವಧಿಯಲ್ಲಿ ಭಾರತದ ಸಾಮರ್ಥ್ಯದ ಮೇಲಿನ ವಿಶ್ವಾಸ ಹೆಚ್ಚಾಗಿದೆ. ಮುಂದಿನ 5 ವರ್ಷಗಳನ್ನು ಎಲ್ಲಾ ಪ್ರದೇಶಗಳ ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುವ, ಸಬ್ ಕಾ ವಿಕಾಸ್ ಅನ್ನು ಸಾಕಾರಗೊಳಿಸುವ ಒಂದು ಅನನ್ಯ ಅವಕಾಶವೆಂದು ನಾವು ನೋಡುತ್ತೇವೆ ಎಂದು ಹೇಳಿದ್ದಾರೆ.
ಪಿಎಂ ಧನ್ ಧಾನ್ಯ ಕೃಷಿ ಯೋಜನೆ: ಕೃಷಿ ಜಿಲ್ಲೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮ. ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ. ಇದು ಸಾಂಸ್ಕೃತಿಕ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.
ಸಣ್ಣ ಮತ್ತು ಅತಿ ಸಣ್ಣ ಉದ್ಯಮ ವಲಯವು 7.5 ಕೋಟಿ ಉದ್ಯೋಗ ನೀಡುತ್ತದೆ. 36% ಉತ್ಪಾದನೆ ಮಾಡುತ್ತಿದೆ. ಕ್ರೆಡಿಟ್ ಗ್ಯಾರಂಟಿ ಐದು ಕೋಟಿಯಿಂದ ಹತ್ತು ಕೋಟಿಗೆ ಏರಿಕೆಯಾಗಲಿದೆ. ಸ್ಟಾರ್ಟ್ ಅಪ್‌ಗಳಿಗೆ 10 ಕೋಟಿಯಿಂದ 20 ಕೋಟಿ ಹೂಡಿಕೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
SC-ST ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲಾಗುವುದು. ಐದು ಲಕ್ಷ ಮಹಿಳೆಯರಿಗೆ ಸರ್ಕಾರದ ನೆರವು ಸಿಗಲಿದೆ. ಮೊದಲ ಬಾರಿಗೆ ಉದ್ಯಮ ಶುರು ಮಾಡುವವರಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮಧ್ಯಮ ವರ್ಗದವರಿಗೆ ಬಜೆಟ್‌ನಲ್ಲಿ ಬಂಪರ್ ಘೋಷಣೆ. “12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ. ವೇತನ ಪಡೆಯುವ ತೆರಿಗೆದಾರರು 12.75 ಲಕ್ಷ ರೂ.ಗಳಿಗೆ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ” – ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.
ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ (Income Tax) ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಬರೋಬ್ಬರಿ 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿ ಮಧ್ಯಮ ವರ್ಗದವರಿಗೆ ಬಂಪರ್ ಘೋಷಣೆ ಮಾಡಿದ್ದಾರೆ.
ಮುಂದಿನ ವಾರ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮಸೂದೆಯಲ್ಲಿ ಈ ವಿಚಾರದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.
9 months agoFebruary 1, 2025 12:11 pm
ಟಿಡಿಎಸ್ ಘೋಷಣೆಗಳು
ಹಿರಿಯ ನಾಗರಿಕರಿಗೆ ಬಡ್ಡಿಯ ಮೇಲಿನ ತೆರಿಗೆ ಕಡಿತದ ಮಿತಿಯನ್ನು 50,000 ರೂ.ನಿಂದ 1,00,000 ರೂ.ಗೆ ಏರಿಕೆ
ಬಾಡಿಗೆಯ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನು 2.40 ಲಕ್ಷ ರೂ. ನಿಂದ 6 ಲಕ್ಷ ರೂ.ಗೆ ಏರಿಕೆ. ಇದರಿಂದ ಸಣ್ಣ ಪಾವತಿಗಳನ್ನು ಪಡೆಯುವ ಸಣ್ಣ ತೆರಿಗೆದಾರರಿಗೆ ಪ್ರಯೋಜನವಾಗಲಿದೆ.
ಆರ್‌ಬಿಐನ ಉದಾರೀಕೃತ ರವಾನೆ ಯೋಜನೆ (ಎಲ್‌ಆರ್‌ಎಸ್) ಅಡಿಯಲ್ಲಿ ಹಣ ರವಾನೆಗಳ ಮೇಲೆ ಮೂಲದಲ್ಲಿ ಸಂಗ್ರಹಿಸಿದ ತೆರಿಗೆ (ಟಿಸಿಎಸ್) ಸಂಗ್ರಹಿಸುವ ಮಿತಿಯನ್ನು ರೂ. 7 ಲಕ್ಷದಿಂದ ರೂ. 10 ಲಕ್ಷ ರೂ.ಗೆ ಏರಿಕೆ.
9 months agoFebruary 1, 2025 12:03 pm
ಯಾವ ವಸ್ತುಗಳ ಬೆಲೆ ಇಳಿಕೆ?
ಬಜೆಟ್‌ನಲ್ಲಿ ತೆರಿಗೆ ಇಳಿಕೆ ಮಾಡಿದ್ದರಿಂದ ದೇಶಿ ನಿರ್ಮಿತ ಬಟ್ಟೆ, ಮೇಡ್ ಇನ್ ಇಂಡಿಯಾ ಲೀಥಿಯಮ್ ಬ್ಯಾಟರಿ ದರ ಇಳಿಕೆ. LED, LCD ಟಿವಿ, ಮೊಬೈಲ್ ಫೋನ್, ಚರ್ಮೋತ್ಪನ್ನ ದರಗಳು ಇಳಿಕೆ.
9 months agoFebruary 1, 2025 11:59 am
ಕ್ಯಾನ್ಸರ್ ಔಷಧಿಗಳ ದರ ಇಳಿಕೆ
36 ಜೀವರಕ್ಷಕ ಔಷಧಿಗಳಿಗೆ ಅಬಕಾರಿ ಸುಂಕ ವಿನಾಯಿತಿ. ಕ್ಯಾನ್ಸರ್ ಔಷಧಿಗಳ ದರ ಇಳಿಕೆಯ ಜೊತೆ ಮೆಡಿಕಲ್ ಉಪಕರಣಗಳ ದರ ಇಳಿಕೆ
9 months agoFebruary 1, 2025 11:56 am
1 ಕೋಟಿ ಗಿಗ್ ಕೆಲಸಗಾರರಿಗೆ ಐ-ಕಾರ್ಡ್‌ಗಳು, ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ
“ಸರ್ಕಾರವು ಗುರುತಿನ ಚೀಟಿಗಳನ್ನು ಒದಗಿಸಲಿದೆ ಮತ್ತು 1 ಕೋಟಿ ಗಿಗ್ ಕೆಲಸಗಾರರನ್ನು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಲಾಗುವುದು. ಗಿಗ್ ಕೆಲಸಗಾರರು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಅಡಿಯಲ್ಲಿ ಆರೋಗ್ಯ ಸೇವೆಗೆ ಪ್ರವೇಶವನ್ನು ಹೊಂದಿರುತ್ತಾರೆ. ಸುಮಾರು ಒಂದು ಕೋಟಿ ಕಾರ್ಮಿಕರು ಇದರ ಪ್ರಯೋಜನ ಪಡೆಯಲಿದ್ದಾರೆ” – ನಿರ್ಮಲಾ ಸೀತಾರಾಮನ್
9 months agoFebruary 1, 2025 11:52 am
ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ
ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ. ಇಂಡಿಯಾ ಪೋಸ್ಟ್ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆ. ಭೂಮಿ ದಾಖಲೆ ಆಧುನಿಕರಣ, ನಗರ ಯೋಜನೆ, ಮೂಲಸೌಕರ್ಯಗಳ ಪ್ಲಾನಿಂಗ್ ಡಿಜಿಟಲೀಕರಣ
9 months agoFebruary 1, 2025 11:47 am
ಹೊಸ ಆದಾಯ ತೆರಿಗೆ ಬಿಲ್
ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಮಂಡನೆ ಮಾಡಲಾಗುತ್ತದೆ. ಈ ಮಸೂದೆ ಕೆವೈಸಿ ನಿಯಮಗಳ ಸರಳಿಕರಣ ಮಾಡುತ್ತದೆ.
9 months agoFebruary 1, 2025 11:46 am
ಭಾರತ ಜಾಗತಿಕ ಆಟಿಕೆ ಕೇಂದ್ರವಾಗಬೇಕು
“ಆಟಿಕೆಗಳಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಜಾರಿಗೆ ತರುತ್ತೇವೆ. ಕ್ಲಸ್ಟರ್‌ಗಳು, ಕೌಶಲ್ಯಗಳು ಮತ್ತು ಉತ್ಪಾದನಾ ಪರಿಸರ ವ್ಯವಸ್ಥೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತೇವೆ. ಇದು ‘ಮೇಡ್ ಇನ್ ಇಂಡಿಯಾ’ ಬ್ರ್ಯಾಂಡ್ ಅನ್ನು ಪ್ರತಿನಿಧಿಸುವ ಉತ್ತಮ ಗುಣಮಟ್ಟದ, ವಿಶಿಷ್ಟ, ನವೀನ ಮತ್ತು ಸುಸ್ಥಿರ ಆಟಿಕೆಗಳನ್ನು ರಚಿಸಲು ಸಹಾಯ ಮಾಡುತ್ತದೆ” – ನಿರ್ಮಲಾ ಸೀತಾರಾಮನ್
9 months agoFebruary 1, 2025 11:42 am
ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ
ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯಗಳಿಗೆ ಮುಂದಿನ 15 ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು.
9 months agoFebruary 1, 2025 11:39 am
120 ಸ್ಥಳಗಳಿಗೆ ವಿಮಾನ
ಉಡಾನ್ ಯೋಜನೆಗೆ ಯಶಸ್ವಿಯಾದ ಹಿನ್ನೆಲೆ 120 ಸ್ಥಳಗಳಿಗೆ ಹೆಚ್ಚುವರಿ ಸಂಪರ್ಕ ಕಲ್ಪಿಸಲಾಗುವುದು. ಮುಂದಿನ ಹತ್ತು ವರ್ಷದಲ್ಲಿ ನಾಲ್ಕು ಕೋಟಿ ಜನರಿಗೆ ಅನುಕೂಲವಾಗಲಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ಆರಂಭ.
9 months agoFebruary 1, 2025 11:32 am
ಡೆಲಿವರಿ ಬಾಯ್ಸ್‌ಗಳಿಗೆ ಪೋರ್ಟಲ್
ಆನ್ಲೈನ್ ಪ್ಲಾಟ್ ಫಾರಂ ಕಾರ್ಮಿಕರಿಗೆ ಶ್ರಮ್ ಪೋರ್ಟ್‌ಲ್. ಇದರಿಂದ 1 ಕೋಟಿ ಗಿಗ್ ವರ್ಕರ್ ಗೆ ಅನುಕೂಲ. ಪಿಎಂ ಸ್ವಾನಿಧಿ ಯೋಜನೆಯ ಅಡಿ ಬೀದಿ ಬದಿ ವ್ಯಾಪಾರಿಗಳಿಗೆ 30,000 ಮೌಲ್ಯದ ಕ್ರೆಡಿಟ್ ಕಾರ್ಡ್ ವಿತರಣೆ.
9 months agoFebruary 1, 2025 11:29 am
ಬಿಹಾರಕ್ಕೆ ಆದ್ಯತೆ
ಬಜೆಟ್‌ನಲ್ಲಿ ಬಿಹಾರಕ್ಕೆ ಬಂಪರ್. ಐಐಟಿ ಪಾಟ್ನಾ ಸೇರಿದಂತೆ ಐದು ಐಐಟಿಗಳಲ್ಲಿ ಅಭಿವೃದ್ಧಿ. ಮೈತ್ರಿ ಪಕ್ಷಗಳಿರುವ ರಾಜ್ಯಕ್ಕೆ ಆದ್ಯತೆ
9 months agoFebruary 1, 2025 11:27 am
ಪ್ರಾಥಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್
ಗ್ರಾಮೀಣ ಭಾಗದಲ್ಲಿರುವ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ. ಎಲ್ಲ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್
9 months agoFebruary 1, 2025 11:24 am
ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಆರಂಭ
12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಪ್ಲ್ಯಾಂಟ್ ಆರಂಭಿಸಲಾಗುತ್ತದೆ.
ಸಣ್ಣ ಮತ್ತು ಅತಿ ಸಣ್ಣ ಉದ್ಯಮ 7.5 ಕೋಟಿ ಮಂದಿಗೆ ಉದ್ಯೋಗ ನೀಡುತ್ತದೆ. 36% ಉತ್ಪಾದನೆ ಮಾಡುತ್ತಿದೆ. ಉತ್ತಮವಾಗಿ ನಡೆಯುವ ಉದ್ಯಮಗಳಿಗೆ 20 ಕೋಟಿ ವರೆಗೂ ಸಾಲ ನೀಡಲಾಗುವುದು.
9 months agoFebruary 1, 2025 11:16 am
5 ಲಕ್ಷ ರೂ.ಗೆ ಹೆಚ್ಚಳ
ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ. ಮೂರು ಯೂರಿಯಾ ಪ್ಲ್ಯಾಂಟ್ ನಿರ್ಮಾಣ.
9 months agoFebruary 1, 2025 11:13 am
ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ
ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೊತ್ಸಾಹ ನೀಡಲಾಗುವುದು. ರಾಜ್ಯಗಳ ಜೊತೆಗೆ ಸಹಯೋಗದೊಂದಿಗೆ ಕೆಲಸ ಮಾಡಲಾಗುತ್ತದೆ.
9 months agoFebruary 1, 2025 11:10 am
ಧನ ಧಾನ್ಯ ಯೋಜನಾ
ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲ
9 months agoFebruary 1, 2025 11:07 am
ದೇಶ ಎಂದರೆ ಜನರು
ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಬಜೆಟ್‌ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ.
9 months agoFebruary 1, 2025 11:05 am
ಬಜೆಟ್ ಮಂಡನೆಗೆ ಗದ್ದಲ
ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ವಿರೋಧ ಪಕ್ಷಗಳಿಂದ ಗದ್ದಲ. ಇದು ಅಭಿವೃದ್ಧಿಯ ಬಜೆಟ್ ಎಂದ ಸಿಚಿವೆ
9 months agoFebruary 1, 2025 10:53 am
ಕೆಲವೇ ಕ್ಷಣಗಳಲ್ಲಿ ಬಜೆಟ್
ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಪಡೆದ ನಿರ್ಮಲಾ ಸೀತಾರಾಮನ್. ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ಬಜೆಟ್ ಮಂಡನೆ . ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಪಡೆದ ನಂತರ ಸಂಸತ್ ಆವರಣದಲ್ಲಿ ಡಿಜಿಟಲ್ ಬಜೆಟ್ ತೋರಿಸಿದ ಸಚಿವೆ.
9 months agoFebruary 1, 2025 10:49 am
ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ
ಬಜೆಟ್ ಮಂಡನೆಗೂ ಮುನ್ನ ಮೋದಿ 3.0 ಸರ್ಕಾರದ ಕ್ಯಾಬಿನೆಟ್ ಸಭೆ ಆರಂಭ. ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಪಡೆದ ಬಳಿಕ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿರುವ ನಿರ್ಮಲಾ ಸೀತಾರಾಮನ್.
9 months agoFebruary 1, 2025 10:37 am
ಮಧುಬನಿ ಸೀರೆಯಲ್ಲಿ ಸಚಿವೆ!
ನಿರ್ಮಲಾ ಸೀತಾರಾಮನ್ 2021ರ ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿ ಅವರಿಗೆ ಗೌರವ ಸಲ್ಲಿಸಲು ಮಧುಬನಿ ಕಲೆಯ ಸೀರೆಯನ್ನು ಧರಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿರುರುವ ಮಿಥಿಲಾ ಕಲಾ ಸಂಸ್ಥೆಗೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾಗ ದುಲಾರಿ ದೇವಿ ಉಡುಗೊರೆಯಾಗಿ ನೀಡಿದ್ದರು. ಅಷ್ಟೇ ಅಲ್ಲದೇ ಬಜೆಟ್ ವೇಳೆ ಈ ಸೀರೆಯನ್ನು ಧರಿಸುವಂತೆ ಕೇಳಿಕೊಂಡಿದ್ದರು.
9 months agoFebruary 1, 2025 10:16 am
ರಾಷ್ಟ್ರಪತಿ ಅನುಮತಿ
ಬಜೆಟ್ ಮಂಡನೆಗೂ ಮುನ್ನ ಸೀತಾರಾಮನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಅನುಮತಿ ಪಡೆದುಕೊಂಡರು.
Union Minister for Finance and Corporate Affairs Smt Nirmala Sitharaman along with Minister of State for Finance Shri Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the Union Budget. The… pic.twitter.com/uFF4ElKUOr
ಈ ಹಿಂದೆ ಹಣಕಾಸು ಸಚಿವರು ಬಜೆಟ್ ಪುಸ್ತಕವನ್ನು ತಂದು ಓದುತ್ತಿದ್ದರು. 2019ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸೀತಾರಾಮನ್ ಬ್ರೀಫ್‌ಕೇಸ್ ಬಜೆಟ್ ಸಾಂಪ್ರದಾಯಕ್ಕೆ ಗುಡ್‌ಬೈ ಹೇಳಿದ್ದರು. 2021ರಲ್ಲಿ ಕೋವಿಡ್ ಬಳಿಕ ಮೊದಲ ಬಾರಿ ಕಾಗದ ಪತ್ರಗಳನ್ನು ಬಿಟ್ಟು ಡಿಜಿಟಲ್ ಟ್ಯಾಬ್ಲೆಟ್‌ನಲ್ಲಿ ಬಜೆಟ್ ಮಂಡಿಸಿದ್ದರು. ಈ ಬಾರಿಯೂ ಬಜೆಟ್ ಭಾಷಣವನ್ನು ಪುಸ್ತಕದ ಬದಲಾಗಿ ಟ್ಯಾಬ್ಲೆಟ್ ಹಿಡಿದುಕೊಂಡೆ ಮಂಡಿಸಲಿದ್ದಾರೆ.
9 months agoFebruary 1, 2025 10:04 am
ಲೋಕಸಭೆಗೆ ಆಗಮಿಸಿದ ಸೀತಾರಾಮನ್
ಬಜೆಟ್ ಮಂಡನೆ ಮಾಡಲು ಲೋಕಸಭೆಗೆ ನಿರ್ಮಲಾ ಸೀತಾರಾಮನ್ ಆಗಮಿಸಿದರು.
ಮಹಿಳೆಯರ ಆರೋಗ್ಯ ಸುಧಾರಣೆಗೆ ಅನುದಾನ ಹೆಚ್ಚಳ ಸಾಧ್ಯತೆ ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ಗ್ರಾಮೀಣ ಮಹಿಳೆಯರ ಆರೋಗ್ಯ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ಉಚಿತ ಲಸಿಕೆಗಳನ್ನು ಒದಗಿಸುವ ಯೋಜನೆ ಉದ್ಯಮ ಸ್ಥಾಪಿಸಲು ಸುಲಭ ಸಾಲದ ಸೌಲಭ್ಯ, ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಮಹಿಳೆಯರಲ್ಲಿ ಉಳಿತಾಯ ಮತ್ತು ಹೂಡಿಕೆಯಲ್ಲಿ ಪ್ರೋತ್ಸಾಹ ನೀಡುವುದು ಮುಟ್ಟಿನ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆಯಂತಹ ಆರೋಗ್ಯ ಯೋಜನೆ ಲಕ್ ಪತಿ ದೀದಿ, ಡ್ರೋಣ್ ದೀದಿ ಯೋಜನೆ ಇನ್ನಷ್ಟು ವಿಸ್ತರಿಸುವ ಸಾಧ್ಯತೆ
9 months agoFebruary 1, 2025 9:37 am
ರೈಲ್ವೇ ನಿರೀಕ್ಷೆಗಳೇನು?
ಸರಕು ಸೇವೆಗಳಿಗೆ ರೈಲ್ವೇ ಸಚಿವಾಲಯ ಆದ್ಯತೆ ತಂತ್ರಜ್ಞಾನದಿಂದ ಉದ್ಯೋಗಿಗಳ ವೆಚ್ಚ ನಿಯಂತ್ರಣ ಕಡಿಮೆ ದಟ್ಟಣೆ ನಿಲ್ದಾಣಗಳಲ್ಲಿ ನಿಲುಗಡೆ ಕಡಿಮೆ ಮಾಡುವುದು ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ವಿಸ್ತರಿಸುವುದು ಕವಚ ತಂತ್ರಜ್ಞಾನ ಅಳವಡಿಕೆಗೆ ಇನ್ನಷ್ಟು ಒತ್ತು ಮುಂದಿನ ಐದು ವರ್ಷದಲ್ಲಿ ಮೆಟ್ರೋ ಮಾರ್ಗ ದ್ವಿಗುಣ ಮೆಟ್ರೋ ಮಾರ್ಗಗಳೂ ಇನ್ನಷ್ಟು ವಿಸ್ತರಣೆ
9 months agoFebruary 1, 2025 9:35 am
ರೈತರಿಗೆ ಬಂಪರ್ ಕೊಡುಗೆ?
ಈ ಬಾರಿಯ ಬಜೆಟ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3ರಿಂದ 5 ಲಕ್ಷ ಹೆಚ್ಚಳವಾಗುವ ಸಾಧ್ಯತೆಯಿದೆ. ಕೃಷಿ ಮೂಲಸೌಕರ್ಯದಲ್ಲಿನ ಹೂಡಿಕೆಗಳಿಗೆ ಆದ್ಯತೆ ಸಿಗಲಿದೆ. ಕೃಷಿಯೇತರ ಆದಾಯಕ್ಕೆ ಹೆಚ್ಚು ಒತ್ತು ನೀಡಬಹುದು
9 months agoFebruary 1, 2025 8:53 am
ಬೆಳಗ್ಗೆ 11 ಗಂಟೆಗೆ ಮಂಡನೆ
ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆಯಾಗಲಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯಕ್ಕೆ ಆಗಮಿಸಿದರು.
19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಇಳಿಕೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿ
9 months agoFebruary 1, 2025 8:48 am
6.3-6.8% ಜಿಡಿಪಿ ಬೆಳವಣಿಗೆ
2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು ಆರ್ಥಿಕ ಸಮೀಕ್ಷೆ (Economic Survey) ತಿಳಿಸಿದೆ.
9 months agoFebruary 1, 2025 8:41 am
8ನೇ ಬಜೆಟ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದಾರೆ. ಇಂದು 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ. 2019, 2020, 2021, 2022, 2023, 2024 (ಮಧ್ಯಂತರ ಬಜೆಟ್), 2024 (ಪೂರ್ಣ ಬಜೆಟ್) ಅವಧಿಯಲ್ಲಿ ಬಜೆಟ್ ಮಂಡಿಸಿದ್ದಾರೆ
– ಪದ್ಮ ಪ್ರಶಸ್ತಿ ಪುರಸ್ಕೃತೆ ತಯಾರಿಸಿದ ಸೀರೆಯನ್ನುಟ್ಟ ಕೇಂದ್ರ ವಿತ್ತ ಸಚಿವೆ
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿ ವರ್ಷ ಬಜೆಟ್ ಜೊತೆಗೆ ಸೀರೆ ವಿಚಾರಕ್ಕೂ ಹೆಚ್ಚು ಗಮನ ಸೆಳೆದಿದ್ದಾರೆ. ಪ್ರತಿ ಬಾರಿ ಬಜೆಟ್ ಮಂಡಿಸುವಾಗ ಭಾರತದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯನ್ನುಟ್ಟು ಮಿಂಚಿದ್ದಾರೆ.
ಸೀತಾರಾಮನ್ ಅವರಿಗೆ ಸೀರೆಗಳೆಂದರೆ ಅಚ್ಚುಮೆಚ್ಚು. ಇದುವರೆಗೂ ತಾವು ಮಂಡಿಸಿದ ಬಜೆಟ್‌ಗಳಲ್ಲಿ ಒಂದೊಂದು ಬಗೆಯ, ಕಲಾ ಕುಸುರಿಯ ವಿಶೇಷತೆ ಇರುವ ಸೀರೆಗಳನ್ನುಟ್ಟು ಗಮನ ಸೆಳೆದಿದ್ದಾರೆ. ಅವರು ಧರಿಸುವ ಸೀರೆಗಳು ಕೈಮಗ್ಗ (ಕೈಯಿಂದ ನೇಯ್ದ) ಭಾರತೀಯ ಜವಳಿ ಮತ್ತು ಕರಕುಶಲ ವಸ್ತುಗಳ ಮೇಲಿನ ಅವರ ಪ್ರೀತಿಯನ್ನು ಪ್ರತಿಬಿಂಬಿಸುತ್ತವೆ. ಸೀರೆಗಳು ಭಾರತೀಯ ಸಂಸ್ಕೃತಿ, ಪರಂಪರೆ ಮೇಲೆ ಬೆಳಕು ಚೆಲ್ಲಿವೆ.
ಮದುಬನಿ ಕಲಾ ಸೀರೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧುಬನಿ ಕಲೆ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿಯ ಕೌಶಲ್ಯಕ್ಕೆ ಗೌರವಾರ್ಥವಾಗಿ ಸೀರೆ ಉಟ್ಟಿದ್ದಾರೆ. ಈ ಸೀರೆಯನ್ನು ದುಲಾರಿ ದೇವಿ ಅವರೇ ತಯಾರಿಸಿದ್ದಾರೆ. ಗೋಲ್ಡ್ ಕಲರ್ ಬಾರ್ಡರ್ ಹೊಂದಿರುವ ಸುಂದರವಾದ ಕ್ರೀಮ್ ಸೀರೆಯನ್ನು ಸಚಿವರು ಈ ಬಾರಿ ಬಜೆಟ್ ಮಂಡನೆಗೆ ಧರಿಸಿದ್ದಾರೆ. ಇದಕ್ಕೆ ಮ್ಯಾಚಿಂಗ್ ಎಂಬಂತೆ ಕೆಂಪು ಬಣ್ಣದ ಕುಪ್ಪಸವನ್ನು ಧರಿಸಿದ್ದಾರೆ.
ದುಲಾರಿ ದೇವಿ 2021 ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು. ಮಿಥಿಲಾ ಕಲಾ ಸಂಸ್ಥೆಯಲ್ಲಿ ಕ್ರೆಡಿಟ್ ಔಟ್ರೀಚ್ ಚಟುವಟಿಕೆಗಾಗಿ ಹಣಕಾಸು ಸಚಿವರು ಮಧುಬನಿಗೆ ಹೋಗಿದ್ದರು. ಆಗ ದುಲಾರಿ ದೇವಿ ಅವರನ್ನು ಭೇಟಿಯಾದರು. ಬಿಹಾರದ ಮಧುಬನಿ ಕಲೆಯ ಬಗ್ಗೆ ಸಚಿವರಿಗೆ ತಿಳಿಸಿದ್ದಲ್ಲದೇ, ಸಚಿವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು. ಬಜೆಟ್ ಮಂಡನೆ ದಿನಕ್ಕೆ ಅದನ್ನು ಧರಿಸಲು ಸಚಿವರಿಗೆ ದೇವಿ ಅವರು ಕೋರಿದ್ದರು.
ಮಂಗಳಗಿರಿ ಸೀರೆ
2024ರಲ್ಲಿ ತಮ್ಮ ಏಳನೇ ಬಜೆಟ್ ಮಂಡಿಸಿದ್ದ ನಿರ್ಮಲಾ ಸೀತಾರಾಮನ್ ಅವರು ಮಜೆಂಟಾ (ಕೆನ್ನೇರಳೆ) ಬಾರ್ಡರ್ ಹೊಂದಿದ್ದ ಆಫ್ ವೈಟ್ ಬಣ್ಣ ಮಂಗಳಗಿರಿ ಸೀರೆ ಧರಿಸಿದ್ದರು. ಗುಂಟೂರು ಜಿಲ್ಲೆಯಲ್ಲಿ ತಯಾರಾದ ಸೀರೆ ಆಂಧ್ರಪ್ರದೇಶದ ಸಂಸ್ಕೃತಿಯನ್ನು ಬಿಂಬಿಸಿದೆ. ಇದೇ ಸಂದರ್ಭದಲ್ಲಿ ಆಂಧ್ರಕ್ಕೆ ವಿಶೇಷ ಆರ್ಥಿಕ ನೆರವು ಘೋಷಿಸಿದ್ದು ವಿಶೇಷವಾಗಿತ್ತು.
ಟಸ್ಸರ್ ರೇಷ್ಮೆ ಸೀರೆ
2024ರಲ್ಲೇ ಮಧ್ಯಂತರ ಬಜೆಟ್‌ಗಾಗಿ ಸೀತಾರಾಮನ್ ನೀಲಿ ಬಣ್ಣದ ಟಸ್ಸರ್ ರೇಷ್ಮೆ ಸೀರೆ ಉಟ್ಟಿದ್ದರು. ಅದರಲ್ಲಿ ಕಾಂತ ಕೈಯಿಂದ ಮಾಡಲಾಗಿತ್ತು. ಸೀರೆ ಜೊತೆಗೆ ಚಿನ್ನದ ಬಣ್ಣದ ಬ್ಲೌಸ್ ಧರಿಸಿದ್ದರು. ಪಶ್ಚಿಮ ಬಂಗಾಳವು ಕಾಂತ ಹೊಲಿಗೆಗೆ ಹೆಸರುವಾಸಿಯಾಗಿದೆ. ನೀಲಿ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವ, ಮೀನುಗಾರಿಕೆ ಅಭಿವೃದ್ಧಿ ಮೂಲಕ ಮತ್ಸ್ಯ ಕ್ರಾಂತಿಯ ಸಂದೇಶ ನೀಡಿದ್ದರು.
ಕರ್ನಾಟಕದ ಇಳಕಲ್ ಸೀರೆ
2023ರಲ್ಲಿ ಬಜೆಟ್ ಮಂಡನೆ ಸಂದರ್ಭದಲ್ಲಿ ಸಚಿವೆ ನಿರ್ಮಲಾ ಅವರು, ದೇವಾಲಯ ಬಾರ್ಡರ್ ಸೀರೆ ಆರಿಸಿಕೊಂಡಿದ್ದರು. ಕೆಂಪು ಬಣ್ಣದ ಟೆಂಪಲ್ ಬಾರ್ಡರ್ ಸೀರೆ ವಿಶೇಷವಾಗಿತ್ತು. ಕರ್ನಾಟಕ ಧಾರವಾಡದ ಇಳಕಲ್ ರೇಷ್ಮೆ ಸೀರೆ ಇದಾಗಿತ್ತು. ಕೈಯಿಂದ ನೇಯ್ದ ಕಸೂತಿ ಸೀರೆಯಿದು. ಸೀರೆಯಲ್ಲಿ ರಥ, ನವಿಲು, ಕಮಲಗಳ ಚಿತ್ರಗಳಿದ್ದವು. ಬಜೆಟ್‌ನಲ್ಲಿ ಕಸೂತಿ ಕಲೆಗೆ ಪ್ರೋತ್ಸಾಹ ನೀಡುವ ಸುಳಿವು ಕೊಟ್ಟಿದ್ದರು.
ಬೊಮ್ಕೈ ಸೀರೆ
2022ರಲ್ಲಿ ಬಜೆಟ್ ಮಂಡಿಸುವಾಗ ಸೀತಾರಾಮನ್ ಅವರು, ಬೊಮ್ಕೈ ಸೀರೆಯನ್ನು ಧರಿಸಿದ್ದರು. ಸೀರೆ ಕಂದು ಬಣ್ಣದ್ದಾಗಿತ್ತು. ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಕೈಮಗ್ಗದಲ್ಲಿ ನೇಯ್ದ ವಿಶೇಷ ಸೀರೆಯಿದು.
ಪೋಂಚಪಲ್ಲಿ ಸೀರೆ
2021 ರಲ್ಲಿ ತಮ್ಮ ಮೂರನೇ ಬಜೆಟ್ ಮಂಡನೆಗಾಗಿ ನಿರ್ಮಲಾ ಸೀತಾರಾಮನ್ ಅವರು ಹೈದರಾಬಾದ್‌ನ ಪೋಚಂಪಲ್ಲಿ ಗ್ರಾಮದ ಕೆಂಪು ಮತ್ತು ಮಾಸಲು ಬಿಳಿ ಬಣ್ಣದ ಪೋಚಂಪಲ್ಲಿ ಸೀರೆಯನ್ನು ಧರಿಸಿದ್ದರು.
ರೇಷ್ಮೆ ಸೀರೆ
2020ರಲ್ಲಿ ಸೀತಾರಾಮನ್ ಅವರು ಬಜೆಟ್ ಮಂಡನೆಗೆ ಹಳದಿ ರೇಷ್ಮೆ ಸೀರೆ ಉಟ್ಟು ಬಂದಿದ್ದರು. ಸೀರೆಗೆ ಮ್ಯಾಚ್ ಆಗುವ ಅದೇ ಬಣ್ಣದ ಕುಪ್ಪಸ ಧರಿಸಿದ್ದರು. ಸೀರೆಯ ಬಾರ್ಡರ್ ನೀಲಿ ಬಣ್ಣದ್ದಾಗಿತ್ತು. ಹಳದಿ ಸಮೃದ್ಧಿಯ ಸಂಕೇತವಾಗಿದೆ.
ಮಂಗಳಗಿರಿ ಸೀರೆ
2019 ರಲ್ಲಿ ಕೇಂದ್ರ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರ ಮೊದಲ ಬಜೆಟ್ ಮಂಡಿಸಿದ್ದರು. ಆಗ ಅವರು ಗೋಲ್ಡ್ ಕಲರ್ ಬಾರ್ಡರ್ ಹೊಂದಿರುವ ಗುಲಾಬಿ ಬಣ್ಣದ ಮಂಗಳಗಿರಿ ಸೀರೆಯನ್ನು ಧರಿಸಿದ್ದರು.ಸಾಂಪ್ರದಾಯಿಕ ‘ಬಹಿ ಖಾತಾ’ ದೊಂದಿಗೆ ಬಜೆಟ್ ಬ್ರೀಫ್‌ಕೇಸ್ ಅನ್ನು ತೆಗೆದುಕೊಂಡು ಬಂದಿದ್ದರು. ಅದರ ಮೇಲ್ಭಾಗದಲ್ಲಿ ರಾಷ್ಟ್ರೀಯ ಲಾಂಛನದೊಂದಿಗೆ ಚಿನ್ನದ ಎಳೆಗಳು ಇದ್ದವು.
ನವದೆಹಲಿ: ಫೆಬ್ರವರಿ 1 ರಂದು ಮಂಡನೆಯಾಗಲಿರುವ 2025-26ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ 15 ಲಕ್ಷ ರೂ.ಗಳ ವರೆಗೆ ಆದಾಯ ತೆರಿಗೆ (Income Tax) ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
Kind Attention Taxpayers!
A validated bank account is necessary for receipt of refunds.
Here’s how you can check your bank a/c validation status on e-filing portal. pic.twitter.com/7OKmc4t8QX
ಮಧ್ಯಮ ವರ್ಗಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶ ಹಾಗೂ ಆರ್ಥಿಕತೆ ವೇಗವಾಗಿ ಬೆಳೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಈ ಚಿಂತನೆ ಮಾಡಿದೆ. ಸದ್ಯಕ್ಕೆ ಯಾವುದೇ ಕಡಿತದ ಗಾತ್ರವನ್ನು ನಿರ್ಧರಿಸಿಲ್ಲ. ಬಜೆಟ್ ಮಂಡನೆಗೆ ದಿನಾಂಕ ಸಮೀಪವಾಗುತ್ತಿದ್ದಂತೆ ನಿರ್ಧಾರ ಸ್ಪಷ್ಟವಾಗಲಿದೆ ಎಂದು ಹೆಸರು ಹೇಳಲಿಚ್ಚಿಸದ ಸರ್ಕಾರಿ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿಗೆ 2,244 ಕೋಟಿ, ಕಾಂಗ್ರೆಸ್‌ಗೆ 289 ಕೋಟಿ – ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ಸಿಕ್ಕಿದೆ?
ಪ್ರಮುಖವಾಗಿ ವಸತಿ ಬಾಡಿಗೆಗಳಂತಹ ವಿನಾಯಿತಿಗಳನ್ನು ತೆಗೆದುಹಾಕುವ 2020ರ ತೆರಿಗೆ ವ್ಯವಸ್ಥೆಯನ್ನು ಆರಿಸಿಕೊಂಡರೆ, ಈ ಕ್ರಮವು ಕೋಟ್ಯಂತರ ತೆರಿಗೆದಾರರಿಗೆ, ವಿಶೇಷವಾಗಿ ಹೆಚ್ಚಿನ ಜೀವನ ವೆಚ್ಚದಿಂದ ಹೊರೆಯಾಗಿರುವ ನಗರವಾಸಿಗಳಿಗೆ ಪ್ರಯೋಜನ ನೀಡುತ್ತದೆ. 2020ರ ತೆರಿಗೆ ಪದ್ದತಿಯಲ್ಲಿ 3 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳ ವರೆಗಿನ ವಾರ್ಷಿಕ ಆದಾಯಕ್ಕೆ ಶೇ.5 ರಿಂದ ಶೇ.20ರ ವರೆಗೆ ತೆರಿಗೆ ವಿಧಿಸಲಾಗುತ್ತಿತ್ತು. ಈ ಪ್ರಮಾಣ ಗರಿಷ್ಠ 30% ರಷ್ಟಿತ್ತು.
ಇದೀಗ ಕೇಂದ್ರ ಸರ್ಕಾರ ಮುಂದಿಟ್ಟಿರುವ ನೂತನ ಪ್ರಸ್ತಾಪದಲ್ಲಿ ದೇಶದ ತೆರಿಗೆದಾರರು 2 ತೆರಿಗೆ ವ್ಯವಸ್ಥೆಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು. ಅದೇನೆಂದರೆ ವಸತಿ ಬಾಡಿಗೆ ಮತ್ತು ವಿಮೆಯ ಮೇಲೆ ವಿನಾಯಿತಿ ಅನುಮತಿಸುವ ಒಂದು ತೆರಿಗೆ ಪದ್ದತಿ ಮತ್ತು ಮತ್ತೊಂದು 2020ರಲ್ಲಿ ಪರಿಚಯಿಸಲಾದ ತೆರಿಗೆ ಪದ್ದತಿ. ಇದು ಸ್ವಲ್ಪ ಕಡಿಮೆ ತೆರಿಗೆ ದರಗಳನ್ನು ನೀಡುತ್ತದೆಯಾದರೂ ಪ್ರಮುಖ ವಿನಾಯಿತಿಗಳನ್ನ ಅನುಮತಿಸುವುದಿಲ್ಲ ಎಂದು ವರದಿ ಹೇಳಿದೆ.
ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಅರ್ಥಶಾಸ್ತ್ರಜ್ಞರನ್ನು ಭೇಟಿಯಾಗಿದ್ದರು. ಈ ವೇಳೆ ತಜ್ಞರು ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಆದಾಯ ತೆರಿಗೆ ಕಡಿತಗೊಳಿಸುವಂತೆ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಅಲ್ಲದೇ ಕಸ್ಟಮ್ಸ್ ಸುಂಕಗಳನ್ನು ತರ್ಕಬದ್ಧಗೊಳಿಸಬೇಕು ಮತ್ತು ರಫ್ತುಗಳನ್ನು ಬೆಂಬಲಿಸುವ ಕ್ರಮಗಳನ್ನ ಪರಿಚಯಿಸಬೇಕು ಎಂದು ಸಹ ಮನವಿ ಮಾಡಿದ್ದರು.