Tag: Budget Session

  • ಬಜೆಟ್‌ ಗಾತ್ರ 4.09 ಲಕ್ಷ ಕೋಟಿಯಷ್ಟು ಹೆಚ್ಚಾಗಿದೆ, ಇದು ರಾಜ್ಯದ ಅಭಿವೃದ್ಧಿಗೆ ಸಾಕ್ಷಿ: ಸಿದ್ದರಾಮಯ್ಯ

    ಬಜೆಟ್‌ ಗಾತ್ರ 4.09 ಲಕ್ಷ ಕೋಟಿಯಷ್ಟು ಹೆಚ್ಚಾಗಿದೆ, ಇದು ರಾಜ್ಯದ ಅಭಿವೃದ್ಧಿಗೆ ಸಾಕ್ಷಿ: ಸಿದ್ದರಾಮಯ್ಯ

    ಬೆಂಗಳೂರು: 2024 ರಲ್ಲಿ ಮೋದಿ ಸರ್ಕಾರ 41.21 ಲಕ್ಷ ಕೋಟಿ ರೂ. ಬಜೆಟ್ (Budget) ಮಂಡಿಸಿದೆ. 1.05 ಲಕ್ಷ ಕೋಟಿ ರೂ. ಕಡಿಮೆ ತೆರಿಗೆ ಸಂಗ್ರಹ ಮಾಡಿದೆ. ಇನ್ನೂ ನಮ್ಮ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ. 4.09 ಲಕ್ಷ ಕೋಟಿ ರೂ. ಬಜೆಟ್ ಗಾತ್ರ ಹೆಚ್ಚಿದೆ. ಈ ಸಲ ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ಕೊಡಲಾಗಿದೆ ಎಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಬಜೆಟ್ ಚರ್ಚೆ ವೇಳೆ ಉತ್ತರಿಸಿದ ಅವರು, ನಮ್ಮ ಬಜೆಟ್‌ಗೆ ಎಲ್ಲಾ ಕಡೆಯಿಂದ ಶ್ಲಾಘನೆ ಬಂದಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕ ಪ್ರಗತಿ ಆಗಲಿದೆ. 2024-25ನೇ ಸಾಲಿಗೆ ಹೋಲಿಸಿದರೆ, ಈ ಸಲ ಬಜೆಟ್ ಗಾತ್ರ 10.3% ಬೆಳವಣಿಗೆ ಕಂಡಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ನಾವು ಮೂರನೇ ಸ್ಥಾನ ಹೊಂದಿದ್ದೇವೆ. ರಾಜಸ್ಥಾನ, ತಮಿಳುನಾಡು, ಉತ್ತರಪ್ರದೇಶ, ಮಹಾರಾಷ್ಟ್ರದ ನಂತರ ಐದನೇ ದೊಡ್ಡ ಬಜೆಟ್ ನಮ್ಮದು ಎಂದಿದ್ದಾರೆ.

    ಕೇಂದ್ರದ ಬಜೆಟ್ ಬೆಳವಣಿಗೆ 5.06% ಮಾತ್ರ, ನಮ್ದು 10.3% ಇದೆ. 2024-25 ರಲ್ಲಿ 1,89,893 ಕೋಟಿ ರೂ. ಸ್ವಂತ ತೆರಿಗೆ ಸಂಗ್ರಹ ಅಂದಾಜಿಸಲಾಗಿತ್ತು. ಫೆಬ್ರವರಿ ಅಂತ್ಯದವರೆಗೆ 1,57,111 ಕೋಟಿ ತೆರಿಗೆ ಸಂಗ್ರಹ ಆಗಿದೆ. 82.7% ಪ್ರಗತಿ ಅಗಿದೆ. ಮಾರ್ಚ್ ಅಂತ್ಯಕ್ಕೆ 1,77000 ಕೋಟಿ ರೂ. ತೆರಿಗೆ ಸಂಗ್ರಹ ಆಗಬಹುದು. ಇದು ನಮ್ಮ ನಿರೀಕ್ಷೆಗಿಂತ ತುಸು ಕಡಿಮೆ, ದೇಶಾದ್ಯಂತ ತೆರಿಗೆ ಸಂಗ್ರಹ ಇಳಿಕೆ ಆಗಿದೆ. ದೇಶದಲ್ಲಿ ನಡೆಯುವ ಬೆಳವಣಿಗೆ ರಾಜ್ಯದ ಮೇಲೂ ಪರಿಣಾಮ ಬೀರುತ್ತದೆ. ಇದು ದೇಶದ ಅರ್ಥಿಕ ಬೆಳವಣಿಗೆ ಸಮರ್ಪಕ ಆಗಿಲ್ಲ ಎಂದು ತೋರಿಸುತ್ತದೆ ಎಂದಿದ್ದಾರೆ.

    ಗ್ಯಾರಂಟಿಗಳಿಂದ (Guarantee scheme) ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಈ ಸಲ ವಿತ್ತೀಯ ಕೊರತೆ ಜಿಎಸ್‌ಡಿಪಿ 2.9% ಇದೆ. ಜಿಎಸ್‌ಡಿಪಿ ಎದುರಾಗಿ ನಮ್ಮ ಹೊಣೆಗಾರಿಕೆ 24.91% ಇದೆ. ಕರ್ನಾಟಕದ ವಿತ್ತೀಯ ಕೊರತೆ ಬಿಜೆಪಿ ಕಾಲದಲ್ಲಿ 3.3% ಇತ್ತು. 2.9% ರಷ್ಟು ನಮ್ಮ ಕಾಲದಲ್ಲಿದೆ. ನಾವು ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ. ಕಲ್ಯಾಣ ಯೋಜನೆಗಳಿಗೆ, ಗ್ಯಾರಂಟಿಗಳಿಗೆ, ಸಹಾಯ ಧನಗಳಿಗೆ ಸುಮಾರು 1 ಲಕ್ಷ ಕೋಟಿ ರೂ. ವ್ಯಯ ಮಾಡುತ್ತಿದ್ದೇವೆ. ಇವು ಮಧ್ಯವರ್ತಿಗಳು ಇಲ್ಲದೇ ಜನರಿಗೆ ನೇರ ತಲುಪುವ ಸವಲತ್ತುಗಳಾಗಿವೆ. ರೈತರಿಗೆ ಉಚಿತ ವಿದ್ಯುಗೆ 18 ಸಾವಿರ ಕೋಟಿ ರೂ. ಸಾಮಾಜಿಕ ಭದ್ರತಾ ಪಿಂಚಣಿಗಳಿಗೆ 10,835 ಕೋಟಿ ರೂ. ಮನೆ ನಿರ್ಮಾಣ, ಸಬ್ಸಿಡಿ, ಹಾಲು ಉತ್ಪಾದನೆ ಪ್ರೋತ್ಸಾಹ ಧನ ಎಲ್ಲಾ ಸೇರಿ 1 ಲಕ್ಷ ಕೋಟಿ ರೂ. ಆಗಲಿದೆ ಎಂದಿದ್ದಾರೆ.

    2024-25ರ ಅವಧಿಯಲ್ಲಿ ಸರ್ಕಾರಿ ನೌಕರರ ವೇತನ 71,865, ಕೋಟಿ ರೂ. ಪಿಂಚಣಿಗೆ 30,907 ಕೋಟಿ ರೂ. ಸೇರಿ ಒಟ್ಟು 1,02,769 ಕೋಟಿ ರೂ. ವೆಚ್ಚ ಮಾಡಲಾಗಿದೆ. 2025-26 ನೇ ಸಾಲಿಗೆ ಸರ್ಕಾರಿ ನೌಕರ ಸಂಬಳಕ್ಕೆ 85,865 ಕೋಟಿ ರೂ., ಪಿಂಚಣಿಗೆ 38,585 ಕೋಟಿ ರೂ. ಅಂದಾಜು ಮಾಡಲಾಗಿದೆ. ಬಡ್ಡಿ ಪಾವತಿಗೆ 45,600 ಕೋಟಿ ರೂ. ವೇತನ, ಬಡ್ಡಿ ಪಾವತಿ, ಪಿಂಚಣಿಗೆ ಒಟ್ಟು 1,70,040 ಕೋಟಿ ರೂ. ಮೀಸಲಿರಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

  • ವಿಧಾನಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ – ಕಿಕ್‌ ಇಳಿಸಿದ ಡಿಕೆಶಿ

    ವಿಧಾನಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ – ಕಿಕ್‌ ಇಳಿಸಿದ ಡಿಕೆಶಿ

    – ಎಸ್ಸಿ-ಎಸ್ಟಿ ಜನ ಮಾತ್ರ ಮದ್ಯ ಕುಡೀತಾರಾ?
    – ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ತೀವ್ರ ಆಕ್ಷೇಪ

    ಬೆಂಗಳೂರು: ವಿಧಾನಸಭೆ (Vidhan Sabha) ಕಲಾಪದಲ್ಲಿಂದು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮಧ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ ಸೃಷ್ಟಿಸಿತ್ತು.

    ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ (Liquor Sale) ತಡೆಯುವಂತೆ ಶಾಸಕ ಮಹಾಂತೇಶ ಕೌಜಲಗಿ ಪ್ರಶ್ನೆ ಕೇಳಿದ್ರು. ಈ ವೇಳೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆ ಟಾರ್ಗೆಟ್ ಫಿಕ್ಸ್ ಮಾಡಿರೋದೇ ಕಾರಣ ಅಂತ ಆಪಾದಿಸಿದರು. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಹಾಲುಣಿಸಲು ಸೂಕ್ತ ಸೌಕರ್ಯ ಕಲ್ಪಿಸಿ – ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ಈ ವೇಳೆ ಎಸ್‌ಸಿ/ಎಸ್‌ಟಿ ಕಾಲೋನಿಗಳಲ್ಲೇ ಹೆಚ್ಚಾಗಿ ಅಕ್ರಮ ಮದ್ಯ ಮಾರಾಟ ಮಾಡಲಾಗ್ತಿದೆ. ಇದರಿಂದ ತಮ್ಮ ಕ್ಷೇತ್ರದಲ್ಲಿ 35-40 ವರ್ಷದ ಒಬ್ಬೇಒಬ್ಬ ದಲಿತ ಯುವಕರೂ ಬದುಕಿಲ್ಲ ಅಂತ ಶಾಸಕ ಆರಗ ಜ್ಞಾನೇಂದ್ರ ಸದನದ ಗಮನ ಸೆಳೆದರು. ಆದ್ರೆ ಆರಗ ಜ್ಞಾನೇಂದ್ರ ಹೇಳಿಕೆಗೆ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ತೀವ್ರವಾಗಿ ಆಕ್ಷೇಪಿಸಿದ್ರು. ಯಾಕ್ರೀ ಆರಗ ಅವರೇ ಎಸ್ಸಿ-ಎಸ್ಟಿ ಜನ ಮಾತ್ರ ಮದ್ಯ ಕುಡೀತಾರಾ? ಬೇರೆಯವ್ರು ಯಾರೂ ಕುಡಿಯಲ್ವಾ? ನೀವು ಕುಡಿಯಲ್ವಾ? ನೀವು ಕುಡಿಯಲ್ಲ ಅಂತ ಪ್ರಮಾಣ ಮಾಡ್ತೀರ? ಅಂತ ಆರಗ ಮೇಲೆ ಗರಂ ಆದ್ರು.

    ಈ ವೇಳೆ ಡಿಸಿಎಂ ಡಿಕೆಶಿ ಮಧ್ಯಪ್ರವೇಶಿಸಿ, ರಾಜ್ಯಪಾಲರು ಭಾಷಣ ಮಾಡಿದ್ದಾರೆ, ಅದರ ಮೇಲಿನ ಚರ್ಚೆ ವೇಳೆ ಇದು ಚರ್ಚೆ ಆಗಲಿ. ಆರಗ ಜ್ಞಾನೇಂದ್ರ ಗೃಹ ಸಚಿವರು ಆಗಿದ್ದವರು, ಅವರ ಕಾಲದಲ್ಲಿ ಇಂಥ ಎಷ್ಟು ಅಕ್ರಮ ಮದ್ಯದಂಗಡಿ ನಿಲ್ಲಿಸಿದ್ದಾರೆ? ಅಂತ ಚರ್ಚೆ ಆಗಲಿ ಅಂತ ಕೋಲಾಹಕ್ಕೆ ತೆರೆ ಎಳೆದ್ರು. ಇದನ್ನೂ ಓದಿ: ನಿಮಗೂ ವಯಸ್ಸಾಗಿದೆ, ಅಧ್ಯಕ್ಷರ ಅವಧಿ ಮುಗಿಯೋದ್ರಲ್ಲಿ ದಲಿತ ಸಿಎಂ ಮಾಡಿ – ಖರ್ಗೆಗೆ ಕಾರಜೋಳ ಸವಾಲ್

  • ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ; ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್‌ಡಿಡಿ

    ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ; ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್‌ಡಿಡಿ

    – ಗ್ರಾಮೀಣಾಭಿವೃದ್ಧಿ, MSME ಗಳಿಗೆ ಬೆಂಬಲ,
    – ನೀರಿನ ಭದ್ರತೆಗೆ ತುರ್ತು ಕ್ರಮ ವಹಿಸಲು ಕೇಂದ್ರಕ್ಕೆ ಸಲಹೆ
    – ಗೋದಾವರಿ – ಕಾವೇರಿ ನದಿಗಳ ಜೋಡಣೆಗೆ ಮನವಿ

    ನವದೆಹಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡರು ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ. ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ ಕೈಲಾದ ಎಲ್ಲವನ್ನೂ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

    ನಗರಗಳಿಗೆ ವಲಸೆ ಬಗ್ಗೆ ಕಳವಳ:
    ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವವರ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

    ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

    ಸಮತೋಲಿತ ಜೀವನೋಪಾಯ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳನ್ನು (MSME) ಬೆಂಬಲಿಸಲು ಹೆಚ್ಚು ಸೂಕ್ತವಾದ ಉಪಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವನ್ನು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು. `ಹಣಕಾಸು ಬೆಂಬಲ ಪಡೆಯುವಲ್ಲಿ ಅತಿಸಣ್ಣ, ಸಣ್ಣ ಕೈಗಾರಿಕೆಗಳು ಮಧ್ಯಮ ಗಾತ್ರದ ಕೈಗಾರಿಕೆಗಳೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಉದ್ದೇಶಕ್ಕಾಗಿ ಪ್ರತ್ಯೇಕ ನೀತಿ, ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯ ತುಂಬಾ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

    ಅತಿ ಸಣ್ಣ, ಸಣ್ಣ ಕೈಗಾರಿಕೆಗಳಿಗೆ ಸಾಲದ ಅನುಮೋದನೆ ನೀಡುವಾಗ ಸಿಬಿಲ್ (CIBIL) ಸ್ಕೋರ್‌ ಮಾನದಂಡವನ್ನು ಪರಿಗಣಿಸಬಾರದು. ಬಡ್ಡಿದರಗಳನ್ನು ಶೇ.7ರಿಂದ 8ಕ್ಕೆ ಇಳಿಸಬೇಕು ಮತ್ತು ಆರಂಭಿಕ ಸಾಲ ಮರುಪಾವತಿಗಾಗಿ ಸ್ವತ್ತುಗಳ ಮರುಸ್ವಾಧೀನ ದಂಡ ಪ್ರಯೋಗವನ್ನು ಕೈಬಿಡಬೇಕು ಎಂದು ದೇವೇಗೌಡರು ಸರಕಾರವನ್ನು ಒತ್ತಾಯಿಸಿದರು.

    ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಿ:
    ಕೃಷಿ ಉತ್ಪನ್ನಗಳಿಗೆ ನಾವು ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದ ದೇವೇಗೌಡರು, ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯ ಮಾಡಿದರು.

    ಅತಿ ಕಡಿಮೆ ಬಂಡವಾಳದಿಂದ ಮಖಾನಾ ಬೆಳೆಯಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲ ಆಗುತ್ತಿದೆ. ಮಂಡಳಿ ರಚನೆಯಿಂದ ಮತ್ತಷ್ಟು ಅನುಕೂಲ ಆಗುತ್ತದೆ. ಹೀಗಿದ್ದ ಮೇಲೆ ಕನಿಷ್ಠ ಬಂಡವಾಳದಿಂದ ನೈಸರ್ಗಿಕವಾಗಿ ಬೆಳೆಯಲಾಗುವ ಹಲಸಿನ ಹಣ್ಣು, ನೇರಳೆ ಹಾಗೂ ಹುಣಸೆಹಣ್ಣು ಮಂಡಳಿಯನ್ನು ರಚಿಸಬಾರದೇಕೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

    ಬೆಂಗಳೂರು ನೀರಿನ ಸಮಸ್ಯೆ – ಪುನಾ ಪ್ರಸ್ತಾಪಿಸಿದ ದೇವೇಗೌಡರು:
    ರಾಜ್ಯಸಭೆಯಲ್ಲಿ ಮತ್ತೊಮ್ಮೆ ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಗಮನ ಸೆಳೆದರು ಮಾಜಿ ಪ್ರಧಾನಿಗಳು. ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು; ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ 1,400 ಕೋಟಿ ರೂ. ಮಂಜೂರು ಮಾಡಿದ್ದಾರೆ. ಆದರೆ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

    ನದಿ ಜಲ ಸಂಪನ್ಮೂಲ ಸದ್ವಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ತಮ್ಮ ಭಾಷಣದ ಕೊನೆಯಲ್ಲಿ ದೀರ್ಘಾವಧಿಯ ಆರ್ಥಿಕ ಸ್ಥಿರತೆಯತ್ತ ಗಮನ ಹರಿಸುವಂತೆ ಸರಕಾರಕ್ಕೆ ಸಲಹೆ ನೀಡಿದರಲ್ಲದೆ, ನಾವು ಅಲ್ಪಾವಧಿಯ ಜನಪರ ಕ್ರಮಗಳನ್ನು ಮೀರಿ ಮುನ್ನಡೆಯಬೇಕು ಮತ್ತು ಭವಿಷ್ಯದ ಪೀಳಿಗೆಗೆ ಆಸ್ತಿಗಳನ್ನು ನಿರ್ಮಿಸಬೇಕು ಎಂದರು.

    ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಸಣ್ಣ ಅತಿ ಸಣ್ಣ ಕೈಗಾರಿಕೆಗಳಿಗೆ ಬೆಂಬಲ ಹಾಗೂ ಅತ್ಯಂತ ಪ್ರಮುಖವಾದ ನೀರಿನ ಭದ್ರತೆಗೆ ಸರಕಾರದ ಕಡೆಯಿಂದ ತಕ್ಷಣದ ಕ್ರಮಗಳು ಆಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

  • Budget 2025 | ಜ.31 ರಿಂದ ಬಜೆಟ್‌ ಅಧಿವೇಶನ

    Budget 2025 | ಜ.31 ರಿಂದ ಬಜೆಟ್‌ ಅಧಿವೇಶನ

    ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ (Budget Session) ಮೊದಲ ಭಾಗವು ಇದೇ ಜನವರಿ 31 ಮತ್ತು ಫೆಬ್ರವರಿ 13ರ ನಡುವೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಫೆ.1ರಂದು ತಮ್ಮ ದಾಖಲೆಯ 8ನೇ ಬಜೆಟ್‌ ಅನ್ನು ಮಂಡಿಸಲಿದ್ದಾರೆ.

    ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. ಇನ್ನೂ ಬಜೆಟ್‌ ಅಧಿವೇಶನದ 2ನೇ ಭಾಗವು ಮಾರ್ಚ್‌ 10 ರಿಂದ ಏಪ್ರಿಲ್‌ 4ರ ವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 189 ಕ್ಷೇತ್ರಗಳ ಶಾಸಕರಿಗೆ ತಲಾ 10 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ

    ಅಧಿವೇಶನದ ಮೊದಲ ಭಾಗವು ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲಿನ ಚರ್ಚೆಯಿಂದ ಆರಂಭವಾಗಲಿದೆ. ಹಾಗೂ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಧಾನಮಂತ್ರಿ ಅವರ ಉತ್ತರದೊಂದಿಗೆ ಅಧಿವೇಶನ ಕೊನೆಗೊಳ್ಳುತ್ತದೆ. ಇದನ್ನೂ ಓದಿ: ಮುಡಾ ಹಗರಣ – ಇಡಿಯಿಂದ 300 ಕೋಟಿ ಮೌಲ್ಯದ 142 ಸ್ಥಿರ ಆಸ್ತಿ ಜಪ್ತಿ

  • ಇಂದಿನಿಂದ ಸಂಸತ್‌ ಅಧಿವೇಶನ ಆರಂಭ – ನಾಳೆ ಕೇಂದ್ರ ಬಜೆಟ್‌ ಮಂಡನೆ

    ಇಂದಿನಿಂದ ಸಂಸತ್‌ ಅಧಿವೇಶನ ಆರಂಭ – ನಾಳೆ ಕೇಂದ್ರ ಬಜೆಟ್‌ ಮಂಡನೆ

    ನವದೆಹಲಿ: ಆಡಳಿತಾರೂಢ ಎನ್‌ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ (Budget Session) ಇಂದಿನಿಂದ ಆರಂಭವಾಗಲಿದೆ.

    ಇಂದಿನಿಂದ (ಜು.22) ಆ.12ರ ವರೆಗೆ ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಸಮೀಕ್ಷಾ ವರದಿ ಮಂಡಿಸಲಿದ್ದಾರೆ. ನಾಳೆ ತಮ್ಮ ದಾಖಲೆಯ 7ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಓರ್ವ ಯೋಧನಿಗೆ ಗಾಯ

    19 ದಿನಗಳ ಕಾಲ ನಡೆಯಲಿರುವ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ನೀಟ್‌, ನೆಟ್‌ ಪರೀಕ್ಷಾ ಅಕ್ರಮ, ಐಎಎಸ್‌ ಅಧಿಕಾರಿಗಳ ನೇಮಕಾತಿ ವಿವಾದ, ಅಗ್ನಿವೀರ್‌ ಯೋಜನೆ, ಮಣಿಪುರ ಹಿಂಸಾಚಾರ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಇಂಡಿಯಾ ಮೈತ್ರಿಕೂಟ ಸಜ್ಜಾಗಿದೆ.

    ಈ ಅಧಿವೇಶನದಲ್ಲಿ 5 ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಹಣಕಾಸು ಮಸೂದೆ, 2024. ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ, 2024 PRS ಶಾಸನದ ಪ್ರಕಾರ, ವಿಪತ್ತು ನಿರ್ವಹಣೆಯಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಪಾತ್ರಗಳಲ್ಲಿ ಸ್ಪಷ್ಟತೆ ಮತ್ತು ಒಮ್ಮುಖವನ್ನು ತರಲು ಪ್ರಯತ್ನಿಸುತ್ತದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಬೈಡೆನ್‌ ಹೊರಕ್ಕೆ – ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಮಣೆ

    ಭಾರತೀಯ ವಾಯುಯಾನ ವಿಧೇಯಕ- 2024 ಏರ್‌ಕ್ರಾಫ್ಟ್ ಆಕ್ಟ್, 1934 ಅನ್ನು ಬದಲಿಸುತ್ತದೆ. ಅಸ್ಪಷ್ಟತೆಗಳು ಮತ್ತು ಪುನರಾವರ್ತನೆಗಳನ್ನು ಪರಿಹರಿಸಲು, ಉತ್ಪಾದನೆ ಮತ್ತು ವ್ಯವಹಾರವನ್ನು ಸುಲಭಗೊಳಿಸಲು, ಅಂತರರಾಷ್ಟ್ರೀಯ ಸಂಪ್ರದಾಯಗಳ ನಿಬಂಧನೆಗಳನ್ನು ಜಾರಿಗೆ ತರಲು ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಜಾರಿಗೆ ತರಲು ಅನುವು ಮಾಡಿಕೊಡುತ್ತದೆ.

  • 19 ಹೊಸ ಜಿಲ್ಲೆಗಳ ರಚನೆ – 50ಕ್ಕೇರಿದ ರಾಜಸ್ಥಾನ ಜಿಲ್ಲೆಗಳು

    19 ಹೊಸ ಜಿಲ್ಲೆಗಳ ರಚನೆ – 50ಕ್ಕೇರಿದ ರಾಜಸ್ಥಾನ ಜಿಲ್ಲೆಗಳು

    ಜೈಪುರ: ರಾಜಸ್ಥಾನ (Rajasthan) ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಶುಕ್ರವಾರ 19 ಹೊಸ ಜಿಲ್ಲೆಗಳನ್ನು ರಚಿಸಿರುವುದಾಗಿ ಘೋಷಣೆ ಮಾಡಿದ್ದಾರೆ.

    ಶುಕ್ರವಾರ ರಾಜಸ್ಥಾನದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ (Budget Session) ಹೊಸ ಜಿಲ್ಲೆಗಳು ಮತ್ತು ವಿಭಾಗಗಳ ರಚನೆಯನ್ನು ಘೋಷಿಸಿದ್ದಾರೆ. ಇದನ್ನೂ ಓದಿ: 130 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮ – ಮುಸ್ಲಿಮರಿಗೆ ಕಡಿಮೆ ಟಿಕೆಟ್ ಸಾಧ್ಯತೆ

    ಹೊಸ ಜಿಲ್ಲೆಗಳು ಯಾವುವು?
    ಅನೂಪ್‌ಗಢ, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್ ನಗರ, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ, ಕೇಕ್ರಿ, ಕೊಟ್‌ಪುಟ್ಲಿ, ಖೈರ್ತಾಲ್, ನೀಮ್ಕಥಾನ, ಫಲೋಡಿ, ಸಾಲುಂಬರ್, ಸಂಚೋರ್, ಶಹಪುರ (ಭಿಲ್ವಾರ) ಹೊಸ ಜಿಲ್ಲೆಗಳಾಗಿವೆ. ಇದನ್ನೂ ಓದಿ: ನನ್ನ ದೇಹ ಮಾರಿ ಕೋಟಿಗಟ್ಟಲೆ ಸಂಪಾದಿಸಿದ್ರು, ನನಗೆ ನ್ಯಾಯ ಕೊಡಿಸಿ – ಪೊಲೀಸರ ಮೊರೆಹೋದ ಸಂತ್ರಸ್ತೆ

    ಈ ಹೊಸ 19 ಜಿಲ್ಲೆಗಳೊಂದಿಗೆ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಬನ್‌ಸ್ವಾರಾ, ಪಾಕಿ ಹಾಗೂ ಸಿಕಾರ ಮೂರು ಹೊಸ ವಿಭಾಗಗಳನ್ನು ಗುರುತಿಸಲಾಗಿದ್ದು, ರಾಜ್ಯದ ಒಟ್ಟು ವಿಭಾಗಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

  • ಆರೋಗ್ಯ ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಿದ್ದಾರೆ: ಕೋವಿಂದ್

    ಆರೋಗ್ಯ ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಿದ್ದಾರೆ: ಕೋವಿಂದ್

    ನವದೆಹಲಿ: ಕೊರೊನಾ ಕಷ್ಟಕಾಲದಲ್ಲಿ ವೈದ್ಯರು, ನರ್ಸ್, ಮುಂಚೂಣಿ ಕಾರ್ಯಕರ್ತರು ಸೇನಾನಿಗಳ ರೀತಿ ಕೆಲಸ ಮಾಡಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬಜೆಟ್ ಅಧಿವೇಶನಕ್ಕೂ ಮೊದಲು ಸೆಂಟ್ರಲ್ ಹಾಲ್‌ನಲ್ಲಿ ಸಂಸತ್ ಸದಸ್ಯರನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಮಾತನಾಡಿದರು. ಗಡಿಯಲ್ಲಿರುವ ಸೇನಾನಿಗಳಿಗೆ ನಮನ ಸಲ್ಲಿಸಿ ಅಜಾದ್ ಅಮೃತ್ ಮಹೋತ್ಸವ ಹಿನ್ನೆಲೆ ದೇಶದ ಜನತೆಗೆ ಅಭಿನಂದನೆ ತಿಳಿಸುತ್ತ ಭಾಷಣ ಪ್ರಾರಂಭಿಸಿದ ರಾಷ್ಟ್ರಪತಿ ಸರ್ಕಾರ ನೇತಾಜಿ ಜಯಂತಿ ಆಚರಣೆ ಮೂಲಕ ಗಣರಾಜ್ಯೋತ್ಸವ ಪ್ರಾರಂಭಿಸಿದೆ. ನಮ್ಮ ಸರ್ಕಾರ ಸಬ್ ಕಾ ವಿಕಾಸ್ ಸಬ್ ಕಾ ವಿಸ್ವಾಸ್ ರೂಪದ ಕೆಲಸ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಶಿಥಿಲಗೊಂಡ ಕಟ್ಟಡ, ಯಾವಾಗ ಬೇಕಾದರೂ ಬೀಳಬಹುದು: ದಿನೇಶ್ ಶರ್ಮಾ

    ಕೊರೊನಾ ಕಷ್ಟಕಾಲದಲ್ಲಿ ವೈದ್ಯರು, ನರ್ಸ್, ಮುಂಚೂಣಿ ಕಾರ್ಯಕರ್ತರು ಸೇನಾನಿಗಳ ರೀತಿ ಕೆಲಸ ಮಾಡಿದ್ದಾರೆ. ಕೊರೊನಾ ಲಸಿಕೆ ಅಭಿಯಾನದ ಮೂಲಕ ಸಾಮರ್ಥ್ಯ ಗೊತ್ತಾಗಿದೆ. ಕೇವಲ ಒಂದು ವರ್ಷದ ಒಳಗೆ 150 ಕೋಟಿ ಡೋಸ್ ನೀಡಲಾಗಿದೆ. ಶೇ.90ಕ್ಕೂ ಹೆಚ್ಚು ಜನರಿಗೆ ಮೊದಲನೇ ಡೋಸ್ ನೀಡಲಾಗಿದೆ. 8 ವ್ಯಾಕ್ಸಿನ್‌ಗಳಿಗೆ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ಅಭಿವೃದ್ಧಿಯಾದ ಲಸಿಕೆಗಳು ವಿಶ್ವವನ್ನೇ ಕೊರೊನಾದಿಂದ ಬಚಾವ್ ಮಾಡಲು ಸಹಕಾರಿಯಾಗಿದೆ ಎಂದು ದೇಶದ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಇದನ್ನೂ ಓದಿ: ಓಮಿಕ್ರಾನ್‍ಗಿಂತ ಓ ಮಿತ್ರೋನ್ ಹೆಚ್ಚು ಅಪಾಯಕಾರಿ: ಶಶಿ ತರೂರ್

    ಕೇಂದ್ರ ಸರ್ಕಾರ ಅನೇಕ ಆರೋಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಆಯುಷ್ಮಾನ್ ಭಾರತ್ ಯೋಜನೆ ಬಡವರಿಗೆ ಸೌಲಭ್ಯ ಸಿಗುವಂತಿದೆ. ಕೊರೊನಾ ಕಾಲದಲ್ಲಿ ಭಾರತೀಯ ಫಾರ್ಮಾ ಕಂಪನಿಗಳು ತಮ್ಮ ಸಾಮರ್ಥ್ಯ ಸಾಬೀತು ಮಾಡಿವೆ. ಆಯುರ್ವೇದ, ಪಾರಂಪರಿಕ ಚಿಕಿತ್ಸೆ ಬಗ್ಗೆ ತಿಳುವಳಿಕೆ ಹೆಚ್ಚಿದೆ. ಚಿಕಿತ್ಸೆ ಪಡೆಯುವವರ ಸಂಖ್ಯೆಯೂ ಭಾರತದಲ್ಲಿ ಹೆಚ್ಚಿದೆ ಎಂದರು.

    ಕೊರೊನಾದ ಪರಿಸ್ಥಿತಿಯಲ್ಲೂ ಬಡವರನ್ನು ಹಸಿವಿಂದ ದೂರ ಮಾಡಿದೆ. ಬಡಜನರಿಗೆ ಉಚಿತ ಪಡಿತರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ ಇ-ಶ್ರಮ್ ಯೋಜನೆ, ಬಡವರಿಗೆ ನೇರವಾಗಿ ಹಣ ವರ್ಗಾವಣೆಯನ್ನೂ ಮಾಡಲಾಗಿದೆ. ಡಿಜಿಟಲ್ ಇಂಡಿಯಾ ಸಫಲತೆ ಪಡೆದಿದೆ. ಎಂಟು ಲಕ್ಷ ಕೋಟಿ ವಹಿವಾಟು ನಡೆದಿದೆ ಎಂದು ತಿಳಿಸಿದರು.

  • Budget Session: ಜ.31, ಫೆ.1ರಂದು ಸಂಸತ್‌ನ ಎರಡೂ ಸದನಗಳಲ್ಲಿ ಪ್ರಶ್ನೋತ್ತರ, ಶೂನ್ಯ ವೇಳೆ ಇರಲ್ಲ

    Budget Session: ಜ.31, ಫೆ.1ರಂದು ಸಂಸತ್‌ನ ಎರಡೂ ಸದನಗಳಲ್ಲಿ ಪ್ರಶ್ನೋತ್ತರ, ಶೂನ್ಯ ವೇಳೆ ಇರಲ್ಲ

    ನವದೆಹಲಿ: ಜ.31ರಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಮೊದಲೆರಡು ದಿನ ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನ ಕಲಾಪಗಳಲ್ಲಿ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ಅವಧಿ ಇರುವುದಿಲ್ಲ ಎಂದು ಸಂಸತ್‌ ಬುಲೆಟಿನ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

    ಮೊದಲ ದಿನ ಬಜೆಟ್‌ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಭಾಷಣ ಮಾಡಲಿದ್ದಾರೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2022-23ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡು ದಿನಗಳು ಉಭಯ ಸದನಗಳಿಗೆ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ಅವಧಿ ಇರುವುದಿಲ್ಲ ಎಂದು ಬುಲೆಟಿನ್‌ ತಿಳಿಸಿದೆ. ಇದನ್ನೂ ಓದಿ: ಪೆಗಾಸಸ್ ಖರೀದಿಸಿ ಮೋದಿ ಸರ್ಕಾರ ದೇಶದ್ರೋಹ ಮಾಡಿದೆ: ರಾಹುಲ್ ಗಾಂಧಿ

    ಸದಸ್ಯರಿಂದ ಸಾರ್ವಜನಿಕ ತುರ್ತು ಪ್ರಶ್ನೆಗಳು ಇದ್ದಲ್ಲಿ ಅವುಗಳನ್ನು ಫೆ.2ರಂದು ನಡೆಯಲಿರುವ ಕಲಾಪಕ್ಕೆ ಪರಿಗಣಿಸಲಾಗುತ್ತದೆ. ಈ ಸಂಬಂಧ ಫೆ.1ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯೊಳಗೆ ಆನ್‌ಲೈನ್‌ ಇ-ಪೋರ್ಟಲ್‌ ಅಥವಾ ನೇರವಾಗಿ ಸಂಸತ್‌ ನೋಟಿಸ್‌ ಕಚೇರಿಗೆ ತಿಳಿಸಬೇಕೆಂದು ಸೂಚಿಸಲಾಗಿದೆ.

    ಸಂಸತ್‌ ನಿಯಮದ ಪ್ರಕಾರ, ಲೋಕಸಭೆ ಅಧಿವೇಶನದಲ್ಲಿ ಪ್ರತಿದಿನ 60 ನಿಮಿಷ ಪ್ರಶ್ನಾವಳಿ ಹಾಗೂ ಶೂನ್ಯ ಅವಧಿ ಇರುತ್ತದೆ. ರಾಜ್ಯಸಭೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಶೂನ್ಯ ವೇಳೆ ಆರಂಭವಾದರೆ ಮಧ್ಯಾಹ್ನಕ್ಕೆ ಪ್ರಶ್ನೋತ್ತರ ಸಮಯ ಇರುತ್ತದೆ. ಇದನ್ನೂ ಓದಿ: ಮತ ಎಣಿಕೆಯವರೆಗೆ ಮಾತ್ರ ಸಮಾಜವಾದಿ, ರಾಷ್ಟ್ರೀಯ ಲೋಕದಳದ ಮೈತ್ರಿ: ಅಮಿತ್ ಶಾ

  • ಬಜೆಟ್‌ ಅಧಿವೇಶನಕ್ಕೂ ಮುನ್ನ ಪಾರ್ಲಿಮೆಂಟ್‌ನ 402 ಸಿಬ್ಬಂದಿಗೆ ಕೊರೊನಾ ಪಾಸಿಟಿವ್‌

    ಬಜೆಟ್‌ ಅಧಿವೇಶನಕ್ಕೂ ಮುನ್ನ ಪಾರ್ಲಿಮೆಂಟ್‌ನ 402 ಸಿಬ್ಬಂದಿಗೆ ಕೊರೊನಾ ಪಾಸಿಟಿವ್‌

    ನವದೆಹಲಿ: ಬಜೆಟ್‌ ಅಧಿವೇಶನಕ್ಕೂ ಮುನ್ನ ಮುಂಜಾಗ್ರತಾ ಕ್ರಮವಾಗಿ ನಡೆಸಿದ ಕೋವಿಡ್‌ ಪರೀಕ್ಷೆಯಲ್ಲಿ ಸಂಸತ್‌ನ 402 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಸಂಸತ್‌ನಲ್ಲಿ ಒಟ್ಟು 1409 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಒಟ್ಟು ಸಿಬ್ಬಂದಿ ಪೈಕಿ 409 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇವರಿಗೆ ಓಮಿಕ್ರಾನ್‌ ತಗುಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಲು ಮಾದರಿಗಳನ್ನು ಜಿನೋಮ್‌ ಸೀಕ್ವಿನ್ಸಿಂಗ್‌ಗೆ ಕಳುಹಿಸಲಾಗಿದೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್

    ಸೋಂಕಿತ ಸಿಬ್ಬಂದಿಯಲ್ಲಿ 200 ಮಂದಿ ಲೋಕಸಭಾ, 69 ಮಂದಿ ರಾಜ್ಯಸಭಾ ಹಾಗೂ 133 ಮಂದಿ ಪಾರ್ಲಿಮೆಂಟ್‌ನ ಇತರೆ ಸಿಬ್ಬಂದಿಯಾಗಿದ್ದಾರೆ. ಎಲ್ಲರನ್ನೂ ಐಸೊಲೇಟ್‌ ಮಾಡಿ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ.

    CORONA-VIRUS.

    ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶೇ.50 ಸಿಬ್ಬಂದಿ ಸಾಮರ್ಥ್ಯದ ಅಡಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುವ ಕ್ರಮವಹಿಸಬೇಕು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಈಗಾಗಲೇ ನಿರ್ದೇಶನ ನೀಡಿದೆ. ಹೊಸ ರೂಪಾಂತರಿ ಓಮಿಕ್ರಾನ್‌ ತಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಸಿಬ್ಬಂದಿ ಹಾಜರಾತಿಗೆ ಇದ್ದ ಬಯೋಮೆಟ್ರಿಕ್‌ನಿಂದ ವಿನಾಯಿತಿ ನೀಡಿದೆ. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ: ಆನಂದ್ ಸಿಂಗ್

  • ಕ್ಷಮೆ ಕೇಳದಿದ್ರೆ ಪ್ರತಿಭಟನೆಯ ಅಧಿವೇಶನ ಮಾಡಲು ‘ಕೈ’ ತೀರ್ಮಾನ

    ಕ್ಷಮೆ ಕೇಳದಿದ್ರೆ ಪ್ರತಿಭಟನೆಯ ಅಧಿವೇಶನ ಮಾಡಲು ‘ಕೈ’ ತೀರ್ಮಾನ

    ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದೆ. ಆದರೆ ವಿಪಕ್ಷ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಬಿಜೆಪಿ ಶಾಸಕ ಯತ್ನಾಳ್ ಸದನದಲ್ಲಿಯೇ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದು ಕುಳಿತಿತ್ತು. ಈ ಮೂಲಕ ಯಾವ ಕಾರಣಕ್ಕೂ ಯತ್ನಾಳ್ ಕ್ಷಮೆ ಕೇಳದೇ ಸದನ ನಡೆಯಲು ಬಿಡಲ್ಲ ಎಂದು ಕಾಂಗ್ರೆಸ್ ಪಟ್ಟು ಹಿಡಿದಿತ್ತು.

    ಹೀಗಾಗಿ ಇಂದಿನ ಬಜೆಟ್ ಅಧಿವೇಶನ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಸೈದ್ಧಾಂತಿಕ ಹೋರಾಟಕ್ಕೆ ವೇದಿಕೆಯಾಗುವಂತಾಗಿದೆ. ಯತ್ನಾಳ್ ಕ್ಷಮೆ ಕೇಳ್ತಾರಾ ಕಾಂಗ್ರೆಸ್ ಪಟ್ಟು ಬಿಡುತ್ತಾ..? ಗೊತ್ತಿಲ್ಲ. ಆದರೆ ದೊರೆಸ್ವಾಮಿ ಹಾಗೂ ಯತ್ನಾಳ್ ನಡುವಿನ ಜಟಾಪಟಿ ಸದನದಲ್ಲಿ ಪ್ರತಿಧ್ವಿನಿಸುತ್ತಿದೆ.

    ವಿಪಕ್ಷ ಕಾಂಗ್ರೆಸ್ ಮಾತ್ರ ಯಾವ ಕಾರಣಕ್ಕೂ ಶಾಸಕ ಯತ್ನಾಳ್ ಕ್ಷಮೆ ಕೇಳದ ಹೊರತು ಸದನದಲ್ಲಿನ ತಮ್ಮ ಪ್ರತಿಭಟನೆ ವಾಪಸ್ ಪಡೆಯಲ್ಲ ಎಂದು ಪಟ್ಟು ಹಿಡಿದಿದೆ. ಯತ್ನಾಳ್ ಕ್ಷಮೆ ಕೇಳದಿದ್ದರೆ ಇಡೀ ಬಜೆಟ್ ಅಧಿವೇಶನವೇ ಪ್ರತಿಭಟನೆಯ ಅಧಿವೇಶನವಾಗಿಸಲು ಕಾಂಗ್ರೆಸ್ ನಿರ್ಧರಿಸಿದೆ.

    ಯತ್ನಾಳ್ ಹೇಳಿದ್ದೇನು?
    ಸ್ವಾತಂತ್ರ್ಯ ಹೋರಾಟದಲ್ಲಿ ಸಿದ್ದರಾಮಯ್ಯ ಇದ್ರಾ? ಇಲ್ಲಾ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಇದ್ರಾ ಎಂದು ವಿಜಯಪುರದಲ್ಲಿ ಯತ್ನಾಳ್ ಪ್ರಶ್ನಿಸಿದ್ದರು. ಎಲ್ಲರೂ ಹೋರಾಟ ಮಾಡಿದ್ದಾರೆ. ವಾಜಪೇಯಿಯವರು ಮಾಡಿದ್ದಾರೆ ಆದರೆ ಸಿದ್ಧಾಂತ ಬೇರೆ ಇದ್ದವು. ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ. ಎಲ್ಲಿದ್ದಾನೆ ಆ ಮುತ್ಯಾ ಈಗ, ದೊರೆಸ್ವಾಮಿ ಪಾಕಿಸ್ತಾನ ಏಜೆಂಟ್ ಪಾಕಿಸ್ತಾನ ಏಜೆಂಟ್ರಂತೆ ದೊರೆಸ್ವಾಮಿ ಮಾತಾಡ್ತಿದ್ದಾನೆ ಎಂದು ಮಾತಿನ ಚಾಟಿ ಬೀಸಿದ್ದರು.