Tag: Bulandshahr

  • Uttar Pradesh | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ – ಐವರು ಸಜೀವ ದಹನ

    Uttar Pradesh | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ – ಐವರು ಸಜೀವ ದಹನ

    – ಮದುವೆ ಮುಗಿಸಿ ಬರುತ್ತಿದ್ದ ವೇಳೆ ಘಟನೆ

    ಲಕ್ನೋ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮದುವೆ ಮುಗಿಸಿ ಬರುತ್ತಿದ್ದ ಐವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್‌ (Bulandshahr) ಜಿಲ್ಲೆಯಲ್ಲಿ ನಡೆದಿದೆ.

    ಬದೌನ್‌ನಲ್ಲಿ ನಡೆದ ಮದುವೆ ಮುಗಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಹಿನ್ನೆಲೆ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕಾರು ಲಾಕ್ ಆದ ಕಾರಣ ಹೊರಗೆ ಬರಲಾರದೇ ಐವರು ಸಜೀವ ದಹನವಾಗಿದ್ದಾರೆ. ಇದನ್ನೂ ಓದಿ: `ಥಗ್‌ಲೈಫ್’ ರಿಲೀಸ್‌ಗೆ ಸುಪ್ರೀಂ ಗ್ರೀನ್ ಸಿಗ್ನಲ್ – ಕನ್ನಡ ಪರ ಸಂಘಟನೆಯ ಪ್ರಮುಖರಿಗೆ ಪೊಲೀಸರಿಂದ ನೋಟಿಸ್

    ಮುಂಜಾನೆ 5:50ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೈಕ್‌ಗೆ ಕ್ಯಾಂಟರ್ ಡಿಕ್ಕಿ – ಕೆಲಸಕ್ಕೆ ತೆರಳುತ್ತಿದ್ದ ಸ್ನೇಹಿತರು ಬೈಕ್ ಅಪಘಾತದಲ್ಲಿ ದುರ್ಮರಣ

  • ಕಾಲುವೆಗೆ ಉರುಳಿದ ಕಾರು – ಮೂವರು ಸಾವು, ಮೂವರು ನಾಪತ್ತೆ

    ಕಾಲುವೆಗೆ ಉರುಳಿದ ಕಾರು – ಮೂವರು ಸಾವು, ಮೂವರು ನಾಪತ್ತೆ

    – ಮೃತ ಕುಟುಂಬಕ್ಕೆ 4 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದ ಯುಪಿ ಸಿಎಂ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್ (Bulandshahr) ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಕಾರು ಕಾಲುವೆಗೆ (Canal) ಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿಯ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ.

    ಜಹಾಂಗೀರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ (Car) ಐವರನ್ನು ಕಾಲುವೆಯಿಂದ ಮೇಲೆತ್ತಲಾಗಿದೆ. ಅದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಸೋಶಿಯಲ್ ‌ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ

    ಘಟನೆಯಲ್ಲಿ ಮೃತಪಟ್ಟ ಮೂವರು 18-22 ವರ್ಷದೊಳಗಿನವರಾಗಿದ್ದು, ಒಡಹುಟ್ಟಿದವರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಐದು ವರ್ಷದ ಮಗು ಹಾಗೂ ಇಬ್ಬರು ಪುರುಷರು ನಾಪತ್ತೆಯಾಗಿದ್ದಾರೆ. ಸದ್ಯ ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಮಸೀದಿ ಬಳಿಯಿರುವ ಭಗವಾಧ್ವಜ ತೆರವುಗೊಳಿಸಲು ಪ್ಲ್ಯಾನ್ ಆರೋಪ; ಮಾಜಿ ಶಾಸಕನ ವಿರುದ್ಧ ಕೇಸ್

    ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಕೋ ಕಾರಿನಲ್ಲಿ ಒಟ್ಟು ಮಂದಿ ಅಲಿಗಢ್ ಪಿಸಾವಾಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿ ಕಾಲುವೆಗೆ ಉರುಳಿ ದುರಂತ ಸಂಭವಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನಲ್ಲಿ ವಿಶೇಷ ಟೀಂನಿಂದ 1,000 ಕ್ಕೂ ಅಧಿಕ ಸಿಸಿಟಿವಿ ಪರಿಶೀಲನೆ

    ಈ ಕುರಿತು ಪ್ರತಿಕ್ರಿಯಿಸಿರುವ ಬುಲಂದ್‌ಶಹರ್ ಎಸ್‌ಎಸ್‌ಪಿ ಶ್ಲೋಕ್ ಕುಮಾರ್, ಕಾರು ಜಹಾಂಗೀರ್‌ಪುರ ಪೊಲೀಸ್ ಠಾಣೆಯ ಕಪ್ನಾ ಕಾಲುವೆಗೆ ಬಿದ್ದಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎನ್‌ಡಿಆರ್‌ಎಫ್ ತಂಡ ಸೇರಿದಂತೆ ಎಲ್ಲಾ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಇತಿಹಾಸ ಪ್ರಸಿದ್ಧ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಭಂಡಾರಮನೆ ಧ್ವಂಸ

    ಘಟನೆಯ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತ ಕುಟುಂಬಗಳಿಗೆ 4 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ.  ಇದನ್ನೂ ಓದಿ: ಹಣಕ್ಕಾಗಿ ತಾಯಿಯನ್ನು ಹತ್ಯೆಗೈದು ನೇಣಿಗೆ ಶರಣಾದ ಮಗ

  • ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮರಕ್ಕೆ ಕಟ್ಟಿ ಹಾಕಿ ಮುಸ್ಲಿಂ ವ್ಯಕ್ತಿಗೆ ಥಳಿತ

    ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮರಕ್ಕೆ ಕಟ್ಟಿ ಹಾಕಿ ಮುಸ್ಲಿಂ ವ್ಯಕ್ತಿಗೆ ಥಳಿತ

    ಲಕ್ನೋ: ವ್ಯಕ್ತಿಯೊಬ್ಬನ ತಲೆ ಬೋಳಿಸಿ ಮರಕ್ಕೆ ಕಟ್ಟಿ ಹಾಕಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಥಳಿಸಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ಬುಲಂದ್‍ಶಹರ್‌ನಲ್ಲಿ (Bulandshahr) ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಹಲ್ಲೆಗೊಳಗಾದ ಸಂತ್ರಸ್ತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳನ್ನು ಗಜೇಂದ್ರ, ಸೌರಭ್ ಮತ್ತು ಧನ್ನಿ ಎಂದು ಗುರುತಿಸಲಾಗಿದೆ. ಇದರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಕಳ್ಳತನದ ಶಂಕೆಯಲ್ಲಿ ಮುಸ್ಲಿಂ (Muslim) ಕಾರ್ಮಿಕನನ್ನು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅಲ್ಲದೇ ಇದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸಂತ್ರಸ್ತನನ್ನು ಸಾಹಿಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಗಾಗಿ ಮಹಿಂದ್ರಾ ಗ್ರೂಪ್‍ನಿಂದ ನೂತನ ಶಸ್ತ್ರಸಜ್ಜಿತ ವಾಹನ ನಿರ್ಮಾಣ

    ಅಲ್ಲದೇ ಘಟನೆಯ ನಂತರ ಸಾಹಿಲ್‍ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ರಾಜಿ ಮಾಡಿಕೊಳ್ಳುವಂತೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆತನ ತಂದೆ ಶಕೀಲ್ ಆರೋಪಿಸಿದ್ದಾರೆ.

    ಉತ್ತರ ಪ್ರದೇಶದ (Uttar Pradesh) ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಸಾಹಿಲ್‍ನನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೀನು ಹಿಡಿಯಲು ತೆರಳಿದ್ದ ಮೂವರು ಬಾಲಕರು ನೀರುಪಾಲು

  • ನೇಣು ಬಿಗಿದ ಸ್ಥಿತಿಯಲ್ಲಿ ಎಸ್‍ಐ ಶವ ಪತ್ತೆ

    ನೇಣು ಬಿಗಿದ ಸ್ಥಿತಿಯಲ್ಲಿ ಎಸ್‍ಐ ಶವ ಪತ್ತೆ

    – ಎಸ್‍ಐ ಮನೆಯಲ್ಲಿ ಡೆತ್ ನೋಟ್

    ಲಕ್ನೋ: ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ 30 ವರ್ಷ ಮಹಿಳಾ ಸಬ್ ಇನ್‍ಸ್ಪೆಕ್ಟರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಆರ್ಜೂ ಪವಾರ್ (30) ಮೃತ ಎಸ್‍ಎಸ್‍ಪಿ. ಆರ್ಜೂ ಶಾಮಿಲಿ ಜಿಲ್ಲೆಯವರಾಗಿದ್ದು, 2015ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಯಾಗಿದ್ದರು. ಅನೂಪ್ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪೊಲೀಸರು ಮನೆ ಬಾಗಿಲು ಒಡೆದು ಶವವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಆರ್ಜೂ ಅವರ ಮನೆಯಲ್ಲಿ ಡೆತ್ ನೋಟ್ ಸಹ ಲಭ್ಯವಾಗಿದೆ. ಪತ್ರದಲ್ಲಿ ಏನಿದೆ ಎಂಬುದನ್ನ ಪೊಲೀಸರು ಬಹಿರಂಗಪಡಿಸಿಲ್ಲ.

    ಇಂದು ಬೆಳಗ್ಗೆ ಮನೆಯ ಒಡತಿ ಆರ್ಜೂ ಅವರ ಶವ ಫ್ಯಾನ್ ನಲ್ಲಿ ನೇತಾಡುತ್ತಿರೋದನ್ನ ನೋಡಿದ್ದಾರೆ. ಕೂಡಲೇ ಸ್ಥಳೀಯ ಪೊಲೀಸ್ ಠಾಣೆ ಮತ್ತು ಆರ್ಜೂ ಸ್ನೇಹಿತರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

  • ಬಿಜೆಪಿ ಶಾಲ್ ಹಾಕಿಕೊಂಡು ಮತಗಟ್ಟೆಗೆ ಬಂದ ಸಂಸದರಿಗೆ ಗೃಹ ಬಂಧನ

    ಬಿಜೆಪಿ ಶಾಲ್ ಹಾಕಿಕೊಂಡು ಮತಗಟ್ಟೆಗೆ ಬಂದ ಸಂಸದರಿಗೆ ಗೃಹ ಬಂಧನ

    ಲಕ್ನೋ: ಬಿಜೆಪಿ ಚಿಹ್ನೆಯ ಶಾಲ್ ಹಾಕಿಕೊಂಡು ಮತಗಟ್ಟೆಗೆ ಆಗಮಿಸಿದ್ದ ಅಭ್ಯರ್ಥಿ, ಹಾಲಿ ಸಂಸದರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಗೃಹಬಂಧನಲ್ಲಿ ಇರಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಬುಲಂದ್‍ಶಹರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಹಾಲಿ ಸಂಸದ ಭೋಲಾ ಸಿಂಗ್ ಅವರು ಬಿಜೆಪಿ ಚಿಹ್ನೆ ಇರುವ ಕೇಸರಿ ಶಾಲ್ ಹಾಕಿಕೊಂಡು ಮತ ಚಲಾಯಿಸಲು ಮತಗಟ್ಟೆಗೆ ಆಗಮಿಸಿದ್ದರು. ಪಕ್ಷದ ಚಿಹ್ನೆಯೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿರುವುದು ನೀತಿಸಂಹಿತೆ ಉಲ್ಲಂಘನೆಯಾಗಿತ್ತು. ಇದರಿಂದಾಗಿ ಚುನಾವಣಾ ಅಧಿಕಾರಿಗಳು ಕೆಲ ಹೊತ್ತು ಗೃಹ ಬಂಧನದಲ್ಲಿ ಇರುವಂತೆ ಸಂಸದರಿಗೆ ಆದೇಶಿಸಿದರು.

    ಮತಗಟ್ಟೆಯಲ್ಲಿದ್ದ ಭದ್ರತಾ ಸಿಬ್ಬಂದಿ ಸಂಸದರನ್ನು ಕೆಲ ಹೊತ್ತು ಗೃಹ ಬಂಧನದಲ್ಲಿ ಇರಿಸಿದರು. ಸ್ಥಳದಲ್ಲಿದ್ದ ಕೆಲವರು ಈ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಭೋಲಾ ಸಿಂಗ್ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಬಿಎಸ್‍ಪಿಯ ಪ್ರದೀಪ್ ಕುಮಾರ್ ಜಾದವ್ ಅವರ ವಿರುದ್ಧ 4,21,973 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. ಈ ಬಾರಿ ಭೋಲಾ ಸಿಂಗ್ ಕಾಂಗ್ರೆಸ್ ಅಭ್ಯರ್ಥಿ ಬನ್ಸಿ ಲಾಲ್ ಪಹಾಡಿಯ ಮತ್ತು ಎಸ್‍ಪಿ – ಬಿಎಸ್‍ಪಿ ಮೈತ್ರಿ ಅಭ್ಯರ್ಥಿ ಯೋಗೇಶ್ ವರ್ಮ ಅವರ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

  • ಮದ್ವೆಯಾದ ಹತ್ತೇ ದಿನಕ್ಕೆ ಪತ್ನಿಗೆ ಗುಂಡಿಟ್ಟು, 100ಗೆ ಕಾಲ್ ಮಾಡ್ದ!

    ಮದ್ವೆಯಾದ ಹತ್ತೇ ದಿನಕ್ಕೆ ಪತ್ನಿಗೆ ಗುಂಡಿಟ್ಟು, 100ಗೆ ಕಾಲ್ ಮಾಡ್ದ!

    ಲಕ್ನೋ: ಹತ್ತು ದಿನಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿಯೊಬ್ಬ ವರದಕ್ಷಿಣೆಗಾಗಿ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ದಾರುಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಪಿಂಕಿ ಗಂಡನಿಂದಲೇ ಕೊಲೆಯಾದ ಪತ್ನಿ. ಆರೋಪಿ ಪತಿ ರವಿಕಾಂತ್ ಗಿರಿ ಉತ್ತರಪ್ರದೇಶದ ದಕ್ಷಿಣ ಭಾಗದ ಬುಲಂದಷಹಾರ್ ನಗರದ ವ್ಯಾಪಾರಿಯಾಗಿದ್ದಾನೆ. ಮದುವೆ ಬಳಿಕ ಪತ್ನಿಗೆ ತವರು ಮನೆಯಿಂದ 15 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದನು. ಹೀಗಾಗಿ ಆತನೇ ನಮ್ಮ ಮಗಳನ್ನು ಕೊಲೆ ಮಾಡಿದ್ದಾನೆ ಅಂತಾ ಪಿಂಕಿ ಪೋಷಕರು ಆರೋಪಿಸಿದ್ದಾರೆ.

    ಕೊಲೆಗೈದು 100ಗೆ ಕಾಲ್ ಮಾಡಿದ್ದ: ತಡರಾತ್ರಿ ದೇವಸ್ಥಾನದಿಂದ ಹಿಂದಿರುಗುವಾಗ ದರೋಡೆಕೋರರು ನಮ್ಮ ಕಾರ್ ಅಡ್ಡಗಟ್ಟಿದ್ರು. ಆದ್ರೆ ಪತ್ನಿ ದರೋಡೆಕೋರರ ವಿರುದ್ಧ ವಾಗ್ವಾದಕ್ಕೆ ಇಳಿದಿದ್ದಳು. ಇದ್ರಿಂದ ಕೋಪಗೊಂಡ ದರೋಡೆಕೋರರು ಪತ್ನಿಗೆ ಗುಂಡಿಟ್ಟು ಕೊಲೆಗೈದು ಪರಾರಿಯಾದ್ರು. ನಂತರ ನಾನು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆ ಅಂತಾ ರವಿಕಾಂತ್ ಕುಟುಂಬಸ್ಥರ ಮುಂದೆ ಹೇಳಿದ್ದನು.

    ಘಟನೆ ಸಂಬಂಧ ಪೊಲೀಸರು ಪತಿಯನ್ನು ವಶಪಡಿಸಿಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯಲ್ಲಿ ಪತಿ ತಾನೇ ಪತ್ನಿಯನ್ನು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಅಂತಾ ಬುಲಂದಷಹಾರ್ ಠಾಣೆಯ ಪೊಲೀಸ್ ಅಧಿಕಾರಿ ಪ್ರವೀಣ್ ರಂಜನ್ ಸಿಂಗ್ ಹೇಳಿದ್ದಾರೆ.

    ಮೃತ ಪಿಂಕಿ ಮೂಲತಃ ದೆಹಲಿಯವರು. ಪಿಂಕಿ ಮದುವೆಗಾಗಿ ಆಕೆಯ ಕುಟುಂಬ 20 ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಮದುವೆಯಾದ ಎರಡು ದಿನಗಳ ನಂತರ ಆರೋಪಿ ರವಿಕಾಂತ್ 15 ಲಕ್ಷ ರೂಪಾಯಿ ವರದಕ್ಷಿಣೆ ನೀಡುವಂತೆ ಒತ್ತಾಯಿಸುತ್ತಿದ್ದನು. ಈ ವಿಚಾರಕ್ಕೆ ಆಕೆಯನ್ನು ಕೊಲೆಗೈದಿದ್ದಾನೆ ಎಂಬುದಾಗಿ ವರದಿಯಾಗಿದೆ.