Tag: Bulldozer

  • ವರದಕ್ಷಿಣೆಗಾಗಿ ಸೊಸೆಯನ್ನು ಹೊರಹಾಕಿದವರ ಮನೆ ಮುಂದೆ ಘರ್ಜಿಸಿತು ಬುಲ್ಡೋಜರ್‌ – ಮುಂದೇನಾಯ್ತು?

    ವರದಕ್ಷಿಣೆಗಾಗಿ ಸೊಸೆಯನ್ನು ಹೊರಹಾಕಿದವರ ಮನೆ ಮುಂದೆ ಘರ್ಜಿಸಿತು ಬುಲ್ಡೋಜರ್‌ – ಮುಂದೇನಾಯ್ತು?

    ಲಕ್ನೋ: ಹಿಂಸಾಚಾರದ ಆರೋಪಿಗಳ ವಿರುದ್ಧ ʼಬುಲ್ಡೋಜರ್‌ ಕಾರ್ಯಾಚರಣೆʼ ನಡೆಸುತ್ತೇವೆಂದು ಹೇಳಿ ಅಮಾಯಕರ ಮನೆಗಳನ್ನೂ ಧ್ವಂಸ ಮಾಡಲಾಗುತ್ತಿದೆ ಎಂಬ ವಿವಾದಕ್ಕೆ ಉತ್ತರ ಪ್ರದೇಶ ಸರ್ಕಾರ ಸಿಲುಕಿತ್ತು. ಆದರೆ ಈ ಯೋಜನೆಯನ್ನು ಪೊಲೀಸರು ಸಕಾರಾತ್ಮಕ ಕಾರ್ಯಗಳಿಗೆ ಬಳಿಸಿಕೊಂಡಿದ್ದಾರೆ.

    ಹೌದು, ವರದಕ್ಷಿಣೆಗಾಗಿ ಪತಿ ಮನೆಯಿಂದ ಹೊರಹಾಕಲ್ಪಟ್ಟ ಮಹಿಳೆಗೆ ಸಹಾಯ ಮಾಡಲು ಪೊಲೀಸರು ಮೊದಲ ಬಾರಿಗೆ ʼಬುಲ್ಡೋಜರ್‌ ಆಪರೇಷನ್‌ʼ ಪ್ಲ್ಯಾನ್‌ ಬಳಸಿಕೊಂಡಿದ್ದಾರೆ. ಸಂತ್ರಸ್ತೆ ತನ್ನ ಗಂಡನ ಮನೆಗೆ ಮರಳಲು ಸಹಾಯ ಮಾಡುವಂತೆ ಅಲಹಾಬಾದ್‌ ಹೈಕೋರ್ಟ್‌ ಆದೇಶಿಸಿದ ನಂತರ ಬಿಜ್ನೋರ್‌ ಜಿಲ್ಲೆಯ ಮನೆಯ ಮುಂದೆ ಬುಲ್ಡೋಜರ್‌ ಘರ್ಜಿಸಿದೆ. ಇದನ್ನೂ ಓದಿ: ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಮಹಿಳೆ ನೂತನಾ ಮಲಿಕ್‌ ಪತಿ ರಾಬಿನ್‌ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಕುಟುಂಬದವರಿಗೆ ನ್ಯಾಯಾಲಯದ ಆದೇಶದ ಕುರಿತು ಮನವರಿಕೆ ಮಾಡಿದ್ದಾರೆ. ಆದೇಶ ಪಾಲಿಸದಿದ್ದರೆ ಬುಲ್ಡೋಜರ್‌ ಆಪರೇಷನ್‌ ಮಾಡುವ ಎಚ್ಚರಿಕೆ ಕೂಡ ನೀಡಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಹೊರಗಡೆ ಬುಲ್ಡೋಜರ್‌ ಇರುವ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ ನಿಧನ

    ಮಹಿಳೆಯ ಗಂಡನ ಮನೆಯವರು ಬಾಗಿಲು ಹಾಕಿಕೊಂಡಿದ್ದರು. ʻನಾವು ನಿಮ್ಮನ್ನು ವಿನಂತಿಸುತ್ತೇವೆ ಅಮ್ಮಾ.. ದಯವಿಟ್ಟು ಬಾಗಿಲು ತೆರೆಯಿರಿ. ಇದು ಹೈಕೋರ್ಟ್‌ನ ಆದೇಶʼ ಎಂದು ಅಧಿಕಾರಿಯೊಬ್ಬರು ಧ್ವನಿವರ್ಧಕದಲ್ಲಿ ಹೇಳುತ್ತಿರುವ ದೃಶ್ಯ ವೀಡಿಯೋದಲ್ಲಿದೆ.

    Allahabad high court

    ಪೊಲೀಸ್ ತಂಡವು ಮಹಿಳೆ ತನ್ನ ಅತ್ತೆಯ ಮನೆಗೆ ಮರಳಲು ಸಹಾಯ ಮಾಡಿದೆ. ಈಗ ಪರಿಸ್ಥಿತಿ ತಿಳಿಗೊಂಡಿದೆ ಎಂದು ಬಿಜ್ನೋರ್ ಪೊಲೀಸ್ ಅಧೀಕ್ಷಕ (ನಗರ) ಪ್ರವೀಣ್ ರಂಜನ್ ಸಿಂಗ್ ಹೇಳಿದ್ದಾರೆ.

    2017ರಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಗಂಡನ ಮನೆಯವರು ಕಿರುಕುಳ ನೀಡಲಾರಂಭಿಸಿದರು. 5 ಲಕ್ಷ ಹಾಗೂ ಬೊಲೆರೊ ಕಾರಿಗೆ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆ ಈಡೇರಿಸದ ನನ್ನ ಮಗಳನ್ನು ಥಳಿಸಿ ಮನೆಯಿಂದ ಹೊರಹಾಕಿದ್ದರು. 2019ರಿಂದ ಮಗಳು ನಮ್ಮೊಂದಿಗೆ ವಾಸವಾಗಿದ್ದಳು ಎಂದು ಮಹಿಳೆಯ ತಂದೆ ಆರೋಪಿಸಿದ್ದರು.

    ನಿನ್ನೆ ಪೊಲೀಸರು ಅಲ್ಲಿಗೆ ಹೋದಾಗಲೂ ಮನೆಯವರು ಒಂದು ಗಂಟೆಯವರೆಗೂ ಬಾಗಿಲು ತೆರೆಯಲಿಲ್ಲ. ನಂತರ ಪೊಲೀಸರು ಸ್ಥಳಕ್ಕೆ ಬುಲ್ಡೋಜರ್ ತಂದರು. ಆಗ ನನ್ನ ಮಗಳನ್ನು ಮನೆಗೆ ಸೇರಿಸಿಕೊಂಡರು ಎಂದು ಆಕೆ ತಂದೆ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುಪಿಯಲ್ಲಿ ಮತ್ತೆ ಜೆಸಿಬಿ ಘರ್ಜನೆ – ಬಿಜೆಪಿ ನಾಯಕನ ಅಕ್ರಮ ಕಟ್ಟಡ ನೆಲಸಮ

    ಯುಪಿಯಲ್ಲಿ ಮತ್ತೆ ಜೆಸಿಬಿ ಘರ್ಜನೆ – ಬಿಜೆಪಿ ನಾಯಕನ ಅಕ್ರಮ ಕಟ್ಟಡ ನೆಲಸಮ

    ಲಕ್ನೋ: ನೊಯ್ಡಾದ ಸೆಕ್ಟರ್-93 ಬಿ ಯಲ್ಲಿನ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿ ಮಹಿಳೆಯೊಬ್ಬರನ್ನು ನಿಂದನೆ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಅವರ ಮನೆಯ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.

    ಪೊಲೀಸ್ ಸಿಬ್ಬಂದಿಯೊಂದಿಗೆ ನೋಯ್ಡಾದ ಸೆಕ್ಟರ್ -93ಬಿನಲ್ಲಿರುವ ಗ್ರಾಂಡ್ ಓಮ್ಯಾಕ್ಸ್ ಸೊಸೈಟಿಗೆ ತಲುಪಿದ ಅಧಿಕಾರಿಗಳು, ನಂತರ ಬಿಜೆಪಿಯ ಕಿಸಾನ್ ಮೋರ್ಚಾದ ಆಪಾದಿತ ಸದಸ್ಯ ಶ್ರೀಕಾಂತ್ ತ್ಯಾಗಿ ಅವರಿಗೆ ಸೇರಿದ್ದ ಅಕ್ರಮ ಕಟ್ಟಡವನ್ನು ಕೆಡವಿದ್ದಾರೆ. ಇದನ್ನೂ ಓದಿ: 500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ

    ಇತ್ತೀಚೆಗಷ್ಟೇ ಶ್ರೀಕಾಂತ್ ತ್ಯಾಗಿ ಅವರು ಕೆಲವು ಮರಗಳನ್ನು ನೆಡುವುದನ್ನು ಮಹಿಳೆ ಆಕ್ಷೇಪಿಸಿದ್ದರು. ಈ ವೇಳೆ ಮಹಿಳೆ ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿದ್ದಾರೆ. ಈ ಮಧ್ಯೆ, ತ್ಯಾಗಿ ತನ್ನ ಶಾಂತತೆಯನ್ನು ಕಳೆದುಕೊಂಡರು ಮತ್ತು ಅವಳ ಮೇಲೆ ನಿಂದನೆಯನ್ನು ಪ್ರಾರಂಭಿಸಿದರು. ಮಾತ್ರವಲ್ಲದೇ ಅವರು ಮಹಿಳೆಯನ್ನು ದೌರ್ಜನ್ಯವೆಸಗಿದ್ದರು.

    ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋದಲ್ಲಿ ಶ್ರೀಕಾಂತ್ ತ್ಯಾಗಿ ಮಹಿಳೆಯನ್ನು ನಿಂದಿಸುವುದು ಮತ್ತು ಮಹಿಳೆಯನ್ನು ತಳ್ಳುವುದನ್ನು ನೋಡಬಹುದಾಗಿದೆ. ತ್ಯಾಗಿ ಆಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರು. ಘಟನೆಯ ನಂತರ ಶ್ರೀಕಾಂತ್ ತ್ಯಾಗಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ಚುಡಾಯಿಸಿದ ವಿದ್ಯಾರ್ಥಿ – ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಮಾರಾಮಾರಿ

    ಶ್ರೀಕಾಂತ್ ತ್ಯಾಗಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354(ಯಾವುದೇ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲದ ಬಳಕೆ, ಆಕ್ರೋಶ ವ್ಯಕ್ತಪಡಿಸುವ ಉದ್ದೇಶದಿಂದ ಅಥವಾ ಆ ಮೂಲಕ ಆಕೆಯ ನಮ್ರತೆಗೆ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ) ದಾಖಲಾಗಿದೆ.ಶ್ರೀಕಾಂತ್ ತ್ಯಾಗಿ ಅವರು ಸೊಸೈಟಿ ಪಾರ್ಕ್ ಅನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಇತರ ನಿವಾಸಿಗಳಿಗೆ ಅನಾನುಕೂಲವಾಗಿದೆ. ಉದ್ಯಾನವನವನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಆದರೆ ಶ್ರೀಕಾಂತ್ ಅದನ್ನು ನಿರಾಕರಿಸಿದರು ಮತ್ತು ತಮ್ಮ ಸ್ಥಾನವನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಲು ಪ್ರಯತ್ನಿಸಿದರು ಎಂದು ದೂರಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Live Tv
    [brid partner=56869869 player=32851 video=960834 autoplay=true]

  • ಮದುವೆಗೆ ಬುಲ್ಡೋಜರ್ ಮೇಲೆ ವರ ಬಂದಿದ್ದಕ್ಕೆ ಡ್ರೈವರ್‌ಗೆ ಬಿತ್ತು ಫೈನ್

    ಮದುವೆಗೆ ಬುಲ್ಡೋಜರ್ ಮೇಲೆ ವರ ಬಂದಿದ್ದಕ್ಕೆ ಡ್ರೈವರ್‌ಗೆ ಬಿತ್ತು ಫೈನ್

    ಭೋಪಾಲ್: ಮದುವೆ ವೇಳೆ ವರನನ್ನು ಬುಲ್ಡೋಜರ್ ಮೇಲೆ ಹೊತ್ತೊಯ್ದ ಚಾಲಕನಿಗೆ ಮಧ್ಯಪ್ರದೇಶ ಪೊಲೀಸರು 5,000 ರೂಪಾಯಿ ದಂಡ ವಿಧಿಸಿದ್ದಾರೆ.

    ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಚಾಲಕನನ್ನು ರವಿ ಭಾಸ್ಕರ್ ಎಂದು ಗುರುತಿಸಲಾಗಿದ್ದು, ಮೋಟಾರು ವಾಹನ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಲ್ಡೋಜರ್‌ಗಳನ್ನು ವಾಣಿಜ್ಯಿಕವಾಗಿ ಬಳಸಲಾಗುತ್ತದೆಯೇ ಹೊರತು ಸಾರ್ವಜನಿಕ ಸಾರಿಗೆಗಾಗಿ ಅಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

    BRIBE

    ಜೂನ್ 21 ರ ರಾತ್ರಿ ಬೆತುಲ್‍ನ ಕೆರ್ಪಾನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಮಾನ್ಯವಾಗಿ ಮದುವೆ ಮಂಟಪಕ್ಕೆ ಕಾರು ಅಥವಾ ಕುದುರೆ ಏರಿ ವರ ಬರುವುದನ್ನು ನೋಡಿರುತ್ತೇವೆ. ಆದರೆ ವಿಚಿತ್ರವೆಂದರೆ ವರ ಅಂಕುಶ್ ಜೈಸ್ವಾಲ್ ಬುಲ್ಡೋಜರ್ ಮೇಲೆ ಕುಳಿತುಕೊಂಡು ಮದುವೆ ಮಂಟಪಕ್ಕೆ ಬಂದಿದ್ದರು. ಇದನ್ನೂ ಓದಿ: ಪೋಸ್ಟರ್ ಹರಿದಿದ್ದಕ್ಕೆ DYFI ಕಾರ್ಯಕರ್ತನ ಮೇಲೆ ಹಲ್ಲೆ – 25 ಮಂದಿ ವಿರುದ್ಧ ಕೇಸ್, ಐವರು ವಶಕ್ಕೆ

    ವರ ಅಂಕುಶ್ ಜೈಸ್ವಾಲ್ ಟಾಟಾ ಕನ್ಸಲ್ಟೆನ್ಸಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ವೇಳೆ ಕೆಲವು ಕುಟುಂಬಸ್ಥರು ಕೂಡ ಬುಲ್ಡೋಜರ್ ಮುಂದಿದ್ದ ಬ್ಲೇಡ್‍ಗಳ ಮೇಲೆ ಕುಳಿತು ಮದುವೆಗೆ ಆಗಮಿಸಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    Live Tv

  • ಮದುವೆಗೆ ಬುಲ್ಡೋಜರ್‌ನಲ್ಲಿ ಬಂದ ವರ

    ಮದುವೆಗೆ ಬುಲ್ಡೋಜರ್‌ನಲ್ಲಿ ಬಂದ ವರ

    ಭೂಪಾಲ್: ವರನೊಬ್ಬ ತನ್ನ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರು, ಕುದುರೆ ಬದಲಿಗೆ ಬುಲ್ಡೋಜರ್ ಮೇಲೆ ಬಂದಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಬೆತುಲ್ ಮುನ್ಸಿಪಾಲಿಟಿಯಲ್ಲಿ ನಡೆದಿದೆ.

    ಅಂಕುಶ್ ಜೈಸ್ವಾಲ್ ವರ. ಅಂಕುಶ್ ಕೆಲವು ಕುಟುಂಬ ಸದಸ್ಯರೊಂದಿಗೆ ಬುಲ್ಡೋಜರ್ ಮುಂದಿರುವ ಬ್ಲೇಡ್‍ಗಳ ಮೇಲೆ ಕುಳಿತು ಅವರ ಮದುವೆಗೆ ಆಗಮಿಸಿದರು.

    MARRIAGE

    ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಅಂಕುಶ್ ಟಾಟಾ ಕನ್ಸಲ್ಟೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈತ ಮದುವೆ ಸಮಾರಂಭದಲ್ಲಿ ಬುಲ್ಡೋಜರ್‌ನಲ್ಲಿ ಆಗಮಿಸುವ ಕನಸನ್ನು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಅಂಕುಶ್ ಈ ವಿಷಯವನ್ನು ತನ್ನ ಮನೆಯವರಿಗೆ ತಿಳಿಸಿದ್ದಾನೆ. ಇದನ್ನು ಅವನ ಕುಟುಂಬದವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: 6 ವರ್ಷದ ಹಿಂದೆ ಮದುವೆ- 4ನೇ ಪತ್ನಿಗೆ ಡಿವೋರ್ಸ್ ಕೊಟ್ಟ 91ರ ರೂಪರ್ಟ್ ಮುರ್ಡೋಕ್

    ವೀಡಿಯೋದಲ್ಲಿ, ಅವನು ತನ್ನ ಸ್ನೇಹಿತರೊಂದಿಗೆ ಬ್ಲೇಡ್‍ಗಳ ಮೇಲೆ ಕುಳಿತು ಸವಾರಿ ಮಾಡಿದ್ದಾನೆ. ಮದುವೆಗೆ ಆಗಮಿಸಿದ್ದ ಜನರು ಈ ವಿಶಿಷ್ಟ ವಿಧಾನವನ್ನು ಕಂಡು ಬೆರಗಾದರು. ಇದನ್ನೂ ಓದಿ: ಹೊಳೆನರಸೀಪುರ ತಾಲೂಕಿನಲ್ಲಿ 3.4 ತೀವ್ರತೆಯ ಭೂಕಂಪ – ಭಯಪಡುವ ಅಗತ್ಯವಿಲ್ಲ ಎಂದ KSNDMC

    Live Tv

  • ಕಲಬುರಗಿಯಲ್ಲಿ ಬುಲ್ಡೋಜರ್ ಸದ್ದು: 14 ಮನೆಗಳು ಸೇರಿದಂತೆ 17 ಟಿನ್ ಶೆಡ್ ತೆರವು

    ಕಲಬುರಗಿಯಲ್ಲಿ ಬುಲ್ಡೋಜರ್ ಸದ್ದು: 14 ಮನೆಗಳು ಸೇರಿದಂತೆ 17 ಟಿನ್ ಶೆಡ್ ತೆರವು

    ಕಲಬುರಗಿ: ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ 31 ಮನೆಗಳನ್ನು, ಟಿನ್‍ ಶೆಡ್ ಒಳಗೊಂಡಂತೆ ತೆರವು ಕಾರ್ಯಾಚರಣೆ ಜಿಲ್ಲಾಡಳಿತವತಿಯಿಂದ ನಡೆದಿದೆ.

    ನಗರದ ಜಾಫರಾಬಾದ್‍ನಲ್ಲಿರುವ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆಯೂ ಕಲಬುರಗಿ ಎಡಿಸಿ ಭೀಮಾಶಂಕರ್‌ ತೆಗ್ಗಳ್ಳಿ ನೇತೃತ್ವದಲ್ಲಿ ನಡೆಸಲಾಗಿದೆ. ಸರ್ವೇ ನಂಬರ್ 21/1,22 ಎಕರೆಯಲ್ಲಿ ಮೂರುವರೆ ಎಕರೆ ಅನಧಿಕೃತ ಒತ್ತುವರಿ ಮಾಡಲಾಗಿತ್ತು. ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಂತಹ 31 ಮನೆಗಳ 17 ಟಿನ್ ಶೆಡ್ ಸೇರಿದಂತೆ ಮನೆಗಳ ತೆರವು ಕಾರ್ಯಾಚರಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ತೆರವುಗೊಳಿಸಿದೆ. ಇದನ್ನೂ ಓದಿ:  ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್ 

    ಬೆಳಗ್ಗೆ ನಾಲ್ಕು ಗಂಟೆಯಿಂದ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಎರಡು ತಿಂಗಳು ಹಿಂದೆಯಷ್ಟೇ ನೋಟಿಸ್ ಜಾರಿ ಮಾಡಲಾಗಿತ್ತು. ನೋಟಿಸ್ ಜಾರಿ ಮಾಡಿದರೂ, ಮನೆ ಖಾಲಿ ಮಾಡದ ಹಿನ್ನೆಲೆಯಲ್ಲಿ ತೆರವಿಗೆ ಜಿಲ್ಲಾಡಳಿತ ಮುಂದಾಗಿದೆ. ಇದಕ್ಕೂ ಮುನ್ನ ಪೊಲೀಸ್ ಬಂದೋಬಸ್ತ್ ಜೊತೆಗೆ ಮನೆಗಳ ತೆರವು ಕಾರ್ಯಾಚರಣೆ ನಡೆದಿದೆ.

    Live Tv

  • ಅಗ್ನಿಪಥ್‌ ಹಿಂಸಾಚಾರದ ಎಷ್ಟು ಪ್ರತಿಭಟನಾಕಾರರ ಮನೆಗಳ ಮೇಲೆ ಬುಲ್ಡೋಜರ್‌ ಬಿಟ್ಟಿದ್ದೀರಿ: BJPಗೆ ಓವೈಸಿ ಪ್ರಶ್ನೆ

    ಅಗ್ನಿಪಥ್‌ ಹಿಂಸಾಚಾರದ ಎಷ್ಟು ಪ್ರತಿಭಟನಾಕಾರರ ಮನೆಗಳ ಮೇಲೆ ಬುಲ್ಡೋಜರ್‌ ಬಿಟ್ಟಿದ್ದೀರಿ: BJPಗೆ ಓವೈಸಿ ಪ್ರಶ್ನೆ

    ನವದೆಹಲಿ: ʼಅಗ್ನಿಪಥ್‌ʼ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇಂತಹ ಸನ್ನಿವೇಶದಲ್ಲಿ ಎಷ್ಟು ಪ್ರತಿಭಟನಾಕಾರರ ಮನೆಗಳ ಮೇಲೆ ನಿಮ್ಮ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಿದ್ದೀರಿ ಎಂದು ಯೋಗಿ ಆದಿತ್ಯನಾಥ್‌ ಹಾಗೂ ಕೇಂದ್ರ ಸರ್ಕಾರಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ.

    ಪ್ರಧಾನಿ ಮೋದಿ ಅವರ ತಪ್ಪು ನಿರ್ಧಾರದಿಂದ ಯುವಸಮುದಾಯ ಬೀದಿಗಳಿದಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಎಷ್ಟು ಪ್ರತಿಭಟನಾಕಾರರ ಮನೆಗಳನ್ನು ಬುಲ್ಡೋಜರ್‌ ಮೂಲಕ ನೆಲಸಮಗೊಳಿಸಿದ್ದೀರಿ ಎಂದು ಪ್ರಶ್ನಿಸಿರುವ ಓವೈಸಿ, ಯಾರ ಮನೆಯೂ ನೆಲಸಮವಾಗಬಾರದು ಎಂಬುದು ನಮ್ಮ ಬಯಕೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಬರಿಗೈಯಲ್ಲೇ ತೆಗೆದ ಮೋದಿ

    ನಾನು ಮೋದಿ ಅವರನ್ನು ಕೇಳಬಯಸುತ್ತೇನೆ. ಮುಸ್ಲಿಮರು ನಿಮ್ಮ ಮಕ್ಕಳಲ್ಲವೇ? ನಾವು ಕೂಡ ಈ ದೇಶದ ಮಕ್ಕಳು. ನೀವು ನಮ್ಮೊಂದಿಗೆ ಮಾತನಾಡಿ. ಕಳೆದ ಶುಕ್ರವಾರವೇ ನಮ್ಮೊಂದಿಗೆ ನೀವು ಮಾತನಾಡಬೇಕಿತ್ತು ಎಂದು ತಿಳಿಸಿದ್ದಾರೆ.

    ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾ ವಿರುದ್ಧ ದೇಶಾದ್ಯಂತ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಮೂಲಕ ಗಲಭೆ ಸೃಷ್ಟಿಸಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅನೇಕ ಮುಸ್ಲಿಮರ ಮನೆಗಳನ್ನು ಬುಲ್ಡೋಜರ್‌ ಮೂಲಕ ನೆಲಸಮಗೊಳಿಸಲಾಯಿತು. ಸರ್ಕಾರದ ಆದೇಶದ ಮೇರೆಗೆ ಅಧಿಕಾರಿಗಳು ಈ ಕ್ರಮಕೈಗೊಂಡಿದ್ದರು. ಇದಕ್ಕೂ ಮೊದಲು ದೆಹಲಿಯಲ್ಲೂ ಬಿಜೆಪಿ ಆಡಳಿತವಿರುವ ಪಾಲಿಕೆ ವ್ಯಾಪ್ತಿಯಲ್ಲಿ ಮುಸ್ಲಿಮರ ಮನೆಗಳನ್ನು ಬುಲ್ಡೋಜರ್‌ ಕಾರ್ಯಾಚರಣೆ ಮೂಲಕ ನೆಲಸಮಗೊಳಿಸಲಾಗಿತ್ತು. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    Live Tv

  • ಉತ್ತರ ಪ್ರದೇಶ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ

    ಉತ್ತರ ಪ್ರದೇಶ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ

    ನವದೆಹಲಿ: ಪ್ರವಾದಿ ಮೊಹಮ್ಮದ್‌ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾ ಹೇಳಿಕೆ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಗಲಭೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಸರ್ಕಾರ ನಡೆಸುತ್ತಿರುವ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

    ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಲಾಯಿತು. ವಿಚಾರಣೆ ಬಳಿಕ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ನೀಡಿದ್ದು, 3 ದಿನದಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ. ಆದರೆ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ನಿರಾಕರಿಸಿದೆ. ಇದನ್ನೂ ಓದಿ: ಯುಪಿಯಲ್ಲಿ ಬುಲ್ಡೋಜರ್ ಘರ್ಜನೆ- ಇಂದು ಸುಪ್ರೀಂ ಕೋರ್ಟ್ ವಿಚಾರಣೆ

    SUPREME COURT

    ಅನಧಿಕೃತ ಕಟ್ಟಡಗಳ ತೆರವಿಗೆ ತಡೆ ನೀಡಲು ಸಾಧ್ಯವಿಲ್ಲ. ಆದರೆ ತೆರವಿಗೆ ಮುನ್ನ ಕಟ್ಟಡಗಳ ದಾಖಲೆಗೆ ಪರಿಶೀಲಿಸಬೇಕು. ಕಾನೂನಿನ ಅನುಸಾರವಾಗಿ ಕ್ರಮಕೈಗೊಳ್ಳುವಂತೆ ಸೂಚಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕಟ್ಟಡದ ಅನಧಿಕೃತ, ಅಧಿಕೃತದ ಬಗ್ಗೆ ಖಚಿತಪಡಿಸಿಕೊಳ್ಳಲು ಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.

    ಎಲ್ಲವೂ ನ್ಯಾಯಯುತವಾಗಿರಬೇಕು. ಅಧಿಕಾರಿಗಳು ಕಾನೂನಿನ ಪ್ರಕಾರ ಮಾತ್ರ ಕಾರ್ಯನಿರ್ವಹಿಸಬೇಕೆಂದು ನಾವು ನಿರೀಕ್ಷಿಸುತ್ತೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಿ ಎಂದು ಕೋರ್ಟ್‌ ತಿಳಿಸಿದೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ಕೋರಿ ಜಮಾಯತ್ ಉಲಮಾ ಐ ಹಿಂದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಮನೆಗಳ ಧ್ವಂಸಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿತ್ತು.

    Live Tv

  • ಯುಪಿಯಲ್ಲಿ ಬುಲ್ಡೋಜರ್ ಘರ್ಜನೆ- ಇಂದು ಸುಪ್ರೀಂ ಕೋರ್ಟ್ ವಿಚಾರಣೆ

    ಯುಪಿಯಲ್ಲಿ ಬುಲ್ಡೋಜರ್ ಘರ್ಜನೆ- ಇಂದು ಸುಪ್ರೀಂ ಕೋರ್ಟ್ ವಿಚಾರಣೆ

    ನವದೆಹಲಿ: ಉತ್ತರಪ್ರದೇಶ ಸರ್ಕಾರ ಬುಲ್ಡೋಜರ್‌ನಿಂದ ಮನೆಗಳನ್ನು ಧ್ವಂಸಗೊಳಿಸಿರುವ ಕಾರ್ಯಾಚರಣೆಗಳ ವಿರುದ್ಧ ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ ಐ ಹಿಂದ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

    ಯೋಗಿ ಸರ್ಕಾರವು ಪ್ರವಾದಿ ಮೊಹಮ್ಮದ್ ಅವರ ನಿಂದನೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ಗಲಭೆ ನಡೆಸಿದವರಿಗೆ ಸೇರಿದ ಮನೆಗಳನ್ನು ಧ್ವಂಸಗೊಳಿಸಿತ್ತು. ಇದನ್ನು ಕೆಲ ಮುಸ್ಲಿಂ ಸಂಘಟನೆಗಳು ಹಾಗೂ ಮೂವರು ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಾಧೀಶರು ವಿರೋಧಿಸಿದ್ದರು. ಅಷ್ಟೇ ಅಲ್ಲದೇ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು.

    SUPREME COURT

    ಅರ್ಜಿಯಲ್ಲಿ ಇನ್ನು ಮಂದೆ ರಾಜ್ಯದಲ್ಲಿ ಕಾನೂನಾತ್ಮಕ ವಿಧಾನಗಳನ್ನು ಅನುಸರಿಸದೇ ಅಕ್ರಮ ಮನೆಗಳನ್ನು ಧ್ವಂಸ ಮಾಡದಂತೆ ನೋಡಿಕೊಳ್ಳಲು ಯೋಗಿ ನೇತೃತ್ವದ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಜೂ. 13ರಂದು ಕೋರಿತ್ತು. ಈ ಸಂಬಂಧ ಇಂದು ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ದೇಶದಲ್ಲಿ 2023ರ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5G ಸೇವೆ: ಕೇಂದ್ರ ಸಚಿವ

    ಈ ಹಿಂದೆ ಈ ಸಂಘಟನೆ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿನ ಕಟ್ಟಡಗಳನ್ನು ನೆಲಸಮಗೊಳಿಸುವ ವಿಷಯದ ಕುರಿತು ಸಂಘಟನೆಯು ಮನವಿ ಸಲ್ಲಿಸಿತ್ತು. ಅಷ್ಟೇ ಅಲ್ಲದೇ ಈಗಾಗಲೇ ಈ ವಿಷಯದ ಕುರಿತು ಹೊಸ ಅರ್ಜಿಗಳು ಬಂದಿದ್ದು, ಕಳೆದ ವಿಚಾರಣೆಯ ನಂತರ ಕೆಲವು ಹೊಸ ಬೆಳವಣಿಗೆಗಳು ನಡೆದಿದೆ. ಈ ಕುರಿತು ನ್ಯಾಯಾಲಯ ಗಮನಹರಿಸಬೇಕು ಎಂದು ತಿಳಿಸಿವೆ. ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

    Live Tv

  • ಉತ್ತರಪ್ರದೇಶ ಮಾದರಿಯಲ್ಲೇ ಕಾಫಿನಾಡಿನಲ್ಲೂ ಬುಲ್ಡೋಜರ್ ಪ್ರಯೋಗ

    ಉತ್ತರಪ್ರದೇಶ ಮಾದರಿಯಲ್ಲೇ ಕಾಫಿನಾಡಿನಲ್ಲೂ ಬುಲ್ಡೋಜರ್ ಪ್ರಯೋಗ

    ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕ್ಷೇತ್ರ ಕಾಫಿನಾಡಿನಲ್ಲೂ ಬುಲ್ಡೋಜರ್ ಸದ್ದು ಕೇಳುತ್ತಿದ್ದು, ಉತ್ತರ ಪ್ರದೇಶ ಮಾದರಿಯಲ್ಲೇ ಅಕ್ರಮ ಗೋಮಾಂಸ ಅಡ್ಡೆಗಳ ಮೇಲೆ ಪ್ರಯೋಗ ನಡೆಯುತ್ತಿದೆ.

    ಈಗಾಗಲೇ ನಗರಸಭೆ ಅಕ್ರಮ ಗೋಮಾಂಸ ಮಾರಾಟ ಮಾಡುವ ಮನೆಗಳಿಗೆ ನೋಟಿಸ್ ನೀಡಿದ್ದು, ನಿರ್ದಾಕ್ಷಣ್ಯ ಕ್ರಮದ ಎಚ್ಚರಿಕೆ ನೀಡಿ ನೋಟಿಸ್ ಅಂಟಿಸಿದೆ. ಸ್ಫೋಟಕ, ಮಾದಕ ವಸ್ತು ಸೇರಿದಂತೆ ಗೋಹತ್ಯೆ ಮಾಡಿದರೂ ಕಟ್ಟಡ ನೆಲಸಮ ಮಾಡುವುದಾಗಿ ತಿಳಿಸಿದೆ. ಈಗಾಗಲೇ 10ಕ್ಕೂ ಹೆಚ್ಚು ಮನೆ, ಗೋಮಾಂಸ ಅಡ್ಡೆಗಳಿಗೆ ನಗರಸಭೆ ಸಿಬ್ಬಂದಿ ನೋಟಿಸ್ ಅಂಟಿಸಿದ್ದಾರೆ.

    ಕಳೆದ ವಾರ ನಗರಸಭೆ ಎಂದಿನಂತೆ ತಮಿಳು ಕಾಲೋನಿ ಹಾಗೂ ಷರೀಫ್ ಗಲ್ಲಿಯಲ್ಲಿ ಅಲ್ಲಲ್ಲಿ ಬೆಳೆದಿದ್ದ ಗಿಡ-ಘಂಟೆಗಳ ತೆರವಿಗೆ ಮುಂದಾಗಿತ್ತು. ಆಗ ತಮಿಳು ಕಾಲೋನಿಯ ಜನನಿಬಿಡ ಪ್ರದೇಶದಲ್ಲಿದ್ದ ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬಿದ್ದಿದೆ. ಅಧಿಕಾರಿಗಳು ಸ್ಥಳಕ್ಕೆ ಹೋದಾಗ ಗೋಮಾಂಸವೂ ಅಲ್ಲಿ ಇತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಅಶ್ವಥ್ ನಾರಾಯಣ ಒಬ್ಬ ಕಚಡ, ಮಾರ್ಕ್ಸ್‌ಕಾರ್ಡ್‌ ಮಾರ್ಕೊಂಡು ಬದುಕಿದವನು: ಡಿ.ಕೆ.ಸುರೇಶ್ ವಾಗ್ದಾಳಿ

    ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ನಗರಸಭೆ ಆಯುಕ್ತ ಬಸವರಾಜ್ ನಗರ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಗೋಮಾಂಸ ಮಳಿಗೆಯನ್ನು ಜೆಸಿಬಿಯಿಂದ ಧ್ವಂಸ ಮಾಡಿದ್ದರು. ಇದನ್ನೂ ಓದಿ: ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ

  • ಯುಪಿಯಲ್ಲಿ ಬುಲ್ಡೋಜರ್ ಆ್ಯಕ್ಷನ್ ಕಾನೂನಿನ ಅಪಹಾಸ್ಯ- ಕೋರ್ಟ್ ಮೆಟ್ಟಿಲೇರಲು ಮಾಜಿ ನ್ಯಾಯಾಧೀಶರ ಒತ್ತಾಯ

    ಯುಪಿಯಲ್ಲಿ ಬುಲ್ಡೋಜರ್ ಆ್ಯಕ್ಷನ್ ಕಾನೂನಿನ ಅಪಹಾಸ್ಯ- ಕೋರ್ಟ್ ಮೆಟ್ಟಿಲೇರಲು ಮಾಜಿ ನ್ಯಾಯಾಧೀಶರ ಒತ್ತಾಯ

    ನವದೆಹಲಿ: ಉತ್ತರ ಪ್ರದೇಶ ಸರ್ಕಾರವು ಸಂವಿಧಾನವನ್ನು ಅಪಹಾಸ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಾಧೀಶರು ನ್ಯಾಯಾಲಯಕ್ಕೆ ಪತ್ರ ಬರೆದು ವಿಚಾರಣೆಗೆ ಒತ್ತಾಯಿಸಿದ್ದಾರೆ.

    ಮುಸ್ಲಿಂ ನಾಗರಿಕ ವಿರುದ್ಧ ರಾಜ್ಯ ಅಧಿಕಾರಿಗಳು ಹಿಂಸಾಚಾರ ಹಾಗೂ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆಗಳನ್ನು ವಿರೋಧಿಸಿ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವನ್ನು 12 ಪ್ರಮುಖ ವ್ಯಕ್ತಿಗಳು ಒತ್ತಾಯಿಸಿದ್ದಾರೆ. ಇದರಲ್ಲಿ 3 ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶರಿದ್ದಾರೆ.

    bjP

    ನ್ಯಾಯಾಲಯಕ್ಕೆ ನಿರ್ದಿಷ್ಟವಾಗಿ ಪತ್ರ ಬರೆದ ಪ್ರತಿಭಟನಾಕಾರರು ಮನೆಗಳನ್ನು ಬುಲ್ಡೋಜರ್‍ಗಳ ಮೂಲಕ ತೆರವುಗೊಳಿಸುತ್ತಿರುವುದು ಕಾನೂನು ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ. ಈ ಬಗ್ಗೆ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಮೂರ್ತಿಗಳಾದ ಬಿ ಸುದರ್ಶನ್ ರೆಡ್ಡಿ, ವಿ ಗೋಪಾಲ ಗೌಡ ಮತ್ತು ಎಕೆ ಗಂಗೂಲಿ ಒತ್ತಾಯಿಸಿದ್ದಾರೆ. ಈ ಪತ್ರಕ್ಕೆ ಮೂವರು ಮಾಜಿ ಹೈಕೋರ್ಟ್ ನ್ಯಾಯಾಧೀಶರು ಹಾಗೂ 6 ವಕೀಲರು ಸಹಿ ಹಾಕಿದ್ದಾರೆ. ಇದನ್ನೂ ಓದಿ: ಚಾಮುಲ್ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ತೀವ್ರ ಮುಖಭಂಗ

     

    ಅಷ್ಟೇ ಅಲ್ಲದೇ ಇದೀಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಪ್ರವಾದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿಂದ ಪ್ರಚೋದಿಸಲ್ಪಟ್ಟ ಜೂ. 10ರಂದು ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರವು ಜಾವೇದ್ ಅಹ್ಮದ್ ಅವರ ಮನೆಯನ್ನು ಬುಲ್ಡೋಜರ್‍ರಿಂದ ತೆರವು ಗೊಳಿಸಿತ್ತು. ಸಹರನ್‍ಪುರದಲ್ಲಿ ಗಲಭೆಯ ಆರೋಪ ಹೊತ್ತಿರುವ ಇಬ್ಬರು ವ್ಯಕ್ತಿಗಳ ಅಕ್ರಮ ಆಸ್ತಿಗಳನ್ನು ಬುಲ್ಡೋಜರ್‍ನಲ್ಲಿ ತೆರವುಗೊಳಿಸಲಾಗಿತ್ತು. ಇಂತಹ ಸಂದಿಗ್ಧ ಕಾಲದಲ್ಲಿ ನ್ಯಾಯಾಂಗದ ಸ್ಥೈರ್ಯವನ್ನು ಪರೀಕ್ಷಿಸಲಾಗುತ್ತದೆ ಎಂದು ಪತ್ರದಲ್ಲಿ ಸುಪ್ರೀಂಕೋರ್ಟ್‍ಗೆ ತಿಳಿಸಲಾಗಿದೆ. ಇದನ್ನೂ ಓದಿ: ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌