Tag: Bulldozer

  • ಯೋಗಿ ಆದಿತ್ಯನಾಥ್‌ ʼಸೂಪರ್‌ ಚೀಫ್‌ ಜಸ್ಟಿಸ್‌ʼನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ

    ಯೋಗಿ ಆದಿತ್ಯನಾಥ್‌ ʼಸೂಪರ್‌ ಚೀಫ್‌ ಜಸ್ಟಿಸ್‌ʼನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ

    ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ʼಸೂಪರ್‌ ಚೀಫ್‌ ಜಸ್ಟಿಸ್ʼನಂತೆ ವರ್ತಿಸುತ್ತಿದ್ದಾರೆ. ತನ್ನ ನ್ಯಾಯಾಲಯದಲ್ಲಿ ಯಾರನ್ನು ಬೇಕಾದರೂ ಅಪರಾಧಿ ಮಾಡ್ತಾರೆ ಎಂದು ಯೋಗಿ ಆದಿತ್ಯನಾಥ್‌ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಗುಡುಗಿದ್ದಾರೆ.

    ಗಲಭೆ ನಡೆಸಿದ್ದಾರೆ ಎಂದು ಆರೋಪಿಸಿ ಮುಸ್ಲಿಮರ ಮನೆ, ಅಂಗಡಿಗಳ ಮೇಲೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಿದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಓವೈಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 1.5 ವರ್ಷದಲ್ಲಿ 10 ಲಕ್ಷ ಮಂದಿಗೆ ಉದ್ಯೋಗ ನೀಡಲು ಮುಂದಾದ ಮೋದಿ ಸರ್ಕಾರ

    ಅಫ್ರೀನ್ ಫಾತಿಮಾ ಅವರ ಮನೆ ಆಕೆಯ ತಾಯಿಯ ಹೆಸರಿನಲ್ಲಿದೆ. 5 ಜನರನ್ನು ಕೊಂದ ಆರೋಪದ ಮೇಲೆ ಅಜಯ್‌ ಮಿಶ್ರಾ (ಪುತ್ರ ಆಶಿಶ್ ಮಿಶ್ರಾ) ಅವರ ಮನೆಯನ್ನು ಬಿಜೆಪಿ ಏಕೆ ಕೆಡವುತ್ತಿಲ್ಲ? ಭಾರತೀಯ ಮುಸ್ಲಿಮರಿಗೆ ಬಿಜೆಪಿ ಸಾಮೂಹಿಕ ಶಿಕ್ಷೆ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.

    ಉದ್ಯೋಗ ಕಲ್ಪಿಸುವ ಕುರಿತು ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಓವೈಸಿ, ಮೋದಿ ಸರ್ಕಾರ ಕಳೆದ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳನ್ನು ನೀಡಬೇಕಿತ್ತು. ಬದಲಿಗೆ 2024 ರ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದೆ ಎಂಬ ಕಾರಣಕ್ಕಾಗಿ ಅವರು 10 ಲಕ್ಷ ಉದ್ಯೋಗಗಳನ್ನು ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರ 55 ಲಕ್ಷ ಮಂಜೂರಾದ ಹುದ್ದೆಗಳನ್ನು ಹೊಂದಿದ್ದರೂ ಕೇವಲ 10 ಲಕ್ಷ ಉದ್ಯೋಗಗಳನ್ನು ನೀಡುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಎದೆ ಮೇಲೆ ಯೋಗಿ ಟ್ಯಾಟೂ ಹಾಕಿಸಿಕೊಂಡ ಮುಸ್ಲಿಂ ಫ್ಯಾನ್

  • ದೊಡ್ಡ ಸಮುದಾಯಕ್ಕೆ ನೋವಾಗುತ್ತಿದೆ, ಬುಲ್ಡೋಜರ್‌ನಿಂದ ರಾಮ ರಾಜ್ಯದ ಕಲ್ಪನೆ ಧ್ವಂಸ: ಅಖಿಲೇಶ್ ಯಾದವ್

    ದೊಡ್ಡ ಸಮುದಾಯಕ್ಕೆ ನೋವಾಗುತ್ತಿದೆ, ಬುಲ್ಡೋಜರ್‌ನಿಂದ ರಾಮ ರಾಜ್ಯದ ಕಲ್ಪನೆ ಧ್ವಂಸ: ಅಖಿಲೇಶ್ ಯಾದವ್

    ಲಕ್ನೋ: ಬಿಜೆಪಿಯು ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್ ಸೂಚನೆಗಳ ಮೇರೆಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸದಸ್ಯರ ಮಾತಿನಿಂದ ದೊಡ್ಡ ಸಮುದಾಯಕ್ಕೆ ನೋವಾಗಿದ್ದು, ರಾಜ್ಯವನ್ನು ಧ್ವಂಸಗೊಳಿಸುತ್ತಿರುವ ಭಯಾನಕ ಅಶಾಂತಿ ಘಟನೆಗಳ ಹಿಂದೆ ಇದೇ ರಾಜಕೀಯವಿದೆ. ಈ ದುರದೃಷ್ಟಕರ ವಿವಾದವನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಯಾವುದೇ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ದೂರಿದರು.

    ನಮ್ಮ ಸಂಸ್ಕೃತಿ, ಧರ್ಮ ಮತ್ತು ಸಂವಿಧಾನವು ಯಾವುದೇ ಶಾಸನಬದ್ಧ ನಿಬಂಧನೆಗಳಿಲ್ಲದೆ ಯಾರೊಬ್ಬರ ಮನೆ ಅಥವಾ ಅಂಗಡಿಯನ್ನು ಧ್ವಂಸ ಮಾಡಲು ಅಥವಾ ಅಮಾಯಕರನ್ನು ಬಂಧಿಸಲು ಅವಕಾಶವಿಲ್ಲ. ಆದರೆ ಈ ಶಾಂತಿಯುತ ಪ್ರತಿಭಟನೆ ನಡೆಸುವ ಜನರ ಪ್ರಜಾಸತ್ತಾತ್ಮಕ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದು, ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಇಡೀ ವಿಶ್ವದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೂಪುರ್ ವಿರುದ್ಧ ಪ್ರತಿಭಟಿಸಿದವರು ಕುವೈತ್‍ನಿಂದ ಗಡಿಪಾರು – ನಮ್ಮಲ್ಲಿ ಕಠಿಣ ಕ್ರಮ ಯಾವಾಗ ಎಂದ ನೆಟ್ಟಿಗರು?

    ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದು, ಇದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಾಬೀತಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ವೈಫಲ್ಯವನ್ನು ಮರೆಮಾಚಲು ಮುಖ್ಯಮಂತ್ರಿಗಳು ಸುಳ್ಳು ಕಥೆಗಳನ್ನು ಹೆಣೆದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

    ಇದೀಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಮಾತನಾಡಿದ ಹೇಳಿಕೆಗಳ ವಿರುದ್ಧ ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಪ್ರತಿಭಟನೆಗಳಿಂದ ತತ್ತರಿಸಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಜೂನ್ 3 ರಂದು ಕಾನ್ಪುರದಲ್ಲಿ ಅಂತಹ ಮೊದಲ ಪ್ರಮುಖ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮಾರುಕಟ್ಟೆಗಳನ್ನು ಮುಚ್ಚಲು ಪ್ರಯತ್ನಿಸಿದರು. ಪೆಟ್ರೋಲ್ ಬಾಂಬ್‍ಗಳು ಮತ್ತು ಕಲ್ಲುಗಳನ್ನು ಎಸೆದು ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿದ್ದಾರೆ.

    ಕಳೆದ ಶುಕ್ರವಾರದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇದೇ ರೀತಿಯ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈವರೆಗೆ 13 ಎಫ್‍ಐಆರ್‌ಗಳನ್ನು ದಾಖಲಿಸಿಕೊಂಡು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 316 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಇದರ ಮಧ್ಯೆ ಅಧಿಕಾರಿಗಳು ಆರೋಪಿಗಳು ಅವರ ಸಂಬಂಧಿಕರು ಅಥವಾ ಸಹಚರರಿಗೆ ಸೇರಿದ ಅನೇಕ ಕಟ್ಟಡಗಳನ್ನು ಧ್ವಂಸ ಮಾಡಲು ಸೂಚಿಸಲಾಗಿತ್ತು. ರಾಜ್ಯವು ಸಹರಾನ್‍ಪುರ, ಪ್ರಯಾಗ್‍ರಾಜ್ ಮತ್ತು ಕಾನ್ಪುರ್ ಜಿಲ್ಲೆಯಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಲಾಯಿತು.

  • ಕಲ್ಲು ತೂರಿದವರಿಗೆ ಬುಲ್ಡೋಜರ್‌ ಶಾಕ್‌ ಕೊಟ್ಟ ಯೋಗಿ – ಅಕ್ರಮ ಕಟ್ಟಡಗಳು ಧ್ವಂಸ

    ಕಲ್ಲು ತೂರಿದವರಿಗೆ ಬುಲ್ಡೋಜರ್‌ ಶಾಕ್‌ ಕೊಟ್ಟ ಯೋಗಿ – ಅಕ್ರಮ ಕಟ್ಟಡಗಳು ಧ್ವಂಸ

    ಲಕ್ನೋ: ಉತ್ತರ ಪ್ರದೇಶದಲ್ಲಿ ಸರ್ಕಾರ ಮತ್ತೆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡಿದೆ. ಪ್ರವಾದಿ ಮಹಮ್ಮದ್ ಪೈಗಂಬರ್ ಬಗೆಗೆ ನೀಡಿದ ಹೇಳಿಕೆ ವಿರೋಧಿಸಿ, ಶುಕ್ರವಾರ ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದಾರೆ ಹಾಗೂ ಬುಲ್ಡೋಜರ್‌ಗಳಿಗೆ ಕೀಲಿ ಕೊಟ್ಟಿದ್ದಾರೆ.

    8 ರಾಜ್ಯಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಜಿಲ್ಲೆಗಳಲ್ಲಿ ಪ್ರತಿಭಟನೆಯ ಕಿಚ್ಚು ಕಂಡು ಬಂದಿದೆ. ಕಾನ್ಪುರ್, ಪ್ರಯಾಗ್ ರಾಜ್, ಲಕ್ನೋ, ಮುರದಾಬಾದ್, ಸಹರಾನ್ಪುರ್, ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ಜೋರಾಗಿ ನಡೆದಿದೆ. ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚುವ ಪ್ರಯತ್ನದಿಂದಾಗಿ 40ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ. ಘಟನೆಗೆ ಸಂಬಂಧಿಸಿದಂತೆ 109 ಮಂದಿಯನ್ನು ಸದ್ಯ ಬಂಧಿಸಲಾಗಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಇದೀಗ ಕಲ್ಲು ತೂರಾಟ ನಡೆದ ಅಟಲ್ ಚೌಕ್ ಸುತ್ತಮುತ್ತಲಿನ ಪ್ರದೇಶಗಳಿಗೆ ಬುಲ್ಡೋಜರ್‌ಗಳು ಬಂದಿವೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಿದ ಬಳಿಕ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಜೂನ್ 3 ರಂದು ಕಾನ್ಪುರದಲ್ಲಿ ನಡೆದ ಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿಂತೆ ಸರ್ಕಾರ ಕ್ರಮವನ್ನು ಶನಿವಾರ ತೆಗೆದುಕೊಂಡಿದೆ. ಹಿಂಸಾಚಾರದ ಮಾಸ್ಟರ್ ಮೈಂಡ್ ಜಾಫರ್ ಹಯಾತ್ ಹಶ್ಮಿ ಅವರ ಆಪ್ತ ಸಹಾಯಕನ ಮನೆಯ ಮೇಲೆ ಬುಲ್ಡೋಜರ್ ನುಗ್ಗಿದೆ. ಅಕ್ರಮ ಕಟ್ಟಡಡಗಳನ್ನು ನೆಲಸಮಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಇದನ್ನೂ ಓದಿ: ಎಸ್‍ಡಿಪಿಐ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸರು

    ಪ್ರತಿಭಟನೆ ನಿಯಂತ್ರಣಕ್ಕೆ ಬರುತ್ತಿದ್ದಂತೆ ಇಂತಹ ಘಟನೆಗಳು ಮರುಕಳಿಸುವ ಅನುಮಾನದ ಹಿನ್ನಲೆ ಯೋಗಿ ಆದಿತ್ಯನಾಥ್ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅಲ್ಲದೇ ಶಾಂತಿ ಕದಡಲು ಪ್ರಯತ್ನ ಮಾಡಿದ ಎಲ್ಲಾ ಆರೋಪಿಗಳನ್ನು ಮುಲಾಜಿಲ್ಲದೇ ಬಂಧಿಸಿ ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿರುವ ಹಿನ್ನಲೆ ಯೋಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

  • ಗಾಳಿ ತುಂಬುವಾಗ ಬುಲ್ಡೋಜರ್ ಟೈರ್ ಬ್ಲಾಸ್ಟ್ – ಮೇಲಕ್ಕೆ ಹಾರಿದ ಇಬ್ಬರು ಸಾವು

    ಗಾಳಿ ತುಂಬುವಾಗ ಬುಲ್ಡೋಜರ್ ಟೈರ್ ಬ್ಲಾಸ್ಟ್ – ಮೇಲಕ್ಕೆ ಹಾರಿದ ಇಬ್ಬರು ಸಾವು

    ರಾಯ್ಪುರ: ಬುಲ್ಡೋಜರ್ ವಾಹನದ ಟೈರ್‌ಗೆ ಪಂಪ್‍ನಿಂದ ಗಾಳಿ ತುಂಬಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ಛತ್ತೀಸ್‍ಗಢದ ರಾಯ್ಪುರ ಜಿಲ್ಲೆಯ ವರ್ಕ್‍ಶಾಪ್‍ವೊಂದರಲ್ಲಿ ನಡೆದಿದೆ.

    ಮೇ 3ರಂದು ರಾಯ್‍ಪುರ ಸಿಲ್ತಾರಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೊಡ್ಡ ಟೈರ್‌ವೊಂದಕ್ಕೆ ಕಾರ್ಮಿಕನೋರ್ವ ಗಾಳಿ ತುಂಬುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ನಂತರ ಮತ್ತೋರ್ವ ವ್ಯಕ್ತಿ ಬಂದು ಗಾಳಿಯ ಒತ್ತಡವನ್ನು ಪರೀಕ್ಷಿಸಲು ಟೈರ್ ಅನ್ನು ಒಂದೆರಡು ಬಾರಿ ಒತ್ತಿದಾಗ ಟೈರ್ ಸ್ಫೋಟಗೊಂಡಿದೆ. ಇದನ್ನೂ ಓದಿ: ಅಶ್ವಥ್ ನಾರಾಯಣಗೂ PSI ಅಕ್ರಮಕ್ಕೂ ಸಂಬಂಧವಿಲ್ಲ: ಮುನಿರತ್ನ

    ಘಟನೆಯಲ್ಲಿ ಟೈರ್ ಸ್ಫೋಟಗೊಂಡಾಗ ಇಬ್ಬರು ಕಾರ್ಮಿಕರು ಗಾಳಿಯಿಂದಾಗಿ ಮೇಲಕ್ಕೆ ಹಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಮತ್ತು ಈ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡದ ಕೋಟ್ಯಧಿಪತಿ ಮೂಲಕ ಫೇಮಸ್ ಆಗಿದ್ದ ಲೈನ್ ಮನ್ ತಿಮ್ಮಣ್ಣ ಆತ್ಮಹತ್ಯೆ : ಅನುಮಾನ ವ್ಯಕ್ತ ಪಡಿಸಿದ ಸ್ನೇಹಿತರು

  • ದೇವಾಲಯಗಳನ್ನು ಧ್ವಂಸಗೊಳಿಸಿ ಶಾಂತಿಯನ್ನು ಕದಡುತ್ತಿದೆ: ಕಾಂಗ್ರೆಸ್ ವಿರುದ್ಧವೇ ಮುಸ್ಲಿಮರಿಂದ ದೂರು

    ದೇವಾಲಯಗಳನ್ನು ಧ್ವಂಸಗೊಳಿಸಿ ಶಾಂತಿಯನ್ನು ಕದಡುತ್ತಿದೆ: ಕಾಂಗ್ರೆಸ್ ವಿರುದ್ಧವೇ ಮುಸ್ಲಿಮರಿಂದ ದೂರು

    ಜೈಪುರ: ರಾಜಸ್ಥಾನದಲ್ಲಿ ನಡೆದ ಹಿಂದೂ ದೇವಾಲಯಗಳ ಧ್ವಂಸ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ನಾಯಕರೊಬ್ಬರು ಈ ಪ್ರದೇಶದಲ್ಲಿ ಗಲಭೆಗಳನ್ನು ಪ್ರಚೋದಿಸಲು ದ್ವೇಷದ ಭಾಷಣ ಹಾಗೂ ಪ್ರಚೋದನೆಯನ್ನು ನೀಡಿದ್ದಾರೆ ಎಂದು ಮುಸ್ಲಿಂ ಗುಂಪು ಇದೀಗ ಆರೋಪಿಸಿದೆ.

    ಕಾಂಗ್ರೆಸ್ ಜಿಲ್ಲಾ ಮುಖ್ಯಸ್ಥ ಯೋಗೇಶ್ ಮಿಶ್ರಾ ವಿರುದ್ಧ ಪ್ರಕರಣ ದಾಖಲಿಸಿರುವ ಮುಸ್ಲಿಂ ಸಮುದಾಯ, ರಾಜ್‌ಗಢದ ವಾತಾವರಣವನ್ನು ಹಾಳು ಮಾಡಲು ಮುಂದಾಗಿದ್ದು, ದೇವಾಲಯಗಳನ್ನು ಧ್ವಂಸಗೊಳಿಸುವ ಉಪಾಯವನ್ನು ಬಳಸಿಕೊಂಡಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಬೀದಿಗಿಳಿದ ಬುಲ್ಡೋಜರ್ – 300 ವರ್ಷ ಹಳೆಯ ಶಿವಮಂದಿರ ನೆಲಸಮ

    ರಾಜ್‌ಗಢದಲ್ಲಿ ದೇವಾಲಯಗಳನ್ನು ಧ್ವಂಸಗೊಳಿಸಿರುವುದರ ಹಿಂದೆ ಕಾಂಗ್ರೆಸ್‌ನ ಸಂಪೂರ್ಣ ಪಾತ್ರವಿದೆ. ಒಬ್ಬ ಕಾಂಗ್ರೆಸ್ ಶಾಸಕನ ಹೊಣೆಗಾರಿಕೆ ಇದೆ. ಈ ಪ್ರಕರಣಕ್ಕೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ದೇವಸ್ಥಾನಗಳನ್ನು ಕೆಡವಲು ನಾವು ಬಯಸುವುದಿಲ್ಲ. ಇದಕ್ಕೆ ಕಾಂಗ್ರೆಸ್ ನೇರ ಕಾರಣ ಎಂದು ಸ್ಥಳೀಯ ಮುಸ್ಲಿಂ ಯುವಕರು ಹೇಳಿದ್ದಾರೆ.

    ಯೋಗೇಶ್ ಮಿಶ್ರಾ ಬಗ್ಗೆ ದೂರು ನೀಡಿರುವ ವ್ಯಕ್ತಿ ಸಾಹೂನ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ದೇವಾಲಯಗಳನ್ನು ಕೆಡವಿರುವ ವಿಚಾರಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾಹೂನ್ ಕಾಂಗ್ರೆಸ್ ಜಿಲ್ಲಾ ಮುಖ್ಯಸ್ಥ ಯೋಗೇಶ್ ಮಿಶ್ರಾ ಅಸಾಂವಿಧಾನಿಕ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನೀವು ಮಾಡಿರುವ ತಪ್ಪಿಗೆ ನಮ್ಮನ್ನು ದೋಷಿಸಬೇಡಿ – ಮೋದಿ ವಿರುದ್ಧ ಠಾಕ್ರೆ ಕಿಡಿ

    ಅಭಿವೃದ್ಧಿಯ ನೆಪದಲ್ಲಿ ರಾಜಸ್ಥಾನ ಸರ್ಕಾರ ಕಳೆದ ಶುಕ್ರವಾರ ಅಲ್ವಾರ್‌ನ ರಾಜ್‌ಗಢದಲ್ಲಿರುವ 300 ವರ್ಷಗಳಷ್ಟು ಹಳೆಯ ಶಿವಮಂದಿರ ಸೇರಿದಂತೆ ನಿವಾಸಗಳು ಹಾಗೂ ಇತರ 3 ದೇವಾಲಯಗಳನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡಿತ್ತು. ಸ್ಥಳೀಯರು ದೇವಾಲಯಗಳನ್ನು ಧ್ವಂಸಗೊಳಿಸದಂತೆ ಮನವಿ ಮಾಡಿದ್ದರೂ ಅದಕ್ಕೆ ಕಿವಿಗೊಡದೆ ಕೆಡವಲಾಯಿತು. ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕರ ವಿರುದ್ಧ ದೂರು ನೀಡಿದ್ದರು.

  • ಬುಲ್ಡೋಜರ್ ಕಾನೂನು ತರೋಕೆ ಇದು ಉತ್ತರ ಪ್ರದೇಶ ಅಲ್ಲ: ಡಿಕೆಶಿ ಗುಡುಗು

    ಬುಲ್ಡೋಜರ್ ಕಾನೂನು ತರೋಕೆ ಇದು ಉತ್ತರ ಪ್ರದೇಶ ಅಲ್ಲ: ಡಿಕೆಶಿ ಗುಡುಗು

    ದಾವಣಗೆರೆ: ಬುಲ್ಡೋಜರ್ ತರೋಕೆ ಇದು ಉತ್ತರ ಪ್ರದೇಶ ಅಲ್ಲ. ಕರ್ನಾಟಕವನ್ನು ಯುಪಿಗೆ ಹೋಲಿಸಬೇಡಿ. ಅಲ್ಲಿ ಬೇರೆ, ಬೇರೆ ವಿಷಯಗಳಿದ್ದವು ಅದಕ್ಕೆ ಬುಲ್ಡೋಜರ್ ಮಾದರಿ ಮಾಡ್ತಿದೆ ಅಲ್ಲಿನ ಸರ್ಕಾರ, ಆದರೆ ಕರ್ನಾಟಕದಲ್ಲಿ ಪ್ರಜ್ಞಾವಂತರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಯಾಕಾದ್ರು ಬಂದಿದೆ ಎಂದು ಜನ ಕೊರಗುತ್ತಿದ್ದಾರೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಜನಾದೇಶದಿಂದ ಅಧಿಕಾರಕ್ಕೆ ಬಂದಿಲ್ಲ. ಶಾಸಕರನ್ನು ಖರೀದಿ ಮಾಡಿ ಅಧಿಕಾರ ನಡೆಸುತ್ತಿದ್ದಾರೆ. ಇದನ್ನು ಸದನದಲ್ಲೇ ಶಾಸಕ ಶ್ರೀನಿವಾಸಗೌಡ ಒಪ್ಪಿಕೊಂಡಿದ್ದಾರೆ. ಆಪರೇಷನ್ ಕಮಲದಿಂದ ಬಿಜೆಪಿ ಸರ್ಕಾರ ಜನ್ಮ ತಾಳಿದೆ. ಹೀಗಾಗಿ ಔಷಧಿ, ಗೊಬ್ಬರ, ನೇಮಕಾತಿ ಎಲ್ಲದರಲ್ಲೂ ದುಡ್ಡು ಹೊಡೆಯುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.40 ಕಮಿಷನ್ ಪಡೆಯುತ್ತಿದ್ದಾರೆ. ಇವರು ಇವತ್ತು ಇರ್ತಾರೆ ನಾಳೆ ಹೋಗ್ತಾರೆ. ಆದರೆ, ಇದು ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದೆ. ಪ್ರಸ್ತುತವಾಗಿ ನಡೆಯುತ್ತಿರುವ ಧರ್ಮ ದಂಗಲ್‍ನಿಂದಾಗಿ ಬಿಜೆಪಿ ನಾಯಕರ ನಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಜೆಸಿಬಿ ನುಗ್ಗಿಸಿ ಎಟಿಎಂ ಎಗರಿಸಿಕೊಂಡು ಹೋಗಲು ದರೋಡೆಕೋರರಿಂದ ವಿಫಲ ಯತ್ನ!

    ಮುಸ್ಲಿಂರಿಗೆ ಪ್ರಧಾನ ಮಂತ್ರಿ ಆಗುವ ಅರ್ಹತೆ ಇದೆ, ಏಕೆ ಮುಸ್ಲಿಂರು ರಾಷ್ರಪತಿಯಾಗಿಲ್ವಾ, ವಿಜ್ಞಾನಿಗಳಾಗಿಲ್ವಾ, ಯಾಕೆ ಅವರ ಮೇಲೆ ಸುಮ್ಮನೆ ಭೇದ ಭಾವ ಮಾಡುತ್ತೀರಿ? ಬಿಜೆಪಿ ಕಷ್ಟಕಾಲದಲ್ಲಿ ಬಡವರ ಹೊಟ್ಟೆ ಮೇಲೆ ಬರೆ ಹಾಕಿದೆ. ಎಲ್ಲಾದರೂ ಗಾಡಿ ನಿಂತರೆ ಪಂಚರ್ ಯಾರು ಹಾಕುತ್ತಾರೆ? ಸಂವಿಧಾನ ಕಿತ್ತು ಹಾಕಲು ನಿಮ್ಮಿಂದ ಆಗತ್ತಾ?, ದೇಶ ಶಾಂತಿಯ ತೋಟವೆಂದು ನಾವು ಬದುಕಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಜನ್ಮವೇ ಭ್ರಷ್ಟಾಚಾರದ್ದು: ಡಿಕೆಶಿ

    ಹಲಾಲ್, ಪಲಾಲ್ ಎಲ್ಲ ಮಾಡಿದ್ದು ಬಿಜೆಪಿಯವರೇ. ನಮ್ಮ ಭಾಗದಲ್ಲಿ ಕಬ್ಬಾಳಮ್ಮ ದೇವಸ್ಥಾನ ಇದೆ ಅಲ್ಲಿ ಸಾವಿರ ಮರಿ ಕಡಿಯುತ್ತಾರೆ. ಕಡಿದಿದ್ದ ಮರಿಗಳನ್ನು ಮುಸ್ಲಿಂರೇ ಕ್ಲಿನ್ ಮಾಡುತ್ತಾರೆ. ಕೋಲಾರ, ರಾಮನಗರದಲ್ಲಿ ಮಾವಿನ ತೋಪಿಗೆ ಔಷಧಿ ಹೊಡೆಯುವರು ಯಾರು?, ಚಿತ್ರದುರ್ಗದಲ್ಲಿ ಕುರಿಗಳ ವ್ಯಾಪಾರ ಆಗುತ್ತಿಲ್ಲ ಎನ್ನುವ ವರದಿ ನೋಡಿದೆ, 8 ಸಾವಿರಕ್ಕೆ ಮಾರಾಟವಾಗುತ್ತಿದ್ದ ಕುರಿಗಳು 3-4 ಸಾವಿರಕ್ಕೆ ಮಾರುತ್ತಿದ್ದಾರೆ. ಈಗ ಬಿಜೆಪಿಯವರು ಕುರಿಗಳನ್ನು ತಗೊಂಡು ಹೋಗುತ್ತಾರಾ?. ಇದರ ಪರಿಣಾಮ ಸಂತೆ, ಜಾತ್ರೆಗಳ ಮೇಲೆ ಬಿದ್ದಿದೆ ಎಂದು ಕಿಡಿಕಾರಿದರು.

  • ಬುಲ್ಡೋಜರ್ ಕಾನೂನು ಜಾರಿ ಬಗ್ಗೆ ಸಿಎಂ ಜೊತೆ ಚರ್ಚೆ: ಆರ್.ಅಶೋಕ್

    ಬುಲ್ಡೋಜರ್ ಕಾನೂನು ಜಾರಿ ಬಗ್ಗೆ ಸಿಎಂ ಜೊತೆ ಚರ್ಚೆ: ಆರ್.ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಗಲಭೆ ಮಾಡುವ ಮನಸ್ಥಿತಿ ಇರುವವರಿಗೆ ಮನೆ-ಮಠ ಇಲ್ಲದಂತೆ ಮಾಡಬೇಕು. ಅದಕ್ಕಾಗಿ ಬುಲ್ಡೋಜರ್ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಆರ್.ಅಶೋಕ್ ಬುಲ್ಡೋಜರ್ ಪ್ರಯೋಗ ಜಾರಿಯ ಬಗ್ಗೆ ಪುನರುಚ್ಚರಿಸಿದರು.

    r ashok

    ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗಲಭೆ ಮಾಡುವವರನ್ನು ಅರೆಸ್ಟ್ ಮಾಡಿದರೆ, ಮರ‍್ನಾಲ್ಕು ದಿನಗಳಲ್ಲಿ ಜಾಮೀನು ಪಡೆದುಕೊಂಡು ಹೊರಗೆ ಬರುತ್ತಾರೆ. ಪುನಃ ಗಲಭೆ ಮಾಡುತ್ತಾರೆ. ಅದಕ್ಕಾಗಿ ಅವರಿಗೆ ಬುದ್ಧಿ ಕಲಿಸಲು ಮನೆ-ಮಠ ಇಲ್ಲದಂತೆ ಮಾಡಬೇಕು. ಆಗ ಬುದ್ಧಿ ಬರುತ್ತದೆ ಎಂದು ಕಿಡಿಕಾರಿದರು.  ಇದನ್ನೂಓದಿ: PSI ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮ ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ

    ನಮ್ಮಲ್ಲೂ ಉತ್ತರ ಪ್ರದೇಶದ ಮಾದರಿಯ ರೂಲ್ಸ್ ಜಾರಿಗೆ ಬರಬೇಕಾದ ಸ್ಥಿತಿಯಿದೆ. ಈ ನೀತಿ ತಂದರಷ್ಟೇ ಗಲಭೆಕೋರರನ್ನು ಮಟ್ಟ ಹಾಕಲು ಸಾಧ್ಯ. ಗಲಭೆ ಸೃಷ್ಟಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಸುಮ್ಮನೆ ಬಿಡಬಾರದು. ಅವರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

    YOGI

    ಕಾಂಗ್ರೆಸ್‌ಗೆ ಜನರೇ ಪಾಠ ಕಲಿಸ್ತಾರೆ: ನಾವು ಇನ್ನಷ್ಟು ಕಠಿಣ ಕ್ರಮ ತೆಗೆದುಕೊಂಡು ದುಷ್ಟರ ಹೆಡೆಮುರಿ ಕಟ್ಟುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲವೆಂದ ಅವರು, ರಾಜ್ಯದಲ್ಲಿ ಅರಾಜಕತೆ ಉಂಟುಮಾಡುವ ಕಾಂಗ್ರೆಸ್‌ಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಕುಟುಕಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್

    ವಿದೇಶಿ ಶಕ್ತಿಗಳಿವೆಯೇ?:  ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು. ಡಿಜೆ ಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ. ಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷನೇ ಭಾಗಿಯಾಗಿದ್ದಾನೆ. ಪಿಎಸ್‌ಐ ನೇಮಕಾತಿ ಹಗರಣದಲ್ಲೂ ಕಾಂಗ್ರೆಸ್ ಮುಖಂಡನೇ ಇದ್ದಾನೆ. ಹೀಗೆ ಅವರೇ ಎಲ್ಲ ಹಗರಣದಲ್ಲೂ ಭಾಗಿಯಾಗಿ ಉಳಿದವರ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಸರ್ವಪ್ರಯತ್ನ ಮಾಡುತ್ತಿದೆ. ವಿದೇಶಿ ಶಕ್ತಿಗಳು ಈ ಎಲ್ಲ ಘಟನೆಯಲ್ಲಿ ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

  • ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್

    ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್

    ಚಿಕ್ಕೋಡಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯಕವಾಗಿ ಬೇಕಾಗಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ಕೊಟ್ಟ ಅವರು, ಬುಲ್ಡೋಜರ್ ಬಳಕೆ ಮಾಡಿದ್ರೆ ನಮ್ಮ ಮನೆ ಅಂಗಡಿ ಹೋಗುತ್ತದೆ ಎನ್ನುವ ಭಯ ಬರಬೇಕು. ಉತ್ತರ ಪ್ರದೇಶದಲ್ಲಿ ಈ ಅಸ್ತ್ರ ಪ್ರಯೋಗವಾಗಿದೆ. ಕರ್ನಾಟಕದಲ್ಲಿ ಯಾಕೆ ಮಾಡಬಾರದು? ಮುಸ್ಲಿಮರು ಇರುವ ವಾನಿಪ್ಲಾಟ್ ಮೇಲೆ ಬುಲ್ಡೋಜರ್ ಹಾಕಬೇಕು. ಸರ್ಕಾರದ ಮೇಲೆ ಕಾನೂನುಕ್ರಮ ಆದರೆ ಆಗಲಿ. ಗಲಭೆಕೋರರ ಮನೆ ಮೇಲೆ ಬುಲ್ಡೋಜರ್ ಹಾಕಿ ಮನೆ ಕಿತ್ತು ಬಿಸಾಕಬೇಕು ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಯೂನಿಫಾರ್ಮ್‌ ಹಾಕ್ಕೊಂಡು ಬಿಲ್ಡಪ್‌

    ಲೌಡ್ ಸ್ಪೀಕರ್ ಹೋರಾಟದ ಕುರಿತು ಮಾತನಾಡಿದ ಅವರು, ಶ್ರೀರಾಮಸೇನಾ ಹೋರಾಟದಿಂದ ನಿದ್ದೆ ಮಾಡುವ ನಿರ್ಲಕ್ಷ್ಯ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಲೌಡ್ ಸ್ಪೀಕರ್‌ನಲ್ಲಿ ಕೂಗುವುದಕ್ಕೆ ಸಾಕ್ಷಿ ಕೊಡುತ್ತೇವೆ. ಎಫ್‍ಐಆರ್ ದಾಖಲು ಮಾಡುವ ಜೊತೆಗೆ ಮಸೀದಿಯನ್ನು ಸೀಜ್ ಮಾಡಿ. ಒಂದು ವೇಳೆ ಅದನ್ನು ನಿಲ್ಲಸದೇ ಇದ್ದಲ್ಲಿ, ಮೇ 9ನೇ ತಾರೀಖು ಎಲ್ಲ ದೇವಸ್ಥಾನಗಳಲ್ಲಿ 5 ಗಂಟೆಗೆ ಮೈಕ್ ಹಾಕಿ ಭಜನೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಶ್ರೀರಾಮ ಸೇನೆಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದು ಕುಖ್ಯಾತರಾಗಬೇಡಿ: ಕಟೀಲ್ ವಿರುದ್ಧ ಮುತಾಲಿಕ್ ಕಿಡಿ

    loudspeakers

    ಲವ್ ಕೇಸರಿ ಕ್ರಿಯೆಗೆ ಪ್ರತಿಕ್ರಿಯೆ ನೀಡಿದಂತಾಗುತ್ತದೆ. ರಾಜ್ಯದಲ್ಲಿ ಲವ್ ಕೇಸರಿ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ಲವ್ ಜಿಹಾದ್‍ನಿಂದ ಹಿಂದೂ ಹುಡುಗಿಯರು ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

  • ಕರ್ನಾಟಕದಲ್ಲೂ ಬುಲ್ಡೋಜರ್ ಕಾನೂನು ಬರಲಿ: ಸಚಿವ ಆರ್.ಅಶೋಕ್

    ಕರ್ನಾಟಕದಲ್ಲೂ ಬುಲ್ಡೋಜರ್ ಕಾನೂನು ಬರಲಿ: ಸಚಿವ ಆರ್.ಅಶೋಕ್

    ಬೆಂಗಳೂರು ಗ್ರಾಮಾಂತರ: ಉತ್ತರ ಪ್ರದೇಶದ ಮಾದರಿಯಲ್ಲೇ ರಾಜ್ಯದಲ್ಲೂ ಬುಲ್ಡೋಜರ್ ಕಾನೂನು ಬಂದರೆ ಒಳ್ಳೆಯದು ಎಂದು ಕಂದಾಯ ಸಚಿವ ಆರ್.ಆಶೋಕ್ ಹೇಳಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಮಾತನಾಡಿದ ಅವರು, ಕೋಮುಗಲಭೆ ಸೃಷ್ಟಿಸುವವರನ್ನು ಬಂಧಿಸಿದರೆ ಒಂದು ವಾರಕ್ಕೆ ಜಾಮೀನು ತೆಗೆದುಕೊಂಡು ಆಚೆ ಬಂದು ಮತ್ತೆ ಅದೇ ಕೆಲಸ ಮಾಡುತ್ತಾರೆ. ಇತ್ತೀಚೆಗೆ ಹುಬ್ಬಳ್ಳಿ ಗಲಭೆಯಲ್ಲಿ ಅರೆಸ್ಟ್ ಆದವರೆಲ್ಲ ರೌಡಿಶೀಟರ್‌ಗಳು. ಒಂದು ವಾರಕ್ಕೆ ಆಚೆ ಬಂದು ಮತ್ತೆ ಕಥೆ ಶುರು ಮಾಡಿದ್ದಾರೆ. ಹೀಗಾಗಿ ಅವರು ಬುದ್ಧಿ ಕಲಿಯಲ್ಲ. ಇಂತಹವರಿಗೆ ಸರಿಯಾಗಿ ಬುದ್ಧಿ ಕಲಿಸಬೇಕು. ಮನೆ-ಮಠ ಇಲ್ಲದ ಹಾಗೆ ಮಾಡಬೇಕು. ಆಗ ದಾರಿಗೆ ಬರುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕುಂಕುಮ ಇಟ್ಟವರು ಯಾರು ಬಾಂಬ್ ಹಾಕಿಲ್ಲ, ಬಾಂಬ್ ಹಾಕೋರು ಟೋಪಿ ಹಾಕಿದವರು: ಸಿ.ಟಿ ರವಿ

    ಜೈಲಿಗೆ ಹೋಗಿ ಬಂದವರು ಮತ್ತೆ ಅದೇ ಕೆಲಸ ಮಾಡ್ತಾರೆ. ಈ ತರಹದ ಮನಸ್ಥಿತಿ ಇರುವವರಿಗೆ ಉತ್ತರ ಪ್ರದೇಶ ಮಾದರಿಯ ಕಾನೂನು ಬರಬೇಕು. ಮುಸ್ಲಿಮರಲ್ಲಿ ಬಹಳ ಒಳ್ಳೆಯವರೂ ಇದ್ದಾರೆ. ಕೆಲ ಪುಂಡ ಪೋಕರಿಗಳನ್ನು ಮಟ್ಟ ಹಾಕಲು ಈ ಕಾರ್ಯಾಚರಣೆ ಅವಶ್ಯಕವಾಗಿದ್ದು, ಸಿಎಂ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿ ಎಂದರು.

    ಕರ್ನಾಟಕದ ಚುನಾವಣಾ ಚಿತ್ರಣವೇ ಬದಲು
    ಬಹುಸಂಖ್ಯಾತರನ್ನು ನಿರ್ಲಕ್ಷಿಸಿದ್ದೇ ಕಾಂಗ್ರೆಸ್‌ಗೆ ಮುಳುವಾಗಿದೆ. ಕಾಂಗ್ರೆಸ್ ಬರೀ ಅಲ್ಪಸಂಖ್ಯಾತರನ್ನು ಒಲೈಕೆ ಮಾಡುತ್ತೆ. ಆದರೆ ಇಂದು ಜನರಿಗೆ ಬೇಕಾಗಿರೋದು ಮೋದಿ ಸರ್ಕಾರ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಚುನವಣಾ ಪ್ರಚಾರ ಕಾರ್ಯ ಹಮ್ಮಿಕೊಂಡಿದೆ. ಆದರೆ ಕಾಂಗ್ರೆಸ್, ಜೆಡಿಎಸ್‌ನವರು ಇನ್ನೂ ತಡಕಾಡುತ್ತಲೇ ಇದ್ದಾರೆ. ಮುಂದಿನ ಆರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಲಿದೆ. ರಾಜ್ಯಕ್ಕೆ ಮೋದಿ, ಅಮಿತ್ ಶಾ, ನಡ್ಡಾ ಬಂದ ಮೇಲಂತೂ ಬಿಜೆಪಿಮಯವಾಗಲಿದೆ. ಆದರೆ ಕಾಂಗ್ರೆಸ್‌ನಲ್ಲಿ ರಾಹುಲ್ ಗಾಂಧಿ ಎಲ್ಲಿ ಹೋಗ್ತಾರೋ ಅಲ್ಲಿ ಸೋಲು ಆಗಲಿದೆ. ಹೀಗಾಗಿ ಕರ್ನಾಟಕಕ್ಕೂ ರಾಹುಲ್ ಗಾಂಧಿ ಬರಲೆಂದು ಆಶಿಸುವೆ ಎಂದು ಹೇಳಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಪೂರ್ವ ನಿಯೋಜಿತ ಸಂಚು, ನ್ಯಾಯಾಂಗ ತನಿಖೆ ನಡೆಯಲಿ: ಎಸ್‍ಡಿಪಿಐ

    ರಾಜಸ್ಥಾನದಲ್ಲಿ ದೇವಾಲಯ ಕೆಡವಿರೋದು ಖಂಡನೀಯ
    ರಾಜಸ್ಥಾನದಲ್ಲಿ 400 ವರ್ಷಗಳ ಇತಿಹಾಸ ಇರುವ ದೇವಾಲಯವನ್ನು ಬುಲ್ಡೋಜರ್ ಮೂಲಕ ಒಡೆದು ಹಾಕಿರುವುದು ಖಂಡನೀಯ. ರಾಜಸ್ಥಾನ ಸರ್ಕಾರ ದ್ವೇಷದಿಂದ ದೇವಾಲಯ ಕೆಡವಿ ಹಾಕಿದೆ. ರಾಜಸ್ಥಾನ ಸರ್ಕಾರ ಹಿಂದೂ ವಿರೋಧಿ ನೀತಿ ತಾಳಿದೆ. ಇದು ಹಿಂದೂಗಳಿಗೆ ಬಹಳ ನೋವು ತಂದಿದೆ ಎಂದು ಖಂಡನೆ ವ್ಯಕ್ತಪಡಿಸಿದರು.

  • ರಾಜಸ್ಥಾನದಲ್ಲಿ ಬೀದಿಗಿಳಿದ ಬುಲ್ಡೋಜರ್ – 300 ವರ್ಷ ಹಳೆಯ ಶಿವಮಂದಿರ ನೆಲಸಮ

    ರಾಜಸ್ಥಾನದಲ್ಲಿ ಬೀದಿಗಿಳಿದ ಬುಲ್ಡೋಜರ್ – 300 ವರ್ಷ ಹಳೆಯ ಶಿವಮಂದಿರ ನೆಲಸಮ

    ಜೈಪುರ: ಉತ್ತರಪ್ರದೇಶದಿಂದ ಪ್ರಾರಂಭವಾದ ಬುಲ್ಡೋಜರ್ ಸದ್ದು ಇದೀಗ ದೇಶಾದ್ಯಂತ ಅಬ್ಬರಿಸುತ್ತಿದೆ. ಈಗ ಕಾಂಗ್ರೆಸ್ ಅಧಿಕಾರವಿರುವ ರಾಜಸ್ಥಾನದಲ್ಲಿ ಜುಲ್ಡೋಜರ್ ಒಂದು 300 ವರ್ಷ ಹಳೆಯ ದೇವಾಯಲವನ್ನು ಕೆಡವಿದ್ದು, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದೆ.

    ರಾಜಸ್ಥಾನದ ಅಲ್ವಾರ್ ಜಿಲ್ಲೆ ಸರಾಯ್ ಪ್ರದೇಶದಲ್ಲಿರುವ 300 ವರ್ಷಗಳಷ್ಟು ಹಳೆಯ ಶಿವ ದೇವಾಲಯವನ್ನು ಶುಕ್ರವಾರ ಬುಲ್ಡೋಜರ್ ನೆಲಸಮ ಮಾಡಿದೆ. ಪುರಾತನ ದೇವಾಲಯವನ್ನು ಕೆಡವಿ ಹಾಕಿರುವ ಕಾರಣ ಗ್ರಾಮಸ್ಥರು ಆಕ್ರೋಶಗೊಂಡು, ನಗರ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಉಪ ವಿಭಾಗೀಯ ಮ್ಯಾಜಿಸ್ಟೆçÃಟ್ ಹಾಗೂ ಪುರಸಭೆಯ ರಾಜಗಢ ಶಾಸಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಜಹಾಂಗೀರ್‌ಪುರಿ ಗಲಭೆ ಪ್ರಕರಣಕ್ಕೆ ಟ್ವಿಸ್ಟ್ – ಇಡಿಗೆ ಪತ್ರ ಬರೆದ ದೆಹಲಿ ಪೊಲೀಸ್ ಆಯುಕ್ತ

    ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು