Tag: Bullet Prakash

  • ಇನ್ಮುಂದೆ ನನ್ನದೇ ರೌಂಡು, ನನ್ನದೇ ಸೌಂಡು- ಬುಲೆಟ್ ಪುತ್ರನ ಹೊಸ ಅಧ್ಯಾಯ

    ಇನ್ಮುಂದೆ ನನ್ನದೇ ರೌಂಡು, ನನ್ನದೇ ಸೌಂಡು- ಬುಲೆಟ್ ಪುತ್ರನ ಹೊಸ ಅಧ್ಯಾಯ

    ಗುರುಶಿಷ್ಯರು, ಬಿಗ್ ಬಾಸ್ ಸೀಸನ್ 10ರ (Bigg Boss Kannada 10) ಮೂಲಕ ಮೋಡಿ ಮಾಡಿದ ರಕ್ಷಕ್ ಬುಲೆಟ್ (Rakshak Bullet) ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಧ್ಯಾಯ ಶುರು ಮಾಡಲು ಸಜ್ಜಾಗಿದ್ದಾರೆ. ಬುಲೆಟ್ ಪ್ರಕಾಶ್ ಪುತ್ರ ಹೀರೋ ಆಗಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಬುಲೆಟ್ ಪ್ರಕಾಶ್ (Bullet Prakash) 47ನೇ ವರ್ಷದ ಹುಟ್ಟುಹಬ್ಬದ ದಿನವೇ ರಕ್ಷಕ್ ತಮ್ಮ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

    ಎಲ್ಲಾ ನನ್ನ ಆತ್ಮೀಯರೇ, ಇಂದು (ಏ.2) ನನ್ನ ಪೂಜ್ಯ ತಂದೆ ದಿವಂಗತ ‘ಬುಲೆಟ್’ ಪ್ರಕಾಶ್ (Bullet Prakash) ಅವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು. ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ ಹಾಗೂ ನನ್ನ ಇಡೀ ಚಿತ್ರತಂಡಕ್ಕೂ ಹರಸಿ, ಹಾರೈಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ರಕ್ಷಕ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ರಶ್ಮಿಕಾ, ಶ್ರೀಲೀಲಾ ನಡುವೆ ಕಾಣೆಯಾದ್ರಾ ಕುಡ್ಲದ ಬೆಡಗಿ ನೇಹಾ ಶೆಟ್ಟಿ?

     

    View this post on Instagram

     

    A post shared by rakshak sena (@rakshak_bullet)

    ತಮ್ಮ ಮೊದಲ ಸಿನಿಮಾ ರಕ್ಷಕ್ ಮಾಸ್ ಆಗಿ ಎಂಟ್ರಿ ಕೊಡಲಿದ್ದಾರೆ. ಶೇರ್ ಮಾಡಿರುವ ಪೋಸ್ಟರ್‌ನಲ್ಲಿ ಡೈಲಾಗ್‌ಗಳು ಪಂಚಿಂಗ್ ಆಗಿವೆ. ಮಚ್ಚಾ ಏರಿಯಾದಲ್ಲಿ ಕಣ್ಮುಂದೆ ಬೇಜಾನ್ ಗಾಡಿಗಳು ಸೌಂಡ್ ಮಾಡ್ತಾವೆ. ಆದರೆ ಸೌಂಡ್ ಕೇಳ್ತಿದ್ದಂಗೆ ಇದೇ ಗಾಡಿ ಅಂತ ಹೇಳೋದು ಒಂದುನ್ನೆ. ‘ಬುಲೆಟ್’… ಇನ್ನುಂದೆ ನಂದೆ ರೌಂಡು, ನನ್ನದೇ ಸೌಂಡು ಎಂಬ ಡೈಲಾಗ್ ಹೈಲೆಟ್ ಆಗಿದೆ.

    ‘R B 01’ ಚಿತ್ರಕ್ಕೆ ಶ್ರೀಹರಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಕ್ರಿಶ್ ಎಂಬುವವರು ನಿರ್ದೇಶನ ಮಾಡಲಿದ್ದಾರೆ. ಶ್ರೀಧರ್ ಕಶ್ಯಪ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಸದ್ಯ ರಕ್ಷಕ್ ಲುಕ್, ಪಾತ್ರ ಸಿನಿಮಾದಲ್ಲಿ ಹೇಗಿರಲಿದೆ ಎಂಬುದರ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದೆ. ತಂದೆ ಬುಲೆಟ್ ಪ್ರಕಾಶ್‌ರಂತೆಯೇ ರಕ್ಷಕ್ ಕೂಡ ಚಿತ್ರರಂಗದಲ್ಲಿ ಬೆಳೆಯಲಿ ಎಂಬುದೇ ಅಭಿಮಾನಿಗಳ ಆಶಯ.

  • ನನ್ನ ಹೇಳಿಕೆಗಳನ್ನು ತಿರುಚಲಾಗಿದೆ, ಮಾನಸಿಕ ಹಿಂಸೆಯಾಗುತ್ತಿದೆ- ರಕ್ಷಕ್ ಪೋಸ್ಟ್ ವೈರಲ್

    ನನ್ನ ಹೇಳಿಕೆಗಳನ್ನು ತಿರುಚಲಾಗಿದೆ, ಮಾನಸಿಕ ಹಿಂಸೆಯಾಗುತ್ತಿದೆ- ರಕ್ಷಕ್ ಪೋಸ್ಟ್ ವೈರಲ್

    ‘ಬಿಗ್ ಬಾಸ್’ (Bigg Boss Kannada 10) ಖ್ಯಾತಿಯ ರಕ್ಷಕ್ ಬುಲೆಟ್ (Rakshak Bullet) ಅವರು ಇತ್ತೀಚೆಗೆ ಅದೇನೇ ಮಾತನಾಡಿದರೂ ಕಾಂಟ್ರವರ್ಸಿ ಆಗುತ್ತಿದೆ. ತಮ್ಮ ಹೇಳಿಕೆಗಳನ್ನು ತಿರುಚಿ ವೈರಲ್ ಆಗ್ತಿರೋ ವಿಡಿಯೋ ಬಗ್ಗೆ ರಿಯಾಕ್ಟ್ ಮಾಡಿದ್ದಾರೆ. ಈ ಕುರಿತು ಪೋಸ್ಟೊಂದನ್ನು ಹಂಚಿಕೊಂಡಿದ್ದಾರೆ.

    ಬುಲೆಟ್ ಪ್ರಕಾಶ್ (Bullet Prakash) ಪುತ್ರ ರಕ್ಷಕ್ ತಮ್ಮ ಇತ್ತೀಚಿನ ದಿನಗಳಲ್ಲಿ ನೀಡಿರುವ ಕೆಲವೇ ಹೇಳಿಕೆಗಳನ್ನು ತಿರುಚಿ ಬೇರೇಯದ್ದೇ ರೂಪ ಕೊಟ್ಟಿರುವ ಬಗ್ಗೆ ಅದರಿಂದ ತಮಗೆ ಮಾನಸಿಕ ಹಿಂಸೆ ಆಗುತ್ತಿದೆ ಎಂದು ರಕ್ಷಕ್ ಹೇಳಿಕೊಂಡಿದ್ದಾರೆ. ನಾನು ಬುಲೆಟ್ ಪ್ರಕಾಶ್ ಅವರ ಮಗ, ನನ್ನ ತಂದೆ ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರನ್ನು ಹರಸಿ ಬೆಳೆಸಿದ್ದೀರಾ. ಅವರ ಮಗನಾಗಿ ನಾನು ಜನಸಿರೋದು ನನ್ನ ಪುಣ್ಯ ಎಂದಿದ್ದಾರೆ. ಇದನ್ನೂ ಓದಿ:ಇಂಟರ್‌ನೆಟ್‌ನಲ್ಲಿ ಸಂಗೀತಾ ಟ್ರೆಂಡಿಂಗ್- ರೂಪೇಶ್ ಶೆಟ್ಟಿ ದಾಖಲೆ ಉಡೀಸ್

    ಬಳಿಕ ನನ್ನ ತಂದೆಯಲ್ಲಿರುವ ನೇರ ನುಡಿ ನನಗೂ ಬಂದಿದೆ. ಇತ್ತೀಚಿನ ದಿನಗಳಲ್ಲಿ ನನ್ನ ಹೇಳಿಕೆಗಳನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತಿದ್ದಾರೆ. ಅದರಿಂದ ನನಗೆ ಕೆಲವೊಮ್ಮೆ ಮಾನಸಿಕವಾಗಿ ಹಿಂಸೆಯಾಗುತ್ತಿದ್ದು, ನಾನು ಯಾರ ಭಾವನೆಗೂ ಧಕ್ಕೆ ತರುವ ಹೇಳಿಕೆಯನ್ನಾಗಲಿ ನೀಡುವುದನ್ನು ಅಭ್ಯಾಸ ಮಾಡಿಕೊಂಡಿಲ್ಲ ಎಂದು ರಕ್ಷಕ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

     

    View this post on Instagram

     

    A post shared by rakshak sena (@rakshak_bullet)

    ನಾನು ಎಲ್ಲೇ ಹೋದರೂ ಜನ ಗುರುತಿಸಿ ಪ್ರೀತಿಸಿದ್ದಾರೆ. ಒಂದು ಶುಭ ಸುದ್ದಿಯೆಂದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಸಿನಿಮಾಗಳಿಗೆ ಅವಕಾಶ ಬಂದಿದ್ದು, ಅದರ ಕೆಲಸದಲ್ಲಿ ಸಕ್ರಿಯನಾಗಿದ್ದೇನೆ ಎಂದು ರಕ್ಷಕ್ ತಿಳಿಸಿದ್ದಾರೆ. ನನ್ನ ಪರಿಶ್ರಮದಿಂದ ಚಿತ್ರಗಳ ಮೂಲಕ ತಮ್ಮನ್ನು ರಂಜಿಸಿ ಮನೆ ಮಾಡುತ್ತೇನೆ ಎಂದು ರಕ್ಷಕ್ ಮನವಿ ಮಾಡಿದ್ದಾರೆ. ತಮ್ಮ ಬೆಂಬಲಿಸಿದವರಿಗೆ ಧನ್ಯವಾದ ತಿಳಿಸಿದ್ದು, ಶೀಘ್ರದಲ್ಲಿ ಹೊಸ ರೀತಿಯಲ್ಲಿ ನಿಮ್ಮ ಮುಂದೆ ಬರಲಿದ್ದೇನೆ ಎಂದು ರಕ್ಷಕ್ ಬರೆದುಕೊಂಡಿದ್ದಾರೆ.

    ಈ ಮೂಲಕ ಎಲ್ಲಾ ಟೀಕೆಗೆ, ಕೆಟ್ಟ ಟ್ರೋಲ್‌ಗಳಿಗೆ ರಕ್ಷಕ್ ಉತ್ತರ ನೀಡಿದ್ದಾರೆ. ತಮ್ಮ ಸಿನಿಮಾಗಳ ಮೂಲಕ ಅಭಿಮಾನಿಗಳಿಗೆ ರಂಜಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.

  • Breaking:   ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್

    Breaking: ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್

    ಬುಲೆಟ್ ಪುತ್ರ ರಕ್ಷಕ್ ಬುಲೆಟ್ (Rakshak Bullet) ಅವರು ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ (Bigg Boss Kannada 10) ಮನೆಯಿಂದ ಔಟ್ (Eliminate) ಆಗಿದ್ದಾರೆ. ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್‌ಗೆ ದೊಡ್ಮನೆಯ ಆಟ ಅಂತ್ಯವಾಗಿದೆ.

    ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ದೊಡ್ಮನೆಯ ಆಟಕ್ಕೆ ವಿದಾಯ ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ (Bigg Boss House) 2ನೇ ವಾರದ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದರು. ಮನೆಯ ಉತ್ತಮ ಆಟಗಾರ ಎಂದು ಕೂಡ ಗುರುತಿಸಿಕೊಂಡಿದ್ದರು. ಇದನ್ನೂ ಓದಿ:ಸುನಿ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್: ಶೂಟಿಂಗ್ ಮುಗಿಸಿದ ಟೀಮ್

    ಇತ್ತೀಚೆಗೆ ಡ್ರೋನ್ ಪ್ರತಾಪ್ (Drone Prathap) ಗೂಬೆ ಎಂದಿದ್ದಕ್ಕೆ ಕಿಚ್ಚ (Sudeep) ರಕ್ಷಕ್‌ಗೆ ಖಡಕ್ ಕ್ಲಾಸ್ ಕೂಡ ತೆಗೆದುಕೊಂಡಿದ್ದರು. ಟಾಸ್ಕ್, ಪಂಚಿಂಗ್ ಡೈಲಾಗ್ ಹೇಳೋದ್ರಲ್ಲಿ ರಕ್ಷಕ್ ಸದಾ ಮುಂದಿದ್ದರು. ರಕ್ಷಕ್ ಮನರಂಜನೆ ಕೂಡ ಫ್ಯಾನ್ಸ್‌ಗೆ ಖುಷಿಕೊಟ್ಟಿತ್ತು.

    ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್ ಬೇಸರಯುಂಟು ಮಾಡಿದೆ. ಆದರೆ ಮುಂಬರುವ ಸಿನಿಮಾಗಳಲ್ಲಿ ನಟನೆಯ ಮೂಲಕ ರಕ್ಷಕ್ ಮೋಡಿ ಮಾಡಲಿ ಎಂಬುದೇ ಅಭಿಮಾನಿಗಳ ಆಶಯ.

  • Big Boss Kannada: ಹೋಲ್ಡ್‌ನಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್

    Big Boss Kannada: ಹೋಲ್ಡ್‌ನಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್

    ‘ನನ್ನ ಮೇಲೆ ನೆಗೆಟಿವ್ ಇಮೇಜ್ ಕಟ್ಟಿದರು ಕೆಲವರು. ನನ್ನ ನಿಜವಾದ ಫೇಸ್ ತೋರಿಸಬೇಕು. ಅದನ್ನು ಮನೆಯೊಳಗೆ ಖಂಡಿತ ತೋರಿಸ್ತೀನಿ. ಬದುಕಿನಲ್ಲಿ ಪಾಸಿಟಿವ್ ನೆಗೆಟಿವ್ ಎರಡೂ ಇರಬೇಕು’ ಎಂದು ವಯಸ್ಸಿಗೂ ಮೀರಿ ಪ್ರಬುದ್ಧವಾಗಿ ಮಾತಾಡುವ ಹುಡುಗ ರಕ್ಷಕ್‌ (Rakshak), ಹಿರಿಯ ಹಾಸ್ಯನಟ ಬುಲೆಟ್ ಪ್ರಕಾಶ್‌ (Bullet Prakash) ಅವರ ಪುತ್ರ.

    ‘ಜನರ ಬಾಯಿ ಮುಚ್ಚಿಸಲಾಗದು. ಟ್ರೋಲ್, ರೋಸ್ಟ್‌ ಮಾಡಿದರು ಜನರು… ಅದಕ್ಕೆಲ್ಲ ಕೇರ್ ಮಾಡಲ್ಲ. ನನ್ನ ಸ್ವಂತ ಐಡೆಂಟಿಟಿಯೊಂದಿಗೆ ಬಿಗ್‌ಬಾಸ್ ಮನೆಯೊಳಗೆ ಹೋಗ್ತೀನಿ’ ಎಂದು ನೇರವಾಗಿ ಮಾತಾಡುವ ರಕ್ಷಕ್‌, ಕೌಟುಂಬಿಕ ಪ್ರೇಕ್ಷಕರ ಮನಸಲ್ಲಿ ಜಾಗ ಕಂಡುಕೊಳ್ಳುವ ಉದ್ದೇಶವನ್ನು ಇಟ್ಟುಕೊಂಡು ಬಿಗ್‌ಬಾಸ್ ವೇದಿಕೆಗೆ ಬಂದಿದ್ದರು.

    ‘ರಾಜಕೀಯ ಸಿನಿಮಾ ಎರಡರಲ್ಲಿಯೂ ನೆಗೆಟಿವ್ ಪಾಸಿಟಿವ್ ಎರಡೂ ಇರತ್ತೆ. ಹೋಗುತ್ತಾ ಹೋಗುತ್ತಾ ಈ ನೆಗೆಟಿವೇ ಪಾಸಿಟಿವ್ ಆಗುತ್ತದೆ’ ಎನ್ನುವ ನಂಬಿಕೆಯಲ್ಲಿರುವ ರಕ್ಷಕ್‌ ಅವರು ಮನೆಯೊಳಗೆ ಮಾತುಗಳಿಗೆ ಸೆನ್ಸಾರ್ ಅಳವಡಿಸಿಕೊಂಡೇ ಮನೆಯೊಳಗೆ ಹೋಗಲು ನಿರ್ಧರಿಸಿದ್ದರು. ‘ನನ್ನ ರಿಯಲ್ ಫೇಸ್‌ ನೋಡಲಿಕ್ಕಾಗಿ ನನಗೆ ವೋಟ್ ಮಾಡಿ’ ಎಂಬ ರಕ್ಷಕ್ ಮನವಿಗೆ ಜನರು 53% ವೋಟ್ ಮಾಡಿ ಹೋಲ್ಡ್‌ನಲ್ಲಿ ಇಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರ ದಾಳಿ

    ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರ ದಾಳಿ

    ಬೆಂಗಳೂರು: ಹಾಸ್ಯ ನಟ ದಿ.ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಪ್ರಕರಣ ನಗರದ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ.

    ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ಬರುತ್ತಿದ್ದಾಗ ಹೆಬ್ಬಾಳ ಫ್ಲೈ ಓವರ್ ಬಳಿ ದಿ.ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ಮಾಡಿದ್ದಾರೆ. ಮಂಗಳಮುಖಿಯರು ಬ್ಯಾಗ್ ಇಡಿದು ಎಳೆದ ಕಾರಣ ರಕ್ಷಕ್ ಗಾಡಿಯಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಿಂದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ದ್ವಿಚಕ್ರ ವಾಹನ ಸಹ ಡ್ಯಾಮೇಜ್ ಆಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ ಸಂಬಂಧ ಯಾರ ಒತ್ತಡಕ್ಕೂ ಪೊಲೀಸರು ಹಿಂಜರಿಯುವುದಿಲ್ಲ: ಅರಗ ಜ್ಞಾನೇಂದ್ರ

    ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ರಕ್ಷಕ್ ದ್ವಿಚಕ್ರ ವಾಹನವನ್ನು ಫ್ಲೈಓವರ್ ಮೇಲೆ ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದರು. ಬಳಿಕ ಹೆಬ್ಬಾಳ ಪೊಲೀಸರ ನೆರವಿನಿಂದ ಗಾಡಿಯನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಚಂದನವನಕ್ಕೆ ಬುಲೆಟ್ ಪ್ರಕಾಶ್ ಪುತ್ರನ ಎಂಟ್ರಿ

    ಚಂದನವನಕ್ಕೆ ಬುಲೆಟ್ ಪ್ರಕಾಶ್ ಪುತ್ರನ ಎಂಟ್ರಿ

    ಬೆಂಗಳೂರು: ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡೋದು ಪಕ್ಕಾ ಆಗಿದೆ. ಈಗಾಗಲೇ ಒಂದು ಶೆಡ್ಯೂಲ್ ಕಂಪ್ಲೀಟ್ ಮಾಡಿಕೊಂಡು ಬಂದಿರು ರಕ್ಷಕ್ ಮುಂದಿನ ಕೆಲಸಕ್ಕೆ ಸಜ್ಜಾಗ್ತಿದ್ದಾರೆ.

    ಗುರುಶಿಷ್ಯರು ಹಿರಿಯನಟ ದ್ವಾರಕೀಶ್ ನಟಿಸಿ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ದಾಖಲಾಗಿರುವ ಸೂಪರ್ ಹಿಟ್ ಸಿನಿಮಾ. ಈ ಟೈಟಲ್‍ನಲ್ಲಿ ಶರಣ್ ಮತ್ತು ತಂಡದವರು ಹೊಸ ಕಥೆ ಹೇಳು ಹೊರಟಿದ್ದಾರೆ. ಜಡೇಶ್ ಗುರುಶಿಷ್ಯರು ಕಥೆಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ತರುಣಿ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಶರಣ್ ಶಿಷ್ಯನ ಪಾತ್ರ ಮಾಡ್ತಿದ್ದಾರೆ ರಕ್ಷಕ್. ನೆನಪಿರಲಿ ಪ್ರೇಮ್ ಪುತ್ರ ಏಕಾಂತ್ ಕೂಡ ಗುರುಶಿಷ್ಯರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ಬಹಳಷ್ಟು ಕಲಾವಿದರು ಮಕ್ಕಳು ಗುರುಶಿಷ್ಯರು ಸಿನಿಮಾದಲ್ಲಿ ನಟಿಸಿದ್ದಾರೆ ಅನ್ನೊ ಮಾಹಿತಿ ಸಿಕ್ಕಿದೆ.

    ಯಾವ ಯಾವ ಸ್ಟಾರ್ ಮಕ್ಕಳು ಯಾವ ಪಾತ್ರ ಮಾಡುತ್ತಿದ್ದಾರೆ ಅನ್ನೋದು ಈ ತಿಂಗಳ ಅಂತ್ಯದಲ್ಲಿ ಚಿತ್ರತಂಡ ಹೇಳಲಿದೆ. ಮಗನನ್ನ ಹೀರೋ ಮಾಡಬೇಕು ಅಂತ ಬುಲೆಟ್ ಪ್ರಕಾಶ್ ಬಹಳ ಯೋಚನೆ ಮಾಡಿದ್ದರು. ಫೈಟ್, ಡ್ಯಾನ್ಸ್, ಜಿಮ್ ಅಂತ ಆಗಲೇ ತಯಾರಿ ಆರಂಭಿಸಿದ್ದರು. ಆದ್ರೆ ಮಗ ಬಣ್ಣ ಹಚ್ಚುವ ಮೊದಲೇ ಅನಾರೋಗ್ಯದಿಂದ ಬುಲೆಟ್ ಪ್ರಕಾಶ್ ನಿಧನರಾಗಿದ್ದಾರೆ. ಅಪ್ಪನ ಆಸೆಯಂತೆ ಬುಲೆಟ್ ಸ್ನೇಹಿತರ ಮಾರ್ಗದರ್ಶನದಂತೆ ಮೊದಲ ಸಿನಿಮಾಗೆ ರಕ್ಷಕ್ ಬಣ್ಣ ಹಚ್ಚಿದ್ದಾರೆ. ಮುಂದಿನ ತಿಂಗಳು ಗುರುಶಿಷ್ಯರು ಸಿನಿಮಾ ಮತ್ತೊಂದು ಶೆಡ್ಯೂಲ್ ಪ್ಲಾನ್ ಆಗಿದೆ.

  • ಹೆಬ್ಬಾಳ ರುದ್ರಭೂಮಿಯಲ್ಲಿ ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

    ಹೆಬ್ಬಾಳ ರುದ್ರಭೂಮಿಯಲ್ಲಿ ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

    ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಸೋಮವಾರ ಕೊನೆಯುಸಿರೆಳೆದಿದ್ದರು. ಇಂದು ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹೆಬ್ಬಾಳದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.

    ತೆರೆದ ವಾಹನದಲ್ಲಿ ಮನೆಯಿಂದ ಹೆಬ್ಬಾಳ ರುದ್ರಭೂಮಿವರೆಗೆ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ತರಲಾಯಿತು. ಲಾಕ್‍ಡೌನ್ ಜಾರಿಯಲ್ಲಿರುವ ಹಿನ್ನೆಲೆ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದೆ. ಹೀಗಾಗಿ ಪೊಲೀಸರು ಅಂತ್ಯಸಂಸ್ಕಾರದಲ್ಲಿ ಪ್ರಕಾಶ್ ಕುಟುಂಬಸ್ಥರು ಮಾತ್ರ ಭಾಗಿಯಾಗಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಹೀಗಾಗಿ ರುದ್ರಭೂಮಿಯತ್ತ ಆಗಮಿಸಿದ್ದ ಅಭಿಮಾನಿಗಳನ್ನ ಪೊಲೀಸರು ತಡೆದಿದ್ದರು. ತಂದೆಯ ಅಂತಿಮ ಕಾರ್ಯವನ್ನು ಪುತ್ರ ರಕ್ಷಕ್ ನೆರವೇರಿಸಿದ್ದು, ಮಡಿವಾಳ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯಿತು.

    44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು.

  • ಗೆಳೆಯನ ಮಗಳ ಮದ್ವೆ ಜವಾಬ್ದಾರಿ ಹೊತ್ತ ದರ್ಶನ್

    ಗೆಳೆಯನ ಮಗಳ ಮದ್ವೆ ಜವಾಬ್ದಾರಿ ಹೊತ್ತ ದರ್ಶನ್

    ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಒಂದು ಬಹುದೊಡ್ಡ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಮೂಲಕ ಪ್ರಕಾಶ್ ಅವರ ಕುಟುಂಬದವರಿಗೆ ನೆರವಾಗಿದ್ದಾರೆ.

    ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ತಕ್ಷಣ ನಟ ದರ್ಶನ್ ಅವರ ಕುಟುಂಬಸ್ಥರಿಗೆ ಫೋನ್ ಮಾಡಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ನಿಮ್ಮ ಕಷ್ಟಕ್ಕಾಗುವ ಹಾಗೂ ಮಗಳ ಮದುವೆ ಮಾಡಿಸುವ ಜವಾಬ್ದಾರಿ ನನ್ನ ಮೇಲಿರಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

    ಟ್ವಿಟ್ಟರಿನಲ್ಲಿ ಕೂಡ ಬುಲೆಟ್ ಪ್ರಕಾಶ್ ಜೊತೆಗಿರುವ ಫೋಟೋವನ್ನು ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ. “ಹಾಸ್ಯ ಕಲಾವಿದರಾದ ಬುಲೆಟ್ ಪ್ರಕಾಶ್ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ನೋವಿನಿಂದ ಬರೆದುಕೊಂಡಿದ್ದಾರೆ.

    ದರ್ಶನ್ ಮತ್ತು ಬುಲೆಟ್ ಪ್ರಕಾಶ್ ತುಂಬಾ ಆತ್ಮೀಯರಾಗಿದ್ದರು. ದರ್ಶನ್ ಪ್ರತಿಯೊಂದು ಸಿನಿಮಾದಲ್ಲೂ ಬುಲೆಟ್ ಪ್ರಕಾಶ್ ಒಂದು ಪಾತ್ರ ಮಾಡುತ್ತಿದ್ದರು. ಹೀಗಾಗಿ ದರ್ಶನ್ ಮತ್ತು ಪ್ರಕಾಶ್ ಜೊತೆಗಿನ ಕಾಂಬಿನೇಷನ್ ಭಾರೀ ಕಚಗುಳಿ ಇಡುತ್ತಿತ್ತು.

    44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು. ಇಂದು ಮಧ್ಯಾಹ್ನ 12 ಗಂಟೆಗೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಲಾಕ್‍ಡೌನ್ ನಿಯಮದ ಪ್ರಕಾರ ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗಿಯಾಗುವ ಅವಕಾಶ ನೀಡಲಾಗಿದೆ.

  • ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

    ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

    ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದು, ಕೊನೆಯ ಬಾರಿಗೆ ಅವರನ್ನು ನೋಡಲು ಆಗಲಿಲ್ಲ ಎಂದು ಬೆಸರ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ನನ್ನ ಸ್ನೇಹಿತ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೇಳಿದಾಗ ಬೇಸರವಾಯಿತು. ಇನ್ನೂ ಹೆಚ್ಚು ದುಃಖಕರವಾದ ಸಂಗತಿಯೆಂದರೆ ಸಿನಿಮಾ ಉದ್ಯಮದ ಸ್ನೇಹಿತರು ಕೊನೆಯ ಬಾರಿಗೆ ಅವರನ್ನು ನೋಡಲು ಅವರ ಮನೆಗೆ ಭೇಟಿ ನೀಡಲು ಸಾಧ್ಯವಿಲ್ಲ. ಬಲೆಟ್ ಪ್ರಕಾಶ್ ಇದ್ದಲ್ಲಿ ನಗು ಇರುತ್ತಿತ್ತು. ಅವರೊಬ್ಬ ಅದ್ಭುತ ನಟ. ನನ್ನ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗಿನ ಕಾಂಬಿನೇಷನ್ ಭಾರೀ ಕಚಗುಳಿ ಇಡ್ತಿತ್ತು. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಬುಲೆಟ್ ಪ್ರಕಾಶ್ ಅವರ ನಿಧನದ ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ರಂಗಾಯಣ ರಘು ಅವರು, ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದರು. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು ನೆನೆದಿದ್ದರು.

    ಸಿನಿಮಾದಲ್ಲಿ ಹಾಸ್ಯನಟನಾಗಿ ಖ್ಯಾತಿ ಪಡೆದಿದ್ದ ಬುಲೆಟ್, ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಸ್ನೇಹಿಮುಖಿಯಾಗಿದ್ದ ಬುಲೆಟ್ ಪ್ರಕಾಶ್ ಅವರು ಅಷ್ಟೇ ನೇರನುಡಿ ಹೊಂದಿದ ವ್ಯಕ್ತಿಯಾಗಿದ್ದರು.

  • ಬದುಕಿನಲ್ಲಿ ಭರವಸೆ ಇದ್ರೆ ಭವಿಷ್ಯ ರೂಪಿಸುವ ದಾರಿ ಕಾಣಿಸ್ತದೆ: ಬುಲೆಟ್ ಪ್ರಕಾಶ್

    ಬದುಕಿನಲ್ಲಿ ಭರವಸೆ ಇದ್ರೆ ಭವಿಷ್ಯ ರೂಪಿಸುವ ದಾರಿ ಕಾಣಿಸ್ತದೆ: ಬುಲೆಟ್ ಪ್ರಕಾಶ್

    ಬೆಂಗಳೂರು: “ಬದುಕಿನಲ್ಲಿ ಭರವಸೆ ಇದ್ದರೆ ಭವ್ಯ ಭವಿಷ್ಯವನ್ನು ರೂಪಿಸುವ ದಾರಿ ಅದಾಗೆ ಕಾಣಿಸುತ್ತದೆ” ಇದು ಇಂದು ನಿಧನರಾದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಟ್ವಿಟ್ಟರ್ ಕವರ್ ಪೇಜ್‍ನಲ್ಲಿರುವ ಸಾಲುಗಳು.

    ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿದ್ದ ಬುಲೆಟ್ ಪ್ರಕಾಶ್ ಕೊನೆಯದಾಗಿ ಮಾಚ್ 13 ರಂದು ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಯಡಿಯೂರಪ್ಪನವರ ಟ್ವೀಟ್ ಅನ್ನು ಲೈಕ್ ಮಾಡಿದ್ದರು. ಜ.29 ರಂದು ಟ್ವೀಟ್ ಮಾಡಿದ್ದ ಅವರು, ಸಿದ್ಲಿಂಗು, ನೀರು ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ನಿರ್ದೇಶನದ ಸಹೃದಯಿ ನಿರ್ಮಾಪಕ ಪ್ರಸನ್ನ ನಿರ್ಮಾಣದ ಪರಿಮಳಾ ಲಾಡ್ಜ್ ಚಿತ್ರದ ಚಿತ್ರೀಕರಣದಲ್ಲಿ ತೆಗೆದ ಫೋಟೋ ಎಂದು ಬರೆದು ಟ್ವೀಟ್ ಮಾಡಿದ್ದರು.

    ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದರು. ಗಾಳಿಪಟ-2 ಚಿತ್ರೀಕರಣದ ಸಂದರ್ಭದಲ್ಲಿ ನಿರ್ದೇಶಕರಾದ ಯೋಗರಾಜ್ ಭಟ್ ಮತ್ತು ನಾಯಕ ನಟ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಫೋಟೋ ಕ್ಲಿಕ್ ಎಂದು ಬರೆದುಕೊಂಡಿದ್ದರು.

    ಸಿನಿಮಾದಲ್ಲಿ ನಟನೆಯ ಜೊತೆಗೆ ಬಿಜೆಪಿ ನಾಯಕರಾಗಿಯೂ ಗುರುತಿಸಿಕೊಂಡಿದ್ದ ಪ್ರಕಾಶ್ ಅವರು, ಇತ್ತೀಚೆಗೆ ದೆಹಲಿ ನಿರ್ಭಯಾ ಪ್ರಕರಣದ ಬಗ್ಗೆಯೂ ಟ್ವೀಟ್ ಮಾಡಿದ್ದರು, ನಿರ್ಭಯಾ ಆರೋಪಿಗಳ ಫೋಟೋ ಹಾಕಿ, ನಿರ್ಭಯಾ ಪ್ರಕರಣದಲ್ಲಿ 85 ತಿಂಗಳುಗಳ ನಂತರ ಗಲ್ಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ. ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ. ಈಗಲಾದರೂ ಆ ಹೆಣ್ಣು ಮಗುವಿನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದರು.

    ಸಿನಿಮಾದಲ್ಲಿ ಹಾಸ್ಯನಟನಾಗಿ ಖ್ಯಾತಿ ಪಡೆದಿದ್ದ ಬುಲೆಟ್, ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯಕ್ಕೆ ತುತ್ತಾದಾಗ ಅವರ ಫೋಟೋವನ್ನು ಟ್ವೀಟ್ ಮಾಡಿ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆರೋಗ್ಯ ಸುಧಾರಿಸಿ, ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆನೆ ಎಂದು ಬರೆದುಕೊಂಡಿದ್ದರು.

    ಸ್ನೇಹಿಮುಖಿಯಾಗಿದ್ದ ಬುಲೆಟ್ ಪ್ರಕಾಶ್ ಅವರು ಅಷ್ಟೇ ನೇರನುಡಿ ಹೊಂದಿದ ವ್ಯಕ್ತಿಯಾಗಿದ್ದರು. ಸಮಾಜ ಬಗ್ಗೆ ಅತೀವ ಕಾಳಜಿ ಹೊಂದಿದ್ದ ಅವರು, ಹೈದರಾಬಾದ್‍ನ ಪಶುವೈದ್ಯೆ ದಿಶಾ ಅತ್ಯಾಚಾರ ಹಾಗೂ ಕೊಲೆ ಮಾಡಿದ್ದ ಪಾಪಿಗಳನ್ನು ಎನ್ ಕೌಂಟರ್ ಮಾಡಿದ ಸೈಬರಾಬಾದ್ ಪೋಲಿಸ್ ಕಮಿಷನರ್ ವಿಶ್ವನಾಥ್ ಸಜ್ಜನರ್ ತಂಡಕ್ಕೆ ಹ್ಯಾಟ್ಸ್ ಆಫ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

    44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗಿನ ಕಾಂಬಿನೇಷನ್ ಬಾರೀ ಕಚಗುಳಿ ಇಡ್ತಿತ್ತು. ನಾಳೆ ಮಧ್ಯಾಹ್ನ 12 ಗಂಟೆಗೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.