Tag: Bullet

  • ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪಡೆದಿದ್ದ ಶಶಿಧರ್ ಮೇಲೆ ಫೈರಿಂಗ್

    ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪಡೆದಿದ್ದ ಶಶಿಧರ್ ಮೇಲೆ ಫೈರಿಂಗ್

    ವಿಜಯಪುರ: ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಪಿಎಸ್‍ಐ ಮತ್ತು ಪೇದೆ ಮೇಲೆ ಚಾಕುನಿಂದ ಹಲ್ಲೆ ನಡೆಸಿರುವ ಘಟನೆ ವಿಜಯಪುರದ ಇಂಡಿ ತಾಲೂಕಿನ ಬರಡೋಲ ಗ್ರಾಮದ ಬಳಿ ನಡೆದಿದೆ.

    ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪಡೆದ ಆರೋಪ ಎದುರಿಸುತ್ತಿರುವ ಶಶಿಧರ್ ಮುಂಡೆವಾಡಿ ಅಕ್ರಮ ಪಿಸ್ತೂಲ್ ಸಾಗಾಟ ಮಾಡುತ್ತಿದ್ದ ಶಂಕೆಯ ಮೇಲೆ ಆತ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಚಡಚಣ ಪಿಎಸ್‍ಐ ಗೋಪಾಲ್ ಹಳ್ಳುರ ತಪಾಸಣೆಗೆ ಮುಂದಾಗಿದ್ದರು. ಈ ವೇಳೆ ಶಶಿಧರ್ ಪಿಎಸ್‍ಐ ಗೋಪಾಲ ಹಳ್ಳೂರ್ ಹಾಗೂ ಓರ್ವ ಪೇದೆ ಮೇಲೆ ಚಾಕೂವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.

    ಶಶಿಧರ್ ಮುಂಡೆವಾಡಿ ಹಲ್ಲೆ ನಡೆಸಿದ ಸಮಯದಲ್ಲಿ ಪಿಎಸ್‍ಐ ಗೋಪಾಲ್ ಹಳ್ಳೂರ್ ಕೈಗೆ ತಾಗಿದ್ದು, ಪೇದೆಗೂ ಗಾಯವಾಗಿದೆ. ಈ ವೇಳೆ ಪಿಎಸ್‍ಐ ಗೋಪಾಲ ಅವರು ತಮ್ಮ ರಕ್ಷಣೆಗಾಗಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಅದರೂ ಆರೋಪಿ ಜಗ್ಗದ ಕಾರಣ ಶಶಿಧರ್ ಮುಂಡೆವಾಡಿ ಕಾಲಿಗೆ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಶಶಿಧರ್ ಮುಂಡೆವಾಡಿ ಹಾಗೂ ಚಾಕುವಿನಿಂದ ಹಲ್ಲೆಗೆ ಒಳಗಾಗಿದ್ದ ಪಿಎಸ್‍ಐ ಗೋಪಾಲ್ ಮತ್ತು ಪೇದೆಯನ್ನು ಚಡಚಣ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ವಿಜಯಪುರದ ಬಿಎಲ್‍ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪೊಲೀಸ್ ದಾಳಿಯ ವೇಳೆ ಶಶಿಧರ್ ನಿಂದ ಎರಡು ನಾಡ ಪಿಸ್ತೂಲ್, ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಸುದ್ದಿ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್‍ಪಿ ಶಿವಕುಮಾರ್ ಗುಣಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶಶಿಧರ್ ನನ್ನು ದಾಖಲಿಸಿರುವ ಆಸ್ಪತ್ರೆಗೆ ಇಂಡಿ ಪೊಲೀಸ್ ವಲಯದಿಂದ ಹೆಚ್ಚುವರಿ ಬೀಗಿ ಪೊಲೀಸ್ ಬಂದೋಬಸ್ತು ನಿಯೋಜಿಸಿಲಾಗಿದೆ.

  • ಬೆಂಗ್ಳೂರಲ್ಲಿ ಗುಂಡಿನ ಮೊರೆತ- ಸಿನಿಮಾ ಸ್ಟೈಲ್‍ನಲ್ಲಿ ಮಹಿಳೆ ಮೇಲೆ ಫೈರಿಂಗ್

    ಬೆಂಗ್ಳೂರಲ್ಲಿ ಗುಂಡಿನ ಮೊರೆತ- ಸಿನಿಮಾ ಸ್ಟೈಲ್‍ನಲ್ಲಿ ಮಹಿಳೆ ಮೇಲೆ ಫೈರಿಂಗ್

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಆರ್ಭಟಿಸಿದೆ. ಸಿನಿಮಾ ಸ್ಟೈಲ್‍ನಲ್ಲಿ ಮಹಿಳೆಯ ಮೇಲೆ ದಾಳಿ ಮಾಡಿದ್ದು, ದುಷ್ಕರ್ಮಿಗಳ ದಾಳಿಗೆ ತುತ್ತಾಗಿದ್ದ ಮಹಿಳೆ ಕೂದಲೆಳೆಯ ಅಂತರದಲ್ಲಿ ಸಾವು ಗೆದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ನಗರದ ವಿದ್ಯಾರಣ್ಯಪುರದ ಹನುಮಾನ್ ಲೇಔಟ್‍ನಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಸ್ಪ್ಲೆಂಡರ್ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಿಂಧು ಎಂಬವರ ಮೇಲೆ ಎರಡು ಸುತ್ತು ಫೈರ್ ಮಾಡಿ, ಎಸ್ಕೇಪ್ ಆಗಿದ್ದಾರೆ. ಈ ಘಟನೆಯಲ್ಲಿ ಸಿಂಧು ಕೂದಲೆಳೆಯ ಅಂತರದಲ್ಲಿ ಸಾವು ಗೆದ್ದಿದ್ದಾರೆ. ಆದರೆ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಿಂಧು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಹನುಮಾನ್ ಲೇಔಟ್ ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ ಕೆಲಸದ ಬಳಿಕ ಹನುಮಾನ್ ಲೇಔಟ್‍ನ 1 ನೇ ಅಡ್ಡರಸ್ತೆಯಲ್ಲಿರುವ ಅಕ್ಕನ ಮನೆಯಲ್ಲಿದ್ದ ಇಬ್ಬರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಲು ಸ್ಕೂಟಿಯಲ್ಲಿ ಬಂದಿದ್ದರು. ಈ ವೇಳೆ ಒಂಟಿಯಾಗಿ ಹೋಗುತ್ತಿದ್ದ ಸಿಂಧು ಮೇಲೆ ಇಬ್ಬರು ಆಗಂತುಕರು ದಾಳಿ ಮಾಡಿ, ಅವರ ಬಳಿ ಇದ್ದ ವ್ಯಾನಿಟಿ ಬ್ಯಾಗ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಆಗ ಸಿಂಧು ಅದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಸುಲಿಗೆಕೋರ ತನ್ನ ಬಳಿ ಇದ್ದ ಗನ್‍ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಸಿಂಧು ಕಿರುಚಾಡಿಕೊಂಡಿದ್ದರಿಂದ ಗಾಬರಿಗೊಂಡ ಆರೋಪಿಗಳಿಬ್ಬರು ಎಸ್ಕೇಪ್ ಆಗಿದ್ದಾರೆ ಎಂದು ಈಶಾನ್ಯ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

    ಈ ಘಟನೆ ಬಳಿಕ ವಿದ್ಯಾರಣ್ಯಪುರ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೈರಿಂಗ್ ಆಗಿರೋದು ದೃಢಪಟ್ಟ ಬಳಿಕ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡ ಮತ್ತು ಶ್ವಾನ ದಳ ಸಿಬ್ಬಂದಿ ಕೂಡ ಪರಿಶೀಲನೆ ನಡೆಸಿದ್ದಾರೆ.

    ಈ ಘಟನೆ ಕುರಿತು ವಿದ್ಯಾರಣ್ಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೆಲ ಪ್ರತ್ಯಕ್ಷದರ್ಶಿಗಳ ಹೇಳಿಕೆ ಮತ್ತು ಕೆಲ ಸಿಸಿಟಿವಿ ದೃಶ್ಯಾವಳಿ ಆಧಾರದ ಮೇರೆಗೆ ತನಿಖೆ ಮುಂದುವರೆಸಿದ್ದಾರೆ. ಸದ್ಯಕ್ಕೆ ಸುಲಿಗೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

  • ಜಯಾ ಸ್ಮಾರಕದ ಮುಂದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೇದೆ!

    ಜಯಾ ಸ್ಮಾರಕದ ಮುಂದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೇದೆ!

    ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸ್ಮಾರಕಕ್ಕೆ ಭದ್ರತೆಗೆಂದು ನಿಯೋಜನೆಗೊಂಡಿದ್ದ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

    ಮಧುರೈ ಮೂಲದ ಅರುಣ್ ರಾಜ್(28) ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ. ಮೃತ ಅರುಣ್ ಗ್ರೇಟರ್ ಚೆನ್ನೈ ಸಿಟಿ ಪೊಲೀಸ್ ನ ಶಸ್ತ್ರಾಸ್ತ್ರ ಪಡೆಯ ಪೇದೆಯಾಗಿದ್ದರು. ನಗರದ ಮರೀನಾ ಬೀಚ್‍ನಲ್ಲಿರುವ ಜಯಲಲಿತಾ ಸ್ಮಾರಕದ ಭದ್ರತೆಗೆ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ ಪೈಕಿ ಅರುಣ್ ಕೂಡ ಒಬ್ಬರಾಗಿದ್ದರು.

    ಇಂದು ಬೆಳಗ್ಗೆ ಸ್ಮಾರಕದಲ್ಲಿ ಕರ್ತವ್ಯಕ್ಕೆ ಬಂದಿದ್ದ ಅರುಣ್ ಏಕಾಏಕಿ ತನ್ನ ‘303’ ಸರ್ವೀಸ್ ಬಂದೂಕಿನಿಂದ ಸ್ಮಾರಕ ಸ್ಥಳದಲ್ಲೇ ಗುಂಡು ಹಾರಿಸಿಕೊಂಡಿದ್ದಾರೆ. ಸ್ಥಳದಲ್ಲೇ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ನಗರದ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿ ಪೇದೆ ಅರುಣ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಪೇದೆ ಅರುಣ್ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದರ ಬಗ್ಗೆ ಸುಳಿವು ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಎ.ಕೆ. ವಿಶ್ವನಾಥನ್ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮರೀನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅತಿಥಿ ಹಾರಿಸಿದ ಗುಂಡಿಗೆ ಮದುಮಗನ ಪ್ರಾಣವೇ ಹೋಯ್ತು!

    ಅತಿಥಿ ಹಾರಿಸಿದ ಗುಂಡಿಗೆ ಮದುಮಗನ ಪ್ರಾಣವೇ ಹೋಯ್ತು!

    ನವದೆಹಲಿ: ವಿವಾಹ ಸಮಾರಂಭದ ಸಂಭ್ರಮದಲ್ಲಿ ಗುಂಡು ಹಾರಿಸುವ ಪದ್ದತಿ ವಿವಿಧೆಡೆ ಚಾಲ್ತಿಯಲ್ಲಿದೆ. ಈ ಸಂಭ್ರಮವೇ ಸಾವಿಗೆ ಕಾರಣವಾಗುತ್ತಿದ್ದು, ಈಗ ಮತ್ತೊಂದು ಅಂತಹುದೇ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

    ಈಶಾನ್ಯ ದೆಹಲಿಯ ಸೀಮಾಪುರಿಯಲ್ಲಿ ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮದುವೆ ಮೆರವಣಿಗೆಯಲ್ಲಿ ಬರುತ್ತಿದ್ದ ಮದುಮಗ ದೀಪಕ್ ಕುಮಾರ್ (21) ಸಂಭ್ರಮಾಚರಣೆಯ ಫೈರಿಂಗ್ ಗೆ ಬಲಿಯಾಗಿದ್ದಾನೆ.

    ಮಂಗಳವಾರ ರಾತ್ರಿ ಸುಮಾರು 8 ಗಂಟೆಗೆ ಸೀಮಪುರಿಯಲ್ಲಿ ಮನೆಯಿಂದ ಮದುವೆಯ ಮೆರವಣಿಗೆ ಹೊರಟಿತ್ತು. ಮದುವೆಯ ಮೆರವಣಿಗೆಯ ಸಂದರ್ಭದಲ್ಲಿ ಕುಡುಕನೊಬ್ಬ ಎರಡು ಗುಂಡು ಹಾರಿಸಿದ್ದಾನೆ. ಒಂದು ಗುಂಡು ವರ ದೀಪಕ್ ತಲೆಯ ಹಿಂಭಾಗಕ್ಕೆ ಬಿದ್ದಿದೆ. ತಕ್ಷಣ ದೀಪಕ್ ಕುಮಾರ್ ಕುದುರೆಯಿಂದ ಕೆಳಗೆ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಗುರುತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸುಮಾರು 2 ಸಾವನ್ನಪ್ಪಿದ್ದಾನೆ.

    ಆರೋಪಿಯನ್ನು ಪೂರ್ವ ದೆಹಲಿಯ ಶಹೀದ್ ನಗರ ನಿವಾಸಿ ಆದಿಲ್ ಎಂದು ಗುರುತಿಸಲಾಗಿದೆ. ಆದಿಲ್ ಮದುವೆ ಅತಿಥಿಯಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಕುಟುಂಬದ ಸದಸ್ಯರು ದೀಪಕ್ ಕುಮಾರ್ ನನ್ನು ಕೊಲೆ ಮಾಡಲಾಗಿದೆ. ಈ ಕೃತ್ಯದಲ್ಲಿ ನೆರೆಮನೆಯವರ ಪಾತ್ರ ಇದೆ ಎಂದು ಆರೋಪಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ನಪುರ್ ಪ್ರಸಾದ್ ತಿಳಿಸಿದ್ದಾರೆ.

    ಈ ಅವಘಡದಲ್ಲಿ ಇನ್ನೊಂದು ಗುಂಡು ಕುದುರೆಯ ಮೇಲೆ ಕುಳಿತ್ತಿದ್ದ ಮಗುವಿಗೆ ಬಿದ್ದಿದೆ. ಆದರೆ ಅದೃಷ್ಟವಶಾತ್ ಮಗು ಪಾರಾಗಿದೆ. ಕುಟುಂಬ ಸದಸ್ಯರು ನೆರೆಮನೆಯ ಮುಂದೆ ರಸ್ತೆಯ ಮೇಲೆ ದೇಹವನ್ನು ಇಟ್ಟು ಪ್ರತಿಭಟನೆ ನಡೆಸುತ್ತಿದ್ದರು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿ ವಿರುದ್ಧ ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

    ಮದುಮಗ ಆನಂದ್ ವಿಹಾರ್ ನಲ್ಲಿರುವ ಖಾಸಗಿ ಬಸ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಈತ ತಾಯಿ ರಾಧಾ ದೇವಿ, ಸಹೋದರ ಶಿವ ಮತ್ತು ಅವರ ಪತ್ನಿ, ಮತ್ತು ಇಬ್ಬರು ವಿವಾಹಿತ ಸಹೋದರಿಯಾದ ಸೋನಮ್ ಮತ್ತು ಮೀನಾಕ್ಷಿ ಜೊತೆ ವಾಸಿಸುತ್ತಿದ್ದನು. ಈ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

  • ಸ್ಪ್ಲೆಂಡರ್, ಬುಲೆಟ್ ನಡುವೆ ಮುಖಾಮುಖಿ ಡಿಕ್ಕಿ – ರಸ್ತೆ ಮಧ್ಯೆ ಗಾಯಾಳುಗಳ ನರಳಾಟ

    ಸ್ಪ್ಲೆಂಡರ್, ಬುಲೆಟ್ ನಡುವೆ ಮುಖಾಮುಖಿ ಡಿಕ್ಕಿ – ರಸ್ತೆ ಮಧ್ಯೆ ಗಾಯಾಳುಗಳ ನರಳಾಟ

    ಚಿಕ್ಕಬಳ್ಳಾಪುರ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಮೂವರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ರಸ್ತೆ ಮಧ್ಯೆ ನರಳಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಏನಿಗದೆಲೆ ಕ್ರಾಸ್ ಬಳಿ ನಡೆದಿದೆ.

    ಬುಲೆಟ್ ಹಾಗೂ ಸ್ಪ್ಲೆಂಡರ್ ನಡುವೆ ಅಪಘಾತ ಸಂಭವಿಸಿದೆ. ಬುಲೆಟ್ ಸವಾರ ಚೇಳೂರು ಗ್ರಾಮದ ಚಂದ್ರಶೇಖರ್ ಹಾಗೂ ಬತ್ತಲಹಳ್ಳಿ ಗ್ರಾಮದವರಾದ ವೆಂಕಟರೋಣಪ್ಪ ಹಾಗೂ ಆತನ ಸ್ನೇಹಿತ ಗಾಯಗೊಂಡಿದ್ದಾರೆ.

    ಅಪಘಾತ ನಂತರ ಆಂಬ್ಯುಲೆನ್ಸ್ ಸಕಾಲಕ್ಕೆ ಬಾರದ ಹಿನ್ನೆಲೆ, ಅರ್ಧ ಗಂಟೆಗೂ ಹೆಚ್ಚು ಕಾಲ ಮೂವರು ಗಾಯಾಳುಗಳು ರಸ್ತೆ ಮಧ್ಯೆ ನರಳಾಡಿದ್ದಾರೆ. ಕೊನೆಗೆ ಸ್ಥಳಕ್ಕೆ ಬಂದ ಪೊಲೀಸರ ವಾಹನದಲ್ಲೇ ಗಾಯಾಳುಗಳನ್ನು ರವಾನೆ ಮಾಡಿದ್ದಾರೆ.

    ದುರಾದೃಷ್ಟ ಎಂಬಂತೆ ಪೊಲೀಸ್ ಜೀಪ್ ಕೂಡ ಪಂಕ್ಚರ್ ಆಗಿದ್ದು, ಕೊನೆಗೆ ತಡವಾಗಿ ಬಂದ ಆಂಬ್ಯುಲೆನ್ಸ್ ನಲ್ಲಿ ಮೂವರು ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೈಸೂರು: ಪ್ರಾಕ್ಟೀಸ್‍ಗಾಗಿ ಸಾರ್ವಜನಿಕ ಸ್ಥಳದಲ್ಲೇ ಗುಂಡು ಹಾರಿಸ್ದ!

    ಮೈಸೂರು: ಪ್ರಾಕ್ಟೀಸ್‍ಗಾಗಿ ಸಾರ್ವಜನಿಕ ಸ್ಥಳದಲ್ಲೇ ಗುಂಡು ಹಾರಿಸ್ದ!

    ಮೈಸೂರು: ಗುಂಡು ಹಾರಿಸುವುದನ್ನು ಸಾಮಾನ್ಯವಾಗಿ ದೊಡ್ಡ ಮೈದಾನದಲ್ಲಿ ಜನರು ಓಡಾಡದಂತ ಸ್ಥಳದಲ್ಲಿ ಪ್ರಾಕ್ಟೀಸ್ ಮಾಡುತ್ತಾರೆ. ಆದರೆ ಮೈಸೂರಿನಲ್ಲೊಬ್ಬ ವ್ಯಕ್ತಿ ತನ್ನ ಮನೆ ಪಕ್ಕದ ಪಾಳುಬಿದ್ದ ಜಾಗದಲ್ಲೇ ಗುಂಡು ಹಾರಿಸಿ ಪ್ರಾಕ್ಟೀಸ್ ಮಾಡಿದ ಘಟನೆ ನಡೆದಿದೆ.

    ಅಭ್ಯಾಸಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ ಹೆಸರು ಗಣೇಶ್ ಪ್ರಸಾದ್. ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ. ಗಣೇಶ್ ಪ್ರಸಾದ್ ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ್ದನ್ನು ಅವರ ಸ್ನೇಹಿತರ ಬಳಿ ವಿಡಿಯೋ ಕೂಡ ಮಾಡಿಸಿದ್ದಾರೆ.

    ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಪಾಳು ಮನೆಯಲ್ಲಿ ಗುಂಡು ಹಾರಿಸಲಾಗಿದೆ. ಗಣೇಶ್ ಪ್ರಸಾದ್ ಗುಂಡು ಹಾರಿಸುವ ವೇಳೆ ಅಲ್ಲಿ ಒಂದು ಕಾರು ಕೂಡ ನಿಂತಿದೆ. ಮತ್ತೊಂದು ಕಾರು ಅದೇ ಮಾರ್ಗದಲ್ಲಿ ಸಾಗುತ್ತದೆ. ಈ ಎಲ್ಲ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

    ಒಂದು ವೇಳೆ ಗುರಿ ತಪ್ಪಿದ್ದರೆ ಹೆಚ್ಚಿನ ಅನಾಹುತವಾಗುತ್ತಿದ್ದುದು ಸ್ಪಷ್ಟ. ಆದರೆ ಈ ಆರೋಪವನ್ನ ಗಣೇಶ್ ಪ್ರಸಾದ್ ನಿರಾಕರಿಸುತ್ತಿದ್ದು ಆ ರೀತಿ ಅನಾಹುತ ಆಗೋಕೆ ಸಾಧ್ಯವಿಲ್ಲ. ನಾನು ಲೈಸೆನ್ಸ್ ಪಡೆದು ಸ್ಪರ್ಧೆಗಾಗಿ ಪ್ರಾಕ್ಟೀಸ್ ಮಾಡುತ್ತಿದ್ದೆ. ಇದರಲ್ಲಿ ಯಾವ ತಪ್ಪಿಲ್ಲ ಎಂದು ಹೇಳಿದ್ದಾರೆ.