Tag: Bus Overturn

  • ಕಾರವಾರ | ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – ಓರ್ವ ಸಾವು, ಐವರು ಗಂಭೀರ

    ಕಾರವಾರ | ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – ಓರ್ವ ಸಾವು, ಐವರು ಗಂಭೀರ

    ಕಾರವಾರ: ಬೆಂಗಳೂರಿನಿಂದ ಮಂಗಳೂರಿನ ಕಡೆ ತೆರಳುತ್ತಿದ್ದ ಖಾಸಗಿ ಬಸ್ (Private Bus) ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲದ (Ankola) ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ನಡೆದಿದೆ.

    ಬೆಂಗಳೂರಿನಿಂದ ಮಂಗಳೂರು ಕಡೆ 18 ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಬಸ್ ಅಗಸೂರಿನ ಹೆದ್ದಾರಿಯ ಬ್ರಿಡ್ಜ್ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕತ್ರಾ ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ – ನಾಲ್ವರಿಗೆ ಗಾಯ

    ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದವರಿಗೆ ಅಂಕೋಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತನ ಗುರುತು ಪತ್ತೆಯಾಗಬೇಕಿದೆ. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

    ಸ್ಥಳಕ್ಕೆ ಅಂಕೋಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಬಸ್ಸನ್ನು ಹಳ್ಳದಿಂದ ಮೇಲಕ್ಕೆತ್ತಿದ್ದಾರೆ. ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿ – 15 ಕ್ಕೂ ಅಧಿಕ ಜನರಿಗೆ ಗಾಯ

    ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿ – 15 ಕ್ಕೂ ಅಧಿಕ ಜನರಿಗೆ ಗಾಯ

    ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿಯಾದ (Bus Overturn) ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ನಡೆದಿದೆ.

    ಬಸ್‌ನ ಎಕ್ಸಲ್ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 40 ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅಪಘಾತದ ಹಿನ್ನೆಲೆ 15 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.

    ಸಿಂದಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರ ತರಬೇತಿಗೆ ಸಿಬ್ಬಂದಿಯನ್ನು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಸಿಂದಗಿಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಆಡಿ ಕಾರು, ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಘಟನೆಯ ವಿಷಯ ತಿಳಿದು ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ್ ಪವಾರ್ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಧಾರಾಕಾರ ಸುರಿದ ಮಳೆಗೆ ಮನೆ ಕುಸಿತ – 20 ದಿನದ ಹಸುಗೂಸು, ವೃದ್ಧೆ ಸಾವು

  • ಕಂದಕಕ್ಕೆ ಉರುಳಿದ ಬಸ್ – 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

    ಕಂದಕಕ್ಕೆ ಉರುಳಿದ ಬಸ್ – 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

    ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯ ಕಾವಾಡಿಯಲ್ಲಿ ನಡೆದಿದೆ.

    ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂ ನಿಂದ ಕೊಡಗಿನ ವಿರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಮಂಗಳವಾರ ಮುಂಜಾನೆ 4:30ರ ವೇಳೆಗೆ ಬಸ್ ಕಂದಕಕ್ಕೆ ಉರುಳಿದೆ (Overturn). ಚಾಲಕ ಸೇರಿದಂತೆ 40 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ರಜೆ ಮುಗಿಸಿ ಸೇವೆಗೆ ಮರಳಿದ್ದ ರಾಯಚೂರಿನ ಯೋಧ ಸಾವು

    ದಟ್ಟ ಮಂಜು ಕವಿದಿದ್ದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಬಸ್ ಅನ್ನು ಮೇಲೆತ್ತಿ, ಹಾಸನ ಡಿಪೋಗೆ ರವಾನೆ ಮಾಡಲಾಗಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಪೇದೆಗೆ ಠಾಣೆಯಲ್ಲೇ ಸೀಮಂತ – ಮಂಡ್ಯ ಪೊಲೀಸರಿಗೆ ನೆಟ್ಟಿಗರಿಂದ ಮೆಚ್ಚುಗೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

    ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

    ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಪಲ್ಟಿ ಹೊಡೆದು (Bus Overturn) ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ (ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

    ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿದ್ದು, ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ

    ಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುತ್ಯಾಲಮಡುವು ಪ್ರವಾಸಿತಾಣದಲ್ಲಿ ಈಜಲು ಹೋಗಿ ವ್ಯಕ್ತಿ ನೀರುಪಾಲು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಳಗಾವಿಯಲ್ಲಿ ಬಸ್ ಪಲ್ಟಿ – 9 ಜನರಿಗೆ ಗಾಯ

    ಬೆಳಗಾವಿಯಲ್ಲಿ ಬಸ್ ಪಲ್ಟಿ – 9 ಜನರಿಗೆ ಗಾಯ

    ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ (Bus) ಒಂದು ಪಲ್ಟಿಯಾದ (Overturn) ಘಟನೆ ಖಾನಾಪೂರ ತಾಲೂಕಿನ ಓಲಮನಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ 9 ಜನರಿಗೆ ಗಾಯಗಳಾಗಿವೆ.

    ವರದಿಗಳ ಪ್ರಕಾರ ಬೆಳಗಾವಿ (Belagavi) ಜಿಲ್ಲೆಯ ಖಾನಾಪೂರ ತಾಲೂಕಿನ ಓಲಮನಿ ಗ್ರಾಮದ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ಗೋವಾ ರಾಜ್ಯದ ಮಡಗಾಂವ್ ನಿಂದ ಬೈಲೂರು ಗ್ರಾಮಕ್ಕೆ ಹೋಗುತ್ತಿತ್ತು. ಬಸ್ ನಲ್ಲಿದ್ದವರು ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸಿಂದಗಿಯಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

    ಇಂದು ಬೆಳಗಿನ ಜಾವ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 9 ಜನರಿಗೆ ಗಾಯಗಳಾಗಿವೆ. ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಸದ್ಯ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ಕುರಿತು ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗಂಟಲಲ್ಲಿ ಸಿಕ್ಕಿಕೊಂಡ ಚಾಕ್ಲೇಟ್- 9 ವರ್ಷದ ಬಾಲಕ ಉಸಿರುಗಟ್ಟಿ ಸಾವು

    Live Tv
    [brid partner=56869869 player=32851 video=960834 autoplay=true]

  • ಓವರ್ ಟೇಕ್ ಮಾಡಲು ಯತ್ನಿಸಿ ಖಾಸಗಿ ಬಸ್ ಪಲ್ಟಿ- 10ಕ್ಕೂ ಹೆಚ್ಚು ಮಂದಿಗೆ ಗಾಯ

    ಓವರ್ ಟೇಕ್ ಮಾಡಲು ಯತ್ನಿಸಿ ಖಾಸಗಿ ಬಸ್ ಪಲ್ಟಿ- 10ಕ್ಕೂ ಹೆಚ್ಚು ಮಂದಿಗೆ ಗಾಯ

    ಮಂಗಳೂರು: ಓವರ್ ಟೇಕ್ ಮಾಡಲು ಯತ್ನಿಸಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಬೈಕಂಪಾಡಿಯಲ್ಲಿ ನಡೆದಿದೆ.

    ಖಾಸಗಿ ಬಸ್ ಕೃಷ್ಣಾಪುರದಿಂದ ಮಂಗಳೂರು ನಗರಕ್ಕೆ ಬರುತ್ತಿದ್ದ ವೇಳೆ ಈ ಅವಘಾತ ಸಂಭವಿಸಿದೆ. ಮಂಗಳೂರಿನಲ್ಲಿ 2 ನಿಮಿಷಕ್ಕೆ ಒಂದು ಖಾಸಗಿ ಬಸ್‍ಯಿದ್ದು, ಬೇರೆ ಬಸ್‍ಗಳನ್ನು ಹಿಂದಿಕ್ಕುವ ಸಲುವಾಗಿ ಚಾಲಕರ ಅಜಾಗರೂಕತೆಯಿಂದ ಈ ರೀತಿಯ ಅಪಘಾತ ಸಂಭವಿಸುತ್ತಿದೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ.

    ಖಾಸಗಿ ಬಸ್‍ನಲ್ಲಿ 150ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, 10 ಮಂದಿಗೆ ಗಾಯಗಳಾಗಿದೆ. ಸದ್ಯ ಗಾಯಾಳುಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv