ಬೆಂಗಳೂರು: ಪದವಿ, ವೃತ್ತಿಪರ ಕೋರ್ಸ್ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಪಾಸ್‌ಗಳ ಅವಧಿಯನ್ನು ವಿಸ್ತರಣೆ ಮಾಡಿದೆ.
ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2022ರ ಆಗಸ್ಟ್‌ನಿಂದ ನವೆಂಬರ್‌ವರೆಗೂ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನಲೆ ಪಾಸ್ ಅವಧಿ ವಿಸ್ತರಣೆಗೆ ನಿರ್ದೇಶನ ಬಂದಿದ್ದು, ಕೆಎಸ್‌ಆರ್‌ಟಿಸಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲು ನಿರ್ಧರಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮಕ್ಕೆ ಸಿದ್ಧತೆ
ಪ್ರಸ್ತುತ ವಿದ್ಯಾರ್ಥಿ ಪಾಸ್ ಮೊತ್ತ ವರ್ಷಕ್ಕೆ 900 ರೂ. ಇದೆ. ವಿದ್ಯಾರ್ಥಿಗಳ ಪರೀಕ್ಷೆಗೆ ಅನುಗುಣವಾಗಿ 1 ಅಥವಾ 2 ತಿಂಗಳಿಗೆ ಮಾತ್ರ ಪಾಸ್ ವಿಸ್ತರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ಮೂಲಕ ತಿಳಿಸಿದೆ. ಇದನ್ನೂ ಓದಿ: ವಿದ್ಯುತ್ ದರ ಹೆಚ್ಚಳ ಇಲ್ಲ: ಸುನಿಲ್ ಕುಮಾರ್ ಸ್ಪಷ್ಟನೆ
ಆದರೆ ವಿದ್ಯಾರ್ಥಿಗಳು 1 ಅಥವಾ 2 ತಿಂಗಳ ನಿಗದಿತ ಪಾಸ್ ಮೊತ್ತವನ್ನು ಕಟ್ಟಬೇಕಿದೆ. ಅಂದರೆ, 120 ರಿಂದ 130 ರೂ. ಕಟ್ಟಿ ರಶೀದಿ ಪಡೆಯಬೇಕು. ವಿದ್ಯಾರ್ಥಿಗಳು ಬಸ್‌ಗಳಲ್ಲಿ ಪ್ರಯಾಣಿಸುವಾಗ ನಿರ್ವಾಹಕರು ಕೇಳಿದ ಸಂದರ್ಭದಲ್ಲಿ ಕಡ್ಡಾಯವಾಗಿ ರಶೀದಿ ಮತ್ತು ಪಾಸ್ ತೋರಿಸಬೇಕು. ಎಲ್ಲಾ ಚಾಲಕರು, ನಿರ್ವಾಹಕರು ಹಾಗೂ ತನಿಖಾ ಸಿಬ್ಬಂದಿ ಇದರ ಬಗ್ಗೆ ತಿಳಿದಿರಬೇಕು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಮಹಿಳಾ ಗಾರ್ಮೆಂಟ್ಸ್ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೆಲಸದ ಸ್ಥಳಗಳಿಗೆ ತೆರಳಲು ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಬಜೆಟ್ ಮಂಡನೆಯ ಸಂದರ್ಭದಲ್ಲಿ ಘೋಷಿಸಿದ್ದರು. ಯೋಜನೆಯನ್ನು ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸಾಕಾರಗೊಳಿಸುತ್ತಿದೆ. ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆಗಾಗಿ ಬಿಎಂಟಿಸಿ ಅರ್ಜಿಯನ್ನು ಆಹ್ವಾನಿಸಿದೆ. ಇದನ್ನೂ ಓದಿ: ಇನ್ನು ಮುಂದೆ ಸುಲಭವಾಗಿ ಆನ್‌ಲೈನ್ ಶಾಪಿಂಗ್ – ಏನಿದು ಟೋಕನೈಸೇಶನ್?
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೆಂಗಳೂರು ನಗರದಲ್ಲಿ ಸುಮಾರು 850ಕ್ಕಿಂತಲೂ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳಿದ್ದು, ಸದರಿ ಗಾರ್ಮೆಂಟ್ಸ್‌ಗಳಲ್ಲಿ ಸುಮಾರು 3 ಲಕ್ಷಕ್ಕಿಂತಲೂ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಶೇ.80 ಕ್ಕಿಂತ ಹೆಚ್ಚು ಮಹಿಳಾ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದರಿ ಮಹಿಳಾ ನೌಕರರು ನಿತ್ಯ ತಮ್ಮ ಕರ್ತವ್ಯ ಸ್ಥಳಕ್ಕೆ ಹೋಗಲು ಹಾಗೂ ವಾಸಸ್ಥಳಕ್ಕೆ ಹಿಂದಿರುಗಲು ಖಾಸಗಿ ಬಸ್ಸು, ಆಟೋ ಹಾಗೂ ಇತರೆ ಖಾಸಗಿ ಸಂಸ್ಥೆಯ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಿರುವುದು ಕಂಡುಬಂದಿರುತ್ತದೆ.
ತತ್ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆಯ ಸಹಭಾಗಿತ್ವದಲ್ಲಿ ಬೆಂಗಳೂರಿನ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಹಾಗೂ ಆರ್ಥಿಕ ಸಹಾಯವನ್ನು ಮಾಡಲು ‘ವನಿತಾ ಸಂಗಾತಿ’ ಯೋಜನೆಯಡಿ ಉಚಿತವಾಗಿ ಮಾಸಿಕ ಬಸ್ ಪಾಸುಗಳನ್ನು ಜನವರಿ 22 ರಿಂದ ವಿತರಣೆ ಮಾಡಲು ಕ್ರಮ ಕೈಗೊಂಡಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ
ಪಾಸು ಪಡೆಯಲು ಅನುಸರಿಸಬೇಕಾದ ವಿಧಾನಗಳೇನು..?
* ವನಿತಾ ಸಂಗಾತಿ ಪಾಸು ಪಡೆಯಲಿಚ್ಚಿಸುವ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸುವುದು.
* ಗಾರ್ಮೆಂಟ್ಸ್ ಮಾಲೀಕರು ಪಾಸು ಪಡೆಯಲಿಚ್ಚಿಸುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್ ವಿಳಾಸ welfarecommissioner123@gmail.com ಗೆ ಸಲ್ಲಿಸುವುದು.
* ವನಿತಾ ಸಂಗಾತಿ ಪಾಸಿಗಾಗಿ ಗಾರ್ಮೆಂಟ್ಸ್ ಮಾಲೀಕರಿಂದ ಸ್ವೀಕರಿಸುವ ಕೋರಿಕೆಗಳನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯವರು ಪರಿಶೀಲಿಸಿ, ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬೆಂಗಳೂರು ಸಾರಿಗೆ ಸಂಸ್ಥೆಗೆ ಒದಗಿಸುವುದು.
* ಬೆಂಗಳೂರು ನಗರ ಸಾರಿಗೆ ಸಂಸ್ಥೆಯು, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸ್ವೀಕರಿಸುವ ಪಟ್ಟಿಗನುಸಾರವಾಗಿ, ಗಾರ್ಮೆಂಟ್ಸ್ ಮಾಲೀಕರಿಂದ ದಾಖಲೆಗಳ ಪ್ರತಿಗಳನ್ನು (ಹಾರ್ಡ್ ಕಾಫಿ) ಹಾಗೂ ಗಾರ್ಮೆಂಟ್ಸ್ ಮಾಲೀಕರ ಪಾಲಿನ ಮೊತ್ತ ಶೇ.40 ರಷ್ಟನ್ನು ಪಡೆದು (ಆರ್.ಟಿ.ಜಿ.ಎಸ್/ ಎನ್.ಇ.ಎಫ್.ಟಿ ಮೂಲಕ), ವನಿತಾ ಸಂಗಾತಿ ಪಾಸುಗಳನ್ನು ಕೆಂಪೇಗೌಡ ಬಸ್ ನಿಲ್ದಾಣ ಪಾಸು ಕೌಂಟರ್‌ನಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಡಿಕೆಶಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಕೆ.ಎಸ್ ಈಶ್ವರಪ್ಪ
* ವನಿತಾ ಸಂಗಾತಿ ಪಾಸುಗಳನ್ನು ಪಡೆಯುವ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು ಬೆಂ.ಮ.ಸಾ.ಸಂಸ್ಥೆಯ ಮಾಸಿಕ ಪಾಸಿನ ಗುರುತಿನ ಚೀಟಿಯನ್ನು ಪಡೆಯುವುದು, ವನಿತಾ ಸಂಗಾತಿ ಪಾಸುಗಳನ್ನು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
* ಗಾರ್ಮೆಂಟ್ಸ್ ಮಾಲೀಕರು ಜನವರಿ 2022ರ ಮಾಹೆಗೆ ಅವಶ್ಯವಿರುವ ವನಿತಾ ಸಂಗಾತಿ ಪಾಸುಗಳ ಬೇಡಿಕೆಯನ್ನು ಇಂದಿನಿಂದ ಕಾರ್ಮಿಕ ಇಲಾಖೆಗೆ (welfarecommissioner123@gmail.com )ಸಲ್ಲಿಸಬಹುದಾಗಿದೆ.
ಬೆಂಗಳೂರು: ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಮುಂದಡಿ ಇರಿಸಿದೆ.
ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ ಉಚಿತ ಸಾರಿಗೆ ಸೇವೆ ಒದಗಿಸಲು ಮುಂದಾಗಿದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಸೇವೆಯನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಪ್ರಯತ್ನ ಫಲವಾಗಿ ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಿದೆ. ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಾಭಕಾರಿಯಾಗಿದ್ದು, ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ಕನಿಷ್ಠ 150 ರಿಂದ 200 ರೂ. ವ್ಯಯಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ಅವರು ಪಡೆಯುವ ಕೂಲಿ ಮೊತ್ತದ ಬಹುಭಾಗವನ್ನು ಸಾರಿಗೆಗೆ ವ್ಯಯಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಶಿವರಾಂ ಹೆಬ್ಬಾರ್, ಕಟ್ಟಡ ಕಾರ್ಮಿಕರ ಅನುಕೂಲಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆಯ ಯೋಜನೆಗೆ ಚಾಲನೆ ನೀಡಿದರು.
ಕಾರ್ಮಿಕ ಕಲ್ಯಾಣ ಮಂಡಳಿಯ ನೊಂದಾಯಿತ ಕಾರ್ಮಿಕರು ಈ ಯೋಜನೆ ಲಾಭ ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ವಿಸ್ತರಣೆಗೆ ಸಿದ್ಧತೆ: ಈಗಾಗಲೇ ಬೆಂಗಳೂರು ಮಹಾನಗರದಲ್ಲಿ ಜಾರಿ ಆಗಿರುವ ಉಚಿತ ಸಾರಿಗೆ ಸೇವೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮುಂದಡಿ ಇರಿಸಿದ್ದು, ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ, ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಹೀಗೆ ಎಲ್ಲ ಸಾರಿಗೆ ಸಂಸ್ಥೆಗಳೊಂದಿಗೆ ಯೋಜನೆ ತ್ವರಿತ ಜಾರಿಗೆ ಸಂಬಂಧ ಮಹತ್ವದ ಸಭೆಗಳನ್ನು ನಡೆಸಲಾಗಿದೆ.
ಅಸಾಧ್ಯವೆಂದ ಸಾರಿಗೆ ಸಂಸ್ಥೆಗಳು – ಶ್ರಮಿಕರ ಕೈಹಿಡಿದ ಕಲ್ಯಾಣ ಮಂಡಳಿ: ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬಸ್ ಸೇವೆ ಜಾರಿಗೆ ಕಾರ್ಮಿಕ ಇಲಾಖೆ ಮುಂದಡಿ ಇರಿಸಿತ್ತು. ಈ ಸಂದರ್ಭದಲ್ಲಿ ಇಲಾಖೆಯು ಶೇ.80ರಷ್ಟನ್ನು ತಾನು ಭರಿಸುವ ಭರವಸೆ ನೀಡಿತ್ತಲ್ಲದೆ, ಇನ್ನುಳಿದ ಶೇ.20ರಷ್ಟನ್ನು ರಿಯಾಯ್ತಿ ನೀಡುವುದು ಅಥವಾ ಸಾರಿಗೆ ಇಲಾಖೆಯೇ ಭರಿಸುವ ಪ್ರಸ್ತಾವನೆಯನ್ನು ಇರಿಸಿತ್ತು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ
ಆರಂಭಿಕ ಹಂತದಲ್ಲಿ ಈ ಪ್ರಸ್ತಾವನೆಗೆ ಮೌಖಿಕ ಸಮ್ಮತಿ ಸೂಚಿಸಿದ್ದ ಸಾರಿಗೆ ಇಲಾಖೆ ಇದೀಗ ತನ್ನ ಆರ್ಥಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಶೇ.20 ರಿಯಾಯ್ತಿ ಅಥವಾ ತಾನು ಭರಿಸುವುದು ಅಸಾಧ್ಯ ಎಂದು ತಿಳಿಸಿದೆ. ಹೀಗಾಗಿ ಶ್ರಮಿಕ ವರ್ಗದ ಏಳಿಗೆಯ ಏಕಮೇವ ಉದ್ದೇಶದಿಂದ ಜಾರಿ ಮಾಡಲಾಗುತ್ತಿರುವ ಈ ಯೋಜನೆ ಅನುಷ್ಠಾನದ ಕಡಕ್ ನಿರ್ಧಾರ ಕೈಗೊಂಡಿರುವ ಕಾರ್ಮಿಕ ಸಚಿವರು, ಶೇ.100ರಷ್ಟು ಮೊತ್ತವನ್ನು ಪಾವತಿಸಿಯಾದರೂ ರಾಜ್ಯದಾದ್ಯಂತ ಜಾರಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರವೇ ರಾಜ್ಯದಾದ್ಯಂತ ಶ್ರಮಿಕ ವರ್ಗಕ್ಕೆ ಉಚಿತ ಬಸ್ ಪಾಸ್ ನೀಡುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ವೇದಿಕೆ ಸಿದ್ಧಗೊಂಡಿದೆ.
ಜಾಗತಿಕ ಸಾಂಕ್ರಾಮಿಕ ಕೋವಿಡ್-19 ಎರಡೂ ಅಲೆಗಳ ಸಂದರ್ಭದಲ್ಲಿ ಸಂಘಟಿತ- ಅಸಂಘಟಿತ ಸೇರಿದಂತೆ ಎಲ್ಲ ಶ್ರಮಿಕವರ್ಗಕ್ಕೆ ಹಲವು ಯೋಜನೆಗಳ ಮೂಲಕ ಸಾಂತ್ವನ ಕ್ರಮಗಳನ್ನು ಕೈಗೊಳ್ಳಲಾಗಿತ್ತು, ಕೋವಿಡ್ ನಂತರ ಕಾರ್ಮಿಕ ಅದಾಲತ್‍ನಂತಹ ಐತಿಹಾಸಿಕ ಕಾರ್ಯಕ್ರಮ ಜಾರಿ ಮಾಡಿ ಇಲಾಖೆಯು ಶ್ರಮಿಕನಿಗೆ ಇನ್ನಷ್ಟು ಹತ್ತಿರವಾಯಿತು, ಇಲಾಖೆಯು ತನ್ನ ಇದೇ ಧೋರಣೆಯನ್ನು ಮುಂದುವರೆಸಿದ್ದು, ಶ್ರಮಿಕರ ಏಳಿಗೆಗೆ ಅನುವಾಗುವಂತೆ ಉಚಿತ ಸಾರಿಗೆ ಸೇವೆ ಯೋಜನೆ ಜಾರಿಗೆ ಮುಂದಡಿ ಇರಿಸಿದೆ. ಇದನ್ನೂ ಓದಿ: ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡರೆ 25,000 ಬಹುಮಾನ: ಎಎಪಿ
ಬಿಎಂಟಿಸಿ ಉಚಿತ ಪಾಸ್ ಪಡೆಯುವುದು ಹೇಗೆ? ಅರ್ಹತೆ:
* ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ನೊಂದಾಯಿಸಿಕೊಂಡಿರಬೇಕು.
* ಮಂಡಳಿ ಗುರುತಿನ ಚೀಟಿ
* ಎರಡು ಸ್ಟಾಂಪ್ ಅಳತೆಯ ಭಾವಚಿತ್ರ
* ಆಧಾರ್ ಕಾರ್ಡ್ ಪ್ರತಿ
ಎಲ್ಲೆಲ್ಲಿ ಲಭ್ಯ?
ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ವೈಟ್‍ಫೀಲ್ಡ್ ಟಿಟಿಎಂಸಿ, ಯಶವಂತಪುರ, ಬನಶಂಕರಿ, ವಿಜಯನಗರ, ಶಾಂತಿನಗರ, ದೊಮ್ಮಲೂರು, ಕೋರಮಂಗಲ ಬಿಎಂಟಿಸಿ ಘಟಕಗಳು, ಕೆಂಗೇರಿ ಟಿಟಿಎಂಸಿ, ಯಲಹಂಕ ಹಳೆಯ ಬಸ್ ನಿಲ್ದಾಣ, ಹೊಸಕೋಟೆ ಬಸ್ ನಿಲ್ದಾಣ, ಸುಮನಹಳ್ಳಿ ಡಿಪೋ, ಕೆ.ಆರ್.ಪುರ, ಹೆಚ್‍ಎಸ್‍ಆರ್ ಲೇಔಟ್, ಹೆಬ್ಬಾಳ ಬಿಎಂಟಿಸಿ ಘಟಕಗಳು, ನಾಗಮಂಗಲ ಡಿಪೋ, ಬಾಗಲಗುಂಟೆಯಲ್ಲಿ ಕಾರ್ಮಿಕ ಇಲಾಖೆ, ಡೈರಿ ಸರ್ಕಲ್ ಬಳಿಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಗಳನ್ನು ದಾಖಲೆಗಳನ್ನು ಸಲ್ಲಿಸಿ ಪಾಸ್‍ಗಳನ್ನು ಪಡೆದುಕೊಳ್ಳಬಹುದು.
ಬೆಂಗಳೂರು : ಪದವಿ, ಡಿಪ್ಲೂಮಾ, ಬಿಇಡಿ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಈ ಬಾರಿಯ ಪರೀಕ್ಷಾ ಅವಧಿವರೆಗೆ ವಿಸ್ತರಿಸಿದೆ.
ಅಕ್ಟೋಬರ್ನಲ್ಲಿ ಡಿಪ್ಲೂಮಾ, ಬಿಇಡಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಕೆಎಸ್ಆರ್‌ಟಿಸಿ ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 8 ತಿಂಗಳಿಂದ ಸಾಮೂಹಿಕ ಅತ್ಯಾಚಾರ – 26 ಆರೋಪಿಗಳ ಬಂಧನ!
ಈ ಮೂರು ಕೋರ್ಸ್‍ಗಳ ಪರೀಕ್ಷೆಗಳು ನವೆಂಬರ್‌ಗೆ ಮುಂಚಿತವಾಗಿ ಮುಗಿದರೆ ಪರೀಕ್ಷಾ ಅವಧಿವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಹೀಗಾಗಿ ವಿದ್ಯಾರ್ಥಿಗಳು ಪಾಸ್ ಕೌಂಟರ್ ನಲ್ಲಿ ಅವಧಿ ವಿಸ್ತರಣೆಯ ಸಹಿ ಹಾಗೂ ಮೊಹರು ಪಡೆಯುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಏರಿಕೆ ಆಯ್ತು ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳು
ಬೆಂಗಳೂರು : ಲಾಕ್‍ಡೌನ್ ನಿಂದ ಬಸ್ ಪಾಸ್ ಅವಧಿ ಕಳೆದುಕೊಂಡಿದ್ದ ಪ್ರಯಾಣಿಕರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ನಾಳೆಯಿಂದ ಬಿಎಂಟಿಸಿ ಬಸ್ ರಸ್ತೆಗೆ ಇಳಿಯಲಿದ್ದು, ಏಪ್ರಿಲ್ ತಿಂಗಳಲ್ಲಿ ಆದ ಬಸ್ ಪಾಸ್ ನಷ್ಟವನ್ನ ಪ್ರಯಾಣಿಕರಿಗೆ ತುಂಬಿಸಿಕೊಡಲು ಆದೇಶ ಹೊರಡಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರಯಾಣಿಕರಿಗೆ ಮಾಹಿತಿ ನೀಡಿದೆ.
ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಪಾಸುಗಳನ್ನು ವಿತರಣೆ ಮಾಡುತ್ತಿದೆ. ದಿನಾಂಕ 07.04.2021 ರಿಂದ ಸಂಸ್ಥೆಯ ಕೆಲವು ಚಾಲನಾ ಸಿಬ್ಬಂದಿಗಳು ಮುಷ್ಕರವನ್ನು ನಡೆಸಿದ್ದು ದಿನಾಂಕ 21.04.2021 ರವರೆಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯವಾದ್ದರಿಂದ, ಏಪ್ರಿಲ್-2021 ರ ಮಾಹೆಯ ಮಾಸಿಕ ಪಾಸಗಳ ಮಾನ್ಯತಾ ಅವಧಿಯನ್ನು ದಿನಾಂಕ 16.05.2021 ರವರೆಗೆ ಉಲ್ಲೇಖ-01 ರ ಸುತ್ತೋಲೆಯಂತೆ ವಿಸ್ತರಿಸಲಾಗಿತ್ತು.
ರಾಜ್ಯದಲ್ಲಿ ನಿಯಂತ್ರಣ ಮೀರಿ ಹರಡುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಕಡಿವಾಣ ಹಾಕಲು ಹಾಗೂ ಸೋಂಕಿನ ಸರಪಳಿಯನ್ನು ಮುರಿಯಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಜಾರಿಗೊಳಿಸಿರುತ್ತದೆ. ಅದರನ್ವಯ ಸಂಸ್ಥೆಯು ದಿನಾಂಕ ಏಪ್ರಿಲ್ 20, 2021 ರಿಂದ ಜೂನ್ 20, 2021 ರವರೆಗೆ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಿರುತ್ತದೆ.
ಮುಂದುವರೆದು, ಏಪ್ರಿಲ್-2021 ಮಾನೆಯಲ್ಲಿ ಮಾಸಿಕ ಪಾಸುಗಳನ್ನು ಪಡೆದಂತಹ ಸಾರ್ವಜನಿಕ ಪ್ರಯಾಣಿಕರು ಮುಷ್ಕರದ ಅವಧಿ ಹಾಗೂ ಕೋವಿಡ್ – 19 ನಿರ್ಬಂಧಿತ ಅವಧಿಯಲ್ಲಿ ಮಾಸಿಕ ಪಾಸುಗಳನ್ನು ಬಳಕೆ ಮಾಡದೇ ಇರುವ ಕಾರಣ, ಏಪ್ರಿಲ್-2021 ಮಹಯ ಸಾಮಾನ್ಯ ಮಾಸಿಕ ಸಾಸ್ ಹಾಗೂ ಹಿರಿಯ ನಾಗರಿಕರ ಮಾಸಿಕ ಪಾಸ್‍ಗಳ ಮಾನ್ಯತಾ ಅವಧಿಯನ್ನು (ಸಂಸ್ಥೆಯ ಗುರುತಿನ ಚೀಟಿಯೊಂದಿಗೆ) ದಿನಾಂಕ 08.07.2011 ರವರೆಗೆ ವಿಸ್ತರಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.
ಬೆಂಗಳೂರು: ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ಕೊನೆಗೂ ಅಂತ್ಯವಾಗಿದೆ. 15 ದಿನ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳ ಮಾಸಿಕ ಬಸ್ ಪಾಸ್ ಮಾನ್ಯತಾ ಅವಧಿಯನ್ನ ಬಿಎಂಟಿಸಿ ವಿಸ್ತರಣೆ ಮಾಡಿದೆ.
ಏಪ್ರಿಲ್ ತಿಂಗಳಲ್ಲಿ ಪಾಸ್ ಪಡೆದವರಿಗೆ ಸಾರಿಗೆ ಮುಷ್ಕರದಿಂದ ಅನಾನುಕೂಲ ಆಗಿತ್ತು. ಬಸ್ ಪಾಸ್ ಪಡೆದಿದ್ದರೂ ಅನಿವಾರ್ಯ ಖಾಸಗಿ ವಾಹನಗಳಲ್ಲಿ ಸಂಚರಿಸುವಂತಾಗಿತ್ತು. ಪಾಸ್ ಪಡೆದವರಿಗಾಗಿ ಮೇ 16 ರವರೆಗೆ ಪಾಸ್ ಮಾನ್ಯತಾವಧಿ ವಿಸ್ತರಣೆ ಮಾಡಿ ಪ್ರಯಾಣಿಕರ ಮೇಲೆ ಭಾರವನ್ನ ಬಿಎಂಟಿಸಿ ಇಳಿಸಿದೆ.
ಹೈಕೋರ್ಟ್ ಸೂಚನೆಗೆ ಬೆಲೆ ಕೊಟ್ಟು ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಲಿಕವಾಗಿ ಹಿಂಪಡೆಯುತ್ತಿರುವುದಾಗಿ ಸಾರಿಗೆ ನೌಕರರ ಒಕ್ಕೂಟ ಪ್ರಕಟಿಸಿದೆ. ಕೋರ್ಟ್ ಆದೇಶದ ನಂತ್ರ ಅನೇಕ ನೌಕರರು ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಇನ್ಮುಂದೆ ಮುಷ್ಕರದಲ್ಲಿ ಪಾಲ್ಗೊಳ್ಳಲ್ಲ ಎಂದು ನೌಕರರಿಂದ ಸರ್ಕಾರ ಮುಚ್ಚಳಿಕೆ ಬರೆಸಿಕೊಳ್ಳುತ್ತಿದೆ. ಈ ಮೂಲಕ ನೌಕರರ ಮೂಲಭೂತ ಹಕ್ಕನ್ನೇ ಕಿತ್ತುಕೊಳ್ತಿದೆ. ಈ ಕ್ರಮ ಆಗಬಾರದು. ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ಮುಷ್ಕರದ ವೇಳೆ ಕೈಗೊಂಡ ವಜಾ, ಅಮಾನತು, ವರ್ಗಾವಣೆ, ಶೋಕಾಸ್ ನೋಟಿಸ್ ಆದೇಶಗಳನ್ನು ವಾಪಸ್ ಪಡೆಯಬೇಕು.. ಡಿಸೆಂಬರ್ 14ರಂದು ನೀಡಿದ್ದ ಭರವಸೆ ಪ್ರಕಾರ ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ರು. ಮುಂದೆ ಸರ್ಕಾರ ಯಾವೆಲ್ಲಾ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದನ್ನು ಆಧರಿಸಿ ನಮ್ಮ ಹೋರಾಟವನ್ನು ಮುಂದುವರೆಸ್ತೀವಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಈ ಬೆನ್ನಲ್ಲೇ ಹೆಚ್ಚು ಬಸ್‍ಗಳು ರಸ್ತೆಗೆ ಇಳಿದಿವೆ. ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಬಸ್‍ಗಳು ಓಡಾಡಲಿವೆ. ಇವತ್ತಿಂದ ಟಫ್ ರೂಲ್ಸ್ ಜಾರಿ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಜನ ತಮ್ಮೂರುಗಳ ಕಡೆ ಮುಖ ಮಾಡಿದ್ದಾರೆ. ಮೆಜೆಸ್ಟಿಕ್, ಗೊರಗುಂಟೆ ಪಾಳ್ಯ, ಸ್ಯಾಟಲೈಟ್ ಬಸ್ ನಿಲ್ದಾಣಗಳಲ್ಲಿ ಎಂದಿಗಿಂತಲೂ ಹೆಚ್ಚು ಪ್ರಯಾಣಿಕರು ಕಂಡು ಬಂದರು.
ಬೆಂಗಳೂರು: ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸಲು ಚಾಲಕರು, ನಿರ್ವಾಹಕರಿಗೆ ಸೂಚನೆ ನೀಡಿ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಶಾಲಾ-ಕಾಲೇಜುಗಳು ಪ್ರಾರಂಭವಾಗಿವೆ. ರಾಜ್ಯದ ವಿವಿಧೆಡೆಯ ಗ್ರಾಮಾಂತರ ಪ್ರದೇಶಗಳಲ್ಲಿ ಬಸ್‍ಗಳು ವಿದ್ಯಾರ್ಥಿಗಳಿಗೆ ನಿಲ್ಲಿಸದೇ ತೊಂದರೆ ಕೊಡುತ್ತಿವೆ. ಕೆಲ ಚಾಲಕರು ಮತ್ತು ನಿರ್ವಾಹಕರು ವಿದ್ಯಾರ್ಥಿಗಳಿಗೆ ಅಸಹಕಾರ ಕೊಡುತ್ತಿದ್ದಾರೆ. ಹೀಗಾಗಿ ಚಾಲಕರು ಮತ್ತು ನಿರ್ವಾಹಕರಿಗೆ ಸೂಕ್ತ ನಿರ್ದೇಶನ ಕೊಡಬೇಕು ಎಂದು ಸಚಿವರ ಪರವಾಗಿ ವಿಶೇಷ ಕರ್ತವ್ಯಾಧಿಕಾರಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಹೊರಟು ನಿಂತಾಗ ರಾಜ್ಯದ ವಿವಿಧೆಡೆಯ ಗ್ರಾಮಾಂತರ ಪ್ರದೇಶಗಳ ಅನೇಕ ಬಸ್ ನಿಲ್ದಾಣಗಳಲ್ಲಿ ಬಸ್ ಗಳನ್ನು ನಿಲ್ಲಿಸದೇ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳ ಕೆಲವು ಚಾಲಕರು /ನಿರ್ವಾಹಕರು ವಿದ್ಯಾರ್ಥಿಗಳ ಕುರಿತು ಅವಜ್ಞೆ ತೋರುತ್ತಿರುವುದು ಕಂಡುಬರುತ್ತಿದೆ.
ನಾನು ಕಳೆದ ಶನಿವಾರ ತುಮಕೂರು ಜಿಲ್ಲೆಯ ಪ್ರವಾಸದಲ್ಲಿರುವಾಗ ಪಿನಗಾನಹಳ್ಳಿ ಮಾರ್ಗದ ಬಸ್ಸೊಂದು ನಿಲುಗಡೆ ಕಡ್ಡಾಯವಾಗಿದ್ದರೂ ಸಹ ಬಸ್ ನಿಲ್ಲದಿದ್ದಾಗ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದು ನನ್ನ ಗಮನಕ್ಕೆ ಬಂತು. ಆ ಬಸ್ ಚಾಲಕ/ನಿರ್ವಾಹಕರಿಗೆ ಬಸ್ ನಿಲ್ಲಿಸದಿದ್ದರೆ ಮಕ್ಕಳಿಗೆ ಆಗುವ ತೊಂದರೆ ಕುರಿತು ಮನದಟ್ಟು ಮಾಡಿದೆ.
ವಿದ್ಯಾರ್ಥಿಗಳನ್ನು ಬಸ್ ಚಾಲಕ/ನಿರ್ವಾಹಕರು ಅವಜ್ಞೆ ಮಾಡದೇ ಮತ್ತು ಮಕ್ಕಳು ಶಾಲಾಕಾಲೇಜಿಗೆ ಹೋಗಿ ಬರಲು ತೊಂದರೆಯಾಗದಂತೆ ಸಹಾನುಭೂತಿಯಿಂದ ವರ್ತಿಸುವಂತೆ ಚಾಲಕ/ನಿರ್ವಾಹಕರಿಗೆ ನಿರ್ದೇಶನ ನೀಡಬೇಕೆಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಮಾನ್ಯ ಸಚಿವರ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ಪ್ರಕಟಣೆಗೆ ಸ್ವೀಕರಿಸಬೇಕೆಂದು ತಮ್ಮನ್ನು ಕೋರಲು ಮಾನ್ಯ ಸಚಿವರಿಂದ ನಿರ್ದೇಶಿತನಾಗಿದ್ದೇನೆ.
ಬೆಂಗಳೂರು: ಹೊಸ ವರ್ಷಕ್ಕೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.
2019 -2020 ಸಾಲಿನ ಹಳೆಯ ಪಾಸ್ ನಲ್ಲೇ ಪ್ರಯಾಣ ಮಾಡಲು ಬಿಎಂಟಿಸಿ ಅನುಮತಿ ನೀಡಿದೆ. ಪ್ರಸ್ತುತ ಶಾಲಾ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕದ ರಶೀದಿ, ಗುರುತಿನ ಚೀಟಿ ತೋರಿಸಿ ವಾಸ ಸ್ಥಳದಿಂದ ಶಾಲಾ ಕಾಲೇಜುಗಳಿಗೆ ಬಸ್ ನಲ್ಲಿ ಓಡಾಡಬಹುದು. 6 ರಿಂದ 10 ನೇ ತರಗತಿ, 12ನೇ ತರಗತಿ, ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಬಿಎಂಟಿಸಿಯ ಸಾಮಾನ್ಯ ಸೇವೆಯ ಬಸ್ಸುಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.
ಒಂಬತ್ತು ತಿಂಗಳು ಬಳಿಕ ಜನವರಿ 1ರಿಂದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯು ವರ್ಗಗಳು ಆರಂಭಗೊಂಡಿವೆ. ಹೀಗಾಗಿ ವಿದ್ಯಾರ್ಥಿಗಳ ಅನಕೂಲಕ್ಕಾಗಿ ಬಿಎಂಟಿಸಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನ ಡಿಸೆಂಬರ್ 31ರವರೆಗೆ ವಿಸ್ತರಿಸುವ ಮೂಲಕ ಗುಡ್ ನ್ಯೂಸ್ ನೀಡಿದೆ.
ನವೆಂಬರ್ 17ರಂದು ಪದವಿ ಕಾಲೇಜಗಳು ಆರಂಭಗೊಂಡ ಹಿನ್ನೆಲೆ 2019-20ರ ಸಾಲಿನಲ್ಲಿ ಪಡೆದ ಬಸ್ ಪಾಸ್ ತೋರಿಸಿ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬಹುದು ಎಂದು ಕೆಎಸ್‍ಆರ್ ಟಿಸಿ ಸೂಚಿಸಿತ್ತು. ಈ ಬಸ್ ಪಾಸ್ ಅವಧಿ ಇಂದಿಗೆ ಕೊನೆಯಾಗಿತ್ತು.
ಕೊರೊನಾ ಕಷ್ಟ ಕಾಲದಲ್ಲಿ ಬಸ್ ಪಾಸ್ ಅವಧಿ ವಿಸ್ತರಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದರು. ಇದೀಗ 2019-20ರ ಹಳೆಯ ಬಸ್ ಪಾಸ್ ತೋರಿಸಿ ಡಿಸೆಂಬರ್ 31ರವರೆಗೂ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಬೆಂಗಳೂರು: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಾರಿಗೆ ತಂದಿದ್ದ ರಿಯಾಯ್ತಿ ದರದಲ್ಲಿ ಬಸ್ ಪಾಸ್ ನೀಡುವ ಯೋಜನೆಯನ್ನು ಈ ವರ್ಷವೂ ಕೈ ಬಿಡಲು ಸಾರಿಗೆ ಇಲಾಖೆ ನಿರ್ಧರಿಸಿದೆ.
ರಿಯಾಯ್ತಿ ದರದಲ್ಲಿ ಬಸ್ ಪಾಸ್ ನೀಡುವ ಯೋಜನೆ ಜಾರಿಗೆ ತರುವುದು ಕಷ್ಟ ಅಂತ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸಚಿವರ ಮಾತಿನಿಂದ ಈ ಬಾರಿಯೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಿಯಾಯ್ತಿ ದರದಲ್ಲಿ ಬಸ್ ಪಾಸ್ ಸಿರುವುದು ಡೌಟ್ ಆಗಿದೆ.
ವಿಧಾನ ಪರಿಷತ್‍ನಲ್ಲಿಂದು ಜೆಡಿಎಸ್‍ನ ಸದಸ್ಯ ಮರಿತಿಬ್ಬೇಗೌಡ ವಿಷಯ ಪ್ರಸ್ತಾಪ ಮಾಡಿದರು. ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಮಾತ್ರ ರಿಯಾಯಿತಿ ದರದಲ್ಲಿ ಪಾಸ್ ವಿತರಣೆ ಆಗುತ್ತಿದೆ. ಆದರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಯೋಜನೆ ಸಿಗುತ್ತಿಲ್ಲ. ಸರ್ಕಾರ ಮತ್ತೆ ರಿಯಾಯ್ತಿ ದರದಲ್ಲಿ ಬಸ್ ಪಾಸ್ ನೀಡಬೇಕು ಅಂತ ಮನವಿ ಮಾಡಿದರು. ಮರಿತಿಬ್ಬೇಗೌಡ ಮಾತಿಗೆ ಧ್ವನಿಗೂಡಿಸಿದ ಬಸವರಾಜ್ ಹೊರಟ್ಟಿ ಮಕ್ಕಳಲ್ಲಿ ಭೇದ-ಭಾವ ಮಾಡಬೇಡಿ. ಎಲ್ಲಾ ವರ್ಗದ ವಿದ್ಯಾರ್ಥಿಗಳಗೆ ಪಾಸ್ ಕೊಡಬೇಕು ಅಂತ ಮನವಿ ಮಾಡಿದರು.
ಸದಸ್ಯರ ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಮಸ್ಯೆಯನ್ನ ಎಳೆ ಎಳೆಯಾಗಿ ಬಿಚ್ಚಿಟ್ಟರು. 2014ರಿಂದ ಇಲ್ಲಿಯವರೆಗೆ ಸರ್ಕಾರದಿಂದ ಬಾಕಿ ಬರಬೇಕಿದ್ದ 3 ಸಾವಿರ ಕೋಟಿ ರೂ. ಪಾಸ್ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಬೇರೆ ಮಕ್ಕಳಿಗೆ ಪಾಸ್ ಕೊಡಲು ಆಗುತ್ತಿಲ್ಲ. ಸರ್ಕಾರ ಹಣ ಕೊಡದ ಹಿನ್ನೆಲೆಯಲ್ಲಿ ನಿಗಮಗಳು ನಷ್ಟದಲ್ಲಿ ಇದೆ. ನಿಗಮ ಆರ್ಥಿಕವಾಗಿ ಸದೃಢವಾದ ನಂತರ ಪಾಸ್ ವಿತರಣೆ ಬಗ್ಗೆ ಚಿಂತನೆ ಮಾಡುತ್ತೇವೆ ಅಂತ ಸ್ಪಷ್ಟಪಡಿಸಿದರು.