Tag: bus strike

  • ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ ಕರೆ ನೀಡ್ತೆವೆ – ವಾಟಾಳ್

    ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ ಕರೆ ನೀಡ್ತೆವೆ – ವಾಟಾಳ್

    ರಾಮನಗರ: ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಅವರ ಸಮಸ್ಯೆ ಬಗೆಹರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ತಿಳಿಸಿದ್ದಾರೆ.ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

    ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ರಾಮನಗರದಲ್ಲಿ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದೆ. ಯಾವ ಸರ್ಕಾರವೂ ಅವರ ಸಮಸ್ಯೆಯನ್ನು ಆಲಿಸಿಲ್ಲ. ಹೀಗಾಗಿ ಅವರ ಹಳೆಯ ಸಂಬಳವನ್ನ ಕೊಟ್ಟುಬಿಡಿ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟಿಕೊಂಡಿದ್ದೀರಿ? ಬಾಕಿ ಇಟ್ಕೊಂಡ್ರೆ ನೌಕರರ ಜೀವನ ಹೇಗೆ ನಡೆಯಬೇಕು ಎಂದು ಕಿಡಿಕಾರಿದ್ದಾರೆ.

    ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಅವರು ಕೂಡಲೇ ಅವರ ಬೇಡಿಕೆ ಈಡೇರಿಸಬೇಕು. ಸಾರಿಗೆ ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯ ಸರ್ಕಾರ ಕೂಡಲೇ ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಅವರ ಜೊತೆ ಸೇರಿ ನಾವು ಹೋರಾಟ ಮಾಡ್ತೀವಿ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

  • ಸಾರಿಗೆ ಮುಷ್ಕರದಿಂದ ಹೈರಾಣಾದ ಜನ – ರಾಯಚೂರಿನಲ್ಲಿ ಆಂಧ್ರ, ತೆಲಂಗಾಣದ ಬಸ್‌ ಬಳಕೆ

    ಸಾರಿಗೆ ಮುಷ್ಕರದಿಂದ ಹೈರಾಣಾದ ಜನ – ರಾಯಚೂರಿನಲ್ಲಿ ಆಂಧ್ರ, ತೆಲಂಗಾಣದ ಬಸ್‌ ಬಳಕೆ

    ರಾಯಚೂರು: ಜಿಲ್ಲೆಯಲ್ಲಿ ಪ್ರಯಾಣಿಕರಿಗೆ ಸಾರಿಗೆ ನೌಕರರ ಮುಷ್ಕರ ಎಫೆಕ್ಟ್ ತಟ್ಟಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ನೌಕರರ ಮುಷ್ಕರ (Transport Employees Strike) ಆರಂಭವಾಗಿದ್ದು, ಬಸ್ ಸಂಚಾರ ಅತ್ಯಂತ ವಿರಳವಾಗಿದೆ. ಹೀಗಾಗಿ ದೂರದ ಊರುಗಳಿಂದ ಬಂದ ಪ್ರಯಾಣಿಕರು ಗ್ರಾಮೀಣ ಭಾಗಗಳಿಗೆ ಬಸ್ (Bus) ಇಲ್ಲದೇ ಪರದಾಡುತ್ತಿದ್ದಾರೆ.

    ರಾಯಚೂರು (Raichur) ವಿಭಾಗದ ಒಟ್ಟು 600 ಬಸ್‌ಗಳಲ್ಲಿ ಕಡಿಮೆ ಪ್ರಮಾಣದ ಬಸ್‌ಗಳು ಓಡಾಟ ನಡೆಸಿವೆ. ಸಾರಿಗೆ ನೌಕರರು ಬಸ್ ಹತ್ತದೇ ಬಸ್ ನಿಲ್ದಾಣದಲ್ಲೇ ಉಳಿದಿದ್ದಾರೆ. ನಮ್ಮ ಕಷ್ಟಗಳಿಗೆ ಸರ್ಕಾರ ಸ್ಪಂದಿಸಿದ್ರೆ ನಾವ್ಯಾಕೆ ಮುಷ್ಕರ ಮಾಡ್ತಿದ್ವಿ? ನಮ್ಮ ಕಷ್ಟ ಕೇಳುವವರು ಯಾರು ಅಂತ ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳ ಒತ್ತಡಕ್ಕೆ ಪ್ರಯಾಣ ಬೆಳೆಸಿದ್ರೆ ಮುಂದಾಗುವ ಅನಾಹುತಗಳಿಗೆ ಜವಾಬ್ದಾರಿ ಯಾರು ವಹಿಸುತ್ತಾರೆ? ಬಸ್‌ಗಳಿಗೆ ಕಲ್ಲು ತೂರಾಟ ಬೆಂಕಿ ಹಚ್ಚಿದ್ರೆ ನಾವೇನು ಮಾಡೋದು? ಅಂತ ನೌಕರರು ಪ್ರಶ್ನಿಸಿದ್ದಾರೆ.

    ಇನ್ನೂ ಗಡಿಜಿಲ್ಲೆ ರಾಯಚೂರಿನಲ್ಲಿ ಆಂಧ್ರ ಪ್ರದೇಶ, ತೆಲಂಗಾಣದ ಸುಮಾರು 40 ಸಾರಿಗೆ ಬಸ್ (Telangana Bus) ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಂತರರಾಜ್ಯ ಬಸ್‌ ಓಡಾಟಕ್ಕೆ ಪಕ್ಕದ ರಾಜ್ಯಗಳಿಂದ ಹೆಚ್ಚುವರಿ ಬಸ್‌ಗಳ ಓಡಾಟಕ್ಕಾಗಿ ರಾಯಚೂರು ಜಿಲ್ಲಾಡಳಿತ ಮನವಿ ಹಿನ್ನೆಲೆ ಹೆಚ್ಚುವರಿ ಬಸ್‌ಗಳು ಓಡಾಟ ಆರಂಭಿಸಿವೆ. ಹೈದರಾಬಾದ್, ಮೆಹಬೂಬ್ ನಗರ, ಕರ್ನೂಲ್ ಮಾರ್ಗದಲ್ಲಿ ಬಸ್‌ಗಳು ಸಂಚಾರ ಮಾಡುತ್ತಿವೆ.

    ಇನ್ನೂ ರಾಯಚೂರು ಜಿಲ್ಲೆಯಲ್ಲಿ ವಿವಿಧ ಭಾಗಕ್ಕೆ ಕೆಲವು ಬಸ್‌ಗಳು ಮಾತ್ರ ಓಡಾಟ ನಡೆಸಿವೆ. ಬಸ್‌ಗಳು ಇಲ್ಲದೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಅಂತರ ಜಿಲ್ಲೆ ಹಾಗೂ ವಿವಿಧ ತಾಲೂಕುಗಳಿಗೆ ಬಸ್ ಓಡಾಟ ವಿರಳವಾಗಿದೆ.

  • ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?

    ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?

    – ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ
    – ಬಿಜೆಪಿ ಸರ್ಕಾರ ಪ್ರತ್ಯೇಕ ನಿಧಿ ಹಂಚಿಕೆ ಮಾಡಿಲ್ಲ

    ಬೆಂಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ (Salary Hike) ಇರಲು ಬಿಜೆಪಿ ಸರ್ಕಾರದ ಆದೇಶವೇ ಕಾರಣ ಎಂದು ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ದೂರಿದ್ದಾರೆ.

    ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಜಾರಿ ಮಾಡಬಹುದು ಅಂತಾ ಆದೇಶದಲ್ಲಿ ಇದೆ. ಬಿಜೆಪಿ (BJP) ಸರ್ಕಾರದ ಆದೇಶದಿಂದ ಹಿಂಬಾಕಿ ತಡವಾಗಿದೆ ಎಂದು ಹೇಳಿದ್ದಾರೆ.

    ಏನಿದು ಆದೇಶ ಗೊಂದಲ?
    ಪ್ರತಿ 4 ವರ್ಷಗಳಿಗೊಮ್ಮೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ನಡೆಯುತ್ತದೆ. ಈ ಹಿಂದೆ 2012-2016ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2012ರಿಂದ ಜಾರಿಗೆ ಬರುವುದಾಗಿ, 2016-2020ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2016ರಿಂದ ಜಾರಿಗೆ ಬರುವಂತೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖವಾಗಿತ್ತು.

    2023ರ ಆದೇಶದಲ್ಲಿ 2023ರ ಮಾರ್ಚ್ 1ರಿಂದ ಜಾರಿಗೆ ಬರುವಂತೆ ಎಂದು ಉಲ್ಲೇಖಿಸಿದೆ. ಈ ಆದೇಶದಲ್ಲಿ 2020 ರಿಂದ ಎಂದು ಉಲ್ಲೇಖ ಮಾಡಿಲ್ಲ. ಈ ಆದೇಶದ ಅನ್ವಯ ಮುಂದಿನ 4 ವರ್ಷ ಅಂದರೆ 2027 ರವರೆಗೆ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ. ಆದೇಶದಲ್ಲಿ ಎಲ್ಲಿಯೂ ಸ್ಪಷ್ಟವಾಗಿ 2020 ರಿಂದಲೇ ಜಾರಿಗೆ ಬರುವಂತೆ ಎಂದು ಉಲ್ಲೇಖ ಮಾಡದ ಕಾರಣ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂಬ ವಾದವನ್ನು ಕಾಂಗ್ರೆಸ್‌ ಸರ್ಕಾರ ಮುಂದಿಟ್ಟಿದೆ. ಇದನ್ನೂ ಓದಿ: ಟೆಕ್ಕಿಗಳಿಗೆ ಗುಡ್‌ನ್ಯೂಸ್‌ – ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

    ಪ್ರತ್ಯೇಕ ನಿಧಿ ಇಲ್ಲ
    2020 ರಿಂದ‌ ಅನ್ವಯವಾಗುವಂತಿದ್ದರೆ ಇದಕ್ಕಾಗಿ‌ ಯಾವುದೇ ಪ್ರತ್ಯೇಕ ನಿಧಿಯನ್ನು ಹಿಂದಿನ ಸರ್ಕಾರ ಹಂಚಿಕೆ‌ ಮಾಡಿಲ್ಲ. ಈ‌ ಹಿಂದಿನ ಸರ್ಕಾರದ ಆದೇಶವನ್ನು ಮಾರ್ಪಾಡಿಸಲು ಸಾಧ್ಯವಿಲ್ಲ. 2023 ರಿಂದ 2027 ರವರೆಗೆ ನಾಲ್ಕು ವರ್ಷಗಳ ಅವಧಿಯವರೆಗೂ ಬಿಜೆಪಿ ಸರ್ಕಾರದ ಆದೇಶ‌ ಅನ್ವಯವಾಗುತ್ತದೆ. ಯಾವುದೇ ನಿಧಿಯನ್ನು ಮೀಸಲಿಡದ ಕಾರಣ 2027 ರಿಂದಲೇ ಮುಂದಿನ ವೇತನ‌ ಪರಿಷ್ಕರಣೆ ಜಾರಿಯಾಗಲು ಸಾಧ್ಯ ಎಂಬ ನಿಲುವಿಗೆ ಸರ್ಕಾರ ಬಲವಾಗಿ ಅಂಟಿಕೊಂಡಿದೆ.

    2020ರಲ್ಲಿ ಏನಾಗಿತ್ತು?
    ಕೋವಿಡ್‌ ಲಾಕ್‌ಡೌನ್‌ ಕಾರಣದಿಂದ 2020 ರಲ್ಲಿ ಕೆಲ ತಿಂಗಳು ಬಸ್ಸುಗಳ ಸಂಚಾರವನ್ನು ಬಂದ್‌ ಮಾಡಲಾಗಿತ್ತು. ನಂತರ ಸೇವೆ ಆರಂಭಗೊಂಡಿದ್ದರೂ ಜನ ಕಡಿಮೆ ಪ್ರಮಾಣದಲ್ಲಿ ಸಂಚರಿಸುತ್ತಿದ್ದರು. ಕೋವಿಡ್ ಸಮಯದಲ್ಲಿ ಪೂರ್ಣ/ ಅಪೂರ್ಣ ಪ್ರಮಾಣದಲ್ಲಿ ಬಸ್ಸುಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದರಿಂದ ಸಾರಿಗೆ ಇಲಾಖೆ ಮುಳುಗುವ ಹಂತದಲ್ಲಿತ್ತು.

    ಈ ಕಠಿಣ ಪರಿಸ್ಥಿತಿಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳ‌ ಸಿಬ್ಬಂದಿ ವೇತನ‌ ಹಾಗೂ ಇತರೇ ಭತ್ಯೆಗಳನ್ನು ಸರ್ಕಾರ ಪಾವತಿ ಮಾಡಿತ್ತು. ಆದರೆ ಸಂಬಳವನ್ನು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿರಲಿಲ್ಲ. ಕೋವಿಡ್‌ ನಂತರ ಬಸ್ಸುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಇಳಿದ ಬಳಿಕ 2023 ರಲ್ಲಿ ಬಿಜೆಪಿ ಸರ್ಕಾರ ವೇತನ ಪರಿಷ್ಕರಣೆ ಮಾಡಿತ್ತು.

    ನೌಕರರ ವಾದ ಏನು?
    ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿಲ್ಲ ಮತ್ತು ಕಡಿಮೆ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದರು. ಆದರೆ ಈಗ ಬಸ್ಸುಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡಿದ್ದರೂ ನಿರ್ವಾಹಕರು ಟಿಕೆಟ್‌ ಹರಿಯುತ್ತಾರೆ. ಉಚಿತ ಟಿಕೆಟ್‌ ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಪಾವತಿ ಮಾಡಬೇಕು.

    ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿ ಮೈಲಿಗಲ್ಲು ಸ್ಥಾಪಿಸಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ಆದಾಯವೂ ಜಾಸ್ತಿಯಾಗಿದೆ. ಆದಾಯ ಜಾಸ್ತಿಯಾಗಿರುವ ಕಾರಣ ಸರ್ಕಾರ ಸಂಬಳ ಏರಿಕೆ ಮಾಡಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ.

     

  • ನಾಲ್ಕನೇ ದಿನವೂ ಮುಂದುವರಿದ ಬಸ್ ಮುಷ್ಕರ – ಇವತ್ತೂ ಸಿಗಲ್ಲ KSRTC, BMTC ಬಸ್

    ನಾಲ್ಕನೇ ದಿನವೂ ಮುಂದುವರಿದ ಬಸ್ ಮುಷ್ಕರ – ಇವತ್ತೂ ಸಿಗಲ್ಲ KSRTC, BMTC ಬಸ್

    ಬೆಂಗಳೂರು: ಕೆಎಸ್‍ಆರ್ ಟಿಸಿ, ಬಿಎಂಟಿಸಿ ನೌಕರರು ನಡೆಸ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇವತ್ತೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಸಂಚಾರ ಮಾಡಲ್ಲ. ಇವತ್ತಿನಿಂದ ಸಾಲು ಸಾಲು ರಜೆ, ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಪ್ರಯಾಣಿಕರು ಪರದಾಡ್ತಿದ್ದಾರೆ.

    ಏಪ್ರಿಲ್ 12ರಂದು ಸಾರಿಗೆ ನೌಕರರು ತಟ್ಟೆ-ಲೋಟ ಚಳುವಳಿಗೆ ನಿರ್ಧರಿಸಿದ್ದಾರೆ. ಅಂದರೆ ಅಲ್ಲಿವರೆಗೂ ಮುಷ್ಕರ ಕೊನೆ ಆಗುವ ಲಕ್ಷಣಗಳಿಲ್ಲ. ಈ ನಡುವೆ ಮುಷ್ಕರ ನಿರತ ಬಿಎಂಟಿಸಿಯ 120 ಮಂದಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಮುಷ್ಕರ ನೇತೃತ್ವ ವಹಿಸಿರುವ ನೌಕರರು ಸೇರಿದಂತೆ ಕೆಎಸ್‍ಆರ್‍ಟಿಸಿ 287 ನೌಕರರನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿ ಶಿಕ್ಷೆ ನೀಡಲಾಗಿದೆ.

    ಯಾವುದೇ ಕಾರಣಕ್ಕೂ ಆರನೇ ವೇತನ ಆಯೋಗದ ವರದಿಯಂತೆ ವೇತನ ಹೆಚ್ಚಳ ಸಾಧ್ಯವಿಲ್ಲ ಎಂದಿರುವ ಸಿಎಂ ಯಡಿಯೂರಪ್ಪ ಯಾರೊಂದಿಗೂ ಮಾತುಕತೆ ನಡೆಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸದ್ಯಕ್ಕಂತ ಸಾರಿಗೆ ಮುಷ್ಕರ ಕೊನೆ ಆಗುವ ಸಾಧ್ಯತೆ ಇಲ್ಲ.

  • ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬನ್ನಿ: ಬಿಎಸ್‍ವೈ ಮನವಿ

    ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬನ್ನಿ: ಬಿಎಸ್‍ವೈ ಮನವಿ

    – 6 ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ

    ಬೆಂಗಳೂರು: ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬರುವಂತೆ ಸರ್ಕಾರಿ ನೌಕರರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

    ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ಜೊತೆ ಮಾತುಕತೆ ಪ್ರಶ್ನೆಯೇ ಇಲ್ಲ. ನಾನು ಹಠ ಮಾಡ್ತಿಲ್ಲ. 8 ಬೇಡಿಕೆ ಈಡೇರಿಸಿದ್ದೇವೆ. ಆದ್ರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

    ಆದಾಯದಲ್ಲಿ ಶೇ.86 ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಇತರೆಗೆ ಖರ್ಚಾಗ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ರೇ ಹೇಳಿ ಸರಿಪಡಿಸೋಣ. ಅದನ್ನ ಬಿಟ್ಟು ಈ ರೀತಿ ಹಠ ಮಾಡಬಾರದು. ಇವತ್ತಿನ ಪರಿಸ್ಥಿತಿಯಲ್ಲಿ 6 ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ ಎಂದು ಸಿಎಂ ಮತ್ತೊಮ್ಮೆ ಉಚ್ಚರಿಸಿದರು.

    ಸಾಧ್ಯವೇ ಇಲ್ಲ ಅಂತಾದ್ಮೇಲೆ ಹಠ ಮಾಡೋದು ಸರಿಯಲ್ಲ. ಈಗ್ಲಾದ್ರೂ ಅರ್ಥ ಮಾಡ್ಕೊಂಡು ಕೆಲಸಕ್ಕೆ ಬನ್ನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಡೆದುಕೊಳ್ಳಿ. ಯಾರ ಜೊತೆ ಮಾತನಾಡಬೇಕು, ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡೋದು ಸರಿಯಲ್ಲ ಎಂದರು.

    ಇವತ್ತಿನಿಂದ ನಿಮ್ಮ ಬಸ್‍ಗಳನ್ನ ಓಡಾಡಿಸೋಕೆ ಶುರು ಮಾಡಿ. ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿರುವಾಗ ಈ ರೀತಿ ಹಠ ಮಾಡೋದು ಎಷ್ಟರ ಮಟ್ಟಿಗೆ ಸರಿ, ನೀವೇ ಯೋಚನೆ ಮಾಡಿ. ಮತ್ತೊಮ್ಮೆ ಮನವಿ ಮಾಡ್ತೀನಿ, ಹಠ ಬಿಟ್ಟು ಬನ್ನಿ. ಯಾರತ್ರಾ ಮಾತುಕತೆ ಮಾಡೋದು..? ಎಂದು ಹೇಳುವ ಮೂಲಕ ಪರೋಕ್ಷವಾಗಿ ಕೋಡಿಹಳ್ಳಿ ನೇತೃತ್ವದ ಸಂಘಟನೆಯ ಜೊತೆ ಮಾತಾಡಲ್ಲ ಎಂದು ಸಿಎಂ ಹೇಳಿದರು.

  • ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು

    ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು

    ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡ ನೌಕರ. ಇವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

    ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದರು.

    ಸದ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಇಂದು ಸಿದ್ದರಾಮಯ್ಯ ಅವರು ಸವದತ್ತಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪ್ರಕರಣ ಸಂಬಂಧ ಮುಷ್ಕರ ನಿರತ ಸಾರಿಗೆ ನೌಕರರು ಇಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಲಿದ್ದಾರೆ.