– ವ್ಯಾಪಾರ ಪರವಾನಗಿ ನವೀಕರಣಕ್ಕೆ ಫೆ.28 ಕೊನೆಯ ದಿನ
– 5 ವರ್ಷಗಳ ಅವಧಿಗೆ ನವೀಕರಣ
ಬೆಂಗಳೂರು: 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ (2015 ರ ನಂತರ ತೆರೆದ ಅಂಗಡಿಗಳು) ವ್ಯಾಪಾರ ಪರವಾನಗಿಗಳನ್ನು ಇನ್ನು ಮುಂದೆ ನವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ (BBMP) ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಫೆ.28ರ ಒಳಗಡೆ 2025-26ನೇ ಹಣಕಾಸು ವರ್ಷದ ವ್ಯಾಪಾರ ಪರವಾನಗಿಗಳ ನವೀಕರಣ ಮಾಡಬೇಕೆಂದು ಬಿಬಿಎಂಪಿ ಸೂಚಿಸಿದೆ. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ಆರ್ಥಿಕ ವರ್ಷಗಳ ಅವಧಿಗೆ ನವೀಕರಣ ಮಾಡಬಹುದಾಗಿದೆ.
ಕಳೆದ ಸಾಲಿನಂತೆ ಉದ್ದಿಮೆ ಪರವಾನಿಗೆ ಶುಲ್ಕವನ್ನು ಆನ್‌ಲೈನ್ ಮುಖಾಂತರ ಮಾಡಬೇಕು. ಫೆ.1 ರಿಂದ ಫೆ. 28ರ ವರೆಗೆ ದಂಡವಿಲ್ಲದೇ ಪರವಾನಿಗೆ ಶುಲ್ಕವನ್ನು ಪಾವತಿಸಬಹುದು.
ದಂಡ ಎಷ್ಟು?
ಫೆ.28 ಗಡವು ಮುಗಿದ ಬಳಿಕ ದಂಡ ವಿಧಿಸಲಾಗುತ್ತದೆ. ಮಾರ್ಚ್ 1 ರಿಂದ 31ರವರೆಗೆ ಪರವಾನಿಗೆ ನವೀಕರಣ ಶುಲ್ಕದ 25% ರಷ್ಟು ದಂಡ ಮೊತ್ತದೊಂದಿಗೆ ಪಾವತಿಸಿಕೊಳ್ಳಬೇಕಾಗುತ್ತದೆ.
ಏಪ್ರಿಲ್ 1 ರಿಂದ ಪರವಾನಿಗೆ ಶುಲ್ಕದ 100% ರಷ್ಟು ದಂಡದ ಮೊತ್ತದೊಂದಿಗೆ ಪರವಾನಿಗೆ ಶುಲ್ಕವನ್ನು ಪಾವತಿಸಿಕೊಳ್ಳಬೇಕಿರುತ್ತದೆ.
-ಇಲ್ಲಿರುವ ಮಕ್ಕಳಲ್ಲಿ ಯಾರಾದರೂ ಒಬ್ಬರು ಮುಂದೆ ಡಿಕೆ ಶಿವಕುಮಾರ್ ಆಗಬೇಕು
ರಾಮನಗರ: ಕೃಷಿ (Agriculture) ಕೂಡ ಈಗ ಒಂದು ಉದ್ಯಮವೇ. ಉದ್ಯೋಗಿಗಳಾಗುವುದಕ್ಕಿಂತ ಹತ್ತಾರು ಜನರಿಗೆ ಉದ್ಯೋಗ ನೀಡುವ ಉದ್ದಿಮೆದಾರರಾಗುವುದು ನಿಮ್ಮ ಗುರಿಯಾಗಬೇಕು ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸಲಹೆ ನೀಡಿದರು.
ಕನಕಪುರದ (Kanakapura) ಕರಿಯಪ್ಪ ಕೃಷಿ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಹಾಲು ಹಾಗೂ ರೇಷ್ಮೆ ಉತ್ಪಾದನೆಯಲ್ಲಿ ಉತ್ತಮ ಸಾಧನೆ ಮಾಡಿದೆ. ಇದರ ಜೊತೆಗೆ ಬೆಂಗಳೂರಿನ ಸುತ್ತಮುತ್ತಲ ಪ್ರದೇಶದಲ್ಲಿ ಹೂವಿನ ಬೆಳೆ ಹಾಕುವುದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ನೀವು ಕೇವಲ ಎಂಜಿನಿಯರ್ ಆಗುವುದಷ್ಟೇ ನಿಮ್ಮ ಗುರಿಯಾಗುವುದು ಬೇಡ. ನೀವೇ ಹತ್ತಾರು ಜನರಿಗೆ ಉದ್ಯೋಗ ಸೃಷ್ಟಿಸುವಂತೆ ನೀವು ಬೆಳೆಯಬೇಕು. ಸ್ವಯಂ ಉದ್ಯೋಗವೇ ಶ್ರೇಷ್ಠ ಉದ್ಯೋಗವಾಗಿದೆ. ಆ ನಿಟ್ಟಿನಲ್ಲಿ ನೀವು ಗಮನಹರಿಸಿ ಎಂದರು. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಬೈಕ್ – ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದ ಸವಾರ ಸಾವು
ಈಗಿನ ಕಾಲದಲ್ಲಿ ಯಾವುದೇ ಶಿಕ್ಷಕರು ತಾವು ಮಕ್ಕಳಿಗಿಂತ ಬುದ್ಧಿವಂತರು ಎಂದು ಭಾವಿಸಿದರೆ ಅದು ತಪ್ಪು. ಇನ್ನು ಮುಂದೆ ಶಾಲಾ ಕಾಲೇಜುಗಳಲ್ಲಿ ಯಾವುದೇ ಕಾರ್ಯಕ್ರಮವಾದರೂ ಶಿಕ್ಷಕರು ವೇದಿಕೆ ಮೇಲೆ ಇರಬಾರದು. ಇಡೀ ಕಾರ್ಯಕ್ರಮವನ್ನು ಮಕ್ಕಳೇ ನಡೆಸಬೇಕು. ಅವರೇ ಸ್ವಾಗತ ಭಾಷಣ ಮಾಡಬೇಕು. ಇದರಿಂದ ಅವರಲ್ಲಿನ ಪ್ರತಿಭೆ ಅನಾವರಣವಾಗುತ್ತದೆ. ಅವರಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ನಾಯಕರನ್ನು ಬೆಳೆಸುವವನೇ ನಿಜವಾದ ನಾಯಕ. ಮಕ್ಕಳಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು – ಭಾನುವಾರ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾವೇಶ
ಇಲ್ಲಿರುವ ಮಕ್ಕಳಲ್ಲಿ ಯಾರಾದರೂ ಒಬ್ಬರು ಮುಂದೆ ಡಿ.ಕೆ. ಶಿವಕುಮಾರ್ ಆಗಬೇಕು. ನಾನು ಕೂಡ ಶಿಕ್ಷಣ ಸಂಸ್ಥೆ ನಡೆಸಿದ್ದೇನೆ. ಈಗ ನನ್ನ ಮಕ್ಕಳಿಗೆ ಜವಾಬ್ದಾರಿ ವಹಿಸಿದ್ದೇನೆ. ಈ ಕಾಲೇಜಿಗೆ ಬೆಂಗಳೂರು ದಕ್ಷಿಣ ಕೃಷಿ ಕಾಲೇಜು ಎಂದು ಹೆಸರಿಡಲು ಬಯಸಿದ್ದೆ. ಆದರೆ ನೀವು ಈ ಶಾಲೆಯ ಸಂಸ್ಥಾಪಕರಾದ ಕರಿಯಪ್ಪನವರ ಹೆಸರು ಇಟ್ಟಿದ್ದೀರಿ. ಅವರ ಹೆಸರಾಗಿರುವುದರಿಂದ ಇದು ಹಾಗೇ ಇರಲಿ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು ಎಂಬುದು ನಿಮ್ಮೆಲ್ಲರ ತಲೆಯಲ್ಲಿರಲಿ. ನಿಮ್ಮ ತಂದೆ ತಾಯಿ ಒಂದಿಂಚೂ ಜಾಗವನ್ನು ಮಾರಲು ಬಿಡಬೇಡಿ. ಮುಂದೆ ಈ ಭೂಮಿಗೆ ಯಾವ ಬೆಲೆ ಬರಲಿದೆ ಎಂದು ನಿಮಗೆ ಊಹೆಯೂ ಇಲ್ಲ. ಚೆಲುವರಾಯಸ್ವಾಮಿ ಅವರು ತಮ್ಮ ಸಚಿವಾಲಯದಿಂದ ಈ ಕೃಷಿ ಕಾಲೇಜು ನೀಡಿ ನಿಮ್ಮೆಲ್ಲರಿಗೂ ನೆರವು ನೀಡಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಗುರಿ: ಶೈಲೇಂದ್ರ ಬೆಲ್ದಾಳೆ
ಚೆನ್ನೈ: ನವದೆಹಲಿಯಲ್ಲಿನ ಯು.ಎಸ್. ರಾಯಭಾರ (US Embassy) ಕಚೇರಿಯು ಅಲ್ಲಿನ ಅಮೇರಿಕನ್ ಸೆಂಟರ್‌ನಲ್ಲಿ ಉದ್ಯಮಿಗಳ ಮಾರ್ಗದರ್ಶನಕ್ಕಾಗಿ ಪ್ರತಿಷ್ಠಿತ ನೆಕ್ಸಸ್ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಂಭತ್ತು ವಾರಗಳ ಈ ತರಬೇತಿಯು ಮುಂದಿನ ವರ್ಷ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, ನೆಕ್ಸಸ್ ಸರಣಿಯಲ್ಲಿ ಇದು 20ನೇ ಕಾರ್ಯಕ್ರಮವಾಗಿದೆ.
ನೆಕ್ಸಸ್ ಕಾರ್ಯಕ್ರಮದಲ್ಲಿ ಭಾರತದ (India) 15 ನವೋದ್ಯಮಗಳಿಗೆ ಭಾರತೀಯ ಮತ್ತು ಅಮೇರಿಕನ್ ತಜ್ಞರಿಂದ ತರಬೇತಿ ಪಡೆಯುವ ಅವಕಾಶ ದೊರೆಯಲಿದೆ. ಈಗಿನ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸಲು, ಮಾರುಕಟ್ಟೆಯ ನಾಡಿಮಿಡಿತ ಅರಿಯಲು ಮತ್ತು ಗುರಿ ನಿಗದಿ ಪಡಿಸಿಕೊಳ್ಳಲು ಈ ತಜ್ಞರು ನೆರವಾಗಲಿದ್ದಾರೆ. ನವೋದ್ಯಮಗಳ ಮೇಲೆ ಕೃತಕ ಬುದ್ಧಿಮತ್ತೆಯ ಪ್ರಭಾವ ಮತ್ತು ಉದ್ಯಮಿಗಳ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಚರ್ಚಿಸಲಾಗುತ್ತದೆ.
ಆರಂಭಿಕ ಒಂಭತ್ತು ವಾರಗಳ ತರಬೇತಿ ಕಾರ್ಯಕ್ರಮದ ನಂತರ ನಾಲ್ಕು ಕಂಪನಿಗಳಿಗೆ ಹೆಚ್ಚಿನ ಬೆಂಬಲಕ್ಕಾಗಿ ನೆಕ್ಸಸ್ ನಲ್ಲಿ ಉಳಿಯಲು ಆಹ್ವಾನಿಸಲಾಗುತ್ತದೆ. ಈ ಕಂಪನಿಗಳಿಗೆ ಹೆಚ್ಚುವರಿ ಎಂಟು ತಿಂಗಳವರೆಗೆ ಇನ್ಕ್ಯುಬೇಟರ್ ಸೌಲಭ್ಯಗಳು ಮತ್ತು ನೆಟ್‌ವರ್ಕ್ ಸೌಲಭ್ಯವನ್ನು ನೀಡುವುದಕ್ಕಾಗಿ ಪೂರ್ಣ ಪ್ರಮಾಣದಲ್ಲಿ ಅವಕಾಶವನ್ನು ನೀಡಲಾಗುತ್ತದೆ. ಈ ಸಮಯದಲ್ಲಿ, ನೆಕ್ಸಸ್ ತಜ್ಞರ ತಂಡವು ಅವರ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು, ಅವರ ಗ್ರಾಹಕ ಮತ್ತು ಆದಾಯದ ಮೂಲಗಳನ್ನು ಹೆಚ್ಚಿಸಲು ಹಾಗೂ ಸೂಕ್ತವಾದಲ್ಲಿ ಅವರ ಕಾರ್ಯಾಚರಣೆಗಳ ಮೌಲ್ಯಮಾಪನಕ್ಕಾಗಿ ಹಣವನ್ನು ಪಡೆಯಲು ಸಹಾಯ ಮಾಡುವ ಮೂಲಕ ಅವರ ಕಂಪನಿಗಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಅವರೊಂದಿಗೆ ಕೆಲಸ ಮಾಡುತ್ತದೆ. ಇದನ್ನೂ ಓದಿ: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನಿಯಮ ಸಡಿಲ – ಶೇ.25ರಷ್ಟು ವಿದ್ಯಾರ್ಥಿಗಳಿದ್ದರೂ ಮಾನ್ಯತೆ!
ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಉದ್ಯಮಿಗಳು ಜನವರಿ 5, 2025 ರೊಳಗಾಗಿ www.startupnexus.in ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ಜನವರಿ 17, 2025 ರೊಳಗೆ ಸೂಚಿಸಲಾಗುವುದು.
ನೆಕ್ಸಸ್ʼನ 20 ನೇ ಕಾರ್ಯಕ್ರಮದಲ್ಲಿ ತರಬೇತಿ ನೀಡಲು, ಯು.ಎಸ್. ರಾಯಭಾರ ಕಚೇರಿಯು ಕನೆಕ್ಟಿಕಟ್ ವಿಶ್ವವಿದ್ಯಾಲಯದ (ಯುಕಾನ್) ಜಾಗತಿಕ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ (ಜಿಟಿಡಿಐ) ನೊಂದಿಗೆ ಪಾಲುದಾರಿಕೆ ಹೊಂದಿದೆ. ನವದೆಹಲಿಯಲ್ಲಿರುವ ಯು.ಎಸ್. ರಾಯಭಾರ ಕಚೇರಿ ಮತ್ತು ಯು.ಎಸ್. ಡಿಪಾರ್ಟ್‌ಮೆಂಟ್ ಆಫ್ ಸ್ಟೇಟ್ ಈ ಕಾರ್ಯಕ್ರಮಕ್ಕೆ ಅನುದಾನ ನೀಡಿವೆ. ಅಮೇರಿಕ ಮತ್ತು ಭಾರತದ ನಡುವಿನ ಸಾಂಸ್ಕೃತಿಕ ಮತ್ತು ಆರ್ಥಿಕ ಸಂಬಂಧಗಳನ್ನು ಉತ್ತೇಜಿಸುವ ಸಂದರ್ಭದಲ್ಲಿ ಸುಸ್ಥಿರ ಸಮುದಾಯ ಅಭಿವೃದ್ಧಿಯನ್ನು ಸಕ್ರಿಯಗೊಳಿಸುವುದು ಪಾಲುದಾರಿಕೆಯ ಗುರಿಯಾಗಿದೆ.
2017 ರಲ್ಲಿ ಮೊದಲ ಒಕ್ಕೂಟವನ್ನು ಪ್ರಾರಂಭಿಸಿದಾಗಿನಿಂದ, 230 ಭಾರತೀಯ ವಾಣಿಜ್ಯೋದ್ಯಮಿಗಳು ಮತ್ತು ಕಳೆದ 19 ನೆಕ್ಸಸ್ ಕಾರ್ಯಕ್ರಮಗಳು ಒಟ್ಟಾರೆಯಾಗಿ 90 ಮಿಲಿಯನ್ ಡಾಲರ್ ಬಾಹ್ಯ ಹೂಡಿಕೆ ಸಂಗ್ರಹಿಸಿವೆ.
– ಈಗ ಉದಾರೀಕರಣಗೊಂಡ ಭಾರತವಾಗಿ ಬದಲಾಗಿದೆ – ಹಣಕಾಸು ಸಮಸ್ಯೆಯಿಂದ 2018ರಲ್ಲಿ ಮಾರುಕಟ್ಟೆಯಿಂದ ಏರ್‌ಸೆಲ್ ನಿರ್ಗಮನ
ನವದೆಹಲಿ: ಹಿಂದೆ ಉದ್ಯಮ (Business) ಬೆಳೆಯಲು ಪ್ರಾರಂಭಿಸಿದರೆ ನಿರ್ದಿಷ್ಟ ವ್ಯಕ್ತಿಗೆ ಮಾರಾಟ ಮಾಡುವಂತೆ ಒತ್ತಡ ಹೇರಲಾಗುತ್ತಿತ್ತು ಎಂದು ಏರ್‌ಸೆಲ್ ಸಂಸ್ಥಾಪಕ ಚಿನ್ನಕಣ್ಣನ್ ಶಿವಶಂಕರನ್ (Aircel founder C Sivasankaran) ಸ್ಪೋಟಕ ಆರೋಪ ಮಾಡಿದ್ದಾರೆ.
ಈಗ ನೀವು ವ್ಯವಹಾರ ಆರಂಭಿಸಿದ್ದರೆ ನಿಮ್ಮ ಮೇಲೆ ಯಾರೂ ಒತ್ತಡ ಹೇರಲು ಸಾಧ್ಯವಿಲ್ಲ. ನಿಮಗೆ ಬೇಕಾದುದನ್ನು ನೀವು ಮಾಡಬಹುದು ಎಂದು ಹೇಳಿದರು.
ಏರ್‌ಸೆಲ್ ಕಂಪನಿಯು ಹಣಕಾಸಿನ ಸಮಸ್ಯೆಗಳಿಂದಾಗಿ ಫೆಬ್ರವರಿ 2018 ರಲ್ಲಿ ಮಾರುಕಟ್ಟೆಯಿಂದ ನಿರ್ಗಮಿಸಿತ್ತು. ಸಂದರ್ಶನವೊಂದರಲ್ಲಿ ಶಿವಶಂಕರನ್ ಮಾತನಾಡಿದ್ದು ಈಗ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಿದೆ.
The misery of intimidation and subjugation businessmen went through during the UPA regime made India fall several steps in the ladder of development.
Aircel founder Thiru Sivasankaran avl’s statement is a testament to the ease at which our country’s wealth creators are striving… pic.twitter.com/fnXyshBFMt
— K.Annamalai (மோடியின் குடும்பம்) (@annamalai_k) May 24, 2024
ತಮಿಳುನಾಡು ಬಿಜೆಪಿ (BJP) ಅಧ್ಯಕ್ಷ ಅಣ್ಣಾಮಲೈ (Annamalai) ಶಿವಶಂಕರನ್ ಅವರ ವಿಡಿಯೋವನ್ನು ಅಪ್ಲೋಡ್ ಮಾಡಿ, ಯುಪಿಎ (UPA) ಆಡಳಿತದಲ್ಲಿ ಉದ್ಯಮಿಗಳಿಗೆ ಬೆದರಿಕೆ ಇದ್ದ ಕಾರಣ ಭಾರತದ ಅಭಿವೃದ್ಧಿಗೆ ಹಿನ್ನಡೆಯಾಗಿತು. ಏರ್‌ಸೆಲ್ ಸಂಸ್ಥಾಪಕ ಶಿವಶಂಕರನ್ ಅವರ ಹೇಳಿಕೆಯು ನಮ್ಮ ದೇಶದ ಸಂಪತ್ತಿನ ಸೃಷ್ಟಿಕರ್ತರು ಇಂದು ನಮ್ಮ ಪ್ರೀತಿಯ ಪ್ರಧಾನಿ ಮೋದಿ (Narendra Modi) ಅವರ ನೇತೃತ್ವದಲ್ಲಿ ಎಷ್ಟು ಸುಲಭವಾಗಿ ಶ್ರಮಿಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಮತಗಟ್ಟೆ ದತ್ತಾಂಶ ಅಪ್ಲೋಡ್ ಮಾಡುವುದು ಕಷ್ಟ – ಸುಪ್ರೀಂ ಕೋರ್ಟ್
ಚಿನ್ನಕಣ್ಣನ್ ಹೇಳಿದ್ದೇನು?
ನಾನು ಡೀಲ್‌ನಿಂದ ಕೇವಲ 3,400 ಕೋಟಿ ರೂಪಾಯಿಗಳನ್ನು ಮಾಡಿದ್ದೇನೆ. ಒಂದು ವೇಳೆ AT&T ಮಾರಾಟ ಮಾಡಿದ್ದರೆ ನನಗೆ 8 ಶತಕೋಟಿ ಸಿಗುತ್ತಿತ್ತು. ಇಂದು ಯಾರೂ ನಿಮ್ಮ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ. 10 ವರ್ಷದ ಹಿಂದೆ ನಿರ್ದಿಷ್ಟ ವ್ಯಕ್ತಿಗೆ ಕಂಪನಿಯನ್ನು ಮಾರಾಟ ಮಾಡುವಂತೆ ಒತ್ತಡ ಹೇರಲಾಗುತ್ತಿತ್ತು. ವ್ಯವಹಾರದಲ್ಲಿ ರಾಜಕಾರಣಿಗಳು ಮಧ್ಯಪ್ರವೇಶಿಸಿದ್ದರಿಂದ ನಾನು ನಷ್ಟ ಅನುಭವಿಸಿದೆ ಎಂದು ತಿಳಿಸಿದರು.
ಈಗ ನೀವು ವ್ಯಾಪಾರವನ್ನು ಆರಂಭಿಸಿದರೂ ಯಾರೂ ನಿಮ್ಮ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ. ಈಗ ಉದಾರೀಕರಣಗೊಂಡ ಭಾರತವಾಗಿ ಬದಲಾಗಿದೆ. ಅವರು ನನಗೆ ಮಾರಾಟ ಮಾಡಲು ಒತ್ತಡ ಹೇರಿದ್ದರು ಎನ್ನುವುದು ನನ್ನ ದೂರು ಅಲ್ಲ. ನನ್ನ ದೂರು ನನಗೆ 8 ಶತಕೋಟಿ ಆಫರ್ ಮಾಡಿದವರಿಗೆ ಮಾರಾಟ ಮಾಡಲು ಅವರು ನನಗೆ ಅವಕಾಶ ನೀಡಬೇಕಾಗಿತ್ತು ಎಂದರು.
ಹಣಕಾಸಿನ ಸಮಸ್ಯೆಗಳಿಂದಾಗಿ ಏರ್‌ಸೆಲ್ ಕಂಪನಿ ಫೆಬ್ರವರಿ 2018 ರಲ್ಲಿ ಮಾರುಕಟ್ಟೆಯಿಂದ ನಿರ್ಗಮಿಸಿತು. 2006 ರಲ್ಲಿ ಶ್ರೀಲಂಕಾದ ತಮಿಳು ಮೂಲದ ಮಲೇಷಿಯಾದ ಪ್ರಜೆ ಆನಂದ ಕೃಷ್ಣನ್ ಒಡೆತನದ ಮ್ಯಾಕ್ಸಿಸ್ ಬರ್ಹಾದ್ 74% ಪಾಲನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಏರ್‌ಸೆಲ್ ಅನ್ನು ಸ್ವಾಧೀನಪಡಿಸಿಕೊಂಡಿತು. ಏರ್‌ಸೆಲ್-ಮ್ಯಾಕ್ಸಿಸ್ ಒಪ್ಪಂದ 2011 ರಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ತಮ್ಮ ಪಾಲನ್ನು ಮ್ಯಾಕ್ಸಿಸ್‌ಗೆ ಮಾರಾಟ ಮಾಡುವಂತೆ ನನ್ನ ಮೇಲೆ ಒತ್ತಡ ಇತ್ತು ಎಂದು ಶಿವಶಂಕರನ್ ಆರೋಪಿಸಿದ್ದರು.
ಹಾವೇರಿ: ರಾಜ್ಯದಲ್ಲಿ ಈಗ ತರಕಾರಿ ಬೆಲೆ ಗಗನಕ್ಕೆ ಏರಿದೆ. ಅದರಲ್ಲೂ ಟೊಮೆಟೊ (Tomato) ಬೆಲೆ ಕೆಜಿಗೆ 150 ರೂ. ನಿಂದ 200 ರೂ. ಸನಿಹಕ್ಕೆ ಹೋಗಿದೆ. ಹಾವೇರಿ (Haveri) ಜಿಲ್ಲೆಯಲ್ಲಿ ಟೊಮೆಟೊ ಬೆಲೆ ದುಬಾರಿಯಾದ ಹಿನ್ನೆಲೆ ಕಳ್ಳತನವಾಗದಂತೆ ವ್ಯಾಪಾರಿಯೊಬ್ಬರು ಸಿಸಿಟಿವಿ (CCTV) ಕಣ್ಗಾವಲಿನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.
ಹಾನಗಲ್ (Hanagal) ತಾಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಸಂತೆಯಲ್ಲಿ, ಕೃಷ್ಣಪ್ಪ ಎಂಬವರು ಟೊಮೆಟೊ ಕಳ್ಳತನ ಆಗದಂತೆ ಎಚ್ಚರಿಕೆ ವಹಿಸಿ ಸಿಸಿಟಿವಿ ಕಾವಲಿನಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ 1 ಕೆಜಿ ಟೊಮೆಟೊ ಬೆಲೆ 150 ರೂ. ಆಗಿದೆ. ಖರೀದಿ ಮಾಡುವ ನೆಪದಲ್ಲಿ ಜನ ಟೊಮೆಟೊ ಕದಿಯಬಾರದು ಎಂಬ ಕಾರಣಕ್ಕೆ ಸಿಸಿ ಕ್ಯಾಮೆರಾ ಹಾಕಿ ವ್ಯಾಪಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ದಾಖಲೆ ಮೀರಿ ಗೋಧಿ ಉತ್ಪಾದನೆಯಾಗುತ್ತಿದ್ದರೂ ಬೆಲೆ ಏರಿಕೆ ಯಾಕೆ?
ಕಳೆದ ಒಂದು ವಾರದಿಂದ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ಎರಡು ಟೊಮೆಟೊ ಕದ್ದರೂ ನಮಗೇ ನಷ್ಟ. ಸಾವಿರಾರು ರೂಪಾಯಿ ಕೊಟ್ಟು ಟೊಮೆಟೊ ಖರೀದಿಸಿದ್ದೇನೆ. ಹೀಗಾಗಿ ಸಿಸಿ ಕ್ಯಾಮೆರಾ ಹಾಕಿ ಟೊಮೆಟೊ ವ್ಯಾಪಾರ ಮಾಡುವ ಪರಿಸ್ಥಿತಿ ಬಂದಿದೆ ಎಂದು ವ್ಯಾಪಾರಸ್ಥ ಕೃಷ್ಣಪ್ಪ ಅವರು ಹೇಳಿದ್ದಾರೆ. ಇವರ ಸಿಸಿಟಿವಿ ಟೊಮೆಟೊ ವ್ಯಾಪಾರದಿಂದಾಗಿ ಟೊಮೆಟೊ ಖರೀದಿಗೆಂದು ಬಂದ ಗ್ರಾಹಕರು ಸಹ ಸಿಸಿ ಕ್ಯಾಮೆರಾ ನೋಡಿ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಸೇಬಿಗಿಂತ ಟೊಮೆಟೊ ರೇಟೇ ಜಾಸ್ತಿ!
ಬೀಜಿಂಗ್: ಕೊರೊನಾ ವ್ಯಾಪಕತೆಯಿಂದ ಚೇತರಿಸಿಕೊಂಡಿರುವ ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಂಕಾಂಗ್ (Hong Kong) ಇದೀಗ ಬಂಪರ್ ಆಫರ್‌ನೊಂದಿಗೆ ಪ್ರವಾಸಿಗರನ್ನ ಸ್ವಾಗತಿಸಲು ಸಜ್ಜಾಗಿದೆ. ಅದರ ಪ್ರಚಾರಾಂದೋಲನದ ಭಾಗವಾಗಿ 5 ಲಕ್ಷ ವಿಮಾನ ಪ್ರಯಾಣದ ಟಿಕೆಟ್‌ಗಳನ್ನು (Flight Tickets) ಪ್ರವಾಸಿಗರಿಗೆ ಉಚಿತವಾಗಿ ನೀಡುವುದಾಗಿಯೂ ಘೋಷಣೆ ಮಾಡಿದೆ.
`ಹಲೋ, ಹಾಂಕಾಂಗ್’ (Hello Hong Kong) ಹೆಸರಲ್ಲಿ ಸರ್ಕಾರ ಮರು ಬ್ರ‍್ಯಾಂಡಿಂಗ್ ಅಭಿಯಾನ ಶುರುಮಾಡಿದೆ. ವಿಶ್ವದ ಪ್ರವಾಸಿಗರನ್ನ ಆಕರ್ಷಿಸುವುದು ಇದರ ಉದ್ದೇಶವಾಗಿದೆ. ಅಲ್ಲದೇ ಬರುವವರಿಗೆ `ಐಸೊಲೇಶನ್ ಆಗಲಿ, ಕ್ವಾರಂಟೈನ್ ಆಗಲಿ ಅಥವಾ ನಿರ್ಬಂಧಗಳಾಗಲಿ ಇರುವುದಿಲ್ಲ, ಪ್ರವಾಸಿಗರು ಭೇಟಿ ನೀಡಬಹುದು. ಇದನ್ನೂ ಓದಿ: ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್
ಈ ಕೊಡುಗೆಯು ಮಾರ್ಚ್‌ನಲ್ಲಿ ಆರಂಭವಾಗುತ್ತದೆ. ಸ್ಥಳೀಯ ಏರ್‌ಲೈನ್ಸ್ ಕ್ಯಾಥೆ ಪೆಸಿಫಿಕ್ (Airlines Cathay Pacific), ಎಚ್‌ಕೆ ಎಕ್ಸ್‌ಪ್ರೆಸ್ ಮತ್ತು ಹಾಂಕಾಂಗ್ ಏರ್‌ಲೈನ್ಸ್‌ನಿಂದ (Hong Kong Airlines)ಉಚಿತ ಟಿಕೆಟ್ ವಿತರಿಸಲಾಗುತ್ತದೆ. ಬೇಸಿಗೆಯಲ್ಲಿ ಇನ್ನೂ 80,000 ಟಿಕೆಟ್‌ಗಳನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಶೂನ್ಯ ಕೋವಿಡ್ ನೀತಿ, ಕಠಿಣ ಕ್ವಾರಂಟೈನ್ ನೀತಿಯಿಂದ ಹಾಂಕಾಂಗ್ ತತ್ತರಿಸಿತ್ತು. ಪ್ರವಾಸಿಗರು ಬಾರದ ಕಾರಣ ಇಲ್ಲಿನ ಆರ್ಥಿಕ ವ್ಯವಸ್ಥೆಯೂ ಕುಸಿದಿತ್ತು. ಈಗ ಹಾಂಕಾಂಗ್ ಕೊರೊನಾಮುಕ್ತವಾಗಿದ್ದು, ಮತ್ತೆ ಪ್ರವಾಸಿಗಳನ್ನು ಸೆಳೆಯಲು ಮುಂದಾಗಿದೆ. ಇದನ್ನೂ ಓದಿ: ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ
ಹಾಂಕಾಂಗ್ 2022ರಲ್ಲಿ ಕೇವಲ 6 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದರು. 2018ರ ಅಂಕಿ- ಅಂಶಕ್ಕೆ ಹೋಲಿಸಿದರೆ ಇದು ಕಡಿಮೆಯಾಗಿದೆ. ಅಲ್ಲದೇ ಕಳೆದ ವರ್ಷದ 1.40 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಹಾಂಗ್ ಕಾಂಗ್ ತೊರೆದಿದ್ದರು. ಕಳೆದ ಮೂರು ವರ್ಷದಲ್ಲಿ 130 ಅಂತಾರಾಷ್ಟ್ರೀಯ ಕಂಪನಿಗಳ ಕಚೇರಿ ಬಂದ್ ಆಗಿವೆ. ಇದರಿಂದ ಆರ್ಥಿಕತೆ ಶೇ.3.5 ರಷ್ಟು ಕುಗ್ಗಿತು ಎಂದು ವರದಿಯಾಗಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಬ್ರಿಟಿಷ್ ಕೌನ್ಸಿಲ್ (British Council ) ಲೈಬ್ರರಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಯುವತಿ ಈಗ ದೆಹಲಿಯ (Delhi) ಬೀದಿಯಲ್ಲಿ ಚಹಾ (Roadside Tea Stall) ಮಾರಾಟ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.
26 ವರ್ಷದ ಶರ್ಮಿಷ್ಠ ಘೋಷ್ ಇಂಗ್ಲಿಷ್ ಪದವೀಧರೆ. ಭವಿಷ್ಯದಲ್ಲಿ ದೊಡ್ಡ ಚಹಾ ಉದ್ಯಮ ನಡೆಸುವ ಕನಸು ಕಂಡಿದ್ದು, ಈಗ ಚಹಾ ಮಾರಾಟ ಮಾಡುತ್ತಿದ್ದಾರೆ.
ಬ್ರಿಗೇಡಿಯರ್ ಸಂಜಯ್ ಖನ್ನಾ ಅವರು ಲಿಂಕ್ಡ್‌ಇನ್‌ನಲ್ಲಿ ಇವರಿಬ್ಬರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪೋಸ್ಟ್ ಮಾಡಿದ ಬಳಿಕ ಈಗ ಇವರು ಹೆಚ್ಚು ಸುದ್ದಿಯಾಗಿದ್ದಾರೆ.
ಇಬ್ಬರು ಯುವತಿಯರ ಕೆಲಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಕೆಲಸ ದೊಡ್ಡದು, ಚಿಕ್ಕದಲ್ಲ. ಪ್ರತಿ ಕೆಲಸವು ದೊಡ್ಡದೇ. ಶ್ರಮವಹಿಸಿ ಮಾಡಿದರೆ ಖಂಡಿತ ಯಶಸ್ಸು ಸಿಗುತ್ತದೆ. ಆರಂಭದಲ್ಲಿ ಸಣ್ಣ ಕನಸು, ಸಣ್ಣ ಉದ್ಯೋಗ ಮಾಡಿದವರೇ ಈಗ ದೊಡ್ಡ ಉದ್ಯಮಿಗಳಾಗಿದ್ದಾರೆ ಎಂದು ಬರೆದು ಶ್ಲಾಘಿಸಿ ಭವಿಷ್ಯದ ಕನಸಿಗೆ ಶುಭ ಹಾರೈಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: 22 ರಾಜ್ಯಗಳಲ್ಲಿ ಬಿಸಿನೆಸ್ (Business) ಮಾಡುತ್ತಿದ್ದೇವೆ. ಎಲ್ಲವನ್ನೂ ಬಿಜೆಪಿ (BJP) ಜೊತೆ ಮಾಡುತ್ತಿಲ್ಲ ಎಂದು ಕೈಗಾರಿಕೋದ್ಯಮಿ ಗೌತಮ್ ಅದಾನಿ (Gautam Adani) ತಿಳಿಸಿದ್ದಾರೆ.
ನಾವು ದೇಶದ ಪ್ರತಿ ರಾಜ್ಯದಲ್ಲೂ ಗರಿಷ್ಠ ಹೂಡಿಕೆ ಮಾಡಲು ಬಯಸುತ್ತೇವೆ. ಅದಾನಿ ಗುಂಪು ಇಂದು 22 ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ನಿಜವಾಗಿಯೂ ಸಂತೋಷವಾಗಿದೆ. ಈ ಎಲ್ಲಾ ರಾಜ್ಯಗಳು ಬಿಜೆಪಿ ಆಡಳಿತದಲ್ಲಿಲ್ಲ. ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ. ಎಡಪಕ್ಷಗಳ ಆಡಳಿತವಿರುವ ಕೇರಳ, ಮಮತಾ ದೀದಿಯವರ ಪಶ್ಚಿಮ ಬಂಗಾಳ, ನವೀನ್ ಪಟ್ನಾಯಕ್ ಅವರ ಒಡಿಶಾ, ಜಗನ್‌ಮೋಹನ್ ರೆಡ್ಡಿ ಅವರ ಆಂಧ್ರಪ್ರದೇಶ, ಕೆಸಿಆರ್ ರಾಜ್ಯದಲ್ಲಿಯೂ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ
ಹೂಡಿಕೆ ನಮ್ಮ ಸಾಮಾನ್ಯ ಕಾರ್ಯಕ್ರಮವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಹ್ವಾನದ ಮೇರೆಗೆ ನಾನು ರಾಜಸ್ಥಾನ ಹೂಡಿಕೆದಾರರ ಶೃಂಗಸಭೆಗೆ ಹೋಗಿದ್ದೆ. ನಂತರ ರಾಹುಲ್ ಗಾಂಧಿ ಅವರು ಕೂಡ ರಾಜಸ್ಥಾನದಲ್ಲಿ ನಮ್ಮ ಹೂಡಿಕೆಯನ್ನು ಶ್ಲಾಘಿಸಿದ್ದಾರೆ. ರಾಹುಲ್ ಅವರ ನೀತಿಗಳು ಅಭಿವೃದ್ಧಿ ವಿರೋಧಿ ಅಲ್ಲ ಎಂದು ನನಗೆ ತಿಳಿದಿದೆ. ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ 68,000 ಕೋಟಿ ರೂ. ಹೂಡಿಕೆ ಮಾಡಲಾಗಿದೆ ಎಂದು ಮಾತನಾಡಿದ್ದಾರೆ.
ಕಳೆದ ವರ್ಷ ಮೊದಲಬಾರಿಗೆ ಜಪಾನ್‌ನಲ್ಲಿ (Japan) ಜನಸಂಖ್ಯಾ ಕುಸಿತ ವರದಿಯಾಗಿದ್ದು, ಕೊರೊನಾ ಕಾರಣದಿಂದಾಗಿಯೇ ಜನಸಂಖ್ಯೆ ಕುಸಿದಿರುವುದಾಗಿ ಜನಸಂಖ್ಯಾ ನೀತಿ ನಿರೂಪಕರು ಹೇಳಿದ್ದಾರೆ. ಅದರಲ್ಲೂ ದೇಶದ ಗ್ರಾಮೀಣ ಭಾಗಗಳಲ್ಲಿ ಜನಸಂಖ್ಯಾ ಸಾಂದ್ರತೆ ಕಡಿಮೆಯಾಗಿದ್ದು, ಸೌಲಭ್ಯಗಳು ಉತ್ತಮವಾಗಿರುವ ನಗರ ಪ್ರದೇಶಗಳತ್ತ ಜನರು ವಲಸೆ ಹೋಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪಾಕ್ ಭಯೋತ್ಪಾದನೆಯನ್ನು ಯಾಕೆ ಯುರೋಪ್ ರಾಷ್ಟ್ರಗಳು ಖಂಡಿಸಿಲ್ಲ – ಜೈಶಂಕರ್ ಪ್ರಶ್ನೆ
ಈ ಹಿನ್ನೆಲೆ ಗ್ರಾಮೀಣ ಭಾಗಗಳಿಗೆ ಜನರು ಹಿಂದಿರುಗಲು ಮತ್ತು ನಗರಗಳಿಂದ ವಸತಿ ಬದಲಾಯಿಸುವಂತೆ ಮಾಡಲು ಸರ್ಕಾರ, ನಗರಗಳನ್ನು ತೊರೆಯುವ ಕುಟುಂಬಕ್ಕೆ 1.87 ಲಕ್ಷ ರೂ.ಗಳ ಸಹಾಯಧನ (3 ಲಕ್ಷ ಯೆನ್) ನೀಡಲಾಗ್ತಿತ್ತು. ಆದ್ರೆ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಈ ಸೌಲಭ್ಯವನ್ನು ಪರಿಷ್ಕರಿಸಿದ್ದು, ರಾಜಧಾನಿ ತೊರೆಯುವ ಕುಟುಂಬಗಳ ಪ್ರತಿ ಮಗುವಿಗೆ 6.26 ಲಕ್ಷ ರೂ. ನೀಡುವುದಾಗಿ ಹೇಳಿದೆ. ಈ ವರ್ಷದ ಏಪ್ರಿಲ್‌ನಿಂದ ಈ ಯೋಜನೆ ಜಾರಿಗೆ ಬರಲಿದೆ.
ಪ್ರಸ್ತುತ ಜಪಾನ್ ಜನಸಂಖ್ಯೆ 12.57 ಕೋಟಿಯಿದ್ದು ಟೋಕಿಯೋ ನಗರದಲ್ಲೇ 1.4 ಕೋಟಿ ಜನ ವಾಸಿಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
– ಸುಲಲಿತ ವ್ಯವಹಾರಕ್ಕೆ ಒತ್ತು ನೀಡಿ ಸಿಐಎಸ್ ವ್ಯವಸ್ಥೆ ಜಾರಿ
ಬೆಂಗಳೂರು: ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ(Karnataka) ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್ ಅವಾರ್ಡ್‌ನಲ್ಲಿ(SKOCH Award) ‘ಚಿನ್ನ’ ಪಡೆದಿದೆ.
ಸುಲಲಿತ ವ್ಯವಹಾರಕ್ಕೆ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆ ಜಾರಿಗೊಳಿಸಿರುವ ಕರ್ನಾಟಕ, ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಶ್ರೇಯಾಂಕ ಪಟ್ಟಿಯಲ್ಲಿ “ಟಾಪ್ ಅಚೀವರ್” ಆಗಿ ಹೊರಹೊಮ್ಮಿದೆ. ಇದೀಗ, ಕೈಗಾರಿಕೆಗಳಿಗೆ ಕೇಂದ್ರೀಕೃತ ತಪಾಸಣೆ ವ್ಯವಸ್ಥೆ ಜಾರಿಗೊಳಿಸಿರುವ ರಾಜ್ಯ ‘ಸ್ಕಾಚ್ ಅವಾರ್ಡ್ಸ್’ನಲ್ಲಿ ಚಿನ್ನ ಪಡೆದಿರುವುದು ಸಂತಸದ ವಿಷಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ಆರ್. ನಿರಾಣಿ(Murugesh Nirani) ಹರ್ಷ ವ್ಯಕ್ತಪಡಿಸಿದ್ದಾರೆ.
ಕೈಗಾರಿಕೆಗಳ ಕಾರ್ಯ ನಿರ್ವಹಣೆ ನಿಯಮಗಳ ಪಾಲನೆಗಳ ತಪಾಸಣೆ, ಮೇಲ್ವಿಚಾರಣೆಗಾಗಿ ನಾನಾ ಇಲಾಖೆಗಳು ಪ್ರತ್ಯೇಕವಾಗಿ ತಪಾಸಣಾ ಭೇಟಿ ನೀಡುವುದರಿಂದ ಉಂಟಾಗುವ ಅನಗತ್ಯ ಕಿರಿಕಿರಿ ತಪ್ಪಿಸಲು ಹಾಗೂ ಪಾರದರ್ಶಕ ಪರಿಶೀಲನೆಗಾಗಿ ವಾಣಿಜ್ಯ ಕೈಗಾರಿಕಾ ಇಲಾಖೆಯು ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ (ಸೆಂಟ್ರಲ್ ಇನ್‌ಸ್ಪೆಕ್ಷನ್ ಸಿಸ್ಟೆಮ್) ಜಾರಿ ತರಲಾಗಿದೆ ಎಂದರು. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ
K’taka leads all the states as the largest recipient of Foreign Direct Investments, holding a massive 38%.
In line with our Hon’ble PM Shri. Narendra Modi Ji’s vision of creating an Aatmanirbhar Bharat, we are confident that GIM 2022 will accentuate K’taka as the industrial hub pic.twitter.com/iwhEg3T5yJ
ರಾಜ್ಯದ ಕೈಗಾರಿಕೆಗಳಲ್ಲಿ ನಿಯಮಾವಳಿಗಳ ಪಾಲನೆ, ಕಾರ್ಮಿಕರಿಗೆ ಸಂಬಂಧಪಟ್ಟ ಕಾನೂನುಗಳ ಅನುಷ್ಠಾನ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಸ್ಥಿತಿಗತಿ ಇತರೆ ಅಂಶಗಳ ಪರಿಶೀಲನೆಗಾಗಿ ಸಂಬಂಧಪಟ್ಟ ಇಲಾಖೆಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತವೆ. ಮುಖ್ಯವಾಗಿ ಕಾರ್ಮಿಕ ಇಲಾಖೆ, ಕಾರ್ಖಾನೆಗಳು- ಬಾಯ್ಲರ್‌ಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುತ್ತವೆ ಎಂದು ಸಚಿವ ನಿರಾಣಿ ತಿಳಿಸಿದರು.
ಪ್ರತಿಯೊಂದು ಇಲಾಖೆಗಳು ಪ್ರತ್ಯೇಕವಾಗಿ ಭೇಟಿ ನೀಡುವುದರಿಂದ ವರ್ಷವಿಡೀ ತಪಾಸಣೆ ಕಾರ್ಯ ನಡದೇ ಇರುತ್ತದೆ. ಪ್ರತಿ ಇಲಾಖೆಯು ಅಧಿಕಾರಿಗಳು ಭೇಟಿ ನೀಡಿದಾಗ ಮಾಹಿತಿ ಒದಗಿಸುವುದು, ಪ್ರಾಯೋಗಿಕ ಪರಿಶೀಲನೆ ಕಾರ್ಯ ನಡೆಯುವುದರಿಂದ ಕೈಗಾರಿಕೆಗಳಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರು ಇತ್ತು. ಇದಕ್ಕೆ ಪರಿಹಾರವಾಗಿ ‘ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ’ ರೂಪಿಸಿದ್ದೇವೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಸರಕಾರ ಈಸ್ ಆಫ್ ಡೂಯಿಂಗ್ ವ್ಯವಸ್ಥೆಯಡಿ ಕೈಗಾರಿಕೆಗಳ ಸುಗಮ ಕಾರ್ಯ ನಿರ್ವಹಣೆಗೆ ಸೂಕ್ತ ಕ್ರಮ ವಹಿಸುವಂತೆ ನೀಡಿರುವ ನಿರ್ದೇಶದನ್ವಯ ಹೊಸ ಸಿಐಎಸ್ ತಂತ್ರಾಂಶ ರೂಪುಗೊಂಡಿದೆ. ಈ ತಂತ್ರಾಂಶದ ಬಳಕೆಯಿಂದ ಕೈಗಾರಿಕೆಗಳ ತಪಾಸಣೆ, ನಿಯಮಗಳ ಪಾಲನೆ ಹಾಗೂ ಗುಣಮಟ್ಟದ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಅವರು ವಿವರಿಸಿದ್ದಾರೆ.
ಏನಿದು ಸಿಐಎಸ್ ವ್ಯವಸ್ಥೆ?
ಸಿಐಎಸ್ ವ್ಯವಸ್ಥೆಯಡಿ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಚರ್ಚಿಸಿ ಜಂಟಿ ತಪಾಸಣೆಗೆ ಆದ್ಯತೆ ನೀಡುವುದು. ತಪಾಸಣೆ ಬಗ್ಗೆ ಕೈಗಾರಿಕೆಗಳಿಗೆ ಮೊದಲೇ ಮಾಹಿತಿ ನೀಡದೇ, ಆ ದಿನ ಆಯಾ ಇಲಾಖೆಯು ತನ್ನ ಕಾರ್ಯವ್ಯಾಪ್ತಿಯಲ್ಲಿನ ಅಂಶಗಳ ಪರಿಶೀಲನೆ, ನಿಯಮ ಉಲ್ಲಂಘನೆ, ಲೋಪಗಳ ಪತ್ತೆ ಕಾರ್ಯವನ್ನು ಏಕಕಾಲಕ್ಕೆ ನಡೆಸಲಿದೆ. ತಪಾಸಣಾ ಅಧಿಕಾರಿಯನ್ನು ಗಣಕೀಕೃತ ವ್ಯವಸ್ಥೆ ಆಯ್ಕೆ ಮಾಡುವುದರಿಂದ ಒಬ್ಬರೇ ಅಧಿಕಾರಿ ಎರಡು ಬಾರಿ ಒಂದೇ ಕೈಗಾರಿಕೆಯಲ್ಲಿ ತಪಾಸಣೆ ನಡೆಸಲು ಅವಕಾಶವಿರುವುದಿಲ್ಲ. ಕೈಗಾರಿಕೆಗಳ ಮಾಲೀಕರೊಂದಿಗೆ ಮುಂಚಿತವಾಗಿ ಹಂಚಿಕೊಳ್ಳುವುದಲ್ಲದೇ, ತಪಾಸಣೆ ವರದಿಯನ್ನು ನಿರ್ದಿಷ್ಟ ಸಮಯದೊಳಗೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಮಾಹಿತಿ ನೀಡಿದರು.
ಸ್ಕಾಚ್ ಅವಾರ್ಡ್
ಸ್ಟೇಟ್ ಆಫ್ ಗವರ್ನನ್ಸ್’ ಎಂಬ ಪರಿಕಲ್ಪನೆಯಡಿ ನಡೆದ 83ನೇ ಸ್ಕಾಚ್ ಶೃಂಗಸಭೆಯಲ್ಲಿ ಸುಲಲಿತ ವ್ಯವಹಾರಗಳ ವಿಭಾಗದಲ್ಲಿ ಕರ್ನಾಟಕಕ್ಕೆ ಅಗ್ರಮಾನ್ಯ ಪ್ರಶಸ್ತಿ ಘೋಷಿಸಲಾಗಿದೆ. ಕಾರ್ಯಕ್ಷಮತೆಯ ಆಧಾರದ ಮೇಲೆ ರಾಜ್ಯಗಳು, ಇಲಾಖೆಗಳು, ಜಿಲ್ಲೆಗಳು ಮತ್ತು ಪುರಸಭೆಗಳನ್ನು ಶ್ರೇಣೀಕರಿಸಿ ಪ್ರತಿವರ್ಷ ಶ್ರೇಯಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.
Live Tv
[brid partner=56869869 player=32851 video=960834 autoplay=true]